ಬೆಳಗಾವಿ-ಮಹಿಳೆಯರ ಚಿನ್ನಾಭರಣ,ಮನೆ ಮುಂದೆ ಕಟ್ಟಿದ ಎಮ್ಮೆಗಳನ್ನು ದೋಚುತ್ತಿದ್ದ ಖತರ್ನಾಕ್ ಕಳ್ಳರ ಗ್ಯಾಂಗ್ ಹಾರುಗೇರಿ ಠಾಣೆಯ ಪೋಲೀಸರ ಬಲೆಗೆ ಬಿದ್ದಿದೆ. ಹಾರೂಗೇರಿ ಮುಗುಳಖೋಡ,ತೇರದಾಳ ಸೇರಿದಂತೆ ಹಲವಾರು ಪ್ರದೇಶಗಳಲ್ಲಿ ಮಹಿಳೆಯರ ಕೊರಳಲ್ಲಿದ್ದ ಚಿನ್ನಾಭರಣ ಎಮ್ಮೆ ಕಳುವು ಮಾಡಿ ಮಾರಾಟ ಮಾಡುತ್ತಿದ್ದ ಹಲವಾರು ಕಳ್ಳತನದ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಒಟ್ಟು ಐದು ಜನ ಆರೋಪಿಗಳನ್ನು ಹಾರೂಗೇರಿ ಪೋಲೀಸರು ಬಂಧಿಸಿದ್ದಾರೆ. ಕಳವು ಮಾಡಲಾಗಿದ್ದ,49 ಗ್ರಾಂ ಚಿನ್ನಾಭರಣ,ಎರಡು ಎಮ್ಮೆ,ಒಂದು ಗೂಡ್ಸ್ ವಾಹನ ಸೇರಿದಂತೆ ಆರು ಲಕ್ಷಕ್ಕೂ …
Read More »ಸಿದ್ದರಾಮಯ್ಯ ವಿರುದ್ಧ ವಿವಾದಾತ್ಮಕವಾಗಿ ವಾಗ್ದಾಳಿ ನಡೆಸಿದ ಸಿ.ಟಿ.ರವಿ
ಬೆಂಗಳೂರು: ಸಿ.ಟಿ.ರವಿ ಲೂಟಿ ರವಿ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಹೇಳಿಕೆಗೆ ತಿರುಗೇಟು ನೀಡುವ ಬರದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದು, ಕಾಂಗ್ರೆಸ್ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಟಿ.ರವಿ, ಚಿಕ್ಕಮಗಳೂರಿನಲ್ಲಿ ಸಿ.ಟಿ.ರವಿಯನ್ನು ಲೂಟಿ ರವಿ ಎಂದು ಕರೆಯುತ್ತಾರೆ. ಹಾಗಂತ ನಾನು ಹೇಳುತ್ತಿಲ್ಲ. ಜನ ಹೇಳುತ್ತಾರೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿ.ಟಿ.ರವಿ, ಇವರೇನು ಸತ್ಯ ಹರಿಶ್ಚಂದ್ರನ ಮೊಮ್ಮಕ್ಕಳಾ? …
Read More »ಪಶ್ಚಿಮಘಟ್ಟ ಪ್ರದೇಶ ಸೇರಿ ಬೆಳಗಾವಿ ಜಿಲ್ಲೆ ಸೇರಿ ಜಿಲ್ಲಾದ್ಯಂತ 17ಸೇತುವೆಗಳು ಮುಳುಗಡೆ 35 ಅಧಿಕ ಮನೆ ಕುಸಿತ
