Breaking News

ಜಿಲ್ಲೆ

ಒಂದೇ ಶ್ವಾನದಿಂದ 2 ಗಂಟೆ ಅವಧಿಯಲ್ಲಿ 15 ಜನರ ಮೇಲೆ ದಾಳಿ.. ಬೆಚ್ಚಿಬಿದ್ದ ಜನರು

ಬೆಳಗಾವಿ: ಒಂದೇ ನಾಯಿಯಿಂದ 15 ಜನರ ಮೇಲೆ ದಾಳಿ ನಡೆದಿರೋ ಘಟನೆ ಸವದತ್ತಿ ತಾಲೂಕಿನ ಮೂರು ಗ್ರಾಮಗಳಲ್ಲಿ ನಡೆದಿದೆ. ಎರಡು ಗಂಟೆ ಅವಧಿಯಲ್ಲಿ ಮೂರು ಗ್ರಾಮಗಳ 15ಜನರ ಮೇಲೆ ದಾಳಿ ನಡೆದಿದೆ. ಯರಝರವಿ, ಮಳಗಲಿ, ಹೊಸೂರ ಗ್ರಾಮಗಳಲ್ಲಿ ಹುಚ್ಚುನಾಯಿಯ ದಾಳಿ ನಡೆದಿದ್ದು.. ಮಲ್ಲವ್ವ, ಬಾಳಯ್ಯ, ಲಲಿತಾ, ಮಲ್ಲಯ್ಯ, ಸಿದ್ಧಪ್ಪ, ಸವಿತಾ ಎಂಬುವವರಿಗೆ ನಾಚಿ ಕಚ್ಚಿದೆ. ಗಾಯಗೊಂಡವರಿಗೆ ಯರಗಟ್ಟಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ಹುಚ್ಚು ನಾಯಿಯ ದಾಳಿಯಿಂದ ಗ್ರಾಮಸ್ಥರು …

Read More »

ಗಾಂಧಿನಗರ ಅಲೆದು ಚಪ್ಪಲಿ ಸವೆಸಿ ದಡ ಮುಟ್ಟಿದೆ ಎಂದರೆ ಆತ್ಮದ್ರೋಹ ಆಗುತ್ತದೆ’ : ನಟ ದರ್ಶನ್ ಗೆ ಜಗ್ಗೇಶ್ ಪರೋಕ್ಷ ಟಾಂಗ್!

ಬೆಂಗಳೂರು : ಗಾಂಧಿನಗರ ಅಲೆದು ಚಪ್ಪಲಿ ಸವೆಸಿ ದಡ ಮುಟ್ಟಿದೆ ಎಂದರೆ ಆತ್ಮದ್ರೋಹ ಆಗುತ್ತದೆ. ನಮ್ಮನ್ನು ದಡ ಮುಟ್ಟಿಸಿದ್ದು ಅಂದಿನ ನಿರ್ದೇಶಕರು, ನಿರ್ಮಾಪಕರು, ಮಾಧ್ಯಮ ಮಿತ್ರರು ಹಾಗೂ ವಿಶೇಷವಾಗಿ ಸ್ವಾಭಿಮಾನಿ ಕನ್ನಡಿಗರು ಎಂದು ನಟ ದರ್ಶನ್ ಗೆ ನವರಸ ನಾಯಕ ಜಗ್ಗೇಶ್ ಟಾಂಗ್ ಕೊಟ್ಟಿದ್ದಾರೆ.   ಸಾಮಾಜಿಕ ಜಾಲತಾಣದಲ್ಲಿ ಸುದೀರ್ಘವಾದ ಪೋಸ್ಟ್ ಹಾಕಿರುವ ಜಗ್ಗೇಶ್ ನಟ ದರ್ಶನ್ ಗೆ ಪರೋಕ್ಷ ಟಾಂಗ್ ಕೊಟ್ಟಿದ್ದಾರೆ. ತುಮಕೂರು ಜಿಲ್ಲೆಯ, ತುರುವೇಕೆರೆ ತಾಲ್ಲೂಕಿನ, ಮಾಯಸಂದ್ರ …

Read More »

