Breaking News
Home / ಜಿಲ್ಲೆ (page 42)

ಜಿಲ್ಲೆ

ಎಕ್ಸ್​​​​ಪ್ರೆಸ್ ವೇನಲ್ಲಿ ಅಪಘಾತ ಹೆಚ್ಚಳಕ್ಕೆ ಅತಿವೇಗವೇ ಕಾರಣ: ಜಾರಕಿಹೊಳಿ

ಬೆಂಗಳೂರು: ಬೆಂಗಳೂರು – ಮೈಸೂರು ಎಕ್ಸ್ ಪ್ರೆಸ್ ವೇ ದಲ್ಲಿ ಅಪಘಾತ ಹೆಚ್ಚಳ ಸೇರಿದಂತೆ ಇರುವ ನ್ಯೂನತೆ ಕುರಿತು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರ ಗಮನಕ್ಕೆ ತಂದಿದ್ದು, ಸುರಕ್ಷಿತ ಪ್ರಯಾಣ ಮತ್ತು ನ್ಯೂನತೆ ಸರಿಪಡಿಸಲು ಎಲ್ಲ ರೀತಿಯ ಪ್ರಯತ್ನ ನಡೆಸಲಾಗುತ್ತದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಭರವಸೆ ನೀಡಿದರು.   ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಜೆಡಿಎಸ್ ಸದಸ್ಯ ಮರಿತಿಬ್ಬೇಗೌಡ ಪ್ರಶ್ನೆಗೆ ಉತ್ತರಿಸಿದ ಸಚಿವರು, ಎಕ್ಸ್‌ಪ್ರೆಸ್‌ ವೇ …

Read More »

ಮಲೆನಾಡ ಹೆಬ್ಬಾಗಿಲು ಶಿವಮೊಗ್ಗ ಜಿಲ್ಲೆಯಲ್ಲಿ ವರ್ಷಧಾರೆ ಚುರುಕು: ತುಂಬಿದ ತುಂಗಾ ಡ್ಯಾಂ

ಶಿವಮೊಗ್ಗ: ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಮಳೆ ಪ್ರಾರಂಭವಾಗಿದೆ. ಕಳೆದ ಎರಡು ದಿನಗಳಿಂದ ಉತ್ತಮ ಮಳೆಯಾಗುತ್ತದೆ. ವರುಣನ ಆಗಮನದಿಂದ ರೈತರ ಮುಖದಲ್ಲಿ ಮಂದಹಾಸ ಮೂಡಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 199.90 ಮಿಮೀ ಮಳೆ ಸುರಿದಿದೆ. ಸರಾಸರಿ 28.56 ಮಿಮೀ ಮಳೆ ದಾಖಲಾಗಿದೆ. ಜುಲೈ ತಿಂಗಳ ಸಾಮಾನ್ಯ ವಾಡಿಕೆ ಮಳೆಯ ಸರಾಸರಿ ಪ್ರಮಾಣ 687.87 ಮಿಮೀ ಇದ್ದು, ಈವರೆಗೆ ಸರಾಸರಿ 73.13 ಮಿಮೀ ಮಳೆ ಮಾತ್ರ ದಾಖಲಾಗಿದೆ. …

Read More »

