ಬೆಂಗಳೂರು : ಇಂದಿನಿಂದ ಹಾನಗಲ್ ಸಿಂದಗಿ ಉಪಚುನಾವಣಾ ಅಬ್ಬರ ಶುರುವಾಗಿದೆ. ಇಂದು ಹಾನಗಲ್‌ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಮಾನೆ ಪರ ಪ್ರಚಾರ ನಡೆಸಿದರು. ಪ್ರಚಾರದ ವೇಳೆ ಕೇಂದ್ರ ಸರ್ಕಾರ, ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು. ಮೋದಿ ಆಳ್ವಿಕೆಯಲ್ಲಿ ದಿನಬಳಕೆ ವಸ್ತುಗಳ ಬೆಲೆ ವಿಪರೀತ ಏರಿದೆ. ಇದೇನಾ ಮೋದಿ ಹೇಳಿದ ಅಚ್ಚೇ ದಿನ್.? ನಾನು ಸತ್ಯ ಹೇಳ್ತೀನಿ ಎಂದು ಕೆಲವರು ನನ್ನ ಕಂಡರೆ ಭಯಪಡುತ್ತಾರೆ’ ಎಂದಿದ್ದಾರೆ.
Read More »ಕೊಟ್ಟಿಗೊಬ್ಬ 3ನಿರ್ಮಾಪಕ ಸೂರಪ್ಪ ಬಾಬು ವಿರುದ್ಧ ಗಂಭೀರ ಆರೋಪ
ಆಯುಧಪೂಜೆ ದಿನವಾದ ಅಕ್ಟೋಬರ್ 14 ರಂದು ‘ಕೋಟಿಗೊಬ್ಬ 3’ ಸಿನಿಮಾ ಬಿಡುಗಡೆಯಾಗಬೇಕಿತ್ತು. ಆದರೆ, ಕೆಲವು ವಿತರಕರು ಸಂಚು ಮಾಡಿದ್ದರಿಂದ ವಿತರಣೆ ಒಂದು ದಿನ ವಿಳಂಬವಾಗಿದೆ. ಸಂಚು ಮಾಡಿದ ವಿತರಕರ ವಿರುದ್ಧ ಕಾನೂನು ಹೋರಾಟ ನಡೆಸುವುದಾಗಿ ಎಂದು ನಿರ್ಮಾಪಕ ಸೂರಪ್ಪ ಬಾಬು ಹೇಳಿದ್ದಾರೆ. ಆದರೆ, ಸೂರಪ್ಪ ಬಾಬು ಅವರ ವಿರುದ್ಧವೇ ವಿತರಕ ಖಾಜಾಪೀರ್ ಗಂಭೀರ ಆರೋಪ ಮಾಡಿದ್ದಾರೆ. ನೀಡಿದ ಹಣವನ್ನು ವಾಪಸ್ ಕೊಡದೆ ಸೂರಪ್ಪಬಾಬು ಕೊಲೆ ಬೆದರಿಕೆ ಹಾಕಿರುವುದಾಗಿ ಚಿತ್ರದುರ್ಗದ ಸಿನಿಮಾ …
Read More »ಜಿಲ್ಲಾಧಿಕಾರಿ ನಡೆ ಹಳ್ಳಿಗಳ ಕಡೆ
ಬೆಳಗಾವಿ: ಜಿಲ್ಲಾಧಿಕಾರಿ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮದ ಅಂಗವಾಗಿ ಚನ್ನಮ್ಮನ ಕಿತ್ತೂರು ತಾಲ್ಲೂಕಿನ ವೀರಾಪುರ ಗ್ರಾಮಕ್ಕೆ ಶನಿವಾರ ಭೇಟಿ ನೀಡಿದ್ದ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರಿಗೆ ಶಿಥಿಲಗೊಂಡ ಮನೆಗಳು, ರಸ್ತೆ, ಚರಂಡಿ ಮೊದಲಾದ ಮೂಲಸೌಕರ್ಯಗಳ ಕೊರತೆಗಳು ಸ್ವಾಗತ ಕೋರಿದವು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಬಳಿಯಿಂದ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಎನ್‌ಡಬ್ಲ್ಯುಕೆಆರ್‌ಟಿಸಿ ಬಸ್‌ನಲ್ಲಿ ತೆರಳಿದ ಅವರನ್ನು ಗ್ರಾಮಸ್ಥರು ಸಂಭ್ರಮದಿಂದ ಬರಮಾಡಿಕೊಂಡರು. ಬಳಿಕ ಜಿಲ್ಲಾಧಿಕಾರಿ ಸೇರಿದಂತೆ ಅಧಿಕಾರಿಗಳಿಗೆ ‘ಸಮಸ್ಯೆಗಳ ಗುಡ್ಡ’ವೇ ಎದುರಾಯಿತು. ಒಂದೊಂದು …
