Breaking News

ಜಿಲ್ಲೆ

ಬೆಳಗಾವಿಯಲ್ಲಿ ಅನಿರಿಕ್ಷಿತ ಫಲಿತಾಂಶ; ಪಾಲಿಕೆ ರಿಸಲ್ಟ್ ಮುಂಬರುವ ಚುನಾವಣೆ ದಿಕ್ಸೂಚಿಯಲ್ಲ ಎಂದ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದೆ. ನಮಗಿಂತ ಹೆಚ್ಚಾಗಿ ಸಂಪನ್ಮೂಲಗಳೂ ಬಿಜೆಪಿಯವರಿಗಿದೆ. ಅಧಿಕಾರ ದುರ್ಬಳಕೆ ಮಾಡಿಕೊಂಡು ಪಾಲಿಕೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ ಎಂಬ ಮಾತಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಚುನಾವಣೆಯಲ್ಲಿ ನಮ್ಮ ನಿರೀಕ್ಷೆಗೆ ತಕ್ಕಂತೆ ಫಲಿತಾಂಶ ಬಂದಿಲ್ಲ. ಬೆಳಗಾವಿ ಪಾಲಿಕೆಯಲ್ಲಿ ಅನಿರೀಕ್ಷಿತ ಫಲಿತಾಂಶ ಬಂದಿದೆ. ಬೆಳಗಾವಿಯಲ್ಲಿ ಬಿಜೆಪಿ ಗೆಲ್ಲುತ್ತೆ ಎಂದುಕೊಂಡಿರಲಿಲ್ಲ. ಹುಬ್ಬಳ್ಳಿ-ಧಾರವಾಡದಲ್ಲಿ ಇನ್ನೂ ಅತಂತ್ರ ಸ್ಥಿತಿಯಿದೆ. …

Read More »

ಬೆಳಗಾವಿಯಲ್ಲಿ ಕಾರ್ಯಕರ್ತರ ಮೇಲೆ ಲಾಠಿ ಚಾರ್ಜ್​

ಬೆಳಗಾವಿ: ಕಳೆದ 36 ವರ್ಷದಿಂದ ಬೆಳಗಾವಿ ಮಹಾನಗರ ಪಾಲಿಕೆ ಆಳಿದ MESಗೆ ಭಾರೀ ಮುಖಭಂಗ ಎದುರಾಗುವ ಸಾಧ್ಯತೆಗಳಿದ್ದು, ಬಿಜೆಪಿ ಪಾಲಿಕೆ ಚುಕ್ಕಾಣಿ ಹಿಡಿಯುವುದು ಬಹುತೇಕ ಫಿಕ್ಸ್​ ಆಗ್ತಿದೆ.     ಜಿಲ್ಲೆಯಲ್ಲಿ ಪಾಲಿಕೆ ಚುನಾವಣೆಯ ಮತ ಎಣಿಕೆ ಕಾರ್ಯ ಬಿ.ಕೆ ಮಾಡೆಲ್ ಸ್ಕೂಲ್​​​ನಲ್ಲಿ ಭರದಿಂದ ಸಾಗಿದೆ. ಈ ವೇಳೆ ತಮ್ಮ ಪಕ್ಷ ಮುನ್ನಡೆ ಪಡೆಯುತ್ತಿದಂತೆ ಕಾರ್ಯಕರ್ತರು ವಿಜಯೋತ್ಸವ ಆಚರಣೆಗೆ ಮುಂದಾಗಿದ್ದು, ಈ ವೇಳೆ ಪೊಲೀಸರು ಜನರನ್ನು ಚದುರಿಸಲು ಲಾಠಿಚಾರ್ಜ್​ ಮಾಡಿದ್ದಾರೆ. …

Read More »

