Breaking News

ಜಿಲ್ಲೆ

ಕೆ.ಜಿ. ಹಳ್ಳಿ ಮತ್ತು ಡಿ.ಜೆ. ಹಳ್ಳಿ ಗಲಭೆ ಸಂಬಂಧ ತಲೆಮರೆಸಿಕೊಂಡಿದ್ದ ಆರೋಪಿ ತಬ್ರೇಜ್ ಎಂಬಾತನನ್ನು ಬಂಧಿಸಲಾಗಿದೆ

ಬೆಂಗಳೂರು : ಇದೀಗ ತಬ್ರೇಜ್​ನನ್ನು ಬಂಧಿಸಲಾಗಿದೆ. ಎಸ್​ಡಿಪಿಐ, ಪಿಎಫ್​ಐ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ ತಬ್ರೇಜ್​, ವಾಟ್ಸಪ್​ ಗ್ರೂಪ್​ನಲ್ಲಿ ಗಲಭೆಗೆ ಪ್ರಚೋದನೆ ನೀಡಿದ್ದ. ಅಷ್ಟೇ ಅಲ್ಲದೆ ಗಲಭೆ ವೇಳೆ ವಾಹನಗಳಿಗೆ ಬೆಂಕಿ ಹಚ್ಚಿದ್ದ ಆರೋಪ ತಬ್ರೇಜ್​ ಮೇಲಿತ್ತು.

Read More »

ಐವರ ಅಸಹಜ ಸಾವು ಕೇಸ್: ಅಬಕಾರಿ ಅಧಿಕಾರಿಗಳ ಸುಲಿಗೆಗೆ ಇಳಿದಿದ್ದನಂತೆ ಶಂಕರ್..!

ಬೆಂಗಳೂರು: ನಗರದ ಬ್ಯಾಡರಹಳ್ಳಿ ಠಾಣಾ ವ್ಯಾಪ್ತಿಯ ತಿಗಳರಪಾಳ್ಯದಲ್ಲಿ ಒಂದೇ ಕುಟುಂಬದ ಐವರು ಅಸಹಜ ಸಾವು ಕಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನ ಕಳೆದಂತೆ ಸ್ಫೋಟಕ ಮಾಹಿತಿಗಳು ಬಯಲಾಗುತ್ತಿವೆ. ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ ಬೆನ್ನಲ್ಲೇ ಆರೋಪಿ ಶಂಕರ್ ವಿರುದ್ಧ  ಮಾಹಿತಿ ಹಕ್ಕು ಕಾಯ್ದೆ (RTI) ಯನ್ನು ದುರುಪಯೋಗ ಪಡಿಸಿಕೊಂಡು ಹಣ ಪೀಕಿರುವ ಆರೋಪ ಕೇಳಿ ಬಂದಿದೆ. ಅಬಕಾರಿ ಇಲಾಖೆಯಲ್ಲಿ ಗಾರ್ಡ್​ ಆಗಿದ್ದ ಶಂಕರ್..! ರಾಜ್ಯದ ವಿವಿಧ ಅಬಕಾರಿ ಅಧಿಕಾರಿಗಳೇ ಈತನ ಟಾರ್ಗೆಟ್..! ಶಂಕರ್ …

Read More »

ಸೆಪ್ಟೆಂಬರ್ ತಿಂಗಳಲ್ಲಿ ವಾಡಿಕೆಗಿಂತ 27% ಹೆಚ್ಚು ಮಳೆ

ಬೆಂಗಳೂರು : ದೇಶದಲ್ಲಿ ಈ ಬಾರಿ ಸೆಪ್ಟೆಂಬರ್ ತಿಂಗಳಲ್ಲಿ ವಾಡಿಕೆಗಿಂತ 27% ಹೆಚ್ಚು ಮಳೆಯಾಗಲಿದೆ. ಬಂಗಾಳ ಕೊಲ್ಲಿಯಲ್ಲಿನ ವಾಯುಭಾರ ಕುಸಿತ ಮಳೆ ಹೆಚ್ಚಾಗಲು ಕಾರಣವಾಗಿದೆ, ಇದರಿಂದಾಗಿ ಸಾಮಾನ್ಯವಾಗಿ ಸೆಪ್ಟೆಂಬರ್ 17ರಿಂದ ಕಡಿಮೆಯಾಗಬೇಕಿದ್ದ ಮಳೆ ಇನ್ನೂ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಸಧ್ಯ ಮುಂಗಾರು ಈಗ ಜೈಸಲ್ಮೇರ್, ಕೋಟ, ಗುಣ, ಸತ್ನಾ, ಜಮ್ಶೆಡ್‌ಪುರನ ಕಡಿಮೆ ಒತ್ತಡದ ಕೇಂದ್ರ ನಂತರ ಆಗ್ನೇಯ ವಾರ್ಡ್‌ಗಳ ಮೂಲಕ ಈಶಾನ್ಯ ಮಧ್ಯ ಬಂಗಾಳ ಕೊಲ್ಲಿಗೆ ಹಾದು …

