ಬೆಳಗಾವಿ: ರಾಯಬಾಗ ತಾಲ್ಲೂಕಿನಾದ್ಯಂತ ಶನಿವಾರವೂ ಜಿಟಿಜಿಟಿ ಮಳೆ ಮಳೆ ಮುಂದುವರೆದಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ನೆರೆಯ ಮಹಾರಾಷ್ಟ್ರದಲ್ಲಿ ವ್ಯಾಪಕ ಮಳೆ ಸುರಿಯುತ್ತಿರುವುದರಿಂದಾಗಿ ಕೃಷ್ಣಾ ನದಿಗೆ ಬರುತ್ತಿರುವ ನೀರಿನ ಪ್ರಮಾಣ ಹೆಚ್ಚಾಗಿರುವುದರಿಂದಾಗಿ, ರಾಯಬಾಗ ತಾಲ್ಲೂಕಿನ ಕುಡಚಿ-ಉಗಾರ ಸೇತುವೆ ಮುಳುಗಡೆಯಾಗಿದ್ದು, ನೆರೆಯ ಮಹಾರಾಷ್ಟ್ರ ರಾಜ್ಯದ ಸಂಪರ್ಕ ಕಡಿತಗೊಂಡಿದೆ. ಕುಡಚಿ ಸೇತುವೆ ಮೇಲೆ ಬೆಳಿಗ್ಗೆಯಿಂದಲೇ ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ. ಇದರಿಂದಾಗಿ ರೈತರು, ವ್ಯಾಪಾರಿಗಳು, ಮೀರಜ್ ಆಸ್ಪತ್ರೆಗೆ ಹೋಗುವವರು ತೊಂದರೆ ಅನುಭವಿಸುವಂತಾಗಿದೆ. ಸತತವಾಗಿ ಮಳೆ ಸುರಿಯುತ್ತಿರುವುದರಿಂದ ಪ್ರಮುಖ …
Read More »ಬೆಳಗಾವಿ: ಕೃಷ್ಣೆಗೆ 1.56 ಲಕ್ಷ ಕ್ಯುಸೆಕ್ ನೀರು, ಪ್ರವಾಹ ಭೀತಿ ಹೆಚ್ಚಳ
ಬೆಳಗಾವಿ: ನೆರೆಯ ಮಹಾರಾಷ್ಟ್ರದ ಕೊಂಕಣ ಪ್ರದೇಶ ಮತ್ತು ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ನದಿ ಜಲಾನಯನ ಪ್ರದೇಶದಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ಕೃಷ್ಣಾ ನದಿಗೆ 1.56 ಲಕ್ಷ ಕ್ಯುಸೆಕ್ ನೀರು ಹರಿದು ಬರುತ್ತಿದೆ. ಇದರೊಂದಿಗೆ ತೀರದಲ್ಲಿ ಪ್ರವಾಹ ಭೀತಿಯೂ ಹೆಚ್ಚಾಗ ತೊಡಗಿದೆ. ಚಿಕ್ಕೋಡಿ ತಾಲ್ಲೂಕಿನಲ್ಲಿ ದೂಧಗಂಗಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸದಲಗಾ-ಬೋರಗಾಂವ ಸೇತುವೆ ಮುಳುಗಡೆಯಾಗಿದೆ. ಕೊಯ್ನಾ ಜಲಾಶಯದಿಂದ ಹೊರಬಿಡಲಾದ 10ಸಾವಿರ ಕ್ಯುಸೆಕ್, ದೂಧ್‌ಗಂಗಾ ನದಿಯಿಂದ 34,320 ಕ್ಯುಸೆಕ್ ಮತ್ತುಮಹಾರಾಷ್ಟ್ರದ ರಾಜಾಪುರ ಬ್ಯಾರೇಜ್‌ನಿಂದ …
Read More »ಬೆಳಗಾವಿ ಜಿಲ್ಲೆಯಲ್ಲಿ ಭಾರೀ ಮಳೆ; ವಾಘವಾಡೆ ಬಳಿ ಹಳ್ಳದಲ್ಲಿ ಕೊಚ್ಚಿ ಹೋಗುತ್ತಿದ್ದ ಯುವಕನ ರಕ್ಷಣೆ
