ಗೋಕಾಕ: ರಾಜ್ಯ ಸರ್ಕಾರದ ಬಿಜೆಪಿ ನಾಯಕರಿಂದ ಇಂದಿರಾ ಕ್ಯಾಂಟಿನ್ ಹೆಸರು ಬದಲಾವಣೆ ವಿಚಾರವಾಗಿ ನೀಡಿರುವ ಹೇಳಿಕೆ ಕುರಿತಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದು, ಒಂದು ವೇಳೆ ಬದಲಾವಣೆ ಮಾಡಲು ಪ್ರಯತ್ನಿಸಿದರೆ ಕಾಂಗ್ರೆಸ್ ಪಕ್ಷದಿಂದ ಉಗ್ರ ಪ್ರತಿಭಟನೆ ನಡೆಸಲಾಗುತ್ತದೆ ಎಂದು ತಿಳಿಸಿದರು. ಹಿಲ್ ಗಾರ್ಡನ್ ಕಚೇರಿಯಲ್ಲಿ ಮಾತನಾಡಿದ ಅವರು, ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು, ಬಡವರ ಪರವಾಗಿ ಕೆಲಸ ಮಾಡಿದವರು. ಹಿಂದುಳಿದ ವರ್ಗದ ಜನರಿಗಾಗಿಯೇ ತಮ್ಮ …
Read More »ಬೆಳಗಾವಿಯ ಸುವರ್ಣ ಸೌಧಕ್ಕೆ ಒಂದು ರೂಪವನ್ನು ಕೊಟ್ಟೇ ಕೊಡುತ್ತೇನೆ:ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ
ಬೆಳಗಾವಿಯ: ಸುವರ್ಣ ಸೌಧಕ್ಕೆಒಂದು ರೂಪವನ್ನು ಕೊಟ್ಟೇ ಕೊಡುತ್ತೇನೆ.ಕೆಲವೊಂದು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲು ತೀರ್ಮಾನಿಸಿದ್ದೇನೆ” ಇಂದು ರವಿವಾರ ಸಂಜೆಬೆಂಗಳೂರಿನ ಆರ್.ಟಿ.ನಗರ ನಿವಾಸದಲ್ಲಿತಮ್ಮನ್ನು ಭೆಟ್ಟಿಯಾದ ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿಯನಿಯೋಗಕ್ಕೆ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಅವರು ಈ ಭರವಸೆನೀಡಿದ್ದಾರೆ. ಗಡಿ ಅಭಿವೃದ್ಧಿ ಪ್ರಾಧಿಕಾರ,ಗಡಿ ಸಂರಕ್ಷಣಾ ಆಯೋಗ,ಸುವರ್ಣ ಸೌಧಕ್ಕೆ ಪ್ರಮುಖ ಕಚೇರಿಗಳ ಸ್ಥಳಾಂತರ ಹಾಗೂಮುಂಬಯಿ ಕರ್ನಾಟಕಕ್ಕೆ ಕಿತ್ತೂರುಕರ್ನಾಟಕ ಎಂದು ಮರು ನಾಮಕರಣಮಾಡುವ ಕುರಿತು ನಿಯೋಗವು ಬೊಮ್ಮಾಯಿ ಅವರೊಂದಿಗೆ ಚರ್ಚಿಸಿತು. …
Read More »ಬೆಳಗಾವಿ: ಬಾಚಿ ಚೆಕ್‌ಪೋಸ್ಟ್ ಬಳಿ ತೀವ್ರ ಕಟ್ಟೆಚ್ಚರ; 72 ಗಂಟೆ ಅವಧಿಯೊಳಗಿನ ಆರ್‌ಟಿಪಿಸಿಆರ್ ನೆಗೆಟಿವ್ ವರದಿ ಕಡ್ಡಾಯ
ಬೆಳಗಾವಿ: ಜಿಲ್ಲೆಯಲ್ಲಿ ರಾಜ್ಯ ಸರ್ಕಾರದ ಆದೇಶ ಯಥಾವತ್ತಾಗಿ ಜಾರಿಯಾಗಿದೆ. ವೀಕೆಂಡ್ ಕರ್ಪ್ಯೂ (Weekend Curfew) ಹಿನ್ನೆಲೆ ಶುಕ್ರವಾರ ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೂ ಬಂದ್ ಘೋಷಿಸಲಾಗಿದೆ. ಅಲ್ಲದೇ ಮಹಾರಾಷ್ಟ್ರದಲ್ಲಿ ಕೊರೊನಾ ಹೆಚ್ಚಳ ಹಿನ್ನಲೆ ಬೆಳಗಾವಿ ಗಡಿಭಾಗದ ಚೆಕ್‌ಪೋಸ್ಟ್‌ಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ ನಡೆಸಲಾಗುತ್ತಿದೆ. ಬೆಳಗಾವಿ ಹೊರವಲಯ ಬಾಚಿ ಚೆಕ್‌ಪೋಸ್ಟ್ ಬಳಿ ತೀವ್ರ ಕಟ್ಟೆಚ್ಚರ ವಹಿಸಿದ್ದು, ಸ್ಥಳದಲ್ಲೇ ಒಂದು ಕೆಎಸ್‌ಆರ್‌ಪಿ ವಾಹನ ವ್ಯವಸ್ಥೆ ಮಾಡಲಾಗಿದೆ. ಪ್ರತಿಯೊಂದು ವಾಹನ ತಪಾಸಣೆ …
Read More »ಮದ್ವೆಯಾದ 23 ದಿನಕ್ಕೇ ನವದಂಪತಿ ದುರಂತ ಸಾವು! ಅತ್ತಿಗೆಯ ಪ್ರಾಣವೂ ಹೋಯ್ತು.
