ಸಿಲಿಕಾನ್ ಸಿಟಿಯಲ್ಲಿ ನಕಲಿ ನಂಬರ್ ಪ್ಲೇಟ್ ಅಳವಡಿಸಿಕೊಂಡು ವಾಹನ ಚಲಾಯಿಸುವರ ಹಾವಳಿ ಹೆಚ್ಚಾಗಿಯೇ ಇದೆ. ಅದು ರಸ್ತೆ ತೆರಿಗೆಯಿಂದ ಪಾರಾಗಲು ಅಥವಾ ಕದ್ದ ವಾಹನಗಳಿಗೆ ನಕಲಿ ನಂಬರ್ ಪ್ಲೇಟ್ ಹಾಕಿಕೊಂಡು ಬಳಸುತ್ತಿದ್ದಾರೆ. ಇಂತಹ ವಾಹನಗಳನ್ನು ಪತ್ತೆ ಮಾಡಲು ಸಂಚಾರ ಪೊಲೀಸರು ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಒಳಗೊಂಡಿರುವ ಸಿಸಿ ಕ್ಯಾಮರಾಗಳನ್ನು ಪ್ರಮುಖ ಜಂಕ್ಷನ್‌ಗಳಲ್ಲಿ ಅಳವಡಿಸಿದ್ದಾರೆ. ಶಂಕಾಸ್ಪದ ವಾಹನಗಳು ಈ ಕ್ಯಾಮರಾದಲ್ಲಿ ಸೆರೆಯಾದರೆ ಕೂಡಲೇ ಟ್ರಾಫಿಕ್ ಪೊಲೀಸರಿಗೆ ಮಾಹಿತಿ ಹೋಗಲಿದೆ. ಇಂತಹ ತಂತ್ರಜ್ಞಾನ …
Read More »40% ಕಮಿಷನ್ ಆರೋಪ: ಮಾಹಿತಿ ನೀಡಲು ಗುತ್ತಿಗೆದಾರರ ಸಂಘಕ್ಕೆ ಪ್ರಧಾನಿ ಕಾರ್ಯಾಲಯದ ಕರೆ
ಬೆಂಗಳೂರು: ಇತ್ತೀಚೆಗೆ ರಾಜ್ಯ ರಾಜಕಾರಣದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದ್ದ 40% ಕಮಿಷನ್ ಆರೋಪ ಇದೀಗ ಮತ್ತೊಂದು ತಿರುವು ಪಡೆದಿದೆ. ಈ ಬಗ್ಗೆ ಸ್ವತಃ ಪ್ರಧಾನಿ ಕಾರ್ಯಾಲಯ ಮಾಹಿತಿ ಕೇಳಿದ್ದು, ಹಲವರಿಗೆ ನಡುಕ ಶುರುವಾಗಿದೆ. 40% ಕಮೀಷನ್ ಆರೋಪ ಮಾಡಿದ್ದ ಕಂಟ್ರಾಕ್ಟರ್ ಅಸೋಸಿಯೇಷನ್ ಅಧ್ಯಕ್ಷ ಕೆಂಪಣ್ಣಗೆ ಮಾಹಿತಿ ನೀಡಲು ಪ್ರಧಾನಿ ಕಚೇರಿಯಿಂದ ಸೂಚನೆ ಬಂದಿದೆ. ನಮ್ಮ ಅಧಿಕಾರಿಗಳು ಸಂಪರ್ಕಿಸುತ್ತಾರೆ. ಭ್ರಷ್ಟಾಚಾರದ ದಾಖಲೆ ನೀಡುವಂತೆ ಪ್ರಧಾನಿ ಕಚೇರಿಯಿಂದ ಕರೆ ಮಾಡಲಾಗಿದೆ ಎನ್ನಲಾಗಿದೆ. ಮೋದಿ …
Read More »ರಾಜ್ಯ ರಾಜಧಾನಿಯಲ್ಲಿ ಬೆಳ್ಳಂಬೆಳಿಗ್ಗೆ ಘರ್ಜಿಸಿದ ಜೆಸಿಬಿ; 100 ಕೋಟಿ ರೂ. ಮೌಲ್ಯದ ಬಿಡಿಎ ಆಸ್ತಿ ವಶ
