ಬೆಳಗಾವಿ: ವೈದ್ಯಕೀಯ ವಿಜ್ಞಾನ ಮಹಾವಿದ್ಯಾಲಯದಲ್ಲಿ 12 ರಿಂದ 14 ವರ್ಷದ ಮಕ್ಕಳಿಗೆ ಕೋವಿಡ್-19ರ ಲಸಿಕಾಕರಣದ ಕಾರ್ಯಕ್ರಮದಡಿ ಕಾರ್ಬಿವ್ಯಾಕ್ಸ್ ಲಸಿಕಾ ಅಭಿಯಾನ ಮಾಡಲಾಗುತ್ತಿದೆ ನಗರದ ಬೀಮ್ಸ್ ಮಹಾವಿದ್ಯಾಲಯದಲ್ಲಿ ನಡೆಯುವ ಕಾರ್ಯಕ್ರಮವನ್ನು ನಗರದ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಉದ್ಘಾಟನೆ ಮಾಡಿ, ನೇರವೇರಿಸಲಿದ್ದಾರೆ. ಈ ವೇಳೆ 12 ರಿಂದ 14 ವರ್ಷದ ಮಕ್ಕಳಿಗೆ ಕೋವಿಡ್-19 ಲಸಿಕಾಕರಣ ಕಾರ್ಯಕ್ರಮದಡಿ ನಡೆಯುವ ಕಾರ್ಬಿವ್ಯಾಕ್ಸ್ ಲಸಿಕಾ ಅಭಿಯಾನ ಹಾಗೂ 60 ವಯಸ್ಸಿನ ಮೇಲ್ಪಟ್ಟ ಎಲ್ಲಾ ಹಿರಿಯ ನಾಗರಿಕರಿಗೆ ಮುನ್ನೆಚ್ಚರಿಕ ಕ್ರಮವಾಗಿ …
Read More »ಪಂಚರಾಜ್ಯಗಳ ಚುನಾವಣೆ : ಬಿಜೆಪಿ ಅಭೂತಪೂರ್ವ ಗೆಲುವಿನ ಖುಷಿ ಹಂಚಿಕೊoಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಬೆಂಗಳೂರು : ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾದ ಬೆನ್ನಲ್ಲೆ ಮಧ್ಯಾಹ್ನ ಭೋಜನದ ನಂತರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಆಡಳಿತ ಪಕ್ಷದ ಮೊಗಸಾಲೆ(ಅಸೆಂಬ್ಲಿ ಲಾಂಜ್)ಯಲ್ಲಿ ಬಿಜೆಪಿ ಶಾಸಕರು ಮತ್ತು ಮಾಧ್ಯಮ ಮಿತ್ರರೊಂದಿಗೆ ಗೆಲುವಿನ ಸಂಭ್ರಮವನ್ನು ಹಂಚಿಕೊoಡರು. ಇತ್ತೀಚೆಗೆ ಜರುಗಿದ 5 ರಾಜ್ಯಗಳ ಚುನಾವಣೆಯಲ್ಲಿ ಉತ್ತರ ಪ್ರದೇಶ, ಮಣಿಪುರ, ಗೋವಾ ಮತ್ತು ಉತ್ತರಾಖಂಡ ರಾಜ್ಯಗಳಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆದುಕೊಂಡಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ …
Read More »ನಾಲ್ಕೂ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ- ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸಂತಸ.
