Breaking News

ಜಿಲ್ಲೆ

ಗೋಕಾಕ :ಬೇರೊಬ್ಬರ ಮನೆಯ ಗ್ಯಾಲರಿಯಲ್ಲಿ ಮಹಿಳೆಯೋರ್ವಳ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಗೋಕಾಕ : ಗೋಕಾಕ ನಗರದ ಕಿಲ್ಲಾ ಪ್ರದೇಶದಲ್ಲಿ ಬೇರೊಬ್ಬರ ಮನೆಯ ಗ್ಯಾಲರಿಯಲ್ಲಿ ಮಹಿಳೆಯೋರ್ವಳ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ಶವವಾಗಿ ಪತ್ತೆಯಾಗಿರುವ ಮಹಿಳೆಯನ್ನು ಮರಾಠಾಗಲ್ಲಿಯ ನಿವಾಸಿಯಾದ ಜಭೀನಾ ಮುಲ್ಲಾ (40) ಎಂದು ಗುರುತಿಸಲಾಗಿದೆ. ಗೋಕಾಕ ನಗರದ ಕಿಲ್ಲಾದಲ್ಲಿರುವ ಕಿರಣ್ ದೀಕ್ಷಿತ್ ಎಂಬುವವರ ಮನೆಯ ಮುಂದಿನ ಗ್ಯಾಲರಿಯಲ್ಲಿ ಮೃತದೇಹ ನೇತಾಡುತ್ತಿತ್ತು. ಮನೆ ರಸ್ತೆ ಪಕ್ಕದಲ್ಲಿರುವುದರಿಂದ ಈ ದೃಶ್ಯ ಕಂಡು ವಾಕಿಂಗ್ ಹೋಗುತ್ತಿದ್ದವರು ಬೆಚ್ಚಿಬಿದ್ದಿದ್ದಾರೆ. ಕೆಲವು ದಿನಗಳ ಹಿಂದೆ …

Read More »

ಪಿಎಫ್ಐ ಬೆಳಗಾವಿ ಜಿಲ್ಲಾಧ್ಯಕ್ಷ ನವೀದ್ ಕಟಗಿ ನಾಪತ್ತೆ: ವಿಶೇಷ ತಂಡ ರಚಿಸಿ ಪೊಲೀಸರಿಂದ ತಲಾಶ್​

ಬೆಳಗಾವಿ: ಕಳೆದ ಮೂರು ದಿನಗಳಿಂದ ನಿಷೇಧಿತ ಪಿಎಫ್ಐನ ಬೆಳಗಾವಿ ಜಿಲ್ಲಾಧ್ಯಕ್ಷ ನವೀದ್ ಕಟಗಿ ನಾಪತ್ತೆಯಾಗಿದ್ದು, ಅವರ ಬಂಧನಕ್ಕೆ ಪೊಲೀಸರು ವಿಶೇಷ ತಂಡ ರಚಿಸಿ ಶೋಧ ಕಾರ್ಯಾಚರಣೆ ಮುಂದುವರೆಸಿದ್ದಾರೆ. ಕಳೆದ ಒಂದು ವಾರದ ಹಿಂದೆ ದೇಶಾದ್ಯಂತ ಪಿಎಫ್ಐ ಕಚೇರಿ ಮೇಲಿನ ದಾಳಿಯನ್ನು ಖಂಡಿಸಿ ಬೆಳಗಾವಿ ತಾಲೂಕಿನ ಕಾಕತಿ ಗ್ರಾಮದ ಹೊರವಲಯದಲ್ಲಿರುವ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ತಡೆದು ಪಿಎಫ್ಐ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದರು. ಈ ಪ್ರತಿಭಟನೆಯ ಮುಂದಾಳತ್ವವನ್ನು ಬೆಳಗಾವಿ ಪಿಎಫ್ಐ ಜಿಲ್ಲಾಧ್ಯಕ್ಷ ನವೀದ್ …

Read More »

ಪಿಎಸ್‌ಐ ನೇಮಕ ಅಕ್ರಮ: ಮರುಪರೀಕ್ಷೆಗೆ ಹೈಕೋರ್ಟ್ ಬ್ರೇಕ್!

