ಬೆಂಗಳೂರು : ಕಳೆದ ಮೂರು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಹುಬ್ಬಳ್ಳಿ-ಧಾರವಾಡ, ಬೆಳಗಾವಿ ಹಾಗೂ ಕಲಬುರಗಿ ಮಹಾನಗರ ಪಾಲಿಕೆಗಳ ಸಾರ್ವತ್ರಿಕ ಚುನಾವಣೆಗೆ ಕೊನೆಗೂ ಕಾಲ ಕೂಡಿ ಬಂದಿದ್ದು, ರಾಜ್ಯ ಚುನಾವಣಾ ಆಯೋಗ ಇಂದು(ಬುಧವಾರ, ಆಗಸ್ಟ್ 11) ವೇಳಾಪಟ್ಟಿ ಪ್ರಕಟಿಸಿದೆ. ಅದರಂತೆ, ಈ ಮೂರು ಮಹಾನಗರ ಪಾಲಿಕೆಗಳಿಗೆ ಸೆ.3 ರಂದು ಚುನಾವಣೆ ನಡೆಯಲಿದ್ದು, ಸೆ.6ಕ್ಕೆ ಫಲಿತಾಂಶ ಹೊರಬೀಳಲಿದೆ. ಈ ಸಂಬಂಧ ಆ.16ರಂದು ಜಿಲ್ಲಾಧಿಕಾರಿಗಳು ಚುನಾವಣಾ ಅಧಿಸೂಚನೆ ಹೊರಡಿಸಲಿದ್ದು, ಅದೇ ದಿನದಿಂದ ಮೂರು ಮಹಾನಗರ …
Read More »ನಮಗೆ ಬೆಂಕಿ ಬಂಡಾಯ ಏನೂ ಇಲ್ಲ : ಸಚಿವ ಶ್ರೀರಾಮುಲು
ಬೆಂಗಳೂರು : ನಮಗೆ ಬೆಂಕಿ ಬಂಡಾಯ ಏನೂ ಇಲ್ಲ ನಮ್ಮದು ಶಿಸ್ತಿನ ಪಕ್ಷ, ನಮ್ಮ ಹೈಕಮಾಂಡ್ ಇದೆ ಎಂದು ಸಚಿವ ಶ್ರೀರಾಮುಲು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಖಾತೆಯ ವಿಚಾರಕ್ಕೆ ಸಂಬಂಧಿಸಿದಂತೆ ರಾಮುಲು ಅಸಮಧಾನಗೊಂಡಿದ್ದರೆ ನಾನು ಕೆಲವು ಮಾಧ್ಯಮದಲ್ಲಿ ನೋಡಿದ್ದೇನೆ. ನನಗೆ ಯಾವ ಅಸಮಾಧಾನ ಇಲ್ಲ, ನಮ್ಮದು ಶಿಸ್ತಿನ ಪಕ್ಷ, ಹೈಕಮಾಂಡ್ ಎಲ್ಲವನ್ನು ನಿರ್ಧರಿಸುತ್ತದೆ ಎಂದಿ ಹೇಳಿದ್ದಾರೆ. ನನಗೆ ಕೊಟ್ಟ ಸಾರಿಗೆ ಇಲಾಖೆ ನಿರ್ವಹಣೆ ಮಾಡುತ್ತೇನೆ. ಜನಪರವಾದ ಕೆಲಸ ಮಾಡಬೇಕು. …
Read More »ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು
ದೆಹಲಿ: ಚಾಮರಾಜನಗರದಲ್ಲಿ ಆಕ್ಸಿಜನ್ ಕೊರತೆಯಿಂದ ಸಾವು ಪ್ರಕರಣಕ್ಕೆ ಸಂಬಂಧಿಸಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಕೆಯಾಗಿದೆ. ವಿಧಾನಸಭೆಯ ನಿವೃತ್ತ ಭದ್ರತಾ ಅಧೀಕ್ಷಕರಾದ ಎಂ.ಎನ್.ಪಿಳ್ಳಪ್ಪ ಎಂಬುವವರು ದೂರು ನೀಡಿದ್ದು, ತನಿಖೆ ನಡೆಸಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಮತ್ತು ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ಒದಗಿಸಲು ಮನವಿ ಮಾಡಿದ್ದಾರೆ.