ಬೆಂಗಳೂರು-ಇತ್ತೀಚೆಗೆ ನಡೆದ ಪಂಚರಾಜ್ಯಗಳ ಚುನಾವಣೆಗಳಲ್ಲಿ ಭಾರತೀಯ ಜನತಾ ಪಾರ್ಟಿ ಅಭೂತಪೂರ್ವ ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ಕಹಾಮ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹರ್ಷ ವ್ಯಕ್ತಪಡಿಸಿದ್ದಾರೆ. ಉತ್ತರಪ್ರದೇಶ, ಉತ್ತರಾಖಂಡ, ಪಂಜಾಬ್, ಮಣಿಪುರ ಹಾಗೂ ಗೋವಾ ವಿಧಾನ ಸಭಾ ಚುನಾವಣೆಗಳಲ್ಲಿ ಪಂಜಾಬ್ ಹೊರತುಪಡಿಸಿ ನಾಲ್ಕು ರಾಜ್ಯಗಳಲ್ಲಿ ಭಾರತೀಯ ಜನತಾ ಪಾರ್ಟಿಯು ನಿಚ್ಚಳ ಬಹುಮತದತ್ತ ಸಾಗುತ್ತಿದೆ. ಅಂತಿಮ ಫಲಿತಾಂಶ ನಮ್ಮ ಪಾರ್ಟಿಯದ್ದೆ. ಸ್ಪಷ್ಡ ಬಹುಮತ ಪಡೆಯಲಿದೆ. ದೇಶದ ಸಮಗ್ರ ಅಭಿವೃದ್ಧಿ …
Read More »ಪೊಲೀಸ್ ಸಿಬ್ಬಂದಿ ಜಿ, ಎನ್, ದೊಡಮನಿ, ಪಿ ಎಸ್ ಮಲಗೌಡರ ಹಾಗೂ ಗಿರಿಮಲ್ಲ ಆಜುರ ಅವರ ಕಾರ್ಯಕ್ಕೆ ಹಿರಿಯ ಅಧಿಕಾರಿಗಳು ಹಾಗೂ ಅಥಣಿ ಜನರಿಂದ ಪ್ರಶಂಸೆಯ ಹರಿದು ಬಂದಿದೆ.
ಬೆಳಗಾವಿ: ಸಾಮಾನ್ಯವಾಗಿ ಪೊಲೀಸರು ಎಂದರೇ ಬೈಯುವರೇ ಹೆಚ್ಚು, ಆದರೆ ಬೆಳಗಾವಿ ಜಿಲ್ಲೆಯ ಅಥಣಿ ಪೋಲಿಸರು ಮಾನವೀಯತೆ ಮೆರೆದು ಜನತೆಯಿಂದ ಬೇಶ್ ಅನಿಸಿಕೊಂಡಿದ್ದಾರೆ. ಸಂಕೇಶ್ವರ-ವಿಜಯಪುರ ರಾಜ್ಯ ಹೆದ್ದಾರಿಯ ಕರಿ ಮಸೂತಿ ಸಮೀಪದಲ್ಲಿ ಕಾರು ಬೈಕ್ ನಡುವೆ ಮುಖಾಮುಖಿ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರರು ತೀವ್ರವಾಗಿ ಗಾಯಗೊಂಡಿದ್ದರು. ಈ ವೇಳೆ ಅಂಬುಲೆನ್ಸ್ ಬಾರದ ಕಾರಣ ಗಸ್ತು ತಿರುಗುತ್ತಿದ್ದ ಪೊಲೀಸರು ತಾವೇ ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಅಥಣಿ ಸಮುದಾಯ ಆಸ್ಪತ್ರೆಗೆ ದಾಖಲು ಮಾಡಿ ಮಾನವೀಯತೆ …
Read More »ನವೋದಯ ಸಂಸ್ಥೆ ನಡೆ ವಿರೋಧಿಸಿ ರಾಯಚೂರು ಬಂದ್ಗೆ ಕರೆ ಕೊಟ್ಟ ಸಂಘಟನೆಗಳು
ಮಾರ್ಚ್ 7 ರಂದು ರಾಯಚೂರು ನಗರ ಸಂಪೂರ್ಣವಾಗಿ ಬಂದ್ ಆಗಿಲಿದೆ.ರಾಯಚೂರು ನಗರದಲ್ಲಿರೊ ನವೋದಯ ಮೆಡಿಕಲ್ ಕಾಲೇಜು ಆಡಳಿತ ಮಂಡಳಿಯ ಧೋರಣೆ ಖಂಡಿಸಿ, ಬಂದ್ಗೆ ಕರೆ ನೀಡಲಾಗಿದೆ. ರಾಯಚೂರು ನಗರದ ಬಿಜೆಪಿ ಶಾಸಕ ಡಾ.ಶಿವರಾಜ್ ಪಾಟೀಲ್ ನೇತೃತ್ವದಲ್ಲಿ ರಾಯಚೂರು ಬಂದ್ ನಡೆಯಲಿದೆ. ರಾಯಚೂರು ಬಂದ್ ಗೆ ಬಹುತೇಕ ಎಲ್ಲಾ ಕ್ಷೇತ್ರದವರು ಬೆಂಬಲ ನೀಡಿದ್ದಾರೆ. ಜೊತೆಗೆ ಎಲ್ಲಾ ರಾಜಕೀಯ ಪಕ್ಷಗಳ ಮುಖಂಡರು ಕೂಡ ಬಂದ್ನಲ್ಲಿ ಭಾಗಿಯಾಗಲಿದ್ದಾರೆ ಅಂತ ಶಾಸಕ ಡಾ.ಶಿವರಾಜ್ ಪಾಟೀಲ್ ತಿಳಿಸಿದ್ದಾರೆ. …
