Breaking News
Home / ಜಿಲ್ಲೆ (page 41)

ಜಿಲ್ಲೆ

ಈ ಬಜೆಟ್ ಪೂರಕ, ಆಶಾದಾಯಕವಾಗಿದ್ದು, ಜನಪರ, ಜನಸ್ನೇಹಿ ಬಜೆಟ್ ಆಗಿದೆ: ಸತೀಶ್ ಜಾರಕಿಹೊಳಿ

ಬೆಂಗಳೂರು: ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ಎಂಬ ಧ್ಯೇಯವಾಕ್ಯದೊಂದಿಗೆ ರಾಜ್ಯದ ಜನರನ್ನು ಹಿತದೃಷ್ಟಿಯಲ್ಲಿಟ್ಟುಕೊಂಡು 3 ಲಕ್ಷ 28 ಸಾವಿರ ಕೋಟಿ ಮೊತ್ತದ ಬಜೆಟ್ ಮಂಡನೆ ಮಾಡಲಾಗಿದೆ. ರಾಜ್ಯದ ಸಮಗ್ರ ಅಭಿವೃದ್ಧಿ, ರಾಜ್ಯದ ಎಲ್ಲ ವರ್ಗದ ಜನರ ಸಬಲೀಕರಣಕ್ಕಾಗಿ ಈ ಬಜೆಟ್ ಪೂರಕ, ಆಶಾದಾಯಕವಾಗಿದ್ದು, ಜನಪರ, ಜನಸ್ನೇಹಿ ಬಜೆಟ್ ಆಗಿದೆ ಎಂದುಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು …

Read More »

ಡೆಲಿವರಿ ಬಾಯ್ಸ್‌ಗೆ ಬಿಗ್‌ ರಿಲೀಫ್! 4 ಲಕ್ಷಗಳ ಜೀವ ಮತ್ತು ಅಪಘಾತ ವಿಮೆಯನ್ನು ಕೊಡುವುದಾಗೊ ಘೋಷಿಸಿದೆ.

ಸಿಎಂ ಸಿದ್ದರಾಮಯ್ಯ (CM Siddaramaiah) ಅವರು 14ನೇ ಬಾರಿಗೆ ಬಜೆಟ್‌ ಮಂಡಿಸುತ್ತಿದ್ದಾರೆ. ಕಾಂಗ್ರೆಸ್‌ (Congress) ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದಿರುವುದರಿಂದ ಈ ಬಾರಿಯ ಬಜೆಟ್‌ ಕೂತುಹಲ ಮೂಡಿಸಿದೆ. ಸಿಎಂ ಸಿದ್ದರಾಮಯ್ಯ ಅವರು ಉಪಮುಖ್ಯಮಂತ್ರಿ, ಹಣಕಾಸು ಸಚಿವರಾಗಿ 1995-96 ರಲ್ಲಿ ಮಂಡಿಸಿದ ಮೊದಲ ಬಾರಿಗೆ ಬಜೆಟ್‌ ಮಂಡಿಸಿದ್ದರು. ಬಜೆಟ್‌ ಮಂಡನೆಗೂ ಮುನ್ನ ‘ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು’ ಎಂದು ಸಿದ್ದರಾಮಯ್ಯ ಅವರು ಹೇಳಿದರು. ಬಜೆಟ್‌ ಆರಂಭದಲ್ಲೇ ಅಬಕಾರಿ ತೆರಿಗೆ ಹೆಚ್ಚಳ ಮಾಡಿರುವುದನ್ನು …

Read More »

