Breaking News

ಜಿಲ್ಲೆ

ಶಿಕ್ಷಕರ ಅಕ್ರಮ ನೇಮಕಾತಿ: ಮತ್ತೊಬ್ಬ ಶಿಕ್ಷಕನ ಬಂಧನ  

ವಿಜಯಪುರ: ಶಿಕ್ಷಕರ ಅಕ್ರಮ ನೇಮಕ ಪ್ರಕರಣದಲ್ಲಿ ತನಿಖೆ ಚುರುಕುಗೊಳಿಸಿರುವ ಸಿಒಡಿ ಪೊಲೀಸರು ಅಕ್ರಮ ನೇಮಕಾತಿಯಲ್ಲಿ ಕೈಚಳಕ ತೋರಿದ ವಿಜಯಪುರ ಜಿಲ್ಲೆಯ ಶಿಕ್ಷಕರನ್ನು ಒಬ್ಬೊಬ್ಬರಾಗಿ ಬಲೆಗೆ ಕೆಡವುತ್ತಿದ್ದಾರೆ. ಇದೀಗ ಮತ್ತೂಬ್ಬ ಶಿಕ್ಷಕ ಅಶೋಕ ಚವ್ಹಾಣ ಎಂಬಾತನನ್ನು ಬಂಧಿ ಸಿ ವಿಚಾರಣೆ ನಡೆಸಿದ್ದಾರೆ. ಶಿಕ್ಷಕರ ಅಕ್ರಮ ನೇಮಕಾತಿ ಪ್ರಕರಣದಲ್ಲಿ ವಿಜಯಪುರ ಜಿಲ್ಲೆಯ ನಂಟು ಗಾಢವಾಗಿರುವುದು ಶಿಕ್ಷಕರ ಸರಣಿ ಬಂಧನ ಇಂಬು ನೀಡುತ್ತಿದೆ. ವಿಜಯಪುರ ಜಿಲ್ಲೆ ಬಸವನಬಾಗೇಬಾಡಿ ತಾಲೂಕಿನ ಭೈರವಾಡಗಿ ಗ್ರಾಮದ ಸರ್ಕಾರಿ ಪ್ರೌಢಶಾಲಾ ಶಿಕ್ಷಕನಾಗಿ ಸೇವೆ …

Read More »

ಸರ್ಕಾರದ ಗೋಮಾಳ, ಕಾಣೆ,ಬಾಣೆ ಜಮೀನುಗಳಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ಸಿಹಿಸುದ್ದಿ!

ಬೆಂಗಳೂರು : ಸರ್ಕಾರಕ್ಕೆ ಸೇರಿದ ಗೋಮಾಳ ಜಮೀನಿನಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ಕಂದಾಯ ಸಚಿವ ಆರ್. ಅಶೋಕ್ ಸಿಹಿಸುದ್ದಿನೀಡಿದ್ದು, ಶೀಘ್ರವೇ ಜಮೀನು ಸಕ್ರಮಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.   ವಿಧಾನಪರಿಷತ್ ನಲ್ಲಿ ಈ ಕುರಿತು ಮಾಹಿತಿ ನೀಡಿರುವ ಸಚಿವರು, ಸರ್ಕಾರಕ್ಕೆ ಸೇರಿದ ಗೋಮಾಳ, ಗಾಯರಾಣ, ಹುಲ್ಲು ಬನ್ನಿ, ಸೊಪ್ಪಿನ ಬೆಟ್ಟ ಸೇರಿದಂತೆ ಕಾಣೆ, ಬಾಣೆ, ಕಮ್ಮಿ ಜಾಗದಲ್ಲಿ ಸಾಗುವಳಿ ಮಾಡುತ್ತಿರುವವರಿಗೆ ಜಮೀನುಗಳನ್ನು ಸಕ್ರಮ ಮಾಡುವ ಸಂಬಂಧ ನೀತಿ ರೂಪಿಸಲು …

Read More »

ಮೂಡಲಗಿ, ಕುಲಗೋಡ, ಖಾನಟ್ಟಿ ಹಾಗೂ ಬೆಟಗೇರಿಗೆ ಹೊಸ ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯಗಳು ಮಂಜೂರು : ಶಾಸಕ ಬಾಲಚಂದ್ರ ಜಾರಕಿಹೊಳಿ*

