Breaking News

ಜಿಲ್ಲೆ

ರೌಡಿ ರಫೀ ವಿರುದ್ಧ ಗೂಂಡಾ ಕಾಯ್ದೆ: ಸಿಸಿಬಿ ಪೊಲೀಸರಿಂದ ಬಂಧನ

ಬೆಂಗಳೂರಿನಲ್ಲಿ ಕಾನೂನು ಬಾಹಿರ ಚಟುವಟಿಕೆಯಲ್ಲಿರುವ ರೌಡಿಗಳ ವಿರುದ್ಧ ನಿರಂತರವಾಗಿ ಸಿಸಿಬಿ ಪೊಲೀಸರು ಕ್ರಮ ಕೈಗೊಳ್ಳುತ್ತಿದ್ದು,ಇದೀಗ ರೌಡಿ ರಫೀ ಎಂಬಾತನನ್ನು ಗೂಂಡಾ ಕಾಯ್ದೆಯಡಿ ಬಂಧಿಸಲಾಗಿದೆ. ಇನ್ನು ಬಸವೇಶ್ವರನಗರ ಪೊಲೀಸ್ ಠಾಣೆಯ ರೌಡಿಪಟ್ಟಿಯಲ್ಲಿರುವ ರಫೀ, 2013ರಿಂದ ತಾವರೆಕೆರೆ, ಬ್ಯಾಡರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಗಳಲ್ಲಿ ನಿರಂತರವಾಗಿ ರೌಡಿ ಚಟುವಟಿಕೆಗಳಲ್ಲಿ ತೊಡಗಿಕೊಂಡು ಒಟ್ಟು 8 ಪ್ರಕರಣಗಳಲ್ಲಿ ಭಾಗಿಯಾಗಿದ್ದನು. ಅದಲ್ಲದೆ ರೌಡಿ ರಫೀ ಕಳೆದ ಒಂದೂವರೆ ತಿಂಗಳ ಹಿಂದೆ ಬ್ಯಾಡರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ …

Read More »

ಬೆಳಗಾವಿ: ‘ಸಕ್ಕರೆ ಕಾರ್ಖಾನೆಗಳು ₹ 42.17 ಕೋಟಿ ಕಬ್ಬಿನ ಬಿಲ್ ಪಾವತಿಸುವುದು ಬಾಕಿ ಇದೆ’ ಎಂದ ಸಕ್ಕರೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ

ಬೆಳಗಾವಿ: ‘ಸಕ್ಕರೆ ಕಾರ್ಖಾನೆಗಳು ₹ 42.17 ಕೋಟಿ ಕಬ್ಬಿನ ಬಿಲ್ ಪಾವತಿಸುವುದು ಬಾಕಿ ಇದೆ’ ಎಂದು ಸಕ್ಕರೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ತಿಳಿಸಿದರು. ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ಮಂಗಳವಾರ ವಿವಿಧ ಸಭೆಗಳನ್ನು ನಡೆಸಿದ ಬಳಿಕ ಪತ್ರಕರ್ತರೊಂದಿಗೆ ಅವರು ಮಾತನಾಡಿದರು. ‘ರಾಜ್ಯದಲ್ಲಿ ಒಟ್ಟು 87 ನೋಂದಾಯಿತ ಸಕ್ಕರೆ ಕಾರ್ಖಾನೆಗಳಿವೆ. ಅವುಗಳಲ್ಲಿ 64 ಕಾರ್ಖಾನೆಗಳು ಕಾರ್ಯನಿರತವಾಗಿವೆ. 2020-21ನೇ ಕಬ್ಬು ಅರೆಯುವ ಹಂಗಾಮಿನಲ್ಲಿ 440.84 ಲಕ್ಷ ಮೆಟ್ರಿಕ್ ಟನ್ ಕಬ್ಬು ಅರೆದು 42.94 …

Read More »