ಬೆಂಗಳೂರು: ಇಂದು ಬೆಳ್ಳಂಬೆಳಿಗ್ಗೆ ಬಿಡಿಎ ಅಧಿಕಾರಿಗಳು ಜೆಸಿಬಿಗಳನ್ನು ಬಳಸಿ ಬಿಡಿಎಗೆ ಸೇರಿದ ಜಾಗದಲ್ಲಿ ನಿರ್ಮಿಸಲಾಗಿದ್ದ 15 ಕ್ಕೂ ಹೆಚ್ಚು ವಾಣಿಜ್ಯ ಮಳಿಗೆಗಳು ಮತ್ತು ಶೆಡ್ ಗಳನ್ನು ತೆರವುಗೊಳಿಸಿ ಸುಮಾರು 100 ಕೋಟಿ ರೂ. ಮೌಲ್ಯದ ಒಂದೂಕಾಲು ಎಕರೆ ಜಾಗವನ್ನು ವಶಕ್ಕೆ ಪಡೆದಿದ್ದಾರೆ. ಎಚ್ ಬಿ ಆರ್ ಬಡಾವಣೆಯ 2 ನೇ ಹಂತದ ನಾಗವಾರದಲ್ಲಿ ಬಿಡಿಎ ಸ್ವಾಧೀನಪಡಿಸಿಕೊಂಡ ಸರ್ವೆ ನಂಬರ್ 75 ರ ಒಂದೂಕಾಲು ಎಕರೆ ಜಾಗವನ್ನು ಬಿಟ್ಟುಕೊಡದೇ ಭೂಮಾಲೀಕರು ಆ ಜಾಗದಲ್ಲಿ …
Read More »ಭೂತರಾಮನ ಹಟ್ಟಿಯಲ್ಲಿರುವ ಸರ್ಕಾರಿ ಶಾಲೆಯೊಂದು ಕಾನ್ವೆಂಟ್ ಶಾಲೆಯಂತೆ ಆಕರ್ಷಿತವಾಗಿದೆ.
ಬೆಳಗಾವಿ: ಸರ್ಕಾರಿ ಶಾಲೆ ಎಂದು ಅಸಡ್ಡೆ ಮಾಡುವ ಜನರ ಮಧ್ಯೆ ಬೆಳಗಾವಿಯ ಭೂತರಾಮನ ಹಟ್ಟಿಯಲ್ಲಿರುವ ಸರ್ಕಾರಿ ಶಾಲೆಯೊಂದು ಕಾನ್ವೆಂಟ್ ಶಾಲೆಯಂತೆ ಆಕರ್ಷಿತವಾಗಿದೆ. ಈ ಸರ್ಕಾರಿ ಶಾಲೆಗೆ ವರ್ಷದಿಂದ ವರ್ಷಕ್ಕೆ ಪ್ರವೇಶ ಪಡೆಯುವ ಮಕ್ಕಳ ಸಂಖ್ಯೆಯು ಗಣನೀಯವಾಗಿ ಹಚ್ಚುತ್ತಿದೆ . ಬೆಳಗಾವಿಯಿಂದ (Belagavi News) ಸುಮಾರು 8 ಕಿ . ಮಿ ದೂರದಲ್ಲಿರುವ ಭೂತರಾಮನಹಟ್ಟಿ ಗ್ರಾಮದಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆಯು (Government Primary School) ಈ ಭಾಗದ ಪಾಲಕರ ಪಾಲಿನ ನೆಚ್ಚಿನ …
Read More »ಬೆಳಗಾವಿ ಬಳಿ ಕ್ರೂಸರ್ ಪಲ್ಟಿ ಪ್ರಕರಣ: ಮೃತರ ಸಂಖ್ಯೆ 8ಕ್ಕೆ ಏರಿಕೆ
