Breaking News

ಜಿಲ್ಲೆ

ನಾಳೆ ವೀಕೆಂಡ್ ಕರ್ಫ್ಯೂ ಇರುವುದಿಲ್ಲ, ತಮ್ಮ ಗಮನಕ್ಕೆ…

ಗೋಕಾಕ ಕೋವಿಡ್ ಮಹಾಮಾರಿ ಮೂರನೇ ಅಲೆಯ ಮುಂಜಾಗ್ರತಾ ಕ್ರಮವಾಗಿ ರಾಜ್ಯ ಸರ್ಕಾರದ ಮಾರ್ಗ ಸೂಚಿಯಂತೆ ಗಡಿ ಜಿಲ್ಲೆ ಬೆಳಗಾವಿ ವೀಕೆಂಡ್ ಕರ್ಪ್ಯೂ ಜಾರಿ ಮಾಡಲಾಗಿತ್ತು. ಮಹಾರಾಷ್ಟ್ರದಲ್ಲಿ ಕೋವಿಡ್ ಪ್ರಕರಣಗಳು ಇಳಿಮುಖ ಹಿನ್ನೆಲೆ ರಾಜ್ಯ ಸರ್ಕಾರ ವೀಕೆಂಡ್ ಕರ್ಪ್ಯೂ ಹಿಂಪಡೆದು ಬೆಳಗಾವಿ ಜಿಲ್ಲೆಯಲ್ಲಿ ಕೋವಿಡ್ ನಿಯಮ ಪಾಲಿಸಿ ವ್ಯಾಪಾರ ವಹಿವಾಟಿಗೆ ಅವಕಾಶ ನೀಡಲಾಗಿದೆ.ಗೋಕಾಕ ತಹಸೀಲ್ದಾರ್ ಪ್ರಕಾಶ್ ಹೊಳೆಪ್ಪಗೋಳ ಪ್ರತಿಕಾಗೋಷ್ಠಿ ತಿಳಿಸಿದ್ದಾರೆ.

Read More »

ಕೃಷ್ಣಾ ನದಿ ನೀರಿನಲ್ಲಿ ಇಳಿಕೆ ಕಂಡ ಹಿನ್ನೆಲೆಯಲ್ಲಿ12 ಕೆ.ಜಿ. ತೂಕದ ಬೃಹತ್ ಗಾತ್ರದ ಮೀನು ಸಿಕ್ಕಿದೆ.

ಬೆಳಗಾವಿ: ಕೃಷ್ಣಾ ನದಿ ನೀರಿನಲ್ಲಿ ಇಳಿಕೆ ಕಂಡ ಹಿನ್ನೆಲೆಯಲ್ಲಿ ಜನ ಮೀಗಾರಿಕೆ ಆರಂಭಿಸಿದ್ದು, ಇದೇ ವೇಳೆ 12 ಕೆ.ಜಿ. ತೂಕದ ಬೃಹತ್ ಗಾತ್ರದ ಮೀನು ಸಿಕ್ಕಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಡೂರು – ಕಲ್ಲೋಳ ಸೇತುವೆ ಬಳಿ 12 ಕೆ.ಜಿ. ತೂಕದ ಮೀನು ಬಲೆಗೆ ಬಿದ್ದಿದೆ. ಬೋರಗಾಂವ ಪಟ್ಟಣದ ಹೈದರ ಅವರಿಗೆ ಮೀನು ಸಿಕ್ಕಿದೆ. ಇಷ್ಟೊಂದು ದೊಡ್ಡ ಗಾತ್ರದ ಮೀನು ಸಿಕ್ಕಿರುವುದಕ್ಕೆ ಹವ್ಯಾಸಿ ಮೀನಗಾರ ಹೈದರ ಸಂತಸ ವ್ಯಕ್ತಪಡಿಸಿದ್ದಾರೆ. ಇಷ್ಟೊಂದು …

Read More »

