Breaking News

ಜಿಲ್ಲೆ

ಕರ್ನಾಟಕ ಸಂಪುಟ: ಸಿಎಂ ಬಸವರಾಜ ಬೊಮ್ಮಾಯಿಗೆ 8 ಖಾತೆಗಳ ಜವಾಬ್ದಾರಿ ಒತ್ತಡ!

ಬೆಂಗಳೂರು, ಸೆಪ್ಟೆಂಬರ್, 09: ಸಿಎಂ ಬಸವರಾಜ ಬೊಮ್ಮಾಯಿ ಸಂಪುಟ ಸಂಕಟಕ್ಕೆ ಮುಕ್ತಿ ಯಾವಾಗ ಅನ್ನೋ ಪ್ರಶ್ನೆ ಮೂಡಿದೆ. ಬಸವರಾಜ ಬೊಮ್ಮಾಯಿ ಹೆಗಲ ಮೇಲೆ ಮತ್ತಷ್ಟು ಹೊರೆ ಹೆಚ್ಚಾಗುತ್ತಿದೆ. ಸಚಿವ ಕೆಎಸ್ ಈಶ್ವರಪ್ಪ ರಾಜೀನಾಮೆಯಿಂದ ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ದಿ ಖಾತೆ ಸೇರಿದಂತೆ ಉಮೇಶ್ ಕತ್ತಿ ಸಾವಿನಿಂದ ಅರಣ್ಯ ಖಾತೆಯ ಜವಾಬ್ದಾರಿಯು ಸಿಎಂ ಲಭಿಸಿದೆ.   ಬಸವರಾಜ ಬೊಮ್ಮಾಯಿ ಪ್ರಸ್ತುತ 8 ಪ್ರಮುಖ ಖಾತೆಗಳನ್ನು ನಿರ್ವಹಿಸುತ್ತಿದ್ದಾರೆ. ಹಣಕಾಸು, ಬೆಂಗಳೂರು ನಗರಾಭಿವೃದ್ದಿ, ಗುಪ್ತಚರ, …

Read More »

ಉಮೇಶ್ ಕತ್ತಿ ಜೀವನದ ಕುರಿತು ಪುಸ್ತಕ ಹೊರತರಬೇಕು: ಅರುಣ್ ಸಿಂಗ್

ಬೆಳಗಾವಿ: ಅರಣ್ಯ ಸಚಿವರಾಗಿದ್ದ ಉಮೇಶ್ ಕತ್ತಿ ನಿಧನದ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಸಚಿವರಾದ ಡಾ. ಕೆ. ಸುಧಾಕರ್, ಮುನಿರತ್ನ ಭೈರತಿ ಬಸವರಾಜ ಸೇರಿದಂತೆ ಹಲವು ಗಣ್ಯರು ಬೆಲ್ಲದ ಬಾಗೇವಾಡಿಯ ಅವರ ನಿವಾಸಕ್ಕೆ ಗುರುವಾರ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.   ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದಲ್ಲಿರುವ ನಿವಾಸದಲ್ಲಿ ಉಮೇಶ್ ಕತ್ತಿ ಅವರ ಭಾವಚಿತ್ರಕ್ಕೆ ನಮನ ಸಲ್ಲಿಸಿದ ಗಣ್ಯರು, ಉಮೇಶ್ ಕತ್ತಿ ಅವರ ಪತ್ನಿ …

Read More »

ದೈಹಿಕ ಶಿಕ್ಷಣ ಶಿಕ್ಷಕರ ನೇಮಕಾತಿಗೆ ಆಗ್ರಹ

ಬೆಳಗಾವಿ: ರಾಜ್ಯದ ದೈಹಿಕ ಶಿಕ್ಷಣ ಶಿಕ್ಷಕರ ವೃಂದ ಮತ್ತು ನೇಮಕಾತಿ ನಿಯಮಗಳ ತಿದ್ದುಪಡಿ ಆದೇಶವನ್ನು ಬೇಗನೇ ನೀಡಬೇಕು ಹಾಗೂ ದೈಹಿಕ ಶಿಕ್ಷಣ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಬೇಕು ಎಂಬುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಜಿಲ್ಲಾ ಘಟಕದಿಂದ ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.   ಇಲ್ಲಿನ ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಅವರ ಮೂಲಕ ಮುಖ್ಯಮಂತ್ರಿ ಹಾಗೂ ಶಿಕ್ಷಣ ಸಚಿವರಿಗೆ …

Read More »

‘ಸೈನಿಕರ ಸಾಹಸ ಯುವಕರಿಗೆ ಪ್ರೇರಣೆ’

