ಬೆಳಗಾವಿ (ಅಕ್ಟೋಬರ್. 14): ಬೆಳಗಾವಿ ಜಿಲ್ಲೆ ರಾಜ್ಯದಲ್ಲಿ ಕುಟುಂಬ (Belagavi Family Politics) ರಾಜಕೀಯಕ್ಕೆ ಹೆಸರುವಾಸಿಯಾಗಿದೆ. ಈಗಾಗಲೇ ಜಿಲ್ಲೆಯಲ್ಲಿ ಜಾರಕಿಹೊಳಿ, ಕತ್ತಿ, ಕೌಜಲಗಿ ಹಾಗೂ ಜೊಲ್ಲೆ ಕುಟುಂಬ ಪಾರುಪತ್ಯ ಸಾಧಿಸಿವೆ. ಈಗ ಈ ಪಟ್ಟಿಗೆ ಅಂಗಡಿ ಹಾಗೂ ಶೆಟ್ಟರ್ ಕುಟುಂಬ ಸೇರ್ಪಡನೆಯಾಗುವ ಸಾಧ್ಯತೆ ಇದೆ. ಸುರೇಶ್ ಅಂಗಡಿ (Late mp Suresh Angadi) ಕುಟುಂಬದ ಶ್ರದ್ಧಾ ಶೆಟ್ಟರ್ (shraddha shetter )ಸಹ ಸಕ್ರಿಯ ರಾಜಕೀಯದತ್ತ ಒಲವು ವ್ಯಕ್ತಪಡಿಸಿದ್ದಾರೆ. ಈ ಹಿಂದೆ …
Read More »ಡಿ.ಕೆ ಶಿವಕುಮಾರ್ ಕಲೆಕ್ಷನ್ ಗಿರಾಕಿ ಎಂಬ ಸಂಭಾಷಣೆ ಕಾಂಗ್ರೆಸ್ ಪಕ್ಷಕ್ಕೆ ಭಾರೀ ಡ್ಯಾಮೇಜ್
ಬೆಂಗಳೂರು: ಕೆಪಿಸಿಸಿ ಮಾಧ್ಯಮ ಸಂಯೋಜಕ ಸಲೀಂ ಮತ್ತು ಮಾಜಿ ಸಂಸದ ವಿ.ಎಸ್ ಉಗ್ರಪ್ಪ ನಡುವಿನ ಡಿ.ಕೆ ಶಿವಕುಮಾರ್ ಬಗೆಗಿನ ಸಂಭಾಷಣೆ ಕೋಲಾಹಲವನ್ನೇ ಎಬ್ಬಿಸಿದೆ. ಈಗ ಡಿ.ಕೆ ಶಿವಕುಮಾರ್ ಕಲೆಕ್ಷನ್ ಗಿರಾಕಿ ಎಂಬ ಸಂಭಾಷಣೆ ಕಾಂಗ್ರೆಸ್ ಪಕ್ಷಕ್ಕೆ ಭಾರೀ ಡ್ಯಾಮೇಜ್ ಮಾಡಿದ್ದಾರೆ. ಸದ್ಯ ಈ ಡ್ಯಾಮೇಜ್ ಕಂಟ್ರೋಲ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹರಸಾಹಸ ಮಾಡುತ್ತಿದ್ದಾರೆ ಎನ್ನಲಾಗಿದೆ. ಮುಂದೆ ಸಾಲು ಸಾಲು ಚುನಾವಣೆಗಳು ಎದುರಾಗಲಿವೆ. ಇದೇ ಹೊತ್ತಲ್ಲೇ ಕೆಪಿಸಿಸಿ ಸಾರಥಿ ಬಗ್ಗೆಯೇ …
Read More »‘ಆರೋಗ್ಯ ಇಲಾಖೆ ಅನಾರೋಗ್ಯ ಪೀಡಿತವಾಗಿ ಹಾಸಿಗೆ ಹಿಡಿದಿದೆ’ ದಿನೇಶ್ ಗುಂಡೂರಾವ್ ಆಕ್ರೋಶ