ಬಜೆಟ್​ ಮಂಡನೆ ಯಾವ ಇಲಾಖೆಗೆ ಎಷ್ಟು ಅನುದಾನ ಹಂಚಿಕೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2023-24 ರ ಸಾಲಿನ ಮಧ್ಯಂತರ ಬಜೆಟ್​ ಅನ್ನು ಇಂದು ಮಂಡಿಸಿದ್ದಾರೆ. ಗ್ಯಾರಂಟಿ ಯೋಜನೆಗಳ ನಡುವೆ ಹಲವು ಯೋಜನೆಗಳಿಗೆ ಒತ್ತು ನೀಡಿ ಮಂಡಿಸಿರುವ ಸಿದ್ದರಾಮಯ್ಯ ಬಜೆಟ್​ನಲ್ಲಿ ಈ ಹಿಂದಿನ ಸರ್ಕಾರವನ್ನು ಟೀಕಿಸಿದರು. ರಾಜ್ಯದ ಅರ್ಥವ್ಯವಸ್ಥೆಯು ಹಿಂದಿನ ಸರ್ಕಾರದ ಅವಧಿಯಲ್ಲಿ ಹದಗೆಟ್ಟಿರುತ್ತದೆ. ಕೋವಿಡ್‌ನಿಂದ ತತ್ತರಿಸಿದ ರಾಜ್ಯದ ಆರ್ಥಿಕತೆಯನ್ನು ಪುನಶ್ಚೇತನಗೊಳಿಸಲು ಈ ಹಿಂದಿದ್ದ ಸರ್ಕಾರವು ವಿಫಲವಾಗಿದೆ ಎಂದು ದೂರಿದರು. ಕಲ್ಯಾಣ ರಾಜ್ಯದ ಕನಸಿನ ಬಜೆಟ್ ಅನ್ನು ಮಂಡಿಸಿರುತ್ತಿರುವುದಾಗಿ ಹೇಳಿದ ಅವರು, …

Read More »

BUDJET :ಜನರಿಗೆ ತೆರಿಗೆ ಹೊರೆ ಹಾಕಿದರೆ ಜನ ವಿರೋಧಿ ಗ್ಯಾರಂಟಿಗಳಾಗುತ್ತವೆ.: ಬೊಮ್ಮಾಯಿ

ಬೆಂಗಳೂರು : ಜನರ ಮೇಲೆ ತೆರಿಗೆ ಹೊರೆ ಹಾಕದೇ, ಹೆಚ್ಚು ಸಾಲ ಮಾಡದೆ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಮಾಡಿ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದರು. ರಾಜ್ಯಪಾಲರ ಭಾಷಣದ ವಂದನಾ ನಿರ್ಣಯ ಮೇಲಿನ ಚರ್ಚೆಯಲ್ಲಿ ಮಾತನಾಡಿದ ಅವರು,‌ ಜನರಿಗೆ ತೆರಿಗೆ ಹೊರೆ ಹಾಕಿದರೆ ಜನ ವಿರೋಧಿ ಗ್ಯಾರಂಟಿಗಳಾಗುತ್ತವೆ. ಹೆಚ್ಚು ಸಾಲ ತೆಗೆದು ಕೊಳ್ಳದೇ, ಜನರ ಮೇಲೆ ತೆರಿಗೆ ಹಾಕದೇ ಗ್ಯಾರಂಟಿಗಳನ್ನು ಕೊಡಬೇಕು. ಮಾಡಿಲ್ಲ ಅಂದರೆ ಜನರ …

Read More »

ಕರಾವಳಿಯಲ್ಲಿ ಮುಂದುವರಿದ ವರ್ಷಧಾರೆ ಶಾಲ ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು: ಜೂನ್‌ನಲ್ಲಿ ತೀವ್ರ ಮಳೆ ಅಭಾವ ಎದುರಿಸಿದ್ದ ರಾಜ್ಯವು ಜುಲೈನಲ್ಲಿ ತುಸು ಚೇತರಿಕೆ ಹಾದಿಯತ್ತ ಸಾಗಿದೆ. ಜುಲೈ 1ರಿಂದ ಜುಲೈ 6ರವರೆಗೆ ವಾಡಿಕೆಗಿಂತ ತುಸು ಅಧಿಕವಾಗಿ ವರ್ಷಧಾರೆಯಾಗಿದೆ. ಇದರಿಂದಾಗಿ ಮಳೆ ಕೊರತೆಯಿಂದ ದಯನೀಯ ಸ್ಥಿತಿಗೆ ಒಳಗಾಗಿದ್ದ ರೈತಾಪಿ ವರ್ಗ ನಿಟ್ಟಿಸಿರುವ ಬಿಡುವಂತಾಗಿದೆ. ಆದರೆ, ಚಾಮರಾಜನಗರ, ಮೈಸೂರು, ಮಂಡ್ಯ, ಬೆಳಗಾವಿ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಮತ್ತು ಕೊಡಗಿನಲ್ಲಿ ಪ್ರಸಕ್ತ ತಿಂಗಳ ಮೊದಲ ವಾರದಲ್ಲಿಯೂ ಮಳೆ ಕೊರತೆ ಮುಂದುವರಿದಿದೆ. ಇದರಿಂದಾಗಿ ಮೈಸೂರು ಭಾಗದಲ್ಲಿ ಕೃಷಿ …

