Breaking News

ಜಿಲ್ಲೆ

ಬೆಳಗಾವಿಯಲ್ಲಿ ಐಟಿ, ಸೆಮಿಕಂಡಕ್ಟರ್ ಪಾರ್ಕ್‌ ಸ್ಥಾಪಿಸಲು ಕ್ರಮ: ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ರಾಜ್ಯದ ಎರಡನೇ ರಾಜಧಾನಿಯೆಂದೇ ಘೋಷಣೆಗೊಂಡಿರುವ ಹಾಗೂ ರಾಜ್ಯದ ಗಡಿ ಜಿಲ್ಲೆಯಾದ ಬೆಳಗಾವಿಯಲ್ಲಿ  ಐ.ಟಿ ಪಾರ್ಕ್ , ಸೆಮಿಕಂಡಕ್ಟರ್ ಪಾರ್ಕ್‌ಗಳನ್ನು  ನಿರ್ಮಿಸಿ ಅಭಿವೃದ್ಧಿ ಪರ ರಾಜ್ಯವನ್ನಾಗಿ ಮಾಡುವ ಹಾಗೂ ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸುವ ಉದ್ದೇಶ ಸರ್ಕಾರಕ್ಕೆ ಇದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ  ಅವರು ತಿಳಿಸಿದರು. ಇಂದು ವಿಧಾನಸಭೆಯ ಪ್ರಶ್ನೋತ್ತರ ಕಲಾಪದ ವೇಳೆಯಲ್ಲಿ ವಿಧಾನಸಭಾ ಸದಸ್ಯರಾದ ಅಭಯ್‌ …

Read More »

ವ್ಯಕ್ತಿಯ ಸಜೀವ ದಹನ – ಇಬ್ಬರಿಗೆ ಜೀವಾವಧಿ ಶಿಕ್ಷೆ

ಶಿವಮೊಗ್ಗ: ವ್ಯಕ್ತಿಯ ಮೇಲೆ ಪೆಟ್ರೋಲ್‌ ಎರಚಿ ಬೆಂಕಿ ಹಚ್ಚಿ ಕೊಂದಿದ್ದ ಇಬ್ಬರು ಅಪರಾಧಿಗಳಿಗೆ ಶಿವಮೊಗ್ಗ  ನ್ಯಾಯಾಲಯ  ಜೀವಾವಧಿ ಶಿಕ್ಷೆ ವಿಧಿಸಿದೆ. ಶಿವಮೊಗ್ಗ ತಾಲೂಕಿನ ಬೆಳಲಕಟ್ಟೆ ಗ್ರಾಮದ ಮಹೇಶಪ್ಪ ಮತ್ತು ಅಪರಾಧಿಗಳಾದ ಕುಮಾರ್ (57) ಹಾಗೂ ಕಾರ್ತಿಕ್ (28) ನಡುವೆ ಜಮೀನಿನ ವಿಚಾರವಾಗಿ ಈ ಹಿಂದೆ ಗಲಾಟೆಗಳು ನಡೆದಿದ್ದವು. ಇದೇ ದ್ವೇಷದ ಹಿನ್ನೆಲೆಯಲ್ಲಿ 03-12-2023ರಂದು ಇಬ್ಬರು ಸೇರಿ ಹನಸವಾಡಿ ಸರ್ಕಲ್ ಬಳಿ ಹೊಂಚು ಹಾಕಿ ಕುಳಿತಿದ್ದರು. ಈ ವೇಳೆ ಸ್ಕೂಟಿಯಲ್ಲಿ ಬರುತ್ತಿದ್ದ …

Read More »

ದರ್ಶನ್ ಒಳಸಂದರ್ಶನಕ್ಕೆ ಕೋರ್ಟ್ ಅಸ್ತು

ಬೆಂಗಳೂರು: ನಟ ದರ್ಶನ್‌ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಒಳಸಂದರ್ಶನಕ್ಕೆ ಕೋರ್ಟ್ ಅನುಮತಿ ಅಂದಿದ್ದು, ಅಂತಿಮ ನಿರ್ಧಾರ ಜೈಲು ಅಧೀಕ್ಷಕರಿಗೆ ಬಿಟ್ಟಿದೆ. ಜೈಲ್ ಮ್ಯಾನ್ಯುಯಲ್‌ನಲ್ಲಿ ಒಳಸಂದರ್ಶನಕ್ಕೆ ಅವಕಾಶ ಇದ್ರೆ ನೀಡುವಂತೆ ಆದೇಶ ನೀಡಿದ್ದು, ದರ್ಶನ್ ಕುಟುಂಬಸ್ಥರ ಜೊತೆ ಒಳಸಂದರ್ಶನ ನಡೆಸಬಹುದಾ ಎನ್ನುವ ಪ್ರಶ್ನೆ ಹುಟ್ಟಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ದರ್ಶನ್‌ಗೆ ಜೈಲಿನ ಒಳಸಂದರ್ಶನಕ್ಕೆ 57ನೇ ಸೆಷನ್ಸ್ ಕೋರ್ಟ್ ತಾತ್ವಿಕ ಒಪ್ಪಿಗೆ ನೀಡಿದೆ. ಆದರೆ, ಈ ಸಂಬಂಧ ಅಂತಿಮ ನಿರ್ಧಾರ …

