Breaking News

ಜಿಲ್ಲೆ

ಇನ್ನೂ ಹಂಚಿಕೆಯಾಗದ ಖಾತೆ: ಸಿಎಂ ಬೊಮ್ಮಾಯಿ ನಿವಾಸದ ಬಳಿ ತಡರಾತ್ರಿವರೆಗೂ ಕಾದು ಕುಳಿತಿದ್ದ ನೂತನ ಸಚಿವರು!

ಬೆಂಗಳೂರು: ನೂತನ ಸಚಿವರಿಗೆ ಶೀಘ್ರದಲ್ಲೆ ಖಾತೆ ಹಂಚಿಕೆ ಮಾಡುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದರಾದರೂ ಈ ಪ್ರಕ್ರಿಯೆ ಅಷ್ಟು ಸಲೀಸಾಗಿ ನಡೆಯುವಂತೆ ಕಾಣುತ್ತಿಲ್ಲ. ಪ್ರಮುಖ ಖಾತೆಗಾಗಿ ಸಂಪುಟದ ಸದಸ್ಯರು ಒತ್ತಡ ತರುತ್ತಿರುವುದೇ ಇದಕ್ಕೆ ಕಾರಣವಾಗಿದೆ. ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಿ ಎರಡು ದಿನ ಕಳೆದರೂ ಖಾತೆ ಹಂಚಿಕೆಯಾಗಿಲ್ಲ, ಸಿಎಂ ಬೊಮ್ಮಾಯಿ ಈಗಾಗಲೇ 29 ಸಚಿವರಿಗೂ ಖಾತೆ ಹಂಚಿಕೆ ಪಟ್ಟಿ ತಯಾರುಮಾಡಿ ಕಳುಹಿಸಿದ್ದರೂ ಇನ್ನೂ ಅದಕ್ಕೆ ಅನುಮೋದನೆ ಸಿಕ್ಕಿಲ್ಲ. ಹೊಸದಾಗಿ …

Read More »

ಮನೆ ಸೋರುತ್ತಿರುವುದರಿಂದ ನೆರವು ಕೇಳಲು ಜಿಲ್ಲಾಧಿಕಾರಿ ಕಚೇರಿಗೆ ಬಂದಿದ್ದ ಅಜ್ಜಿಯ ನೋವಿಗೆ ಸ್ಪಂದಿಸಲು ಸ್ವತಃ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಸಭೆ ಬಿಟು ಅಜ್ಜಿ ನೋವಿಗೆ ಸ್ಪಂದಿಸಿದ ಬೆಳಗಾವಿ ಡಿಸಿ

ಬೆಳಗಾವಿ: ಮನೆ ಸೋರುತ್ತಿರುವುದರಿಂದ ನೆರವು ಕೇಳಲು ಜಿಲ್ಲಾಧಿಕಾರಿ ಕಚೇರಿಗೆ ಬಂದಿದ್ದ ಅಜ್ಜಿಯ ನೋವಿಗೆ ಸ್ಪಂದಿಸಲು ಸ್ವತಃ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರು ಗುರುವಾರ ಸಭೆ ಬಿಟ್ಟು ಬಂದು ಮನವಿ ಆಲಿಸಿ ಕೂಡಲೇ ಕ್ರಮಕ್ಕೆ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿ ಮಾನವೀಯತೆ ಮೆರೆದರು. ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರು ಆರೋಗ್ಯ ಇಲಾಖೆಗೆ ಸಂಬಂಧಿಸಿದ ವಿಡಿಯೋ ಕಾನ್ಫರೆನ್ಸ್‌ನಲ್ಲಿ ಇದ್ದರು. ಜಿಲ್ಲೆಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಕಚೇರಿಯ ಹೊರ ಭಾಗದಲ್ಲಿ ಗಣಪತಿ ಗಲ್ಲಿಯ …

Read More »