ಕೇಂದ್ರ ಸರ್ಕಾರ ರಾಜ್ಯಕ್ಕೆ ತಾರತಮ್ಯ ಮಾಡುತ್ತಿದೆ: ಯುವ ಕಾಂಗ್ರೆಸ್ ಕಾರ್ಯಕರ್ತರು

ಬೆಳಗಾವಿ : ಅಕ್ಕಿ ವಿತರಣೆಯಲ್ಲಿ ಕೇಂದ್ರ ಸರ್ಕಾರ ರಾಜ್ಯಕ್ಕೆ ತಾರತಮ್ಯ ಮಾಡುತ್ತಿದೆ ಎಂದು ಆರೋಪಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಬೆಳಗಾವಿಯ ಚನ್ನಮ್ಮ ವೃತ್ತದಲ್ಲಿ ಇಂದು ಧರಣಿ ನಡೆಸಿದರು. ಕಾಂಗ್ರೆಸ್ ಯುವ ಘಟಕದ ಜಿಲ್ಲಾಧ್ಯಕ್ಷ ಕಾರ್ತಿಕ ಪಾಟೀಲ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಅನ್ನಭಾಗ್ಯಕ್ಕೆ ಕನ್ನ ಹಾಕಿರುವ ಬಿಜೆಪಿಗೆ ಧಿಕ್ಕಾರ, ಮೋದಿ ಹಟಾವ್ ದೇಶ ಬಚಾವ್, ಬೇಕೆ ಬೇಕು ಅಕ್ಕಿ ಬೇಕು ಎಂದು ಘೋಷಣೆ ಕೂಗಿದ ಕೈ ಕಾರ್ಯಕರ್ತರು ಕಾಡಾ ಕಚೇರಿ ಬಳಿಯ ಸಂಸದೆ …

Read More »

ಫಸಲ್ ಬಿಮಾ ಯೋಜನೆಯಲ್ಲಿ ಕಾನೂನು ಬಾಹಿರ ಚಟುವಟಿಕೆ ಶಂಕೆ .. ರೈತರ ಲಕ್ಷಾಂತರ ರೂ.ದುರ್ಬಳಕೆ ಆರೋಪ

ರಾಯಚೂರು : ರೈತರ ಅನುಕೂಲಕ್ಕೆ ಕೇಂದ್ರ ಸರ್ಕಾರ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ಜಾರಿ ಮಾಡಿದೆ. ಈ ಯೋಜನೆಯಡಿ ಅರ್ಹ ಫಲಾನುಭವಿಗಳು ಮಾತ್ರ ಲಾಭ ಪಡೆದುಕೊಳ್ಳಬೇಕು. ಆದರೆ, ರೈತರಿಗೆ ಯಾವುದೇ ಮಾಹಿತಿ ನೀಡದೇ ಅವರ ಹೆಸರನ್ನು ಬಳಸಿಕೊಂಡು ಲಕ್ಷಾಂತರ ರೂಪಾಯಿ ಹಣ ಬೇರೆಯವರ ಖಾತೆಗೆ ಜಮಾ ಆಗಿದೆ ಎಂಬ ಆರೋಪ ಕೇಳಿ ಬಂದಿದೆ. ಜಿಲ್ಲೆಯ ಸಿರವಾರ ತಾಲೂಕಿನ ಸಣ್ಣಹೊಸೂರು, ಮಾಡಗಿರಿ, ಹರವಿ ಸೇರಿದಂತೆ ಇನ್ನಿತರ ಗ್ರಾಮಗಳಲ್ಲಿ ಮಾಹಿತಿ ನೀಡದೆ 40ಕ್ಕೂ ಹೆಚ್ಚು …

Read More »

ಖಾನಾಪುರ ಕ್ರಾಸ್ ಆಕ್ರಮ ಬಳಿ ಇಸ್ಪೀಟ್ ಅಡ್ಡೆಯ ಮೇಲೆ ಪೊಲೀಸರ ದಾಳಿ

ಧಾರವಾಡ: ಗರಗ ಪೊಲೀಸ್ ಠಾಣೆಗೆ ಒಳಪಡುವಂತಹ ಖಾನಾಪುರ ಕ್ರಾಸ್ ಬಳಿ ಆಕ್ರಮವಾಗಿ ಇಸ್ಪೀಟ್ ಅಡ್ಡೆ ನಡೆಸುತ್ತಿದ ವೇಳೆಯಲ್ಲಿ ಗರಗ ಠಾಣೆ ಪೊಲೀಸ್ ಕಚ್ಚಿತ ಮಾಹಿತಿ ಪ್ರಕಾರ ದಾಳಿಯನ್ನು ಮಾಡಿ 8 ಜನರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಸದ್ಯ 8 ಆರೋಪಿಗಳಿಂದ ನಗದು, ಹಾಗೂ ಇಸ್ಪೀಟ್ ಆಡಲು ಬಳಸುತ್ತಿದ್ದ ಎಲೆಗಳನ್ನು ವಶಕ್ಕೆ ಪಡೆದುಕೊಂಡು, ಹಾಗೂ ಸದ್ಯ 8 ಜನರ ಆರೋಪಿಗಳ ಮೇಲೆ ಗರಗ ಪೊಲೀಸ ಠಾಣೆಯಲ್ಲಿ ಪ್ರಕರಣವನ್ನು ದಾಖಲೆ ಮಾಡಿ ಮುಂದಿನ ಕಾನೂನು …