Read More »ಮೂಡಲಗಿ ವಲಯದ 197 ಅತಿಥಿ ಶಿಕ್ಷಕರಿಗೆ 34.82 ಲಕ್ಷ ರೂ.ಗಳ ವೈಯಕ್ತಿಕ ಗೌರವ ವೇತನ ವಿತರಿಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ರಾಷ್ಟ್ರದ ಭವಿಷ್ಯವನ್ನು ಬದಲಾಯಿಸುವ ಸಾಮಥ್ರ್ಯ ಶಿಕ್ಷಕರಿಗಿದೆ. ಶಿಕ್ಷಕರಿಂದ ಮಾತ್ರ ಈ ಸಮಾಜದ ಬದಲಾವಣೆ ಸಾಧ್ಯವಿದೆ. ಶಿಕ್ಷಕರು ಸಹ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ವಿದ್ಯಾರ್ಥಿಗಳ ಸಾಧನೆಗೆ ಸಹಕಾರಿಯಾಗುವಂತೆ ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಭಾನುವಾರ ಸಂಜೆ ತಮ್ಮ ಗೃಹ ಕಛೇರಿ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಮೂಡಲಗಿ ಶೈಕ್ಷಣಿಕ ವಲಯದ ಅತಿಥಿ ಶಿಕ್ಷಕರಿಗೆ 34.82 ಲಕ್ಷ ರೂ.ಗಳ ಗೌರವ …
Read More »10 ಕೋಟಿ ರೂಪಾಯಿ ವೆಚ್ಚದ ರಸ್ತೆ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದ ಕೆ.ಎಂ.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ರಸ್ತೆಗಳ ಅಭಿವೃದ್ಧಿಗಾಗಿ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ಇಲಾಖೆಯಿಂದ ಹತ್ತು ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದ್ದು, ಉತ್ತಮ ಗುಣಮಟ್ಟದ ರಸ್ತೆಗಳನ್ನು ನಿರ್ಮಿಸಿ ಸಾರ್ವಜನಿಕ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚಿಸಿದರು. ಶನಿವಾರದಂದು ತಾಲೂಕಿನ ಹಳ್ಳೂರ ಗ್ರಾಮದ ಗಾಂಧಿನಗರದಲ್ಲಿ ಆರ್.ಡಿ.ಪಿ.ಆರ್ ಯೋಜನೆಯಡಿ 10ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಮಾಡಲು ಉದ್ಧೇಶಿಸಿರುವ ವಿವಿಧ ಗ್ರಾಮಗಳ ರಸ್ತೆ ಕಾಮಗಾರಿಗಳಿಗೆ ಭೂಮಿ ಪೂಜೆ …
Read More »ಆರೋಗ್ಯ ರಕ್ಷಣೆಗೆ ಜನತೆ ಸ್ವಚ್ಚತೆಗೆ ಹೆಚ್ಚಿನ ಮಹತ್ವ ನೀಡಿ