ಗೋಕಾಕ್ ತಹಶೀಲ್ದಾರ್ ನೇತೃತ್ವದಲ್ಲಿ ಅಕ್ರಮವಾಗಿ ನಿರ್ಮಿಸಿದ ಮನೆಗಳ ತೆರವು

ಘಟಪ್ರಭಾ : ಧುಪದಾಳ ಗ್ರಾಮ ಪಂಚಾಯತಿ ವ್ಯಾಪ್ತಿಯ ರಿ.ಸ.ನಂ-120 ರಲ್ಲಿ ನೀರಾವರಿ ನಿಗಮಕ್ಕೆ ಸೇರಿದ ಜಾಗದಲ್ಲಿ ಅತಿಕ್ರಮಣವಾಗಿ ನಿರ್ಮಿಸಿದ್ದ ಮನೆಗಳನ್ನು ಶುಕ್ರವಾರದಂದು ಗೋಕಾಕ ತಹಶೀಲ್ದಾರ್ ಪ್ರಕಾಶ ಹೊಳೆಪ್ಪನವರ ನೇತೃತ್ವದಲ್ಲಿ ತೆರವುಗೊಳಿಸಲಾಯಿತು. ನೀರಾವರಿ ನಿಗಮದ ಕಛೇರಿ ಹಿಂದುಗಡೆ ಇರುವ ರಿ.ಸ.ನಂ-120 ರಲ್ಲಿ ಇರುವ ನೀರಾವರಿ ಇಲಾಖೆಗೆ ಸೇರಿದ 82 ಎಕರೆ ಜಮೀನಿನ ಪೈಕಿ ಸುಮಾರು 30 ಎಕರೆ ಜಮೀನು ಅತಿಕ್ರಮಣವಾಗಿತ್ತು. ಸುಮಾರು 30ಕ್ಕೂ ಹೆಚ್ಚು ಅನಧಿಕೃತ ಮನೆಗಳು ತೆರವುಗೊಳಿಸುವ ಕಾರ್ಯ ಮುಂದುವರೆದಿದ್ದು, …

Read More »

ಬಿಜೆಪಿ ಅಧಿಕಾರದಲ್ಲಿರೋವರೆಗೂ ಕೇಂದ್ರದಿಂದ ಅನುದಾನ ಬರಲ್ಲ,ನೂತನ ಸಚಿವರಿಂದ ಯಾವುದೇ ನಿರೀಕ್ಷೆ ಸಾಧ್ಯವಿಲ್ಲ

ಬೆಳಗಾವಿ: ನೂತನ ಸಚಿವರಿಂದ ಯಾವುದೇ ನಿರೀಕ್ಷೆ ಮಾಡಲು ಸಾಧ್ಯವಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ತಿಳಿಸಿದರು.  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಸಂಪುಟದಲ್ಲಿದ್ದ ಬಹುತೇಕ ಸಚಿವರೇ, ಈಗ ಸಿಎಂ ಬೊಮ್ಮಾಯಿ ಅವರ ಸಂಪುಟದಲ್ಲೂ ಸಚಿವರಾಗಿದ್ದಾರೆ. ಅವರ ಕಾರ್ಯವೈಖರಿಯನ್ನು ಈಗಾಗಲೇ ನಾವು ನೋಡಿದ್ದೇವೆ. ಹೀಗಾಗಿ, ಈಗ ಅಧಿಕಾರ ಸ್ವೀಕರಿಸಿರುವ ಸಚಿವರಿಂದ ಯಾವುದೇ ನಿರೀಕ್ಷೆ ಮಾಡಲು ಆಗುವುದಿಲ್ಲ ಎಂದರು. ಈ ಹಿಂದೆ ಜಿಲ್ಲೆಯಲ್ಲಿ ಮಂತ್ರಿಗಳಿದ್ದವರು, ಜಿಲ್ಲೆಯ ಯಾವುದೇ ಸಮಸ್ಯೆಗೆ ಸ್ಪಂದಿಸಿರಲಿಲ್ಲ. ಕೊರೊನಾ …

Read More »

ಖಾಲಿ ಜಾಗಗಳೇ ಇವರ ಟಾರ್ಗೆಟ್​; 600 ಕೋಟಿ ರೂ. ಮೌಲ್ಯದ ಆಸ್ತಿ ಕಬಳಿಸಿದ ಭೂಗಳ್ಳರ ಜಾಲ ಭೇದಿಸಿದ ಸಿಐಡಿ

ಬೆಂಗಳೂರು: ರಾಜಧಾನಿ ಅಥವಾ ಸುತ್ತಮುತ್ತ ನಿಮ್ಮ ಖಾಲಿ ಜಾಗ ಇದ್ದು ದೀರ್ಘ ಸಮಯದಿಂದ ಆ ಕಡೆ ಹೋಗಿರದಿದ್ದರೆ ಒಮ್ಮೆ ನೋಡಿಕೊಂಡು ಬನ್ನಿ. ಏಕೆಂದರೆ ವಾರಸುದಾರರು ಸುಳಿಯದ ಖಾಲಿ ಜಾಗಗಳನ್ನು ಗುರುತಿಸಿ ಅವುಗಳನ್ನು ಕಬಳಿಸುವ ಭೂಗಳ್ಳರ ಜಾಲವೊಂದಿದೆ. ಹೀಗೆ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿಯನ್ನು ಕಬಳಿಸಿರುವ ಭೂಗಳ್ಳರ ಜಾಲವೊಂದನ್ನು ಸಿಐಡಿ ಪೊಲೀಸರು ಭೇದಿಸಿದ್ದಾರೆ. ಕಂಪನಿಯೊಂದರ ಜಾಗವನ್ನು ಕಬಳಿಸಲು ಯತ್ನಿಸಿದ್ದ ಪ್ರಕರಣವನ್ನು ಭೇದಿಸಿರುವ ಸಿಐಡಿ ಪೊಲೀಸರು, ಭೂಗಳ್ಳರ ಜತೆ ಕೈಜೋಡಿಸಿದ್ದ ನಾಲ್ವರು ವಕೀಲರನ್ನೂ …