Read More »

ಬೆಳಗಾವಿ ಲೋಕಸಭಾ ಕ್ಷೇತ್ರದ 28 ಶಾಲೆಗಳು ಕೇಂದ್ರದ ‘ಪಿಎಂ-ಶ್ರೀ’ ಯೋಜನೆಗೆ ಆಯ್ಕೆ – ಸಂಸದ ಈರಣ್ಣ ಕಡಾಡಿ

ಮೂಡಲಗಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯ ‘ಪಿಎಂ-ಶ್ರೀ’ ಯೋಜನೆಯಡಿ ಬೆಳಗಾವಿ ಲೋಕಸಭಾ ಕ್ಷೇತ್ರದ 21 ಪ್ರಾಥಮಿಕ, 6 ಪ್ರೌಢ ಶಾಲೆಗಳು ಮತ್ತು 1 ಪದವಿ ಪೂರ್ವ ಸರ್ಕಾರಿ ಶಾಲೆಗಳನ್ನು ಅತ್ಯಾಧುನಿಕ ಹಾಗೂ ಮಾದರಿ ಶಾಲೆಗಳನ್ನಾಗಿ ಅಭಿವೃದ್ಧಿಪಡಿಸಲು ಕೇಂದ್ರ ಶಿಕ್ಷಣ ಸಚಿವಾಲಯವು ಆಯ್ಕೆ ಮಾಡಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ತಿಳಿಸಿದ್ದಾರೆ. ನವದೆಹಲಿಯಲ್ಲಿ ನಡೆಯುತ್ತಿರುವ ಸಂಸತ್ತಿನ ಬಜೆಟ್‌ ಅಧಿವೇಶನದಲ್ಲಿ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಪಿಎಂ-ಶ್ರೀ’ ಯೋಜನೆಯ ಅನುಷ್ಠಾನದ …

Read More »

ಕನ್ನಡಕ್ಕಾಗಿ ಕರವೇ ಪ್ರತಿಭಟನೆ – ರೈಲ್ವೇ ಪರೀಕ್ಷೆ ಮುಂದೂಡಿಕೆ

ಹುಬ್ಬಳ್ಳಿ: ರೈಲ್ವೆ ಇಲಾಖೆ ಪರೀಕ್ಷೆಗಳಲ್ಲಿ  ಕನ್ನಡ ಭಾಷೆಗೆ  ಅವಕಾಶ ನೀಡದಿರುವ ಕುರಿತು ರಾಜ್ಯದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದ್ದು ಇಂದು ನಡೆಯಬೇಕಿದ್ದ ಪರೀಕ್ಷೆಯನ್ನು ಮುಂದೂಡಲಾಗಿದೆ. ಗೂಡ್ಸ್ ರೈಲ್ವೆ ಮ್ಯಾನೇಜರ್ ಹಾಗೂ ಎಲ್‌ಡಿಸಿಇ ಹುದ್ದೆಗಳಿಗೆ ನಡೆಯುವ ಮುಂಬಡ್ತಿ ಪರೀಕ್ಷೆಗಳನ್ನು ಕನ್ನಡದಲ್ಲಿ ಬರೆಯಲು ಅವಕಾಶವಿಲ್ಲದ ಕಾರಣ ಕನ್ನಡಿಗರಿಗೆ  ಅನ್ಯಾಯವಾಗುತ್ತಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಬೆಂಗಳೂರು ಹಾಗೂ ಹುಬ್ಬಳ್ಳಿಯಲ್ಲಿ ಪ್ರತಿಭಟನೆ ನಡೆಸಿದರು. ಮೆಜೆಸ್ಟಿಕ್‌ನ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದ ಬಳಿ ಪ್ರತಿಭಟನೆ ಕನ್ನಡ …

Read More »

