Breaking News

ಜಿಲ್ಲೆ

ಹಣಕಿತ್ತು ಪರಾರಿಯಾಗುತ್ತಿದ್ ಯುವಕನನ್ನು ಸಾರ್ವಜನಿಕರು ಹಿಡಿದು ಕಂಬಕ್ಕೆ ಕಟ್ಟಿ ಥಳಿಸಿದ್ದಾರೆ. videovirel….

ಬೆಳಗಾವಿ ನಗರದ ಟೆಂಗಿನಕೇರಿ ಗಲ್ಲಿಯಲ್ಲಿ ವೃದ್ಧನೋರ್ವನಿಂದ ಹಣಕಿತ್ತು ಪರಾರಿಯಾಗುತ್ತಿದ್ದ ಅಪ್ರಾಪ್ತ ಯುವಕನನ್ನು ಸಾರ್ವಜನಿಕರು ಹಿಡಿದು ಕಂಬಕ್ಕೆ ಕಟ್ಟಿ ಥಳಿಸಿದ್ದಾರೆ. ರಸ್ತೆಯಲ್ಲಿ ಹೋಗುತ್ತಿದ್ದ ವೃದ್ಧನನ್ನು ಥಳಿಸಿ ಅವನಿಂದ 4000 ರೂಪಾಯಿ ಹಣವನ್ನು ಕಿತ್ತು ಪರಾರಿಯಾಗುತ್ತಿದ್ದ ನಾಲ್ವರ ಪೈಕಿ ಓರ್ವ ಅಪ್ರಾಪ್ತ ಯುವಕನನ್ನು ಸಾರ್ವಜನಿಕರೇ ಹಿಡಿದಿದು ಕಂಬಕ್ಕೆ ಕಟ್ಟಿ ಥಳಿಸಿದ್ದಾರೆ.   ದಾರಿಯಲ್ಲಿ ಹೋಗುತ್ತಿದ್ದ ವೃದ್ಧ ವ್ಯಕ್ತಿಗೆ ಈ ನಾಲ್ವರು ಗಾಂಜಾ ಕೊಡುವಂತೆ ಕೇಳಿ ಅವನ ಮೇಲೆ ಹಲ್ಲೆ ಮಾಡಿದ್ದಾರೆ. ಇದನ್ನು ನೋಡುತ್ತಿದ್ದ …

Read More »

ಬೆಳಗಾವಿಯ ಕೆಎಲ್‍ಎಸ್ ಸಂಸ್ಥೆಯ ಗೋಗಟೆ ತಾಂತಿಕ ವಿದ್ಯಾಲಯದಲ್ಲಿ ಇಂಜನೀಯರಿಂಗ್ ಜಾಗ್ರತಿ ಕಾರ್ಯಕ್ರಮ

ಬೆಳಗಾವಿಯ ಕೆಎಲ್‍ಎಸ್ ಸಂಸ್ಥೆಯ ಗೋಗಟೆ ತಾಂತಿಕ ವಿದ್ಯಾಲಯದಲ್ಲಿ ಇಂಜನೀಯರಿಂಗ್ ಜಾಗ್ರತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ನಗರದ ಕೆಎಲ್‍ಎಸ್ ಸಂಸ್ಥೆಯ ಗೋಗಟೆ ತಾಂತ್ರಿಕ ವಿದ್ಯಾಲಯದಲ್ಲಿ ದಿನಾಂಕ 26 ರಂದು ರವಿವಾರ ಪಿಯು ವಿದ್ಯಾರ್ಥಿಗಳು ಹಾಗೂ ಪಾಲಕರಿಗೆ ಎಂಜನೀಯರಿಂಗ್ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಮಾತನಾಡಿದ ಕೆಎಲ್‍ಎಸ್ ಗೋಗಟೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಜಯಂತ ಕಿತ್ತೂರ್ ಅಭಿಯಂತರರಿರುವುದೇ ಸಮಸ್ಯೆಗಳನ್ನು ಪರಿಹಾರ ಮಾಡಲು. ಸಮಾಜಕ್ಕೆ ಉತ್ತಮ ಸುಲಭ ಜೀವನ ನೀಡಲು. ಹಾಗಾಗಿ ವಿದ್ಯಾರ್ಥಿಗಳು ಉತ್ತಮ …

Read More »

ಗೋಕಾಕದಲ್ಲಿ ಪ್ರವಾಹ ಪೀಡಿತ ಸಂಬಂಧ ಗೋಕಾಕ ಹಾಗೂ ಮೂಡಲಗಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ

