Breaking News

ಜಿಲ್ಲೆ

ಪ್ರತಿ ತಿಂಗಳು 20 ಸಾವಿರ ಲೀಟರ್ ಪ್ರತಿ ಮನೆಗೆ ಕುಡಿಯವ ನೀರು ಸೇರಿದಂತೆ ಎಲ್ಲರಿಗೂ ಉಚಿತ ಚಿಕಿತ್ಸೆ ನೀಡುತ್ತೇವೆ ಎಂದು ಆಪ್ ಚುನಾವಣೆಯ ಪ್ರಣಾಳಿಕೆಯಾಗಿ ಘೋಷಣೆ ಮಾಡಿದೆ.

  ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ನಗರ ಪಾಲಿಕೆ ಚುನಾವಣೆಯು ಸಪ್ಟೆಂಬರ್ 3 ರಂದು ನಡೆಯಲಿದೆ.   ಈ ಹಿನ್ನೆಲೆಯಲ್ಲಿ ಆಮ್ ಆದ್ಮಿ ಪಕ್ಷದಿಂದ (AAP) ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಲಾಗಿದೆ. ಉತ್ತಮ ದರ್ಜೆಯ ಶಾಲೆ, ಮಕ್ಕಳಿಗೆ ಉಚಿತ ಲ್ಯಾಪ್​ಟಾಪ್ , ಎಲ್ಲಾ ಮನೆಗಳಿಗೆ ಪ್ರತೀ ತಿಂಗಳು 20 ಸಾವಿರ ಲೀಟರ್ ನೀರು ನೀಡುವ ಭರವಸೆಯನ್ನು ಆಮ್ ಆದ್ಮಿ ಪಕ್ಷ ನೀಡಿದೆ. ಆಮ್ ಆದ್ಮಿ ಪಕ್ಷ ಆಶ್ವಾಸನೆ ನೀಡುತ್ತಿಲ್ಲ, ಖಾತ್ರಿ ಪಡಿಸಲಿದೆ …

Read More »

ಇಂದು ರಾಜ್ಯಾದ್ಯಂತ ಸರ್ಕಾರಿ ಶಾಲಾ ಶಿಕ್ಷಕರ ಹುದ್ದೆಯ ಅರ್ಹತೆಗಾಗಿ ನಡೆಸುವ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯು (ಕೆ-ಟಿಇಟಿ) ನಡೆಯಲಿದೆ.

ಬೆಂಗಳೂರು : ಇಂದು ರಾಜ್ಯಾದ್ಯಂತ ಸರ್ಕಾರಿ ಶಾಲಾ ಶಿಕ್ಷಕರ ಹುದ್ದೆಯ ಅರ್ಹತೆಗಾಗಿ ನಡೆಸುವ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯು (ಕೆ-ಟಿಇಟಿ) ನಡೆಯಲಿದೆ. ವೀಕೆಂಡ್ ಕರ್ಪ್ಯೂ ಇರುವ ಜಿಲ್ಲೆಗಳು ಸೇರಿದಂತೆ ರಾಜ್ಯದ ಎಲ್ಲ ಕಡೆಗಳಲ್ಲೂ ಪರೀಕ್ಷೆ ನಡೆಯಲಿದೆ ಎಂದು ಶಿಕ್ಷಣ ಇಲಾಖೆಯ ಕೇಂದ್ರೀಯ ದಾಖಲಾತಿ ಘಟಕ ತಿಳಿಸಿದೆ.   BIG NEWS : ರಾಜ್ಯದಲ್ಲಿ 1 ರಿಂದ 8 ನೇ ತರಗತಿ ಆರಂಭದ ಕುರಿತಂತೆ ಶಿಕ್ಷಣ ಸಚಿವ ನಾಗೇಶ್ ಮಹತ್ವದ ಮಾಹಿತಿ …

Read More »