ಪಾಲಿಕೆ ಚುನಾವಣಾ ಫಲಿತಾಂಶ- ಮತದಾರರಿಗೆ, ಪಕ್ಷದ ಹಿರಿಯ ನಾಯಕರಿಗೆ ಸಿಎಂ ಧನ್ಯವಾದ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಆಶೀರ್ವಾದಿಂದ ಮಾಹನಗರ ಪಾಲಿಕೆ ಚುನಾವಣೆಯಲ್ಲಿ ಗೆದ್ದಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಚುನಾವಣಾ ಫಲಿತಾಂಶ ಹೊರಬರುತ್ತಿದ್ದಂತೆಯೇ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿ- ಧಾರವಾಡದಲ್ಲಿ ಬಿಜೆಪಿಗೆ ಗೆಲುವು ಸಿಕ್ಕಿದೆ. ಬೆಳಗಾವಿ ಹಾಗೂ ಹುಬ್ಬಳ್ಳಿ-ಧಾರವಾಡದಲ್ಲಿ ಬಿಜೆಪಿ ಸ್ಪಷ್ಟವಾದ ಬಹುಮತ ಪಡೆದುಕೊಳ್ಳುವಂತಹ ಎಲ್ಲಾ ಸಾಧ್ಯತೆಗಳಿವೆ. ಕಲಬುರಗಿಯಲ್ಲಿ ಕೂಡ ನಂಬರ್ ಒನ್ ಪಾರ್ಟಿ ಆಗುವ ಲಕ್ಷಣಗಳು ಕಾಣಿಸುತ್ತಿವೆ ಎಂದರು. ಎಲ್ಲಾ ಮಹಾನಗರ ಪಾಲಿಕೆಯ ಅಧ್ಯಕ್ಷರುಗಳಿಗೆ, …

Read More »

ಭಾರೀ ಜಿದ್ದಾಜಿದ್ದಿಗೆ ಕಾರಣವಾಗಿರೋ ರಾಜ್ಯದ 3 ಮಹಾನಗರ ಪಾಲಿಕೆಗಳ ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರ

ಭಾರೀ ಜಿದ್ದಾಜಿದ್ದಿಗೆ ಕಾರಣವಾಗಿರೋ ರಾಜ್ಯದ 3 ಮಹಾನಗರ ಪಾಲಿಕೆಗಳ ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ. ಬೆಳಗಾವಿ, ಕಲಬುರ್ಗಿ ಹಾಗೂ ಹುಬ್ಬಳ್ಳಿ-ಧಾರವಾಡ ಪಾಲಿಕೆಯ ಚುನಾವಣಾ ಮತ ಎಣಿಕೆ ಇನ್ನೇನು ಕೆಲವೇ ಕ್ಷಣಗಳಲ್ಲಿ ಆರಂಭವಾಗಲಿದ್ದು, ಪಾಲಿಕೆಯ ಗದ್ದುಗೆ ಏರೋದ್ಯಾರು ಅನ್ನೋ ಕುತೂಹಲ ಹೆಚ್ಚಾಗಿದೆ. ಬೆಳಗಾವಿ, ಕಲಬುರ್ಗಿ, ಹುಬ್ಬಳ್ಳಿ-ಧಾರವಾಡ ಪಾಲಿಕೆ ಮತಎಣಿಕೆಗೆ ಕ್ಷಣಗಣನೆ ಬೆಳಗ್ಗೆ 8 ಗಂಟೆಯಿಂದ ಮೂರು ಮಹಾನಗರ ಪಾಲಿಕೆಗಳ ಮತ ಎಣಿಕೆ ಆರಂಭ ಭಾರೀ ಜಿದ್ದಾಜಿದ್ದಿಗೆ ಸಾಕ್ಷಿಯಾಗಿದ್ದ ಮೂರೂ ಮಹಾನಗರ ಪಾಲಿಕೆಗಳ …

Read More »

ಬೆಳಗಾವಿಯಲ್ಲಿ ಬಾಧಿಸುತ್ತಿದೆ ಡೆಂಗಿ, ಚಿಕೂನ್‌ಗುನ್ಯಾ

ಬೆಳಗಾವಿ: ನಗರವೂ ಸೇರಿದಂತೆ ಜಿಲ್ಲೆಯಾದ್ಯಂತ ಕೊರೊನಾ ಭೀತಿಯಿಂದಾಗಿ ಕಂಗೆಟ್ಟಿರುವ ಜನರನ್ನು ಡೆಂಗಿ, ಚಿಕೂನ್‌ಗುನ್ಯಾ, ಮಲೇರಿಯಾ ಮೊದಲಾದ ಕಾಯಿಲೆಗಳು ಬಾಧಿಸುತ್ತಿವೆ. ಒಬ್ಬರು ಶಂಕಿತ ಡೆಂಗಿಯಿಂದ ಸಾವಿಗೀಡಾದುದು ವರದಿಯಾಗಿದೆ. ಕೋವಿಡ್ ಪ್ರಕರಣಗಳ ಸಂಖ್ಯೆ ಕಡಿಮೆ ಇರುವುದರಿಂದಾಗಿ, ಇತರ ಕಾಯಿಲೆಗಳಿಗೆ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಲಭ್ಯವಾಗುತ್ತಿದೆ. ಈ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆಯಿಂದ ಕ್ರಮ ಕೈಗೊಳ್ಳಲಾಗಿದೆ. ಸ್ಥಳೀಯ ಸಂಸ್ಥೆಗಳು ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ಕೊಡಬೇಕಾಗಿದೆ ಮತ್ತು ಸೊಳ್ಳೆಗಳ ಉತ್ಪಾದನೆಗೆ ಕಡಿವಾಣ …