Read More »ಕೆಜಿ ಹಳ್ಳಿ-ಡಿಜೆ ಹಳ್ಳಿ ಗಲಭೆಗೆ 1 ವರ್ಷ; ಇನ್ನೂ ನನಗೆ ನ್ಯಾಯ ಸಿಕ್ಕಿಲ್ಲಾ ಎಂದ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ
ಬೆಂಗಳೂರು: ಒಂದು ವರ್ಷದ ಹಿಂದೆ ಇಡೀ ಬೆಂಗಳೂರಿಗೆ ಬೆಂಗಳೂರೆ ಬೆಚ್ಚಿ ಬೀಳುವಂತ ಘಟನೆ ನಡೆದಿತ್ತು. ಕೆಜಿ ಹಳ್ಳಿ-ಡಿಜೆ ಹಳ್ಳಿ ಗಲಭೆ ಪ್ರಕರಣ(DJ Halli and KG Halli Violence) ಜನರ ನಿದ್ದೆ ಕೆಡಿಸಿತ್ತು. ಒಂದು ಫೇಸ್ಬುಕ್ ಪೋಸ್ಟ್ನಿಂದ ಭಾರಿ ಅನಾಹುತ ನಡೆದಿತ್ತು. ಶಾಸಕ ಅಖಂಡ ಶ್ರೀನಿವಾಸ ಮೂರ್ತಿ(Akhanda Srinivas Murthy) ಮನೆ ಬೆಂಕಿಗೆ ಆಹುತಿಯಾಗಿತ್ತು. ಸದ್ಯ ಇಂದು ಈ ಘಟನೆ ನಡೆದು ಒಂದು ವರ್ಷ ಕಳೆದಿದೆ. ಈ ಬಗ್ಗೆ ಡಿಜೆ …
Read More »ಪೊಲೀಸರು ಜನಸ್ನೇಹಿಯಾಗಿ ಕೆಲಸ ಮಾಡಬೇಕು : ಸಿಎಂ ಬೊಮ್ಮಾಯಿ
ಬೆಂಗಳೂರು : ಪೊಲೀಸರು ಜನಸ್ನೇಹಿಯಾಗಿ ಕೆಲಸ ಮಾಡುವ ಮೂಲಕ ಕಾನೂನು ಸುವ್ಯವಸ್ಥೆಗೆ ಆದ್ಯತೆ ನೀಡಬೇಕು ಮತ್ತು ಅಪರಾಧವನ್ನು ಸಂಪೂರ್ಣವಾಗಿ ಸದೆಬಡಿಯುವ ಕೆಲಸ ಮಾಡಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರರಿಗೆ ಸಿಎಂ ಬೊಮ್ಮಾಯಿ ನಿರ್ದೇಶನ ನೀಡಿದ್ದಾರೆ. ಅಪರಾಧ ಪ್ರಕರಣಗಳನ್ನು ಹತೋಟಿಗೆ ತರಬೇಕು. ಜೂಜು, ಡಾರ್ಕ್ವೆಬ್ ಮತ್ತಿತರ ಕಾನೂನು ಬಾಹಿರ ಚಟುವಟಿಕೆಗಳನ್ನು ನಿಯಂತ್ರಿಸಬೇಕು. ಇದರಲ್ಲಿ ಯಾವುದೇ ರಾಜೀ ಮಾಡಿಕೊಳ್ಳುವಂತಿಲ್ಲ. ಭೂ ವಿವಾದದ ಹಿನ್ನೆಲೆಯಲ್ಲಿ ಸಂಭವಿಸುವ ಅಪರಾಧ ಪ್ರಕರಣಗಳನ್ನು ತಡೆಗಟ್ಟಬೇಕು. ಮಾದಕ ವಸ್ತುಗಳ …
Read More »ಬೆಳಗಾವಿ, ಹುಬ್ಬಳ್ಳಿ -ಧಾರವಾಡ ಹಾಗೂ ಕಲಬುರಗಿ ಪಾಲಿಕೆಗಳ ಚುನಾವಣೆ ದಿನಾಂಕ ಘೋಷಣೆ
ಬೆಂಗಳೂರು – ಬೆಳಗಾವಿ ಸೇರಿದಂತೆ 3 ಮಹಾನಗರ ಪಾಲಿಕೆಗಳ ಚುನಾವಣೆ ಘೋಷಣೆಯಾಗಿದೆ. ಬೆಳಗಾವಿ, ಹುಬ್ಬಳ್ಳಿ -ಧಾರವಾಡ ಹಾಗೂ ಕಲಬುರಗಿ ಪಾಲಿಕೆಗಳ ಚುನಾವಣೆ ದಿನಾಂಕ ಘೋಷಣೆಯಾಗಿದೆ. ಸೆಪ್ಟಂಬರ್ 3ರಂದು ಚುನಾವಣೆ ನಡೆಯಲಿದ್ದು, ಸೆಪ್ಟಂಬರ್ 6ರಂದು ಫಲಿತಾಂಶ ಪ್ರಕಟವಾಗಲಿದೆ.