Read More »

ಜಿಲ್ಲೆಯಲ್ಲಿ ಪ್ರವಾಹದಿಂದ 7,800 ಕೋಟಿ ರೂಪಾಯಿ ಹಾನಿ: ವಿವರ ನೀಡಿದ ಗೋವಿಂದ ಕಾರಜೋಳ

ಬೆಳಗಾವಿ: ಜಿಲ್ಲೆಯಲ್ಲಿ ಪ್ರಸಕ್ತ ವರ್ಷ ಪ್ರವಾಹದಿಂದ 7800 ಕೋಟಿ ರೂಪಾಯಿ ಹಾನಿ ಆಗಿದೆ ಎಂದು ನೆರೆಪರಿಹಾರ ಕಾಮಗಾರಿ, ಕೊವಿಡ್ ನಿರ್ವಹಣೆ ಪರಿಶೀಲನೆ ಸಭೆ ಬಳಿಕ ಇಂದು (ಆಗಸ್ಟ್ 6) ಸಚಿವ ಗೋವಿಂದ ಕಾರಜೋಳ ಹೇಳಿಕೆ ನೀಡಿದ್ದಾರೆ. ಈ ಬಾರಿ 51 ಕಾಳಜಿ ಕೇಂದ್ರಗಳಲ್ಲಿ 38 ಸಾವಿರ ಜನ ಆಶ್ರಯ ಪಡೆದಿದ್ದಾರೆ. ನೆರೆ ಸಂತ್ರಸ್ತರಿಗೆ ಕಾಳಜಿ ಕೇಂದ್ರದಲ್ಲಿ ಜನರು, ಜಾನುವಾರುಗಳಿಗೆ ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗಿದೆ. ಇನ್ನೂ ಎಂಟು ಹತ್ತು ದಿನ …

Read More »

ಬೆಳಗಾವಿ ಸೇರಿ ರಾಜ್ಯದ 6 ಜಿಲ್ಲೆಗಳಲ್ಲಿ ಇಂದು ರಾತ್ರಿಯಿಂದಲೇ ಕೊರೋನಾ ಕರ್ಫ್ಯೂ ಜಾರಿ

ಬೆಂಗಳೂರು – ರಾಜ್ಯದ 6 ಜಿಲ್ಲೆಗಳಲ್ಲಿ ಇಂದು ರಾತ್ರಿಯಿಂದಲೇ ಕೊರೋನಾ ಕರ್ಫ್ಯೂ ಜಾರಿಯಾಗಲಿದ್ದು, ಸೋಮವಾರ ಬೆಳಗ್ಗೆ 5 ಗಂಟೆಯವರೆಗೂ ಕರ್ಫ್ಯೂ ಇರಲಿದೆ. ಮಹಾರಾಷ್ಟ್ರ ಮತ್ತು ಕೇರಳ ಗಡಿ ಜಿಲ್ಲೆಗಳಲ್ಲಿ ವೀಕ್ ಎಂಡ್ ಕರ್ಫ್ಯೂ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ತಜ್ಞರ ಸಭೆಯ ಬಳಿಕ ಅವರು ಈ ಮಾಹಿತಿ ನೀಡಿದ್ದಾರೆ. ರಾಜ್ಯಾದ್ಯಂತ ಇಂದಿನಿಂದಲೇ ನೈಟ್ ಕರ್ಫ್ಯೂ ಜಾರಿಯಾಗಲಿದೆ. ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ನೈಟ್ ಕರ್ಫ್ಯೂ …

Read More »

2ನೇ ಅಲೆಯ ಇಳಿಕೆಯ ನಂತ್ರ, ಕೊರೋನಾ 3ನೇ ಅಲೆಯ ಆರಂಭದ ಮುನ್ಸೂಚನೆ ಮತ್ತೆ ಲಾಕ್ ಡೌನ್ ಫಿಕ್ಸ್?

