Breaking News

ಜಿಲ್ಲೆ

ಸರ್ಕಾರಿ ಕಚೇರಿಗಳ ನೌಕರರಿಗೆ ಸಾರ್ವತ್ರಿಕ ರಜೆಯನ್ನು ಮತ್ತು ಖಾಸಗಿ ಹಾಗೂ ಇತರ ನೌಕರರಿಗೆ ವೇತನ ಸಹಿತ ರಜೆ

ಧಾರವಾಡ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸಾರ್ವತ್ರಿಕ ಚುನಾವಣೆಯು ಸೆಪ್ಟೆಂಬರ್ 3 ರಂದು ನಡೆಯಲಿದೆ. ಅಂದು ಬೆಳಿಗ್ಗೆ 7 ಗಂಟೆಯಿಂದ ಸಾಯಂಕಾಲ 6 ಗಂಟೆವರೆಗೆ ಮತದಾನ ನಡೆಯಲಿದೆ.   ಮತದಾನ ದಿನದಂದು ಮಹಾನಗರ ಪಾಲಿಕೆಯ ವ್ಯಾಪ್ತಿಯ ಸರ್ಕಾರಿ ಕಚೇರಿಗಳ ನೌಕರರಿಗೆ ಸಾರ್ವತ್ರಿಕ ರಜೆಯನ್ನು ಮತ್ತು ಖಾಸಗಿ ಹಾಗೂ ಇತರ ನೌಕರರಿಗೆ ವೇತನ ಸಹಿತ ರಜೆ ಮಂಜೂರು ಮಾಡಿ, ರಾಜ್ಯ ಚುನಾವಣಾ ಆಯೋಗವು ಅಧಿಸೂಚನೆ ಹೊರಡಿಸಿದ್ದು, ಮಹಾನಗರ ವ್ಯಾಪ್ತಿಯ ಎಲ್ಲ ಸರ್ಕಾರಿ, ಅರೆ …

Read More »

ಪದಾಧಿಕಾರಿಗಳ ಸಭೆಯಲ್ಲಿ ಡಿಕೆ ಶಿವಕುಮಾರ್ ಗರಂ

ಬೆಂಗಳೂರು (ಸೆ.01): ರಾಜ್ಯ ಕಾಂಗ್ರೆಸ್‌ಗೆ ಪ್ರತ್ಯೇಕ ಸಂವಿಧಾನ ರಚಿಸಲು ಮುಂದಾಗಿದ್ದು, ಇದರ ಹೊಣೆಯನ್ನು ಹಿರಿಯ ಮುಖಂಡ ವಿ.ಎಸ್‌. ಉಗ್ರಪ್ಪ ಅವರಿಗೆ ನೀಡಲಾಗಿದೆ. ಅದು ಸಿದ್ಧವಾದ ನಂತರ ಕಾಂಗ್ರೆಸ್‌ ಕಾರ್ಯಕರ್ತರು ಅದರಂತೆ ನಡೆದುಕೊಳ್ಳಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಮಂಗಳವಾರ ರೇಸ್‌ಕೋರ್ಸ್‌ ರಸ್ತೆಯಲ್ಲಿರುವ ಕಾಂಗ್ರೆಸ್‌ ಭವನದಲ್ಲಿ ಆಯೋಜಿಸಲಾಗಿದ್ದ ಎನ್‌ಎಸ್‌ಯುಐ ರಾಜ್ಯಾಧ್ಯಕ್ಷ ಕೀರ್ತಿ ಗಣೇಶ್‌ ಅವರ ಪದಗ್ರಹಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.   ರಾಜ್ಯ ಕಾಂಗ್ರೆಸ್‌ ಸಂವಿಧಾನ ಯಾವ ರೀತಿ ಇರಬೇಕೆಂದು …

Read More »

ಸೆಪ್ಟೆಂಬರ್‌ 1 ರಿಂದ ಲಸಿಕೆ ಪಡೆಯದಿದ್ದರೆ ಪಡಿತರ, ಪಿಂಚಣಿ ತಡೆ ಹಿಡಿಯುವ ಮಹತ್ವದ ತೀರ್ಮಾನ ಕೈಗೊಂಡಿದ್ದಾರೆ.

