ಬಳ್ಳಾರಿ/ಬೆಂಗಳೂರು: ಬಳ್ಳಾರಿಯ ವಿಮ್ಸ್ ಆಸ್ಪತ್ರೆಯ ಐಸಿಯುನಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದರಿಂದ ಸಾವನ್ನಪ್ಪಿರುವ ಮೂವರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ಸರ್ಕಾರ ಹಾಗೂ ಉನ್ನತ ಶಿಕ್ಷಣ ಇಲಾಖೆಯ ವತಿಯಿಂದ ಕೆ.ಆರ್.ವೃತ್ತದ ಯುವಿಸಿಇಯಲ್ಲಿ ಆಯೋಜಿಸಿದ್ದ ವಿಶ್ವೇಶ್ವರಯ್ಯ ಇಂಜಿಯರಿಂಗ್ ಕಾಲೇಜು ವಿಶ್ವವಿದ್ಯಾಲಯದ ಲೋಕಾರ್ಪಣೆ ಹಾಗೂ ಭಾರತರತ್ನ ಸರ್.ಎಂ.ವಿಶ್ವೇಶ್ವರಯ್ಯ ಅವರ 162ನೇ ಜನ್ಮ ದಿನೋತ್ಸವದ ನಿಮಿತ್ತ ನಡೆದ ಅಭಿಯಂತರರ ದಿನಾಚರಣೆಯನ್ನು ಸಿಎಂ ಬೊಮ್ಮಾಯಿ ಉದ್ಘಾಟಿಸಿದರು. …
Read More »ದೇಶದ ಆಂತರಿಕ ಭದ್ರತೆಗೆ ಧಕ್ಕೆ ತರುವ ಕೃತ್ಯ: ಐವರು ಆರೋಪಿಗಳ ಬಂಧನ
ಬೆಂಗಳೂರು: ಅಂತರರಾಷ್ಟ್ರೀಯ ಮೊಬೈಲ್ ಕರೆಗಳನ್ನು ಸ್ಥಳೀಯ ಕರೆಗಳನ್ನಾಗಿ ಪರಿವರ್ತಿಸಿ ವಂಚಿಸುತ್ತಿದ್ದ ಕೇರಳದ ಐವರು ಆರೋಪಿಗಳನ್ನು ನಗರದ ಸಿಸಿಬಿ ಹಾಗೂ ಆರ್ಥಿಕ ಅಪರಾಧ ದಳದ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ, ಬುಧವಾರ ಬಂಧಿಸಿದ್ದಾರೆ. ಕೇರಳದ ದಿನೇಶ್ ಪಾವೂರ್, ಕೆ.ಪಿ.ವಿಪಿನ್, ಸುಭಾಷ್, ಬೆಜಿನ್ ಜೋಸೆಫ್, ಷಮದ್ ಷಹಜನ್ ಬಂಧಿತರು. ಕೇಂದ್ರ ಸರ್ಕಾರದ ದೂರ ಸಂಪರ್ಕ ಇಲಾಖೆಯ ಮಾಹಿತಿ ಆಧರಿಸಿ ನಗರದ ಕೋರಮಂಗಲ, ಮೈಕೋ ಲೇಔಟ್ ಹಾಗೂ ರಾಜಾಜಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಿ …
Read More »ಅಭಯ್ ಪಾಟೀಲ್ ಸುಳ್ಳು ಕೇಸ್‍ನಲ್ಲಿ ನನ್ನ ಸಿಲುಕಿಸಲು ಪ್ರಯತ್ನಿಸುತ್ತಿದ್ದಾರೆ: ಸುಜೀತ್ ಮುಳಗುಂದ ಆರೋಪ
ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಖೊಟ್ಟಿ ಪ್ರಕರಣದಲ್ಲಿ ನನ್ನನ್ನು ಸಿಲುಕಿಸುವ ಪ್ರಯತ್ನ ನಡೆಸಿದ್ದಾರೆ. ಹೀಗಾಗಿ ನನಗೆ ಸೂಕ್ತ ರಕ್ಷಣೆ ನೀಡುವಂತೆ ಸಾಮಾಜಿಕ ಕಾರ್ಯಕರ್ತ ಸುಜೀತ್ ಮುಳಗುಂದ ನಗರ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದ್ದಾರೆ. ಹೌದು 