ಬೆಂಗಳೂರು : ರಾಜ್ಯದಲ್ಲಿ ಕೊರೋನಾ 2ನೇ ಅಲೆಯ ಇಳಿಕೆಯ ನಂತ್ರ, ಈಗ ಕೊರೋನಾ 3ನೇ ಅಲೆಯ ಆರಂಭದ ಮುನ್ಸೂಚನೆ ದೊರೆತಿದೆ. ಇದೇ ಕಾರಣದಿಂದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ರಾಜ್ಯ ತಾಂತ್ರಿಕ ಸಲಹಾ ಸಮಿತಿಯ ಸಭೆ ಕೂಡ ನಡೆಯುತ್ತಿದೆ. ಈ ಸಭೆಯಲ್ಲಿ ಕೊರೋನಾ ಪಾಸಿಟಿವಿಟಿ ದರ ಹೆಚ್ಚಿರುವಂತ ಜಿಲ್ಲೆಗಳಲ್ಲಿ ಕಠಿಣ ರೂಲ್ಸ್ ಜಾರಿಗೆ ಸೂಚಿಸಿದೆ. ಹೀಗಾಗಿ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ( Karnataka Lockdown ) ಫಿಕ್ಸ್ …

Read More »

ತಪ್ಪಿದ ಸಚಿವ ಸ್ಥಾನ; ಶಾಸಕಿ ಪೂರ್ಣಿಮಾ ಅಭಿಮಾನಿಗಳಿಂದ ಪಾದಯಾತ್ರೆ

ಚಿತ್ರದುರ್ಗ: ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಹಿರಿಯೂರು ಕ್ಷೇತ್ರದ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅಭಿಮಾನಿಗಳು ಅಸಮಾಧಾನಗೊಂಡಿದ್ದು ಪಾದಯಾತ್ರೆ ನಡೆಸಿ ಅಸಾಮಾಧನ ಹೊರ ಹಾಕಿದ್ದಾರೆ.   ಶಾಸಕಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿದ ಅಭಿಮಾನಿಗಳು, ಧರ್ಮಪುರದಿಂದ-ಹಿರಿಯೂರು ನಗರಕ್ಕೆ ಪಾದಯಾತ್ರೆ ನಡೆಸುವ ಮೂಲಕ ಪ್ರತಿಭಟನೆ ನಡೆಸಿದ್ದು, ಸಾಮಾಜಿಕ ನ್ಯಾಯ, ಮಹಿಳಾ ಕೋಟಾದಡಿ ಮಂತ್ರಿಗಿರಿ ನೀಡುವಂತೆ ಆಗ್ರಹ ಪಡಿಸಿದ ಅಭಿಮಾನಿಗಳು, ಮಂತ್ರಿ ಸ್ಥಾನ ನೀಡುವುದಾಗಿ ಆಸೆ ತೋರಿಸಿ ಬೊಮ್ಮಾಯಿ ಸರ್ಕಾರ ಮೋಸ ಮಾಡಿದೆ ಎಂದು …

Read More »

ವಿಷಾಹಾರ ಸೇವನೆ; ಒಂದೇ ಕುಟುಂಬದ 7 ಜನರ ಸ್ಥಿತಿ ಗಂಭೀರ

ಬಾಗಲಕೋಟೆ; ವಿಷಾಹಾರ ಸೇವಿಸಿದ ಪರಿಣಾಮ ನಾಲ್ಕು ಮಕ್ಕಳು ಸೇರಿದಂತೆ ಕುಟುಂಬದ 7 ಸದಸ್ಯರು ಅಸ್ವಸ್ಥರಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ. ಮನೆಯಲ್ಲಿಯೇ ತಯಾರಿಸಿದ ಗೋಧಿ ಚಪಾತಿ ಸೇವಿಸಿದ ಬಳಿಕ ಕುಟುಂಬ ಸದಸ್ಯರಲ್ಲಿ ಅನಾರೋಗ್ಯ ಕಾಣಿಸಿಕೊಂಡಿದ್ದು, ವಾಂತಿ-ಭೇದಿ ಶುರುವಾಗಿದೆ. ತಾಯಿ, ಮಗ, ಸೊಸೆ, ಮೊಮ್ಮಕ್ಕಳು ಎಲ್ಲರೂ ಆಸ್ಪತ್ರೆಗೆ ದಾಖಲಾಗಿದ್ದಾರೆ.   ದುಂಡವ್ವ ಮಹಾರುದ್ರಪ್ಪ (60), ಮಗ ಲಕ್ಷ್ಮಣ (38), ಸೊಸೆ ಶಾಂತಾ (28) ಮೊಮ್ಮಕ್ಕಳಾದ ತೇಜಸ್ವಿನಿ (12), ಪಲ್ಲವಿ (10), ಪ್ರಥಮ್ …

Read More »