ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಐದು ನಗರ ಪಾಲಿಕೆಗಳ ವಾರ್ಡ್ ವಾರು ಕರಡು ಮತದಾರರ ಪಟ್ಟಿ ಬಿಡುಗಡೆಯಾಗಿದೆ. ಈ ಪಟ್ಟಿಯಲ್ಲಿ ಒಟ್ಟು 88,92,528 ಮತದಾರರಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ತಿಳಿಸಿದರು. ಪರಿಷ್ಕೃತ ಕರಡು ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನವರಿ 19 ರಂದು ಕರಡು ಮತದಾರರ ಪಟ್ಟಿಯನ್ನು ಬಿಡುಗಡೆಗೊಳಿಸಲಾಗಿತ್ತು. ಅದರಲ್ಲಿದ್ದ ಲೋಪದೋಷಗಳನ್ನು ಸರಿಪಡಿಸಿ, ಮಾರ್ಪಾಡುಗಳು …
Read More »ನಾರಿ ಶಕ್ತಿಗೆ ನಮನ: ಕಿತ್ತೂರಿನಲ್ಲಿ ಮಹಿಳಾ ದಿನಾಚರಣೆಯ ಸಂಭ್ರಮ!
ಕಿತ್ತೂರು ಅಭಿವೃದ್ಧಿ ಪ್ರಾಧಿಕಾರ ಹಾಗೂ ರೊಹಿಣಿ ಬಾ. ಪಾಟೀಲ ಮತ್ತು ಕಿತ್ತೂರ ರಾಣಿ ಚೆನ್ನಮ್ಮ ಮಹಿಳಾ ಅಭಿಮಾನಿ ಬಳಗ ಇವರ ಸಂಯುಕ್ತ ಆಶ್ರಯದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಈ ವಿಶೇಷ ಸಂದರ್ಭದಲ್ಲಿ ನನ್ನ ಧರ್ಮಪತ್ನಿಯವರಾದ ಶ್ರೀಮತಿ Shruti Vaidya ರವರು ಭಾಗವಹಿಸಿ, ಮಹಿಳೆಯರನ್ನು ಉದ್ದೇಶಿಸಿ ಮಾತನಾಡಿ. ಮಹಿಳಾ ಸಬಲೀಕರಣ ಮತ್ತು ಸಮಾಜದಲ್ಲಿ ಮಹಿಳೆಯರ ಪಾತ್ರದ ಕುರಿತು ಅವರು ತಮ್ಮ ವಿಚಾರಗಳನ್ನು ಹಂಚಿಕೊಂಡರು. ಧೈರ್ಯ ಮತ್ತು …
Read More »ಅಂಗನವಾಡಿ ಕೇಂದ್ರಗಳಲ್ಲಿ ಕಳಪೆ ಆಹಾರ ಪೂರೈಕೆ ಆಗಿಲ್ಲ
ಬೆಳಗಾವಿ: ಅಂಗನವಾಡಿ ಕೇಂದ್ರದ ಮಕ್ಕಳಿಗೆ ಕಳಪೆ ಆಹಾರ ಪೂರೈಕೆ ಆಗಿಲ್ಲ, ಅವಧಿ ಮುಗಿದ ಆಹಾರವನ್ನು ಪೂರೈಕೆ ಮಾಡಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಸ್ಪಷ್ಟನೆ ನೀಡಿದರು. ಬಜೆಟ್ ಅಧಿವೇಶನದ ಎರಡನೇ ದಿನವಾದ ಸೋಮವಾರ ನಡೆದ ವಿಧಾನ ಪರಿಷತ್ ಕಲಾಪದ ಶೂನ್ಯದ ವೇಳೆ ಕಾಂಗ್ರೆಸ್ ಸದಸ್ಯರಾದ ಎಂ.ನಾಗರಾಜ್ ಅವರು, “ಬೆಳಗಾವಿ ಅಂಗನವಾಡಿ ಮಕ್ಕಳಿಗೆ ‘ಎಕ್ಸ್‌ಪೈರಿ’ ಮಿಲೆಟ್ ಲಡ್ಡು!” ಎಂದು ಪತ್ರಿಕೆಯೊಂದರಲ್ಲಿ ವರದಿ ಪ್ರಕಟವಾಗಿರುವ …