ಕೆಲಸ ಮುಗಿಸಿ ಬರುವಾಗ ಸಿಡಿಲು ಬಡಿದು ರೈತ ಸಾವು

ಗದಗ: ಸಿಡಿಲು ಬಡಿದು ರೈತ ಸಾವನ್ನಪ್ಪಿರುವ ಘಟನೆ ಗದಗ  ಜಿಲ್ಲೆಯ ರೋಣ  ತಾಲೂಕಿನ ಮೆಣಸಗಿ ಗ್ರಾಮದಲ್ಲಿ ನಡೆದಿದೆ. 58 ವರ್ಷದ ನಿಂಗಪ್ಪ ಅಮಾತ್ಯ ಮೃತ ರೈತ ಎಂದು ಗುರುತಿಸಲಾಗಿದ್ದು, ಜಮೀನಿನಲ್ಲಿ ಕೆಲಸಕ್ಕೆ ಹೋಗಿದ್ದಾಗ ಈ ಅವಘಡ ಸಂಭವಿಸಿದೆ. ಮೃತ ವ್ಯಕ್ತಿ ಬೆಣ್ಣೆಹಳ್ಳ ಸಮೀಪದ ಜಮೀನಿನಲ್ಲಿ ಕೆಲಸಕ್ಕೆ ಹೋಗಿದ್ದರು. ಮಳೆ ಆರಂಭವಾಗುತ್ತಿದ್ದAತೆ ಕೆಲಸ ಮುಗಿಸಿಕೊಂಡು ಮನೆಗೆ ಬರುವ ವೇಳೆ ಸಿಡಿಲು ಬಡಿದಿದ್ದು, ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ರೋಣ ತಾಲೂಕಿನ ಹಲವೆಡೆ ಆಲಿಕಲ್ಲು, …

Read More »

ಶಾಮನೂರು ಕುಟುಂಬಕ್ಕೆ ಟಿಕೆಟ್‌ ನೀಡಿದ್ರೆ 50 ಸಾವಿರ ಮತಗಳಿಂದ ಸೋಲಿಸುತ್ತೇವೆ: ಕಾಂಗ್ರೆಸ್‌ಗೆ ಮುಸ್ಲಿಮ್‌ ನಾಯಕರಿಂದ ಚಾಲೆಂಜ್‌

ದಾವಣಗೆರೆ: ಶಾಮನೂರು ಕುಟುಂಬಕ್ಕೆ ಟಿಕೆಟ್ ಕೊಟ್ಟರೆ 50 ಸಾವಿರ ಮತಗಳ ಅಂತರದಿಂದ ಸೋಲಿಸುವುದಾಗಿ ಮುಸ್ಲಿಮ್‌ ಕಾಂಗ್ರೆಸ್‌ ನಾಯಕರು   ಮೀಸೆ ತಿರುವಿ, ತೊಡೆ ತಟ್ಟಿ ಎಚ್ಚರಿಕೆ ನೀಡಿದ್ದಾರೆ. ಇಂದು ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯ ಟಿಕೆಟ್‌ ಹಂಚಿಕೆ ಸಂಬಂಧ ಜಿಲ್ಲಾ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಕೆಪಿಸಿಸಿ ಉಸ್ತುವಾರಿ ಸಮಿತಿ ಅಭಿಪ್ರಾಯ ಸಂಗ್ರಹಣೆಗೆ ಮುಂದಾದಾಗ ಭಾರೀ ಹೈಡ್ರಾಮಾ ನಡೆದಿದೆ. ಒಂದು ಕಡೆ ಮುಸ್ಲಿಮ್‌ ಮುಖಂಡರು ಹಾಗೂ ಯುವಕರು ಅಹಿಂದ ವರ್ಗಕ್ಕೆ ಟಿಕೆಟ್‌ ನೀಡುವಂತೆ …

Read More »