Read More »ಜೊಲ್ಲೆ ನನ್ನ ಸಿಸ್ಟರ್ ಇದ್ದ ಹಾಗೆ, ಅವರ ಬಗ್ಗೆ ತನಿಖೆ ಅಗತ್ಯವಿಲ್ಲ ಎಂದ ಈಶ್ವರಪ್ಪ
ಬೆಳಗಾವಿ – ಶಶಿಕಲಾ ಜೊಲ್ಲೆ ನನ್ನ ಸಿಸ್ಟರ್ ಇದ್ದಹಾಗೆ. ಅವರ ಬಗ್ಗೆ ನೂರಕ್ಕೆ ನೂರು ವಿಶ್ವಾಸವಿದೆ. ಯಾರೋ ಹೇಳಿದ ತಕ್ಷಣ ಅದನ್ನೆಲ್ಲ ತನಿಖೆ ಮಾಡುವುದಕ್ಕಾಗುವುದಿಲ್ಲ. ಅವರ ಬಗ್ಗೆ ತನಿಖೆ ಅಗತ್ಯವಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಿತಿ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಬೆಳಗಾವಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಜೊಲ್ಲೆಯವರ ಬಗ್ಗೆ ಬಂದಿರುವ ಆರೋಪಗಳಲ್ಲಿ ಹುರುಳಿಲ್ಲ. ಅದಕ್ಕೆ ಯಾವುದೇ ಸಾಕ್ಷ್ಯಾಧಾರಗಳಿಲ್ಲ. ಸುಮ್ಮನೇ ಯಾರೋ ಹೇಳುತ್ತಾರೆಂದು ಎಲ್ಲವನ್ನೂ ತನಿಖೆಗೊಳಪಡಿಸಲು ಸಾಧ್ಯವಿಲ್ಲ. …
Read More »ಕೊಲೆ ಪ್ರಕರಣ : ಎಂಟು ಜನರಿಗೆ ಜೀವಾವಧಿ ಶಿಕ್ಷೆ.
ಗೋಕಾಕ : ಎರಡು ಕುಟುಂಬಗಳ ನಡುವಿನ ಭೂ ವಿವಾದದ ವೈಷಮ್ಯದ ಹಿನ್ನೆಲೆಯಲ್ಲಿ ಗೋಕಾಕ ತಾಲ್ಲೂಕಿನ ಕುಂದರಗಿ ಗ್ರಾಮದಲ್ಲಿ ನಡೆದಿದ್ದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿಗೆ ಜೀವಾವಧಿ ಶಿಕ್ಷೆ ಮತ್ತು ತಲಾ 25 ಸಾವಿರ ರೂಪಾಯಿ ದಂಡ ವಿಧಿಸಿ ಇಲ್ಲಿನ 12ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಮಂಗಳವಾರ ತೀರ್ಪು ನೀಡಿದೆ. ಆರೋಪಿಗಳೆಲ್ಲರೂ ಕುಂದರಗಿ ಗ್ರಾಮದವರಾಗಿದ್ದಾರೆ. ಮಹಮ್ಮದಹನೀಪ ದೇಸಾಯಿ(50) ಸಹೋದರರಾದ ಮೆಹಬೂಬ ದೇಸಾಯಿ(47) ಹಾಗೂ ಹಸನಸಾಬ ದೇಸಾಯಿ(57), ಪುತ್ರ ಸೋಹೆಲ್ ದೇಸಾಯಿ(21), …
Read More »ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಮ್ಮನ್ನು ಭೇಟಿಯಾಗುವಂತೆ ಸಚಿವ ಆನಂದ್ ಸಿಂಗ್ಗೆ ಸೂಚನೆ ನೀಡಿದ್ದಾರೆ.