ಬೆಂಗಳೂರು: ಆರೋಗ್ಯ ಸಿಬ್ಬಂದಿಯ ವೇದನೆ ಕೇಳದೆ ರಾಜ್ಯದ ಆರೋಗ್ಯ ಇಲಾಖೆ ಅನಾರೋಗ್ಯ ಪೀಡಿತವಾಗಿ ಹಾಸಿಗೆ ಹಿಡಿದಿದೆ ಎಂದು ಮಾಜಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆರೋಗ್ಯ ಇಲಾಖೆಯ ಸಿಬ್ಬಂದಿ ವೇತನ ಸಮಸ್ಯೆ ಕುರಿತಂತೆ ಟ್ವೀಟ್ ಮಾಡಿ ಅಸಮಾಧಾನ ವ್ಯಕ್ತಪಡಿಸಿದ ಅವರು ‘ಇಲಾಖೆಯ ಸಿಬ್ಬಂದಿಗೆ ಕಳೆದ 3 ತಿಂಗಳಿನಿಂದ ವೇತನ ಬಿಡುಗಡೆಯಾಗಿಲ್ಲ. ಆರೋಗ್ಯ ಸಿಬ್ಬಂದಿ ಕೊರೋನಾ ಫ್ರಂಟ್‌ಲೈನ್ ವರ್ಕರ್‌ಗಳಾಗಿ ಕಾರ್ಯನಿರ್ವಹಿಸಿದ್ದಾರೆ.ಆದರೂ ಕೊರೊನಾ ಭತ್ಯೆ ಸಿಕ್ಕಿಲ್ಲ. ತಮ್ಮ ಇಲಾಖೆಯ ಸಿಬ್ಬಂದಿಗಳ …
Read More »ಡಿಕೆಎಸ್ ಕಮೀಷನ್ ಗಿರಾಕಿ’ ಹೇಳಿಕೆ: ‘ಇದು ನಿಶ್ಚಿತವಾಗಿಯೂ ಷಡ್ಯಂತ್ರ’ ಎಂದ ಸೋಮಶೇಖರ್
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಸ್ವಪಕ್ಷಿಯರ ಭ್ರಷ್ಟಾಚಾರ ಆರೋಪಕ್ಕೆ ಸಚಿವ ಎಸ್ಟಿ ಸೋಮಶೇಖರ್ ಪ್ರತಿಕ್ರಿಯಿಸಿ.. ಇದು ನಿಶ್ಚಿತವಾಗಿಯೂ ಒಂದು ಷಡ್ಯಂತ್ರ. ಮೊದಲಿನಿಂದಲೂ ನಾನು ಈ ಬಗ್ಗೆ ಹೇಳುತ್ತಿದ್ದೇನೆ ಎಂದರು. ಕಾಂಗ್ರೆಸ್ನಲ್ಲಿ ಮೊದಲಿನಿಂದಲೂ ಡಿ.ಕೆ.ಶಿವಕುಮಾರ್ ವರ್ಸಸ್ ಸಿದ್ದರಾಮಯ್ಯ ನಡೆಯುತ್ತಿದೆ. ಅವರ ವಿರುದ್ಧ ಇವರು, ಇವರ ವಿರುದ್ಧ ಅವರು ಷಡ್ಯಂತರ ನಡೆಸುತ್ತಿದ್ದಾರೆ. ಇದು ಈಗ ಮುಂದುವರಿದಿದೆ. ನನಗೆ ಪರ್ಸೆಂಟೆಜ್ ವ್ಯವಹಾರದ ಬಗ್ಗೆ ಗೊತ್ತಿಲ್ಲ. ನಾನು ಕಾಂಗ್ರೆಸ್ ಪಕ್ಷದಲ್ಲಿ ಬರೀ ಶಾಸಕನಾಗಿದ್ದೆ ಅಷ್ಟೇ …
Read More »ಟಿಳಕವಾಡಿ ಪೊಲೀಸರ ಕಾರ್ಯಾಚರಣೆ ದ್ವಿಚಕ್ರ ವಾಹನ ಕಳ್ಳತನ ಮಾಡುತ್ತಿದ್ದ ಆರೋಪಿಬಂಧನ