ಬೆಂಗಳೂರು, ಸೆ.28. ಪೊಲೀಸ್‌ ಸಬ್‌ ಇನ್ಸ್‌ ಪೆಕ್ಟರ್‌ ಹುದ್ದೆಗಳ ನೇಮಕದಲ್ಲಿ ಭಾಗಿ ಅಕ್ರಮ ನಡೆದಿರುವುದು ಮೇಲ್ನೋಟಕ್ಕೆ ಸಾಬೀತಾಗಿರುವ ಹಿನ್ನೆಲೆಯಲ್ಲಿ ಮರು ಪರೀಕ್ಷೆ ನಡೆಸುವ ಸರ್ಕಾರ ಕೈಗೊಂಡಿದ್ದ ತೀರ್ಮಾನಕ್ಕೆ ಹೈಕೋರ್ಟ್ ತಡೆಯೊಡ್ಡಿದೆ. ಹಾಗಾಗಿ ಸದ್ಯಕ್ಕೆ ಮರುಪರೀಕ್ಷೆ ನಡೆಯುವ ಸಾಧ್ಯತೆಗಳು ಇಲ್ಲ. ನೇಮಕ ಕುರಿತ ಅನಿಶ್ಚಿತತೆ ಮುಂದುವರಿಯಲಿದೆ. ಏ.29ರಂದು ಸರ್ಕಾರ ಕೈಗೊಂಡಿದ್ದ ಮರುಪರೀಕ್ಷೆ ನಿರ್ಧಾರ ರದ್ದು ಕೋರಿ ಹಲವು ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ನ್ಯಾ. ಜಿ.ನರೇಂದರ್‌ ಅವರಿದ್ದ ವಿಭಾಗೀಯಪೀಠ ಬುಧವಾರೆ ಈ …

Read More »

ಅಂತಾರಾಷ್ಟ್ರೀಯ ಪ್ರವಾಸೋದ್ಯಮ ನಕ್ಷೆಯಲ್ಲಿ ರಾಜ್ಯ ಶೀಘ್ರ ಸೇರ್ಪಡೆ

ಬೆಂಗಳೂರು: ಕರ್ನಾಟಕ ಪ್ರವಾಸೋದ್ಯಮ ಮುಂದಿನ ಕೆಲವೇ ದಿನಗಳಲ್ಲಿ ಅಂತಾರಾಷ್ಟ್ರೀಯ ನಕ್ಷೆಯಲ್ಲಿ ಸೇರ್ಪಡೆಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು. ವಿಶ್ವ ಪ್ರವಾಸೋದ್ಯಮ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿ, ರಾಜ್ಯಕ್ಕೆ ಆಗಮಿಸುತ್ತಿರುವ 30 ಲಕ್ಷ ಪ್ರವಾಸಿಗರನ್ನು ಮುಂದಿನ ಮೂರು ವರ್ಷದಲ್ಲಿ ಒಂದು ಕೋಟಿಗೆ ಮುಟ್ಟಿಸುವ ಕೆಲಸವನ್ನು ನಾವೆಲ್ಲರೂ ಸೇರಿ ಮಾಡಬೇಕು ಎಂದು ಹೇಳಿದರು.   ರಾಜ್ಯದಲ್ಲಿ ಪ್ರವಾಸಿಗರ ಹೆಜ್ಜೆಗಳನ್ನು ಹೆಚ್ಚಿಸಬೇಕು. ವಿದೇಶಿಯರನ್ನು ಆಕರ್ಷಿಸಿ, ಸ್ಥಳೀಯರಿಗೆ ಕೆಲಸ ಕೊಡಬೇಕು. ಪ್ರವಾಸೋದ್ಯಮಕ್ಕೆ ಸೂಕ್ತವಾಗಿರುವ ಹಲವು …

Read More »

ಪಿಎಫ್ಐ ಸಂಘಟನೆ ಬ್ಯಾನ್ ಮಾಡಿರುವ ಕೇಂದ್ರ ಸರ್ಕಾರದ ನಿರ್ಧಾರ ಸ್ವಾಗತಾರ್ಹ: ಕಟೀಲ್​

ಚಿಕ್ಕೋಡಿ(ಬೆಳಗಾವಿ): ದೇಶದಲ್ಲಿ ಪಿಎಫ್ಐ ಸಂಘಟನೆಯನ್ನು ಬ್ಯಾನ್ ಮಾಡಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ನಾನು ಸ್ವಾಗತಿಸುತ್ತೇನೆ‌. ದೇಶದಲ್ಲಿ ವಿದ್ವಂಸಕ ಕೃತ್ಯ ನಡೆಸುವ ಸಂಸ್ಥೆಗಳು, ಭಯೋತ್ಪಾದನಾ ಕೃತ್ಯಗಳಿಗೆ ಪ್ರೇರಣೆ ನೀಡುವ ಶಕ್ತಿಗಳನ್ನ ನಿಯಂತ್ರಣ ಮಾಡುವ ದೃಷ್ಟಿಯಿಂದ ಪಿಎಫ್ಐ ಮತ್ತು ಅದರ ಅಂಗ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ನಿಷೇಧ ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಹೇಳಿದ್ದಾರೆ. ಕಾಗವಾಡದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರದ ದಿಟ್ಟ ನಿರ್ಧಾರದಿಂದ ದೇಶದಲ್ಲಿ ಪಿಎಫ್ಐ ಸಂಘಟನೆ …