ಬಾಗಲಕೋಟೆ: ಮದುವೆ ಸಂಭ್ರಮದಲ್ಲಿದ್ದ ಕುಟುಂಬದ ಮೇಲೆ ಜವರಾಯ ಅಟ್ಟಹಾಸ ಮೆರೆದಿದ್ದು, ನವ ದಂಪತಿ ಮತ್ತು ಅತ್ತಿಗೆ ಮೂವರೂ ದುರಂತ ಅಂತ್ಯ ಕಂಡಿದ್ದಾರೆ. ಮದುವೆ ಮನೆಯಲ್ಲೀಗ ಸೂತಕ ಆವರಿಸಿದ್ದು, ಮೂವರ ಸಾವಿನ ಸುದ್ದಿ ಕೇಳಿದ ಸಂಬಂಧಿಕರು, ಗ್ರಾಮಸ್ಥರು, ‘ಅಯ್ಯೋ ದೇವರೇ, ನೀನೆಂಥಾ ಕ್ರೂರಿ?’ ಎಂದು ಹಿಡಿಶಾಪ ಹಾಕುತ್ತಿದ್ದಾರೆ. ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಮುಗಳಖೋಡ ಗ್ರಾಮದ ಸದ್ದಾಂ ರಾಜೇಸಾಬ ಸೊನ್ನದ ಜಾತಗಾರ(27) ಮತ್ತು ಇವರ ಪತ್ನಿ ಸಲೀಮಾ ಸದ್ದಾಂ(25) ಹಾಗೂ ಸದ್ದಾಂ …
Read More »ಸಾರ್ವಜನಿಕ ಪ್ರದೇಶಗಳಲ್ಲಿ ಎಲ್ಲೆಂದರಲ್ಲಿ ಉಗುಳಿದ್ದಾರೆ ದಂಡ!
ಬೆಂಗಳೂರು: ಸಾರ್ವಜನಿಕ ಪ್ರದೇಶಗಳಲ್ಲಿ ಎಲ್ಲೆಂದರಲ್ಲಿ ಉಗುಳುವುದರಿಂದ ಸಾಂಕ್ರಾಮಿಕ ರೋಗಗಳು ಹರುಡುವುದಲ್ಲದೆ, ಶುಚಿತ್ವಕೂ ಭಂಗ ಉಂಟಾಗಿ ಜನಸಾಮಾನ್ಯರಿಗೆ ಅನಾನುಕೂಲವಾಗುತ್ತದೆ. ನಿಗಮದ ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವವರಿಗೆ ದಂಡ ವಿಧಿಸುವ ಕ್ರಮ ಜೂನ್ 2020 ರಿಂದ ಜಾರಿಗೆ ತರಲಾಗಿರುತ್ತದೆ. ಜನ ಸಾಮಾನ್ಯರಿಗೆ ಈ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಬ್ಯುಟಿಫುಲ್ ಬೆಂಗಳೂರು ಹಾಗೂ ಸಾರಾ ಜಹಾನ್ ಸೆ ಅಚ್ಚಾ ಫುಣೆ ತಂಡಗಳು “ಉಗುಳುವ ನಿಷೇಧದ ಅಭಿಯಾನ” ನಿಗಮದೊಂದಿಗೆ ಸೇರಿ ಹಮ್ಮಿಕೊಂಡಿರುತ್ತಾರೆ. ಕೊರೋನಾ ಮಹಾಮಾರಿಯು ಪ್ರಪಂಚವನ್ನೇ …
