ಗದಗ: ಗಣೇಶ ವಿಸರ್ಜನೆ ವೇಳೆ ಚಾಕು ಇರಿತದಲ್ಲಿ ಯುವಕ ಸಾವನ್ನಪ್ಪಿದ ಘಟನೆ ಗದಗದ ತೋಂಟದಾರ್ಯ ಮಠದ ಬಳಿ ತಡರಾತ್ರಿ ನಡೆದಿದೆ. ಚಾಕು ಇರಿತಕ್ಕೆ ಒಳಗಾದ ಸುದೀಪ್ ಮುಂಡೆವಾಡಿ(22) ಮೃತಪಟ್ಟ ಯುವಕ ಎಂದು ಹೇಳಲಾಗಿದೆ. ಸ್ನೇಹಿತರೇ ಹಲ್ಲೆ ಮಾಡಿ ಚಾಕು ಇರಿದು ಕೊಲೆ ಮಾಡಿರುವ ಆರೋಪ ಕೇಳಿ ಬಂದಿದೆ. ತೀವ್ರ ರಕ್ತಸ್ರಾವದಿಂದ ಸುದೀಪ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಗದಗ ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಗದಗದಲ್ಲಿ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ …
Read More »ಮುರುಘಾ ಮಠದ ಶಿವಮೂರ್ತಿ ಶ್ರಿಗಳಿಗೆ ಆಂಜಿಯೋಪ್ಲಾಸ್ಟಿ: ವರದಿ ಕೇಳಿದ ನ್ಯಾಯಾಧೀಶರು!
ಚಿತ್ರದುರ್ಗ: ಮುರುಘಾ ಮಠದ ಪೀಠಾಧಿಪತಿ ಡಾ.ಶಿವಮೂರ್ತಿ ಮುರುಘಾ ಶರಣರಿಗೆ ಹೃದಯ ಚಿಕಿತ್ಸೆ ಅಗತ್ಯವಿದೆ ಎಂಬ ಅರ್ಜಿಗೆ ಸ್ಪಂದಿಸಿರುವ ಎರಡನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶೆ ಬಿ.ಕೆ.ಕೋಮಲಾ, ಶ್ರೀಗಳನ್ನು ಅತ್ಯುತ್ತಮ ಆಸ್ಪತ್ರೆಗೆ ಸ್ಥಳಾಂತರಿಸುವ ಮುನ್ನ ಸಮೀಪದ ಸರ್ಕಾರಿ ಆಸ್ಪತ್ರೆಗಳಲ್ಲಿ ಲಭ್ಯವಿರುವ ಉತ್ತಮ ಚಿಕಿತ್ಸೆ ಕುರಿತು ವರದಿ ಪಡೆಯುವಂತೆ ಜೈಲು ಅಧೀಕ್ಷಕರಿಗೆ ಬುಧವಾರ ಸೂಚಿಸಿದರು. ಶ್ರೀಗಳ ಪರ ವಕೀಲರು ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ನ್ಯಾಯಾಧೀಶರು, ರೋಗಿಯ ಪ್ರಾಥಮಿಕ ತಪಾಸಣೆಯನ್ನು ಹತ್ತಿರದ ಸರ್ಕಾರಿ ಆಸ್ಪತ್ರೆಯಲ್ಲಿ …
Read More »ನೀಟ್: ರಾಜ್ಯದ 72,262 ವಿದ್ಯಾರ್ಥಿಗಳು ಅರ್ಹ
ಬೆಂಗಳೂರು: ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕೆ ನಡೆದಿದ್ದ ನೀಟ್ ಪರೀಕ್ಷೆಯಲ್ಲಿ ರಾಜ್ಯದ 72,262 ವಿದ್ಯಾರ್ಥಿ ಗಳು ಅರ್ಹತೆ ಪಡೆದಿದ್ದಾರೆ. ರಾಜ್ಯದಿಂದ 1,22,423 ವಿದ್ಯಾರ್ಥಿಗಳು ಹಾಜರಾಗಿ ದ್ದರು. ಅಖಿಲಭಾರತ ಮಟ್ಟದ ಮೊದಲ ಐದು ಸ್ಥಾನಗಳಲ್ಲಿ ರಾಜ್ಯದ ಇಬ್ಬರು, ಅಗ್ರ 10 ಸ್ಥಾನಗಳಲ್ಲಿ ಮೂವರು ವಿದ್ಯಾರ್ಥಿಗಳು ಇದ್ದಾರೆ. ಅಖಿಲ ಭಾರತ ಮಟ್ಟದಲ್ಲಿ ಮೂರನೇ ರ್‍ಯಾಂಕ್ ಪಡೆದ ಬೆಂಗಳೂರಿನ ನ್ಯಾಷನಲ್ ಸೆಂಟರ್ ಫಾರ್ ಎಕ್ಸ್‌ಲೆನ್ಸ್‌ನ ಹೃಷಿಕೇಶ್ ನಾಗ ಭೂಷಣ ಗಂಗುಲೆ ರಾಜ್ಯಕ್ಕೆ ಮೊದಲಿಗ. ರಾಜ್ಯ ಸಿಇಟಿಯಲ್ಲಿ ಪ್ರಕೃತಿ …
Read More »ಸರ್ಕಾರದ ಸೌಲಭ್ಯ ಸದುಪಯೋಗ ಪಡಿಸಿಕೊಳ್ಳಿ: ವಿಧಾನ ಪರಿಷತ್ ಸದಸ್ಯ ಲಖನ್ ಜಾಕಿರಹೊಳಿ
ಗೋಕಾಕ: ” ಬಡ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಸರ್ಕಾರ ಅನೇಕ ಸೌಲಭ್ಯಗಳನ್ನು ಕಲ್ಪಿಸಿದ್ದು, ಇದರ ಸದುಪಯೋಗ ಪಡೆದುಕೊಂಡು ಜೀವನ ಯಶಸ್ಸು ಕಾಣಬೇಕು” ಎಂದು ವಿಧಾನ ಪರಿಷತ್ ಸದಸ್ಯ ಲಖನ್ ಜಾಕಿರಹೊಳಿ ಅವರು ಹೇಳಿದರು. ನಗರದ ಗೃಹ ಕಚೇರಿಯಲ್ಲಿ ವಿಧಾನ ಪರಿಷತ್ ಸದಸ್ಯ ಲಖನ್ ಜಾಕಿರಹೊಳಿ ಅವರು ಕಟ್ಟಡ ಕಾರ್ಮಿಕ ಬಡಮಕ್ಕಳಿಗೆ ಸಹಾಯಧನ ಚೆಕ್ ವಿತರಿಸಿ, ಮಾತನಾಡಿದ ಅವರು, ಕೂಲಿ ಕಾರ್ಮಿಕರ ಮಕ್ಕಳು ಇನ್ನು ಹೆಚ್ಚಿನ ಉನ್ನತ ಮಟ್ಟದಲ್ಲಿ ವಿದ್ಯಾಭ್ಯಾಸ …
Read More »ಉಮೇಶ ಕತ್ತಿ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ*
*ಗೋಕಾಕ:* ಅರಣ್ಯ ಹಾಗೂ ಆಹಾರ ಸಚಿವರಾಗಿದ್ದ ಉಮೇಶ ಕತ್ತಿ ಅವರ ನಿಧನದ ಹಿನ್ನೆಲೆಯಲ್ಲಿ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕತ್ತಿಯವರ ಬೆಲ್ಲದ ಬಾಗೇವಾಡಿ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಗುರುವಾರದಂದು ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದಲ್ಲಿರುವ ನಿವಾಸದಲ್ಲಿ ದಿ.ಉಮೇಶ ಕತ್ತಿ ಅವರ ಭಾವಚಿತ್ರಕ್ಕೆ ನಮನ ಸಲ್ಲಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮೃತ ಉಮೇಶ ಕತ್ತಿ ಸಹೋದರ ರಮೇಶ ಕತ್ತಿ, …
Read More »ಬೆಳಗಾವಿ: ತಾಯಿಗೆ ಹೊಡೆದು ಗಾಯಗೊಳಿಸಿದ ತಂದೆಯನ್ನು ಮಚ್ಚಿನಿಂದ ಕೊಲೆಗೈದ ಪುತ್ರ