ಬೆಳಗಾವಿ: ಜಿಲ್ಲೆಯ ಖಾನಾಪುರ ತಾಲೂಕಿನ ವಾಘವಾಡೆ ಬಳಿ ಏಕಾಏಕಿ ಹಳ್ಳದಲ್ಲಿ ನೀರಿನ ಹರಿವು ಹೆಚ್ಚಳವಾಗಿದ್ದ ಹಿನ್ನೆಲೆಯಲ್ಲಿ, ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ಯುವಕ ಹಳ್ಳದ ನೀರಿನಲ್ಲಿ ಸಿಲುಕಿ ಕೊಚ್ಚಿ ಹೋಗುತ್ತಿದ್ದ. ಈ ವೇಳೆ ಹಗ್ಗ ಎಸೆದು ಯುವಕನನ್ನು ಗ್ರಾಮಸ್ಥರು ರಕ್ಷಣೆ ಮಾಡಿದ್ದು, ಈ ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿದೆ. ನಂದಗಡ ಡ್ಯಾಂಗೆ ಹರಿದು ಬರುತ್ತಿರುವ ನೀರು ಖಾನಾಪುರ ತಾಲೂಕಿನ ನಂದಗಡ ಗ್ರಾಮದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ದುರ್ಗಾಡಿ ಬೆಟ್ಟ ಪ್ರದೇಶದಿಂದ ಧಾರಾಕಾರವಾಗಿ ಮಳೆ ನೀರು …
Read More »ಮಹಾರಾಷ್ಟ್ರದಲ್ಲಿ ಭಾರಿ ಮಳೆ; ಕೋಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಬಿಡುಗಡೆ
ಬೆಳಗಾವಿ: ಮಹಾರಾಷ್ಟ್ರದಲ್ಲಿ ಭಾರಿ ಮಳೆಯಾಗಿರುವ ಹಿನ್ನಲೆಯಲ್ಲಿ, ಮಹಾರಾಷ್ಟ್ರದ ಸಾತಾರಾ ಜಿಲ್ಲೆಯಲ್ಲಿರುವ ಕೋಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಬಿಡುಗಡೆ ಮಾಡಲಾಗಿದೆ. ಎಂಟು ಗಂಟೆಗೆ 10 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಿದ್ದು,10 ಗಂಟೆ 25 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಇನ್ನು ಮಧ್ಯಾಹ್ನ ಎರಡು ಗಂಟೆಗೆ 50ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗುವುದು. ಸದ್ಯ ಕೃಷ್ಣಾ ನದಿಯಲ್ಲಿ 1.34 ಲಕ್ಷ ಕ್ಯೂಸೆಕ್ ನೀರಿನ ಹರಿವು ಇದೆ. ಇಂದು ರಾತ್ರಿ …
Read More »ಅರವಿಂದ್ ಬೆಲ್ಲದ್ ಮತ್ತೆ ದೆಹಲಿಗೆ ಪ್ರಯಾಣ ಬೆಳೆಸಿದ ; ರಾಜ್ಯ ಬಿಜೆಪಿಯಲ್ಲಿ ಬಿಸಿಬಿಸಿ ಚರ್ಚೆ
ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಆಗುತ್ತಿರುವ ಬೆಳವಣಿಗೆಗಳು ಕ್ಷಣಕ್ಕೊಂದು ಸ್ವರೂಪ ಪಡೆದುಕೊಳ್ತಿದ್ದು, ಇದೀಗ ಮತ್ತೆ ಶಾಸಕ ಅರವಿಂದ್ ಬೆಲ್ಲದ್ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಕಾಶಿ ವಿಶ್ವನಾಥನ ಭೇಟಿಗೆ ತೆರಳಿರುವ ಬೆಲ್ಲದ್, ಅಲ್ಲಿಂದ ನೇರವಾಗಿ ದೆಹಲಿಗೆ ಪ್ರಯಾಣ ಬೆಳಸಿದ್ದಾರೆ. ಸದ್ಯ ಖಾಸಗಿ ಹೋಟೆಲ್ನಲ್ಲಿ ತಂಗಿರುವ ಬೆಲ್ಲದ್ ಅವರು ಬಿಜೆಪಿಯ ಹಿರಿಯ ನಾಯಕರನ್ನು ಭೇಟಿಯಾಗಲಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ವಿದ್ಯಮಾನಗಳ ಬಗ್ಗೆ ಬೆಲ್ಲದ್ ಸಮಾಲೋಚನೆ ನಡೆಸಲಿದ್ದಾರೆ. ರಾಜ್ಯದಲ್ಲಿ ಸಿಎಂ ಸ್ಥಾನದ ಬದಲಾವಣೆ ಮಾಡಲಾಗುತ್ತದೆ ಅನ್ನೋ …
Read More »ಗಣಪತಿ ದೇವಸ್ಥಾನದಲ್ಲಿ 3 ಲಕ್ಷ ಮಾತ್ರೆಗಳಿಂದ ಅಲಂಕಾರ
ಬೆಂಗಳೂರು ಜುಲೈ 22: ಕೊರೊನಾ ಸಾಂಕ್ರಾಮಿಕ ರೋಗ ಎಲ್ಲರನ್ನು ಹೈರಾಣಾಗಿಸಿದೆ. ಮೂರನೇ ಅಲೆಗೆ ಜನರನ್ನು ಸಿದ್ದಗೊಳಿಸಬೇಕು ಹಾಗೂ ಗುರುಪೂರ್ಣಿಮೆಯನ್ನು ವಿಶೇಷವಾಗಿ ಆಚರಿಸಬೇಕು ಎನ್ನುವ ಹಿನ್ನಲೆಯಲ್ಲಿ, ಜೆ.ಪಿ ನಗರದ ಶ್ರೀ ಸತ್ಯ ಸಾಯಿ ಗಣಪತಿ ದೇವಸ್ಥಾನದಲ್ಲಿ 3 ಲಕ್ಷ ಮಾತ್ರೆಗಳನ್ನು ಬಳಸಿ ವಿಶೇಷ ಅಲಂಕಾರವನ್ನು ಮಾಡಲಾಗಿದೆ. ಕೊರೊನಾ ಸಾಂಕ್ರಾಮಿಕ ರೋಗದ ವಿರುದ್ದ ಹೋರಾಟದಲ್ಲಿ ಪ್ರಮುಖವಾಗಿ ಬಳಕೆ ಆಗಿರುವಂತಹ ವಸ್ತುಗಳಾದ ಮಾಸ್ಕ್, ಪ್ಯಾರಾಸಿಟಮಾಲ್, ವಿಟಮಿನ್ ಸಿ, ಆಲ್ಕಾಫ್, ಬಿ ಕಾಂಫ್ಲೆಕ್ಸ್ ನಂತಹ ಮಾತ್ರೆಗಳನ್ನೇ …
Read More »`ರಾಜೀನಾಮೆ’ಗೆ ಮೊದಲೇ ವಲಸಿಗ ಸಚಿವರಲ್ಲಿ ಮನೆ ಮಾಡಿದ ಆತಂಕ!
ಬೆಂಗಳೂರು, ಜು. 23: ರಾಜ್ಯದಲ್ಲಿ `ಮುಖ್ಯಮಂತ್ರಿ ಬದಲಾವಣೆ’ ಚರ್ಚೆ ಬೆನ್ನಲ್ಲೆ `ಬಿಜೆಪಿ ಸರಕಾರ ಅಧಿಕಾರಕ್ಕೆ ಬರಲು ಮೂಲ ಕಾರಣಕರ್ತರು’ ಎನ್ನಲಾದ ವಲಸಿಗ ಸಚಿವರು ರಾಜೀನಾಮೆಗೆ ಮುಂದಾಗಿದ್ದಾರೆಂಬ ಮಾತುಗಳು ಕೇಳಿಬರುತ್ತಿವೆ. ಗುರುವಾರ ವಿಧಾನಸೌಧದಲ್ಲಿನ ನಡೆದ ಸಚಿವ ಸಂಪುಟ ನಡುವೆಯೇ ವಲಸಿಗರು ಒಂದೊಮ್ಮೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರಾಜೀನಾಮೆ ನೀಡಿದರೆ ತಾವೂ ಸಚಿವ ಸ್ಥಾನ ಕಳೆದುಕೊಳ್ಳುವ ಆತಂಕ ಎದುರಾಗಿದ್ದು, ಸಚಿವ ಬಿ.ಎ. ಬಸವರಾಜ್ (ಭೈರತಿ) ಕೊಠಡಿಯಲ್ಲಿ ಆರು ಮಂದಿ ಸಚಿವರು ಒಟ್ಟಿಗೆ ಸಭೆ …
Read More »ಮುಖ್ಯಮಂತ್ರಿ ಬದಲಾವಣೆಯ ಸಂದರ್ಭದಲ್ಲಿ ಸರ್ಕಾರ ರಚನೆ ಯತ್ನ ಬೇಡ; ಕಾಂಗ್ರೆಸ್ ಹೈ ಕಮಾಂಡ್