  ಗೋಕಾಕ : ಕಳೆದ ಜುಲೈ ತಿಂಗಳಲ್ಲಿ ಮಳೆ ಹಾಗೂ ಪ್ರವಾಹದಿಂದಾಗಿ ಹಾನಿಗೊಳಗಾದ ನದಿ ತೀರದ ಗ್ರಾಮಗಳ ಮನೆ ಹಾಗೂ ಬೆಳೆಗಳ ಸಮೀಕ್ಷೆಯನ್ನು ಕೂಡಲೇ ಪೂರ್ಣಗೊಳಿಸಿ ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ಧನವನ್ನು ವಿತರಿಸುವಂತೆ ಕೆಎಂಎಫ್ ಅಧ್ಯಕ್ಷರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ರವಿವಾರ ರಾತ್ರಿ ತಮ್ಮ ಗೃಹ ಕಛೇರಿ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಗೋಕಾಕ ಹಾಗೂ ಮೂಡಲಗಿ ತಾಲೂಕುಗಳ ಅಧಿಕಾರಿಗಳ ಸಭೆ ನಡೆಸಿದ …

Read More »

ಬಂದ್ ಮಧ್ಯೆ ಸಿಎಂ ಬೊಮ್ಮಾಯಿ ಯಾವ ಕಾರ್ಯಕ್ರಮದಲ್ಲಿದ್ದಾರೆ? ಭಾರತ್ ಬಂದ್ ಬಗ್ಗೆ ಏನು ಹೇಳಿದರು?

ಹುಬ್ಬಳ್ಳಿ: ಕೃಷಿ ಕಾಯ್ದೆ ತಿದ್ದುಪಡಿ ವಿರೋಧಿಸಿ ಇಂದು (ಸೆ.27) ಭಾರತ್ ಬಂದ್ಗೆ (Bharat Bandh) ಕರೆಕೊಟ್ಟಿದ್ದಾರೆ. ಸದ್ಯ ರಾಜ್ಯದ ಹಲವು ಕಡೆ ಪ್ರತಿಭಟನೆ ನಡೆಯುತ್ತಿದೆ. ಇನ್ನು ಕೆಲ ಜಿಲ್ಲೆಗಳಲ್ಲಿ ಬಂದ್ಗೆ ಬೆಂಬಲ ಸಿಕ್ಕಿಲ್ಲ. ಈ ಬಗ್ಗೆ ಪ್ರತಿಕ್ರಿಯಿ ನೀಡಿರುವ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai), ಕೊವಿಡ್ನಿಂದ ಜನರು ಸಾಕಷ್ಟು ತೊಂದರೆ ಅನುಭವಿಸಿದ್ದಾರೆ. ಈಗಷ್ಟೇ ವ್ಯಾಪಾರ, ವ್ಯವಹಾರದಲ್ಲಿ ತೊಡಗಿಕೊಳ್ಳುತ್ತಿದ್ದಾರೆ. ಹೀಗಾಗಿ ಜನರಿಗೆ ತೊಂದರೆ ಮಾಡಬಾರದು ಅಂತ ಹೇಳಿದ್ದಾರೆ. ಕಾಂಗ್ರೆಸ್ …

Read More »

ಕಾರುಗಳ ಮುಖಾಮುಖಿ ಡಿಕ್ಕಿ- ಇಬ್ಬರು ಚಾಲಕರು ಸಾವು

ಬೆಂಗಳೂರು: ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಎರಡೂ ಕಾರಿನ ಚಾಲಕರು ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಕರ್ನಾಟಕದ ಗಡಿಗೆ ಹೊಂದಿಕೊಂಡಿರುವ ತಮಿಳುನಾಡಿನ ಹೊಸೂರು ಬಳಿ ನಡೆದಿದೆ. ಆನೇಕಲ್ ಗಡಿಗೆ ಹೊಂದಿಕೊಂಡಿರುವ ತಮಿಳುನಾಡಿನ ಹೊಸೂರು ಸಮೀಪದ ಸೂಳಗಿರಿ ಎಚ್.ಪಿ ಪೆಟ್ರೋಲ್ ಬಂಕ್ ಎದುರು ಅಪಘಾತ ಸಂಭವಿಸಿದ್ದು, ಎರಡು ಕಾರಿನ ಚಾಲಕರಾದ ಬೆಂಗಳೂರಿನ ವೈಯಾಲಿಕಾವಲ್ ನಿವಾಸಿ ಸುಮಂತ್(21) ಹಾಗೂ ಕೋರಮಂಗಲ ನಿವಾಸಿ ವಿನ್ಸೆಂಟ್ ಗೋಪಿ (34) ಸ್ಥಳದಲ್ಲೇ ಸಾವನಪ್ಪಿದ್ದಾರೆ.

