ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರನ್ನು ವರ್ಗಾವಣೆ ಮಾಡಲಾಗಿದೆ. ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಸ್ವಂತ ಜಿಲ್ಲೆಯಲ್ಲಿರಬಾರದೆನ್ನುವ ಕಾರಣಕ್ಕಾಗಿ ಅವರನ್ನು ವರ್ಗಾವಣೆ ಮಾಡಲಾಗಿದೆ. ಆರ್.ವೆಂಕಟೇಶ ಕುಮಾರ ಬೆಳಗಾವಿ ಹಂಗಾಮಿ ಜಿಲ್ಲಾಧಿಕಾರಿಗಳಾಗಲಿದ್ದಾರೆ.ಕಳೆದ ಲೋಕಸಭಾ ಚುನಾವಣೆ ವೇಳೆಯೂ ಹಿರೇಮಠ ಅವರನ್ನು ವರ್ಗಾಯಿಸಲಾಗಿತ್ತು. ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಸ್ವಂತ ಜಿಲ್ಲೆಯಲ್ಲಿರಬಾರದೆನ್ನುವ ಕಾರಣಕ್ಕಾಗಿ ಅವರನ್ನು ವರ್ಗಾವಣೆ ಮಾಡಲಾಗಿದೆ.
Read More »ನಾದಬ್ರಹ್ಮ’ ಡಾ. ಹಂಸಲೇಖ ಅವರು ನೀಡಿರುವ ಹೇಳಿಕೆಗೆ ನಟ ಜಗ್ಗೇಶ್ ಪ್ರತಿಕ್ರಿಯೆ
: ಬೆಂಗಳೂರು: ಉಡುಪಿಯ ಪೇಜಾವರ ಶ್ರೀಗಳ ಬಗ್ಗೆ ‘ನಾದಬ್ರಹ್ಮ’ ಡಾ. ಹಂಸಲೇಖ ಅವರು ನೀಡಿರುವ ಹೇಳಿಕೆಗೆ ನಟ ಜಗ್ಗೇಶ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಜಗ್ಗೇಶ್, ಮಾತು ಬಲ್ಲವನಿಗೆ ಚಪ್ಪಾಳೆ ಮೃಷ್ಟಾನ್ನದಂತೆ ಆದರು ಆ ಮಾತು ಹೊಟ್ಟೆತುಂಬಿಸದು. ಮಾತು ಕೆಟ್ಟರೆ ಆ ಮೃಷ್ಟಾನ್ನವೇ ವಿಷವಾಗಿ ಅಜೀರ್ಣ ಆಗುವುದು. ಸಾಮಾಜಿಕ ಕ್ಷೇತ್ರ ಹಗ್ಗದ ಮೇಲಿನ ನಡಿಗೆ! ಪಡೆವುದು ಸುಲಭ ಕಳೆದುಕೊಳ್ಳಲು ಕ್ಷಣ ಸಾಕು ಎಂದು ಬರೆದುಕೊಳ್ಳುವ ಮೂಲಕ ಮಾರ್ಮಿಕವಾಗಿ …
Read More »ಸುಣಧೋಳಿಯಲ್ಲಿ ಸ್ವಾಮೀಜಿಗಳಿಂದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ ಪುಷ್ಪಾರ್ಚಣೆ
ಮೂಡಲಗಿ : ಮಠ-ಮಾನ್ಯಗಳಿಗೆ ಭಕ್ತ ಸಮುದಾಯವೇ ನಿಜವಾದ ಆಸ್ತಿ. ಶ್ರೀ ಮಠದ ಶ್ರೇಯೋಭಿವೃದ್ಧಿಗೆ ಭಕ್ತರೂ ಸಹ ತಮ್ಮ ತನು-ಮನ-ಧನದಿಂದ ಸಹಕಾರ ನೀಡುವಂತೆ ಕೆಎಂಎಫ್ ಅಧ್ಯಕ್ಷರೂ ಆಗಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಸುಣಧೋಳಿ ಗ್ರಾಮದಲ್ಲಿ ರವಿವಾರ ಸಂಜೆ ಜಡಿಸಿದ್ಧೇಶ್ವರ ಮಠದಲ್ಲಿ ಜರುಗಿದ ಸತ್ಕಾರ ಸಮಾರಂಭದಲ್ಲಿ ಸತ್ಕಾರ ಸ್ವೀಕರಿಸಿ ಮಾತನಾಡಿದ ಅವರು, ಮಠಗಳ ಉನ್ನತಿಗಾಗಿ ಈ ಭಾಗದಲ್ಲಿ ಧಾರ್ಮಿಕ ವಾತಾವರಣ ನಿರ್ಮಿಸುತ್ತಿರುವ ಮಠಗಳಿಗೆ ಭಕ್ತರು ತಮ್ಮ ವೈಯಕ್ತಿಕ ಮನಸ್ತಾಪಗಳನ್ನು …
