Breaking News
Home / ಜಿಲ್ಲೆ (page 49)

ಜಿಲ್ಲೆ

65 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ದೇವಸ್ಥಾನಗಳಲ್ಲಿ ನೇರ ದರ್ಶನ ವ್ಯವಸ್ಥೆ : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

ಬೆಂಗಳೂರು : ತಿರುಪತಿ – ತಿರುಮಲದ ಮಾದರಿಯಂತೆ ಇನ್ನು ಮುಂದೆ ರಾಜ್ಯದ ಮುಜರಾಯಿ ಇಲಾಖೆಯ ವ್ಯಾಪ್ತಿಗೆ ಬರುವ ಎ ಹಾಗೂ ಬಿ ಶ್ರೇಣಿಯ ದೇವಸ್ಥಾನಗಳಲ್ಲಿ 65 ವರ್ಷಕ್ಕಿಂತ ಮೇಲ್ಪಟ್ಟ ನಾಗರೀಕರು ಸರತಿಯಲ್ಲಿ ನಿಂತು ದೇವರ ದರ್ಶನ ಪಡೆಯುವ ಅಗತ್ಯವಿಲ್ಲ. ನೇರವಾಗಿ ದೇವರ ದರ್ಶನ ಪಡೆಯಲು ಅನುಕೂಲವಾಗುವಂತೆ ಹೊಸ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. ಹಿರಿಯ ನಾಗರೀಕರ ಬಹುದಿನಗಳ ಬೇಡಿಕೆಯಂತೆ 65 ವರ್ಷಕ್ಕಿಂತ ಮೇಲ್ಪಟ್ಟವರು ಎ ಹಾಗೂ ಬಿ ಶ್ರೇಣಿಯ ದೇವಸ್ಥಾನಗಳಲ್ಲಿ ನೇರ ದರ್ಶನಕ್ಕೆ …

Read More »

ವಿಜಯಪುರದಲ್ಲಿ ಸರಣಿ ಅಪಘಾತ.. ಇಬ್ಬರು ಸಾವು, ಐವರಿಗೆ ಗಂಭೀರ ಗಾಯ

ವಿಜಯಪುರ : ಕೆಎಸ್‌ಆ​ರ್‌ಟಿಸಿ ಬಸ್, ಲಾರಿ ಹಾಗೂ ಆಟೋ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿ, ಐವರು ಗಂಭೀರ ಗಾಯಗೊಂಡಿರುವ ಘಟನೆ ವಿಜಯಪುರ ತಾಲೂಕಿನ ಹಡಗಲಿ-ಕಗ್ಗೋಡ ಗ್ರಾಮದ ಬಳಿ ಇಂದು ಮಧ್ಯಾಹ್ನ ನಡೆದಿದೆ. ಅಪಘಾತದಲ್ಲಿ ಬಸ್​ನಲ್ಲಿ ಪ್ರಯಾಣಿಸುತ್ತಿದ್ದ ಜಾಲವಾದಿ ಗ್ರಾಮದ ಬಾಬುಸಾಹೇಬ ಮಕಾನದಾರ (50) ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನೋರ್ವನ ಗುರುತು ಪತ್ತೆಯಾಗಿಲ್ಲ. ಘಟನೆಯಲ್ಲಿ ಐವರಿಗೆ ಗಂಭೀರ ಗಾಯಗಳಾಗಿದ್ದು, ವಿಜಯಪುರ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಅಥಣಿಯಿಂದ ಗಾಣಗಾಪುರಕ್ಕೆ ತೆರಳುತ್ತಿದ್ದ ಬಸ್​ಗೆ …

Read More »

