ಬೆಂಗಳೂರು: ಪದವಿ ಕಾಲೇಜುಗಳಿಗೆ ವಿದ್ಯಾರ್ಥಿಗಳ ಪ್ರವೇಶಕ್ಕೆ ತಾತ್ಕಾಲಿಕವಾಗಿ ತಡೆ ನೀಡಲಾಗಿದೆ. 2021-22ನೇ ಸಾಲಿನ ಪದವಿ ಕೋರ್ಸ್ಗಳ ಪ್ರವೇಶ (UG College Admission) ಪ್ರಕ್ರಿಯೆಯನ್ನು ಮುಂದೂಡಿಕೆ ಮಾಡಲಾಗಿದೆ. ಸರ್ಕಾರಿ ಹಾಗೂ ಖಾಸಗಿ ಅನುದಾನಿತ ಕಾಲೇಜುಗಳ ಪ್ರವೇಶ ಪ್ರಕ್ರಿಯೆ ಮುಂದೂಡಿಕೆ ಮಾಡಲಾಗಿದೆ. ಈ ಮುನ್ನ ಆಗಸ್ಟ್ 4 ರಿಂದ ಪ್ರವೇಶ ಪ್ರಾರಂಭಿಸುವಂತೆ ಕಾಲೇಜು ಶಿಕ್ಷಣ ಇಲಾಖೆ ಪದವಿ ಕಾಲೇಜುಗಳಿಗೆ ನಿರ್ದೇಶನ ನೀಡಿತ್ತು. ಆದರೆ ಮುಂದಿನ ಪ್ರವೇಶ ಪ್ರಕ್ರಿಯೆ ದಿನಾಂಕವನ್ನು ಸದ್ಯದಲ್ಲೇ ಪ್ರಕಟ ಮಾಡಲಾಗುವುದು …
Read More »ಪ್ರೀತಿ ನಿರಾಕರಿಸಿದಳು ಎಂಬ ಕಾರಣಕ್ಕೆ ಯುವಕನೊಬ್ಬ 10ನೇ ತರಗತಿ ವಿದ್ಯಾರ್ಥಿನಿಯನ್ನೇ ಚಾಕುವಿನಿಂದ ಇರಿದ
ಬೆಳಗಾವಿ: ಪ್ರೀತಿ ನಿರಾಕರಿಸಿದಳು ಎಂಬ ಕಾರಣಕ್ಕೆ ಯುವಕನೊಬ್ಬ 10ನೇ ತರಗತಿ ವಿದ್ಯಾರ್ಥಿನಿಯನ್ನೇ ಚಾಕುವಿನಿಂದ ಇರಿದು ಕೊಂದಿರುವ ಘಟನೆ ಬೆಳಗಾವಿಯ ರಾಯಭಾಗದಲ್ಲಿ ನಡೆದಿದೆ. ಆರೋಪಿ ಅಮೀರ್ ದಾರ್ ಎಂಬಾತ ಈ ಕೃತ್ಯವೆಸಗಿದ್ದಾನೆ. ಆರೋಪಿ ಯುವತಿಗೆ ತನ್ನನ್ನು ಪ್ರೀತಿಸುವಂತೆ ಬಲವಂತ ಮಾಡಿ ಪೀಡಿಸುತ್ತಿದ್ದ. ಯುವತಿ ನಿರಾಕರಿಸಿದ್ದಾಳೆ. ಟ್ಯೂಷನ್ ಮುಗಿಸಿ ಶಿಕ್ಷಕರ ಮನೆಯಿಂದ ವಾಪಸ್ ಅಗುತ್ತಿದ್ದ ವಿದ್ಯಾರ್ಥಿನಿಯನ್ನು ಯುವಕ ಚಾಕುವಿನಿಂದ ಇರಿದು ಹತ್ಯೆಗೈದಿದ್ದಾನೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.
Read More »ರೈಲ್ವೆ ನಿಲ್ದಾಣಗಳಲ್ಲಿ ವಾಹನ ನಿಲ್ಲಿಸಿದರೆ ಭಾರೀ ದಂಡ!
