Breaking News

ಜಿಲ್ಲೆ

ಸಚಿವ ಸ್ಥಾನ ಸಿಗದಿದ್ರೆ ಎಲ್ಲಾ ಅಳಲನ್ನು ಮುಂದಿನ ದಿನಗಳಲ್ಲಿ ತೋಡಿಕೊಳ್ತೇನೆ -ಬಿಜೆಪಿ ಶಾಸಕ ದುರ್ಯೋಧನ ಐಹೊಳೆ

ಬೆಳಗಾವಿ: ನಾನು 3 ಬಾರಿ ಶಾಸಕನಾಗಿದ್ದೇನೆ, ದಲಿತನೂ ಆಗಿದ್ದೇನೆ. ಈ ಬಾರಿ ನನಗೂ ಸಚಿವ ಸ್ಥಾನವನ್ನು ನೀಡಬೇಕು ಅಂತ ಹೇಳಿಕೆ ನೀಡಿದ ಜಿಲ್ಲೆಯ ರಾಯಬಾಗ ಕ್ಷೇತ್ರದ ಬಿಜೆಪಿ ಶಾಸಕ ದುರ್ಯೋಧನ ಐಹೊಳೆ, ಕಳೆದ 25 ವರ್ಷಗಳಿಂದ ರಾಯಬಾಗ ಮತಕ್ಷೇತ್ರಕ್ಕೆ ಸಚಿವ ಸ್ಥಾನ ಸಿಕ್ಕಿಲ್ಲ. ಕಳೆದ ಬಾರಿಯೂ ನನ್ನನ್ನ ಕಡೆಗಣನೆ ಮಾಡಲಾಗಿದೆ. ಈ ಬಾರಿ ನನಗೆ ಸಚಿವ ಸ್ಥಾನ ನೀಡಬೇಕು ಅಂತ ಒತ್ತಾಯಿಸಿದ್ದಾರೆ. ಇವತ್ತು ಬೆಂಗಳೂರಿಗೆ ಹೋಗುತ್ತಿದ್ದೇನೆ. ಹೈಕಮಾಂಡ್ ಭೇಟಿಯಾಗಿ ಸಚಿವ …

Read More »

ಛಲದಂಕಮಲ್ಲನ ಹೋರಾಟದ ಹಾದಿ

ಬೆಂಗಳೂರು: ರಾಜ್ಯ ರಾಜಕಾರಣದ ಇತಿಹಾಸದಲ್ಲಿ ಆಯಾ ಕಾಲಘಟ್ಟದಲ್ಲಿ ರಾಜ್ಯವನ್ನಾಳಿದ ನಾಯಕರು ತಮ್ಮದೇ ಆದ ಛಾಪು ಮೂಡಿಸಿದ್ದು, ಜನನಾಯಕ ರಾಗಿ, ಸಮುದಾಯದ ನಾಯಕರಾಗಿ ಗುರುತಿಸಿ ಕೊಂಡಿದ್ದು, ಇನ್ನೂ ರಾಜ್ಯದ ಜನಮಾನಸದಲ್ಲಿ ಉಳಿದುಕೊಂಡಿದ್ದಾರೆ. ಪ್ರಸ್ತುತ ರಾಜ್ಯ ರಾಜಕಾರಣದಲ್ಲಿ ತೆರೆಯ ಹಿಂದೆ ಸರಿಯುವ ಪ್ರಮುಖ ನಾಯಕರಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸರದಿ ಬಂದಿದೆ. ಹೋರಾಟದಿಂದಲೇ ಅಧಿಕಾರಕ್ಕೆ ಬಂದು, ಅಧಿಕಾರ ನಡೆಸುವಾಗಲೂ ಹೋರಾಟ ನಡೆಸುತ್ತಲೇ ಅಧಿಕಾರ ನಡೆಸುವಂತಾಯಿತು. ಪ್ರತಿಪಕ್ಷದ ನಾಯಕನಾಗಿ ಆಡಳಿತ ಪಕ್ಷದ ವಿರುದ್ದ …

Read More »

ಬೆಳಗಾವಿ: ಜಿಲ್ಲೆಯ ನೆರೆ ಪೀಡಿತ ಪ್ರದೇಶಗಳಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಭೇಟಿ ನೀಡಿ ಪರಿಶೀಲನೆ