ಬೆಳಗಾವಿ ನಗರದಲ್ಲಿ ದ್ವಿಚಕ್ರ ವಾಹನಗಳ ಕಳ್ಳತನ ಆರೋಪಿಯನ್ನು ಬಂಧಿಸಿರುವ ಟಿಳಕವಾಡಿ ಠಾಣೆ ಪೊಲೀಸರು 9 ಲಕ್ಷ ರೂ. ಮೌಲ್ಯದ 11 ಮೋಟಾರ್ ಸೈಕಲ್ ವಶಪಡಿಸಿಕೊಂಡಿದ್ದಾರೆ. ಖಡೇಬಜಾರ ಉಪವಿಭಾಗ ಎಸಿಪಿ ಚಂದ್ರಪ್ಪ ಹಾಗೂ ಪಿಐ ಟಿಳಕವಾಡಿ ರಾಘವೇಂದ್ರ ಹವಾಲದಾರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು. ದ್ವಿಚಕ್ರ ವಾಹನ ಕಳ್ಳತನ ಮಾಡುತ್ತಿದ್ದ ಆರೋಪಿ ಮಕಬುಲ ಅಹ್ಮದ @ಅಸ್ಲಂ. ತಂದೆ ಮೆಹಬೂಸಾಬ ಬಿಕ್ಕನಬಾಯಿ (೨೭) (ಸಾ|| ಬೀರಬಲ್ ಓಣಿ ಹುಬ್ಬಳ್ಳಿ ಹಾಲಿ: ಹಾಲಿ ಹಳೆ ಹುಬ್ಬಳ್ಳಿ) …
Read More »ಬಾಲಕನ ಹೊಟ್ಟೆಯ ಮೇಲೆ ಹರಿದ ಕಬ್ಬು ತುಂಬಿದ ಟ್ರ್ಯಾಕ್ಟರ್
ಹಾವೇರಿ: ಕಬ್ಬಿನ ಟ್ರ್ಯಾಕ್ಟರ್ ಬಾಲಕನ ಹೊಟ್ಟೆಯ ಮೇಲೆ ಹರಿದು ತೀವ್ರವಾಗಿ ಗಾಯಗೊಂಡ ಘಟನೆ ಹಾವೇರಿ ತಾಲೂಕಿನ ಗುತ್ತಲ ಪಟ್ಟಣದ ರಾಣೇಬೆನ್ನೂರ ರಸ್ತೆಯ ಬಳಿ ನಡೆದಿದೆ. ಪಟ್ಟಣದ ಗಣೇಶ ವಡ್ಡರ (11) ವರ್ಷದ ಬಾಲಕನ ಮೇಲೆ ಹಿಂಬದಿಯ ಟ್ರ್ಯಾಲಿ ಹರಿದಿದ್ದು ತೀವ್ರವಾಗಿ ಗಾಯಗೊಂಡಿದ್ದಾನೆ. ಬಾಲಕನನ್ನು ಗುತ್ತಲ ಸಮುದಾಯ ಆರೋಗ್ಯ ಕೇಂದ್ರದಿಂದ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಕರೆದೊಯ್ಯಲಾಗಿದೆ. ತೀವ್ರವಾಗಿ ನರಳುತ್ತಾ ಬಿದ್ದಿದ್ದ ಬಾಲಕನ ಸ್ಥಿತಿ ಕಂಡು ಮಾಹಿಳಾ ಸಂಬಂಧಿಯೊಬ್ಬರು …
Read More »ಡಿ.ಕೆ ಶಿವಕುಮಾರ್ ಕಲೆಕ್ಷನ್ ಗಿರಾಕಿ: ಕೆದಕುತ್ತಾ ಹೋದರೆ ಇವರದ್ದೂ ಹೊರಬರುತ್ತದೆ- ಇಬ್ಬರು ಕಾಂಗ್ರೆಸ್ ನಾಯಕರ ಸ್ಫೊಟಕ ಮಾತು ವೈರಲ್.