Read More »ರಾಜ್ಯದ ಯಾವ್ಯಾವ ಕಡೆ ಎಷ್ಟಿದೆ ಪೆಟ್ರೋಲ್, ಡೀಸೆಲ್ ಬೆಲೆ
ಬೆಂಗಳೂರು, ಆಗಸ್ಟ್ 07: ದೇಶದಲ್ಲಿ ಸತತ 20 ದಿನಗಳಿಂದ ಇಂಧನ ದರ ಸ್ಥಿರತೆ ಕಾಯ್ದುಕೊಂಡಿದ್ದು, ಸರ್ಕಾರಿ ಸ್ವಾಮ್ಯದ ಮೂರು ಪ್ರಮುಖ ತೈಲ ಕಂಪನಿಗಳು ಆಗಸ್ಟ್ 7ರಂದು ಕೂಡ ಇಂಧನ ದರದಲ್ಲಿ ಯಾವುದೇ ಪರಿಷ್ಕರಣೆ ಮಾಡಿಲ್ಲ. ಜುಲೈ ತಿಂಗಳಿನಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಏರಿಳಿತ ಕಂಡುಬಂದಿತ್ತು. ಮೇ 4ರಿಂದ ಇಂದಿನ ತನಕ ಪೆಟ್ರೋಲ್ ಒಟ್ಟು 40 ಬಾರಿ ಹಾಗೂ ಡೀಸೆಲ್ 37 ಬಾರಿ ಏರಿಕೆಯಾಗಿದ್ದು, ಜೂನ್ ತಿಂಗಳಲ್ಲೇ 21 ಬಾರಿ ಬೆಲೆ …
Read More »ಮಾಜಿ ಸಿಎಂ ಯಡಿಯೂರಪ್ಪಗೆ ಸಂಪುಟ ದರ್ಜೆಯ ಸ್ಥಾನ; ಸರ್ಕಾರದಿಂದ ಅಧಿಕೃತ ಆದೇಶ
ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರಿಗೆ ಸಂಪುಟ ದರ್ಜೆ ಸಚಿವರ ಸೌಲಭ್ಯ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಹಾಲಿ ಸಿಎಂ ಬಸವರಾಜ್ ಬೊಮ್ಮಾಯಿ ಅಧಿಕಾರಾವಧಿ ಇರುವವರೆಗೆ ಬಿ.ಎಸ್. ಯಡಿಯೂರಪ್ಪನವರಿಗೆ ಸಂಪುಟ ದರ್ಜೆಯ ಸಚಿವರಿಗೆ ನೀಡುವ ಎಲ್ಲಾ ಸೌಲಭ್ಯಗಳನ್ನು ನೀಡಿ ಅಧಿಕೃತ ಆದೇಶ ಹೊರಡಿಸಲಾಗಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯಿಂದ ಈ ಆದೇಶ ಹೊರಡಿಸಲಾಗಿದ್ದು, ಇನ್ಮುಂದೆ ಬಿ.ಎಸ್.ವೈ.ಗೆ ಸಚಿವರಿಗೆ ಸಿಗುವ ಎಲ್ಲಾ ಸೌಲಭ್ಯ ಹಾಗೂ ಅಧಿಕಾರ ಕೂಡ ಸಿಗಲಿದೆ.