  *ಮೂಡಲಗಿ*: ಅರಭಾವಿ ವಿಧಾನಸಭಾ ಕ್ಷೇತ್ರಕ್ಕೆ 2022-23 ನೇ ಸಾಲಿನಲ್ಲಿ 4 ಹೊಸ ಸರ್ಕಾರಿ ಪದವಿ ಪೂರ್ವ ಕಾಲೇಜುಗಳು ಮಂಜೂರು ಆಗಿವೆ ಎಂದು ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ. ಮೂಡಲಗಿ ತಾಲೂಕಿನ ಮೂಡಲಗಿ, ಕುಲಗೋಡ, ಖಾನಟ್ಟಿ ಮತ್ತು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮಗಳಿಗೆ ವಿದ್ಯಾರ್ಥಿಗಳ ಅನುಕೂಲಕ್ಕೋಸ್ಕರ ಹೊಸ ಪದವಿ ಪೂರ್ವ ಕಾಲೇಜುಗಳನ್ನು ಮಂಜೂರು ಮಾಡಿಸಲಾಗಿದೆ. ಇದರಿಂದ ಮೂಡಲಗಿ ವಲಯದಲ್ಲಿ ಕಾಲೇಜುಗಳ ಸಂಖ್ಯೆ 9ಕ್ಕೇರಿದೆ …

Read More »

ಬೆಳಗಾವಿಯಲ್ಲಿ ಮಕ್ಕಳ ಸುರಕ್ಷತೆ ಅರಿವು ಕಾರ್ಯಕ್ರಮ 2022 ಆಯೋಜನೆ

ಬೆಳಗಾವಿಯಲ್ಲಿ ನಗರ ಪೊಲೀಸ್ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದಲ್ಲಿ ಮಕ್ಕಳ ಸುರಕ್ಷತೆ ಅರಿವು ಕಾರ್ಯಕ್ರಮ 2022ನ್ನು ಆಯೋಜಿಸಲಾಗಿತ್ತು. ಹೌದು ಇಂದು ಬುಧವರಾ ಬೆಳಗಾವಿ ನಗರದ ಜೀರಗೆ ಸಭಾ ಭವನದಲ್ಲಿ ಬೆಳಗಾವಿ ನಗರಪೊಲೀಸ್ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಮಲ್ಲ ಸುರಕ್ಷತೆ ಅರಿವು ಕಾರ್ಯಕ್ರಮ 2022ನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತರಾದ ಡಾ. ಎಂ.ಬಿ ಬೋರಲಿಂಗಯ್ಯ, ಡಿಡಿಪಿಐ ಬಸವರಾಜ್ ನಲವತ್‌ವಾಡ್, ಆರ್‌ಟಿಓ ಶಿವಾನಂದ ಮಗದುಮ್, ಪಾಲಿಕೆ ಆಯುಕ್ತರಾದ …

Read More »

ಖಾನಾಪುರ ತಾಲೂಕಿನಲ್ಲಿ ಕಳ್ಳರ ಪತ್ತೆ ಹಚ್ಚಿ: ಎಸ್‍ಪಿಗೆ ಮನವಿ

ಖಾನಾಪೂರ ತಾಲೂಕಿನಲ್ಲಿ ಕಳ್ಳತನದ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಹೀಗಾಗಿ ಕಳ್ಳರನ್ನು ಪತ್ತೆ ಹಚ್ಚಿ ಸೂಕ್ತ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿ ಮುಖಂಡೆ ಧನಶ್ರೀ ಸರ್‍ದೇಸಾಯಿ ಹೌದು ಖಾನಾಪೂರ ತಾಲೂಕಿನಲ್ಲಿ ಕಳೆದ ಆರು ತಿಂಗಳಿನಿಂದ ಕಳ್ಳತನದ ಪ್ರಕರಣಗಳು ಹೆಚ್ಚುಗಿವೆ. ಇದರಲ್ಲಿ ಮನೆಗಳ್ಳತನ ಪ್ರಕರಣಗಳು ಹೆಚ್ಚಾಗಿವೆ. ಇನ್ನು ಅನರಕ್ಷಸ್ಥರ ಜನರು, ರೈತರು ತಮ್ಮ ಮನೆಗಳಲ್ಲಿ ನಡೆದ ಕಳ್ಳತನಕ್ಕೆ ಸಂಬಂಧ ಪ್ರಕರಣಗಳನ್ನು ದಾಖಲಿಸಿಲ್ಲ. ಹೀಗಾಗಿ ತಕ್ಷಣ ಇದರ ಬಗ್ಗೆ ಸೂಕ್ತ ಕ್ರಮ …