ಬೆಳಗಾವಿ: ಕಳೆದ ಮೂರು ದಿನಗಳಿಂದ ಗಡಿ ಜಿಲ್ಲೆ ಬೆಳಗಾವಿ ಸೇರಿ ಪಶ್ಚಿಮಘಟ್ಟ ಪ್ರದೇಶದಲ್ಲಿ ನಿರಂತರ ಮಳೆಗೆ ಕುಂದಾನಗರಿ ಜನರ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಪ್ರಾಣಹಾನಿ ಮತ್ತು ಆಸ್ತಿಪಾಸ್ತಿಗಳಿಗೆ ಹಾನಿಯುಂಟಾಗಿದ್ದು, 17ಸೇತುವೆಗಳು ಮುಳುಗಡೆಯಾಗಿದ್ದಲ್ಲದೇ 36 ಮನೆಗಳ ನೆಲಸಮವಾಗಿವೆ. ಪಶ್ಚಿಮಘಟ್ಟ ಪ್ರದೇಶ ಸೇರಿ ಬೆಳಗಾವಿ ಜಿಲ್ಲೆ ಸೇರಿ ಜಿಲ್ಲಾದ್ಯಂತ ಶನಿವಾರ ಸಂಜೆಯಿಂದಲೇ ಸುರಿಯುತ್ತಿರುವ ಮಳೆಗೆ ಘಟಪ್ರಭಾ, ಮಲಪ್ರಭಾ ಹಾಗೂ ಹಿರಣ್ಯಕೇಶಿ ನದಿಗಳಲ್ಲಿ ನೀರಿನ ಒಳಹರಿವು ಹೆಚ್ಚಳವಾಗಿದೆ. ಘಟಪ್ರಬಾ ನದಿಯಲ್ಲಿ ಭಾನುವಾರ ಸಂಜೆಯ ವೇಳೆಗೆ …
Read More »ಇಂದು ಮುರುಘಾ ಶರಣರ ಜಾಮೀನು ಅರ್ಜಿ ವಿಚಾರಣೆ: ಜೈಲಾ ಅಥವಾ ಆಸ್ಪತ್ರೆ ಇಂದು ನಿರ್ಧಾರ!
ಚಿತ್ರದುರ್ಗ: ಪೋಕ್ಸೋ ಕೇಸ್ನಲ್ಲಿ ಮುರುಘಾಶ್ರೀಗಳು ಜೈಲು ಸೇರಿದ್ದು, ಜಿಲ್ಲೆಯ 2ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ನಲ್ಲಿ ಇಂದು ಮುರುಘಾ ಶರಣರ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಆ ಬಳಿಕ ಮುರುಘಾಶ್ರೀಗೆ ಬೇಲಾ, ಜೈಲಾ, ಆಸ್ಪತ್ರೆನಾ? ಇಂದು ನಿರ್ಧಾರವಾಗಲಿದೆ. ಸೆ.14ರವರೆಗೆ ಮುರುಘಾಶ್ರೀ ನ್ಯಾಯಾಂಗ ಬಂಧನದಲ್ಲಿದ್ದಾರೆ. ಕರೊನರಿ ಎಂಜೋಗ್ರಾಮ ಪರೀಕ್ಷೆ, ಚಿಕಿತ್ಸೆ ಬಗ್ಗೆಯೂ ವಿಚಾರಣೆ ನಡೆಯಲಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ಶಿಫ್ಟ್ ಮಾಡಲು ಮುರುಘಾಶ್ರೀ ಪರ ವಕೀಲರು ಮನವಿ ಮಾಡಿದ್ದು, ಸಮೀಪದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು …
Read More »ಬೆಳಗಾವಿ: ಭಾರೀ ಮಳೆಯಿಂದ ಆರು ಸೇತುವೆಗಳು ಜಲಾವೃತ, ಸಂಪರ್ಕ ಕಡಿತ
ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿಯಲ್ಲಿ ಭಾರೀ ಮಳೆ ಮುಂದುವರೆದಿದ್ದು, ಕೃಷ್ಣಾ ನದಿ ಮತ್ತು ಅದರ ಉಪನದಿಗಳ ಮೇಲಿನ ಆರು ಸೇತುವೆಗಳು ಜಲಾವೃತಗೊಂಡಿವೆ. ನೀರಿನ ಒಳಹರಿವು ಹೆಚ್ಚಾದಂತೆ ನದಿ ದಡದಲ್ಲಿರುವ ಗ್ರಾಮಗಳಿಗೆ ಎಚ್ಚರಿಕೆ ನೀಡಲಾಗಿದೆ. ಘಟಪ್ರಭಾ ನದಿಯ ಹಿಡಕಲ್ ಜಲಾಶಯ ಮತ್ತು ಬೆಳಗಾವಿ ಜಿಲ್ಲೆಯ ನವಿಲತೀರ್ಥ ಜಲಾಶಯಗಳು ಬಹುತೇಕ ಪೂರ್ಣ ಸಾಮರ್ಥ್ಯವನ್ನು ತಲುಪಿವೆ. ಭಾನುವಾರ ಸುಮಾರು 20 ಸಾವಿರ ಕ್ಯೂಸೆಕ್ ನೀರನ್ನು ಘಟಪ್ರಭಾ ನದಿಗೆ ಹರಿಯ ಬಿಡಲಾಗಿದೆ. ಮಳೆ ಮುಂದುವರಿದರೆ ನೀರಿನ …
