ಬಾಗಲಕೋಟೆ: ರಾಜ್ಯ ಸರ್ಕಾರ ಜಿ.ಪಂ, ತಾ.ಪಂ ಕ್ಷೇತ್ರಗಳ ಮೀಸಲಾತಿಗಾಗಿ ಪ್ರತ್ಯೇಕ ಆಯೋಗ ರಚನೆ ಮಾಡಲು ಮುಂದಾಗಿರುವುದು ಸಂವಿಧಾನ ಬಾಹೀರವಾಗಿದೆ. ಚುನಾವಣೆ ಆಯೋಗದ ಅಧಿಕಾರದ ವ್ಯಾಪ್ತಿ ಮೊಟಕುಗೊಳಿಸುವ ಉದ್ದೇಶದಿಂದ ಈ ಪ್ರಯತ್ನಕ್ಕೆ ಮುಂದಾಗಿದೆ. ಇದು ಪ್ರಜಾಪ್ರಭುತ್ವ ವ್ಯವಸ್ಥೆಗೆ ದೊಡ್ಡ ಆಘಾತ ಎಂದು ಕಾಂಗ್ರೆಸ್ ಪಕ್ಷದ ರಾಜೀವಗಾಂಧಿ ಗ್ರಾಮೀಣ ಅಭಿವೃಧಿ ಹಾಗೂ ಪಂಚಾಯತ್ ರಾಜ್ ಸಂಘಟನೆಯ ರಾಜ್ಯಾಧ್ಯಕ್ಷ, ಮಾಜಿ ಸಂಸದ ನಾರಾಯಣಸ್ವಾಮಿ ಆರೋಪಿಸಿದರು. ಈ ವರೆಗೆ ಚುನಾವಣೆ ಆಯೋಗವು ಕ್ಷೇತ್ರಗಳ ಪುನರ್ ವಿಂಗಡಣೆ, …
Read More »ಕಲಬುರಗಿ ಪಾಲಿಕೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಫಿಕ್ಸ್! ಸುಳಿವು ಕೊಟ್ಟ ಸಿಎಂ ಬೊಮ್ಮಾಯಿ
ಬೆಂಗಳೂರು: ಕಲಬುರಗಿ ಮಹಾನಗರ ಪಾಲಿಕೆಯ ಅಧಿಕಾರದಿಂದ ಕಾಂಗ್ರೆಸ್ ಪಕ್ಷವನ್ನು ದೂರವಿಡಲು ಬಿಜೆಪಿ ನಿರ್ಧರಿಸಿದ್ದು, ಜೆಡಿಎಸ್ ಜತೆ ಮತ್ತೆ ದೋಸ್ತಿ ಮಾಡಿಕೊಳ್ಳಲು ಮುಂದಾಗಿದೆ. ಆರ್ಟಿ ನಗರದ ತಮ್ಮ ನಿವಾಸದ ಬಳಿ ಮಂಗಳವಾರ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಭೇಟಿಯಾದ ವೇಳೆ ಔಪಚಾರಿಕವಾಗಿ ಚರ್ಚಿಸಿದ್ದು, ಒಂದಾಗಿ ಹೋಗುವ ಬಗ್ಗೆ ಒಲವು ವ್ಯಕ್ತಪಡಿಸಿದ್ದಾರೆ ಎಂದರು. ಉಭಯ ಪಕ್ಷಗಳು ಸ್ಥಳೀಯ ನಾಯಕರ ಜತೆಗೆ ಚರ್ಚಿಸಿದ ನಂತರ ಮುಂದಿನ ಹೆಜ್ಜೆ ಇರಿಸಲಿದ್ದು, …
Read More »ಕಲಬುರ್ಗಿ ಪಾಲಿಕೆ ಮೇಲೆ ಬಿಜೆಪಿ ಕಣ್ಣು; ಜೆಡಿಎಸ್ ಜೊತೆ ಮೈತ್ರಿ ಬಹುತೇಕ ಫಿಕ್ಸ್
ಬೆಂಗಳೂರು: ಬೆಳಗಾವಿ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಬಳಿಕ ಇದೀಗ ಬಿಜೆಪಿ ಕಲಬುರ್ಗಿ ಪಾಲಿಕೆ ಮೇಲೆ ಕಣ್ಣಿಟ್ಟಿದ್ದು, ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವ ನಿಟ್ಟಿನಲ್ಲಿ ತಂತ್ರಗಾರಿಕೆ ರೂಪಿಸಿದೆ. ಜೆಡಿಎಸ್ ಜೊತೆ ಸೇರಿ ಕಲಬುರ್ಗಿ ಮೇಯರ್ ಸ್ಥಾನ ಗಿಟ್ಟಿಸಿಕೊಳ್ಳಲು ಮುಂದಾಗಿದ್ದ ಕಾಂಗ್ರೆಸ್ ಗೆ ತಿರುಮಂತ್ರ ಹಾಕಲು ಸಿದ್ಧತೆ ನಡೆಸಿರುವ ಬಿಜೆಪಿ ಇದೀಗ ಜೆಡಿಎಸ್ ಜೊತೆ ಮೈತ್ರಿಗೆ ಮುಂದಾಗಿದೆ. ಕಲಬುರ್ಗಿಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಬಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿ ಸುಳಿವು ನೀಡಿದ್ದಾರೆ. …
Read More »ಕೃಷಿ ಇಲಾಖೆಯಲ್ಲಿ 210 ಕೋಟಿ ಭ್ರಷ್ಟಾಚಾರ; ಸಚಿವ ಬಿ.ಸಿ.ಪಾಟೀಲ್ ವಿರುದ್ಧ ಎಸಿಬಿಗೆ ದೂರು
ಬೆಂಗಳೂರು: ಕೃಷಿ ಸಚಿವ ಬಿ.ಸಿ.ಪಾಟೀಲ್ ವಿರುದ್ಧ ಬಹುಕೋಟಿ ಭ್ರಷ್ಟಾಚಾರ ಆರೋಪ ಕೇಳಿಬಂದಿದ್ದು, ಸಚಿವರ ವಿರುದ್ಧ ಎಸಿಬಿಗೆ ದೂರು ನೀಡಲಾಗಿದೆ. ಕೃಷಿ ಇಲಾಖೆಯಲ್ಲಿ 210 ಕೋಟಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ಕೃಷಿ ಸಚಿವ ಬಿ.ಸಿ.ಪಾಟೀಲ್ ವಿರುದ್ಧ ಎಸಿಎಫ್ ಕರ್ನಾಟಕ ಸಂಘಟನೆಯ ಕೃಷ್ಣಮೂರ್ತಿ ಎಂಬುವವರು ಎಸಿಬಿಗೆ ದೂರು ನೀಡಿದ್ದಾರೆ. ರೈತರಿಗೆ ನೀಡುವ ಕೃಷಿ ಯಂತ್ರಗಳ ಖರೀದಿ ವೇಳೆ ಬಾರಿ ಹಗರಣ ನಡೆದಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದು, ಸಚಿವ ಬಿ.ಸಿ.ಪಾಟೀಲ್ ಹಾಗೂ ಕೃಷಿ …
Read More »ಬಿಜೆಪಿ ಬಹುಮತ ನೀಡುವುದರ ಮೂಲಕವಾಗಿ ಬೆಳಗಾವಿ ಜನ ಬುದ್ಧಿವಂತರು ಎನ್ನುವದನ್ನ ತೋರಿಸಿದ್ದಾರೆ : ಉಮೇಶ್ ಕತ್ತಿ
ಬೆಳಗಾವಿ: ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಬಹುಮತ ನೀಡುವುದರ ಮೂಲಕವಾಗಿ ಬೆಳಗಾವಿ ಜನ ಬುದ್ಧಿವಂತರು ಎನ್ನುವದನ್ನ ತೋರಿಸಿದ್ದಾರೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ. ಹುಕ್ಕೇರಿ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಪಕ್ಷ ಗೆಲುವು ಸಾಧಿಸುವ ಮೂಲಕ ಮೊದಲ ಬಾರಿಗೆ ಪಾಲಿಕೆಯ ಮೇಲೆ ಕನ್ನಡ ಧ್ವಜ ಹಾರಿಸಿದಂತಾಗಿದೆ. ಬೆಳಗಾವಿ ಜನ ಬುದ್ದಿವಂತರು ಎನ್ನುವುದನ್ನು ಈ ಗೆಲುವು ನೀಡುವ ಮೂಲಕ ತೋರಿಸಿದ್ದಾರೆ. …