ನಾವು ಗೆದ್ದೇ ಗೆಲ್ತೇವೆ ಮತ್ತೇ ಮೆಜಾರಿಟಿ ತಂದೇ ತರ್ತೇವೆ: ಫಿರೋಜ್ ಸೇಠ್ ವಿಶ್ವಾಸ

ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆದ್ದೇ ಗೆಲ್ಲುತ್ತೇವೆ ಮತ್ತು ಮೆಜಾರಿಟಿ ಪಡೆದು ಪಾಲಿಕೆ ಚುಕ್ಕಾಣಿ ಹಿಯುತ್ತೇವೆ ಎಂದು ಫಿರೋಜ್ ಸೇಠ್ ಹೇಳಿದ್ದಾರೆ. ನಾವು ಜನರಲ್ಲಿ ನಮ್ಮ ಅಭ್ಯರ್ಥಿಗಳಿಗೆ ಮತ ಹಾಕುವಂತೆ ಮನವರಿಕೆ ಮಾಡುತ್ತೇವೆ. ಈ ಹಿಂದೆ ನಮ್ಮ 10 ವರ್ಷಗಳ ಅಧಿಕಾರಾವಧಿಯಲ್ಲಿ ಮಾಡಿದಂತೆ ಈ ಬಾರಿಯೂ ಅಭಿವೃದ್ಧಿ ಕಾರ್ಯ ಮಾಡುತ್ತೇವೆ ಎಂದಿದ್ದಾರೆ. ಎಂಐಎಂ ಸ್ಪರ್ಧೆಯಿಂದ ಬಿಜೆಪಿಗೆ ಲಾಭವಾಗುತ್ತೆ ಎನ್ನುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿ ಇದು ಪಶ್ಚಿಮ ಬಂಗಾಳದಲ್ಲಿ …

Read More »

ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಸರ್ಕಾರದಿಂದ ಇನ್ನೂ ಮನೆ ಹಂಚಿಕೆ ಮಾಡಿಲ್ಲ.

ಹುಬ್ಬಳ್ಳಿ: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಸರ್ಕಾರದಿಂದ ಇನ್ನೂ ಮನೆ ಹಂಚಿಕೆ ಮಾಡಿಲ್ಲ. ಇದಕ್ಕಾಗಿ ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಮನೆ ಹಂಚಿಕೆ ಮಾಡುವಂತೆ ಭಿಕ್ಷೆ ಬೇಡುತ್ತಿಲ್ಲ. ಮನೆ ಕೊಟ್ಟರೆ ಕೊಡಲಿ, ಬಿಡುವುದಿದ್ದರೆ ಬಿಡಲಿ, ಇನ್ನು ಮುಂದೆ ಮನೆ ಹಂಚಿಕೆ ಮಾಡುವಂತೆ ಕೇಳುವುದಿಲ್ಲ ಎಂದು ಅವರು ಹೇಳಿದ್ದಾರೆ. ಹುಬ್ಬಳ್ಳಿ -ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ಮಾಡಲು ಆಗಮಿಸಿದ್ದ ಅವರು ಮತದಾನದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಸರ್ಕಾರ ಮನೆ …

Read More »

ಬೆಳಗಾವಿ ಸೇರಿ ರಾಜ್ಯದ 3 ಮಹಾನಗರ ಪಾಲಿಕೆಗೆ ಇಂದು ಚುನಾವಣೆ, ಬೆಳಗ್ಗೆ 7 ರಿಂದ ಸಂಜೆ 6 ರವರೆಗೆ ಮತದಾನ

ಬೆಂಗಳೂರು: ರಾಜ್ಯದ ಮೂರು ಮಹಾನಗರ ಪಾಲಿಕೆಗಳಿಗೆ ಇಂದು ಚುನಾವಣೆ ನಡೆಯಲಿದೆ. ಬೆಳಗಾವಿ, ಕಲಬುರ್ಗಿ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗಳಿಗೆ ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ. ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸಿ ಮತದಾನ ನಡೆಯಲಿದ್ದು, ಸೆಪ್ಟಂಬರ್ 6 ರಂದು ಚುನಾವಣೆಯ ಫಲಿತಾಂಶ ಪ್ರಕಟಿಸಲಾಗುವುದು. ಬೆಳಗಾವಿ ಮಹಾನಗರಪಾಲಿಕೆಯ 58 ವಾರ್ಡ್ ಗಳಿಗೆ ಚುನಾವಣೆ ನಡೆಯಲಿದ್ದು 385 ಅಭ್ಯರ್ಥಿಗಳು ಕಣದಲ್ಲಿದ್ದಾರೆ. 4,28,364 ಮತದಾರರು ಮತ ಚಲಾವಣೆ ಮಾಡಲಿದ್ದು, 415 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. 162 …

Read More »