ರಾತ್ರಿ ರಾಜಕೀಯದಿಂದ ಶಾಸಕಿಯಾದ ಲಕ್ಷ್ಮಿ ಹೆಬ್ಬಾಳಕರ: ಸಂಜಯ ಪಾಟೀಲ

ಬೆಳಗಾವಿ: ‘ರಾತ್ರಿ ರಾಜಕೀಯದ ಸಂಸ್ಕೃತಿ ಗೊತ್ತಿದ್ದರಿಂದಲೇ ಕಾಂಗ್ರೆಸ್‌ನ ಲಕ್ಷ್ಮಿ ಹೆಬ್ಬಾಳಕರ ಶಾಸಕಿಯಾಗಿ ಆಯ್ಕೆಯಾಗಿದ್ದಾರೆ. ಇಲ್ಲದಿದ್ದರೆ ಅವರು ಶಾಸಕಿ ಆಗುವುದಕ್ಕೆ ಸಾಧ್ಯವಿರಲಿಲ್ಲ’ ಎಂದು ಬಿಜೆಪಿ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಸಂಜಯ ಪಾಟೀಲ ಟೀಕಿಸಿದರು. ಇಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಚುನಾವಣೆಗೆ ಮುನ್ನ, ನಾನು ನಿಮ್ಮ ಮನೆ ಮಗಳು ಎಂದೆಲ್ಲಾ ಹೇಳಿ ದೊಡ್ಡ ದೊಡ್ಡ ಕನಸುಗಳನ್ನು ತೋರಿಸಿದ್ದರು. ಆ ಕನಸುಗಳನ್ನು ನನಸು ಮಾಡಲಾಗಿಲ್ಲ. ಹೀಗಾಗಿ, ಗ್ರಾಮೀಣ ಕ್ಷೇತ್ರದ ಜನರು ಪ್ರತಿಕ್ರಿಯೆ ಕೊಡಲು …

Read More »

ಸಿಎಂ ರಾಜಕೀಯ ಕಾರ್ಯದರ್ಶಿಗಳಾಗಿ ರೇಣುಕಾಚಾರ್ಯ, ಜೀವರಾಜ್ ನೇಮಕ: ಸಂಪುಟ ದರ್ಜೆ ಸ್ಥಾನಮಾನ

ಬೆಂಗಳೂರು: ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಗಳಾಗಿ ಎಂ.ಪಿ.ರೇಣುಕಾಚಾರ್ಯ ಮತ್ತು ಡಿ.ಎನ್.ಜೀವರಾಜ್ ಅವರನ್ನು ನೇಮಿಸಿ ಸರ್ಕಾರದ ಆದೇಶ ಮಾಡಿದೆ. ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಮತ್ತು ಮಾಜಿ ಶಾಸಕ ಡಿ.ಎನ್.ಜೀವರಾಜ್ ಅವರಿಬ್ಬರೂ ಬಿ.ಎಸ್.ಯಡಿಯೂರಪ್ಪ ಸರ್ಕಾರದಲ್ಲೂ ರಾಜಕೀಯ ಕಾರ್ಯದರ್ಶಿಯಾಗಿದ್ದರು. ಇದೀಗ ಅವರನ್ನು ಮತ್ತೆ ನೇಮಕ ಮಾಡಲಾಗಿದೆ.   ತಕ್ಷಣದಿಂದ ಜಾರಿಯಾಗುವಂತೆ ಮತ್ತು ಮುಂದಿನ ಆದೇಶದವರೆಗೆ ಇಬ್ಬರನ್ನೂ ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ನೇಮಿಸಿ, ಸಂಪುಟ ದರ್ಜೆ ಸಚಿವ ಸ್ಥಾನಮಾನ ನೀಡಲು ಸರ್ಕಾರ ಆದೇಶಿಸಿದೆ.  

Read More »

ಕಿಡಿಗೇಡಿಗಳ ಕಲ್ಲು ತೂರಾಟದಲ್ಲಿ ಸಾರ್ವಜನಿಕರ ತುರ್ತು ಸೇವೆಯ 112 ವಾಹನ.

  ಘಟಪ್ರಭಾ: ಸೋಮವಾರ ರಾತ್ರಿ 12 ಗಂಟೆ ಸುಮಾರಿಗೆ ಘಟಪ್ರಭಾದ ದಳವಾಯಿ ನಗರದಲ್ಲಿ ಜನರ ತುರ್ತು ಸೇವೆಗಾಗಿರುವ ಪೊಲೀಸ್ ಇಲಾಖೆಯ 112 ವಾಹನದ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ಮಾಡಿ ವಾಹನ ಜಖುಂಗೊಳಿಸಿ ಪರಾರಿಯಾಗಿದ್ದಾರೆ. ವಾಹನದಲ್ಲಿದ್ದ ಇಬ್ಬರು ಪೊಲೀಸರು ಅಪಾಯದಿಂದ ಪರಾಗಿದ್ದು 7 ಜನರ ಮೇಲೆ ಪೊಲೀಸರೆ ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗಾಗಿ ಹುಡುಕಾಟ ನಡೆಸಿದ್ದಾರೆ.   ಘಟನೆಯ ವಿವರ: ಗೋಕಾಕ ತಾಲೂಕಿನ ಶಿಂಗಳಾಪೂರ ಗ್ರಾಮದ ಯುವತಿಯೊರ್ವಳನ್ನ ಘಟಪ್ರಭಾ ದಳವಾಯಿ …