Read More »

ಬಾಲಕನ ಕಿಡ್ನ್ಯಾಪ್ ಗೆ ಯತ್ನ

ರಾಜ್ಯದಲ್ಲಿ ಮಕ್ಕಳ ಕಳ್ಳರ ಹಾವಳಿ ಇದೆ ಎಂಬ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿ ಹರದಾಡುತ್ತಿರುವಾಗಲೇ ವಿಜಯಪುರ ನಗರದಲ್ಲಿ ಅಪ್ರಾಪ್ತ ಬಾಲಕನ ಕಿಡ್ಯಾಪ್ ಆಥವಾ ಕಳ್ಳತನ ಯತ್ನಿಸಿರುವ ಘಟನೆ ನಡೆದಿದೆ‌. ಅಂಗಡಿಗೆ ಪೆನ್ ತರಲು ಹೋಗಿದ್ದ ವೇಳೆ ಅಪ್ರಾಪ್ತ ಬಾಲಕನನ್ನು ಬೈಕ್ ನಲ್ಲಿ ಇಬ್ಬರು ಯಾರೋ ಅಪರಿಚಿತರು ಎತ್ತೊಯ್ಯಿದ್ದಿದ್ದಾರೆ‌. ಭಾಸ್ಕರ್ ಶಿರನಾಳ (11) ಅಪಹರಣ ಅಥವಾ ಕಳ್ಳತನ ಮಾಡಲು ಯತ್ನಕ್ಕೋಳಗಾದ ಬಾಲಕನಾಗಿದ್ದು ಈ ಬಾಲಕನನ್ನು ಬೈಕ್ ನಲ್ಲಿ ಕರೆದೊಯ್ಯುವ ವೇಳೆ ಅವರಿಚಿತ ವ್ಯಕ್ತಿಗಳಿಂದ …

Read More »

ಯಡಿಯೂರಪ್ಪಗೆ ಕಂಡಲ್ಲಿ ಕಪ್ಪುಬಾವುಟ ತೋರಿಸಿ: ಕೂಡಲಸಂಗಮಶ್ರೀ ಸೂಚನೆ

ಶಿಗ್ಗಾವಿ (ಹಾವೇರಿ ಜಿಲ್ಲೆ): ‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವ ಮನಸ್ಸಿದೆ. ಆದರೆ ಮಾಜಿ ಮುಖ್ಯಮಂತ್ರಿ, ಶಾಸಕ ಬಿ.ಎಸ್.ಯಡಿಯೂರಪ್ಪ ಮೀಸಲಾತಿ ನೀಡದಂತೆ ಒತ್ತಡ ತರುತ್ತಿದ್ದಾರೆ’ ಎಂದು ಆರೋಪಿಸಿದ ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ, ‘ರಾಜ್ಯದ ಪಂಚಮಸಾಲಿ ಸಮಾಜ ಯಡಿಯೂರಪ್ಪನವರಿಗೆ ಕಪ್ಪು ಬಾವುಟ ತೋರಿಸಬೇಕು’ ಎಂದು ಸೂಚನೆ ನೀಡಿದರು.   2ಎ ಮೀಸಲಾತಿ ನೀಡುವಂತೆ ಆಗ್ರಹಿಸಿ ಮಂಗಳವಾರ ಶಿಗ್ಗಾವಿ ಪಟ್ಟಣದಲ್ಲಿ ಪಾದಯಾತ್ರೆ ನಡೆಸಿ, ಮುಖ್ಯಮಂತ್ರಿ …

Read More »

ಸರ್ಕಾರದ ಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮೆಚ್ಚುಗೆ

ಬೆಂಗಳೂರು: ಪಿಎಸ್‌ಐ ನೇಮಕಾತಿ ಹಗರಣದ ಬಗ್ಗೆ ವಿಧಾನಸಭೆಯಲ್ಲಿ ಗಂಭೀರ ಚರ್ಚೆ ನಡೆದಿದ್ದು, ಸರ್ಕಾರಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಶಹಬ್ಬಾಸ್ ಗಿರಿ ನೀಡಿದ್ದಾರೆ. ಪಿಎಸ್‌ಐ ತನಿಖೆ ಗಂಭೀರತೆ ಪಡೆದುಕೊಂಡಿದೆ. ಈ ಹಿಂದೆ ಇಂತಹ ಪ್ರಕರಣದಲ್ಲಿ ಜಾಮೀನು ಪಡೆದು ಹೊರಗೆ ಬರುತ್ತಿದ್ದರು. ಈ ಕೇಸ್ ನಲ್ಲಿ ಆ ರೀತಿ ಆಗಿಲ್ಲ. ಸರ್ಕಾರ ಬಿಗುವಾಗಿ ತನಿಖೆ ಮಾಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪಿಎಸ್‌ಐ ನೇಮಕಾತಿ ಹಗರಣದ ತನಿಖೆ ಮತ್ತೆ ದಾರಿ ತಪ್ಪುವುದು ಬೇಡ. ಈ …