ಕೋವಿಡ್ ಲಸಿಕೆ: ರಾಜ್ಯದ 9 ಜಿಲ್ಲೆಗಳಲ್ಲಿ ಶೇ 50ಕ್ಕಿಂತ ಕಡಿಮೆ ಸಾಧನೆ

ಬೆಂಗಳೂರು: ಕೋವಿಡ್ ಲಸಿಕೆ ವಿತರಣೆಯಲ್ಲಿ ರಾಜ್ಯದ 9 ಜಿಲ್ಲೆಗಳು ಹಿಂದೆ ಬಿದ್ದಿದ್ದು, ಲಸಿಕಾ ಅಭಿಯಾನ ಪ್ರಾರಂಭವಾಗಿ ಏಳೂವರೆ ತಿಂಗಳು ಕಳೆದರೂ ಶೇ 50ರಷ್ಟ ಗುರಿ ಸಾಧನೆ ಸಾಕಾರವಾಗಿಲ್ಲ. ಕಳೆದ ಜ.16ರಿಂದ ರಾಜ್ಯದಲ್ಲಿ ಲಸಿಕಾ ಅಭಿಯಾನ ಪ್ರಾರಂಭವಾಗಿದೆ. ಸಂಭಾವ್ಯ ಕೋವಿಡ್ ಮೂರನೇ ಅಲೆಯ ಮುನ್ನೆಚ್ಚರಿಕಾ ಕ್ರಮವಾಗಿ ಎರಡು ವಾರಗಳಿಂದ ಲಸಿಕೆ ವಿತರಣೆಗೆ ವೇಗ ನೀಡಲಾಗಿದೆ. ಸೆಪ್ಟೆಂಬರ್ ತಿಂಗಳಲ್ಲಿ ಪ್ರತಿ ಬುಧವಾರ 15 ಲಕ್ಷ ಹಾಗೂ ಉಳಿದ ದಿನ 6 ಲಕ್ಷ ಡೋಸ್‌ಗಳನ್ನು ವಿತರಿಸುವ ಗುರಿಯನ್ನು …

Read More »

ನಮ್ಮದು ಮಾತನಾಡುವ ಸರ್ಕಾರವಲ್ಲ, ಕಾರ್ಯ ಮಾಡಿ ತೋರಿಸುವ ಸರ್ಕಾರ : ಸಿಎಂ ಬೊಮ್ಮಾಯಿ

ದಾವಣಗೆರೆ : ರೈತ ಮಕ್ಕಳಿಗೆ ಶಿಷ್ಯವೇತನ, ವಿವಿಧ ಸಾಮಾಜಿಕ ಭದ್ರತಾ ಮಾಸಾಶನ ಹೆಚ್ಚಳ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ನಮ್ಮದು ಮಾತನಾಡುವ ಸರ್ಕಾರವಲ್ಲ, ಕಾರ್ಯ ಮಾಡಿ ತೋರಿಸುವ ಸರ್ಕಾರ ಎಂದು ತೋರಿಸಿಕೊಟ್ಟಿದ್ದೇವೆ ಎಮದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನಗರದ ಜಿ.ಎಂ.ಐ.ಟಿ. ಕಾಲೇಜು ಆವರಣದಲ್ಲಿ ಇಂದು (ಗುರುವಾರ, ಸೆಪ್ಟೆಂಬರ್ 2) ಕೇಂದ್ರ ಗೃಹ ಸಚಿವ ಅಮಿತ್ ಶಾ ಉಪಸ್ಥಿತಿಯಲ್ಲಿ ನಡೆದ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಸಮಾರಂಭದಲ್ಲಿ ಅವರು ಮಾತನಾಡಿದ ಅವರು, …

Read More »

ಗೋಕಾಕ ನಗರದ ಸಾರ್ವಜನಿಕಕರಿಗೆ ನಗರಸಭೆಯಿಂದ ಸೂಚನೆ?