Read More »ಗೌರಿ ಗಣೇಶ ಹಬ್ಬದ ನಿಮಿತ್ತ ಬೆಂಗಳೂರಿನಿಂದ ವಿವಿಧ ಜಿಲ್ಲೆ, ತಾಲೂಕುಗಳಿಗೆ ತೆರಳಲು ಹೆಚ್ಚುವರಿ ಬಸ್
ಬೆಂಗಳೂರು: ಗೌರಿ ಗಣೇಶ ಹಬ್ಬದ ನಿಮಿತ್ತ ಕೆ ಎಸ್ ಆರ್ ಟಿಸಿ ವತಿಯಿಂದ ಸೆಪ್ಟಂಬರ್ 8, 9ರಂದು ರಾಜಧಾನಿ ಬೆಂಗಳೂರಿನಿಂದ ವಿವಿಧ ಜಿಲ್ಲೆ, ತಾಲೂಕುಗಳಿಗೆ ತೆರಳಲು ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಲಾಗಿದೆ. ರಾಜ್ಯದ ವಿವಿಧೆಡೆ ತೆರಳಲು ಪ್ರಯಾಣಿಕರ ಅನುಕೂಲಕ್ಕಾಗಿ 1,000 ಹೆಚ್ಚುವರಿ ಬಸ್ ಗಳ ವ್ಯವಸ್ಥೆ ಮಾಡಲಾಗಿದೆ. ಅಲ್ಲದೇ ಸೆಪ್ಟಂಬರ್ 12ರಂದು ಬೆಂಗಳೂರಿಗೆ ಆಗಮಿಸುವವರಿಗೂ ರಾಜ್ಯದ ವಿವಿಧ ಜಿಲ್ಲಾಕೇಂದ್ರಗಳಿಂದ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಬೆಂಗಳೂರಿನಿಂದ ಬೆಳಗಾವಿ, ಬೀದರ್, ಕಲ್ಬುರ್ಗಿ, ರಾಯಚೂರು, …
Read More »ಗೋಕಾಕ ಪೊಲೀಸ್ ಇಲಾಖೆ ವತಿಯಿಂದ ಗಣೇಶೋತ್ಸವ ಪೂರ್ವಭಾವಿ ಸಭೆ,
ಗೋಕಾಕ ಪೊಲೀಸ್ ಇಲಾಖೆ ವತಿಯಿಂದ ಗಣೇಶೋತ್ಸವ ಪೂರ್ವಭಾವಿ ಸಭೆ, ಗೋಕಾಕ ಶಹರ ಪೊಲೀಸ್ ಠಾಣೆ ಹಾಗೂ ಗೋಕಾಕ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ಸಾರ್ವಜನಿಕ ಗಣೇಶೋತ್ಸವ ಆಡಳಿತ ಮಂಡಳಿಯ ಅಧ್ಯಕ್ಷರ ಸಭೆ ಕರೆಯಲಾಗಿದ್ದು ಕಡ್ಡಾಯವಾಗಿ ಹಾಜರಾಗಲು ವಿನಂತಿ.ಈ ಸಭೆಯಲ್ಲಿ ಅಪೇಕ್ಷಿತರು ಶಾಂತಿ ಪಾಲನಾ ಸಮಿತಿ ಸದಸ್ಯರು,ಗೋಕಾಕ ಗ್ರಾಮ ದೇವತೆ ಜಾತ್ರಾ ಕಮಿಟಿ ಹಿರಿಯರು,ಗೋಕಾಕ ನಗರ ಸಭೆ ಅಧ್ಯಕ್ಷರು,ಉಪಾಧ್ಯಕ್ಷರು ಸದಸ್ಯರಿಗೆ ಆಹ್ವಾನಿಸಲಾಗಿದ್ದು ಸರಿಯಾದ ಸಮಯಕ್ಕೆ ಬಂದು ಸಭೆ ಯಶಸ್ವಿಗಾಗಿ ಸಹಕರಿಸಲು ಗೋಕಾಕ …
Read More »ಅಧಿವೇಶನದ ಬಳಿಕ ದೇವಸ್ಥಾನಗಳಲ್ಲಿ ಭಕ್ತರಿಗೆ ಆಗುವ ಸಮಸ್ಯೆಗಳ ಕುರಿತು ಕ್ರಮ : ಶಶಿಕಲಾ ಜೊಲ್ಲೆ