Read More »

ಈ ರಾಷ್ಟ್ರದ ಶಿಲ್ಪಿಗಳು ಶಿಕ್ಷಕರು : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಶ್ಲಾಘನೆ

  ಮೂಡಲಗಿ : ಶಿಕ್ಷಕರು ಈ ರಾಷ್ಟ್ರದ ಶಿಲ್ಪಿಗಳು ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಭಾರತ ರತ್ನ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಜಯಂತಿ ನಿಮಿತ್ಯ ಇಲ್ಲಿಯ ಈರಣ್ಣ ದೇವಸ್ಥಾನದ ಕೆ.ಎಚ್.ಸೋನವಾಲಕರ ಕಲ್ಯಾಣ ಮಂಟಪದಲ್ಲಿ ರವಿವಾರದಂದು ಜರುಗಿದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಸಂದೇಶ ನೀಡಿರುವ ಅವರು, ಶಿಕ್ಷಕರಿಂದ ಮಾತ್ರ ಈ ಸಮಾಜದಲ್ಲಿ ಬದಲಾವಣೆ ತರಲು ಸಾಧ್ಯವೆಂದು ಹೇಳಿದರು. ಕಳೆದ ಒಂದೂವರೆ ದಶಕದಿಂದ ಅರಭಾವಿ ಮತಕ್ಷೇತ್ರದಲ್ಲಿ ಶಿಕ್ಷಣದ …

Read More »

ಸ್ಯಾಂಡಲ್​ವುಡ್​ಗೆ ಬಿಗ್​ ಶಾಕ್​: ರೌಡಿಸಂ ಪ್ರೇರಕ ದೃಶ್ಯಗಳಿಗೆ ಬ್ರೇಕ್​ ಹಾಕಲು ಪೊಲೀಸ್​ ಇಲಾಖೆ ಚಿಂತನೆ

ಬೆಂಗಳೂರು : ಇನ್ಮುಂದೆ ‘ಮಚ್ಚು ಹಿಡಿದೊವ್ನು ನಾನು,ಲಾಂಗ್ ಕೊಟ್ಟವ್ನು ನಾನು, ಮಚ್ಚು ಹಿಡಿಯೊಕೆ ಹೇಳ್ಕೊಟ್ಟಿದ್ದೇ ನಾನು’ ಅಂತ ಖಡಕ್​ ಡೈಲಾಗ್ ಹೊಡ್ದು, ಸಿನಿ ಪ್ರೇಕ್ಷಕರಿಂದ ಚಪ್ಪಾಳೆ ಗಿಟ್ಟಿಸಿಕೊಳ್ಳೊ ರೌಡಿಸಂ ಪ್ರೇರಕ ದೃಶ್ಯಾವಳಿಗಳಿರುವ ಸಿನಿಮಾಗಳಿಗೆ ಪೊಲೀಸ್​ ಇಲಾಖೆ ಶಾಕ್​ ನೀಡಲು ಸಜ್ಜಾಗಿದೆ. ಹೌದು, ಇತ್ತೀಚಿಗೆ ರೌಡಿಸಂ ಆಧಾರಿತ ಸಿನಿಮಾಗಳು, ಆರೋಪಿಗಳಿಗೆ ಪ್ರೇರಣೆಯಾಗುತ್ತಿವೆ ಎಂಬ ಹಿನ್ನೆಲೆಯಲ್ಲಿ ಕೆಲ ರೌಡಿಸಂ ಎಳೆ ಹೊಂದಿರುವ, ಮತ್ತು ರೌಡಿಸಂ ಪ್ರೇರೆಪಿಸುವ ಸಿನಿಮಾಗಳಿಗೆ ಬ್ರೇಕ್​ ಹಾಕಲು ಪೊಲೀಸ್​ ಇಲಾಖೆ …

Read More »