Read More »

ಶೀಘ್ರದಲ್ಲೇ ಥಿಯೇಟರ್ ಗಳಲ್ಲಿ ಶೇ.100 ಸೀಟು ಭರ್ತಿಗೆ ಅನುಮತಿ ಸಾಧ್ಯತೆ

ಬೆಂಗಳೂರು: ಚಿತ್ರ ಮಂದಿರಗಳಲ್ಲಿ ಶೇ.100 ರಷ್ಟು ಸೀಟು ಭರ್ತಿಗೆ ಮನವಿ ಮಾಡಿ ಕನ್ನಡ ಚಿತ್ರರಂಗದ ನಿರ್ಮಾಪಕರು ಇಂದು ಆರೋಗ್ಯ ಸಚಿವ ಕೆ.ಸುಧಾಕರ್ ಗೆ ಮನವಿ ಮಾಡಿದರು. ಸದ್ಯದ ಪರಿಸ್ಥಿತಿಯಲ್ಲಿ ನಿರ್ಮಾಪಕರಿಗೆ ತುಂಬಾ ಸಮಸ್ಯೆಗಳಾಗುತ್ತಿವೆ. ಸಾಲು ಸಾಲು ಚಿತ್ರಗಳು ಬಿಡುಗಡೆಗೆ ಸಿದ್ಧವಾಗಿವೆ. ದೊಡ್ಡ ನಟರ ಸಿನಿಮಾಗಳು ಪ್ರದರ್ಶನಕ್ಕೆ ಸಿದ್ಧವಾಗಿವೆ. ಆದರೆ, ಶೇ.50ರಷ್ಟು ಮಾತ್ರ ಸೀಟು ಭರ್ತಿಗೆ ಅವಕಾಶ ನೀಡಿರುವುದರಿಂದ ಸಮಸ್ಯೆಯಾಗುತ್ತಿದೆ. ದೊಡ್ಡ ನಟರ ಸಿನಿಮಾಗಳಿಗೆ ಹೆಚ್ಚು ಹಣಹಾಕಿ ಚಿತ್ರ ಬಿಡುಗಡೆ ಮಾಡಲಾಗದೆ …

Read More »

ರಾಜ್ಯ ಸಚಿವ ಸಂಪುಟ ಸಭೆ: ಸಾರಿಗೆ ನೌಕರರ ಮೇಲಿನ ಪ್ರಕರಣ ಹಿಂದೆಗೆ‌ತ

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನೆ ನಡೆಸಿದ್ದ ಸಾರಿಗೆ ನೌಕರರ ಮೇಲೆ ದಾಖಲಿಸಲಾಗಿದ್ದ ಮೊಕದ್ದಮೆಗಳನ್ನು ವಾಪಸ್‌ ಪಡೆಯಲು ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಾರಿಗೆ ಸಚಿವ ಶ್ರೀರಾಮುಲು, ನಾಲ್ಕು ಸಾರಿಗೆ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರ ಜತೆ ಸಾಧಕ – ಬಾಧಕಗಳ ಕುರಿತು ಚರ್ಚಿಸಿದ್ದೇನೆ. ಮುಷ್ಕರ ಸಮಯದಲ್ಲಿ ಕೆಲವರು ಅಮಾನತಾಗಿದ್ದಾರೆ, ಮತ್ತೆ ಕೆಲವರು ವರ್ಗಾವಣೆಯಾಗಿ 6 ಸಾವಿರ ನೌಕರರು ತೊಂದರೆಗೆೆ ಸಿಲುಕಿದ್ದರು. 4 ಸಾವಿರ ನೌಕರರ ಮೇಲೆ ತೆಗೆದುಕೊಂಡಿದ್ದ ಕ್ರಮವನ್ನು …

Read More »

ಜಿಲ್ಲಾಸ್ಪತ್ರೆಯಲ್ಲಿ ಅಗ್ನಿ ಅವಘಡ : ಹಸಗೂಸುಗಳನ್ನು ಎತ್ತಿಕೊಂಡು ಹೊರ ಓಡಿ ಬಂದ ಬಾಣಂತಿಯರು

ಹಾವೇರಿ: ನಗರದ ಜಿಲ್ಲಾಸ್ಪತ್ರೆಯ ಆವರಣದಲ್ಲಿರುವ ಹೆರಿಗೆ ವಿಭಾಗದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು ನೂರಾರು ಬಾಣತಿಯರು ತಮ್ಮ ಹಸುಗೂಸುಗಳನ್ನು ಎತ್ತಿಕೊಂಡು ಆಸ್ಪತ್ರೆಯಿಂದ ಹೊರ ಓಡಿ ಬಂದ ಘಟನೆ ನಡೆದಿದೆ. ಬೆಳ್ಳಂಬೆಳಿಗ್ಗೆ ಶಾರ್ಟ್ ಸರ್ಕ್ಯೂಟ್‌ನಿಂದ ಜಿಲ್ಲಾಸ್ಪತ್ರೆಯ ಹೆರಿಗೆ ವಿಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ ಈ ವೇಳೆ ಹೆರಿಗೆ ವಿಭಾಗದಲ್ಲಿದ್ದ ನೂರಾರು ಬಾಣಂತಿಯರು ಅಪಾಯದ ಮುನ್ಸೂಚನೆ ಅರಿತು ತಮ್ಮ ತಮ್ಮ ಹಸುಗೂಸುಗಳನ್ನು ಎತ್ತಿಕೊಂಡು ಆಸ್ಪತ್ರೆಯ ಹೊರಗೆ ಓಡಿ ಬಂದಿದ್ದಾರೆ ಅಷ್ಟೋತ್ತಿಗೆ ಬೆಂಕಿ ಹೆರಿಗೆ ವಿಭಾಗವನ್ನು ಆವರಿಸಿಕೊಂಡಿದೆ. …

Read More »

ಅಧಿವೇಶನದಲ್ಲಿ ಶಾಸಕರ ನಡಾವಳಿಗಳು, ವಿಪಕ್ಷಗಳ ಟೀಕೆ, ಆರೋಪಗಳಿಗೆ ತಕ್ಕ ತಿರುಗೇಟು ಕೊಡುವ ಬಗ್ಗೆ ಚರ್ಚೆ

ಬೆಂಗಳೂರು: ಸಿಎಂ‌ ಬಸವರಾಜ್ ಬೊಮ್ಮಾಯಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಇಂದು ಬಿಜೆಪಿ ಶಾಸಕಾಂಗ ಸಭೆ ನಡೆಯಿತು. ಸಭೆಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಸೇರಿದಂತೆ ಎಲ್ಲ ಶಾಸಕರು ಹಾಗೂ ಸಚಿವರು ಭಾಗಿಯಾಗಿದ್ದರು.   ಅಧಿವೇಶನದಲ್ಲಿ ಶಾಸಕರ ನಡಾವಳಿಗಳು, ವಿಪಕ್ಷಗಳ ಟೀಕೆ, ಆರೋಪಗಳಿಗೆ ತಕ್ಕ ತಿರುಗೇಟು ಕೊಡುವ ಬಗ್ಗೆ ಚರ್ಚೆ ನಡೆಸಲಾಗಿದೆ. ಅತ್ಯಾಚಾರ ಪ್ರಕರಣದಿಂದ ರಾಜ್ಯದ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಪ್ರಸ್ತಾಪಿಸಲು ಕಾಂಗ್ರೆಸ್ ನಿರ್ಧರಿಸಿದೆ.   …

Read More »

ಬೆಂಗಳೂರಿನಲ್ಲಿ ಸೆ. 25ರವರೆಗೂ ಗುಡುಗು ಸಹಿತ ಭಾರೀ ಮಳೆ; ಸಂಜೆ ಬೇಗ ಮನೆ ಸೇರಿಕೊಳ್ಳಿ!

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ (Bangalore Rain) ಒಂದು ಗಂಟೆ ಮಳೆ ಸುರಿದರೂ ಜನಜೀವನ ಅಸ್ತವ್ಯಸ್ತವಾಗಿ ಬಿಡುತ್ತದೆ. ಚರಂಡಿ ವ್ಯವಸ್ಥೆ, ರಾಜಕಾಲುವೆಗಳ ಅವ್ಯವಸ್ಥೆ, ತಗ್ಗು ಪ್ರದೇಶದಲ್ಲಿ ಮನೆಗಳನ್ನು ನಿರ್ಮಾಣ ಮಾಡಿರುವುದು ಹೀಗೆ ನಾನಾ ಕಾರಣಗಳಿಂದ ಮಳೆಗಾಲದಲ್ಲಿ ಬೆಂಗಳೂರಿಗರಿಗೆ ನರಕ ದರ್ಶನವಾಗುತ್ತಲೇ ಇರುತ್ತದೆ. ಇಂದಿನಿಂದ ಸೆ. 25ರವರೆಗೂ ಬೆಂಗಳೂರಿನಲ್ಲಿ ಮತ್ತೆ ಮಳೆ (Heavy Rain in Bengaluru) ಜೋರಾಗಲಿದ್ದು, ಇಂದಿನಿಂದ 5 ದಿನ ಗುಡುಗು- ಮಿಂಚು (Bengaluru Rains) ಸಹಿತ ಭಾರೀ ಮಳೆಯಾಗಲಿದೆ. …