Read More »

ದೇವೇಗೌಡರನ್ನು ಕಂಡೊಡನೆ ಕಾಲುಮುಟ್ಟಿ ನಮಸ್ಕರಿಸಲು ಮುಂದಾದ ಯಡಿಯೂರಪ್ಪ, ಕೂಡಲೇ ಕೈಹಿಡಿದುಕೊಂಡ ಗೌಡರು

ಬೆಂಗಳೂರು: ಜೆಡಿಎಸ್ ವರಿಷ್ಠರಾದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರನ್ನು ಭೇಟಿಯಾದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆರೋಗ್ಯ ವಿಚಾರಿಸಿದ್ದಾರೆ. ಬೆಂಗಳೂರಿನ ಪದ್ಮನಾಭನಗರದ ದೇವೇಗೌಡರ ನಿವಾಸದಲ್ಲಿ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ ದೇವೇಗೌಡರಿಗೆ ಅನಾರೋಗ್ಯ ಹಿನ್ನೆಲೆಯಲ್ಲಿ ನಿವಾಸಕ್ಕೆ ತೆರಳಿದ ಯಡಿಯೂರಪ್ಪ ಅವರು ದೇವೇಗೌಡರ ಕಾಲುಮಟ್ಟಿ ನಮಸ್ಕರಿಸಲು ಮುಂದಾಗಿದ್ದು, ಈ ವೇಳೆ ದೇವೇಗೌಡರು ತಕ್ಷಣ ಯಡಿಯೂರಪ್ಪನವರ ಕೈ ಹಿಡಿದುಕೊಂಡಿದ್ದಾರೆ.   ದೇವೇಗೌಡರಿಗೆ ಮಂಡಿ ನೋವು ಇದೆ. ನೆನಪಿನ ಶಕ್ತಿ ಚೆನ್ನಾಗಿದೆ. ಒಂದು ತಿಂಗಳ ಹಿಂದೆಯೇ ಅವರನ್ನು …

Read More »

ಡಿಸೆಂಬರ್ ಅಧಿವೇಶನದ ವೇಳೆ ಮಲ್ಟಿ ಸೂಪರ್ ಸ್ಪೇಷಾಲಟಿ ಆಸ್ಪತ್ರೆ ಉದ್ಘಾಟನೆ: ಶಾಸಕ ಅನಿಲ ಬೆನಕೆ

ಬೆಳಗಾವಿ: ಡಿಸೆಂಬರ್ ಚಳಿಗಾಲ ಅಧಿವೇಶನದ ವೇಳೆಯಲ್ಲಿ ಮಲ್ಟಿ ಸೂಪರ್ ಸ್ಪೇಷಾಲಟಿ ಆಸ್ಪತ್ರೆಯ ಎರಡು ಮಹಡಿಗಳನ್ನು ಉದ್ಘಾಟನಾ ಮಾಡಲಿದ್ದೇವೆ ಎಂದು ಶಾಸಕ ಅನಿಲ ಬೆನಕೆ ಅವರು ತಿಳಿಸಿದರು. ಶನಿವಾರ ಭಿಮ್ಸ್ ನಿರ್ದೇಶಕ ಡಾ. ಅಶೋಕ ಕುಮಾರ ಶೆಟ್ಟಿ ಅವರ ಜೊತೆ ಸಭೆ ನಡೆಸಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಡಿಸೆಂಬರ್ ನಲ್ಲಿ ಚಳಿಗಾಲ ಅಧಿವೇಶನ ಬೆಳಗಾವಿಯಲ್ಲಿ ನಡೆಯಲಿದ್ದು, ಆ ವೇಳೆ ಬೆಳಗಾವಿ ನಗರದಲ್ಲಿ ಪ್ರಗತಿ ಹಂತದಲ್ಲಿ ಇರುವ ಮಲ್ಟಿ ಸೂಪರ ಸ್ಪೆಷಾಲಟಿ …

Read More »