ನಾಳೆಯಿಂದ ರಾಜ್ಯಾದ್ಯಂತ 6, 7 ಮತ್ತು 8ನೇ ತರಗತಿ ಆರಂಭ

ಬೆಂಗಳೂರು: ಇದೇ ಸೋಮವಾರ, ಸೆ. 6ರಿಂದ ರಾಜ್ಯಾದ್ಯಂತ 6, 7 ಮತ್ತು 8ನೇ ತರಗತಿಯ ವಿದ್ಯಾರ್ಥಿಗಳಿಗೂ ತರಗತಿ ಆರಂಭಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಗಳಲ್ಲಿ ಶನಿವಾರ, ರವಿವಾರ ಸೋಂಕು ಪ್ರಕರಣ ಕಡಿಮೆಯಾಗಿ, ಪಾಸಿಟಿವಿಟಿ ದರ ಶೇ. 2ಕ್ಕಿಂತ ಕಡಿಮೆಯಾದರೆ ಇಲ್ಲೂ ಶಾಲಾರಂಭ ಖಚಿತ. ಶನಿವಾರ ಐದು ಗಡಿ ಜಿಲ್ಲೆಗಳ ಕೋವಿಡ್‌ 19 ಸ್ಥಿತಿಗತಿ ಕುರಿತು ವೀಡಿಯೋ ಕಾನ್ಫರೆನ್ಸ್‌ ಮೂಲಕ ಮಾಹಿತಿ ಪಡೆದ ಬಳಿಕ …

Read More »

ಪ್ರತಿ ಮನೆಗೂ ಶುದ್ಧ ನೀರು ಪ್ರಧಾನಿ ಆಶಯ :,ದುರ್ಯೋಧನ ಐಹೊಳೆ

ಚಿಕ್ಕೋಡಿ: ‘ಜನರ ಆರೋಗ್ಯದ ಹಿತದೃಷ್ಟಿಯಿಂದ ರಾಯಬಾಗ ಕ್ಷೇತ್ರದ ಜನರಿಗೆ ಶುದ್ಧ ಕುಡಿಯುವ ನೀರಿನ ಯೋಜನೆ ಅನುಷ್ಠಾನ ಮಾಡಲಾಗಿದೆ. ಪ್ರತಿ ಮನೆಗೂ ಶುದ್ಧ ನೀರು ದೊರೆಯಬೇಕು ಎನ್ನುವುದು ಪ್ರಧಾನಿ ನರೇಂದ್ರ ಮೋದಿ ಅವರ ಆಶಯವಾಗಿದೆ’ ಎಂದು ಶಾಸಕ ದುರ್ಯೋಧನ ಐಹೊಳೆ ಹೇಳಿದರು. ರಾಯಬಾಗ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ತಾಲ್ಲೂಕಿನ ಬಂಬಲವಾಡ, ಕುಂಗಟೋಳ್ಳಿ, ಕರೋಶಿ ಗ್ರಾಮದಲ್ಲಿ ಜಲಜೀವನ ಅಭಿಯಾನದಲ್ಲಿ ₹ 4 ಕೋಟಿ ವೆಚ್ಚದಲ್ಲಿ ಕೈಗೊಂಡಿರುವ ಕುಡಿಯುವ ನೀರಿನ ಯೋಜನೆಗೆ ಶನಿವಾರ ಚಾಲನೆ …

Read More »

ಜಿಪಂ, ತಾಪಂ ಚುನಾವಣೆ; ಸರ್ಕಾರದ ಮಹತ್ವದ ನಿರ್ಧಾರ

ಬೆಂಗಳೂರು: ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಮರು ವರ್ಗೀಕರಣಕ್ಕೆ ಪ್ರತ್ಯೇಕ ಆಯೋಗ ರಚಿಸಲು ಸರ್ಕಾರ ತೀರ್ಮಾನಿಸಿದೆ. ಚುನಾವಣೆ ಆಯೋಗದ ವಿಂಗಡಣೆಗೆ ಆಕ್ಷೇಪ ವ್ಯಕ್ತವಾದ ಬೆನ್ನಲ್ಲೇ ಸರ್ಕಾರ ಹೊಸ ಹೆಜ್ಜೆ ಇಟ್ಟಿದ್ದು, ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳ ವಿಂಗಡಣೆಗೆ ಪ್ರತ್ಯೇಕ ಆಯೋಗ ರಚನೆ ಮಾಡಲು ನಿರ್ಧರಿಸಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ರಾಜ್ಯ ಚುನಾವಣಾ ಆಯೋಗದಿಂದ ಹಿಂದೆಯೇ ಜಿಲ್ಲಾ …

Read More »