ತಿಹಾರ್, ಹಿಂಡಲಗಾ ಜೈಲಿನಿಂದ ಹೊರಬಂದವರೇ ಕಾಂಗ್ರೆಸ್ ಪಕ್ಷಕ್ಕೆ ಶ್ರೇಷ್ಠರು: ಬಿಜೆಪಿ ಟೀಕೆ

ಬೆಂಗಳೂರು: ಯೋಗೇಶ್ ಗೌಡ ಕೊಲೆ ಪ್ರಕರಣದ ಆರೋಪಿ ಮಾಜಿ ಸಚಿವ ವಿನಯ್ ಕುಲಕರ್ಣಿ ಇಂದು ಹಿಂಡಲಗಾ ಜೈಲಿನಿಂದ ಜಾಮೀನಿನ ಮೇಲೆ ಹೊರಬಂದರು. ವಿನಯ್ ಕುಲಕರ್ಣಿ ಜೈಲಿನಿಂದ ಹೊರಬರುತ್ತಿದ್ದಂತೆ ಕಾಂಗ್ರೆಸ್ ನಾಯಕಿ ಲಕ್ಷ್ಮಿ ಹೆಬ್ಬಾಳ್ಕರ್ ಸಿಹಿ ತಿನ್ನಿಸಿ ಸ್ವಾಗತಿಸಿದ್ದಾರೆ. ಇದಕ್ಕೆ ಬಿಜೆಪಿ ಟೀಕೆ ಮಾಡಿದೆ. ಕಾಂಗ್ರೆಸ್ ಪಕ್ಷ ನೈತಿಕವಾಗಿ ಅಧಃಪತನ ಕಂಡಿದೆ ಎಂಬುದನ್ನು ಸೂಚಿಸಲು ಇದಕ್ಕಿಂತ ಬೇರೆ ಉದಾಹರಣೆ ಬೇಕಿಲ್ಲ. ಕೊಲೆ ಆರೋಪಿ ಜಾಮೀನು ಪಡೆದು ಜೈಲಿನಿಂದ ಹೊರ ಬಂದರೆ ಯುದ್ಧ ಗೆದ್ದು …

Read More »

ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಸಲು ಕ್ರಮ: ಬಸವರಾಜ ಬೊಮ್ಮಾಯಿ

ಬೆಳಗಾವಿ: ಸುವರ್ಣ ವಿಧಾನಸೌಧವನ್ನು ಆಡಳಿತದ ಶಕ್ತಿ ಕೇಂದ್ರವನ್ನಾಗಿ ಮಾಡಲು ಸರಕಾರ ಬದ್ಧವಾಗಿದ್ದು ಈ ನಿಟ್ಟಿನಲ್ಲಿ ಡಿಸೆಂಬರ್ ನಲ್ಲಿ ಚಳಿಗಾಲ ಅಧಿವೇಶನ ನಡೆಸಲು ಕ್ರಮಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ನಗರದ ಸುವರ್ಣ ವಿಧಾನಸೌಧದಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ಸೌಧವನ್ನು ಶಕ್ತಿಕೇಂದ್ರವನ್ನಾಗಿ ಮಾಡಲು ತಕ್ಷಣವೇ ಸಕ್ಕರೆ ಆಯುಕ್ತಾಲಯವನ್ನು ಬೆಳಗಾವಿಗೆ ಸ್ಥಳಾಂತರ ಮಾಡಲು ಆದೇಶ ನೀಡಲಾಗುವುದು ಎಂದು ಹೇಳಿದರು. ಇದಲ್ಲದೆ ಮಹತ್ವದ ಸರಕಾರಿ ಕಚೇರಿಗಳನ್ನು ಸಹ ಸುವರ್ಣ ಸೌಧಕ್ಕೆ …

Read More »

*ಡಿಸೆಂಬರ್ ನಲ್ಲಿ ಚಳಿಗಾಲ ಅಧಿವೇಶನ, * ಸುವರ್ಣ ಸೌಧ ಆಡಳಿತದ ಶಕ್ತಿ ಕೇಂದ್ರ ಬದ್ಧ.

ಬೆಳಗಾವಿ : ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಇಂದು ಬೆಳಗಾವಿಯಲ್ಲಿ ಜನ ಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಕೋವಿಡ್-19 ಹಾಗೂ ಪ್ರವಾಹ ಪರಿಸ್ಥಿತಿಗೆ ಸಂಬಂಧಿಸಿದಂತೆ ಸಭೆ ನಡೆಸಿದರು. ಈ ಸಭೆಯಲ್ಲಿ ಬ್ಲ್ಯಾಕ್ ‌ಫಂಗಸ್ ಸೋಂಕಿತರು ಮನೆಗೆ ತೆರಳಿದ ಬಳಿಕವೂ ವಯಲ್ ಗಳನ್ನು ಪೂರೈಸಲು ಸರಕಾರ ‌ನಿರ್ಧಾರ ಕೈಗೊಳ್ಳಲಾಗಿದೆ. ಇಂದಿನ ಸಿಎಂ ಸಭೆಯ ಮುಖ್ಯಾಂಶಗಳು ಈ ಕೆಳಗಿನಂತಿವೆ. * ಕೋವಿಡ್ ನಿರ್ವಹಣೆಗೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಆಸ್ಪತ್ರೆ, ಆಕ್ಸಿಜನ್, ಔಷಧಿ ಮತ್ತಿತ್ತರ ವ್ಯವಸ್ಥೆ ಮಾಡಲಾಗಿದೆ. ಗಡಿ‌ …