Read More »ಬಿಜೆಪಿ ಜೊತೆಗೆ ನಮ್ಮ ಸಂಘಟನೆಗೆ ಸೇರಿರುವ ಅಭ್ಯರ್ಥಿಯನ್ನು ಗೆಲ್ಲಿಸಬೇಕು’: ಬಾಲಚಂದ್ರ ಜಾರಕಿಹೊಳಿ
ಗೋಕಾಕ: ‘ಸ್ಥಳೀಯ ಸಂಸ್ಥೆಗಳಿಂದ ನಡೆಯುವ ವಿಧಾನಪರಿಷತ್ ಚುನಾವಣೆಯಲ್ಲಿ ಈಗಿರುವ ಮಾಹಿತಿಯಂತೆ ಬಿಜೆಪಿಯಿಂದ ಒಬ್ಬರನ್ನು ಅಭ್ಯರ್ಥಿಯನ್ನಾಗಿ ಮಾಡಬಹುದೆಂಬ ಲೆಕ್ಕಾಚಾರವಿದೆ. ಪಕ್ಷದ ಮುಖಂಡರು ಈ ಬಗ್ಗೆ ಚರ್ಚಿಸಿ ಅಂತಿಮ ನಿರ್ಣಯ ಕೈಗೊಳ್ಳಲಿದ್ದಾರೆ’ ಎಂದು ಕೆಎಂಎಫ್ ಅಧ್ಯಕ್ಷರೂ ಅಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಹೊರವಲಯದಲ್ಲಿರುವ ಬಸವೇಶ್ವರ ಸಭಾಭವನದಲ್ಲಿ ಶುಕ್ರವಾರ ನಡೆದ ಅರಭಾವಿ ಮತಕ್ಷೇತ್ರದ ಎಲ್ಲ ಗ್ರಾಮ ಪಂಚಾಯಿತಿಗಳ ಸದಸ್ಯರು ಹಾಗೂ ಮುಖಂಡರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ‘ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯ ಜೊತೆಗೆ …
Read More »ಹುಬ್ಬಳ್ಳಿಯಲ್ಲಿ ಮದುವೆಗೆ ಮುಂಚೆಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ
ಹುಬ್ಬಳ್ಳಿ: ಯುವತಿಯೊಬ್ಬಳು ಮದುವೆಗೆ ಮುಂಚೆಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರೋ ಘಟನೆ ಹುಬ್ಬಳ್ಳಿಯಲ್ಲಿ ಬೆಳಕಿಗೆ ಬಂದಿದೆ. ಅಶೋಕನಗರ ಪೊಲೀಸ್ ಠಾಣೆ ವ್ಯಾಪ್ತಿಯ ಸಂತೋಷ ನಗರದಲ್ಲಿ ಘಟನೆ ನಡೆದಿದ್ದು, ಇಷ್ಟೆಲ್ಲಕ್ಕೂ ಭಾವಿ ಪತಿರಾಯನ(fiancé) ಕಿರುಕುಳವೇ (Torture) ಕಾರಣ ಎಂದು ಮೃತ ಯುವತಿಯ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಭಾವಿ ಪತಿಯ ಕಿರುಕುಳದಿಂದ ಮನನೊಂದು ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಆರೋಪಿಸಿದ್ದಾರೆ. ಎಂಗೇಜ್ಮೆಂಟ್ (Engagement) ಆದಾಗಿನಿಂದಲೂ ಯುವತಿಗೆ ಭಾವಿ ಪತಿ ಕಿರುಕುಳ ನೀಡುತ್ತಿದ್ದ ಎಂಬ …