ಚಾಮರಾಜನಗರ : ಜಿಲ್ಲೆಯಲ್ಲಿ ಕೊರೊನಾ ಲಸಿಕೆ ವೇಗ ಹೆಚ್ಚಿಸಲು ಚಾಮರಾಜನಗರ ಜಿಲ್ಲಾಡಳಿತ ವಿಭಿನ್ನ ಅಭಿಯಾನ ಆರಂಭಿಸಿದ್ದು, ವ್ಯಾಕ್ಸಿನೇಷನ್ ಪ್ರಮಾಣಪತ್ರ ತಂದ್ರೆ ಮಾತ್ರ ಪಡಿತರ ವಿತರಣೆ ಮಾಡುವಂತೆ ನ್ಯಾಯಬೆಲೆ ಅಂಗಡಿಗಳಿಗೆ ಜಿಲ್ಲಾಧಿಕಾರಿ ಎಂ.ಆರ್. ರವಿ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿ ಡಾ ಎಂಆರ್ ರವಿ ಹೊಸ ಮಾರ್ಗವೊಂದನ್ನು ಕಂಡುಕೊಂಡಿದ್ದು, ಸೆಪ್ಟೆಂಬರ್‌ 1 ರಿಂದ ಲಸಿಕೆ ಪಡೆಯದಿದ್ದರೆ ಪಡಿತರ, ಪಿಂಚಣಿ ತಡೆ ಹಿಡಿಯುವ ಮಹತ್ವದ ತೀರ್ಮಾನ ಕೈಗೊಂಡಿದ್ದಾರೆ. ಚಾಮರಾಜನಗರ ಜಿಲ್ಲೆಯ ಜನರ ಆರೋಗ್ಯದ ಹಿತದೃಷ್ಟಿಯಿಂದ …

Read More »

ಮುಂದಿನ ಚುನಾವಣೆಯಲ್ಲಿ ಮದ್ದೂರು ಕ್ಷೇತ್ರದಿಂದ ಅಭಿಷೇಕ್‌ ಅವರನ್ನು ಕಣಕ್ಕಿಸಲು ಸುಮಲತಾ ಪ್ಲ್ಯಾನ್‌

ಮಂಡ್ಯ: ಚುನಾವಣೆಯಲ್ಲಿ ಕೊಟ್ಟ ಮಾತನ್ನು ಸಂಸದೆ ಸುಮಲತಾ ಅಂಬರೀಶ್‌ ಉಳಿಸಿಕೊಂಡಿದ್ದು, ಮಂಡ್ಯ ಜಿಲ್ಲೆಯ ಹನಕೆರೆ ಗ್ರಾಮದಲ್ಲಿ ಸ್ವಂತ ಮನೆ ನಿರ್ಮಾಣಕ್ಕೆ ಮುಂದಾಗಿದ್ದಾರೆ. ಲೋಕಸಭಾ ಚುನಾವಣೆ ಗೆದ್ದ ವೇಳೆ ಸುಮಲತಾ ಅವರು ಮಂಡ್ಯ ಜಿಲ್ಲೆಯಲ್ಲಿಯೇ ಮನೆ ನಿರ್ಮಾಣ ಮಾಡಿ, ಇಲ್ಲೇ ಇರುತ್ತೇನೆ ಎಂದು ಹೇಳಿದ್ದರು. ಅದರಂತೆ ಇದೀಗ ಇಲ್ಲಿಯೇ ಮನೆ ನಿರ್ಮಾಣ ಶುರು ಮಾಡಿದ್ದಾರೆ.   ಮಂಡ್ಯ-ಮದ್ದೂರು ನಡುವಿನ ಹನಕೆರೆ ಗ್ರಾಮದಲ್ಲಿ ಸುಮಲತಾ ಸ್ವಂತ ಮನೆ ನಿರ್ಮಿಸಲಿದ್ದು, ತಮ್ಮ ತನ್ನ ಆಪ್ತ …

Read More »

ಸಿಎಂ ಬೊಮ್ಮಾಯಿ ಬಿಜೆಪಿ ಪಂಜರದಲ್ಲಿದ್ದಾರಾ?: ಕಟೀಲ್‌ ಹೇಳಿದ್ದಿಷ್ಟು

ಬೆಂಗಳೂರು(ಸೆ.01): ಬಜೆಟ್‌ನಲ್ಲಿ ಘೋಷಣೆ ಮಾಡಿದ ಕಾರ್ಯಕ್ರಮಗಳು ಕಾಲಮಿತಿಯಲ್ಲಿ ಅನುಷ್ಠಾನವಾಗದೆ ವಿಳಂಬವಾಗುತ್ತಿರುವುದಕ್ಕೆ ಸಿಡಿಮಿಡಿಗೊಂಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ವಿಕಾಸಸೌಧದಲ್ಲಿ ಮಂಗಳವಾರ ನಡೆದ ಕೆಡಿಪಿ ಸಭೆಯಲ್ಲಿ ಅಭಿವೃದ್ಧಿ ಕಾರ್ಯಗಳ ಅನುಷ್ಠಾನದಲ್ಲಿ ಅಧಿಕಾರಿಗಳು ಸರಿಯಾಗಿ ತೊಡಗಿಸಿಕೊಳ್ಳದಿರುವುದಕ್ಕೆ ಗರಂ ಆದರು. ಜನರ ಕಲ್ಯಾಣಕ್ಕಾಗಿ ಬಜೆಟ್‌ನಲ್ಲಿ ಕಾರ್ಯಕ್ರಮಗಳನ್ನು ಘೋಷಣೆ ಮಾಡುತ್ತೇವೆ. ಅವುಗಳನ್ನು ಸರಿಯಾಗಿ ಅನುಷ್ಠಾನಗೊಳಿಸಬೇಕು. ಇಲ್ಲದಿದ್ದರೆ ಅಧಿಕಾರಿಗಳನ್ನು ಹೊಣೆ ಮಾಡಿ ಶಿಸ್ತು ಕ್ರಮ ಜರುಗಿಸಬೇಕಾಗುತ್ತದೆ. ಅಭಿವೃದ್ಧಿ ವಿಚಾರದಲ್ಲಿ ಸಾಕಷ್ಟು ದೂರುಗಳು …