2012ರಲ್ಲಿ ಶಾಸಕ ಅಭಯ್ ಪಾಟೀಲ್ ವಿರುದ್ಧ ಕಾನೂನು ಬಾಹಿರವಾಗಿ ಆಸ್ತಿ ಗಳಿಸಿದ ಕುರಿತು ಲೋಕಾಯುಕ್ತ ನ್ಯಾಯಾಲಯದಲ್ಲಿ ಸಾಮಾಜಿಕ ಕಾರ್ಯಕರ್ತ ಸುಜೀತ್ ಮುಳಗುಂದ ದೂರು ನೀಡಿದ್ದಾರೆ. ಇದರಿಂದ ಶಾಸಕ ಅಭಯ್ ಪಾಟೀಲ್ ಸುಮಾರು ಬಾರಿ …
Read More »ಬೆಳಗಾವಿಯಲ್ಲಿ ಬಿತ್ತು ಮತ್ತೊಂದು ಮರ: ಹಲವು ವಾಹನಗಳು ಜಖಂ
ಬೆಳಗಾವಿಯ ಆರ್‍ಟಿಓ ಸರ್ಕಲ್ ಬಳಿ ಮರ ಬಿದ್ದು ಯುವಕನ ಬಲಿ ಪಡೆದ ಬೆನ್ನಲ್ಲಿಯೇ ಮತ್ತೊಂದು ಮರ ಬಿದ್ದಿರುವ ಘಟನೆ ನಡೆದಿದೆ. ಈ ವೇಳೆ ಹಲವು ವಾಹನಗಳು ಜಖಂಗೊಂಡಿವೆ. ಬೆಳಗಾವಿಯ ಮಾರ್ಕೆಟ್ ಪೆÇಲೀಸ್ ಠಾಣೆ ಹಾಗೂ ಅರಣ್ಯ ಇಲಾಖೆ ಕಚೇರಿ ಬಳಿಯೇ ಬೃಹದಾಕಾರದ ಮರ ಉರುಳಿ ಇನ್ನೊವಾ ವಾಹನ ಸೇರಿದಂತೆ ಇತರ ವಾಹನಗಳು ಜಖಂಗೊಂಡಿವೆ. ಎರಡು ರಿಕ್ಷಾ ಹಾಗೂ ಒಂದು ಇನ್ನೊವಾ ವಾಹನ ಮರದ ಬುಡದಲ್ಲಿ ಸಿಲುಕಿವೆ. ಈ ಘಟನೆಯಲ್ಲಿ ಯಾವುದೇ …
Read More »ಹಿಡಲಕ ಗ್ರಾಮದಲ್ಲಿ ಅಕ್ರಮ ಬೆಳೆದ ಗಾಂಜಾ ಪೊಲೀಸರ ವಶಕ್ಕೆ
ದಿನಾಂಕ: 15/09/2022 ರಂದು 0715 ಗಂಟೆಗೆ ಹಿಡಕಲ್ ಗ್ರಾಮ ಹದ್ದಿಯ ಜಮೀನ ರಿಸನಂ. 149 ನೇದ್ದರಲ್ಲಿ ಮಾಲಕನು ಅನಧೀಕೃತವಾಗಿ ಗಾಂಜಾ ಎಂಬುವ ಮಾದಕ ಪದಾರ್ಥದ ಗಿಡಗಳನ್ನು ಮಾರಾಟ ಮಾಡುವ ಉದ್ದೇಶದಿಂದ ಬೆಳೆಸಿರುತ್ತಾನೆ ಅಂತಾ ಖಾತ್ರಿದಾಯಕ ಮಾಹಿತಿ ಬಂದಂತೆ, ಮಾನ್ಯ ಶ್ರೀ ಶ್ರೀಪಾದ ಜಲ್ಲೆ, ಪೊಲೀಸ್ ಉಪಾಧೀಕ್ಷಕರು ಅಥಣಿ ಉಪ-ವಿಭಾಗ, ಮಾನ್ಯ ಶ್ರೀ ಕೆ. ಎಸ್. ಹಟ್ಟಿ, ಸಿಪಿಐ ಹಾರೂಗೇರಿ ವೃತ್ತ ರವರ ಮಾರ್ಗದರ್ಶನದಲ್ಲಿ ರಾಘವೇಂದ್ರ ಖೋತ, ಪಿಎಸ್‌ಐ(ಕಾ&ಸು) ಹಾರೂಗೇರಿ ಪೊಲೀಸ್ …
Read More »ಕೇಂದ್ರೀಯ ಸಂಸದೀಯ ಸದಸ್ಯ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ಕೊಡಬೇಕು: ಯತ್ನಾಳ