Read More »

ಹುಕ್ಕೇರಿ ಬಾಲಕನ ರುಂಡ ಕತ್ತರಿಸಿದ ಪ್ರಕರಣ; ಇಬ್ಬರು ಆರೋಪಿಗಳು ಅರೆಸ್ಟ್

ಬೆಳಗಾವಿ: ಹುಕ್ಕೇರಿ ತಾಲೂಕಿನ ಹಿರಣ್ಯಕೇಶಿ ನದಿಯ ಹಿನ್ನೀರಿನಲ್ಲಿ ರುಂಡವಿಲ್ಲದ ಬಾಲಕನ ಮೃತದೇಹ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಹೊಸೂರ ಗ್ರಾಮದ ನೂರಅಹ್ಮದ್ ಕೊಣ್ಣೂರ ಮತ್ತು ಹನುಮಂತ ಬೇವನೂರ ಬಂಧಿತರು. ಹೊಸೂರ ಗ್ರಾಮದ 12 ವರ್ಷದ ಬಾಲಕ ಹತ್ಯೆಗೀಡಾಗಿದ್ದ. ಪ್ರಕರಣದ ಹಿನ್ನೆಲೆ: ಸೆ.20ರಂದು ಮಾಳಪ್ಪ ನಾಪತ್ತೆ ಆಗಿರುವ ಬಗ್ಗೆ ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸಿದ್ದ ವೇಳೆ ಹಿರಣ್ಯಕೇಶಿ ನದಿಯ ಹಿನ್ನೀರಿನಲ್ಲಿ ರುಂಡವಿಲ್ಲದ …

Read More »

ಸರ್ಕಾರಿ ಸಂಬಳ ಸಾಲ್ತಿಲ್ವಂತೆ: ಈ ಅಗ್ನಿಶಾಮಕ ಸಿಬ್ಬಂದಿಗೆ ತಿಂಗಳಿಗಿಷ್ಟು ಬೇಕೇ ಬೇಕಂತೆ!

ಬೆಳಗಾವಿ: ಜನರ ಪರವಾಗಿ ಕಾರ್ಯನಿರ್ವಹಿಸಬೇಕಿದ್ದ, ಸರ್ಕಾರಿ ನೌಕರರೇ ದಂಧೆಗಿಳಿದ ಹಲವು ಪ್ರಕರಣಗಳು ನಡೆದಿವೆ. ಇದೀಗ ಅಗ್ನಿಶಾಮಕ ದಳದ ಸಿಬ್ಬಂದಿಯೊಬ್ಬ ಹಿರಿಯ ಅಧಿಕಾರಿಗಳ ಹೆಸರು ದುರ್ಬಳಕೆ ಮಾಡಿಕೊಂಡು ಹಣದ ದಂಧೆ ಮಾಡಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ.   ಹೌದು, ಆನಂದ್ ಎಂಬ ಅಗ್ನಿಶಾಮಕದಳ ಸಿಬ್ಬಂದಿ, ಸಿಸಿಬಿ ವಿಭಾಗದ ಎಸಿಪಿ ರಿನಾ ಸುವರ್ಣ ಹೆಸರು ಬಳಕೆ ಮಾಡಿಕೊಂಡು ಹಣದ ದಂಧೆ ಮಾಡಿ ಸಿಕ್ಕಿಬಿದ್ದಿದ್ದಾರೆ. ಪ್ರತಿ ತಿಂಗಳು ಗೌರವ ಮೊತ್ತದ ಸರ್ಕಾರಿ ಸಂಬಳ ಬರುತ್ತಿದ್ದರೂ, ಹಣದೆ …

Read More »