Read More »ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ಪ್ರಯತ್ನ ದ್ವೇಷದ ರಾಜಕಾರಣ: ಸಿದ್ದರಾಮಯ್ಯ
ಬೆಂಗಳೂರು: ‘ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ಮಾಡುವ ಪ್ರಯತ್ನ ದ್ವೇಷದ ರಾಜಕಾರಣವಾಗುತ್ತದೆ’ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ. ಇಂದಿರಾ ಕ್ಯಾಂಟೀನ್‍ಗೆ ಅನ್ನಪೂರ್ಣ ಎಂಬ ಹೆಸರಿಡಬೇಕೆಂಬ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ರಸ್ತೆ, ಕ್ರೀಡಾಂಗಣ, ಸರ್ಕಾರಿ ಸಂಸ್ಥೆಗಳಿಗೆ ರಾಷ್ಟ್ರೀಯ ನಾಯಕರ ಹೆಸರು ನಾಮಕರಣ ಮಾಡುವುದು ಮೊದಲಿನಿಂದಲೂ ನಡೆದು ಬಂದಿರುವ ಪದ್ಧತಿ. ಬೆಂಗಳೂರಿನ ಮೇಲ್ಸೇತುವೆಗೆ ದೀನದಯಾಳ್ ಉಪಾಧ್ಯಾಯ, ನಗರ ಸಾರಿಗೆಗೆ ವಾಜಪೇಯಿ, …
Read More »ಕಳೆದ ಒಂದು ತಿಂಗಳಿನಿಂದ ಪ್ರತಿಭಟನೆ ಮಾಡ್ತಿರುವ ನಿಮ್ಹಾನ್ಸ್ ಹಾಸ್ಪಿಟಲ್ ನ ಕಾಂಟ್ರಾಕ್ಟ್ ಸಿಬ್ಬಂದಿ
ಬೆಂಗಳೂರು:ನಿಮ್ಹಾನ್ಸ್ ಹಾಸ್ಪಿಟಲ್ ನ ಕಾಂಟ್ರಾಕ್ಟ್ ಸಿಬ್ಬಂದಿಗಳು ಕೆಲಸದ ಟೈಮಿಂಗ್ ವಿಚಾರವಾಗಿ ನಿಮ್ಹಾನ್ಸ್ ಹಾಸ್ಪಿಟಲ್ ಒಳಗೆ ಪ್ರತಿಭಟನೆ ನಡೆಸಿದರು. ಸಿಬ್ಬಂದಿಗಳು ರೇಡಿಯಾಲಜಿ ಡಿಪಾರ್ಟ್ಮೆಂಟ್ ನಲ್ಲಿ ಹೌಸ್ ಕೀಪಿಂಗ್ ಹಾಗೂ ಸಹಾಯಕ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು. ಬಹುತೇಕ ಸಿಬ್ಬಂದಿ ಹೆಣ್ಣು ಮಕ್ಕಳು ಆಗಿರುವುದರಿಂದ ರಾತ್ರಿ ವೇಳೆ ಕೆಲಸ ಮಾಡುವುದು ತೊಂದರೆ ಆಗುತ್ತಿದೆ. ಹೀಗಾಗಿ ಸಂಜೆ ಏಳು ಗಂಟೆಯವರೆಗೆ ಕೆಲಸ ಮಾಡಲು ಕೇಳಿದರು ಇದಕ್ಕೆ ಒಪ್ಪದ ಹಾಸ್ಪಿಟಲ್ ವಿರುದ್ದ ಒಂದು ತಿಂಗಳಿನಿಂದ ಮಳೆ ಬಿಸಿಲು …
Read More »ಮುಖ್ಯಮಂತ್ರಿಗಳ ಆಪ್ತ ಸಹಾಯಕ ಮತ್ತು ಭದ್ರತಾ ಸಿಬ್ಬಂದಿಯ ಮೇಲೆ ಹೊನ್ನಾಳಿ ಶಾಸಕ ರೇಣುಕಾಚಾರ್ಯ ಗರಂ
ಬೆಂಗಳೂರು,ಆ.7- ನನಗೆ ಇನ್ಸಲ್ಟ್ ಮಾಡ್ತೀರಾ? ಎಂದು ಮುಖ್ಯಮಂತ್ರಿಗಳ ಆಪ್ತ ಸಹಾಯಕ ಮತ್ತು ಭದ್ರತಾ ಸಿಬ್ಬಂದಿಯ ಮೇಲೆ ಹೊನ್ನಾಳಿ ಶಾಸಕ ರೇಣುಕಾಚಾರ್ಯ ರೇಗಾಡಿದ್ದಾರೆಂದು ಮಾಹಿತಿ ಸಿಕ್ಕಿದೆ. ಆರ್.ಟಿ.ನಗರದಲ್ಲಿರುವ ಮುಖ್ಯಮಂತ್ರಿಗಳ ನಿವಾಸಕ್ಕೆ ಶಾಸಕ ರೇಣುಕಾಚಾರ್ಯ ಆಗಮಿಸಿದ್ದರು. ಈ ವೇಳೆ ಅವರನ್ನು ಪೊಲೀಸರು ತಡೆದಿದ್ದರು. ಇದರಿಂದ ಕೋಪಗೊಂಡ ರೇಣುಕಾಚಾರ್ಯ,ಪೊಲೀಸರು ಹಾಗೂ ಸಿಎಂ ಆಪ್ತ ಸಹಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗ್ತಿದೆ. ನಾನೊಬ್ಬ ಶಾಸಕ, ನನಗೆ ಇನ್ಸಲ್ಟ್ ಮಾಡ್ತೀರಾ? ಇದು ಎರಡನೇ ಸಲ ಈ …
Read More »
Laxmi News 24×7