ಬೆಂಗಳೂರು: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಕುಟುಂಬದ ವಿರುದ್ಧ ಭ್ರಷ್ಟಾಚಾರ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ʻಕೇಂದ್ರೀಯ ಸಂಸದೀಯ ಸದಸ್ಯ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ನೀಡಬೇಕುʼ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಗ್ರಹಿಸಿದ್ದಾರೆ. ಇಂದು ವಿಧಾನಸೌಧದಲ್ಲಿ ಮಾತನಾಡಿದ ಅವರು, ‘ಮಾಜಿ ಸಿಎಂ ಬಿಎಸ್ ವೈ ವಿರುದ್ಧ ಎಫ್‌ಐಆರ್ ಗೆ ಕೋರ್ಟ್ ಆದೇಶ ನೀಡಿದ ವಿಚಾರವಾಗಿ ಪ್ರತಿಕ್ರಿಯಿಸಿದ್ದಾರೆ. ಎಲ್ ಕೆ ಆಡ್ವಾಣಿ, ವಾಜಪೇಯಿಗಿಂತ ಡೊಡ್ಡವ್ರಾ ಅವರು? ಎಲ್ ಕೆ …
Read More »ಗೋಕಾಕ ನಲ್ಲಿ ರೇಬಿಸ್ ದಿನ ಆಚರಣೆ
ಗೋಕಾಕ : ಗೋಕಾಕ ತಾಲೂಕಿನಲ್ಲಿ ವಿಶ್ವ ರೇಬೀಸ್ ದಿನಾಚರಣೆ ಅಂಗವಾಗಿ ಮಿಷನ್ ರೇಬೀಸ್ ಕಾರ್ಯಕ್ರಮವನ್ನು ದಿನಾಂಕ:-15-09-2022 ರಂದು ಪಶು ಆಸ್ಪತ್ರೆ ಗೋಕಾಕನಲ್ಲಿ ಉಚಿತವಾಗಿ ಶ್ವಾನಗಳಿಗೆ ರೇಬೀಸ್ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ನಗರ ಸಭೆ ಅಧ್ಯಕ್ಷರಾದ ಶ್ರೀ ಜಯಾನಂದ ಹುಣಶ್ಯಾಳಿ ಇವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಹಾಯಕ ನಿರ್ದೇಶಕರಾದ ಡಾ:ಮೋಹನ.ವಿ.ಕಮತ ರವರು ಕಾರ್ಯಕ್ರಮದ ಕುರಿತು ಮಾತನಾಡಿ ರೇಬೀಸ್ ರೋಗ ಪ್ರಾಣಿಜನ್ಯ ರೋಗವಾಗಿದ್ದು ಜಾನುವಾರುಗಳಿಂದ ಜಾನುವಾರುಗಳಿಗೆ, ಜಾನುವಾರುಗಳಿಂದ ಮಾನವರಿಗೆ ಹರಡುವ ರೋಗವಾಗಿದ್ದು, …
Read More »ಇದೇ ಅಧಿವೇಶನದಲ್ಲೇ ದಾಖಲೆ ಬಹಿರಂಗ : ‘ಒತ್ತುವರಿ ಬಾಂಬ್’ ಸಿಡಿಸಿದ ಸಚಿವ ಅಶೋಕ್
ಬೆಂಗಳೂರು,ಸೆ.15-ರಾಜಧಾನಿ ಬೆಂಗಳೂರಿನಲ್ಲಿ ಕಾನೂನು ಬಾಹಿರವಾಗಿ ಯಾರ್ಯಾರು ಕೆರೆಗಳನ್ನು ಒತ್ತುವರಿ ಮಾಡಿಕೊಂಡಿದ್ದಾರೆ ಎಂಬುದರ ಬಗ್ಗೆ ಇದೇ ಅಧಿವೇಶನದಲ್ಲೇ ದಾಖಲೆಗಳನ್ನು ಬಿಡುಗಡೆ ಮಾಡುತ್ತೇನೆ ಎಂದು ಕಂದಾಯ ಸಚಿವ ಆರ್.ಅಶೋಕ್ ಬಾಂಬ್ ಸಿಡಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಪ್ಪು ಮಾಡಿದ್ದಾರೆಯೇ , ಇಲ್ಲ ನಾನು ತಪ್ಪು ಮಾಡಿದ್ದೇನೆಯೇ ಅಥವಾ ನಮ್ಮ ಸಂಪುಟ ಸಹೋದ್ಯೋಗಿಗಳು ಮಾಡಿದ್ದಾರೆಯೇ ಎಂಬುದರ ಕುರಿತು ಯಾರ್ಯಾರು ಕೆರೆಗಳನ್ನು ನುಂಗಿ ನೀರು ಕುಡಿದಿದ್ದಾರೋ ಅವರೆಲ್ಲರ ದಾಖಲೆಗಳನ್ನು ಬಿಡುಗಡೆ ಮಾಡುತ್ತೇನೆ ಎಂದರು. ಸುದ್ದಿಗಾರರೊಂದಿಗೆ …
Read More »ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದೆ. ದಸರಾ, ಉದ್ಘಾಟನೆಗೆ ರಾಷ್ಟ್ರಪತಿ, ಮೆರವಣಿಗೆಗೆ ಮೋದಿ
ಮೈಸೂರು: ಈ ಬಾರಿಯ ನಾಡಹಬ್ಬ ದಸರಾ (Mysuru Dasara) ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದೆ. ದಸರಾ ಇತಿಹಾಸದಲ್ಲೇ ಈ ಬಾರಿಯ ದಸರಾ ಅತ್ಯಂತ ಮಹತ್ವದ್ದಾಗಲಿದೆ. ದಸರಾ ಇತಿಹಾಸ ಪುಟಗಳಲ್ಲಿ ಈ ಬಾರಿಯ ದಸರಾ ಪ್ರಮುಖ ಸ್ಥಾನ ಪಡೆಯಲಿದೆ. ಹೌದು, ನಾಡಹಬ್ಬ ದಸರಾ ಸೆಪ್ಟೆಂಬರ್ 26 ರಿಂದ ಆರಂಭವಾಗಲಿದೆ. ದಸರಾ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಷ್ಟ್ರಪತಿಗಳು (Draupadi Murmu) ದಸರಾ ಉದ್ಘಾಟಿಸಲಿದ್ದಾರೆ. ಇಷ್ಟು ವರ್ಷ ನಾಡಿನ ಹಿರಿಯ ಸಾಹಿತಿಗಳು, ಸ್ವಾಮೀಜಿಗಳು, ವಿಚಾರವಾದಿಗಳು, ನಾಡು …
Read More »B.I.M.S. ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನ ಆಚರಣೆ
ಇಂದು ಸೆಪ್ಟೆಂಬರ್ 15 ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನ ಹಿನ್ನೆಲೆ ಬೆಳಗಾವಿಯಲ್ಲಿ ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನವನ್ನು ಆಚರಿಸಲಾಯಿತು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬೆಳಗಾವಿ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಕ್ರಿಯಾತ್ಮಕ ಕೆಲಸಗಳ ಮೂಲಕ ಭರವಸೆಯನ್ನು ಮೂಡಿಸೋಣ ಎಂಬ ಘೋಷ್ಯವಾಕ್ಯದಡಿ ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆಯನ್ನು ಬಿಮ್ಸ ಆಸ್ಪತ್ರೆಯಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ …
Read More »
Laxmi News 24×7