Read More »ಗಣೇಶ ವಿಸರ್ಜನೆಯಲ್ಲಿ ಗಲಾಟೆ- ಯುವಕನ ಕೊಲೆಯಲ್ಲಿ ಅಂತ್ಯ
ಬೆಳಗಾವಿ: ಗಣೇಶ ವಿಸರ್ಜನೆ ವೇಳೆ ಆರಂಭವಾದ ಗಲಾಟೆಯು ಯುವಕನ(Young Man) ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಯರಗಟ್ಟಿ ತಾಲೂಕಿನ ಮುಗಳಿಹಾಳ ಗ್ರಾಮದಲ್ಲಿ ನಡೆದಿದೆ. ಬೆಳಗಾವಿ(Belagavi) ಜಿಲ್ಲೆಯ ಯರಗಟ್ಟಿ ತಾಲೂಕಿನ ಮುಗಳಿಹಾಳ ಗ್ರಾಮದ ನಿವಾಸಿ ಅರ್ಜುನಗೌಡ ಪಾಟೀಲ್ (20) ಕೊಲೆಯಾದ ಯುವಕನಾಗಿದ್ದಾನೆ. ನಿನ್ನೆ ಸಂಜೆ ನಡೆದ ಗಣೇಶ ವಿಸರ್ಜನೆ ವೇಳೆ ಎರಡು ಗುಂಪುಗಳ ನಡುವೆ ಆರಂಭವಾದ ಗಲಾಟೆ ವಿಕೋಪಕ್ಕೆ ತಿರುಗಿದೆ. ಮತ್ತೊಂದು ಗುಂಪಿನ ಯುವಕನೊಬ್ಬ ಅರ್ಜುನಗೌಡನಿಗೆ ಚಾಕು ಇರಿದಿದ್ದಾರೆ. ಈ ವೇಳೆ ಅರ್ಜುನಗೌಡ ಕುಸಿದು …
Read More »ಬೆಳಗಾವಿಯಲ್ಲಿ ಮಹಾಮಳೆಗೆ ಮಹಿಳೆ ಬಲಿ
ಬೆಳಗಾವಿ: ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಧಾರಕಾರ ಮಳೆಗೆ ಮನೆಯ ಗೋಡೆ ಕುಸಿದು ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ಹೂಲಿಕಟ್ಟಿ ಗ್ರಾಮದಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದ ಗಂಗವ್ವ ರಾಮಣ್ಣ ಮೂಲಿಮನಿ (55) ಮೃತ ಮಹಿಳೆ. ಕಳೆದ ಎರಡು ದಿನಗಳಿಂದ ಬೆಳಗಾವಿ ನಗರ ಸೇರಿದಂತೆ ವಿವಿಧ ಕಡೆ ವರುಣನ ಆರ್ಭಟ ಜೋರಾಗಿಯೇ ಇದೆ. ಹೂಲಿಕಟ್ಟಿ ಗ್ರಾಮದಲ್ಲಿಯೂ ಸಹ ಮಳೆ ಸಾಕಷ್ಟು ಹಾನಿ ಮಾಡಿದೆ. ಇಂದು …
Read More »ನಂದಿನಿ” ಹಾಲು ಪ್ರತಿ ಲೀ.ಗೆ 3 ರೂ. ಹೆಚ್ಚಳ…?*