ಬೆಳಗಾವಿ: ಜಿಲ್ಲೆಯ ನೆರೆ ಪೀಡಿತ ಪ್ರದೇಶಗಳಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜಿಲ್ಲೆಯ ಖಾನಾಪುರ ಪಟ್ಟಣದಲ್ಲಿ ಪೊಲೀಸ್ ತರಬೇತಿ ಶಾಲೆ ಬಳಿಯ ಸೇತುವೆಯನ್ನು ವೀಕ್ಷಣೆ ಮಾಡಿ, ದುರ್ಗಾನಗರದಲ್ಲಿ ನೆರೆಯಿಂದ ಮುಳಗಡೆಯಾಗಿದ್ದ ಮನೆಗಳನ್ನು ವೀಕ್ಷಿಸಿದರು. ಈ ನಡುವೆ ನೆರೆ ಸಂತ್ರಸ್ತರ ಅಳಲನ್ನು ಆಲಿಸಿದರು. ಅಲ್ಲದೇ ಮಲಪ್ರಭಾ ನದಿಯಿಂದ ಮುಳುಗಡೆಯಾಗಿದ್ದ ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್ ಮನೆಗೂ ಭೇಟಿ ನೀಡಿದರು. ನೆರೆ ಪೀಡಿತ ಪ್ರದೇಶಗಳನ್ನು ವೀಕ್ಷಿಸಿದ ಸಿದ್ದರಾಮಯ್ಯ …

Read More »

ಇಂದು ಸಂಜೆ ಬಿಜೆಪಿ ಶಾಸಕಾಂಗ ಸಭೆ: ಇಂದೇ ನೂತನ ಸಿಎಂ ಆಯ್ಕೆ ಸಾಧ್ಯತೆ

ಬೆಂಗಳೂರು: ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಬಿಜೆಪಿಯಲ್ಲಿ ನೂತನ ನಾಯಕನ ಆಯ್ಕೆಗೆ ಕಸರತ್ತು ಆರಂಭವಾಗಿದೆ. ಸಿಎಂ ಕುರ್ಚಿ ರೇಸ್ ನಲ್ಲಿ ಈಗಾಗಲೇ ಮೂರು- ನಾಲ್ಕು ಜನರ ಹೆಸರು ಕೇಳಿಬರುತ್ತಿದ್ದು, ‘ಇವರ್ ಬಿಟ್ಟು ಅವರ್ ಬಿಟ್ಟು ಮತ್ಯಾರು’ ಎಂಬ ಪರಿಸ್ಥಿತಿಗೆ ಬಂದಿದೆ. ಇದರ ನಡುವೆ ಇಂದು (ಜು.27) ಸಂಜೆ 7.30 ಕ್ಕೆ ಬಿಜೆಪಿ ಶಾಸಕಾಂಗ ಸಭೆ ಕರೆಯಲಾಗಿದೆ. ನಗರದ ಖಾಸಗಿ ಹೋಟೆಲ್ ನಲ್ಲಿ ಶಾಸಕಾಂಗ ಪಕ್ಷದ ಸಭೆ …

Read More »

ಹೆದರಿಸಿ ಯಡಿಯೂರಪ್ಪನವರ ರಾಜೀನಾಮೆ ಪಡೆಯಲಾಗಿದೆ: ಸಿದ್ದರಾಮಯ್ಯ ಟೀಕೆ

ಬೆಳಗಾವಿ: ‘ಬಿಜೆಪಿ ಹೈಕಮಾಂಡ್‌ನವರು ಬಿ.ಎಸ್. ಯಡಿಯೂರಪ್ಪ ಅವರನ್ನು ಹೆದರಿಸಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡಿಸಿದ್ದಾರೆ. ಯಡಿಯೂರಪ್ಪ ಸ್ವಇಚ್ಛೆಯಿಂದ ರಾಜೀನಾಮೆ ನೀಡಿಲ್ಲ’ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಟೀಕಿಸಿದರು. ‘ಎರಡು ವರ್ಷಗಳ ಹಿಂದೆ ರಾಜ್ಯದಲ್ಲಿ ಪ್ರವಾಹ ಬಂದಾಗ ಸಚಿವ ಸಂಪುಟ ಇರಲಿಲ್ಲ. ಈ ಬಾರಿ ಪ್ರವಾಹ ಬಂದಾಗ ರಾಜ್ಯದಲ್ಲಿ ಮುಖ್ಯಮಂತ್ರಿಯೇ ರಾಜೀನಾಮೆ ನೀಡಿದ್ದಾರೆ. ಯಡಿಯೂರಪ್ಪ ಕೇರ್‌ ಟೇಕರ್‌ ಮುಖ್ಯಮಂತ್ರಿಯಾಗಿದ್ದಾರೆ. ಈಗ ಮಂತ್ರಿಮಂಡಲವೇ ಇಲ್ಲ. ಸ್ವಲ್ಪ ದಿನ ಕಾದು ಬಳಿಕ ರಾಜೀನಾಮೆ …

Read More »

ಯಾರಾಗ್ತಾರೆ ರಾಜ್ಯ ದ ಮುಂದಿನ ಸಿಎಂ?..