Read More »

ದಯಮಾಡಿ ಬಂದ್​​ಗೆ ಸಹಕಾರ ನೀಡಿ ಸ್ವಾಮಿ- ಆಟೋ ಚಾಲಕನ ಕಾಲಿಗೆ ಬಿದ್ದ ರೈತ

ಧಾರವಾಡ: ‘ಭಾರತ್ ಬಂದ್’ ಹಿನ್ನೆಲೆ ನಗರದ ಆಲೂರು ವೆಂಕಟರಾವ್ ವೃತ್ತದಲ್ಲಿ ಬಸ್ ತೆಡೆದು ಪ್ರತಿಭಟನೆ ನಡೆಸಲಾಗುತ್ತಿದ್ದು, ಪ್ರತಿಭಟನಾಕಾರರು ಬೀದಿಗಿಳಿದು ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಭಾರತ ಬಂದ್ ಗೆ ಬೆಂಬಲ ನೀಡಲು ರೈತನೋರ್ವ ಆಟೋ ಚಾಲಕನ ಕಾಲಿಗೆ ಬಿದ್ದು ಮನವಿ ಮಾಡಿದ ಘಟನೆ ಆಲೂರು ವೆಂಕಟರಾವ್ ವೃತ್ತದಲ್ಲಿ ನಡೆದಿದೆ. ಜನರ ಪರವಾಗಿ ಹೋರಾಟ ಮಾಡುತ್ತಿದ್ದೇವೆ ದಯಮಾಡಿ ನಮಗೆ ಬೆಂಬಲ ನೀಡಿ ಎಂದು ರೈತ …

Read More »

ಬೆಳಗಾವಿಯಲ್ಲಿ ಭಾರತ್ ಬಂದ್​ ಬಿಸಿ; ಬಸ್ ಸಂಚಾರ ತಡೆದು ಆಕ್ರೋಶ

ಬೆಳಗಾವಿ: ಭಾರತ್ ಬಂದ್ ಹಿನ್ನೆಲೆಯಲ್ಲಿ ಕುಂದಾನಗರಿಯಲ್ಲಿ ಪ್ರತಿಭಟನಾ ಕಾವು ಏರುತ್ತಿದ್ದು, ಬೆಳಗಾವಿ ಬಸ್ ನಿಲ್ದಾಣದ ಮುಂದೆ ವಿವಿಧ ರೈತ ಸಂಘಟನೆಗಳು ಟೈರ್​ಗೆ ಬೆಂಕಿ ಹಚ್ಚಿ ಅಕ್ರೋಶ ವ್ಯಕ್ತಪಡಿಸಿವೆ. ಇಂದು ಭಾರತ​ ಬಂದ್​ಗೆ ಕರೆ ನೀಡಲಾಗಿದೆ. ಕೇಂದ್ರದ ಮೂರು ಕೃಷಿ ಕಾಯ್ದೆ, ಖಾಸಗೀಕರಣ ಹಾಗೂ ಬೆಲೆ ಏರಿಕೆ ವಿರೋಧಿಸಿ ವಿವಿಧ ರೈತ ಸಂಘಟನೆಗಳು ಇಂದು ಬೀದಿಗೆ ಇಳಿದಿವೆ. ಜಿಲ್ಲೆಯಲ್ಲಿ ಕೂಡ ಪ್ರತಿಭಟನೆ ಜೋರಾಗಿದ್ದು ಬಸ್ ಬಂದ್ ಮಾಡುವಂತೆ ವಿವಿಧ ಸಂಘಟನೆಗಳು ಬಸ್​ …

Read More »