ಬೆಂಗಳೂರು ಸೇರಿದಂತೆ ರಾಜ್ಯದ ಇತರೆ ಯಾವುದೇ ರೈಲ್ವೇ ನಿಲ್ದಾಣಗಳಲ್ಲಿ 7 ನಿಮಿಷಕ್ಕಿಂತ ಹೆಚ್ಚು ಸಮಯ ವಾಹನ ಪಾ ರ್ಕಿಂಗ್ ಮಾಡಿದರೆ ಭಾರೀ ದಂಡ ತೆರಬೇಕಾಗುತ್ತದೆ. ಬೆಂಗಳೂರು ರೈಲ್ವೆ ಇಲಾಖೆ ಸೋಮವಾರ ಈ ಆದೇಶ ಹೊರಡಿಸಿದ್ದು, ನಿಲ್ದಾಣದ ಮುಂಭಾಗದಲ್ಲಿ ಪ್ರಯಾಣಿಕರನ್ನ ಡ್ರಾಪ್ ಮಾಡುವವರು ಮತ್ತು ಪಿಕಪ್ ಮಾಡುವವರು ಗಂಟೆಗಟ್ಟಲೇ ತಮ್ಮ ವಾಹನವನ್ನುನಿಲ್ಲಿಸುತ್ತಿದ್ದಾರೆ. ಈ ಮೂಲಕ ಸಂಚಾರ ದಟ್ಟಣೆಗೆ ತೊಂದರೆ ಆಗುತ್ತಿದೆ ವಾಹನದಟ್ಟಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರೈಲ್ವೆ ನಿಲ್ದಾಣ ಮುಂಭಾಗದಲ್ಲಿ 7 ನಿಮಿಷಕ್ಕಿಂತ …
Read More »ಯಾವ ಸ್ಥಾನ ನೀಡಿದ್ರೂ ನಿಭಾಯಿಸುವೆ-ಮಹೇಶ್ ಕುಮಟಳ್ಳಿ
ಬೆಳಗಾವಿ: ಯಾವುದೇ ಸ್ಥಾನ ನೀಡಿದರೂ ನಾನು ನಿಭಾಯಿಸುವೆ. ಮಂತ್ರಿಗಿರಿಗಾಗಿ ಯಾವುದೇ ಲಾಭಿ ಮಾಡಲ್ಲ. ಪಕ್ಷದ ವರಿಷ್ಠರ ನಿರ್ಧಾರಕ್ಕೆ ನಾನು ಬದ್ಧ ಎಂದು ಅಥಣಿ ಶಾಸಕ ಮಹೇಶ್ ಕುಮಟಳ್ಳಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೀಘ್ರದಲ್ಲೇ ಅಥಣಿ ತಾಲೂಕಿನ ಪ್ರವಾಹ ಸಂತ್ರಸ್ತರ ಎಲ್ಲ ಸಮಸ್ಯೆಗಳನ್ನೂ ಬಗೆಹರಿಸಲಾಗುವುದು. ಗ್ರಾಮಗಳ ಸ್ಥಳಾಂತರಕ್ಕೆ ಜಮೀನಿನ ಕೊರತೆ ಇದೆ. ಅದಕ್ಕಾಗಿ ಪುನರ್ವಸತಿ ಕಾರ್ಯ ವಿಳಂಬವಾಗುತ್ತಿದೆ. ಶೀಘ್ರದಲ್ಲೇ ವಿಶೇಷ ಪ್ರಕರಣದಡಿ ನೆರೆ ಸಂತ್ರಸ್ತರ ಸಮಸ್ಯೆಗಳನ್ನು …
Read More »ಬೀದಿಯಲ್ಲಿ ಫೋಟೋ ಹಾಕಿ ಪೋಸ್ ಕೊಡುವ ಮೋದಿಗೆ ಲಸಿಕೆ ಪೂರೈಸುವ ಜ್ಞಾನವಿಲ್ಲವೆ : ಗುಂಡೂರಾವ್
ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ಭೀತಿ ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿಯೇ ಕಾಂಗ್ರೆಸ್ ಮುಖಂಡ ದಿನೇಶ್ ಗುಂಡೂರಾವ್ ಟ್ವಿಟ್ಟರ್ ನಲ್ಲಿ ಪೋಸ್ಟ್ ಒಂದನ್ನು ಶೇರ್ ಮಾಡಿದ್ದಾರೆ. ರಾಜ್ಯದ ಬಹುತೇಕ ಕಡೆ ಕೋವಿಡ್ ಲಸಿಕೆಯ ಅಭಾವವಿದೆ. ರಾಜ್ಯಗಳಿಗೆ ಅಗತ್ಯ ಪ್ರಮಾಣದ ಲಸಿಕೆ ಒದಗಿಸುವುದು ಕೇಂದ್ರದ ಜವಬ್ಧಾರಿ. ಆದರೆ ಕೇಂದ್ರ ಲಸಿಕೆ ಪೂರೈಸುವಲ್ಲಿ ವಿಫಲವಾಗಿದೆ ಎಂದು ಕೇಂದ್ರದ ವಿರುದ್ಧ ಗುಡುಗಿದ್ದಾರೆ. ಲಸಿಕಾ ಅಭಿಯಾನದ ಬಗ್ಗೆ ಹಾದಿ ಬೀದಿಯಲ್ಲಿ ಫೋಟೋ ಹಾಕಿಕೊಂಡು ಪೋಸ್ ಕೊಡುವ …