Read More »

ಶಿರಹಟ್ಟಿ ಕೆ ಡಿ ಗ್ರಾಮದ ವ್ಯಕ್ತಿ ಶವವಾಗಿ ಪತ್ತೆ

, ಚಿಕ್ಕೋಡಿ: ಅನುಮಾನಾಸ್ಪದ ಸಾವು.!ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಶಿರಹಟ್ಟಿ ಕೆ.ಡಿ. ಗ್ರಾಮದ ಭೀಮಣ್ಣ ಕಲ್ಲಪ್ಪ ಮುನ್ನೋಳಿ ಎಂಬ ವ್ಯಕ್ತಿ ನಿನ್ನೆ ರಾತ್ರಿ ಚಿಕ್ಕೋಡಿ ತಾಲೂಕಿನ ಕಬ್ಬೂರು ಪಟ್ಟಣದ ಬಾಗೇವಾಡಿ ರಸ್ತೆ ಪಕ್ಕ ಅನುಮಾನಾಸ್ಪದ ಶವವಾಗಿ ಪತ್ತೆಯಾಗಿದ್ದಾನೆ, ಮೇಲ್ನೋಟಕ್ಕೆ ಹತ್ಯೆ ಶಂಕೆ ಇರಬಹುದೆಂದು ಊಹಿಸಬಹುದಾಗಿದೆ. ಮೂಲತಃ ಹುಕ್ಕೆರಿ ತಾಲೂಕಿನ ಶಿರಹಟ್ಟಿ ಕೆಡಿ ಗ್ರಾಮದ ಭಿಮಣ್ಣ ಮುನ್ನೋಳಿ ಚಿಕ್ಕೋಡಿ ತಾಲೂಕಿನ ಕಬ್ಬೂರ ಬಾಗೆವಾಡಿ ರಸ್ತೆ ಕಾಲುವೆ ಮೇಲೆ ಶವವಗಾಗಿ ಪತ್ತೆಯಾಗಿದ್ದು, ಸ್ಥಳಕ್ಕೆ …

Read More »

ಇಂಧನ ಇಲಾಖೆಯಲ್ಲಿ ವರ್ಗಾವಣೆ ದಂಧೆ: ₹10 ಕೋಟಿಗೆ ಹುದ್ದೆ:H.D.K.

ಬೆಂಗಳೂರು: ಇಂಧನ ಇಲಾಖೆಯಲ್ಲಿ ಹುದ್ದೆಗೆ ತಲಾ 10 ಕೋಟಿ ರೂಪಾಯಿ ಫಿಕ್ಸ್ ಮಾಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಕಾಂಗ್ರೆಸ್ ಸರ್ಕಾರದ ಮೇಲೆ ನೇರ ಆರೋಪ ಮಾಡಿದರು. ಈ ಸರಕಾರ ಭ್ರಷ್ಟಾಚಾರ, ವರ್ಗಾವಣೆ ದಂಧೆಯಲ್ಲಿ ಪೂರ್ಣವಾಗಿ ನಿರತವಾಗಿದೆ ಎಂದು ನೇರ ಆರೋಪ ಮಾಡಿದ ಅವರು, ಈ ಸರ್ಕಾರ ಸಂಪೂರ್ಣವಾಗಿ ಕಾಸಿಗಾಗಿ ಹುದ್ದೆ ದಂಧೆಯಲ್ಲಿ ತೊಡಗಿದೆ ಎಂದು ಹೇಳಿ ತಮ್ಮ ಬಳಿ ಮಹತ್ವದ ದಾಖಲೆ ಇದೆ ಎಂದು ಒಂದು …

Read More »