Read More »

ಹಾಲು ಉತ್ಪಾದಕರಿಗಾಗಿ ಬ್ಯಾಂಕ್‌: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಲಹೆ

ಬೆಂಗಳೂರು: ಹಾಲು ಉತ್ಪಾದಕರ ಅಭಿವೃದ್ಧಿ – ಆರ್ಥಿಕ ಸುಧಾರಣೆಗಾಗಿ ಹಾಲು ಉತ್ಪಾದಕರ ಬ್ಯಾಂಕ್‌ ತೆರೆಯಬೇಕು. ಇದಕ್ಕೆ ಸರಕಾರ 100 ಕೋಟಿ ರೂ. ಮೂಲ ಬಂಡವಾಳ ನೀಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳಿ (ಕೆಎಂಎಫ್‌)ಯಿಂದ ಬುಧವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ನೂತನ ಉತ್ಪನ್ನಗಳನ್ನು ಲೋಕಾರ್ಪಣೆ ಮಾಡಿ, ಯೋಜನೆ ಉದ್ಘಾಟಿಸಿ ಅವರು ಮಾತನಾಡಿದರು. ಹಾಲು ಉತ್ಪಾದಕರನ್ನು ಆರ್ಥಿಕವಾಗಿ ಸಶಕ್ತ ಗೊಳಿಸಲು ಮತ್ತು ಮಹಾಮಂಡಳಿ ಹಾಗೂ ಒಕ್ಕೂಟಗಳನ್ನು …

Read More »

ಶಾಹೀನ್ ಚಂಡಮಾರುತ- ಅ.3ರ ವರೆಗೆ ರಾಜ್ಯದಲ್ಲಿ ಭಾರೀ ಮಳೆ

ಬೆಂಗಳೂರು: ಶಾಹೀನ್ ಚಂಡಮಾರುತ ಹಿನ್ನೆಲೆ ಇಂದಿನಿಂದ ಅಕ್ಟೋಬರ್ 3 ರವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಾಳೆ ಶಾಹೀನ್ ಚಂಡಮಾರುತ ಅಪ್ಪಳಿಸುವ ಹಿನ್ನೆಲೆಯಲ್ಲಿ ಇಂದಿನಿಂದ ಕರ್ನಾಟಕದಲ್ಲೂ ಮಳೆ ಹೆಚ್ಚಾಗುವ ಸಾಧ್ಯತೆ ಇದೆ. ಅ.3ರ ವರೆಗೂ ಕರ್ನಾಟಕದ ಉತ್ತರ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.   ಇಂದಿನಿಂದ ಅ.3 ರವರೆಗೆ ಉಡುಪಿ, ಬಳ್ಳಾರಿ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, …

Read More »

ಪಾರ್ಕಿನಲ್ಲಿ ಆಟ ಆಡುವಾಗ ವಿದ್ಯುತ್ ತಗುಲಿ ಬಾಲಕ ಸಾವು

ಕಲಬುರಗಿ: ಪಾರ್ಕ್ ನಲ್ಲಿ ಆಟ ಆಡುತ್ತಿರುವಾಗ ವಿದ್ಯುತ್ ತಂತಿ ತಗುಲಿ ಬಾಲಕ ಸಾವನ್ನಪ್ಪಿದ ಆಘಾತಕಾರಿ ಘಟನೆ ನಗರದ ಎನ್.ಜಿ.ಓ. ಕಾಲೋನಿಯ ಹನುಮಾನ್ ಮಂದಿರದ ಉದ್ಯಾನವನದಲ್ಲಿ ನಡೆದಿದೆ. ನಗರದ ಎನ್.ಜಿ.ಓ. ಕಾಲೋನಿಯ ಮಹಾದೇವಿ ಸುರೇಶ ದಂಪತಿ ಪುತ್ರ 6 ವರ್ಷದ ಸಿದ್ದು ಮೃತ ಬಾಲಕ. ವಿದ್ಯುತ್ ತಂತಿ ತಗಲಿ ಮೃತಪಟ್ಟಿದ್ದಾನೆ. ಹನುಮಾನ್ ಮಂದಿರದ ಉದ್ಯಾನವನದಲ್ಲಿನ ಹೈ ಮಾಸ್ಕ್ ದೀಪದ ವಿದ್ಯುತ್ ವೈರ್ ಕಟ್ ಆಗಿ ಬಿದ್ದ ಹಿನ್ನೆಲೆಯಲ್ಲಿ ಈ ಘಟನೆ ಸಂಭವಿಸಿದೆ. …

