ಯಮಕನಮರ್ಡಿ ಕ್ಷೇತ್ರದಲ್ಲಿ ನಮ್ಮವರೇ ನನ್ನ ವಿರುದ್ಧ ಹಣ ಹಂಚಿದ್ದರಿಂದ ನನ್ನ ಗೆಲುವಿನ ಅಂತರ ಕಡಿಮೆಯಾಗಲು ಕಾರಣವಾಯಿತು. ಎಂದು ಅಚ್ಚರಿ ಹೇಳಿಕೆಯನ್ನು ನೀಡಿದ್ದು ಸಧ್ಯ ಸತೀಶ್ ಜಾರಕಿಹೊಳಿ ವಿರುದ್ಧ ಹಣ ಹಂಚಿದ ಕಾಂಗ್ರೆಸ್ ನಾಯಕರು ಯಾರು ಎನ್ನುವ ಚರ್ಚೆ ರಾಜ್ಯ ರಾಜಕಾರಣದಲ್ಲೀಗ ಪ್ರಾರಂಭವಾಗಿದೆ. ಬೆಳಗಾವಿ ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ ಸತೀಶ್ ಜಾರಕಿಹೊಳಿರವರು, ಇದೇ ವೇಳೆ ಕಳೆದ ಬಾರಿ ಚುನಾವಣೆಯಲ್ಲಿ ಸತೀಶ್ ಜಾರಕಿಹೊಳಿ ಗೆಲುವಿನ ಅಂತರ ಕಡಿಮೆಯಾದ ಕುರಿತಂತೆ ಮಾಧ್ಯಮಗಳ ಪ್ರಶ್ನೆಗೆ …
Read More »ಮಹಿಳೆಯರು ಮತ್ತಷ್ಟು ಸಾಧನೆ ಮಾಡಬೇಕಿದೆ”: ಯುವ ನಾಯಕ ರಾಹುಲ ಜಾರಕಿಹೊಳಿ
ಯಾವುದೇ ದೇಶದ ಏಳಿಗೆ ಆ ದೇಶದ ಮಹಿಳೆಯರ ಪ್ರಗತಿಯನ್ನು ಅವಲಂಬಿಸಿದೆ. ಹೀಗಾಗಿ ಶೈಕ್ಷಣಿಕವಾಗಿ, ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಹೀಗೆ ಎಲ್ಲ ರಂಗಗಳಲ್ಲಿ ಮಹಿಳೆಯರು ಮತ್ತಷ್ಟು ಸಾಧನೆ ಮಾಡಬೇಕಿದೆ” ಎಂದು ಯುವ ನಾಯಕ ರಾಹುಲ ಜಾರಕಿಹೊಳಿ ಅಭಿಪ್ರಾಯ ಪಟ್ಟರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬೆಳಗಾವಿ ವಲಯದ ಕಾಕತಿ, ಗೌಂಡವಾಡ, ಮುತ್ಯಾನ ಹಟ್ಟಿ ಗ್ರಾಮದ ಸ್ವ ಸಹಾಯ ಸಂಘಗಳ ಸಂಯುಕ್ತ ಆಶ್ರಯದಲ್ಲಿ ಗೌಡವಾಡದ ಮೋನಿಕ ಸಮುದಾಯ ಭವನದಲ್ಲಿ ಜರುಗಿದ ಸಾಮೂಹಿಕ ವರಮಹಾಲಕ್ಷ್ಮಿ ಪೂಜಾ, …
Read More »ಮೊಟ್ಟೆ ಎಸೆತ ಖಂಡಿಸಿ ಬಾದಾಮಿಯಲ್ಲಿ ಬೃಹತ್ ಪ್ರತಿಭಟನಾ ರ‍್ಯಾಲಿ
ಬಾಗಲಕೋಟೆ : ಮಾಜಿ ಸಿಎಂ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣ ಖಂಡಿಸಿ ಅವರು ಪ್ರತಿನಿಧಿಸುತ್ತಿರುವ ಕ್ಷೇತ್ರ ಬಾದಾಮಿಯಲ್ಲಿ ಶುಕ್ರವಾರ ಕಾಂಗ್ರೆಸ್ ಕಾರ್ಯಕರ್ತರಿಂದ ಭಾರಿ ಪ್ರತಿಭಟನೆ ನಡೆಸಲಾಗಿದೆ. ಬಾದಾಮಿ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಮತ್ತು ಸಿದ್ದರಾಮಯ್ಯ ಅಭಿಮಾನಿಗಳು ರಸ್ತೆ ತಡೆದು, ಟಯರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆ ವೇಳೆ ಟ್ರಾಫಿಕ್ ಜಾಮ್ ಆಗಿ ನೂರಾರು ವಾಹನಗಳು ಸಾಲುಗಟ್ಟಿ ನಿಲ್ಲಬೇಕಾಯಿತು. ಬೃಹತ್ ಪ್ರತಿಭಟನಾ ರ‍್ಯಾಲಿ …