ಬೆಂಗಳೂರು : ಹೈನುಗಾರಿಕೆಗೆ ಹೆಚ್ಚಿನ ಒತ್ತು ನೀಡಲು ರೈತರ ಆರ್ಥಿಕಾಭಿವೃದ್ಧಿಗೆ ಪ್ರತಿ ಲೀಟರ್ ಹಾಲಿಗೆ 3 ರೂ. ಹೆಚ್ಚಳ ಮಾಡಲು ಕೆಎಂಎಫ್ ನಿರ್ಧರಿಸಿದೆ ಎಂದು ತಿಳಿದುಬಂದಿದೆ. ಕಳೆದ ಶುಕ್ರವಾರದಂದು ನಗರದ ಖಾಸಗಿ ಹೊಟೇಲ್‍ನಲ್ಲಿ ಜರುಗಿದ ಕೆಎಂಎಫ್‍ನ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ ಈ ಬಗ್ಗೆ ಸರ್ವಾನುಮತದ ನಿರ್ಣಯ ಕೈಗೊಂಡಿದ್ದು, ಕೆಎಂಎಫ್‍ನ ಎಲ್ಲ 14 ಜಿಲ್ಲಾ ಹಾಲು ಒಕ್ಕೂಟಗಳು ಹಾಲಿನ ದರ ಹೆಚ್ಚಳ ಮಾಡುವುದರ ಬಗ್ಗೆ ಒಲುವು ತೋರಿವೆ ಎಂದು ಹೇಳಲಾಗುತ್ತಿದೆ. …
Read More »ಕೊಚ್ಚಿ ಹೋಗಿದ್ದ ಯುವಕನ ಶವ 3 ದಿನ ಆದ್ಮೇಲೆ ಪತ್ತೆ
ಭಾರಿ ಮಳೆಗೆ ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಗೋಕಾಕ ತಾಲೂಕಿನ ಕೊಳವಿ ಗ್ರಾಮದ ಯುವಕನ ಮೃತದೇಹ ಪತ್ತೆಯಾಗಿದೆ. ಹೌದು ಸೆ.9ರಂದು ಹೊಲಕ್ಕೆ ಹೋಗುವಾಗ ನೀರಿನಲ್ಲಿ ಕೊಳವಿ ಗ್ರಾಮದ ದುಂಡಪ್ಪ ಮಾಲದಿನ್ನಿ(25) ಎಂಬ ಯುವಕ ಕೊಚ್ಚಿಕೊಂಡು ಹೋಗಿದ್ದ. ಬಳಿಕ ಅಗ್ನಿಶಾಮಕ ಸಿಬ್ಬಂದಿಗಳಿಂದ ಸತತವಾಗಿ ಮೂರು ದಿನಗಳ ಕಾರ್ಯಾಚರಣೆ ಬಳಿಕ ಇಂದು ಬೆನಚಿನಮರಡಿ ಕೊಳವಿ ಮಾರ್ಗದ ಮಧ್ಯೆ ಶವ ಪತ್ತೆಯಾಗಿದೆ. ಗೋಕಾಕ ಗ್ರಾಮೀಣ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »ಹಿಡಕಲ್ ಜಲಾಶಯದಿಂದ 20 ಸಾವಿರ ಕ್ಯೂಸೆಕ್ ನೀರು ಹೊರಕ್ಕೆ
ಹುಕ್ಕೇರಿ ತಾಲೂಕಿನ ಹಿಡಕಲ್ ಜಲಾಶಯದಿಂದ 20 ಸಾವಿರ ಕ್ಯೂಸೆಕ್ ನೀರು ಹೊರಕ್ಕೆ ಬಿಡಲಾಗಿದೆ ಎಂದು ತಹಶೀಲ್ದಾರ ಡಾ.ಡಿ.ಎಚ್.ಹೂಗಾರ್ ಅವರು ಮಾಹಿತಿ ನೀಡಿದ್ದಾರೆ. ರವಿವಾರ ದಿನ ಹುಕ್ಕೇರಿ ತಾಲೂಕಿನ ರಾಜಾ ಲಖಮಗೌಡಾ ಜಲಾಶಯದಿಂದ 20 ಸಾವಿರ ಕ್ಯೂಸೆಕ್ ನೀರು ಹೊರ ಬಿಡಲಾಗಿದೆ ಕಾರಣ ಘಟಪ್ರಭಾ ನದಿ ಪಾತ್ರದ ಜನರು ತಮ್ಮ ಜಾನುವಾರುಗಳ ಸಮೇತ ಸುರಕ್ಷಿತ ಸ್ಥಳಕ್ಕೆ ಹೋಗಬೇಕು ಎಂದು ಹುಕ್ಕೇರಿ ತಹಶೀಲ್ದಾರ ಡಾ.ದೊಡ್ಡಪ್ಪಾ ಹೂಗಾರ ಪ್ರಕಟಣೆ ಮೂಲಕ ತಿಳಿಸಿದ್ದಾರೆ. ಈಗಾಗಲೆ ಪ್ರತಿ …
Read More »
Laxmi News 24×7