Read More »ಭೀಕರ ಅಪಘಾತ; ದುರ್ಘಟನೆ ಬಳಿಕ ಹೊತ್ತಿಕೊಂಡ ಬೆಂಕಿಯಿಂದ ಇಬ್ಬರು ಪಾರಾಗಿದ್ದೇ ಪವಾಡ
ತುಮಕೂರು: ಬೆಳ್ಳಂಬೆಳಗ್ಗೆ ಎರಡು ಲಾರಿಗಳ ಮಧ್ಯೆ ಭೀಕರ ಅಪಘಾತ ಸಂಭವಿಸಿ ಲಾರಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಪೊಲೀಸರ ಸಮಯ ಪ್ರಜ್ಞೆಯಿಂದ ಲಾರಿ ಚಾಲಕ ಹಾಗೂ ಕ್ಲೀನರ್ ಪ್ರಾಣಾಪಾಯದಿಂದ ಪಾರಾದ ಘಟನೆ ಶಿರಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಳ್ಳಂಬೆಳ್ಳ ಬಳಿ ನಡೆದಿದೆ. ಬೆಂಗಳೂರು ಕಡೆ ತೆರಳುತ್ತಿದ್ದ ಸಿಮೆಂಟ್ ಪೈಪ್‌ಗಳನ್ನು ಹೊತ್ತಿದ್ದ ಲಾರಿ ಮತ್ತು ಕಟ್ಟಿಗೆ ತುಂಬಿದ ಲಾರಿ ಪರಸ್ಪರ ಡಿಕ್ಕಿ ಹೊಡೆದು ದುರ್ಘಟನೆ ಸಂಭವಿಸಿದೆ. ಪರಿಣಾಮ ಕಟ್ಟಿಗೆ ತುಂಬಿದ ಲಾರಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮಾಹಿತಿ …
Read More »ಬೆಳಗಾವಿಯಲ್ಲೊಂದು ಡೆಡ್ಲಿ ಮರ್ಡರ್.. ಕೇವಲ 2000 ರೂಪಾಯಿಗೇ ವೃದ್ಧನ ಹೆಣ
ಬೆಳಗಾವಿ: ದುಡಿದ 2000 ರೂಪಾಯಿಯನ್ನು ಕೊಡಲಿಲ್ಲ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬನನ್ನು ಬ್ಲೇಡ್ ನಿಂದ ಕುಯ್ದು ಕೊಲೆ ಮಾಡಿದ ಘಟನೆ ಜಿಲ್ಲೆಯಲ್ಲಿ ವರದಿಯಾಗಿದೆ. ಕೊಲೆಯಾದ ವ್ಯಕ್ತಿಯ ಹೆಸರು ಮಹಾದೇವ್ ಜಾಧವ. ವಯಸ್ಸು 55ವರ್ಷ. ಬೆಳಗಾವಿಯ ವಡಗಾಂವ ನಿವಾಸಿ. ಕಳೆದ ಹಲವು ವರ್ಷಗಳಿಂದ ಗಾರೆ ಕೆಲಸ ಮಾಡಿಕೊಂಡಿದ್ದ ಇತ. ಇವತ್ತು ವಡಗಾಂವನ ಯಳ್ಳೂರು ರಸ್ತೆಯಲ್ಲಿ ಹೆಣವಾಗಿ ಬಿದ್ದಿದ್ದಾನೆ. ಹಾಡು ಹಗಲೇ ಜನ ಓಡಾಡುತ್ತಿರುವ ರಸ್ತೆಯಲ್ಲಿಯೇ ಕತ್ತು ಕೊಯ್ದು ಮಹಾದೇವ್ನನ್ನು ಭೀಕರವಾಗಿ ಕೊಲೆ ಮಾಡಲಾಗಿತ್ತು. …
Read More »ಪರಣ್ಣ ಮುನವಳ್ಳಿಗೆ ಸಚಿವ ಸ್ಥಾನ ನೀಡುವಂತೆ ಯಡಿಯೂರಪ್ಪಗೆ ಮನವಿ