ಬೆಂಗಳೂರು, – ಬಿಜೆಪಿ ನಾಯಕತ್ವದ ಬದಲಾವಣೆಯ ನಂತರದಲ್ಲಿ ಉಂಟಾಗಬಹುದಾದ ರಾಜಕೀಯ ಪರಿಸ್ಥಿತಿಯ ಲಾಭ ಪಡೆದು ಸರ್ಕಾರ ರಚನೆ ಮಾಡುವ ಪ್ರಯತ್ನ ಬೇಡ ಎಂದು ಹೈಕಮಾಂಡ್ ರಾಜ್ಯ ಕಾಂಗ್ರೆಸ್ ನಾಯಕರಿಗೆ ಸ್ಪಷ್ಟಪಡಿಸಿದೆ. ಕಳೆದ ಎರಡು ದಿನಗಳಿಂದ ದೆಹಲಿಯಲ್ಲಿ ನಡೆದ ಸುದೀರ್ಘ ಚರ್ಚೆಯಲ್ಲಿ ಅವಕಾಶಗಳು ಎದುರಾದರೆ ಸರ್ಕಾರ ರಚನೆಯ ಪ್ರಸ್ತಾವವನ್ನು ರಾಜ್ಯ ನಾಯಕರು ಹೈಕಮಾಂಡ್ ಮುಂದಿಟ್ಟಿದ್ದಾರೆ. ಆದರೆ, ಇದಕ್ಕೆ ಹೈಕಮಾಂಡ್ ಸ್ಪಷ್ಟ ನಕಾರ ವ್ಯಕ್ತಪಡಿಸಿದ್ದು, ಸಂಪೂರ್ಣ ಬಹುಮತ ಬರದ ಹೊರತು ಮೈತ್ರಿ ಅಥವಾ …
Read More »ಗಾಂಜಾ ನಶೆಯಲ್ಲಿ ಸಿಕ್ಕ ಸಿಕ್ಕ ವಾಹನಗಳ ಗಾಜು ಪುಡಿಮಾಡಿ ಎಸ್ಕೇಪ್
ಬೆಂಗಳೂರು: ಗಾಂಜಾ ನಶೆಯಲ್ಲಿ ಮೂವರು ಪುಂಡರು ವಿಜಯನಗರದ ಆರ್ಟಿಪಿಸಿಆರ್ ಲೇಔಟ್ನಲ್ಲಿ ತಡರಾತ್ರಿ ಸಿಕ್ಕ ಸಿಕ್ಕ ವಾಹನಗಳ ಗಾಜು ಪುಡಿ ಮಾಡಿದ ಘಟನೆ ನಡೆದಿದೆ. ಅದೇ ಏರಿಯಾದ ಯುವಕರು ಈ ಕೃತ್ಯ ನಡೆಸಿದ್ದಾರೆ ಎನ್ನಲಾಗಿದೆ. ರಸ್ತೆ ಬದಿ ನಿಲ್ಲಿಸಿದ್ದ ಐದಕ್ಕೂ ಹೆಚ್ಚು ವಾಹನಗಳ ಗ್ಲಾಸ್ಗಳನ್ನ ಯುವಕರು ಪುಡಿಪುಡಿ ಮಾಡಿದ್ದು ಸಿಸಿಟಿವಿಗಳಲ್ಲಿ ಕೃತ್ಯದ ದೃಶ್ಯ ಸೆರೆಯಾಗಿದೆ. ಯುವಕರು ಕೃತ್ಯ ತಡೆಯಲು ಹೋದವರ ಮೇಲೆ ಕಲ್ಲು ತೂರಿ ಯುವಕರು ಎಸ್ಕೇಪ್ ಆಗಿದ್ದಾರೆ. ಘಟನಾ ಸ್ಥಳಕ್ಕೆ …
Read More »ಎದೆ ಝಲ್ ಎನಿಸುವ ರೌಡಿಶೀಟರ್ ಬಾಬ್ಲಿ ಕೊಲೆಯ ದೃಶ್ಯ
ಬೆಂಗಳೂರು: ರೌಡಿ ಶೀಟರ್ ಬಬ್ಲಿ ಕೊಲೆಯ ಭೀಕರತೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಜುಲೈ19 ರಂದು ಕೋರಮಂಗಲ ಬ್ಯಾಂಕ್ನಲ್ಲಿ ಕೊಲೆ ನಡೆದಿತ್ತು. ಆಡುಗೋಡಿ ರೌಡಿಶೀಟರ್ ಆಗಿದ್ದ ಬಬ್ಲಿ ಹೆಂಡತಿ ಜೊತೆ ಬ್ಯಾಂಕ್ ಗೆ ಬಂದಿದ್ದಾಗ ಅಟ್ಯಾಕ್ ನಡೆದಿತ್ತು. ಬ್ಯಾಂಕ್ ಒಳಗೆ ನುಗ್ಗಿ ರೌಡಿಗಳ ಗ್ಯಾಂಗ್ ಬಬ್ಲಿಯನ್ನ ಕೊಚ್ಚಿ ಕೊಲೆ ಮಾಡಿತ್ತು.. ಕೊಲೆಯ ನಂತರ ಬೈಕ್ ಮೇಲೆ ಮಚ್ಚು ಹಿಡಿದು ಗ್ಯಾಂಗ್ ಸಂಭ್ರಮಿಸಿತ್ತು.. ಈ ಭಯಾನಕ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನಿನ್ನೆ ಕೋರಮಂಗಲ ಪೊಲೀಸರು …
Read More »
Laxmi News 24×7