Read More »

ಜೈಲಿನಿಂದ ಹೊರ ಬಂದ ಬಳಿಕ ಮೊದಲ ಪ್ರತಿಕ್ರಿಯೆ,ಜೈಲಿಗೆ ಬಂದು ಸಾಕಷ್ಟು ಓದುವುದನ್ನು ಕಲಿತೆ : ವಿನಯ್ ಕುಲಕರ್ಣಿ

ಬೆಳಗಾವಿ: ಬರೋಬ್ಬರಿ 9 ತಿಂಗಳ ಜೈಲು ವಾಸದ ಬಳಿಕ ಮಾಜಿ ಸಚಿವ ವಿನಯ್ ಕುಲಕರ್ಣಿ ಹಿಂಡಲಗಾ ಜೈಲಿನಿಂದ ಬಿಡುಗಡೆಯಾಗಿದ್ದು, ಆದೇಶ ಪ್ರತಿ ತಲುಪಿದ ಹಿನ್ನೆಲೆ ಇಂದು ಜೈಲಿನಿಂದ ಹೊರ ಬಂದಿದ್ದಾರೆ. ಜೈಲಿನಿಂದ ಹೊರ ಬರುತ್ತಿದ್ದಂತೆ ಮಾಧ್ಯಮಗಳ ಜೊತೆ ಮಾತನಾಡಿರುವ ಅವರು, ನಾನು ನಿರ್ದೋಷಿಯಾಗಿ ಹೊರಗೆ ಬರುತ್ತೇನೆ ಎಂದು ಈ ಹಿಂದೆಯೇ ಹೇಳಿದ್ದೆ. ನ್ಯಾಯಾಂಗದ ಮೇಲೆ ನನಗೆ ಸಂಪೂರ್ಣ ವಿಶ್ವಾಸವಿದೆ, ಈ ಹೋರಾಟದಿಂದ ಹೊರಗೆ ಬರುತ್ತೇನೆ. ರಾಜಕೀಯ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು, …

Read More »

ಮಾಜಿ ಸಚಿವ ವಿನಯ್ ಕುಲಕರ್ಣಿ ಇಂದು ಜೈಲಿನಿಂದ ಬಿಡುಗಡೆ

ಬೆಳಗಾವಿ: ಬಿಜೆಪಿ ಮುಖಂಡ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಜಾಮೀನು ಮಂಜೂರಾಗಿರುವ ಹಿನ್ನೆಲೆಯಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಇಂದು ಜೈಲಿನಿಂದ ಬಿಡುಗಡೆಯಾಗಿದ್ದು, ಮಾಜಿ ಸಚಿವನಿಗೆ ಕಾಂಗ್ರೆಸ್ ನಾಯಕರು ಅದ್ದೂರಿಯಾಗಿ ಸ್ವಾಗತ ಕೋರಿದ್ದಾರೆ. ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣ ಹಾಗೂ ಸಾಕ್ಷ್ಯನಾಶ ಕೇಸ್ ಗಳಲ್ಲಿ ಬಂಧನಕ್ಕೀಡಾಗಿ ಜೈಲು ಸೇರಿದ್ದ ಮಾಜಿ ಸಚಿವ ವಿನಯ್ ಕುಲಕರ್ಣಿ, ಕಳೆದ 6 ತಿಂಗಳಿಂದ ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಸೆರೆವಾಸ ಅನುಭವಿಸಿದ್ದರು. …

Read More »