Read More »ಸರ್ಕಾರ ಗೂಂಡಾಗಿರಿಯ ಹಾವಿಗೆ ಹಾಲೆರೆಯುತ್ತಿದೆ: ಕಾಂಗ್ರೆಸ್
ಬೆಂಗಳೂರು: ಪೋಲಿಸರನ್ನು ಕಟ್ಟಿ ಹಾಕಿ ಸರ್ಕಾರ ಗೂಂಡಾಗಿರಿಯ ಹಾವಿಗೆ ಹಾಲೆರೆಯುತ್ತಿದೆ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ. ಸುಳ್ಯದಲ್ಲಿ ನಳಿನ್ ಕುಮಾರ್ ಕಟೀಲ್ ಅವರ ಕಾರಿನ ಮೇಲೆ ದಾಳಿ ಮಾಡಿದ್ದ ಹಿನ್ನೆಲೆಯಲ್ಲಿ ಪೋಲಿಸರು ಬಿಜೆಪಿ ಕಾರ್ಯಕರ್ತರ ಮೇಲೆ ಲಾಠಿ ಚಾರ್ಜ್ ಮಾಡಿದ್ದರು. ಆ ವೇಳೆ ಲಾಠಿ ಚಾರ್ಜ್ ಮಾಡಿದ್ದ ಪೊಲೀಸರ ಎತ್ತಂಗಡಿ ಮಾಡಿ ಈ ಸರ್ಕಾರ ತಾವು ಎಂದೆಂದಿಗೂ ಗೂಂಡಾಗಿರಿಯ ಪರ ಎಂದು ತೋರಿಸಿ ಪೊಲೀಸರ ನೈತಿಕ ಸ್ಥೈರ್ಯ ಕುಸಿಯುವಂತೆ ಮಾಡಿತ್ತು. ಇದೀಗ …
Read More »ರಸ್ತೆಯಲ್ಲಿ ಮಾರಕಾಸ್ತ್ರಗಳಿಂದ ಬೆದರಿಸಿ ದರೋಡೆಗೈಯ್ಯುತ್ತಿದ್ದ ಏಳು ಜನರ ಬಂಧನ
ವಿಜಯಪುರ: ವಿಜಯಪುರ ನಗರ ಹಾಗೂ ಹೆದ್ದಾರಿಗಳಲ್ಲಿ ಸಂಚರಿಸುತ್ತಿದ್ದ ಜನರನ್ನು ಮಾರಕಾಸ್ತ್ರಗಳಿಂದ ಬೆದರಿಸಿ ದರೋಡೆ ಮಾಡುತ್ತಿದ್ದ ಮಹಾರಾಷ್ಟ್ರ ಮೂಲದ ಮೂವರು ಸೇರಿದಂತೆ ಒಟ್ಟು ಏಳು ಜನರ ತಂಡವನ್ನು ಪೊಲೀಸರು ಬಂಧಿಸಿದ್ದಾರೆ. ಇಟ್ಟಂಗಿಹಾಳ ದೊಡ್ಡಿಯ ನಿವಾಸಿ ವಿಜಯ ಭೀರಪ್ಪ ಕರಾಡೆ (23), ಆನಂದ ಮಾಯಪ್ಪ ಡೇರೆ, ಹಣಮಂತ ಜಯಪ್ಪ ಖರಾತ (20), ಬಬಲಾದಿ ಗ್ರಾಮದ ನಿವಾಸಿ ಸಚಿನ್ ಮಧು ಗೋಪಣೆ (20), ಮಹಾರಾಷ್ಟ್ರದ ತಿಕ್ಕುಂಡಿ ಕರೆವಾಡಿ ಮೂಲದ ನಿವಾಸಿ ನವನಾಥ ಅಮಗೊಂಡ ಕರಾಡೆ …
Read More »ನಾವು ಶಶಿಕಲಾ ಜೊಲ್ಲೆಗೆ ಹುಟ್ಟಿದವರಲ್ಲ: ನಲಪಾಡ್ ವಿವಾದಾತ್ಮಕ ಹೇಳಿಕೆ