Read More »

ಸೇವಾದಳವನ್ನು ನಾಡಿನಾದ್ಯಂತ ಕಟ್ಟಿದ ಡಾ.ಎನ್.ಎಸ್.ಹರ್ಡೀಕರ್ ಹಾಗೂ ಮಹಾತ್ಮ ಗಾಂಧೀಜಿ ಅವರ ತತ್ವಾದರ್ಶಗಳನ್ನು ಜನರಿಗೆ ತಲುಪಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ‘ಎಂದು ಕಾಂಗ್ರೆಸ್ ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು.

ಗೋಕಾಕ : ‘ ಸೇವಾದಳವನ್ನು ನಾಡಿನಾದ್ಯಂತ ಕಟ್ಟಿದ ಡಾ.ಎನ್.ಎಸ್.ಹರ್ಡೀಕರ್ ಹಾಗೂ ಮಹಾತ್ಮ ಗಾಂಧೀಜಿ ಅವರ ತತ್ವಾದರ್ಶಗಳನ್ನು ಜನರಿಗೆ ತಲುಪಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ‘ಎಂದು ಕಾಂಗ್ರೆಸ್ ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು.   ಘಟಪ್ರಭಾದ ಡಾ.ಎನ್.ಎಸ್.ಹರ್ಡೀಕರ್ ಸೇವಾದಳ ರಾಷ್ಟ್ರೀಯ ತರಬೇತಿ ಕೇಂದ್ರದಲ್ಲಿ ಸೇವಾದಳದ ಪ್ರಪ್ರಥಮ ಮಹಿಳಾ ಸಮರ್ಥ್ 5 ದಿನದ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.   ‘ಸೇವಾದಳ ಕೇಂದ್ರದಲ್ಲಿ ಹೆಚ್ಚು ಹೆಚ್ಚು ಕಾರ್ಯಕರ್ತರಿಗೆ ತರಬೇತಿ ನೀಡುವುದರ ಮೂಲಕ …

Read More »

ಅಭಿವೃದ್ಧಿ ಕಾರ್ಯಗಳೇ ನಮ್ಮ ಸಾಧನೆಯನ್ನು ಹೇಳುತ್ತವೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ

    ಬೆಳಗಾವಿ: ನಗರದ 45ನೇ ವಾರ್ಡ್ ನ ಹಿಂಡಾಲ್ಕೊ ದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜಶ್ರೀ ನಾಯ್ಕ್ ಪರ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಇಂದು ಮತಯಾಚನೆ ಮಾಡಿದರು.   ಈ ಸಂದರ್ಭದಲ್ಲಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದ ಅವರು, ನಾನು ಉಸ್ತುವಾರಿ ಸಚಿವ ಹಾಗೂ ಫೀರೋಜ್ ಸೇಠ್ ಶಾಸಕರಾಗಿದ್ದ ಸಂದರ್ಭದಲ್ಲಿ ಸಮೀಪದ ಬಸವನಕೊಳ್ಳ ಅರಣ್ಯಭೂಮಿಯಲ್ಲಿ ನೀರಿನ ಶುದ್ಧೀಕರಣ ಘಟಕ ನಿರ್ಮಿಸುವ ಮೂಲಕ 45ನೇ ವಾರ್ಡ್ ಸೇರಿ ಸುತ್ತಮುತ್ತಲಿನ ಪ್ರದೇಶಗಳಿಗೆ ಕುಡಿಯುವ …

Read More »