ಇಂದೇ ಪ್ರತಿಪಕ್ಷ ನಾಯಕರ ಹೆಸರು ಪ್ರಕಟ?:BSY

ಬೆಂಗಳೂರು: ಉಭಯ ಸದನಗಳ ಪ್ರತಿಪಕ್ಷ ನಾಯಕರು ಮತ್ತು ನೂತನ ರಾಜ್ಯಾಧ್ಯಕ್ಷರ ನೇಮಕ ಕುರಿತು ಕೇಂದ್ರದಿಂದ ಆಗಮಿಸಿದ್ದ ವೀಕ್ಷಕರು ಅಭಿಪ್ರಾಯ ಸಂಗ್ರಹಿಸಿ ವಾಪಸಾಗಿದ್ದು ಇಂದೇ ಹೈಕಮಾಂಡ್ ಹೆಸರುಗಳನ್ನು ಪ್ರಕಟಿಸುವ ಸಾಧ್ಯತೆ ಇದೆ. ಹೈಕಮಾಂಡ್ ಕೈಗೊಳ್ಳುವ ನಿರ್ಧಾರಕ್ಕೆ ನಾವೆಲ್ಲಾ ಬದ್ಧರಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಡಾಲರ್ಸ್ ಕಾಲೋನಿಯ ತಮ್ಮ ನಿವಾಸ ಧವಳಗಿರಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರತಿಪಕ್ಷ ನಾಯಕ, ರಾಜ್ಯಾಧ್ಯಕ್ಷ ಯಾರಾಗಬೇಕು …

Read More »

ರಾಣಿ ಚನ್ನಮ್ಮ ವಿಶ್ವವಿದ್ಯಾಲಯಕ್ಕೆ ಪ್ರಭಾರಿ ಕುಲಪತಿ ನೇಮಕ

ಬೆಳಗಾವಿ :ಇಲ್ಲಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಪ್ರಭಾರಿ ಕುಲಪತಿಯನ್ನಾಗಿ ಪ್ರೊ.ವಿಜಯ ಎಫ್. ನಾಗಣ್ಣವರನ್ನು ಅವರನ್ನು ನೇಮಕ ಮಾಡಲಾಗಿದೆ. ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್ ಈ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.ಅವರು ಇದುವರೆಗೆ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಇಂಗ್ಲಿಷ್ ವಿಭಾಗದ ಪ್ರಾಧ್ಯಾಪಕ ಹಾಗೂ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಕುಲಪತಿಯಾಗಿದ್ದ ಎಂ.ರಾಮಚಂದ್ರಗೌಡ ಅವರ ನಿವೃತ್ತಿಯಿಂದ ಇದೀಗ ನಾಗಣ್ಣವರನ್ನು ನೇಮಕ ಮಾಡಲಾಗಿದೆ.

Read More »

ಅಕ್ಕತಂಗೇರಹಾಳದಲ್ಲಿ ಮಂಗಳವಾರ ಜೋಡಿ ಕೊಲೆ

ಬೆಳಗಾವಿ :ಅಂಕಲಗಿ ಪೊಲೀಸ್ ಠಾಣಾ ವ್ಯಾಪ್ತಿಯ ಅಕ್ಕತಂಗೇರಹಾಳದಲ್ಲಿ ಮಂಗಳವಾರ ಜೋಡಿ ಕೊಲೆ ನಡೆದಿದೆ. ಅಕ್ಕತಂಗೇರಹಾಳ ಗ್ರಾಮದ ಮಲ್ಲಿಕಾರ್ಜುನ ಜಗದಾರ(40) ಹಾಗೂ ರೇಣುಕಾ ಮಾಳಗಿ (42) ಹತ್ಯೆಗೀಡಾದವರು. ಕೊಲೆಗೈದ ವ್ಯಕ್ತಿ ಯಲ್ಲಪ್ಪ ಮಾಳಗಿ(45) ಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೊಲೆಗೆ ಅನೈತಿಕ ಸಂಬಂಧದ ಶಂಕೆ ವ್ಯಕ್ತವಾಗಿದೆ. ಅಕ್ರಮ ಸಂಬಂಧ ಶಂಕಿಸಿ ಪತಿ ಯಲ್ಲಪ್ಪ ಮನೆಯಲ್ಲಿದ್ದ ರೇಣುಕಾಳನ್ನು ಕೊಲೆ ಮಾಡಿದ್ದಾನೆ. ನಂತರ ಅಲ್ಲಿಂದ ಮಲ್ಲಿಕಾರ್ಜುನ ಮನೆಗೆ ಹೋಗಿದ್ದಾನೆ. ಮಧ್ಯಾಹ್ನ 1 ಗಂಟೆ ಸುಮಾರಿಗೆ …

Read More »