ಬೆಂಗಳೂರು: ಸಚಿವ ಸ್ಥಾನಕ್ಕೆ ಆನಂದ್ ಸಿಂಗ್ ರಾಜೀನಾಮೆ ನೀಡುತ್ತಾರೆ ಎನ್ನುವ ಸುದ್ದಿ ಎಲ್ಲೆಡೆ ಹರಿದಾಡುತ್ತಿದ್ದಂತೆ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಮ್ಮನ್ನು ಭೇಟಿಯಾಗುವಂತೆ ಸಚಿವ ಆನಂದ್ ಸಿಂಗ್ಗೆ ಸೂಚನೆ ನೀಡಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಂಪುಟ ರಚನೆಯಾಗುತ್ತಿದ್ದಂತೆ ಅನೇಕ ಸಚಿವರು ತಮಗೆ ನೀಡಿದ ಖಾತೆಗಳ ಬಗ್ಗೆ ಅಸಮಧಾನ ವ್ಯಕ್ತಪಡಿಸಿದ್ದಾರೆ. ಆನಂದ್ ಸಿಂಗ್ ಕೂಡ ಖಾತೆ ಬದಲಾವಣೆಗೆ ಪಟ್ಟು ಹಿಡಿದಿದ್ದು, ಇಂಧನ ಹಾಗೂ ಅರಣ್ಯ ಖಾತೆ ನೀಡುವಂತೆ ವರಿಷ್ಠರ …
Read More »ಕಾಂಗ್ರೆಸ್ ನಾಯಕರ ವಿರುದ್ಧ ಕೆ.ಎಸ್.ಈಶ್ವರಪ್ಪ ಅವಾಚ್ಯ ಶಬ್ದ ಬಳಕೆ ವಿಚಾರ. laxminews
ಬೆಳಗಾವಿ: ಕಾಂಗ್ರೆಸ್ ನಾಯಕರ ವಿರುದ್ಧ ಸಿಟ್ಟಿನ ಭರದಲ್ಲಿ ಆಡಿದ್ದ ‘ಆ ಮಾತನ್ನು’ ವಾಪಸ್ ಪಡೆದಿದ್ದೇನೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ. ಎಸ್.ಈಶ್ವರಪ್ಪ ತಿಳಿಸಿದ್ದಾರೆ. ಸಿಟ್ಟಿನ ಭರದಲ್ಲಿ ನಾನು ಆ ರೀತಿಯಾಗಿ ಹೇಳಿಕೆ ನೀಡಿದ್ದೇನೆ. ನಾನು ಆ ಪದವನ್ನು ವಾಪಸ್ ಪಡೆಯುತ್ತೇನೆ ಎಂದು ಅವರು ಬೆಳಗಾವಿಯಲ್ಲಿ ತಿಳಿಸಿದರು. ಇತ್ತೀಚೆಗಷ್ಟೇ ಬಿಜೆಪಿಯ ಒಬ್ಬನೇ ಒಬ್ಬ ಕಾರ್ಯಕರ್ತನ ಮೈಮುಟ್ಟಿ ನೋಡಲಿ, ಅದರ ಪರಿಣಾಮವೇ ಬೇರೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಸಚಿವ ಕೆ …
Read More »
Laxmi News 24×7