Read More »ರಾಮಮಂದಿರ ನಿರ್ಮಾಣ ಕಾರ್ಯದಲ್ಲಿ ಭಾರೀ ಅವ್ಯವಹಾರ
ಬೆಂಗಳೂರು : 4 ಸಾವಿರ ಸಿವಿಲ್ ಸರ್ವೆಂಟ್‌ಗಳು ಬಿಜೆಪಿಯ ಕಾರ್ಯಕರ್ತರು ಇದ್ದಾರೆ. ವಿಶ್ವವಿದ್ಯಾಯಲಗಳಲ್ಲಿ ಆರ್‌ಎಸ್‌ಎಸ್‌ನವರನ್ನು ಸಿಂಡಿಕೇಟ್ ಸದಸ್ಯದರನ್ನಾಗಿ ನೇಮಕ ಮಾಡಿದ್ದಾರೆ ಎಂದು ಆರೋಪಿಸಿದ್ದ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಇದೀಗ ರಾಮಮಂದಿರ ಬಗ್ಗೆ ಗಂಭೀರ ಆರೋಪಿಸಿದ್ದಾರೆ. ರಾಮಮಂದಿರ ನಿರ್ಮಾಣ ಕಾರ್ಯದಲ್ಲಿ ಭಾರೀ ಅವ್ಯವಹಾರ ಆಗಿದೆ. ರಾಮನ ಹೆಸರಲ್ಲಿ ಹಣ ದುರುಪಯೋಗ ಆಗಿದೆ ಎಂದು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಬಾಂಬ್ ಸಿಡಿಸಿದ್ದಾರೆ.
Read More »ಬಟ್ಟೆ ತೊಳೆಯಲು ಹೋಗಿದ್ದ ಇಬ್ಬರು ಮಹಿಳೆಯರ ಸಾವು: ಮೀನುಗಾರರ ಸಮಯಪ್ರಜ್ಞೆಯಿಂದ ಬದುಕಿದ ಐವರು!
ಬಾಗಲಕೋಟೆ: ಬಾಗಲಕೋಟೆ ಜಿಲ್ಲೆ ಗುಳೇದಗುಡ್ಡದ ಗಂಜಿಕೆರೆಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದಾರೆ. ಲಲಿತಾ ಕತ್ತಿ(37) ಮತ್ತು ಅನುಪಮಾ ದೊಡ್ಡಮನಿ(20) ಜಲಸಮಾಧಿಯಾದವರು. ಕೆರೆಯಲ್ಲಿ ಬಿದ್ದ ಮಹಿಳೆಯನ್ನು ರಕ್ಷಿಸಲು ಹೋಗಿದ್ದ ಆರು ಜನರನ್ನು ಸ್ಥಳೀಯರು ಮತ್ತು ಮೀನುಗಾರರಿಂದ ಐವರ ರಕ್ಷಣೆಯಾಗಿದೆ. ಒಂದೇ ಕುಟುಂಬದ ವ್ಯಕ್ತಿ, ನಾಲ್ವರು ಮಹಿಳೆಯರನ್ನು ರಕ್ಷಣೆ ಮಾಡಲಾಗಿದೆ. ಗುಳೇದಗುಡ್ಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಗುಳೇದಗುಡ್ಡ ಪಟ್ಟಣದ ಗಂಜಿಕೆರೆಯಲ್ಲಿ ಬಟ್ಟೆ ತೊಳೆಯಲು ಹೋದ ಲಲಿತಾ ಕತ್ತಿ …
Read More »ಸಿಎಸ್‌ಕೆ ‘ಕನಸು ನನಸು’ ಮಾಡಿದ MSD; ಕ್ರಿಕೆಟ್ ಪ್ರೇಮಿಗಳ ಹೃದಯ ಗೆದ್ದ ಕೆಕೆಆರ್