ತಮ್ಮನ್ನು ಪುಡುಂಗ ಎಂದಿರುವ ನಟ ದರ್ಶನ್ ಅವರಿಗೆ ನಿರ್ದೇಶಕ ಜೋಗಿ ಪ್ರೇಮ್ ಅವರ ಪ್ರತ್ಯುತ್ತರ

ಬೆಂಗಳೂರು: ತಮ್ಮನ್ನು ಪುಡುಂಗ ಎಂದಿರುವ ನಟ ದರ್ಶನ್ ಅವರಿಗೆ ನಿರ್ದೇಶಕ ಜೋಗಿ ಪ್ರೇಮ್ ಅವರು ಪ್ರತ್ಯುತ್ತರ ನೀಡಿದ್ದಾರೆ. ಇಂದು (ಜುಲೈ 17) ಫೇಸ್ ಬುಕ್ ನಲ್ಲಿ ಸುದೀರ್ಘವಾಗಿ ಬರೆದುಕೊಂಡಿರುವ ಪ್ರೇಮ್, ದಯವಿಟ್ಟು ಇನ್ನೊಬ್ರ ಬಗ್ಗೆ ಮಾತಾಡ್ಬೇಕಾದ್ರೆ ಯೋಚಿಸಿ ಮಾತಾಡಿ ದರ್ಶನ್ ಅವರೇ… Thank you for your kind words. ದೇವ್ರು ನಿಮಗೆ ಒಳ್ಳೇದ್ ಮಾಡ್ಲಿ ಎಂದಿದ್ದಾರೆ. ಪ್ರೇಮ್ ಹೇಳಿರುವ ಮಾತುಗಳ ಸಂಪೂರ್ಣ ವಿವರ ಇಲ್ಲಿದೆ ನೋಡಿ : ”ದರ್ಶನ್ …

Read More »

ಸಾಮಾಜಿಕ ಜಾಲತಾಣಗಳಲ್ಲಿ ಬೇಕಾ ಬಿಟ್ಟಿ ಪೋಸ್ಟ್ ಮಾಡುವ ಮುನ್ನ ಹುಷಾರ: ಬೆಳಗಾವಿ ಪೊಲೀಸ್

ಸಾಮಾಜಿಕ ಜಾಲತಾಣಗಳಲ್ಲಿ ಬೇಕಾ ಬಿಟ್ಟಿ ಪೋಸ್ಟ್ ಮಾಡುವ ಮುನ್ನ ಹುಷಾರಾಗಿರಿ. ಮನಬಂದಂತೆ ಪೋಸ್ಟ್ ಮಾಡಿದರೆ, ಬಂದಿದ್ದನ್ನೆಲ್ಲ ಫಾರ್ವರ್ಡ್ ಮಾಡಿದರೆ ಕಂಬಿ ಹಿಂದೆ ಹೋಗಬೇಕಾದೀತು. ಬೆಳಗಾವಿ ಪೊಲೀಸ್ ಇಲಾಖೆ ಎಲ್ಲ ಸಾಮಾಜಿಕ ಜಾಲತಾಣಗಳ ಮೇಲೆ ಕಣ್ಣಿಟ್ಟಿದೆ. ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕುವಾಗ ಎಚ್ಚರಿಕೆಯಿಂದಿರಿ ಎಂದು ಪೊಲೀಸ್ ಇಲಾಖೆ ಎಚ್ಚರಿಕೆ ನೀಡಿದೆ.

Read More »

ನೆರೆ ಸಂತ್ರಸ್ತರನ್ನು ಏಕಾಏಕಿಯಾಗಿ ವಸತಿ ಗೃಹದಿಂದ ಕಳುಹಿಸಿದ್ದಾರೆ.

ಬೆಳಗಾವಿ: ಜಿಲ್ಲೆಯ ರಾಮದುರ್ಗ ತಾಲೂಕಿನ ತಹಶೀಲ್ದಾರ್ ನೆರೆ ಸಂತ್ರಸ್ತರನ್ನು ಏಕಾಏಕಿಯಾಗಿ ವಸತಿ ಗೃಹದಿಂದ ಕಳುಹಿಸಿದ್ದಾರೆ. ರಾಮದುರ್ಗ ತಾಲೂಕು ಆಡಳಿತ ನಿರ್ಲಕ್ಷ್ಯ ತೋರಿದ್ದು, ಜನರ ಬದುಕು ಬೀದಿಗೆ ಬಂದಂತಾಗಿದೆ. 2019ರಲ್ಲಿ ನೆರೆಯಿಂದ ರಾಮದುರ್ಗ ತಾಲೂಕಿನ ಹಿರೇಹಂಪಿಹೋಳಿ ಗ್ರಾಮ ಮುಳುಗಡೆಯಾಗಿತ್ತು. ಅಲ್ಲಿದ್ದ ಗ್ರಾಮಸ್ಥರು ತಮ್ಮ ತಮ್ಮ ಮನೆಗಳನ್ನು ಕಳೆದುಕೊಂಡಿದ್ದರು. ಆಗ ಸುರೇಬಾನ ಗ್ರಾಮದಲ್ಲಿ ಹೊಸದಾಗಿ ನಿರ್ಮಿಸಿದ್ದ ವಸತಿ ಗೃಹದಲ್ಲಿ ನೆರೆ ಸಂತ್ರಸ್ತರಿಗೆ ಜಿಲ್ಲಾಡಳಿತ ತಾತ್ಕಾಲಿಕ ವ್ಯವಸ್ಥೆ ಮಾಡಿತ್ತು. ತಗಡಿನ ಶೆಡ್ ನಿರ್ಮಿಸಿ ಕೊಡುವವರೆಗೆ …