Read More »

ಬೆಳಗಾವಿಯಲ್ಲಿ ಎಂಇಎಸ್‌ನಿಂದ ದಿನಕ್ಕೊಂದು ನಾಟಕ; ಭಾಷಾ ರಾಜಕಾರಣದ ಹೆಸರಲ್ಲಿ ವಿಷಬೀಜ ಬಿತ್ತಲು ಪ್ರಯತ್ನ

ಬೆಳಗಾವಿ: ಜಿಲ್ಲೆಯಲ್ಲಿ ಎಂಇಎಸ್‌ನಿಂದ (Maharashtra Ekikaran Samiti -MES) ದಿನಕ್ಕೊಂದು ವಿಚಾರದಲ್ಲಿ ಗೊಂದಲ ಸೃಷ್ಟಿಯಾಗುತ್ತಿದೆ. ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಹೀನಾಯವಾಗಿ ಸೋತ ಬಳಿಕವೂ ಪದೇಪದೇ ಸಾಮಾಜದ ಸ್ವಾತ್ಯವನ್ನು ಹಾಳು ಮಾಡುವ ಪ್ರಯತ್ನಗಳು ನಡೆಯುತ್ತಿದೆ ಎಂದು ಆರೋಪಗಳು ಕೇಳಿ ಬಂದಿವೆ. ಭಾಷಾ ರಾಜಕಾರಣದ ಹೆಸರಲ್ಲಿ ವಿಷಬೀಜ ಬಿತ್ತಲು ಪ್ರಯತ್ನ ಗಣೇಶ ವಿಸರ್ಜನೆ ವೇದಿಕೆ ಮೇಲೆ ಕನ್ನಡ ನಾಮಫಲಕವಷ್ಟೇ ಇದ್ದಿದ್ದಕ್ಕೆ ಎಂಇಎಸ್ ಖ್ಯಾತೆ ತೆಗೆದಿದೆ. ಇಷ್ಟೇ ಅಲ್ಲದೆ ಎಂಇಎಸ್ ಪುಂಡರ ವಿರುದ್ಧ …

Read More »

ಮೈಸೂರು ರಾಜಮನೆತನದ ಆನೆಗಳನ್ನು ಗುಜರಾತ್​ಗೆ ಕಳುಹಿಸಲು ನಿರ್ಧಾರ; ಕಾರಣ ಇಲ್ಲಿದೆ

ಮೈಸೂರು: ರಾಜಮನೆತನದ ಆನೆಗಳನ್ನು (Elephants) ಗುಜರಾತ್​ಗೆ ಕಳುಹಿಸಲು ಸಿದ್ಧತೆ ನಡೆಯುತ್ತಿದೆ. ಅರಮನೆಯಲ್ಲಿರುವ ಪ್ರತಿ ಆನೆಗಳನ್ನು ನಿರ್ವಹಣೆ ಮಾಡಲು ದಿನಕ್ಕೆ 10 ಸಾವಿರ ರೂ. ಖರ್ಚಾಗುತ್ತಿದೆ. ತಿಂಗಳಿಗೆ 6 ಆನೆಗಳ ನಿರ್ವಹಣೆಗೆ ಸುಮಾರು 18 ಲಕ್ಷ ರೂ. ವೆಚ್ಚವಾಗುತ್ತಿದೆ. ಹೀಗಾಗಿ ನಾಲ್ಕು ಆನೆಗಳನ್ನು ಗುಜರಾತ್​ಗೆ ಕಳುಹಿಸಲು ಸಿದ್ಧತೆ ನಡೆಯುತ್ತಿದೆ. ಸದ್ಯ ಆರು ಆನೆಗಳಿದ್ದು, ಇದರಲ್ಲಿ ನಾಲ್ಕು ಆನೆಗಳು ಗುಜರಾತ್​ಗೆ ಕಳುಹಿಸಲಾಗುತ್ತದೆ. ಇನ್ನುಳಿದ ಎರಡು ಆನೆಗಳು ಅರಮನೆಯಲ್ಲೇ ಉಳಿದುಕೊಳ್ಳಲಿವೆ. ಅರಮನೆ ಆನೆಗಳು ದಸರಾ …

Read More »