ಸವದತ್ತಿ: 1965ರ ಸೆಪ್ಟೆಂಬರ್‌ನಲ್ಲಿ ಜಮ್ಮು ಕಾಶ್ಮೀರದಲ್ಲಿ ಪಾಕಿಸ್ತಾನದ ಆಧೀನಕ್ಕೊಳಪಟ್ಟ ಮಹಾರಾಜ ಕೆ ಗ್ರಾಮವನ್ನು ಯುದ್ಧದಿಂದ ಮರಳಿ ಪಡೆಯುವ ಸಂದರ್ಭದಲ್ಲಿ ಕರ್ನಲ್ ಹನಬರಲಾಲ್ ಮೆಹ್ತಾ, ಸುಬೇದಾರ ನಂಬಿಯಾರ್, ಸಿಪಾಯಿ ಕನ್ನನ್, ಸಿ.ಬಿ. ಪಾಟೀಲ ಸೇರಿ ಹುತಾತ್ಮರಾದ ಯೋಧರಿಗೆ ಗುರುವಾರ ನವಿಲುತೀರ್ಥದಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.   ನಾಲ್ಕನೇ ಮದ್ರಾಸ್ ಬಟಾಲಿಯನ್‍ದಲ್ಲಿ ಸೇವೆ ಸಲ್ಲಿಸಿದ 55 ಮಾಜಿ ಸೈನಿಕರು ಯಲ್ಲಮ್ಮ ದೇವಸ್ಥಾನಕ್ಕೆ ತೆರಳಿ ರೇಣುಕಾದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಕಾರ್ಗಿಲ್, ಪಂಜಾಬ ಸುವರ್ಣ ಸೌಧದಲ್ಲಿ …

Read More »

ಪರೀಕ್ಷೆ ಅಕ್ರಮ| ಎಲೆಕ್ಟ್ರಾನಿಕ್ ಉಪಕರಣ ಮಾರುತ್ತಿದ್ದ ಬೆಂಗಳೂರಿನ ಆರೋಪಿ ಬಂಧನ

ಬೆಳಗಾವಿ: ಜಿಲ್ಲೆಯ ಗೋಕಾಕ ನಗರದಲ್ಲಿ ಈಚೆಗೆ ನಡೆದ ಕೆಪಿಟಿಸಿಎಲ್‌ ಕಿರಿಯ ಸಹಾಯಕರ ನೇಮಕಾತಿ ಪರೀಕ್ಷೆಯಲ್ಲಿ, ಎಲೆಕ್ಟ್ರಾನಿಕ್‌ ಡಿವೈಸ್‌ ಹಾಗೂ ಸ್ಮಾರ್ಟ್‌ ವಾಚ್‌ ಪೂರೈಸಿದ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಬೆಳಗಾವಿ ಪೊಲೀಸರು ಯಶಸ್ವಿಯಾಗಿದ್ದಾರೆ. ಈ ಕಾರ್ಯಾಚರಣೆಯ ಮೂಲಕ ರಾಜ್ಯದ ವಿವಿಧ ಪರೀಕ್ಷೆಗಳಲ್ಲೂ ಅಕ್ರಮ ಎಸಗಲು ಅವಕಾಶ ಮಾಡಿಕೊಟ್ಟ ಪ್ರಕರಣಗಳಿಗೂ ಸಾಕ್ಷ್ಯ ಸಿಕ್ಕಂತಾಗಿದೆ. ಬೆಂಗಳೂರಿನ ದೇವಸಂದ್ರದ ನಿವಾಸಿ, ಎಸ್ಪಿ ರಸ್ತೆಯಲ್ಲಿ ‘ಸ್ಪೈ ಜೋನ್‌’ ಎಂಬ ಎಲೆಕ್ಟ್ರಾನಿಕ್‌ ಮಳಿಗೆ ಇಟ್ಟುಕೊಂಡ ಮಹಮ್ಮದ್‌ ಅಜೀಮುದ್ದೀನ್‌ (37) ಬಂಧಿತ …

Read More »