ಬೆಂಗಳೂರು, ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಬಗ್ಗೆ ಇಬ್ಬರು ಕಾಂಗ್ರೆಸ್ ನಾಯಕರ ಸ್ಪೋಟಕ ಮಾತು ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಡಿಕೆ ಶಿವಕುಮಾರ್ ರದ್ದು ದೊಡ್ಡ ಸ್ಕ್ಯಾಮ್, ಕಲೆಕ್ಷನ್,ಗಿರಾಕಿ, ಡಿಕೆಶಿ ಹುಡುಗರ ಬಳಿ 50ರಿಂದ 100 ಕೋಟಿ ರೂಪಾಯಿ ಇದೆ. ಕೆದಕುತ್ತಾ ಹೋದರೆ ಇವರದ್ದೂ ಹೊರಬರುತ್ತದೆ ಎಂದು ಕಾಂಗ್ರೆಸ್ ನ ಇಬ್ಬರು ಪ್ರಮುಖ ನಾಯಕರು ವೇದಿಕೆಯಲ್ಲಿ ಮಾತನಾಡಿಕೊಂಡಿರುವ ಆಡಿಯೋ ವೈರಲ್ ಆಗಿದೆ. ನಿನ್ನೆ ಬೆಂಗಳೂರಿನಲ್ಲಿ ಮಾಜಿ ಸಂಸದ ವಿಎಸ್ ಉಗ್ರಪ್ಪ …
Read More »ರಾಜಸ್ಥಾನದಲ್ಲಿ ಸೇವೆ ಸಲ್ಲಿಸುತ್ತಿದ್ದ ಬಾಗಲಕೋಟೆ ಯೋಧ ಸಾವು! ಇಂದು ಹುಟ್ಟೂರಿನಲ್ಲಿ ಅಂತ್ಯಸಂಸ್ಕಾರ
ಬಾಗಲಕೋಟೆ: ರಾಜಸ್ಥಾನದಲ್ಲಿ ಸೇವೆ ಸಲ್ಲಿಸುತ್ತಿದ್ದ ಬಾಗಲಕೋಟೆ ಯೋಧ ಸಾವನ್ನಪ್ಪಿದ್ದಾರೆ. ಅನಾರೋಗ್ಯದಿಂದ ಬಿಎಸ್ಎಪ್ ಯೋಧ ಮೃತಪಟ್ಟಿದ್ದಾರೆ. ಹುನಗುಂದ ತಾಲೂಕಿನ ಕೂಡಲಸಂಗಮದ ಮಹಾಂತೇಶ್ ಚೌಧರಿ ಮೃತ ಯೋಧ. ಮಹಾಂತೇಶ್ ಚೌಧರಿ, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಇಂದು (ಅ.13) ಯೋಧನ ಪಾರ್ಥಿವ ಶರೀರ ಗ್ರಾಮಕ್ಕೆ ಆಗಮಿಸಿದೆ. ಸದ್ಯ ಯೋಧ ಮಹಾಂತೇಶ್ ಚೌಧರಿ ರಾಜಸ್ಥಾನದ ಚಾರ್ಲಿ ಬಟಾಲಿಯನ್ 161ರಲ್ಲಿ ಸೇವೆ ಸಲ್ಲಿಸುತ್ತಿದ್ದರು. ಆದರೆ ಅನಾರೋಗ್ಯದಿಂದ ಬಳಲುತ್ತಿದ್ದ ಯೋಧ …
Read More »ಮೂರು ಕೈಗಾರಿಕಾ ಟೌನ್ಶಿಪ್ಗಳಿಂದ ಅಂದಾಜು 10 ಸಾವಿರ ಕೋಟಿ ಖಾಸಗಿ ಬಂಡವಾಳ ಆಕರ್ಷಿಸಲು ಉದ್ದೇಶಿಸಲಾಗಿದೆ. ಟೌನ್ಶಿಪ್ಗಳ ನಿರ್ಮಾಣದಿಂದ ಐದು ಲಕ್ಷ ಉದ್ಯೋಗಾಕಾಶ ಸೃಷ್ಟಿಯಾಗುವ ನಿರೀಕ್ಷೆಯಿದೆ.