ಬೆಂಗಳೂರು : ”ನಾವು ಶಶಿಕಲಾ ಜೊಲ್ಲೆಗೆ ಹುಟ್ಟಿದವರಲ್ಲ, ನಾವು ಕಾಂಗ್ರೆಸ್ ಪಕ್ಷದವರು, ಗಾಂಧೀಜಿ ತತ್ವ ಅನುಸರಿಸುತ್ತಿರುವವರು” ಎಂದು ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ಹ್ಯಾರಿಸ್ ನಲಪಾಡ್ ನೀಡಿರುವ ಹೇಳಿಕೆ ಈಗ ವಿವಾದಕ್ಕೆ ಕಾರಣವಾಗಿದೆ. ಫೇಸ್ ಬುಕ್ ಲೈವ್ ನಲ್ಲಿಸಿದ್ದರಾಮಯ್ಯ ಅವರತ್ತ ಕೊಡಗಿನಲ್ಲಿ ಬಿಜೆಪಿ ಕಾರ್ಯಕರ್ತರು ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ನಲಪಾಡ್, ಬಿಜೆಪಿಯವರು ಊರುಬಿಟ್ಟು ಓಡಿಹೋಗುವಂತೆ ಮಾಡುತ್ತೇವೆ. ರಾಜ್ಯದ ಎಲ್ಲೆಡೆ ಪ್ರತಿಭಟನೆ ಮಾಡುತ್ತೇವಾ. ಎಲ್ಲಾ ಸಚಿವರಿಗೂ ಮೊಟ್ಟೆ ಕಳುಹಿಸಿ …
Read More »ಬೆಳಗಾವಿಯ ಐಟಿಬಿಪಿ ಶಿಬಿರದಲ್ಲಿ 2 ಎಕೆ-47 ರೈಫಲ್‍ಗಳು ನಾಪತ್ತೆ:
ಚೀನಾ ಗಡಿ ಕಾವಲು ಜವಾಬ್ದಾರಿ ಹೊತ್ತಿರುವ ಐಟಿಬಿಪಿ ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ ಯೋಧರಿಗೆ ಸೇರಿದ ಎರಡು ಎಕೆ-47 ರೈಫಲ್‍ಗಳು ಕಳುವಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ತಾಲೂಕಿನ ಹಾಲಬಾವಿಯಲ್ಲಿರುವ ಐಟಿಬಿಪಿ ಶಿಬಿರದಲ್ಲಿ ನಕ್ಸಲ್ ನಿಗ್ರಹ ತರಬೇತಿ ನಡೆಯುತ್ತಿದೆ. ತರಬೇತಿಗೆಂದು ಮಧುರೈನಿಂದ ಬಂದಿರುವ ಐಟಿಬಿಪಿ 45ನೇ ಬಟಾಲಿಯನ್ ಯೋಧರಾದ ರಾಜೇಶ್‍ಕುಮಾರ್, ಸಂದೀಪ್ ಮೀನಾ ಅವರಿಗೆ ಸೇರಿದ ಎಕೆ-47 ರೈಫಲ್‍ಗಳು ಕಳುವಾಗಿವೆ. ಆಗಸ್ಟ್ 17ರಂದು ರಾತ್ರಿ ಮಲಗುವಾಗ ರೈಫಲ್‍ಗಳನ್ನು ವಾಡಿಕೆಯಂತೆ ಭದ್ರತೆಯಲ್ಲಿಯೇ ಇರಿಸಲಾಗಿತ್ತು. …
Read More »ಬೆಳಗಾವಿಯಲ್ಲಿ ಚಿರತೆಗಾಗಿ ಅರಣ್ಯ-ಪೊಲೀಸ್ ಇಲಾಖೆ ಬೃಹತ್ ಕಾರ್ಯಾಚರಣೆ
ಕಳೆದ 15 ದಿನಗಳಿಂದ ಬೆಳಗಾವಿ ನಗರದಲ್ಲಿ ಭೀತಿ ಹುಟ್ಟಿಸಿರುವ ಚಿರತೆ ಪತ್ತೆಗೆ ಅರಣ್ಯ ಇಲಾಖೆ ಹಾಗೂ ಪೆÇಲೀಸ್ ಇಲಾಖೆಯ ಮತ್ತಷ್ಟು ಚುರುಕುಗೊಂಡಿದ್ದು. ದೊಡ್ಡ ಮಟ್ಟದ ಕಾರ್ಯಾಚರಣೆ ಕೈಗೊಂಡಿದೆ. ಹೌದು ಆಗಸ್ಟ್ 5ರಂದು ಬೆಳಗಾವಿಯ ಗಾಲ್ಫ್ ಮೈದಾನಕ್ಕೆ ಹೊಂದಿಕೊಂಡಿರುವ ಬೆಳಗಾವಿ ಕ್ಲಬ್ ಆವರಣದಲ್ಲಿ ಜಮಾಯಿಸಿದ ಅರಣ್ಯ ಇಲಾಖೆ ಹಾಗೂ ಪೆÇಲೀಸ್ ಇಲಾಖೆ ಫೋರ್ಸ ಸಿಬ್ಬಂದಿಗಳಿಗೆ ಡಿಸಿಪಿ ರವೀಂದ್ರ ಗಡಾದಿ, ಎಸಿಪಿ ನಾರಾಯಣ ಭರಮಣಿ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳು ಚಿರತೆ ಪತ್ತೆಯ …
