Breaking News

ಜಿಲ್ಲೆ

ಇನ್ನುಮುಂದೆ ಬ್ಯಾಂಕ್ ಗಳು ರೈತರ ಆಸ್ತಿ ಮುಟ್ಟುಗೋಲು ಹಾಕುವಂತಿಲ್ಲ: ಸಿಎಂ ಬೊಮ್ಮಾಯಿ

ಚಿತ್ರದುರ್ಗ: ಸಾಲಕ್ಕಾಗಿ ಹಣಕಾಸು ಸಂಸ್ಥೆಗಳು, ಬ್ಯಾಂಕುಗಳು ರೈತರ ಮನೆ, ಆಸ್ತಿ- ಪಾಸ್ತಿ ಜಪ್ತಿ ಮಾಡುವುದನ್ನು ನಿಷೇಧ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಸಿರಿಗೆರೆ ತರಳಬಾಳು ಬೃಹನ್ಮಠದಲ್ಲಿ ಲಿಂಗೈಕ್ಯ ಶ್ರೀ ಶಿವಕುಮಾರ ಶಿವಾಚಾರ್ಯ ಶ್ರೀಗಳ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡಿದರು.   ರಾಜ್ಯದಲ್ಲಿ ರೈತರು ಸಂಕಷ್ಟದಲ್ಲಿದ್ದಾರೆ. ಇಂತಹ ಸಂದರ್ಭಗಳಲ್ಲಿ ಬ್ಯಾಂಕ್, ಫೈನಾನ್ಸ್ ಗಳು ಆಸ್ತಿ ಜಪ್ತಿ ಮಾಡುವುದು ಸರಿಯಲ್ಲ. ಈ‌ ಕುರಿತು ಬೆಂಗಳೂರಿಗೆ ಹೋದ ತಕ್ಷಣ ಅಗತ್ಯ ಕಾನೂನು ತಿದ್ದುಪಡಿ …

Read More »

ಡಾ.ಸಂಜೀವ್ ಪಾಟೀಲ್ ಅವರ ಹೆಸರಿನಲ್ಲಿ ಸೈಬರ್ ಖದೀಮರು ಇನ್ಸಟಾ ಗ್ರಾಂ ನಕಲಿ ಖಾತೆ ತೆರೆದು ಸಾರ್ವಜನಿಕರಲ್ಲಿ ಹಣ ಕೇಳಿರುವ ಘಟನೆ ಬೆಳಕಿಗೆ ಬಂದಿದೆ.

ಬೆಳಗಾವಿ ಎಸ್ಪಿ ಡಾ.ಸಂಜೀವ್ ಪಾಟೀಲ್ ಅವರ ಹೆಸರಿನಲ್ಲಿ ಸೈಬರ್ ಖದೀಮರು ಇನ್ಸಟಾ ಗ್ರಾಂ ನಕಲಿ ಖಾತೆ ತೆರೆದು ಸಾರ್ವಜನಿಕರಲ್ಲಿ ಹಣ ಕೇಳಿರುವ ಘಟನೆ ಬೆಳಕಿಗೆ ಬಂದಿದೆ. ಹೌದು ಫೇಸ್‍ಬುಕ್, ಇನ್ಸಟಾ ಸೇರಿ ಇನ್ನಿತರ ಸಾಮಾಜಿಕ ಜಾಲತಾಣಗಳಲ್ಲಿ ಖಾತೆ ಹೊಂದಿರುವ ಬಹಳಷ್ಟು ಜನರ ಖಾತೆಗಳನ್ನು ಸೈಬರ್ ಖದೀಮರು ಹ್ಯಾಕ್ ಮಾಡುವುದು. ಅವರ ಹೆಸರಿನಲ್ಲಿ ನಕಲಿ ಖಾತೆ ತೆರೆದು ಹಣ ಕೇಳುವುದು ಇತ್ತಿಚಿಗೆ ಸಾಮಾನ್ಯವಾಗಿ ಬಿಟ್ಟಿದೆ. ಇದೀಗ ಬೆಳಗಾವಿಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ …

Read More »

ಸಂತೋಷ್ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಗೋಕಾಕ್ ತಾಲ್ಲೂಕಿನ ರಡ್ಡೇರಟ್ಟಿ ಗ್ರಾಮದ ಕರಿಸಿದ್ದೆಶ್ವರ ದೇವಸ್ಥಾನದಲ್ಲಿ ಅನ್ನ ಸಂತರ್ಪಣೆ!