ನೀಟ್‌ನಲ್ಲಿ ದೇಶಕ್ಕೆ 4ನೇ ರ್‍ಯಾಂಕ್‌: ಬೆಳಗಾವಿ ತಾಲ್ಲೂಕಿನ ರುಚಾ ಪಾವಶೆ ಸಾಧನೆ

ಬೆಳಗಾವಿ: ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕೆ ನಡೆದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ(ನೀಟ್‌)ಯಲ್ಲಿ ತಾಲ್ಲೂಕಿನ ಉಚಗಾವಿಯ ರುಚಾ ಪಾವಶೆ ದೇಶಕ್ಕೆ 4ನೇ ಮತ್ತು ರಾಜ್ಯಕ್ಕೆ 2ನೇ ರ್‍ಯಾಂಕ್‌ ಗಳಿಸಿದ್ದಾರೆ. ‘ನಾನು ಅಗ್ರ 10 ಸ್ಥಾನದೊಳಗೆ ರ್‍ಯಾಂಕ್‌ ಗಳಿಸುತ್ತೇನೆಂಬ ವಿಶ್ವಾಸವಿರಲಿಲ್ಲ.   ‘ನಾನು ಅಗ್ರ 10 ಸ್ಥಾನದೊಳಗೆ ರ್‍ಯಾಂಕ್‌ ಗಳಿಸುತ್ತೇನೆಂಬ ವಿಶ್ವಾಸವಿರಲಿಲ್ಲ. ಆದರೆ, ಉತ್ತಮ ರ್‍ಯಾಂಕ್‌ ಸಿಗುವ ನಿರೀಕ್ಷೆಯಿತ್ತು. ಈಗ ನಿರೀಕ್ಷಿಸಿದ್ದಕ್ಕಿಂತ ಅತ್ಯುತ್ತಮ ಫಲಿತಾಂಶ ಬಂದಿರುವುದಕ್ಕೆ ಸಂತಸದೊಂದಿಗೆ ಅಚ್ಚರಿಯೂ ಆಗಿದೆ’ ಎಂದು ರುಚಾ  …

Read More »

ಈ ಗಣೇಶ ಮಂಡಳಿಯ ಒಂದು ತೆಂಗಿನಕಾಯಿ 2.65 ಲಕ್ಷ ರೂ.ಗೆ ಹರಾಜು!

ಬೆಳಗಾವಿ/ಮೂಡಲಗಿ: ಸಾರ್ವಜನಿಕ ಗಣೇಶ ಮಂಡಳಿಯ ಟೆಂಗಿನಕಾಯಿಗಳ ಹರಾಜು ಅಬ್ಬಬ್ಬಾ ಎಂದರೆ 1, 2, 5 ಸಾವಿರ ರೂ. ವರೆಗೆ ಆಗುವುದು ಸಹಜ. ಆದರೆ ಈ ಗಣಪತಿ ಎದುರು ಇಟ್ಟಿರುವ ತೆಂಗಿನಕಾಯಿ ಬರೋಬ್ಬರಿ 2.65 ಲಕ್ಷ ರೂ.ಗೆ ಹರಾಜು ಆಗುವ ಮೂಲಕ ಅಚ್ಚರಿಗೆ ಕಾರಣವಾಗಿದೆ.   ಮೂಡಲಗಿ ಪಟ್ಟಣದ ವಿಜಯ ನಗರದ ಶ್ರೀ ಗಜಾನನ ಯುವಕ ಮಂಡಳಿಯ 7ನೇ ದಿನದ ಗಣಪತಿ ವಿಸರ್ಜನೆ ವೇಳೆ ಹರಾಜು ಪ್ರಕ್ರಿಯೆ ನಡೆಯಿತು. ಗಣಪತಿ ಮೂರ್ತಿ ಎದುರು …

Read More »

ತಾತನನ್ನೇ ಕೊಂದು ತೋಟದಲ್ಲಿ ಹೂತುಹಾಕಿದ್ದ ಮೊಮ್ಮಗ! ತುಮಕೂರಲ್ಲಿ 8 ತಿಂಗಳ ಬಳಿಕ ಭಯಾನಕ ರಹಸ್ಯ ಬಯಲು

ತುಮಕೂರು: ತಾತನನ್ನು ಮೊಮ್ಮಗನೇ ಕೊಲೆ ಮಾಡಿದ ರಹಸ್ಯ 8 ತಿಂಗಳ ಬಳಿಕ ಬಯಲಾಗಿದೆ. ಅದೂ ಸ್ನೇಹಿತರ ನಡುವೆ ಮನಸ್ತಾಪ ಉಂಟಾಗಿದ್ದರಿಂದ… ಇಂತಹ ವಿಚಿತ್ರ ಪ್ರಕರಣ ಗುಬ್ಬಿ ತಾಲೂಕಿನ ನಡೆದಿದೆ. ಕಲ್ಲರ್ದಗೆರೆ ಭೋವಿ ಕಾಲನಿಯ ಗೋವಿಂದಪ್ಪ (75) ಕೊಲೆಯಾಗಿದ್ದು, ಪ್ರಕರಣದ ಬೆನ್ನು ಹತ್ತಿದ ಚೇಳೂರು ಪೊಲೀಸರು ಗೋವಿಂದಪ್ಪನ ಮೊಮ್ಮಗ ಮೋಹನ್​ ಹಾಗೂ ಆತನ ಸ್ನೇಹಿತರಾದ ಪ್ರಜ್ವಲ್​, ಚೇತನ್​ ಎಂಬುವವರನ್ನು ಬಂಧಿಸಿದ್ದಾರೆ.   ಏನಿದು ಪ್ರಕರಣ?: ಗೋವಿಂದಪ್ಪಗೆ ನಾಲ್ಕು ಎಕರೆ ಜಮೀನು ಇತ್ತು. ಇವರಿಗೆ ಒಬ್ಬ …