Read More »

ವಿದ್ಯಾರ್ಥಿಗಳು ತರಗತಿಗೆ ಚಕ್ಕರ್, ರೊಮ್ಯಾನ್ಸ್​ಗೆ ಹಾಜರ್

ಕೊಪ್ಪಳ: ಆತ ಪ್ರೇಮಿಯೇ ಇರಲಿ, ಪತಿಯೇ ಆಗಿರಲಿ. ತನ್ನ ಹೊರತಾಗಿ ಬೇರೊಂದು ಹೆಣ್ಣನ್ನು ಕಣ್ಣೆತ್ತಿ ನೋಡಿದ್ರೂ ಸಿಡಿಮಿಡಿಗೊಳ್ಳುವುದು ಭಾರತೀಯ ಹೆಣ್ಣು ಮಕ್ಕಳ ಹುಟ್ಟುಗುಣ. ಆದರೆ ಇಲ್ಲೊಂದು ಕಡೆ ಅಕ್ಕ ಪಕ್ಕ ಕುಳಿತು ಇಬ್ಬರು ಯುವತಿಯರನ್ನು ಒಬ್ಬನೇ ಮುದ್ದಾಡುವ ದೃಶ್ಯ ಸಾಮಾನ್ಯವಾಗಿದ್ದು, ಇದು ಸ್ವಾತಂತ್ರ್ಯನಾ? ಸ್ವೇಚ್ಚಾಚಾರವೇ ಎಂಬ ಪ್ರಶ್ನೆ ಮೂಡಿದೆ. ಕೊಪ್ಪಳದ ಗಂಗಾವತಿಯ ನ್ಯಾಯಾಧೀಶರ ನಿವಾಸ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಹಿಂದಿನ ಜಾಗವನ್ನು ಕಾಲೇಜ್ ವಿದ್ಯಾರ್ಥಿಗಳು ಪ್ರಣಯದ ಅಡ್ಡ ಮಾಡಿಕೊಂಡಿದ್ದಾರೆ. …

Read More »

ಶಿಕ್ಷಣ ಕೇಂದ್ರಗಳೇ ಈಗ ಕೊರೊನಾ ಹಬ್..? ಒಂದೇ ಕಾಲೇಜಿನ 28 ವಿದ್ಯಾರ್ಥಿನಿಯರಿಗೆ ಪಾಸಿಟಿವ್..!

ಮಂಡ್ಯ: ಕೊರೊನಾದ ಮೂರನೇ ಅಲೆ ಆತಂಕದ ಮಧ್ಯೆ ಒಂದನೇ ತರಗತಿಯಿಂದ ಶಾಲೆ ಆರಂಭಿಸಲು ಸರ್ಕಾರ ಚರ್ಚೆ ನಡೆಸುತ್ತಿದೆ. ಆತಂಕದ ಬೆಳವಣಿಗೆ ಏನಂದರೆ ಕೆಲವೊಂದು ಶಾಲಾ-ಕಾಲೇಜುಗಳು ಕೊರೊನಾ ಹಾಟ್​ಸ್ಪಾಟ್ ಕೇಂದ್ರವಾಗುತ್ತಿವೆಯಾ ಅನ್ನೋ ಅನುಮಾನ ಶುರುವಾಗಿದೆ. ಇದೀಗ ಮಂಡ್ಯ ಜಿಲ್ಲೆ ನಾಗಮಂಗಲ ಪಟ್ಟಣದಲ್ಲಿರುವ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ 28 ವಿದ್ಯಾರ್ಥಿನಿಯರಿಗೆ ಕೊರೊನಾ ಪಾಸಿಟಿವ್ ದೃಢವಾಗಿದೆ. ಕಾಲೇಜಿನ 412 ವಿಧ್ಯಾರ್ಥಿಗಳ ಪೈಕಿ 28 ಮಂದಿಗೆ ಸೋಂಕು ದೃಢವಾಗಿದೆ. ಸೋಂಕಿತರಿಗೆ ನಾಗಮಂಗಲ ಪಟ್ಟಣದ …

Read More »