Read More »ಲಖನ್ ಜಾರಕಿಹೊಳಿ ಪರ ಬ್ಯಾಟ್ ಬೀಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಲಖನ್ ಜಾರಕಿಹೊಳಿ ಪರ ಬ್ಯಾಟ್ ಬ ಗೋಕಾಕ : ಡಿಸೆಂಬರ್ ತಿಂಗಳಲ್ಲಿ ಜರುಗಲಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಲಖನ್ ಜಾರಕಿಹೊಳಿ ಅವರನ್ನು ಎರಡನೇ ಅಭ್ಯರ್ಥಿಯನ್ನಾಗಿ ಮಾಡಿ ಅವರಿಗೆ ಬಿಜೆಪಿಯಿಂದ ಸ್ಪರ್ಧಿಸಲು ಅವಕಾಶ ಮಾಡಿಕೊಡುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಪಕ್ಷದ ಮುಖಂಡರಲ್ಲಿ ಮನವಿ ಮಾಡಿಕೊಂಡರು. ಶನಿವಾರದಂದು ನಗರದ ಹೊರವಲಯದಲ್ಲಿರುವ ಗೋಕಾಕ ಸಪ್ಲಾಯರ್ಸ್ ಸಭಾಭವನದಲ್ಲಿ ಅರಭಾವಿ ಮಂಡಲ ಬಿಜೆಪಿ ಕಾರ್ಯಕಾರಣಿ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿಯಿಂದ …
Read More »ಎಂಎಲ್‌ಸಿ ಟಿಕೆಟ್ ರೇಸ್‌ನಲ್ಲಿ ಸೊಸೆ, ಮೊಮ್ಮಗ: ನನಗೆ ಕೆಟ್ಟ ಹೆಸರು ತರಬೇಡಿ ಎಂದ ದೇವೇಗೌಡ
ಹಾಸನ, ನವೆಂಬರ್ 12: ರಾಜ್ಯದಲ್ಲಿ ವಿಧಾನ ಪರಿಷತ್ ಚುನಾವಣೆ ಘೋಷಣೆಯಾಗಿದೆ. ಹೀಗಾಗಿ ಜೆಡಿಎಸ್ ಭದ್ರಕೋಟೆ ಹಾಸನದಲ್ಲಿಯೂ ರಾಜಕೀಯದಲ್ಲಿ ಬಿರುಸಿನ ಚಟುವಟಿಕೆ ಶುರುವಾಗಿದ್ದು, ಈ ಬಾರಿ ತ್ರಿಕೋನ ಸ್ಪರ್ಧೆ ಏರ್ಪಡುವ ಸಾಧ್ಯತೆಯಿದೆ. ಹಾಸನ ಜಿಲ್ಲೆಯ ರಾಜಕೀಯ ಭದ್ರಕೋಟೆಯಾಗಿರುವ ಪ್ರಮುಖ ಪ್ರಾದೇಶಿಕ ಪಕ್ಷ ಎಂದರೆ ಜೆಡಿಎಸ್. ಸ್ಥಳೀಯ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವೇ ಇಲ್ಲಿ ಪ್ರಾಬಲ್ಯ ಹೊಂದಿದೆ. ಈ ಬಾರಿ ವಿಧಾನ ಪರಿಷತ್ ಚುನಾವಣೆಗೆ ಕೇವಲ ಮೂರು ಸಾವಿರದ ಐದುನೂರಷ್ಟು ಮಾತ್ರ ಮತದಾರರಿದ್ದು, ಈ …
Read More »ನಟ ಪುನೀತ್‌ಗೆ ಅವಮಾನ : ಸಾರಿ ಕೇಳಿದ ನಿರ್ದೇಶಕ ಪ್ರೇಮ್, ಒಪ್ಪದ ಅಪ್ಪು ಪ್ರೇಮಿಗಳು