Read More »

ಹಳ್ಳೂರ ಗ್ರಾಮದಲ್ಲಿ 1.76 ಕೋಟಿ ರೂ. ವೆಚ್ಚದ ಜೆಜೆಎಂ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಬಾಲಚಂದ್ರ ಜಾರಕಿಹೊಳಿ

  ಮೂಡಲಗಿ : ದೇಶದ ಪ್ರತಿ ಮನೆ ಮನೆಗೆ ನಳಗಳ ಮೂಲಕ ಕುಡಿಯುವ ನೀರಿನ ಯೋಜನೆಯನ್ನು ರೂಪಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೃತಜ್ಞತೆ ಸಲ್ಲಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು, ಕುಡಿಯುವ ನೀರಿನ ಯೋಜನೆಯನ್ನು ಎಲ್ಲರೂ ಸದ್ಬಳಕೆ ಮಾಡಿಕೊಳ್ಳುವಂತೆ ಕೋರಿಕೊಂಡರು. ಶನಿವಾರದಂದು ತಾಲೂಕಿನ ಹಳ್ಳೂರ ಗ್ರಾಮದಲ್ಲಿ ಜರುಗಿದ 1.76 ಕೋಟಿ ರೂ. ವೆಚ್ಚದ ಜೆಜೆಎಂ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಹಳ್ಳೂರ ಗ್ರಾಮದ ಪ್ರತಿಯೊಂದು ಮನೆಗಳಿಗೆ …

Read More »

ವಿಜಯಪುರ ವಿ.ನಿಲ್ದಾಣ ಕಾರ್ಯಾಚರಣೆಗೆ ಮುಂದಾದ ಟರ್ಬೋ ಏರ್‌ಲೈನ್ ಕಂಪನಿ: ಗೋವಿಂದ ಕಾರಜೋಳ

ಬೆಂಗಳೂರು: ವಿಜಯಪುರ ವಿಮಾನ ನಿಲ್ದಾಣ ಕಾರ್ಯಾಚರಣೆ ನಡೆಸಲು ಮೆ.ಟರ್ಬೋ ಏರ್ ಲೈನ್ ಕಂಪನಿಯವರು ಮುಂದೆ ಬಂದಿದ್ದಾರೆ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ತಿಳಿಸಿದ್ದಾರೆ. ವಿಜಯಪುರ ವಿಮಾನ ನಿಲ್ದಾಣದಿಂದ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರತಿದಿನ ಎಟಿಆರ್ 72 ವಿಮಾನವನ್ನು ಹಾರಾಟ ನಡೆಸಲು ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ಕಂಪನಿಯೊಂದಿಗೆ ಒಪ್ಪಂದ ಮಾಡಿಕೊಳ್ಳಲು ಆಸಕ್ತಿ ಹೊಂದಿವೆ. ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿಯು ತ್ವರಿತಗತಿಯಿಂದ ನಡೆಯುತ್ತಿದ್ದು, ಈ ಕಾಮಗಾರಿಯನ್ನು 2022ರ ಮಾರ್ಚ್ …

Read More »

ಪೆರೋಲ್ ರಜೆ ಮೇಲೆ ತೆರಳಿದ 11 ಕೈದಿಗಳು ವಾಪಸು ಜೈಲಿಗೆ ಬಂದಿಲ್ಲ!