ಗೋಕಾಕ : ಆರೋಗ್ಯ ರಕ್ಷಣೆಗೆ ಜನತೆ ಸ್ವಚ್ಚತೆಗೆ ಹೆಚ್ಚಿನ ಮಹತ್ವ ನೀಡಿ ನಗರಸಭೆಯವರ ಸ್ವಚ್ಚತಾ ಕಾರ್ಯಕ್ರಮಕ್ಕೆ ಸಹಕಾರ ನೀಡುವಂತೆ ನಗರಸಭೆಯ ಪರಿಸರ ಸಹಾಯಕ ಕಾರ್ಯಪಾಲಕ ಅಭಿಯಂತ ಎಮ್.ಎಚ್.ಗಜಾಕೋಶ ಹೇಳಿದರು. ಶುಕ್ರವಾರದಂದು ಇಲ್ಲಿಯ ವಾರ್ಡ ನಂ. 29 ರ ಸೋಮವಾರ ಪೇಟೆಯಯಲ್ಲಿರುವ ಶ್ರೀ ಅಂಭಾಭವಾನಿ ದೇವಸ್ಥಾನದಲ್ಲಿ ನಗರಸಭೆ ಹಾಗೂ ನಮ್ಮಭಿಮಾನ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಸ್ವಚ್ಚ ಭಾರತ ಮಿಷನ್ ಯೋಜನೆಯಡಿ ಹಮ್ಮಿಕೊಂಡ “ಜನ ಜಾಗೃತಿ ಅಭಿಯಾನ” ಪಾಲ್ಗೊಂಡು ಮಾತನಾಡುತ್ತಿದ್ದರು. ನಗರಸಭೆಯವರು ನಗರದ …
Read More »ಉಪ್ಪು ಹುಳಿ ಖಾರ ಇಲ್ಲದ, ಯಾರದ್ದೋ ಒತ್ತಡದಿಂದ ಓದಿದ ಬಜೆಟ್: ಕುಮಾರಸ್ವಾಮಿ
ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ಮಂಡಿಸಿದ್ದು ಉಪ್ಪು ಉಳಿ ಖಾರ ಇಲ್ಲದ, ಯಾರದ್ದೋ ಒತ್ತಡದಿಂದ ಓದಿದ ನೀರಸ ಬಜೆಟ್ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಟುವಾಗಿ ಟೀಕಿಸಿದರು. ಬಜೆಟ್ ಬಗ್ಗೆ ವಿಧಾನಸೌಧದ ಬಳಿ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಕೇವಲ ಅಂಕಿ ಅಂಶಗಳನ್ನು ಅಲಂಕರಿಸಿ ಮಂಡಿಸಿದ ಬಜೆಟ್ ಇದಾಗಿದೆಯಷ್ಟೇ. ಇದು ಕೇವಲ ಅಲಂಕಾರಿಕ ಮುಂಗಡ ಪತ್ರ ಎಂದು ಅಭಿಪ್ರಾಯಪಟ್ಟರು. ಮುಖ್ಯಮಂತ್ರಿಗಳು ಅನುಭವಿಗಳು. ಐದು ವರ್ಷ ಜಲಸಂಪನ್ಮೂಲ ಸಚಿವರಾಗಿದ್ದರು. ಎರಡೂವರೆ ವರ್ಷ ಗೃಹ …
Read More »ಕಾಮಗಾರಿ ಹಿನ್ನಲೆ ‘ಆಗುಂಬೆ ಘಾಟ್’ ರಸ್ತೆ 10 ದಿನ ಬಂದ್
ಶಿವಮೊಗ್ಗ: ಈಗಾಗಲೇ ರಸ್ತೆ ಕಾಮಗಾರಿ ಹಿನ್ನಲೆಯಲ್ಲಿ ಹಲವು ಬಾರಿ ಬಂದ್ ಆಗಿದ್ದಂತ ಆಗುಂಬೆ ರಸ್ತೆ , ಈಗ ಮತ್ತೆ ಬಂದ್ 10 ದಿನ ಬಂದ್ ಆಗಲಿದೆ. ಈ ಕುರಿತಂತೆ ಶಿವಮೊಗ್ಗ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ರಾಷ್ಟ್ರೀಯ ಹೆದ್ದಾರಿ 169ಎ ಆಗುಂಬೆ-ಹೆಬ್ರಿವರೆಗೆ ರಸ್ತೆ ದುರಸ್ತಿ ಕಾಮಗಾರಿ ಹಿನ್ನಲೆಯಲ್ಲಿ ಮಾರ್ಚ್ 5 ರಿಂದ 15ರವರೆಗೆ ಹತ್ತು ದಿನ ಬೆಳಿಗ್ಗೆ 7 ರಿಂದ ಸಂಜೆ 7ರವೆರೆಗೆ ಆಗುಂಬೆ ಘಾಟ್ ಸಂಚಾರ ನಿಷೇಧಿಸಲಾಗಿದೆ …
Read More »
Laxmi News 24×7