ನಿಧಾನವಾಗಿ ಚುರುಕುಗೊಂಡ ಮುಂಗಾರು; ರಾಜ್ಯದ ಹಲವೆಡೆ ಮಳೆ

ಬೆಂಗಳೂರು : ಆಕಾಶದತ್ತ ಮುಖ ಮಾಡಿ ಕುಳಿತಿದ್ದ ರೈತರ ಮುಖದಲ್ಲೀದ ಸಂತಸ ಮೂಡಿದೆ. ನಿಧಾನವಾಗಿ ಮುಂಗಾರು ಚುರುಕುಗೊಳ್ಳುತ್ತಿದೆ. ರಾಜ್ಯದ ಹಲವೆಡೆ ಬಿರುಸಾಗಿ ಮಳೆಯಾಗುತ್ತಿದೆ. ಬಿಪೊರ್‌ಜಾಯ್ ಚಂಡಮಾರುತವು ತೇವಾಂಶ ಭರಿತಮೋಡಗಳನ್ನು ಸೆಳೆದುಕೊಂಡಿದ್ದು ದುರ್ಬಲಗೊಂಡಿದ್ದ ಮುಂಗಾರು ಮಾರುತಗಳು ಈಗ ರಾಜ್ಯಾದ್ಯಂತ ಆವರಿಸುತ್ತಿವೆ. ಮಲೆನಾಡು, ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮಾರುಗಳು ತುಸು ಪ್ರಬಲಗೊಂಡಿದ್ದು ಮೋಡ ಕವಿದ ವಾತಾವರಣದೊಂದಿಗೆ ಅಗಾಗ್ಗೆ ಮಳೆಯಾಗುತ್ತಿದೆ. ಅರಬ್ಬಿ ಸಮುದ್ರದಲ್ಲಿ ಮುಂಗಾರು ಇನ್ನಷ್ಟು ಮುನ್ನಡೆಯಲು ಪೂರಕ ವಾತಾವರಣ ಉಂಟಾಗಿರುವ ಹಿನ್ನೆಲೆಯಲ್ಲಿ ಉತ್ತರ ಒಳನಾಡಿಗೂ …

Read More »

ಪಿಎಸ್‌ಐ ನೇಮಕಾತಿ ಅಕ್ರಮದ 52 ಆರೋಪಿ ಅಭ್ಯರ್ಥಿಗಳು ಡಿಬಾರ್ : ಉಳಿದ ಅಭ್ಯರ್ಥಿಗಳಿಗೆ ಹೊಸ ಭರವಸೆ

ಬೆಂಗಳೂರು: ರಾಜ್ಯದಲ್ಲಿ ಭಾರಿ ವಿವಾದಕ್ಕೆ ಕಾರಣವಾಗಿದ್ದ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಹಗರಣದ 52 ಜನ ಆರೋಪಿತ ಅಭ್ಯರ್ಥಿಗಳನ್ನು ಪರೀಕ್ಷೆಯಿಂದ ಶಾಶ್ವತವಾಗಿ ಡಿಬಾರ್ ಮಾಡಿ ಪೊಲೀಸ್ ನೇಮಕಾತಿ ವಿಭಾಗ ಮಂಗಳವಾರ ಆದೇಶ ಪ್ರಕಟಿಸಿದೆ. ಆದ್ದರಿಂದ ಉಳಿದ ಅಭ್ಯರ್ಥಿಗಳಿಗೆ ನೌಕರಿ ಸಿಗುವ ವಿಶ್ವಾಸ ಮೂಡಿದ್ದು, ಪ್ರಕರಣದ ತೀರ್ಪಿನ ಮೇಲೆ ಅವಲಂಬನೆಯಾಗಲಿದೆ. ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ನೇಮಕಾತಿ ಲಿಖಿತ ಪರೀಕ್ಷೆಯಲ್ಲಿ ನಡೆದಿದ್ದ ಅಕ್ರಮದಲ್ಲಿ ಭಾಗಿಯಾದ ಆರೋಪಿಗಳ ವಿರುದ್ಧ ತನಿಖೆ ನಡೆಸಿದ್ದ ಸಿಐಡಿ ಅಧಿಕಾರಿಗಳು 52 …

Read More »

ಆಸ್ಪತ್ರೆಯಲ್ಲಿರುವ ಪತ್ನಿ ಆರೋಗ್ಯ ವಿಚಾರಿಸಿ, ದಿಲ್ಲಿಗೆ ಪ್ರಯಾಣ ಬೆಳೆಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಪತ್ನಿ ಅನಾರೋಗ್ಯದಿಂದ ಆಸ್ಪತ್ರೆ ಸೇರಿರುವ ಹಿನ್ನೆಲೆ ಅವರ ಆರೋಗ್ಯ ವಿಚಾರಿಸಿದ ಬಳಿಕ ಸಿಎಂ ಸಿದ್ದರಾಮಯ್ಯ ದೆಹಲಿ ಪ್ರಯಾಣ ಬೆಳೆಸಿದ್ದಾರೆ. ಪಕ್ಷದ ಹೈಕಮಾಂಡ್‌ ನಾಯಕರ ಭೇಟಿಗಾಗಿ ಸಿದ್ದರಾಮಯ್ಯ ನಿನ್ನೆಯೇ ತೆರಳಬೇಕಿತ್ತು. ಆದರೆ ನಿನ್ನೆ ವಿವಿಧ ಕಾರ್ಯಕ್ರಮ ಎದುರಾದ ಹಿನ್ನೆಲೆ ಇಂದಿಗೆ ಮುಂದೂಡಿದ್ದರು. ಬೆಳಗ್ಗೆ ಪ್ರಯಾಣ ಬೆಳೆಸಬೇಕಿತ್ತು. ಆದರೆ ತೀವ್ರ ಜ್ವರದ ಕಾರಣ ನಿನ್ನೆ ರಾತ್ರಿ ಸಿಎಂ ಪತ್ನಿ ಪಾರ್ವತಿ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪಾರ್ವತಿ ಸಿದ್ದರಾಮಯ್ಯ …