ಕಾಂಗ್ರೆಸ್ ಪಕ್ಷದಿಂದಜಯಶ್ರೀ ಮಾಳಗಿ ಹಾಗೂಜಯರಾಜ ಹಲಗೆಕರ್ ಉಚ್ಛಾಟನೆ

ಬೆಳಗಾವಿ – ಮಹಾನಗರ ಪಾಲಿಕೆ ಚುನಾವಣೆಗೆ ಬಂಡಾಯ ಅಭ್ಯರ್ಥಿಗಳಾಗಿ ಸ್ಪರ್ಧಿಸಿರುವವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಛಾಟಿಸಲಾಗಿದೆ. 12ನೇ ವಾರ್ಡ್ ನಿಂದ ಸ್ಪರ್ಧಿಸಿರುವ ಜಯಶ್ರೀ ಮಾಳಗಿ ಹಾಗೂ 29ನೇ ವಾರ್ಡ್ ನಿಂದ ಸ್ಪರ್ಧಿಸಿರುವ ಜಯರಾಜ ಹಲಗೆಕರ್ ಅವರನ್ನು 6 ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟಿಸಿ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧೃವನಾರಾಯಣ ಆದೇಶ ಹೊರಡಿಸಿದ್ದಾರೆ.

Read More »

ಟೆಲಿಪೋನ್ ಕದ್ದಾಲಿಕೆ ಪ್ರಕರಣದಲ್ಲಿ ಅಲೋಕ್ ಕುಮಾರ್‌ಗೆ ಕ್ಲೀನ್ ಚಿಟ್!

ಬೆಂಗಳೂರು, ಆ. 31 : ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಹಿರಿಯ ರಾಜಕಾರಣಿಗಳ ಹಾಗೂ ಪೊಲೀಸ್ ಅಧಿಕಾರಿಗಳ ಪೋನ್ ಕದ್ದಾಲಿಕೆ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಟೆಲಿನೋನ್ ಕದ್ದಾಲಿಕೆ ಪ್ರಕರಣದಲ್ಲಿ ಸಿಬಿಐ ಬಿ ವರದಿ ಸಲ್ಲಿಸಿದ್ದು, ಇದಕ್ಕೆ ಅಕ್ಷೇಪಣೆ ವ್ಯಕ್ತಪಡಿಸಿ ರೈಲ್ವೇ ಎಡಿಜಿಪಿ ಭಾಸ್ಕರರಾವ್ ಅವರು ಸಿಬಿಐ ವಿಶೇಷ ನ್ಯಾಯಲಯಕ್ಕೆ ಆಕ್ಷೇಪಣಾ ಅರ್ಜಿ ಸಲ್ಲಿಸಿದ್ದಾರೆ. ಇಬ್ಬರು ಹಿರಿಯ ಐಪಿಎಸ್ ಅಧಿಕಾರಿಗಳ ನಡುವಿನ “ಟೆಲಿಪೋನ್ ಕದ್ದಾಲಿಕೆ ಪ್ರಕರಣ” ಗುದ್ದಾಟ ಮತ್ತೆ ಬೀದಿಗೆ ಬಂದಿದೆ. …

Read More »

ಕೆ.ಎಸ್.ಈಶ್ವರಪ್ಪ ನಾಲಿಗೆ ಮತ್ತು ಮೆದುಳಿಗೆ ಸಂಪರ್ಕವೇ ಕಟ್ ಆಗಿದೆ: ಸಿದ್ದರಾಮಯ್ಯ

ಬೆಂಗಳೂರು: ಕಾಂಗ್ರೆಸ್ ಫ್ಯೂಸ್ ಹೋಗಿದೆ ಎನ್ನುವ ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ(KS Eshwarappa) ಅವರ ನಾಲಿಗೆ ಮತ್ತು ಮೆದುಳಿಗೆ ಸಂಪರ್ಕವೇ ಕಟ್ ಆಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah) ವ್ಯಂಗ್ಯವಾಡಿದ್ದಾರೆ. ಮಂಗಳವಾರ ಸರಣಿ ಟ್ವೀಟ್ ಮಾಡಿರುವ ಅವರು, ‘ಕೆ.ಎಸ್.ಈಶ್ವರಪ್ಪ ಎಷ್ಟೇ ಕೂಗಾಡಲಿ, ಹಾರಾಡಲಿ ಮುಂಬರುವ ಚುನಾವಣೆಯಲ್ಲಿ ನಾಡಿನ ಜನ ಯಾರ ಫ್ಯೂಸ್ ಕಿತ್ತಾಕುತ್ತಾರೆ ಎನ್ನುವುದು ಗೊತ್ತಾಗುತ್ತದೆ’ ಅಂತಾ ಕುಟುಕಿದ್ದಾರೆ. ‘ಕೊರೊನಾ ರೋಗದ ಬಗ್ಗೆ ಹೆಚ್ಚು ಎಚ್ಚರಿಕೆಯಿಂದಿರಬೇಕಾದ ಆಡಳಿತಾರೂಢ ಪಕ್ಷವೇ ಜನಾಶೀರ್ವಾದ ಯಾತ್ರೆ …

Read More »