Read More »

ಬೇರೆ ರಾಜ್ಯಗಳಿಂದ ಗಾಂಜಾ ತಂದು ಮಾರಾಟ ಮಾಡುತ್ತಿದ್ದ ಎಂಟು ಆರೋಪಿಗಳನ್ನು ಅಬಕಾರಿ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು : ಆಂಧ್ರಪ್ರದೇಶ ಹಾಗೂ ಒಡಿಶಾ ಸೇರಿ ವಿವಿಧ ರಾಜ್ಯಗಳಿಂದ ನಗರಕ್ಕೆ ತಂದು ಗಾಂಜಾ ಮಾರಾಟ ಮಾಡುತ್ತಿದ್ದ ಪ್ರತ್ಯೇಕ ಮೂರು ಪ್ರಕರಣಗಳಲ್ಲಿ ಮಹಿಳೆ ಸೇರಿ ಒಟ್ಟು ಎಂಟು ಮಂದಿ ಆರೋಪಿಗಳನ್ನು ಬಂಧಿಸಿ 79 ಕೆ.ಜಿ ಗಾಂಜಾವನ್ನು ಅಬಕಾರಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.   ರೈಲು ಹಾಗೂ ಬಸ್ ಮಾರ್ಗವಾಗಿ ನಗರದಲ್ಲಿ ಅವ್ಯವಾಹತವಾಗಿ ನಗರಕ್ಕೆ ತಂದು ಸಣ್ಣ ಪೊಟ್ಟಣಗಳಲ್ಲಿ ಇಟ್ಟು ಗಾಂಜಾ ಮಾರಾಟ ಮಾಡುತ್ತಿದ್ದ ಒಡಿಶಾ ಮೂಲದ ಮಧುಸ್ಮಿತಾ, ನರೇಶ್, ದಿಲ್ಮಾಜ್, ಸುಬ್ರತ್ …

Read More »

ಅಂಗನವಾಡಿ ಕಾರ್ಯಕರ್ತೆಯರ ವೇತನ ಹೆಚ್ಚಳ ಮಾಡುವಂತೆ ಒತ್ತಾಯ

ಬೆಳಗಾವಿ : ಐದು ಗ್ಯಾರಂಟಿಗಳ ಬಗ್ಗೆ ಮಾತನಾಡುತ್ತಿರುವ ಪ್ರಸ್ತುತ ಕಾಂಗ್ರೆಸ್ ಸರ್ಕಾರ ತಾವೇ ಘೋಷಿಸಿದ 6ನೇ ಗ್ಯಾರಂಟಿ ಏಕೆ ಜಾರಿಗೆ ತರುತ್ತಿಲ್ಲ. ಅಂಗನವಾಡಿ ಕಾರ್ಯಕರ್ತೆಯರ ವೇತನ ಹೆಚ್ಚಿಸುವ ಬಗ್ಗೆ ಯಾಕೆ ಮಾತನಾಡುತ್ತಿಲ್ಲ. ಈ ಬಜೆಟ್​ನಲ್ಲಿ ತಾವು ಕೊಟ್ಟ ಮಾತಿನಂತೆ ನಮ್ಮ ವೇತನ ಹೆಚ್ಚಿಸಲು ಆದೇಶ ಹೊರಡಿಸಬೇಕು ಎಂದು ಬೆಳಗಾವಿಯ ಅಂಗನವಾಡಿ ಕಾರ್ಯಕರ್ತೆಯರು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ. ಹೌದು, ಕಡಿಮೆ ವೇತನದಲ್ಲಿ ನಾವೆಲ್ಲಾ ಕಳೆದ 20 ವರ್ಷಗಳಿಂದ ಸೇವೆ ಸಲ್ಲಿಸುತ್ತಾ ಬಂದಿದ್ದೇವೆ. ಪ್ರತಿ …

Read More »