ಬೆಂಗಳೂರು : ಪರಣ್ಣ ಮುನವಳ್ಳಿಗೆ ಸಚಿವ ಸ್ಥಾನ ನೀಡಬೇಕೆಂದು ಮುನವಳ್ಳಿ ಬೆಂಬಲಿಗರು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ. ಕೊಪ್ಪಳ ಜಿಲ್ಲೆಗೆ ಎರಡು ಸಲ ಅನ್ಯಾಯ ಆಗಿದೆ. ಈ ಸಲ ಅನ್ಯಾಯ ಆಗದಂತೆ ಕ್ರಮವಹಿಸುವಂತೆ ವೀರಶೈವ ಲಿಂಗಾಯತರ ವೇದಿಕೆಯಿಂದ ಮನವಿ ಸಲ್ಲಿಸಲಾಗಿದೆ. ಗಂಗಾವತಿ ಶಾಸಕ ಪರಣ್ಣ ಮುನವಳ್ಳಿ ಅವಕಾಶ ನೀಡುವಂತೆ ಬೆಂಬಲಿಗರು ಘೋಷಣೆ ಕೂಗಿದ್ದಾರೆ. ಬೆಂಗಳೂರಿನ ಕಾವೇರಿ ನಿವಾಸದ ಬಳಿ : ಪರಣ್ಣ ಮುನವಳ್ಳಿ ಬೆಂಬಲಿಗರು ಘೋಷಣೆ …
Read More »ಡಿಸಿಪಿಗಳೊಂದಿಗೆ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಸಭೆ
ಬೆಂಗಳೂರು, ನಗರದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜನದಟ್ಟಣೆ ತಡೆಗಟ್ಟುವ ಸಲುವಾಗಿ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರು ಇಂದು ಎಲ್ಲಾ ವಿಭಾಗದ ಡಿಸಿಪಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚೆ ನಡೆಸಿದರು. ಕೋವಿಡ್ ನಿಯಮ ಪಾಲಿಸದೆ ಜನರು ಮಾರುಕಟ್ಟೆ, ಸಭೆ-ಸಮಾರಂಭಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಈ ಬಗ್ಗೆ ಪೊಲೀಸರು ತೆಗೆದುಕೊಳ್ಳಬೇಕಾದ ಕಟ್ಟುನಿಟ್ಟಿನ ಕ್ರಮಗಳ ಬಗ್ಗೆ ಆಯುಕ್ತರು ಚರ್ಚಿಸಿದರು. ರಾಜಧಾನಿ ಬೆಂಗಳೂರಿಗೆ ಮತ್ತೆ ಕೊರೊನಾ …
Read More »ಕೇರಳ, ಮಹಾರಾಷ್ಟ್ರದಿಂದ ನಗರಕ್ಕೆ ಬರುವವರಿಗೆ ಆರ್’ಟಿ-ಪಿಸಿಆರ್ ನೆಗೆಟಿವ್ ವರದಿ ಕಡ್ಡಾಯ: ಬಿಬಿಎಂಪಿ
ಬೆಂಗಳೂರು: ಕೋವಿಡ್-19 ಸೋಂಕು ಹೆಚ್ಚಾಗಿರುವ ಕೇರಳ ಮತ್ತು ಮಹಾರಾಷ್ಟ್ರದಿಂದ ಬೆಂಗಳೂರಿಗೆ ಬರುವವರಿಗೆ ತಕ್ಷಣದಿಂದ ಆರ್’ಟಿ-ಪಿಸಿಆರ್ ವರದಿ ಮತ್ತು ಸಾಂಸ್ಥಿಕ ಕ್ವಾರಂಟೈನ್ ಕಡ್ಡಾಯ ಮಾಡಿದ್ದೇವೆಂದು ಪಾಲಿಕೆ ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರು ಹೇಳಿದ್ದಾರೆ. ನಗರದಲ್ಲಿ ಕೋವಿಡ್ ನಿಯಂತ್ರಣ ನಿಯಮಗಳ ಅನುಷ್ಠಾನ ಸಂಬಂಧ ನಿನ್ನೆ ನಡೆದ ಬಿಬಿಎಂಪಿ ಮತ್ತು ಪೊಲೀಸ್ ಇಲಾಖೆಯ ಸಮನ್ವಯ ಸಮಿತಿ ಸಭೆ ಬಳಿಕ ಮಾತನಾಡಿರುವ ಗೌರವ್ ಗುಪ್ತಾ ಅವರು, ಕೋವಿಡ್-19 ಪರೀಕ್ಷೆ ವರದಿ ಇಲ್ಲದೆ ಬೆಂಗಲೂರಿಗೆ ಬರುವ …
Read More »
Laxmi News 24×7