Read More »ದೇಶ ಹಾಳು ಮಾಡುವ ಮೋದಿಗೆ ತಕ್ಕಪಾಠ ಕಲಿಸಿ
ಕಲಬುರಗಿ: ಪ್ರಧಾನಿ ನರೇಂದ್ರ ಮೋದಿ ವಿದೇಶಾಂಗ ನೀತಿಯಿಂದ ದೇಶ ಹಾಳು ಮಾಡುತ್ತಿದ್ದು, ಮುಂದಿನ ದಿನಗಳಲ್ಲಿ ಬಿಜೆಪಿಗೆ ತಕ್ಕಪಾಠ ಕಲಿಸಬೇಕು ಎಂದು ರಾಜ್ಯಸಭೆ ವಿಪ ನಾಯಕರೂ ಆದ ಎಐಸಿಸಿ ಅಧ್ಯ ಮಲ್ಲಿಕಾರ್ಜುನ ರ್ಖಗೆ ಹೇಳಿದರು. ಪಟ್ಟಣದಲ್ಲಿ ಭಾನುವಾರ ಆಯೋಜಿಸಿದ್ದ ಮತಕ್ಷೇತ್ರ ವ್ಯಾಪ್ತಿಯ ವಿವಿಧ ಇಲಾಖೆಗಳ 1069.41 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಅಡಿಗಲ್ಲು ಮತ್ತು ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಟ್ರಂಪ್ ಒಬ್ಬ ಡಿಕ್ಟೇಟರ್, ಮೋದಿ ಅವರ ಗುಲಾಮ. ರಷ್ಯಾದಿಂದ …
Read More »ಮೆಕ್ಕೆಜೋಳ ರಾಶಿಗೆ ಬೆಂಕಿಯಿಟ್ಟ ಕಿಡಿಗೇಡಿಗಳು – 4 ಲಕ್ಷ ರೂ. ಮೌಲ್ಯದ ಜೋಳ ಸುಟ್ಟು ಭಸ್ಮ
ಹಾವೇರಿ: 8 ಎಕರೆ ಜಮೀನಿನಲ್ಲಿ ಬೆಳೆದಿದ್ದ ಮೆಕ್ಕೆಜೋಳದ ರಾಶಿಗೆ ಕಿಡಿಗೇಡಿಗಳು ಬೆಂಕಿ ಇಟ್ಟ ಪರಿಣಾಮ ಮೆಕ್ಕೆಜೋಳದ ರಾಶಿ ಸುಟ್ಟು ಭಸ್ಮವಾದ ಘಟನೆ ಹಾವೇರಿ ತಾಲೂಕಿನ ಕಾಟೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಹೊರವಲಯದ ಜಮೀನಿನಲ್ಲಿ ಈ ದುರ್ಘಟನೆ ನಡೆದಿದೆ. ಗ್ರಾಮದ ರೈತ ಪರಮೇಶಪ್ಪ ನಾಗಣ್ಣನವರ್ ಎಂಬವರಿಗೆ ಸೇರಿದ ಮೆಕ್ಕೆಜೋಳದ ರಾಶಿ ಸುಟ್ಟು ಭಸ್ಮವಾಗಿದೆ. ಸುಮಾರು 4 ಲಕ್ಷ ಮೌಲ್ಯದ ಮೆಕ್ಕೆಜೋಳದ ಫಸಲು ಸುಟ್ಟು ಭಸ್ಮವಾಗಿದೆ. ಸದ್ಯ ಮಾರುಕಟ್ಟೆಯಲ್ಲಿ ಪ್ರತಿ ಕ್ವಿಂಟಾಲ್ ಮೆಕ್ಕೆಜೋಳಕ್ಕೆ …
Read More »ಸ್ನೇಹಿತೆಯ ಪ್ರಿಯಕರನ ಕಾಲ್ ರಿಸೀವ್ ಮಾಡಿದ್ದಕ್ಕೆ ಗಲಾಟೆ – ನೇಣುಬಿಗಿದ ಸ್ಥಿತಿಯಲ್ಲಿ ಪತ್ನಿ ಶವ ಪತ್ತೆ