Read More »

ಯೋಗದಲ್ಲಿ ಸಾಧನೆ ಮೆರೆಯುತ್ತಿದ್ದಾರೆ. ಈ ಯೋಗಪಟು ಪಕ್ಕಾ ಹಳ್ಳಿ ಹೈದ.

ಬೆಳಗಾವಿ: ಇಂದು ವಿಶ್ವ ಯೋಗ ದಿನ. ಈ ದಿನ ಓರ್ವ ಅಪರೂಪದ ಯೋಗ ಸಾಧಕಈ ಯೋಗಪಟು ಪಕ್ಕಾ ಹಳ್ಳಿ ಹೈದ. ಇವರು 85ಕ್ಕೂ‌ ಅಧಿಕ ಆಸನಗಳನ್ನು ಹಾಕುವ ಮೂಲಕ ಯೋಗದಲ್ಲಿ ಸಾಧನೆ ಮೆರೆಯುತ್ತಿದ್ದಾರೆ. ಯೋಗಕ್ಕೆ ಯಾವುದೇ ಜಾತಿ – ಧರ್ಮದ ಬಂಧನವಿಲ್ಲ. ಸತತ ಪರಿಶ್ರ ಮ, ತಾಳ್ಮೆ, ಆಸಕ್ತಿ ಮತ್ತು ಶ್ರದ್ಧೆಯಿದ್ದರೆ ಸಾಕು. ಸವದತ್ತಿ ತಾಲೂಕಿನ ಉಗರಗೋಳ ಗ್ರಾಮದ ಬುಡನ್ ಮಲ್ಲಿಕ್ ಹೊಸಮನಿ (31) ಅವರು ಯಾವುದೇ ಗುರುವಿನ ಸಹಾಯ ಇಲ್ಲದೇ …

Read More »

ಕಾಂಗ್ರೆಸ್​ನವರು ಹತ್ತಲ್ಲ 15 ಕೆ.ಜಿ ಅಕ್ಕಿ ಕೊಡಬೇಕು: ಶಶಿಕಲಾ ಜೊಲ್ಲೆ

ಚಿಕ್ಕೋಡಿ (ಬೆಳಗಾವಿ): ಕಾಂಗ್ರೆಸ್ ನಾಯಕರು ಚುನಾವಣೆಯ ಸಂದರ್ಭದಲ್ಲಿ ಬಿಪಿಎಲ್ ಕಾರ್ಡ್​ದಾರರ ಪ್ರತಿಯೊಬ್ಬರಿಗೆ 10 ಕೆಜಿ ಅಕ್ಕಿಯನ್ನು ವಿತರಣೆ ಮಾಡಲಾಗುವುದೆಂದು ಗ್ಯಾರಂಟಿ ಕಾರ್ಡ್​ಗಳನ್ನು ನೀಡಿದ್ದಾರೆ. ಆದರೆ ಆ ಭರವಸೆಗಳನ್ನು ಅವರಿಗೆ ಈಡೇರಿಸಲು ಆಗುತ್ತಿಲ್ಲ. ತಮ್ಮ ತಪ್ಪನ್ನು ಮುಚ್ಚಿಕೊಳ್ಳಲು ಕೇಂದ್ರ ಸರ್ಕಾರದ ಮೇಲೆ ಆರೋಪ ಹಾಕಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಕಾಂಗ್ರೆಸ್​ ಪಕ್ಷದ ಈ ಪ್ರತಿಭಟನೆ ಖಂಡಿಸುತ್ತೇವೆ ಎಂದು ಮಾಜಿ ಸಚಿವೆ ಹಾಗೂ ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ಹೇಳಿದರು. ಬೆಳಗಾವಿ ಜಿಲ್ಲೆಯ …

Read More »