ಬಳ್ಳಾರಿ: ಮಟ್ಕಾ ಬುಕ್ಕಿ, ಅಕ್ಕಿ ವ್ಯಾಪಾರಿಯನ್ನು ಅಟ್ಟಾಡಿಸಿಕೊಂಡು ಹತ್ಯೆಗೈದ ದುಷ್ಕರ್ಮಿಗಳು

ಬಳ್ಳಾರಿ : ನಗರದ ರೇಡಿಯೋ ಪಾರ್ಕ್ ವೃತ್ತದಲ್ಲಿ ಅಕ್ಕಿ ವ್ಯಾಪಾರಿ ಮಟ್ಕಾ ಬುಕ್ಕಿ ಕುಂಟ ಮಂಜುನಾಥ ಎನ್ನುವವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರ ಕೊಲೆ ಮಾಡಿರುವ ಘಟನೆ ಬುಧವಾರ ಬೆಳಗಿನ ಜಾವ ನಡೆದಿದೆ. ನಗರದ ಕೊಲಿಮಿ ಬಜಾರ್ ನಿವಾಸಿಯಾದ ಕುಂಟ ಮಂಜುನಾಥ್ ನನ್ನು ರೇಡಿಯೋ ಪಾರ್ಕ್ ಅಯ್ಯಪ್ಪ ಸ್ವಾಮಿ ದೇವಸ್ಥಾನ ಬಳಿ ಬುಧವಾರ ಬೆಳಗಿನ ಜಾವ ಅಡ್ಡಗಟ್ಟಿದ ಇಬ್ಬರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಈ ವೇಳೆ ತಪ್ಪಿಸಿಕೊಂಡು ಓಡಿ ಹೋಗಲು …

Read More »

ಬಿಜೆಪಿ ಶಾಸಕರು ನಾಳೆ ಸಂಜೆಯೊಳಗೆ ಕಾಂಗ್ರೆಸ್‌ಗೆ ಸೇರುತ್ತಾರೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

ಬಳ್ಳಾರಿ, ಸೆ.27 : ಮುಹೂರ್ತ ಫಿಕ್ಸ್ ಮಾಡಿಕೊಳ್ಳಿ, ಇಂದು ಅಥವಾ ನಾಳೆ ಸಂಜೆಯೊಳಗೆ ಬಿಜೆಪಿ ಶಾಸಕರು ಕಾಂಗ್ರೆಸ್‌ಗೆ ಸೇರ್ಪಡೆಯಾಗಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಿಜೆಪಿ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಭಾರತ್ ಜೋಡೋ ಯಾತ್ರೆ ಅಂಗವಾಗಿ ಬಳ್ಳಾರಿಯಲ್ಲಿ ಸಮಾವೇಶ ಆಯೋಜಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಮುನಿಸಿಪಲ್ ಮೈದಾನವನ್ನು ವೀಕ್ಷಿಸಿದ ನಂತರ ಮಾಧ್ಯಮದವರೊಂದಿಗೆ ಡಿಕೆ ಶಿವಕುಮಾರ್ ಮಾತನಾಡಿದ್ದಾರೆ. ಕಾಂಗ್ರೆಸ್‌ನ ಮೂರ್ನಾಲ್ಕು ಶಾಸಕರು ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಬರಲಿದ್ದಾರೆ ಎಂಬ ಶಾಸಕ ಸೋಮಶೇಖರ ರೆಡ್ಡಿ …

Read More »

ರಾಜ್ಯ ಸರ್ಕಾರದಿಂದ `ಅನರ್ಹ ಪಿಂಚಣಿದಾರ’ರಿಗೆ ಬಿಗ್ ಶಾಕ್ : 7 ಲಕ್ಷ ಅರ್ಜಿ ರದ್ದು

ಬೆಂಗಳೂರು : ರಾಜ್ಯ ಸರ್ಕಾರವು ಅನರ್ಹ ಪಿಂಚಣಿದಾರರಿಗೆ ಬಿಗ್ ಶಾಕ್ ನೀಡಿದ್ದು, 2019 ರಿಂದ 7 ಲಕ್ಷ ಸಾಮಾಜಿಕ ಭದ್ರತಾ ಪಿಂಚಣಿ ಅರ್ಜಿಗಳನ್ನು ತಿರಸ್ಕರಿಸಿದ್ದು, ಅನರ್ಹ ಫಲಾನುಭವಿಗಳನ್ನು ಕಂಡುಹಿಡಿಯಲು ಮೂರು ನಾಗರಿಕ ಡೇಟಾಬೇಸ್ ಗಳನ್ನು ಸಂಯೋಜಿಸುವ ಮೂಲಕ ರದ್ದುಗೊಳಿಸಿದೆ.     ಕಂದಾಯ ಇಲಾಖೆಯ ಅಂಕಿಅಂಶಗಳ ಪ್ರಕಾರ, 2019 ರಿಂದ ಇಲ್ಲಿಯವರೆಗೆ 30 ಲಕ್ಷ ಅರ್ಜಿಗಳ ಪೈಕಿ 22.69 ಲಕ್ಷ ಸಾಮಾಜಿಕ ಭದ್ರತಾ ಪಿಂಚಣಿಗಳನ್ನು ಮಂಜೂರು ಮಾಡಲಾಗಿದೆ. 39,597 ಪಿಂಚಣಿ …

Read More »