ಬೆಂಗಳೂರು: ಬೆಂಗಳೂರು-ಮುಂಬೈ, ಬೆಂಗಳೂರು-ಚೆನ್ನೈ ಕಾರಿಡಾರ್‌ಗಳಲ್ಲಿ ಕೈಗಾರಿಕಾ ಟೌನ್‌ಶಿಪ್ ಸ್ಥಾಪನೆಗೆ ಕರ್ನಾಟಕ ಸರ್ಕಾರ ತಾತ್ವಿಕ ಒಪ್ಪಿಗೆ ನೀಡಿದೆ. ಈ ಕೈಗಾರಿಕಾ ಕಾರಿಡಾರ್‌ಗಳು ಈಮುನ್ನ ಬಜೆಟ್‌ನಲ್ಲಿ ಘೋಷಿಸಲ್ಪಟ್ಟಿದ್ದವು. ತಲಾ ಕನಿಷ್ಠ 500 ಎಕರೆ ಜಾಗದಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಕೈಗಾರಿಕಾ ಟೌನ್ ಶಿಪ್ ನಿರ್ಮಾಣಗೊಳ್ಳಲಿವೆ. ಅಂದಾಜು 10 ಸಾವಿರ ಕೋಟಿ ಖಾಸಗಿ ಬಂಡವಾಳ ಆಕರ್ಷಿಸಲು ಉದ್ದೇಶಿಸಲಾಗಿದೆ. ಟೌನ್ಶಿಪ್ಗಳ ನಿರ್ಮಾಣದಿಂದ ಐದು ಲಕ್ಷ ಉದ್ಯೋಗಾಕಾಶ ಸೃಷ್ಟಿಯಾಗುವ ನಿರೀಕ್ಷೆಯಿದೆ. ಕೈಗಾರಿಕಾ ಪ್ರದೇಶದಲ್ಲಿ ರೆಸಿಡೆನ್ಷಿಯಲ್ ಟೌನ್‌ಶಿಪ್ ನಿರ್ಮಾಣ; ಸಚಿವ …
Read More »ಮ್ಯಾನೇಜ್ಮೆಂಟ್ ಕೋಟಾ ವಿದ್ಯಾರ್ಥಿಗಳಿಗೂ ವಿದ್ಯಾರ್ಥಿ ವೇತನ : ಸಚಿವ ಕೋಟ ಶ್ರೀನಿವಾಸ ಪೂಜಾರಿ
ಬೆಂಗಳೂರು: ಮ್ಯಾನೇಜ್ಮೆಂಟ್ ಕೋಟಾ ಅಡಿ 13 ಸಾವಿರ ಜನ ವಿದ್ಯಾರ್ಥಿಗಳು ಇದ್ದಾರೆ. ಮಾನವೀಯ ಆಧಾರದ ಮೇಲೆ ಅವರಿಗೂ ವಿದ್ಯಾರ್ಥಿ ವೇತನದ ಹಣ ಬಿಡುಗಡೆ ಮಾಡಲು ಸೂಚನೆ ನೀಡಿದ್ದೇನೆ. ಇದಕ್ಕಾಗಿ 8-9 ಕೋಟಿ ಹಣ ವೆಚ್ಚವಾಗಲಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ವಿದ್ಯಾರ್ಥಿ ವೇತನ ಬಂದಿಲ್ಲ ಅಂತ ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾದ ಹಿನ್ನೆಲೆ ಇಂದು (ಅ.12) ಸಮಾಜ ಕಲ್ಯಾಣ ಇಲಾಖೆ, ಹಾಗೂ ಹಿಂದುಳಿದ ವರ್ಗಗಳ …
Read More »
Laxmi News 24×7