ಬೆಳಗಾವಿ: ತಾಯಿಯ ಮೇಲೆ ಮನಬಂದಂತೆ ಥಳಿಸಿ ಗಾಯಗೊಳಿಸಿದ ತಂದೆಯನ್ನು ಮಗ ಮಚ್ಚಿನಿಂದ ಕೊಲೆ ಮಾಡಿರುವ ಘಟನೆ ಬೈಲಹೊಂಗಲ ಪಟ್ಟಣದ ಶಿವಾನಂದ ಭಾರತಿ ನಗರದ ಸತ್ಯ ಮಾರ್ಗದಲ್ಲಿ ನಡೆದಿದೆ. ಬೈಲಹೊಂಗಲ ಪಟ್ಟಣದ ರುದ್ರಪ್ಪ ತಳವಾರ (55) ಕೊಲೆಯಾದ ವ್ಯಕ್ತಿ. ಸಂತೋಷ ರುದ್ರಪ್ಪ ತಳವಾರ (30) ಆರೋಪಿಯಾಗಿದ್ದಾನೆ. ಕ್ಷುಲ್ಲಕ ಕಾರಣಗಳಿಗಾಗಿ ಪತ್ನಿಯೊಂದಿಗೆ ಜಗಳವಾಡಿದ್ದ ರುದ್ರಪ್ಪ, ಪತ್ನಿ ಮಹಾದೇವಿ ಮೇಲೆ ಮನಬಂದಂತೆ ಹಲ್ಲೆಗೈದು ಗಾಯಗೊಳಿಸಿದ್ದಾನೆ. ತಂದೆ-ತಾಯಿ ಜಗಳ ಕೇಳಿ ಹೊರಹೋಗಿದ್ದ ಮಗ ಸಂತೋಷ ಮನೆಗೆ ಬಂದಿದ್ದಾನೆ. …
Read More »ಇನ್ನೂ 5 ದಿನಗಳ ಕಾಲ ಮಳೆರಾಯನ ಕೆಂಗಣ್ಣಿಗೆ ಗುರಿಯಾಗಲಿದೆ ಬೆಂಗಳೂರು
ಇನ್ನೂ 5 ದಿನಗಳ ಕಾಲ ಮಳೆರಾಯನ ಕೆಂಗಣ್ಣಿಗೆ ಗುರಿಯಾಗಲಿದೆ ಬೆಂಗಳೂರು ಬೆಂಗಳೂರು: ಮುಂದಿನ ಐದು ದಿನಗಳ ಕಾಲ ಬೆಂಗಳೂರಿನಲ್ಲಿ ನಿರಂತರ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ಬುಧವಾರ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನು ಕೆಲವು ದಿನಗಳ ಕಾಲ ಜನರು ಸದ್ಯದ ಪರಿಸ್ಥಿತಿಯನ್ನು ಸಹಿಸಬೇಕಾಗಿದ್ದು, ಮುಂದಿನ ದಿನಗಳಲ್ಲಿ ಹೆಚ್ಚಿನ ರೈಲ್ವೇ ಅಲರ್ಟ್ ಆಗಿರುವ ಹಿನ್ನೆಲೆಯಲ್ಲಿ ಅನಾಹುತಕ್ಕೆ ಸಜ್ಜಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಪ್ರವಾಹ ಪೀಡಿತ ಜನರಿಗೆ ಸ್ಪಂದಿಸಲು …
Read More »ರಾಜಹಂಸಗಡದಲ್ಲಿ ಬೋಟಿಂಗ್ ಸ್ಪರ್ಧೆ
ಮಳೆಯಿಂದಾಗಿ ತುಂಬಿ ಹರಿಯುತ್ತಿದ್ದ ರಾಜಹಂಸಗಡ ಗ್ರಾಮದ ಕೆರೆಯಲ್ಲಿ ಮನರಂಜನಾ ಉದ್ದೇಶದಿಂದ ಗಣೇಶೋತ್ಸವ ಹಿನ್ನೆಲೆಯಲ್ಲಿ ಬೋಟ್ ಕಾಂಪಿಟೇಶನ್‌ನ್ನು ಹಮ್ಮಿಕೊಳ್ಳಲಾಗಿತ್ತು. ಹೌದು ಮಳೆಯಿಂದಾಗಿ ತುಂಬಿ ಹರಿಯುತ್ತಿದ್ದ ರಾಜಹಂಸಗಡ ಗ್ರಾಮದ ಕೆರೆಯಲ್ಲಿ ಮನರಂಜನಾ ಉದ್ದೇಶದಿಂದ ಗಣೇಶೋತ್ಸವ ಹಿನ್ನೆಲೆಯಲ್ಲಿ ಬೋಟ್ ಕಾಂಪಿಟೇಶನ್‌ನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಗ್ರಾಮದ ಉತ್ಸಾಹಿ ಯುವಕರು ಭಾಗಿಯಾಗಿದ್ದರು. ಈ ಬೋಟ್ ಕಾಂಪಿಟೇಶನ್‌ನಲ್ಲಿ ಯುವತಿಯರು ಭಾಗಿಯಾಗಿದ್ದು ವಿಶೇಷವಾಗಿದ್ದರು. ಈ ವೇಳೆ ಸ್ಪರ್ಧೆಯಲ್ಲಿ ೭೦ ವರ್ಷದ ಪರಶುರಾಮ್ ಹಲಗೇಕರ್, ಹಾಗೂ ನರ್ಮದಾ ಕಡೋಲ್ಕರ್ ಭಾಗಿಯಾಗಿದ್ದು …
Read More »ಗುಣಮಟ್ಟದ ಶಿಕ್ಷಣದಿಂದ ದೇಶದ ಪ್ರಗತಿ: ಬಾಗೇವಾಡಿ
ಬೆಳಗಾವಿ: ಒಂದು ದೇಶದ ಪ್ರಗತಿ ಅಲ್ಲಿಯ ಶಿಕ್ಷಣದ ಗುಣಮಟ್ಟದ ಮೇಲೆ ನಿಂತಿದೆ. ಗುಣಮಟ್ಟದ ಶಿಕ್ಷಣ ಸಾಕಾರಗೊಳ್ಳಲು ಅಲ್ಲಿಯ ಶಿಕ್ಷಕರ ವೃತ್ತಿಗೌರವಕ್ಕೆ ಧಕ್ಕೆ ಬಾರದಂತೆ ನೋಡಿಕೊಳ್ಳುವ ಮುಖೇನ ಅವರಿಗೆ ವೃತ್ತಿ ಸ್ವಾತಂತ್ರ್ಯ ನೀಡಿದರೆ ಭಾರತದ ಉಜ್ವಲ ಭವಿಷ್ಯ ಬರೆಯಬಲ್ಲ ಮಕ್ಕಳನ್ನು ತಯಾರು ಮಾಡಬಲ್ಲ ಸಾಮರ್ಥ್ಯ ಶಿಕ್ಷಕರಿಗಿದೆ ಎಂದು ಶ್ರೀ ರವಿಶಂಕರ ವಿದ್ಯಾವರ್ಧಕ ಸಂಸ್ಥೆಯ ಸಂಸ್ಥಾಪಕ ಶಂಕರ ಬಾಗೇವಾಡಿ ಅಭಿಪ್ರಾಯ ಪಟ್ಟರು. ನಗರದ ಹೊರವಲಯದ ಕಣಬರಗಿಯ ಸಮತಾ ಶಾಲೆಯಲ್ಲಿ ಜರುಗಿದ ಶಿಕ್ಷಕರ ದಿನಾಚರಣೆ …
Read More »ಕಿಕ್‌ಬ್ಯಾಕ್ ಆರೋಪ: ಬಿಎಸ್‌ವೈ ವಿರುದ್ಧದ ಪ್ರಕರಣ ಮರು ವಿಚಾರಣೆಗೆ ಹೈಕೋರ್ಟ್ ಆದೇಶ
ಬೆಂಗಳೂರು: ಕೋಟ್ಯಂತರ ರೂಪಾಯಿ “ಕಿಕ್‌ಬ್ಯಾಕ್’ ಪಡೆದುಕೊಂಡಿದ್ದಾರೆ ಎಂಬ ಆರೋಪ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತವರ ಕುಟುಂಬದ ಸದಸ್ಯರು ಹಾಗೂ ಕೆಲ ಆಪ್ತರಿಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಪ್ರಕರಣದ ಮರು ವಿಚಾರಣೆ ನಡೆಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹೈಕೋರ್ಟ್ ಆದೇಶಿಸಿದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವಸತಿ ಯೋಜನೆ ಗುತ್ತಿಗೆ ನೀಡುವ ಸಲುವಾಗಿ ಮುಖ್ಯಮಂತ್ರಿಯಾಗಿದ್ದ ವೇಳೆ ಯಡಿಯೂರಪ್ಪ ಮತ್ತು ಪುತ್ರ ಬಿ.ವೈ. ವಿಜಯೇಂದ್ರ ಸಹಿತ ಅವರ ಕುಟುಂಬಸ್ಥರು ರಾಮಲಿಂಗಂ ಕನ್‌ಸ್ಟ್ರಕ್ಷನ್ …
Read More »
Laxmi News 24×7