Read More »ಅನೈತಿಕ ಸಂಬಂಧ: ಸವದತ್ತಿಯಲ್ಲಿ ಪತಿಯಿಂದ ಪತ್ನಿಯ ಬರ್ಬರ ಹತ್ಯೆ
ಸವದತ್ತಿ: ಅನೈತಿಕ ಸಂಬಂಧದ ಶಂಕೆಯಿಂದ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನೇ ಮಾರಕಾಸ್ತ್ರದಿಂದ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಇಲ್ಲಿನ ರಾಮಾಪೂರ ಸೈಟಿನಲ್ಲಿ ಗುರುವಾರ ನಡೆದಿದೆ. ಶಬಾನಾ (28) ಕೊಲೆಗೀಡಾದ ಮಹಿಳೆ. ಆರೋಪಿ ಮೆಹಬೂಬಸಾಬ ಗರೀಬಸಾಬ ಗೊರವನಕೊಳ್ಳ (30) ತನ್ನ ಪತ್ನಿಯನ್ನು ಕೊಲೆಗೈದು ಪೊಲೀಸರಿಗೆ ಶರಣಾಗಿದ್ದಾನೆ. ದಂಪತಿಗೆ ಇಬ್ಬರು ಮಕ್ಕಳು ಇದ್ದಾರೆ. ಸ್ಥಳಕ್ಕೆ ಪಿಐ ಕರುಣೇಶಗೌಡ ಜೆ. ಭೇಟಿ ನೀಡಿ ಪರಿಶೀಲಿಸಿದ್ದಾರೆ. ಆರೋಪಿಯೊಂದಿಗೆ ಕೃತ್ಯಕ್ಕೆ ಬಳಿಸಿದ ಮಾರಕಾಸ್ತ್ರವನ್ನು ವಶ ಪಡಿಸಿಕೊಳ್ಳಲಾಗಿದೆ. ಆಗಾಗ ಪತಿ ಪತ್ನಿ …
Read More »ಮತ್ತಮ್ಮೆ ಶಕ್ತಿ ಕೇಂದ್ರವಾದ B.S.Y. ನಿವಾಸ
ಬೆಂಗಳೂರು – ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿದ ಬಳಿಕ ಮುಂದೇನು ಎನ್ನುವ ಪ್ರಶ್ನೆಯೊಂದಿಗೆ, ಮೂಲೆಗುಂಪಾಗಿಬಿಡುತ್ತಾರಾ ಯಡಿಯೂರಪ್ಪ ಎನ್ನುವ ಅನುಮಾನಕ್ಕೆ ಉತ್ತರವಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಸ್ಥಾನ ನೀಡಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಪ್ರಧಾನಮಂತ್ರಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ ಸಿಂಗ್, ಗೃಹ ಸಚಿವ ಅಮಿತ್ ಶಾ ನಂತರದ ಸ್ಥಾನದಲ್ಲಿ ಯಡಿಯೂರಪ್ಪ ಅವರು ಸೇರಿಸಲ್ಪಟ್ಟಿದ್ದಾರೆ. 2023ರ ವಿಧಾನ ಸಭೆ ಚುನಾವಣೆ ಮತ್ತು 2024ರ ಲೋಕಸಭಾ ಚುನಾವಣೆಗೆ …
Read More »
Laxmi News 24×7