ಚಿಕ್ಕಬಳ್ಳಾಪುರ: ಸ್ನೇಹಿತೆಯ ಪ್ರಿಯಕರನ ಕಾಲ್ ರಿಸೀವ್ ಮಾಡಿದ್ದಕ್ಕೆ ಗಂಡ ಹಾಗೂ ಹೆಂಡತಿ ಮಧ್ಯೆ ಗಲಾಟೆಯಾಗಿ ಕೊನೆಗೆ ಪತ್ನಿ ಶವವಾಗಿ ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಆರ್.ಚೊಕ್ಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತಳನ್ನು ವರಲಕ್ಷ್ಮಿ(25) ಎಂದು ಗುರುತಿಸಲಾಗಿದ್ದು, ಗಂಡ ಗಂಗರಾಜು ಪತ್ನಿಯನ್ನು ಕೊಂದು ನೇಣು ಹಾಕಿರುವ ಆರೋಪ ಕೇಳಿಬಂದಿದೆ. ಘಟನೆ ನಡೆದ ದಿನ ಮೃತ ವರಲಕ್ಷ್ಮಿ ಸ್ನೇಹಿತೆ ಶ್ರಾವಣಿಯ ಪ್ರಿಯಕರ ಕರೆ ಮಾಡಿದ್ದ. ಆತನ ಕರೆಯನ್ನು ವರಲಕ್ಷ್ಮಿ ರಿಸೀವ್ ಮಾಡಿದ್ದಳು. ಇದೇ ವಿಚಾರಕ್ಕೆ …
Read More »ಶಾಸಕ ಬಸವರಾಜ್ ಶಿವಗಂಗಾ ಪಿಎ ಆತ್ಮಹತ್ಯೆ
ಬೆಂಗಳೂರು: ಚನ್ನಗಿರಿ ಶಾಸಕ ಬಸವರಾಜ್ ಶಿವಗಂಗಾ ಪಿಎ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಉಪ್ಪಾರಪೇಟೆ ಬಳಿಯ ಲಾಡ್ಜ್‌ನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮೃತನನ್ನು ದಾವಣಗೆರೆ ಮೂಲದ ಶಿವಕುಮಾರ್ ಎಂದು ಗುರುತಿಸಲಾಗಿದ್ದು, ಚನ್ನಗಿರಿ ಶಾಸಕ ಬಸವರಾಜ್ ಶಿವಗಂಗಾ ಪಿಎ ಆಗಿ ಕೆಲಸ ಮಾಡುತ್ತಿದ್ದರು. ಮೃತ ಶಿವಕುಮಾರ್ ಮೈ ತುಂಬಾ ಸಾಲ ಮಾಡಿಕೊಂಡಿದ್ದರು. ಕೆಲ ದಿನಗಳ ಹಿಂದೆಯಷ್ಟೇ ಕೆಲಸದಿಂದ ತೆಗೆಯಲಾಗಿತ್ತು. ಘಟನೆ ನಡೆದ ದಿನ ಹೆಂಡತಿಗೆ ವಿಡಿಯೋ ಕಾಲ್ ಮಾಡಿ, ನನಗೆ …
Read More »ಡಿಕೆಶಿ ಪರವಾಗಿ ನಾವಿದ್ದೇವೆ, ದೆಹಲಿಯಿಂದ ನಾಳೆನೇ ಬರಲಿ ತೊಂದ್ರೆ ಇಲ್ಲ: ಸತೀಶ್ ಜಾರಕಿಹೊಳಿ
ಬೆಂಗಳೂರು: ದೆಹಲಿಗೆ ತೆರಳಿರುವ ಡಿಸಿಎಂ ಡಿಕೆಶಿ ಪರವಾಗಿ ನಾವಿದ್ದೇವೆ. ಅವರು ನಾಳೆನೇ ಬರಲಿ ತೊಂದರೆ ಇಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ವಿಧಾನಸೌಧದಲ್ಲಿ ಅವರು ಮಾಧ್ಯಮಗಳ ಜೊತೆ ಮಾತನಾಡಿದರು. ಈ ವೇಳೆ ಡಿಸಿಎಂ ಡಿಕೆಶಿ ದೆಹಲಿಯಲ್ಲೇ ಉಳಿದಿರುವ ವಿಚಾರವಾಗಿ ಪ್ರತಿಕ್ರಿಸಿದರು. ಡಿಸಿಎಂ ಪರವಾಗಿ ನಾವಿದ್ದೇವೆ. ನಾವು ಇಲ್ಲಿ ನೋಡಿಕೊಳ್ಳುತ್ತೇವೆ ಎಂದಿದ್ದಾರೆ. ಆರ್‍ಎಸ್‍ಎಸ್ ಬಗ್ಗೆ ಮಾಜಿ ಸಂಸದ ಅನಂತ ಕುಮಾರ್ ಹೆಗ್ಡೆ ಹೇಳಿಕೆ ವಿಚಾರವಾಗಿ, ಆರ್‍ಎಸ್‍ಎಸ್ ಬ್ಯಾನ್ ಮಾಡ್ತೀವಿ ಅಂತ …