ಸಂತೋಷ್ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಗೋಕಾಕ್ ತಾಲ್ಲೂಕಿನ ರಡ್ಡೇರಟ್ಟಿ ಗ್ರಾಮದ ಕರಿಸಿದ್ದೆಶ್ವರ ದೇವಸ್ಥಾನದಲ್ಲಿ ಅನ್ನ ಸಂತರ್ಪಣೆ! ರಡ್ಡೇರಟ್ಟಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.   ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಡ್ಡೇರಟ್ಟಿ ಗ್ರಾಮದ ಕರಿಸಿದ್ದೇಶ್ವರ …

Read More »

15,000 ಶಿಕ್ಷಕರ ನೇಮಕಾತಿಗೆ 1:2 ಆಧಾರದಲ್ಲಿ ಅಭ್ಯರ್ಥಿಗಳ ಪರಿಶೀಲನ ಪಟ್ಟಿ ಪ್ರಕಟ

ಬೆಂಗಳೂರು: 15,000 ಶಿಕ್ಷಕರ ನೇಮಕಾತಿ ಪರೀಕ್ಷೆ ಫಲಿತಾಂಶ ಆಧರಿಸಿ ಮುಂದಿನ ವಾರಾಂತ್ಯದೊಳಗೆ 1:2 ಆಧಾರದಲ್ಲಿ ಅಭ್ಯರ್ಥಿಗಳ ಪರಿಶೀಲನಾ ಪಟ್ಟಿ ಪ್ರಕಟಿಸಲಾಗುತ್ತದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ. ನಾಗೇಶ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಪ್ರತಿ ಹುದ್ದೆಗೆ ಇಬ್ಬರು ಅಭ್ಯರ್ಥಿಗಳ ಆಯ್ಕೆಯಂತೆ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ. ನಂತರ ಒಂದು ಹುದ್ದೆಗೆ ಒಬ್ಬರಂತೆ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಪ್ರಕಟಿಸಲಾಗುವುದು. ಶೀಘ್ರವೇ ಹೊಸ ಶಿಕ್ಷಕರ ನೇಮಕಾತಿ ಪೂರ್ಣಗೊಳಿಸಿ ಶಾಲೆಗಳಿಗೆ ಶಿಕ್ಷಕರನ್ನು ನಿಯೋಜಿಸಲಾಗುವುದು …

Read More »

ರಾಜ್ಯ ಸರ್ಕಾರಿ ನೌಕರ’ರಿಗೆ ದಸರಾ ಗಿಫ್ಟ್: ಮೂಲವೇತನಕ್ಕಿಂತ ಶೇ.15ರಷ್ಟು ಅಧಿಕ ‘ಪ್ರಭಾರ ಭತ್ಯೆ ಹೆಚ್ಚಳ’

ಬೆಂಗಳೂರು: ರಾಜ್ಯದಲ್ಲಿ ಪ್ರಸ್ತುತ ಜಾರಿಯಲ್ಲಿರುವಂತ ಪ್ರಭಾರ ಭತ್ಯೆಗಳನ್ನು ( In-charge Allowance Rate ), ಇದೀಗ ರಾಜ್ಯ ಸರ್ಕಾರ ಪರಿಷ್ಕರಿಸಿ ಆದೇಶಿಸಿದೆ. ಈ ಮೂಲಕ ರಾಜ್ಯ ಸರ್ಕಾರಿ ನೌಕರರಿಗೆ ( Karnataka Government Employees ) ದಸರಾ ಗಿಫ್ಟ್ ಆಗಿ ಸರ್ಕಾರ ಭರ್ಜರಿ ಸಿಹಿಸುದ್ದಿಯನ್ನು ನೀಡಿದೆ. ಈ ಸಂಬಂಧ ಆರ್ಥಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಗಳನ್ನು ಹೊರಡಿಸಿದ್ದು, ಸರ್ಕಾರಿ ನೌಕರರನ್ನು ಸ್ವತಂತ್ರ ಪ್ರಭಾರದಲ್ಲಾಗಲೀ ಅಥವಾ ತಮ್ಮ ಹುದ್ದೆಯ ಕರ್ತವ್ಯದ …

Read More »

ಬೆಳಗಾವಿಯ ಜಿಲ್ಲಾಧಿಕಾರಿಗಳ ಕಚೇರಿಯ ಹಿಂಭಾಗದ ಆವರಣದಲ್ಲಿ ಸ್ವಚ್ಛತೆ ಮಂಗಮಾಯ

ಬೆಳಗಾವಿಯ ಜಿಲ್ಲಾಧಿಕಾರಿಗಳ ಕಚೇರಿಯ ಹಿಂಭಾಗದ ಆವರಣದಲ್ಲಿ ಸ್ವಚ್ಛತೆ ಮಂಗಮಾಯವಾಗಿದೆ. ಜಿಲ್ಲೆಗೆ ಮಾದರಿ ಪಾಠ ಹೇಳಬೇಕಿದ್ದ ಜಿಲ್ಲಾಧಿಕಾರಿಗಳ ಕಚೇರಿ ಆವರಣವೇ ಈಗ ಕಸ ತುಂಬಿಕೊಂಡು ರೋಗಗ್ರಸ್ತವಾಗಿದೆ. ಜಿಲ್ಲಾಧಿಕಾರಿಗಳ ಕಚೇರಿಯ ಎಂದರೆ ಅದಕ್ಕೆ ಅದರದ್ದೇ ಆದ ಗೌರವವಿದೆ. ಅಲ್ಲಿ ಜಿಲ್ಲೆಯ ಅನೇಕ ಜನರ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಅಲ್ಲಿಗೆ ಬರುತ್ತಾರೆ. ಹಾಗಾಗಿ ಅದು ಜಿಲ್ಲೆಗೇ ಮಾದರಿಯಾಗಿರಬೇಕಾದದ್ದು ಸ್ವಾಭಾವಿಕ. ಆದರೆ ಬೆಳಗಾವಿ ಜಿಲ್ಲಾಧಿಕಾರಿಗಳ ಕಚೇರಿಯ ಹಿಂಭಾಗ ಅಕ್ಷರಶಃ ಅವ್ಯವಸ್ಥೆಯ ಗೂಡಾಗಿದೆ. ಎಲ್ಲಂದರಲ್ಲಿ ಕಸವನ್ನು ಹಾಕಲಾಗಿದ್ದು ಸಾರ್ವಜನಿಕರ …

Read More »

ರಸ್ತೆ‌ ಪಕ್ಕ ನಿಲ್ಲಿಸಿದ್ದ ಬೈಕ್ ಕಳ್ಳತನ: ಸಿಸಿಟಿವಿ ದೃಶ್ಯ

ಬೆಳಗಾವಿ: ರಸ್ತೆ‌ ಪಕ್ಕ ನಿಲ್ಲಿಸಲಾಗಿದ್ದ ಬೈಕ್ ಕಳ್ಳತನ ಮಾಡಿರುವ ಘಟನೆ ಬೆಳಗಾವಿ ‌ಜಿಲ್ಲೆಯ ಬೈಲಹೊಂಗಲ ‌ಪಟ್ಟಣದಲ್ಲಿ ನಡೆದಿದೆ. ಬೈಲಹೊಂಗಲ ಪಟ್ಟಣದ ಕೇಂದ್ರ ಬಸ್ ನಿಲ್ದಾಣ ಸಮೀಪದ ಕೆನರಾ ಬ್ಯಾಂಕ್ ಎದುರು ಬೈಕ್ ನಿಲ್ಲಿಸಲಾಗಿತ್ತು. ನಿಲ್ಲಿಸಿದ್ದ ದ್ವಿ-ಚಕ್ರ ವಾಹನವನ್ನು ವ್ಯಕ್ತಿಯೊಬ್ಬ ಕದ್ದು ಪರಾರಿಯಾಗಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ಬೈಕ್​ ಪಟ್ಟಣದ ಅನ್ನಪೂರ್ಣೇಶ್ವರಿ ಖಾನಾವಳಿ ಮಾಲೀಕ ವಿಜಯಕುಮಾರ ರಾಜಗೋಳಿ ಎಂಬುವರಿಗೆ ಸೇರಿದ್ದಾಗಿದೆ. ಬಜಾಜ್ ಕಂಪನಿಯ ಪ್ಲಾಟಿನಾ ಬೈಕ್ ಸೆ.17 ರಂದು ಸಂಜೆ …

Read More »

ಹಗರಣಗಳ ಸರಮಾಲೆಯ ಖ್ಯಾತಿ ಸಿದ್ದರಾಮಯ್ಯಗೆ ಸಲ್ಲುತ್ತದೆ: ಬಿಜೆಪಿ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್ ಪಕ್ಷ ಹಗರಣ ಮಾಡಲೆಂದೇ ಅಧಿಕಾರಕ್ಕೆ ಬಂದಿದ್ದೋ ಎಂಬ ರೀತಿಯಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಆಡಳಿತ ನಡೆಸಿತ್ತು ಎಂದು ಬಿಜೆಪಿ ಆರೋಪಿಸಿದೆ. ಕಾಂಗ್ರೆಸ್‌ ಕಾಲದ ಹಗರಣಗಳ ಕುರಿತು ಸರಣಿ ಟ್ವೀಟ್‌ ಮಾಡಿರುವ ಬಿಜೆಪಿ‌, ಹಗರಣಗಳ ಸರಮಾಲೆಯನ್ನೇ ಕೊರಳಿಗೆ ಹಾಕಿಕೊಂಡು ಓಡಾಡಿದ ಖ್ಯಾತಿ ಸಿದ್ದರಾಮಯ್ಯ ಅವರಿಗೆ ಸಲ್ಲುತ್ತದೆ ಎಂದು ದೂರಿದೆ.   ‘ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಎಲ್ಲ ಯೋಜನೆಗಳಲ್ಲೂ ಹಗರಣ ನಡೆದಿದೆ. ಶಿಕ್ಷಕರ ಅಕ್ರಮ ನೇಮಕಾತಿ ಹಗರಣದಲ್ಲಿನ ಕಮಿಷನ್, ಸ್ಟೀಲ್ ಬ್ರಿಡ್ಜ್ …