ಬೆಂಗಳೂರು, ಜು. 17: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಕೈದಿಗಳು ಜೈಲು ಅಧಿಕಾರಿಗಳಿಗೆ ಚಳ್ಳೆ ಹಣ್ಣು ತಿನ್ನಿಸಿದ್ದಾರೆ. ಪೆರೋಲ್ ರಜೆ ಮೇಲೆ ತೆರಳಿರುವ ಹನ್ನೊಂದು ಮಂದಿ ಕೈದಿಗಳು ರಜೆ ಅವಧಿ ಮುಗಿದರೂ ವಾಪಸು ಜೈಲಿಗೆ ಬಂದಿಲ್ಲ. ಪೆರೋಲ್ ರಜೆ ಮೇಲೆ ಕೈದಿಗಳನ್ನು ಮೂರು ತಿಂಗಳ ರಜೆ ಮೇಲೆ ಕಳಿಸಿದ ಜೈಲು ಅಧಿಕಾರಿಗಳು ಇದೀಗ ಇಂಗು ತಿಂದ ಮಂಗನಂತಾಗಿದ್ದಾರೆ. ಜೀವಾವಧಿ ಅಥವಾ ಬೇರೆ ಯಾವುದೇ ಶಿಕ್ಷೆಗೆ ಗುರಿಯಾಗುವ ಕೈದಿಗಳಿಗೆ ವರ್ಷದಲ್ಲಿ ಮೂರು …

Read More »

ಯಡಿಯೂರಪ್ಪ ದೆಹಲಿಗೆ ಒಯ್ದಿರುವ 6 ಬ್ಯಾಗ್ ರಹಸ್ಯವೇನು?

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ದೆಹಲಿ ಪ್ರವಾಸದ ಬಗ್ಗೆ ಹೊಸ ಬಾಂಬ್ ಸಿಡಿಸಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಸಿಎಂ 6 ಬ್ಯಾಗ್ ಗಳ ಸಮೇತ ದೆಹಲಿಗೆ ಹೋಗಿದ್ದಾರೆ ಎಂದು ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ನಿನ್ನೆ ಸಿಎಂ ಯಡಿಯೂರಪ್ಪ ತಮ್ಮ ಇಬ್ಬರು ಪುತ್ರರು ಹಾಗೂ ಕೆಲ ಅಧಿಕಾರಿಗಳೊಂದಿಗೆ ದೆಹಲಿಗೆ ತೆರಳಿದ್ದಾರೆ. ಫ್ಲೈಟ್ ನಲ್ಲಿ 6 ದೊಡ್ಡ ದೊಡ್ಡ ಬ್ಯಾಗ್ ಗಳನ್ನು ಕೊಂಡೊಯ್ದಿದ್ದಾರೆ ಎಂಬ ಬಗ್ಗೆ ಮಾಹಿತಿ ಬಂದಿದೆ. ಆ …

Read More »

ನೀರಿಗೆ ಬಿದ್ದ ಬಾಲಕನನ್ನು ರಕ್ಷಿಸಿ ತನ್ನ ಪ್ರಾಣ ಕಳೆದುಕೊಂಡ 16 ವರ್ಷದ ಬಾಲಕಿ

ಯಾದಗಿರಿ : ನೀರಲ್ಲಿ ಕಾರು ಜಾರಿ ಬಿದ್ದ ಕುರಿಗಾಯಿ ಬಾಲಕನನ್ನು ರಕ್ಷಿಸಿ ತಾನು ಪ್ರಾಣ ಕಳೆದುಕೊಂಡ ಘಟನೆಯೊಂದು ಬೆಳಕಿಗೆ ಬಂದಿದೆ. ವಡಗೇರಾ ತಾಲೂಕಿನ ಜೋಳದಡಗಿ ಗ್ರಾಮದಲ್ಲಿ ದುರಂತ ನಡೆದಿದ್ದು, ರಾಜಮ್ಮ(16) ಹೆಸರಿನ ಬಾಲಕಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾಳೆ. ಜೋಳದಡಗಿ ಗ್ರಾಮದ ಅಡಕಲ್ ಬಂಡೆಯಲ್ಲಿ ಕುರಿಗಾಯಿ ಬಾಲಕನೋರ್ವ ನೀರು ಕುಡಿಯಲು ಹೋಗಿದ್ದಾನೆ. ಈ ವೇಳೆ ಕಾಲು ಜಾರಿ ನೀರಿಗೆ ಬಿದ್ದಿದ್ದಾನೆ. ಇದನ್ನು ಗಮನಿಸಿದ 16 ವರ್ಷದ ಬಾಲಕಿ, ಬಾಲಕನ ಕೈ ಹಿಡಿದು …

Read More »