ಬೆಳಗಾವಿ: ಬೆಳಗಾವಿ ತಾಲೂಕಿನ ಕಲ್ಯಾಳ್ ಸೇತುವೆ ಬಳಿ ಭಾನುವಾರ ಸಂಭವಿಸಿದ್ದ ಭೀಕರ ಅಪಘಾತ ಪ್ರಕರಣದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮತ್ತೋರ್ವ ಕಾರ್ಮಿಕ ಮೃತಪಟ್ಟಿದ್ದಾರೆ. ಈ ಮೂಲಕ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 8ಕ್ಕೆ ಏರಿದೆ. ಕಿರಣ್ ಅಶೋಕ್ ಕಳಸಣ್ಣವರ್ ಮೃತ ಕಾರ್ಮಿಕ. ಮೃತ ಕಿರಣ್ ಗೋಕಾಕ್ ತಾಲೂಕಿನ ಅಕ್ಕತಂಗೇರಹಾಳ ಗ್ರಾಮದ ನಿವಾಸಿಯಾಗಿದ್ದಾರೆ. ಭಾನುವಾರ ಬೆಳಗ್ಗೆ ಕಳ್ಯಾಳ್ ಸೇತುವೆ ಬಳಿ ಕ್ರೂಸರ್ ಪಲ್ಟಿಯಾಗಿ ಭೀಕರ ಅಪಘಾತ ನಡೆದಿತ್ತು. ಸ್ಥಳದಲ್ಲೇ 7 ಮಂದಿ ಕಾರ್ಮಿಕರು ಮೃತಪಟ್ಟು, 14 …
Read More »ಬೆಳಗಾವಿ ಡಿಸಿ ಕಚೇರಿಗೆ ಶಕ್ತಿದೇವತೆ, ಯಲ್ಲಮ್ಮ ದೇವಿಯ ಮೂರ್ತಿಯನ್ನು ಹೊತ್ತುಕೊಂಡುಬಂದ ಜೋಗತಿಯರು
ಉತ್ತರಕರ್ನಾಟಕದ ಶಕ್ತಿದೇವತೆ, ಲಕ್ಷಾಂತರ ಭಕ್ತರ ಪಾಲಿನ ಆರಾಧ್ಯ ದೇವಿ ಸವದತ್ತಿಯ ಶ್ರೀ ರೇಣುಕಾ ಯಲ್ಲಮ್ಮ ದೇವಿಯ ಸುಕ್ಷೇತ್ರದಲ್ಲಿನ ಅವ್ಯವಸ್ಥೆಯನ್ನು ಖಂಡಿಸಿ ಜೋಗತಿಯರು ಬೆಳಗಾವಿ ಡಿಸಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ತಲೆ ಮೇಲೆ ಸವದತ್ತಿ ಯಲ್ಲಮ್ಮ ದೇವಿಯ ಮೂರ್ತಿಯನ್ನು ಹೊತ್ತುಕೊಂಡು ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಜೋಗತಿಯರು ಯಲ್ಲಮ್ಮ ಗುಡ್ಡದಲ್ಲಿನ ಅವ್ಯವಸ್ಥೆಯ ವಿರುದ್ಧ ಅಸಮಾಧಾನ ಹೊರ ಹಾಕಿದರು. ಜಿಲ್ಲಾಡಳಿತ ಮತ್ತು ದೇವಸ್ಥಾನದ ಆಡಳಿತ ಮಂಡಳಿ ವಿರುದ್ಧ ತೀವ್ರ …
Read More »ಪೀರನವಾಡಿಯಲ್ಲಿ ವರ್ಷದೊಳಗೆ ಬಯಲು ರಂಗಮಂದಿರ ನಿರ್ಮಾಣ: ಶಾಸಕ ಅಭಯ ಪಾಟೀಲ ಭರವಸೆ