Read More »ಪೊಲೀಸ್ ಠಾಣೆ ಕಟ್ಟಡ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿದ ಅಶೋಕ ಪಟ್ಟಣ
ರಾಮದುರ್ಗ:ಸುರೇಬಾನ ಉಪ ಠಾಣೆಯನ್ನು 2018ರಲ್ಲಿಯೇ ಮೇಲ್ದರ್ಜೆಗೇರಿಸಿ, ಪೊಲೀಸ್ ಠಾಣೆಯಾಗಿ ಪರಿವರ್ತನೆ ಮಾಡಿಸಿದ್ದೇನೆ. ಈಗ ಮತ್ತೆ ಅದರ ಕಟ್ಟಡ ನಿರ್ಮಾಣ ಕಾಮಗಾರಿಗೂ ಸಹ ಅಧಿಕಾರದ ಅವಧಿಯಲ್ಲಿ ಚಾಲನೆ ನೀಡಿದ್ದೇನೆ ಎಂದು ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಹೇಳಿದರು. ತಾಲೂಕಿನ ಸುರೇಬಾನ ಪೊಲೀಸ್ ಠಾಣೆಗೆ 1.80 ಕೋಟಿ ರೂ. ವೆಚ್ಚದಲ್ಲಿ ನೂತನ ಕಟ್ಟಡ ನಿರ್ಮಾಣಕ್ಕೆ ಶನಿವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿ, ಪೊಲೀಸರು ಹೆಲ್ಮೆಟ್ ಹಾಕುವಂತೆ ಸೂಚಿಸಿದರೂ ಧರಿಸದೇ ವಾಹನ ಚಲಾಯಿಸುವುದು ಸರಿಯಲ್ಲ. …
Read More »ಸಿಲಿಂಡರ್ ದರ ಹೆಚ್ಚಳಕ್ಕೆ ಕಾಂಗ್ರೆಸ್ ಆಕ್ರೋಶ – ಖಾಲಿ ಸಿಲಿಂಡರ್ ಹಿಡಿದು ಪ್ರತಿಭಟನೆ
ಬೆಂಗಳೂರು: ಸಿಲಿಂಡರ್ ದರ ಹೆಚ್ಚಳಕ್ಕೆ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದ್ದು, ಕೆಪಿಸಿಸಿ ಕಚೇರಿ ಮುಂದೆ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿತು. ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ.ಚಂದ್ರಶೇಖರ್, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್.ಎಂ.ರೇವಣ್ಣ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು, ಖಾಲಿ ಗ್ಯಾಸ್ ಸಿಲಿಂಡರ್ ಹೊತ್ತುಕೊಂಡು ಆಕ್ರೋಶ ವ್ಯಕ್ತಪಡಿಸಿದರು. ವಿಶ್ವಗುರು ಮೋದಿ ದೇಶ ಮಾರಾಟ ಮಾಡುತ್ತಾರೆ ಎಂದು ಭಿತ್ತಿಪತ್ರ ಹಿಡಿದು ಘೋಷಣೆ ಕೂಗಿದರು. ಇದೇ ವೇಳೆ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ.ಚಂದ್ರಶೇಖರ್, …
Read More »
Laxmi News 24×7