ಸಿಎಂ ಬೆಂಗಾವಲು ವಾಹನಗಳಿಂದ ಗಾಬರಿಬಿದ್ದು ಸ್ಕೂಟಿಯಿಂದ ಬಿದ್ದ ಮಹಿಳೆ

ಬೆಳಗಾವಿ: ಸಿಎಂ ಬೆವರಾಜ ಬೊಮ್ಮಾಯಿ ಬೆಂಗಾವಲು ವಾಹನಕ್ಕೆ ಹೆದರಿ ಮಹಿಳೆಯೋರ್ವರು ಆಯತಪ್ಪಿ ಸ್ಕೂಟಿಯಿಂದ ಬಿದ್ದ ಘಟನೆ ಜಿಲ್ಲೆಯ ಸಾಂವಗಾವ್​ ರಸ್ತೆಯಲ್ಲಿ ನಡೆದಿದೆ. ಸಿಎಂ ಬೊಮ್ಮಾಯಿ ಕಾರ್ಯಕ್ರಮದ ನಿಮಿತ್ತ ಸಾಂವಗಾವ್​ ರಸ್ತೆಯಲ್ಲಿ ಬೆಂಗಾವಲು ವಾಹನ ಸಮೇತ ಬರುವಾಗ ದಿಢೀರ್​ನೆ ಎದುರಾದ ಬೆಂಗಾವಲು ವಾಹನಗಳಿಗೆ ಹೆದರಿದ ಮಹಿಳೆಗೆ ಪೋಲಿಸರು ಪಕ್ಕಕ್ಕೆ ಹೋಗಿ ಎಂದು ಗದರಿಸಿದ್ದಾರೆ ಎನ್ನಲಾಗಿದ್ದು ಈ ವೇಳೆ ಸ್ಕೂಟಿಯನ್ನು ಪಕ್ಕಕ್ಕೆ ತಿರುಗಿಸುವಾಗ ಆಯತಪ್ಪಿ ಮಹಿಳೆ ಬಿದ್ದಿದ್ದು ಮಹಿಳೆಗೆ ಚಿಕ್ಕ ಪುಟ್ಟ ಗಾಯಗಳಾಗಿವೆ.

Read More »

ಯಡಿಯೂರಪ್ಪ ಲೂಟಿ‌ ಹೊಡೆಯುದನ್ನು ಬಿಟ್ಟು ಬೇರೇನೂ ಮಾಡಿಲ್ಲ: ಸಿದ್ದರಾಮಯ್ಯ

ಬೆಂಗಳೂರು: ಬಿ.ಎಸ್.ಯಡಿಯೂರಪ್ಪ ರಾಜಾಹುಲಿಯಂತೆ, ಇಂದಿರಾ ಕ್ಯಾಂಟಿನ್ ಮುಚ್ಚಿದಕ್ಕೆ ಅವರು ರಾಜಾಹುಲಿಯಾ? ಅತ್ಯುತ್ತಮ ಶಾಸಕನಂತೆ, ಯಡಿಯೂರಪ್ಪ ಎರಡು ವರ್ಷ ಸಿಎಂ ಆಗಿದ್ದರು. ಲೂಟಿ‌ ಹೊಡೆಯುವುದನ್ನು ಬಿಟ್ಟರೆ ಬೇರೆ ಏನು ಮಾಡಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು. ಸಂಜಯನಗರದ ಕುವೆಂಪು ಆಟದ ಮೈದಾನದಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾನು ಏಳು ಕೆಜಿ ಅಕ್ಕಿ ಉಚಿತವಾಗಿ ಕೊಟ್ಟಿದ್ದೆ, ಕುಮಾರಸ್ವಾಮಿ ಅಕ್ಕಿ ಕೊಟ್ಟಿದ್ದರೆ ಹೇಳಿ? ಯಡಿಯೂರಪ್ಪ ಕೊಟ್ಟಿದ್ದರೇ? ಈಗ ಬೊಮ್ಮಾಯಿ …

Read More »

1.27 ಕೋಟಿ ರೂ. ವೆಚ್ಚದ ಹೊಸ ಸರ್ಕಾರಿ ಪ್ರೌಢ ಶಾಲೆ ಕಟ್ಟಡಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಬಾಲಚಂದ್ರ ಜಾರಕಿಹೊಳಿ

  ಮೂಡಲಗಿ : ಗ್ರಾಮಸ್ಥರ ಒಗ್ಗಟ್ಟಿನ ಹೋರಾಟದಿಂದ ಮಂಜೂರಾಗಿ ರದ್ದಾಗಿದ್ದ ಸರ್ಕಾರಿ ಪ್ರೌಢ ಶಾಲೆಯನ್ನು ಮರಳಿ ಮಂಜೂರಾತಿ ಪಡೆದು ಗ್ರಾಮೀಣ ಪ್ರದೇಶದ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲ ಮಾಡಿಕೊಟ್ಟ ತಿಗಡಿ ಗ್ರಾಮಸ್ಥರನ್ನು ಅರಭಾವಿ ಶಾಸಕರೂ ಆಗಿರುವ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಭಿನಂದಿಸಿದರು. ತಾಲೂಕಿನ ತಿಗಡಿ ಗ್ರಾಮದಲ್ಲಿ ಶನಿವಾರದಂದು ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನ ಯೋಜನೆಯಡಿ 1.27 ಕೋಟಿ ರೂ. ವೆಚ್ಚದ ಸರ್ಕಾರಿ ಪ್ರೌಢ ಶಾಲೆಯ ನೂತನ ಕಟ್ಟಡಕ್ಕೆ ಗುದ್ದಲಿ …

Read More »