ಬೆಳಗಾವಿ: ‘ನೂತನ ಗಾಂಧಿ ಭವನ ಆವರಣದಲ್ಲಿ ಒಂದು ವರ್ಷದೊಳಗೆ ಬಯಲು ರಂಗಮಂದಿರ ಮತ್ತು ಡಿಜಿಟಲ್ ಲೈಬ್ರರಿ ನಿರ್ಮಿಸಲಾಗುವುದು’ ಎಂದು ದಕ್ಷಿಣ ಶಾಸಕ ಅಭಯ ಪಾಟೀಲ ಭರವಸೆ ನೀಡಿದರು. ತಾಲ್ಲೂಕಿನ ಪೀರನವಾಡಿಯಲ್ಲಿ ಸೋಮವಾರ ನಡೆದ ಗಾಂಧಿ ಭವನ ಉದ್ಘಾಟನಾ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ‘ಬೆಳಗಾವಿಯಲ್ಲಿ ನಡೆದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಧಿವೇಶನದಲ್ಲಿ ಮಹಾತ್ಮ ಗಾಂಧೀಜಿ ಅಧ್ಯಕ್ಷತೆ ವಹಿಸಿದ್ದರು. ಆ ಐತಿಹಾಸಿಕ ಕ್ಷಣಕ್ಕೆ 100 ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಈ …
Read More »ಶಾಸಕ ಶ್ರೀಮಂತ ಪಾಟೀಲ 1.50 ಕೋಟಿರೂ ವೆಚ್ಚದ ರಸ್ತೆಕಾಮಗಾರಿಗೆ ಚಾಲನೆ
ಕಾಗವಾಡತಾಲೂಕಿನ ಮಂಗಸೂಳಿ- ಮೋಳೆ ಮಾರ್ಗದಲ್ಲಿರಸ್ತೆ ನಿರ್ಮಾಣಕಾಮಗಾರಿಗೆಶಾಸಕ ಶ್ರೀಮಂತ ಪಾಟೀಲರು ಚಾಲನೆಯನ್ನು ನೀಡಿದರು. ಮಂಗಸೂಳಿ- ಮೋಳೆ ಮಾರ್ಗದಲ್ಲಿಹದಗೆಟ್ಟ ಹೋದರಸ್ತೆ ಅಭಿವೃದ್ಧಿಗೊಳಿಸಲು ರಾಜ್ಯ ಸರ್ಕಾರದ ಲೋಕೋಪಯೋಗಿಇಲಾಖೆಯ ಲೆಕ್ಕ ಶಿರ್ಷಿಕೆ 5054 ಯೋಜನೆಅಡಿಯಲ್ಲಿ 1.50 ಕೋಟಿರೂ ವೆಚ್ಚದಲ್ಲಿರಸ್ತೆಅಭಿವೃದ್ಧಿಕಾಮಗಾರಿಗೆ ಶಾಸಕ ಶ್ರೀಮಂತ ಪಾಟೀಲರುಇಂದು ಸೋಮವಾರದಂದುಪೂಜೆ ಸಲ್ಲಿಸಿ ಚಾಲನೆ ನೀಡಿದರು. ಈ ವೇಳೆ ಮಾತನಾಡಿದಆವರುಕಳೆದ ಅನೇಕ ವರ್ಷಗಳಿಂದ ಈ ಮಾರ್ಗದರಸ್ತೆ ಅಭಿವೃದ್ಧಿಗೊಳಿಸಲು ರೈತರು ಕೇಳಿಕೊಂಡಿದ್ದರು, ಅದನ್ನುಗಮನದಲ್ಲಿತೆಗೆದುಕೊಂಡು 1.50 ಕೋಟಿರೂ.ಅನುದಾನ ಮಂಜೂರುಗೊಳಿಸಿ ಕಾಮಗಾರಿ ಪ್ರಾರಂಭಿಸಲಾಗುತ್ತಿದೆಎಂದರು. ಸರ್ಕಾರದಅನುದಾನ ಬಳಸಿ …
Read More »ಚಿಕ್ಕೋಡಿ ಪಟ್ಟಣದಲ್ಲಿ ಕೇಂದ್ರ ಸರ್ಕಾರದ ಅಗ್ನಿಪಥ ಯೋಜನೆಯನ್ನು ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಯುವಕರು ಪ್ರತಿಭಟನೆ