14ನೇ ಐಪಿಎಲ್ ಆವೃತ್ತಿಯಲ್ಲಿ ಧೋನಿ ಬಾಯ್ಸ್ ಗೆದ್ದು ಬೀಗಿದ್ದಾರೆ. ಸಿಎಸ್‌ಕೆ ಅಬ್ಬರದ ಆಟಕ್ಕೆ ಶಾರೂಖ್ ಹುಡುಗರು ಮುಗ್ಗರಿಸಿದ್ದಾರೆ. ಅದ್ಬುತ ಪ್ರದರ್ಶನ ನೀಡಿದ ಚೆನ್ನೈ ಸೂಪರ್ ಕಿಂಗ್ಸ್ ಐಪಿಎಲ್ ಇತಿಹಾಸದಲ್ಲಿ 4ನೇ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿದೆ. ನಾಲ್ಕನೇ ಬಾರಿ ಐಪಿಎಲ್ ಟ್ರೋಫಿಗೆ ಮುತ್ತಿಟ್ಟ ಚೆನ್ನೈ ಮೂರನೇ ಬಾರಿ ಟ್ರೋಪಿ ಗೆಲ್ಲುವ ಕೆಕೆಆರ್ ಕನಸು ಭಗ್ನ ಮಹೇಂದ್ರ ಸಿಂಗ್ ಧೋನಿ ನಾಯಕತ್ವದ ಸಿಎಸ್‌ಕೆ ತಂಡ ಐಪಿಎಲ್ 2021ರ ಚಾಂಪಿಯನ್ ಆಗಿ ಹೊರಹೊಮ್ಮಿದೆ. …
Read More »ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮ ಮತ್ತೆ ಪ್ರಾರಂಭ : ಆರ್ ಅಶೋಕ್
ಬೆಂಗಳೂರು: ಜನಪ್ರಿಯ ಹಾಗೂ ಜನಸ್ನೇಹಿ ಕಾರ್ಯಕ್ರಮ “ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ” ಕಾರ್ಯಕ್ರಮ ಕೋವಿಡ್ ನಂತರ ಪುನಃ ಆರಂಭಿಸುತ್ತಿದ್ದಾರೆ. ದಾವಣಗೆರೆ ಜಿಲ್ಲೆಯ ಸುರಹೊನ್ನೆ ಮತ್ತು ಕುಂದೂರು ಗ್ರಾಮದಲ್ಲಿ ನಾಳೆ ಈ ಕಾರ್ಯಕ್ರಮ ನಡೆಯಲಿದೆ. ನಾಳೆ ಬೆಳಿಗ್ಗೆ 10 ಗಂಟೆಗೆ ಸುರಹೊನ್ನೆಯ ಸರ್ಕಾರಿ ಪದವಿ ಪೂರ್ವ ಕಾಲೇಜ್ ನಲ್ಲಿ ಸನ್ಮಾನ್ಯ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರೊಂದಿಗೆ ಕಂದಾಯ ಸಚಿವ ಆರ್ ಅಶೋಕ್ ಕಾರ್ಯಕ್ರಮಮನ್ನು ಉದ್ಘಾಟನೆ ಮಾಡಲಿದ್ದಾರೆ. ಅಲ್ಲದೆ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ …
Read More »18 ಮಹಿಳಾ ಸಂಘಗಳಿಗೆ ಪ್ರೋತ್ಸಾಹಧನ ವಿತರಣೆ
ಬೆಳಗಾವಿ: ಗ್ರಾಮೀಣ ಕ್ಷೇತ್ರದ 18 ಮಹಿಳಾ ಸಂಘಗಳಿಗೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹಾಗೂ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಪ್ರೋತ್ಸಾಹಧನವನ್ನು ಈಚೆಗೆ ವಿತರಿಸಿದರು. ತಾಲ್ಲೂಕಿನ ಸಾಂಬ್ರಾ ಗ್ರಾಮದ ಬಸವೇಶ್ವರ ದೇವಸ್ಥಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಚೆಕ್ ಗಳನ್ನು ನೀಡಲಾಯಿತು. 