ಬೈಕನಲ್ಲಿ ಇಟ್ಟಿದ 2 ಲಕ್ಷ ರೂ. ಕಳ್ಳತನಮಾಡಿ ಫರಾರಿ

ಬೈಕನಲ್ಲಿ ಇಟ್ಟಿದ 2 ಲಕ್ಷ ರೂ. ಕಳ್ಳತನಮಾಡಿ ಫರಾರಿ ಗೋಕಾಕದಲ್ಲಿ ಘಟನೆ ಗೋಕಾಕ: ಬೈಕನಲ್ಲಿ ಇಟ್ಟಿದ ಹಣ ಕಳ್ಳವು ಮಾಡಿ ಫರಾರಿಯಾದ ಘಟನೆ ನಗರದ ಬ್ಯಾಳಿ ಕಾಟ ಹತ್ತಿರ ನಡೆದಿದೆ. ಇಂದು ಮಧ್ಯಾಹ್ನ ಭೀಮಪ್ಪ ಗೋಸಬಾಳ ಎಂಬುವವರ ಕೋರ್ಟ್ ಸರ್ಕಲ್ ನಲ್ಲಿ ಇರುವ ಕೆನರಾ ಬ್ಯಾಂಕ್ ನಿಂದ್ 2 ಲಕ್ಷ ಹಣವನ್ನು ತೆಗೆದುಕೊಂಡು ಬೈಕ್ ವಾಹನದ ಮೇಲೆ ಇಟ್ಟಿದ್ದ ನಂತರ ನೀರು ಕುಡಿಯುವ ವೇಳೆ 2 ಲಕ್ಷ ನಗದು ಬ್ಯಾಳಿ …

Read More »

ಬಸ್ ಏರುವಾಗ ಬಾಲಕಿ ಜಾರಿ ಬಿದ್ದು ಗಾಯ

ಬೆಳಗಾವಿ : ಕಳೆದ ಒಂದು ವಾರದಿಂದ ರಾಜ್ಯದಾದ್ಯಂತ ಆರಂಭವಾಗಿರುವ ಶಕ್ತಿ ಯೋಜನೆಗೆ ವ್ಯಾಪಕ ಸ್ಪಂದನೆ ದೊರೆಯುತ್ತಿರುವ ಜೊತೆಗೆ ಕೆಲವು ಅವಾಂತರಗಳಿಗೆ ಈ ಯೋಜನೆ ಕಾರಣವಾಗಿ ಜನರ ಕೆಂಗಣ್ಣಿಗೆ ಗುರಿಯಾಗುತ್ತಿದೆ. ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ ಭಾನುವಾರ ಸಂಚರಿಸುತ್ತಿದ್ದ ಸಾರಿಗೆ ಸಂಸ್ಥೆಯ ಬಸ್ ಏರುವಾಗ ಬಾಲಕಿಯೊಬ್ಬಳು ಜಾರಿ ಬಿದ್ದು ಗಾಯಗೊಂಡ ಘಟನೆ ನಡೆದಿದೆ. ರಾಮದುರ್ಗ-ಧಾರವಾಡ ಮಾರ್ಗವಾಗಿ ಸಂಚರಿಸುತ್ತಿದ್ದ ಬಸ್ ಪ್ರಯಾಣಿಕರಿಂದ ತುಂಬಿತ್ತು.ಬಾಲಕಿ ಕೂಡ ಅದೇ ಬಸ್ ಏರುತ್ತಿದ್ದಳು. ಈ ವೇಳೆ ಆಕೆ ಆಯತಪ್ಪಿ …

Read More »

ನೀರು ಬಿಡುವ ವಿಚಾರವಾಗಿ ಮಹಾರಾಷ್ಟ್ರ ಸಿಎಂ ಜತೆ ಮಾತನಾಡುತ್ತೇನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ನೀರು ಬಿಡುವುದಕ್ಕೆ ರೈತರಿಂದ ವ್ಯಕ್ತವಾಗಿರುವ ವಿರೋಧ ವಿಚಾರವಾಗಿ ಅಲ್ಲಿನ ಸರ್ಕಾರದ ಜತೆ ಮಾತನಾಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕರ್ನಾಟಕಕ್ಕೆ ನೀರು ಬಿಡಲು ಮಹಾರಾಷ್ಟ್ರ ರೈತರ ವಿರೋಧ ವಿಚಾರ ಕೇಳಿದ ಪ್ರಶ್ನೆಗೆ ಉತ್ತರಿಸಿ, ಈ ವಿಚಾರವಾಗಿ ಮಹಾರಾಷ್ಟ್ರದ ರೈತರ ಜೊತೆ ಮಾತನಾಡೋಕೆ ಆಗುತ್ತಾ? ಮಹಾರಾಷ್ಟ್ರ ಸಿಎಂ ಜೊತೆ ಮಾತನಾಡುತ್ತೇನೆ ಎಂದರು. ಇದೇ ವೇಳೆ, ಮಹದಾಯಿ ವಿಷಯದಲ್ಲಿ ಗೋವಾ …

Read More »