ಸುವರ್ಣ ವಿಧಾನಸೌಧವನ್ನು ಶಕ್ತಿ ಕೇಂದ್ರವನ್ನಾಗಿಸಿ: ಅಶೋಕ ಪೂಜಾರಿ ಒತ್ತಾಯ

ಬೆಳಗಾವಿ: ‘ಉತ್ತರ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿಯ ಮುಂದಾಲೋಚನೆಯಿಂದ ನಿರ್ಮಿಸಿರುವ ಇಲ್ಲಿನ ಸುವರ್ಣ ವಿಧಾನಸೌಧವನ್ನು ಆಡಳಿತಾತ್ಮಕ ಶಕ್ತಿ ಕೇಂದ್ರ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕ್ರಮ ಕೈಗೊಳ್ಳಬೇಕು’ ಎಂದು ಉತ್ತರ ಕರ್ನಾಟಕ ವಿಕಾಸ ವೇದಿಕೆಯ ಅಧ್ಯಕ್ಷ ಅಶೋಕ ಪೂಜಾರಿ ಒತ್ತಾಯಿಸಿದರು. ಇಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಜ್ಯ ಮಟ್ಟದ ಪ್ರಮುಖ ಕಚೇರಿಗಳು ಇಲ್ಲಿಗೆ ಬಂದರೆ ಹಾಗೂ ವಿಧಾನಮಂಡಲ ಅಧಿವೇಶನವನ್ನು ನಿಯಮಿತವಾಗಿ ನಡೆಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಂಡರೆ ಮಾತ್ರ ಈ …

Read More »

ಹಬ್ಬದ ಪ್ರಯುಕ್ತ ನಂದಿನಿ ಉತ್ಪನ್ನಗಳ ಮೇಲೆ ಶೇಕಡಾ 10 ರಿಯಾಯ್ತಿ

ಬೆಂಗಳೂರು, – ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತನ್ನ ಗ್ರಾಹಕರಿಗೆ ಕೆಎಂಎಫ್ ಸಿಹಿ ಸುದ್ದಿ ನೀಡಿದ್ದು, ಸಿಹಿ ಉತ್ಪನ್ನಗಳ ಮೇಲೆ ಶೇಕಡಾ 10ರಷ್ಟು ರಿಯಾಯ್ತಿ ನೀಡಿದೆ. ಆ.19ರಿಂದ 15 ದಿನ ಗಳ ಕಾಲ ರಾಜ್ಯಾದ್ಯಾಂತ ನಂದಿನಿ ಉತ್ಸವಕ್ಕೆ ಚಾಲನೆ ನೀಡಿರುವ ಕೆಎಂಎಫ್ ಸಿಹಿ ಉತ್ಪನ್ನಗಳ ಮೇಲೆ ರಿಯಾಯ್ತಿ ನೀಡಿದೆ. ಅಲ್ಲದೆ ಮಧುಮೇಹಿಗಳು ಮತ್ತು ಆಹಾರ ಕಾಳಜಿ ಇರುವರ ಅನುಕೂಲಕ್ಕಾಗಿ ಹೊಸದಾಗಿ ಸಿಹಿ ತಿನಿಸುಗಳನ್ನು ಬಿಡುಗಡೆ ಮಾಡಿದೆ ಎಂದು ಎಂದು ಕೆ ಎಂಎಫ್ ವ್ಯವಸ್ಥಾಪಕ …

Read More »

ಬಿಜೆಪಿ ಸರ್ಕಾರ ಬಂದ ಮೇಲೆ ಸಾರ್ವಜನಿಕರ ಬದುಕು ದುಸ್ತರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

ರಾಯಚೂರು : ಕೇಂದ್ರ ಬಿಜೆಪಿ ಸರ್ಕಾರವು ರಾಜ್ಯದಲ್ಲಿ ಜನಾಶೀರ್ವಾದ ಸಮಾರಂಭವನ್ನು ನಡೆಸುತ್ತಿದ್ದು , ಇದಕ್ಕೂ ಪೂರ್ವದಲ್ಲಿ ಸಾರ್ವಜನಿಕರಿಗೆ ಏನನ್ನು ನೀಡಿ ಆಶೀರ್ವಾದ ಪಡೆಯಲು ಮುಂದಾಗಿರುವುದರ ಬಗ್ಗೆ ಬಿಜೆಪಿಗರು ತಿಳಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ . ಕೆ . ಶಿವಕುಮಾರ ಲೇವಡಿ ಮಾಡಿದ್ದಾರೆ . ಸ್ಥಳೀಯ ಖಾಸಗಿ ಹೋಟೆಲ್ ‌ ನಲ್ಲಿ ವಿಭಾಗೀಯ ಮಟ್ಟದ ಪ್ರತಿನಿಧಿಗಳ ಸಭೆಯಲ್ಲಿ ಭಾಗವಹಿಸಿ ಸುದ್ದಿಗಾರರೊಂದಿಗೆ ಮಾತನಾಡಿ , ಬಿಜೆಪಿ ಸರ್ಕಾರ ಬಂದ ಮೇಲೆ ಸಾರ್ವಜನಿಕರ ಬದುಕು …

Read More »