75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಗುಡಿ ಕೈಗಾರಿಕೆ ಮತ್ತು ಕೌಶಲ ಅಭಿವೃದ್ಧಿ ಪ್ರೋತ್ಸಾಹಿಸಲು ಈ ವರ್ಷ ರಾಜ್ಯದ 700 ಹೆಚ್ಚು ಸ್ವಸಹಾಯ ಸಂಘಗಳ ಸಂಘಗಳಿಗೆ ಸರ್ಕಾರ ಪ್ರೋತ್ಸಾಹಧನ ನೀಡುತ್ತಿದೆ. ಸಾಮಾನ್ಯ ವರ್ಗದವರಿಗೆ …
Read More »ಹಾನಗಲ್‌ನಲ್ಲಿ ಕಾಂಗ್ರೆಸ್‌ಗೆ ಜಯ: ಸಲೀಂ ಆಹಮದ್ ವಿಶ್ವಾಸ
ಬೆಂಗಳೂರು: ಹಾನಗಲ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಹೆಚ್ಚಿನ ಮತಗಳ ಅಂತರದಲ್ಲಿ ಗೆಲ್ಲುವ ವಿಶ್ವಾಸ ಇದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಾನಗಲ್ ಉಪಚುನಾವಣೆ ಉಸ್ತುವಾರಿ ವಹಿಸಿಕೊಂಡು ಕಳೆದ ಒಂದು ವಾರದಿಂದ ಸ್ಥಳೀಯವಾಗಿ ಸಭೆ, ಸಂಘಟನೆ ಮಾಡುತ್ತಿದ್ದೇನೆ. ಕ್ಷೇತ್ರದಲ್ಲಿ ಕಾಂಗ್ರೆಸ್ ಪರ ಅಲೆ ಇದೆ ಎಂದು ತಿಳಿಸಿದರು. ಬಿಜೆಪಿ ಸರ್ಕಾರದಿಂದ ಜನ ಭ್ರಮನಿರಸನರಾಗಿದ್ದು, ಬದಲಾವಣೆ ಬಯಸುತ್ತಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ …
Read More »ರಾಜ್ಯೋತ್ಸವದ ದಿನ ಕರಾಳ ದಿನಾಚರಣೆ ಮಾಡಲು ಅನುಮತಿ ಕೊಡೋದಿಲ್ಲ: ಜಿಲ್ಲಾಧಿಕಾರಿ ಹಿರೇಮಠ
ಬೆಳಗಾವಿ-ರಾಜ್ಯೋತ್ಸವದ ದಿನ ಕರಾಳ ದಿನಾಚರಣೆ ಮಾಡಲು ಅನುಮತಿ ಕೊಡೋದಿಲ್ಲ ಎಂದು ನೇರವಾಗಿ,ಬಹಿರಂಗವಾಗಿ ಹೇಳಿದ ಮೊದಲ ಜಿಲ್ಲಾಧಿಕಾರಿ ಹಿರೇಮಠ ಇದರಲ್ಲಿ ಎರಡು ಮಾತಿಲ್ಲ. ರಾಜ್ಯೋತ್ಸವದ ಪೂರ್ವಭಾವಿ ಸಭೆಯಲ್ಲಿ ಬೆಳಗಾವಿಯ ಎಲ್ಲ ಕನ್ನಡ ಸಂಘಟನೆಗಳ ಮುಖಂಡರ ಸಮ್ಮುಖದಲ್ಲಿ ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ ಹಿರೇಮಠ ಅವರು ಈಬಾರಿ ರಾಜ್ಯೋತ್ಸವದ ದಿನ ಎಂಈಎಸ್ ಗೆ ಕಪ್ಪು ದಿನ ಆಚರಿಸಲು ಅನುಮತಿ ಕೊಡೋದಿಲ್ಲ ಎಂದು ನೇರವಾಗಿ ಹೇಳುವ ಮೂಲಕ ಗಡಿನಾಡಿನ ಹೋರಾಟದಲ್ಲಿ ಹೊಸ ದಾಖಲೆ ಮಾಡಿದ್ದಾರೆ. ಬೆಳಗಾವಿಯಲ್ಲಿ …
Read More »
Laxmi News 24×7