ಬೆಂಗಳೂರು : ರಾಜ್ಯ ಹಾಗೂ ಹೊರ ರಾಜ್ಯದ ದೇವಸ್ಥಾನಗಳಲ್ಲಿ ರಾಜ್ಯದ ಭಕ್ತರಿಗೆ ಆಗುತ್ತಿರುವ ಸಮಸ್ಯೆಗಳ ಬಗ್ಗೆ ವಿಧಾನ ಮಂಡಲ ಅಧಿವೇಶನ ಮುಗಿದ ನಂತರ ಪ್ರಮುಖ ದೇವಸ್ಥಾನಗಳಿಗೆ ಭೇಟಿ ನೀಡಿ, ಅಲ್ಲಿಯೇ ಸಮಸ್ಯೆ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಜರಾಯಿ, ವಕ್ಪ್ ಹಾಗೂ ಹಜ್ ಸಚಿವರಾದ ಶಶಿಕಲಾ ಜೊಲ್ಲೆಯವರು ತಿಳಿಸಿದ್ದಾರೆ. ಹಿಂದೂ ಧಾರ್ಮಿಕ ದತ್ತಿ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿ ಸಚಿವರು ಹಾಗೂ ರಾಜ್ಯ ದಾರ್ಮಿಕ ಪರಿಷತ್ತಿನ ಅಧ್ಯಕ್ಷರಾಗಿರುವ ಶಶಿಕಲಾ ಜೊಲ್ಲೆಯವರು …
Read More »ಕಾಂಗ್ರೆಸ್ ಸೋಲಲ್ಲ, ಬಿಜೆಪಿಗೆ ಎಚ್ಚರಿಕೆ ಗಂಟೆ : ಸಿದ್ದರಾಮಯ್ಯ ಪ್ರತಿಕ್ರಿಯೆ
ಬೆಂಗಳೂರು: ಮೂರು ಮಹಾನಗರ ಪಾಲಿಕೆ ಚುನಾವಣೆ ಫಲಿತಾಂಶ ಕಾಂಗ್ರೆಸ್ ಸೋಲಲ್ಲ, ಬಿಜೆಪಿಗೆ ಎಚ್ಚರಿಕೆ ಗಂಟೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಆವರು, ಬೆಳಗಾವಿಯಲ್ಲಿ ಬಿಜೆಪಿ ಬಹುಮತ ಗಳಿಸಿದ್ದರೆ, ಕಲಬುರಗಿಯಲ್ಲಿ ನಾವು ಬಹುಮತ ಪಡೆದಿದ್ದೇವೆ. ಇನ್ನುಳಿದ ಕಡೆ ಯಾವ ಪಕ್ಷವೂ ಸ್ಪಷ್ಟ ಬಹುಕತ ಪಡೆದಿಲ್ಲ ಹೀಗಾಗಿ ಇದು ಕಾಂಗ್ರೆಸ್‌ನ ಸೋಲಲ್ಲ ಎಂಬುದು ನನ್ನ ಭಾವನೆ ಎಂದು ತಿಳಿಸಿದರು. ಬೆಳಗಾವಿಯಲ್ಲಿ ನಿರೀಕ್ಷಿತ ಫಲಿತಾಂಶ ಬಂದಿಲ್ಲ, 58 ಸ್ಥಾನಗಳಲ್ಲಿ …
Read More »ಮಹಾನಗರ ಪಾಲಿಕೆ ಮೇಯರ್ ಹಾಗೂ ಉಪ ಮೇಯರ್ ಮೀಸಲಾತಿ ಗೊಂದಲ ಇರುವುದರಿಂದ ನಾಳೆ ಅಧಿಕೃತವಾಗಿ ಪ್ರಕಟಣೆ
ಬೆಳಗಾವಿ :ಮಹಾನಗರ ಪಾಲಿಕೆ ಮೇಯರ್ ಹಾಗೂ ಉಪ ಮೇಯರ್ ಮೀಸಲಾತಿ ಕುರಿತು ಗೊಂದಲ ಇರುವುದರಿಂದ ನಾಳೆ ಅಧಿಕೃತವಾಗಿ ಪ್ರಕಟಣೆ ನೀಡಲಾಗುವುದು ಎಂದು ವಾರ್ತಾ ಮತ್ತು ಪ್ರಚಾರ ಇಲಾಖೆ ತಿಳಿಸಿದೆ. ಕಳೆದ ಫೆಬ್ರವರಿಯಲ್ಲಿ ಪ್ರಕಟಿಸಲಾದ ಗೆಜೆಟ್ ಸ್ವಲ್ಪ ಹೊತ್ತಿನ ಮೊದಲು ಜಿಲ್ಲಾಧಿಕಾರಿಗಳ ಹೇಳಿಕೆಯನ್ನು ಬಿಡುಗಡೆ ಮಾಡಲಾಗಿತ್ತು. ಅದರಲ್ಲಿ ಬೆಳಗಾವಿ ಮೇಯರ್ ಹುದ್ದೆ ಪರಿಶಿಷ್ಟ ಜಾತಿ ಮಹಿಳೆಗೆ ಹಾಗೂ ಉಪಮೇಯರ್ ಹುದ್ದೆ ಸಾಮಾನ್ಯ ಮಹಿಳೆಗೆ ಎಂದು ತಿಳಿಸಲಾಗಿತ್ತು. ಆದರೆ ಕಳೆದ ಫೆಬ್ರವರಿಯಲ್ಲಿ ಪ್ರಕಟಿಸಲಾದ …
Read More »
Laxmi News 24×7