Read More »

ಗ್ರಾಮೀಣ ಕ್ಷೇತ್ರದಲ್ಲಿ ಈಗಿನಿಂದಲೇ ಡಬ್ಬಿ ಹಂಚುವ ಕೆಲಸ ಶುರುವಾಗಿದೆ. ಆ ಡಬ್ಬಿ ಖಾಲಿ ಇದೆಯೋ..? ತುಂಬಿದೆಯೋ..? ಗೊತ್ತಿಲ್ಲ: ಸಂಜಯ ಪಾಟೀಲ

ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಈಗಿನಿಂದಲೇ ಡಬ್ಬಿ ಹಂಚುವ ಕೆಲಸ ಶುರುವಾಗಿದೆ. ಆ ಡಬ್ಬಿ ಖಾಲಿ ಇದೆಯೋ..? ತುಂಬಿದೆಯೋ..? ಗೊತ್ತಿಲ್ಲ ಎಂದು ಬೆಳಗಾವಿ ಗ್ರಾಮಾಂತರ ಜಿಲ್ಲಾ ಬಿಜೆಪಿ ಅಧ್ಯಕ್ಷ ಸಂಜಯ ಪಾಟೀಲ ಲೇವಡಿ ಮಾಡಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಶಾಸಕ ಸಂಜಯ್ ಪಾಟೀಲ್ ನಾನು ಬಿಜೆಪಿ ಜಿಲ್ಲಾಧ್ಯಕ್ಷನಾಗಿ ಪಕ್ಷದ ಸಂಘಟನೆ ಮಾಡುತ್ತಿದ್ದೇನೆ. ನಾನು 10 ವರ್ಷ ಶಾಸಕನಾಗಿ ಕೆಲಸ ಮಾಡಿದ್ದೇನೆ. ಮುಂದೆಯೂ ಶಾಸಕನಾಗಬೇಕು ಎಂಬ ಆಸೆಯಿದೆ. ಆ ಪ್ರಕಾರ …

Read More »

ಕರ್ನಾಟಕದ ನೀಟ್ ಸಾಧನೆ: ಟಾಪ್ 50 ಪಟ್ಟಿಯಲ್ಲಿ 9 ರ‌್ಯಾಂಕ್; 72000 ವಿದ್ಯಾರ್ಥಿಗಳಿಗೆ ಅರ್ಹತೆ

ಬೆಂಗಳೂರು: ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆಯಲ್ಲಿ (ನೀಟ್) ರಾಜ್ಯದ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮೆರೆದಿದ್ದಾರೆ. ಅಖಿಲ ಭಾರತ ಮಟ್ಟದ ಟಾಪ್ 20ರಲ್ಲಿ 6 ಹಾಗೂ 50ರ ಪಟ್ಟಿಯಲ್ಲಿ ಒಟ್ಟು 9 ಅಭ್ಯರ್ಥಿಗಳು ಸ್ಥಾನ ಪಡೆೆದಿದ್ದಾರೆ. ಇದಲ್ಲದೆ, ವಿವಿಧ ವಿಭಾಗಗಳಲ್ಲಿನ ಟಾಪರ್​ಗಳನ್ನು ಸೇರಿಸಿದಲ್ಲಿ ಸಂಖ್ಯೆ 14ಕ್ಕೆ ಏರಿಕೆಯಾಗುತ್ತದೆ. ಈ ಮೂಲಕ ಹಿಂದಿನ ಎಲ್ಲ ದಾಖಲೆಗಳನ್ನು ಮೀರಿದಂತಾಗಿದೆ. ಅರ್ಹತೆಯಲ್ಲೂ ರೆಕಾರ್ಡ್: ಈ ಬಾರಿ ರಾಜ್ಯದ 1,22,423 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಒಟ್ಟಾರೆ 72,262 ಜನರು …

Read More »