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ಕೇಂದ್ರ ಸರ್ಕಾರದ ಅಗ್ನಿಪಥ ಯೋಜನೆಯನ್ನು ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಯುವಕರು ಪ್ರತಿಭಟನೆ ನಡೆಸಿದರು. ಚಿಕ್ಕೋಡಿ ಪಟ್ಟಣದ ನಾಗರಮುನ್ನೋಳಿ ಬ್ಲಾಕ್ ಕಾಂಗ್ರೆಸ್ ಕಚೇರಿಯಿಂದ ಪ್ರಾರಂಭವಾದ ಪ್ರತಿಭಟನೆಯು ಬಸವ ವೃತ್ತದ ಮೂಲಕ ಸಾಗಿತು. ಪ್ರತಿಭಟನೆ ಉದ್ದಕೂ ಕಾಂಗ್ರೆಸ್ ಕಾರ್ಯಕರ್ತರು, ಯುವಕರು ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರವನ್ನು ಕೂಗುತ್ತಾ ತಮ್ಮ ಆಕ್ರೋಶವನ್ನು ಹೊರಹಾಕಿದರು. ನಂತರ ಉಪವಿಭಾಗಧಿಕಾರಿ ಸಂತೋಷ ಕಾಮಗೌಡರ ಮೂಲಕ ರಾಷ್ಟ್ರಪತಿಗಳಿಗೆ ಮನವಿಯನ್ನು ಸಲ್ಲಿಸಿ ಅಗ್ನಿಪಥ ಯೋಜನೆಯನ್ನು …
Read More »ತಕ್ಷಣವೇ ಮೇಯರ್-ಉಪಮೇಯರ್ ಚುನಾವಣೆ ನಡೆಸುವಂತೆ 15ಕ್ಕೂ ಹೆಚ್ಚು ನಗರಸೇವಕರ ಆಗ್ರಹ
ಬೆಳಗಾವಿ ಮಹಾನಗರ ಪಾಲಿಕೆಗೆ ಚುನಾವಣೆ ನಡೆದು 8 ತಿಂಗಳು ಕಳೆಯುತ್ತಾ ಬಂದ್ರೂ ಕೂಡ ಇನ್ನು ಮೇಯರ್-ಉಪಮೇಯರ್ ಆಯ್ಕೆಯಾಗಿಲ್ಲ. ಇದರಿಂದ ವಾರ್ಡಗಳಲ್ಲಿ ಯಾವುದೇ ಕೆಲಸಗಳು ನಡೆಯುತ್ತಿಲ್ಲ. ಹೀಗಾಗಿ ತಕ್ಷಣವೇ ಮೇಯರ್-ಉಪಮೇಯರ್ ಚುನಾವಣೆ ನಡೆಸುವಂತೆ 15ಕ್ಕೂ ಹೆಚ್ಚು ನಗರಸೇವಕರು ಆಗ್ರಹಿಸಿದ್ದಾರೆ. ಹೌದು ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ನಗರಸೇವಕರಾಗಿ ಆಯ್ಕೆಯಾಗಿ 8 ತಿಂಗಳು ಆಗುತ್ತಾ ಬಂದಿದೆ. ಆದರೂ ಕೂಡ ಮೇಯರ್-ಉಪಮೇಯರ್ ಚುನಾವಣೆ ನಡೆದಿಲ್ಲ. ನಗರಸೇವಕರಾಗಿ ಆಯ್ಕೆಯಾದರೂ ಇವರಿಗೆ ಯಾವುದೇ ರೀತಿ ಕಾನೂನು ಬದ್ಧ ಅಧಿಕಾರ …
Read More »
Laxmi News 24×7