ಗೋಕಾಕ ನಾಗರಿಕರಲ್ಲಿ ಈ ಮೂಲಕ ತಿಳಿಸುವುದೇನೆಂದರೆ   ಗೋಕಾಕ ನಗರಕ್ಕೆ ನೀರು ಪೂರೈಕೆ ಮಾಡುವ ನಗರದ ನದಿಯ ದಡದಲ್ಲಿರುವ ಜಾಕವೆಲ್ ನಲ್ಲಿರುವ 200 ಎಚ್.ಪಿ ಪಂಪಸೆಟ್ ಮೋಟಾರ್ ರಿಪೇರಿ ಇದ್ದ ಕಾರಣ ಗೋಕಾಕ ನಗರದಲ್ಲಿ  ಶುಕ್ರವಾರ ದಿ.3-9-2021ಮತ್ತು ಶನಿವಾರ ದಿ.4-9-2021 ರಂದು ನೀರು ಸರಬುರಾಜಿನಲ್ಲಿ ವ್ಯತ್ಯಯವಾಗಲಿದೆ ಕಾರಣ ಸಾರ್ವಜನಿಕರು ಸಹಕರಿಸಲು   ನಗರಸಭೆಯ ಅಧ್ಯಕ್ಷರಾದ ಶ್ರೀ ಜಯಾನಂದ ಹುಣಶ್ಯಾಳಿ,ಪೌರಾಯುಕ್ತರಾದ ಶ್ರೀ ಶಿವಾನಂದ ಹಿರೇಮಠ   ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ …

Read More »

ಗೋಕಾಕ ಸರಣಿ ಮನೆ ಕಳ್ಳತನ ಪ್ರಕರಣ ಹಿನ್ನೆಲೆ ಪೊಲೀಸ್ ಅಧಿಕಾರಿಗಳಿಗೆ ಸಾಹುಕಾರ ತರಾಟೆ

  ಗೋಕಾಕ ನಗರದಲ್ಲಿ ಸರಣಿ ಮನೆ ಕಳ್ಳತನ ಪ್ರಕರಣಗಳು ಹಾಗೂ ದ್ವಿಚಕ್ರ ವಾಹನ ಕಳ್ಳತನ ಪ್ರಕರಣ ಹಿನ್ನೆಲೆ ಗೋಕಾಕ ಪೊಲೀಸ್ ಇಲಾಖೆ ಡಿ.ಎಸ್.ಪಿ ಮನೋಜಕುಮಾರ ನಾಯಿಕಸಿಪಿಐ ಗೋಪಾಲ ರಾಠೋಡ ಸೇರಿದಂತೆ ಪಿಎಸ್‌ಐ ಗಳ ಸಭೆ ನಡೆಸಿದ ಶಾಸಕರಾದ ಸಾಹುಕಾರ ಶ್ರೀ ರಮೇಶ ಜಾರಕಿಹೊಳಿ ಅವರು ನಗರದಲ್ಲಿ ಸರಣಿ ಮನೆ ಕಳ್ಳತನ,ದ್ವಿಚಕ್ರ ವಾಹನ ಕಳ್ಳತನ ಪ್ರಕರಣಗಳ ತನಿಖೆಗಾಗಿ ಈ ಕೂಡಲೇ ವಿಶೇಷ ಪೊಲೀಸ್ ತಂಡ ರಚಿಸಿ ಕಳ್ಳರನ್ನು ಬಂಧಿಸಿ   ಹೆಡೆಮುರಿ …

Read More »

ಬೆಲೆ ಏರಿಕೆಯನ್ನು ಸಮರ್ಥನೆ ಮಾಡಿದ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್

ಬೆಂಗಳೂರು: ಡೀಸೆಲ್, ಪೆಟ್ರೋಲ್ ಬೆಲೆ ಏರಿಕೆ ತಾತ್ಕಾಲಿಕ ಅಷ್ಟೇ. ಮುಂದಿನ ದಿನಗಳಲ್ಲಿ ಬೆಲೆ ಕಡಿಮೆಯಾಗಲಿದೆ. ಟೊಮೆಟೊ, ಪೆಟ್ರೊಲ್, ಡಿಸೆಲ್, ಈರುಳ್ಳಿ ಒಂದು ವಸ್ತುವಿನ ಬೆಲೆ ಮೇಲೆ ಮಾತ್ರ ಪ್ರಶ್ನೆ ಮಾಡಿದರೆ ನಾನು ಉತ್ತರ ನೀಡಲು ಆಗುವುದಿಲ್ಲ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಡವರಿಗೆ ಮೋದಿ ಸರ್ಕಾರ ಅನೇಕ ಯೋಜನೆ ಮಾಡಿದೆ. ರೈತರ ಖಾತೆಗಳಿಗೆ ಆರು ಸಾವಿರ ರೂ. ಹಾಕುತ್ತಿದ್ದಾರೆ. ಆಯುಷ್ಮಾನ್ ಭಾರತ …

Read More »