(ನರೇಗಾ) ಯೋಜನೆಯಲ್ಲಿ ಬೆಳಗಾವಿ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ

ಬೆಳಗಾವಿ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ (ನರೇಗಾ) ಮಾನವ ದಿನ ಸೃಜನೆಯಲ್ಲಿ ಬೆಳಗಾವಿ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದೆ. ಜೊತೆಗೆ ಈ ಸಾಲಿನ ಆರ್ಥಿಕ ವರ್ಷದ ಕೇವಲ ಮೂರು ತಿಂಗಳಲ್ಲಿ 61.41 ಲಕ್ಷದಷ್ಟು ಮಾನವ ದಿನ ಸೃಜನೆ ಮಾಡಿರುವುದು ದಾಖಲೆಯಾಗಿದೆ ಎಂದು ಬೆಳಗಾವಿ ಜಿಪಂ ಸಿಇಒ ಹರ್ಷಲ್ ಭೊಯರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಬೆಳಗಾವಿ ಜಿಲ್ಲೆಗೆ 2023-24ನೇ ಸಾಲಿಗೆ 1.40 ಕೋಟಿ ಮಾನವ ದಿನಗಳ ಸೃಜನೆಯ …

Read More »

ಈ ಬಜೆಟ್ ಮೇಲೆ ಬೆಳಗಾವಿ ಜಿಲ್ಲೆಯ ರೈತರ ಬೆಟ್ಟದಷ್ಟು ನಿರೀಕ್ಷೆ

ಬೆಳಗಾವಿ: ಐದು ಗ್ಯಾರಂಟಿ‌ ಯೋಜನೆಗಳನ್ನು ಘೋಷಿಸುವ ಮೂಲಕ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಬಜೆಟ್ ನಾಳೆ ಮಂಡನೆಯಾಗಲಿದೆ. ಈ ಬಜೆಟ್ ಮೇಲೆ ಬೆಳಗಾವಿ ಜಿಲ್ಲೆಯ ರೈತರು ಬೆಟ್ಟದಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಬಾರಿಯಾದರೂ ನಮ್ಮ ಬೇಡಿಕೆ ಈಡೇರುತ್ತವೋ ಎಂದು ಆಸೆಗಣ್ಣಿನಿಂದ ಕಾಯುತ್ತಿದ್ದಾರೆ. ಬೆಳಗಾವಿ ರಾಜ್ಯದ ಎರಡನೇ ಅತೀ ದೊಡ್ಡ ಜಿಲ್ಲೆ. ರಾಜ್ಯದ ಎರಡನೇ ರಾಜಧಾನಿ ಅಂತಾನೂ ಕರೆಸಿಕೊಳ್ಳುತ್ತದೆ. ಇಲ್ಲಿನ ಜನರ ಬಹುತೇಕ ಕಸಬು ಕೃಷಿ. ಜಿಲ್ಲೆಯಲ್ಲಿ …

Read More »

ನನ್ನ ಬಾಯಿ ಮುಚ್ಚಿಸಲು ಯಾರಿಂದಲೂ ಸಾಧ್ಯವಿಲ್ಲ.:ರೇಣುಕಾಚಾರ್ಯ

ದಾವಣಗೆರೆ : ನನ್ನ ಬಾಯಿ ಮುಚ್ಚಿಸಲು ಯಾರಿಂದಲೂ ಸಾಧ್ಯವಿಲ್ಲ. ನೋಟಿಸ್​ಗೆ ನಾನು ಉತ್ತರ ಕೊಡಲ್ಲ ಎಂದು ಹೊನ್ನಾಳಿ ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ ಹೇಳಿದ್ದಾರೆ. ನಗರದಲ್ಲಿ ಹಮ್ಮಿಕೊಂಡಿದ್ದ ಸಂಸದ ಜಿಎಂ ಸಿದ್ದೇಶ್ವರ್​ ಅವರ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಭಾಗಿಯಾದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ನಾನು ಬಿಜೆಪಿ ಶಿಸ್ತು ಸಮಿತಿಯಿಂದ ನೀಡಿರುವ ನೋಟಿಸ್​​ಗೆ ಯಾವುದೇ ಉತ್ತರ ಕೊಡಲ್ಲ. ನೋಟಿಸ್​​ಗೆ ನಾನೇಕೆ ಉತ್ತರ ಕೊಡಬೇಕು ಎಂದು ಪ್ರಶ್ನಿಸಿದರು. ನಾನು ಏನು ಹೇಳಬೇಕೋ ಅದನ್ನೇ ಹೇಳಿದ್ದೇನೆ. …

Read More »