Read More »

ಪೌರ ಕಾರ್ಮಿಕರ ಕೆಲಸ ನೋಡಿದ್ರೆ ಕಣ್ಣೀರು ಬರುತ್ತೆ

ಬೆಂಗಳೂರು: ಎರಡು ದಿನಗಳ ಹಿಂದೆಯಷ್ಟೇ ಸಂಪುಟದಲ್ಲಿ (Legislative Assembly) ಪೌರ ಕಾರ್ಮಿಕರ (Civic Workers) ಕಾಯಂ ಮಾಡುವ ತೀರ್ಮಾನ ತೆಗೆದುಕೊಂಡಿದ್ದ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಇಂದು ಪೌರಕಾರ್ಮಿರ ದಿನಾಚರಣೆಯ ಪ್ರಯುಕ್ತ ಉಪಾಹಾರ ಸವಿದಿದ್ದಾರೆ. ರೇಸ್‌ಕೋರ್ಸ್‌ನಲ್ಲಿರುವ ತಮ್ಮ ನಿವಾಸದಲ್ಲಿ 500ಕ್ಕೂ ಹೆಚ್ಚು ಪೌರಕಾರ್ಮಿಕರಿಗೆ ಉಪಹಾರ ವ್ಯವಸ್ಥೆ ಏರ್ಪಡಿಸಿದ್ದರು. ಬೆಳಿಗ್ಗೆ 9.30ಕ್ಕೆ ಸಿಎಂ ಸಹ ಪೌರ ಕಾರ್ಮಿಕರೊಂದಿಗೆ ಇಡ್ಲಿ, ವಡೆ, ಉಪ್ಪಿಟ್ಟು, ಕೇಸರಿಬಾತ್ ಉಪಹಾರ ಸವಿದಿದ್ದಾರೆ.  ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, …

Read More »

ಕಾಂಗ್ರೆಸ್, ಜೆಡಿಎಸ್ ಧರಣಿ ನಡುವೆ ನಾಲ್ಕು ವಿಧೇಯಕಗಳ ಅಂಗೀಕಾರ: ಪರಿಷತ್ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

ಬೆಂಗಳೂರು: ವಿಧಾನಸಭೆಯಿಂದ ಅಂಗೀಕೃತ ರೂಪದಲ್ಲಿರುವ ನಾಲ್ಕು ವಿಧೇಯಕಗಳನ್ನು ಪ್ರತಿಪಕ್ಷಗಳ ಧರಣಿ ನಡುವೆ ವಿಧಾನ ಪರಿಷತ್​ನಲ್ಲಿ ಅಂಗೀಕಾರ ಮಾಡಲಾಗಿದ್ದು, ಕಲಾಪವನ್ನು ಅನಿರ್ದಿಷ್ಟಾವದಿಗೆ ಮುಂದೂಡಿಕೆ ಮಾಡಲಾಯಿತು. ವಿಧಾನ ಪರಿಷತ್ ಶೂನ್ಯವೇಳೆ ಕಲಾಪ ಮುಗಿಯುತ್ತಿದ್ದಂತೆ ಮಾತನಾಡಿದ ಪ್ರತಿಪಕ್ಷ ನಾಯಕ ಬಿ ಕೆ ಹರಿಪ್ರಸಾದ್, ನಿನ್ನೆ ಗದ್ದಲದ ನಡುವೆ ಮಾಣಿಪ್ಪಾಡಿ ವರದಿ ಮಂಡಿಸಿದ್ದಾರೆ. ನಮಗೆ ಅದರ ಪ್ರತಿ ಕೊಡಿ ಎಂದು ಮಾಣಿಪ್ಪಾಡಿ ವರದಿ ಕುರಿತು ನಿಯಮ 59 ರ ಅಡಿ ಚರ್ಚೆಗೆ ಅವಕಾಶ ಕೋರಿ ನಿಲುವಳಿ ಸೂಚನೆ …

Read More »