ಹೊಟೇಲ್ ಗಳಲ್ಲಿ ಅನಧಿಕೃತವಾಗಿ ಗೃಹ ಬಳಕೆ ಗ್ಯಾಸ್ ಉಪಯೋಗ; 15 ಕ್ಕೂ ಹೆಚ್ಚು ಸಿಲಿಂಡರ್ ವಶಕ್ಕೆ

ಹೊಟೇಲ್ ಗಳಲ್ಲಿ ಅನಧಿಕೃತವಾಗಿ ಗೃಹ ಬಳಕೆ ಗ್ಯಾಸ್ ಉಪಯೋಗ ಮಾಡ್ತಿದ್ದ ಹೊಟೇಲ್ ಮಾಲೀಕರಿಗೆ ಆಹಾರ ಇಲಾಖೆ ಅಧಿಕಾರಿಗಳು ಶಾಕ್ ಕೊಟ್ಟಿದ್ದಾರೆ. ಅನಧಿಕೃತವಾಗಿ ಗ್ಯಾಸ್ ಬಳಕೆ ಮಾಡ್ತಿರುವ ಬಗ್ಗೆ ಮಾಹಿತಿ ಪಡೆದ ಅಧಿಕಾರಿಗಳು ನಗರದ ಸೋಲಾಪುರ ರಸ್ತೆಯ ಹೊಟೇಲ್ ಗಳಲ್ಲಿ ತಪಾಸಣೆ ನಡೆಸಿದ್ರು. ಈ ವೇಳೆ ಕೆಲ ಹೊಟೇಲ್ ಗಳಲ್ಲು ಅನಧಿಕೃತವಾಗಿ ಗೃಹ ಬಳಕೆ ಸಿಲೆಂಡರ್ ಉಪಯೋಗಿಸುತ್ತಿರೋದು ಕಂಡು ಬಂದಿದೆ. ಅನಧಿಕೃತವಾಗಿ ಬಳಕೆ ಮಾಡ್ತಿದ್ದ 15ಕ್ಕು ಅಧಿಕ ಗೃಹ ಬಳಕೆ ಸಿಲೆಂಡರ್‌ಗಳನ್ನ …

Read More »

ಬೆಳಗಾವಿಯಲ್ಲಿ ಪೆಟ್ರೋಲ್ ಕಳ್ಳರ ಹಾವಳಿ

ಬೆಳಗಾವಿಯಲ್ಲಿ ಸಾರ್ವಜನಿಕರ ನಿದ್ದೆಗೆಡಿಸಿದ ಪೆಟ್ರೋಲ್ ಕಳ್ಳರ ಗ್ಯಾಂಗ್! ಲಾಂಗು, ಮಚ್ಚು ಹಿಡಿದು ರಸ್ತೆಯಲ್ಲೇ ಅಟ್ಟಹಾಸ ಮೆರೆಯುತ್ತಾ ಬೈಕ್ ಗಳ ಪೆಟ್ರೋಲ್ ಕದಿಯುತ್ತಿದ್ದಾರೆ. ಹೌದು, ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರ ಮನೆಯ ಸಮೀಪವೇ ಈ ಕಳ್ಳರ ಗ್ಯಾಂಗ್ ಅಟ್ಟಹಾಸ ಮೆರೆದಿದ್ದು, ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬೆಳಗಾವಿಯ ಹನುಮಾನ ನಗರದ ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೆಟ್ರೋಲ್ ಕಳ್ಳರ ಗ್ಯಾಂಗ್ ಒಂದು ಸರಣಿ ಕಳ್ಳತನಕ್ಕೆ ಯತ್ನಿಸಿ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಪೆಟ್ರೋಲ್ …

Read More »

ಅವರ ತಂದೆ ಕಾರಣಕ್ಕೆ ಪ್ರಿಯಾಂಕ ಖರ್ಗೆ ಮಂತ್ರಿಯಾಗಿದ್ದಾರೆ;ಮಾಜಿ ಡಿಸಿಎಂ ಈಶ್ಚರಪ್ಪ

ಕಲಬುರಗಿ: ಪ್ರಿಯಾಂಕ್ ಖರ್ಗೆ ಇನ್ನೂ ಎಳಸು, ಅವರ ತಂದೆ ಕಾರಣಕ್ಕೆ ಮಂತ್ರಿಯಾಗಿದ್ದಾರೆ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಅವರು, ಯಾಕೆ ಈ ಸರ್ಕಾರಕ್ಕೆ ಹಿಂದುಳಿದವರು, ದಲಿತರು ನೆನಪಿಗೆ ಬರಲಿಲ್ವಾ? ಈ ಸರ್ಕಾರ ಕೇವಲ ಮುಸ್ಲಿಮರಿಗೋಸ್ಕರ ಇದ್ದೀವಿ ಅನ್ನೋ ಥರ ಇದ್ದಾದೆ. ಪ್ರಿಯಾಂಕ್ ಖರ್ಗೆ ಆರ್‌ಎಸ್‌ಎಸ್ ಬ್ಯಾನ್ ಮಾಡೇ ಬಿಡುತ್ತೇವೆ ಅನ್ನೋ ರೀತಿ ಮಾತನಾಡ್ತಾರೆ. ಪ್ರಿಯಾಂಕ್ ಖರ್ಗೆ ಇನ್ನೂ ಎಳಸು, ಅವರಪ್ಪನ ಕಾರಣಕ್ಕೆ ಮಂತ್ರಿಯಾಗಿದ್ದಾರೆ. ಇಂದಿರಾ, …

Read More »