ಬೆಂಗಳೂರು: ರಾಜ್ಯದ ಮುಂದಿನ ಮುಖ್ಯಮಂತ್ರಿ ಗಾದಿ ಎಂಬ ಕುತೂಹಲ ಈಗ ತೀವ್ರವಾಗಿದೆ. ಬಿಜೆಪಿ ಹೈಕಮಾಂಡ್‌ ಭಾಗವಾಗಿರುವ ನಾಯಕರು, ಹಿರಿಯ ಸಚಿವರು, ಶಾಸಕರು ಸೇರಿದಂತೆ ಹಲವರ ಹೆಸರುಗಳು ಸಂಭವನೀಯರ ಪಟ್ಟಿಯಲ್ಲಿವೆ. ಸಂಭವನೀಯರ ಪಟ್ಟಿಯಲ್ಲಿರುವರ ಸಾಮರ್ಥ್ಯ- ದೌರ್ಬಲ್ಯದ ಅಂಶಗಳೇನು ಎಂಬ ವಿವರ ಇಲ್ಲಿದೆ. ಪ್ರಲ್ಹಾದ ಜೋಶಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರಿಗೆ ಉತ್ತರ ಕರ್ನಾಟಕದವರು, ಸಂಘ ಪರಿವಾರದ ನಿಷ್ಠಾವಂತ ಮತ್ತು ಪ್ರಧಾನಿ ಮೋದಿ ಅವರೊಂದಿಗಿನ ನಿಕಟ ಒಡನಾಟ ಇರುವುದು ವರದಾನವಾಗಬಹುದು. ವಿವಾದಗಳಿಲ್ಲ. …

Read More »

ಜೊಲ್ಲೆ ಮೊಟ್ಟೆ ಡೀಲ್; ರಾಜ್ಯದ ವಿವಿಧೆಡೆ ಪ್ರತಿಭಟನೆ

ಬೆಳಗಾವಿ: ಸಚಿವೆ ಶಶಿಕಲಾ ಜೊಲ್ಲೆ ಮೊಟ್ಟೆ ಡೀಲ್ ಪ್ರಕರಣಕ್ಕ ಸಂಬಂಧಿಸಿ ಇಂದು ಚಿಕ್ಕೋಡಿ ಪಟ್ಟಣದಲ್ಲಿ ಯೂಥ್ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ. ಚಿಕ್ಕೋಡಿ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದ ಯೂತ್ ಕಾಂಗ್ರೆಸ್ ಕಾರ್ಯಕರ್ತರು, ಮೊಟ್ಟೆ ಭ್ರಷ್ಟಾಚಾರದಲ್ಲಿ ತೊಡಗಿದ ಸಚಿವೆಯನ್ನು ಬಂಧಿಸಬೇಕೆಂದು ಆಗ್ರಹಿಸಿದ್ದಾರೆ. ಮೊಟ್ಟೆ ಕಳ್ಳಿ ಶಶಿಕಲಾ ಜೊಲ್ಲೆಗೆ ಧಿಕ್ಕಾರ ಎಂದು ಕೂಗಿದ ಕಾರ್ಯಕರ್ತರು ಜೊಲ್ಲೆ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.     ಕಲಬುರಗಿ: …

Read More »

ಯಡಿಯೂರಪ್ಪ ಅವರನ್ನು ಹೆದರಿಸಿ ರಾಜೀನಾಮೆ ಪಡೆದಿದ್ದಾರೆ: ಸಿದ್ದರಾಮಯ್ಯ

ಬೆಳಗಾವಿ: ‘ಬಿ.ಎಸ್. ಯಡಿಯೂರಪ್ಪ ಅವರನ್ನು ಬಿಜೆಪಿ ಹೈಕಮಾಂಡ್‌ನವರು ಹೆದರಿಸಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಪಡೆದಿದ್ದಾರೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟೀಕಿಸಿದರು. ಇಲ್ಲಿನ ಪ್ರವಾಸಿಮಂದಿರದಲ್ಲಿ ಸೋಮವಾರ ರಾತ್ರಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಯಡಿಯೂರಪ್ಪ ಸ್ವಇಚ್ಛೆಯಿಂದ ರಾಜೀನಾಮೆ ನೀಡಿಲ್ಲ’ ಎಂದರು. ‘2019ರಲ್ಲಿ ಪ್ರವಾಹ ಬಂದಾಗ ಸಚಿವ ಸಂಪುಟ ಇರಲಿಲ್ಲ. ಈ ಬಾರಿ ಪ್ರವಾಹ ಬಂದಾಗ ಮುಖ್ಯಮಂತ್ರಿಯೇ ರಾಜೀನಾಮೆ ನೀಡಿದ್ದಾರೆ. ಇದು ಕರ್ನಾಟಕದ ದುರ್ದೈವವೆ ಸರಿ. ಯಡಿಯೂರಪ್ಪ ಕೇರ್‌ ಟೇಕರ್‌ …