ಬೆಂಗಳೂರು: ಇತ್ತೀಚಿಗೆ ನಟಿ ರಕ್ಷಿತಾ ಅವರ ತಮ್ಮ ನಾಯಕ ನಟನಾಗಿ ಅಭಿನಯ ಮಾಡುತ್ತಿರುವ ಸಿನಿಮಾವೊಂದರ ಸಂಭ್ರಮದ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆಯಲ್ಲಿ ಅಲ್ಲಿದ್ದ ನಟಿ ರಕ್ಷಿತಾ , ನಟಿ ರಚಿತರಾಮ್, ಆಂಕರ್ ಅಕುಲ್ ಬಾಲಾಜಿ ಮಾಡಿರುವ ಯಡವಟ್ಟು ಈಗ ವಿವಾದಕ್ಕೆ ಕಾರಣವಾಗಿದೆ. ಹೌದು, ಚಿತ್ರತಂಡದವರಿಂದ ಇದೇ ವೇಳೇ ನಟ ಪುನೀತ್ ಅವರಿಗೆ ಶ್ರದ್ದಾಂಜಲಿಯನ್ನು ಅರ್ಪಿಸಿದರು ಅರ್ಪಿಸಿದರು. ಬಳಿಕ ಕಾರ್ಯಕ್ರಮದಲ್ಲಿ ಪುನೀತ್ ರಾಜ್‌ಕುಮಾರ್ ಅವರ ಭಾವಚಿತ್ರದ ಎದುರು ಶಾಪೆಂನ್ ಬಾಟಲ್ ಒಪನ್ …
Read More »ರೈತರು ಬೆಳೆ ಬೆಳೆದ ಜಮೀನಿನ ಮೇಲೆ ಬೆಳೆ ಕಟಾವು ಆಗುವವರೆಗೂ ಕಾಮಗಾರಿ ನಡೆಸಲ್ಲ ಅಂತಾ ಡಿಸಿ ಭರವಸೆ ನೀಡಿದ್ದರೂ ಬೆಳೆಯ ಮೇಲೆ ಜೆಸಿಬಿ
ಬೆಳಗಾವಿ ಬೆಳಗಾವಿ ತಾಲೂಕಿನ (Belagavi) ಹಲಗಾ ಮತ್ತು ಮಚ್ಛೆ ಗ್ರಾಮದ ಮಧ್ಯೆ 9.5 ಕಿಲೋಮೀಟರ್ ರಾಷ್ಟ್ರೀಯ ಹೆದ್ದಾರಿ 4 ಎ ಬೈಪಾಸ್ ರಸ್ತೆ ಕಾಮಗಾರಿ (National Highway By Pass Constuction) ರೈತರ ವಿರೋಧದ (Farmers Objection) ನಡುವೆಯೂ ಶುರುವಾಗಿದೆ. ನಿನ್ನೆ ಕಾಮಗಾರಿ ಆರಂಭಗೊಂಡ ವೇಳೆ ರೈತರು ಪ್ರತಿಭಟನೆ ನಡೆಸಿದ್ದರು. ಜಮೀನು ಮಾಲೀಕನ ಪುತ್ರ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಹಿನ್ನೆಲೆ ಪರಿಸ್ಥಿತಿ ಉದ್ವಿಗ್ನಗೊಂಡಿತ್ತು. ಇದಾದ ಬಳಿಕ …
Read More »ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿ-ಶಾಸಕ ಬಾಲಚಂದ್ರ ಜಾರಕಿಹೊಳಿ
M.L.C. ಚುನಾವಣೆ ಬಾಲಚಂದ್ರ ಜಾರಕಿಹೊಳಿ EXCLUSIVE ಹೇಳಿಕೆ. ಗೋಕಾಕ: ಡಿಸೆಂಬರ್ 10 ರಂದು ಬೆಳಗಾವಿ ಜಿಲ್ಲೆಯ 2 ಸ್ಥಾನಗಳಿಗೆ ನಡೆಯುವ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯ ಜೊತೆಗೆ ನಮ್ಮ ಸಂಘಟನೆಗೆ ಸೇರಿರುವ ಅಭ್ಯರ್ಥಿಯನ್ನು ಬೆಂಬಲಿಸಿ ಅವರನ್ನು ಬಹುಮತದಿಂದ ಆಯ್ಕೆ ಮಾಡುವಂತೆ ಕೆಎಮ್‍ಎಫ್ ಅಧ್ಯಕ್ಷರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮತದಾರರಲ್ಲಿ ಮನವಿ ಮಾಡಿಕೊಂಡರು. ಶುಕ್ರವಾರ ಸಂಜೆ ನಗರದ ಹೊರವಲಯದಲ್ಲಿರುವ ಬಸವೇಶ್ವರ ಸಭಾ ಭವನದಲ್ಲಿ ಅರಭಾವಿ ಮತಕ್ಷೇತ್ರದ …
Read More »
Laxmi News 24×7