Read More »

ಯಡಿಯೂರಪ್ಪ ಅವರ ಹೆಸರು, ಅಧಿಕಾರ ಎಲ್ಲವೂ ಪುತ್ರ ವಿಜಯೇಂದ್ರನಿಂದ ಹಾಳಾಯಿತು: ಎಚ್‌.ವಿಶ್ವನಾಥ್‌ :

ಬೆಂಗಳೂರು: ಯಡಿಯೂರಪ್ಪ ಅವರ ಹೆಸರು, ಅಧಿಕಾರ ಎಲ್ಲವೂ ಪುತ್ರ ವಿಜಯೇಂದ್ರನಿಂದ ಹಾಳಾಯಿತು ಎಂದು ವಿಧಾನ ಪರಿಷತ್‌ ಸದಸ್ಯ ಎಚ್‌.ವಿಶ್ವನಾಥ್‌ ಹೇಳಿದರು. ಸೋಮವಾರ ಸಿಎಂ ರಾಜೀನಾಮೆ ಬಳಿಕ ಮಾತನಾಡಿದ ಅವರು, ಯಡಿಯೂರಪ್ಪ ಅವರ ಬಗ್ಗೆ ಗೌರವ ಇದೆ. ವಿಜಯೇಂದ್ರ ಹಾಗೂ ಮೊಮ್ಮಕ್ಕಳು ಎಲ್ಲವನ್ನೂ ಹಾಳು ಮಾಡಿಬಿಟ್ಟರು. ಯಡಿಯೂರಪ್ಪ ಹೆಸರು, ಅಧಿಕಾರ, ರಾಜ್ಯದ ಅಭಿವೃದ್ಧಿ ಎಲ್ಲವೂ ಅವರ ಮಗನಿಂದ ಹಾಳಾಯಿತು. ಭ್ರಷ್ಟಾಚಾರದಿಂದಾಗಿಯೇ ಯಡಿಯೂರಪ್ಪ ರಾಜೀನಾಮೆ ನೀಡಬೇಕಾಯಿತು. ಭ್ರಷ್ಟಾಚಾರಕ್ಕೆ ಅವರ ಮನೆಯೇ ಮೂಲವಾಯಿತು. ಅದಕ್ಕೆ …

Read More »

ಐಪಿಎಸ್​ ಅಧಿಕಾರಿ ಚನ್ನಣ್ಣನವರ್ ನನ್ನಣ್ಣ ಎಂದು ಭಕ್ತರಿಂದ ಲಕ್ಷ ಲಕ್ಷ ಲಪಟಾಯಿಸಿ ಎಸ್ಕೇಪ್​ ಆದ ಅರ್ಚಕ!

ಬೆಂಗಳೂರು: ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ ನನ್ನ ಅಣ್ಣ, ಬೇಕಿದ್ದರೆ ಈ ಫೋಟೋ ನೋಡಿ. ನಾನು ಪ್ರಭಾವಿ ವ್ಯಕ್ತಿ. ಆಶ್ರಯ ಯೋಜನೆ ಅಡಿ ಮನೆ ಬೇಕಿದ್ದರೆ ಇಷ್ಟು ಲಕ್ಷ ರೂಪಾಯಿ ಕೊಡಿ, ಅಣ್ಣನ ಇನ್​ಫ್ಲುಯೆನ್ಸ್​ ಬಳಸಿ ಮನೆ ಕೊಡಿಸುವೆ ಎಂದ ಅರ್ಚಕನೊಬ್ಬ ದೇವಾಲಯಕ್ಕೆ ಬರುವ ಭಕ್ತರಿಗೆ ಪಂಗನಾಮ ಹಾಕಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಉತ್ತರಹಳ್ಳಿಯ ಅರ್ಚಕ ಮಹಾಬಲ ಅಲಿಯಾಸ್ ಮಂಜನಾಥ್ ವಂಚನೆ ಮಾಡಿದ ಆರೋಪಿ. ಉತ್ತರಹಳ್ಳಿಯ ಆಂಜನೇಯಸ್ವಾಮಿ ದೇವಾಲಯದಲ್ಲಿ …

Read More »