ಬೆಂಗಳೂರು: ಕೊರೊನಾ 3ನೇ ಅಲೆ ಭೀತಿಯ ಹಿನ್ನೆಲೆಯಲ್ಲಿ ಜಿ.ಪಂ. ಮತ್ತು ತಾ. ಪಂ. ಚುನಾವಣೆಗಳನ್ನು ಈ ವರ್ಷಾಂತ್ಯದ ವರೆಗೆ ನಡೆಸದಿರಲು ಸರಕಾರ ನಿರ್ಧರಿಸಿದೆ. ಗುರುವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗಿದೆ. ಜಿ.ಪಂ., ತಾ.ಪಂ. ಚುನಾವಣೆ ನಡೆಯದಿದ್ದರೂ ಸಹಕಾರ ಸಂಘಗಳ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಚುನಾವಣೆ ನಡೆಸಲು ಸರಕಾರ ಮುಂದಾಗಿದೆ. ಇಲ್ಲಿ ಕಡಿಮೆ ಸಂಖ್ಯೆಯಲ್ಲಿ ಜನರು ಸೇರುವುದರಿಂದ ಚುನಾವಣೆಗೆ ಅವಕಾಶ ನೀಡಲು ಸಚಿವ ಸಂಪುಟ …
Read More »ಎಸಿಬಿ ದಾಳಿ: 9 ಭ್ರಷ್ಟ ಅಧಿಕಾರಿಗಳ ಅಕ್ರಮ ಸಂಪತ್ತು ಬಯಲು
ಬೆಂಗಳೂರು: ಭ್ರಷ್ಟ ಅಧಿಕಾರಿಗಳ ಮೇಲೆ ಸಮರ ಸಾರಿದ್ದ ಎಸಿಬಿ ಅಧಿಕಾರಿಗಳು ಇಂದು ಒಟ್ಟು 9 ಸರ್ಕಾರಿ ನೌಕರರಿಗೆ ಸೇರಿದ 43 ಸ್ಥಳಗಳಲ್ಲಿ ಒಟ್ಟು 310 ಅಧಿಕಾರಿಗಳಿಂದ 43 ತಂಡಗಳಾಗಿ ದಾಳಿ ನಡೆಸಿದ್ದಾರೆ. ದಾಳಿ ವೇಳೆ ಕೋಟ್ಯಂತರ ಮೌಲ್ಯದ ಆಸ್ತಿಪಾಸ್ತಿ ಬೆಳಕಿಗೆ ಬಂದಿದೆ. ದಾಳಿಯಲ್ಲಿ ಸಿಕ್ಕ ಆಸ್ತಿ-ಪಾಸ್ತಿ, ಚಿನ್ನ ಹಣದ ಅಂಕಿ ಅಂಶಗಳು ಹೀಗಿವೆ.. 1. ಜಿ ಶ್ರೀಧರ್- ಕಾರ್ಯ ಪಾಲಕ ಅಭಿಯಂತರ, ಜಿಲ್ಲಾ ನಗರಾಭಿವೃದ್ಧಿ ಕೋಶ, ಡಿಸಿ ಕಚೇರಿ ಮಂಗಳೂರು. …
Read More »ಬೆಳಗಾವಿಯ ಹೊರ ವಲಯದಲ್ಲಿ ಕಂಟೇನರ್ಗೆ ಲಾರಿ ಡಿಕ್ಕಿ
ಬೆಳಗಾವಿ: ಕಂಟೇನರ್ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಇಬ್ಬರು ಸಾವನ್ನಪ್ಪಿರುವ ದಾರುಣ ಘಟನೆ ಬೆಳಗಾವಿಯ ಹೊರ ವಲಯದಲ್ಲಿರುವ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಬಳಿಯ ವಂಟಮೂರಿ ಘಾಟ್‍ನಲ್ಲಿ ನಡೆದಿದೆ. ಮಂಗಳವಾರ ತಡರಾತ್ರಿ 1 ಗಂಟೆ ಸುಮಾರಿಗೆ ಈ ದುರ್ಘಟನೆ ಸಂಭವಿಸಿದ್ದು, ಶಿಗ್ಗಾಂವಿ ಕಡೆಯಿಂದ ಮಹಾರಾಷ್ಟ್ರಕ್ಕೆ ಮೆಕ್ಕೆಜೋಳದ ಹಿಟ್ಟನ್ನು ತುಂಬಿಕೊಂಡು ಹೋಗುತ್ತಿದ್ದ ಕಂಟೇನರ್, ರಾಷ್ಟ್ರೀಯ ಹೆದ್ದಾರಿ-4ರ ಸುತಗಟ್ಟಿ ಇಳಿಜಾರು ಪ್ರದೇಶದಲ್ಲಿ ಡಿವೈಡರ್ ಹಾರಿ ಮಹಾರಾಷ್ಟ್ರ ಕಡೆಯಿಂದ ಬೆಳಗಾವಿಗೆ ಈರುಳ್ಳಿ ತುಂಬಿಕೊಂಡು ಬರುತ್ತಿದ್ದ …
Read More »ಬೆಳಗಾವಿ, ಕಾಗವಾಡ, ಬೈಲಹೊಂಗಲ, ಖಾನಾಪುರ ತಾಲೂಕುಗಳಲ್ಲಿ ಹಲವು ಹುದ್ದೆ
ಬೆಳಗಾವಿ : ಕಾಗವಾಡ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ ೪ ಅಂಗನವಾಡಿ ಕಾರ್ಯಕರ್ತೆ ಹಾಗೂ ೧೬ ಸಹಾಯಕಿಯರ ಆಯ್ಕೆಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮಹಿಳಾ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿ ಜು.೧೩ ರಂದು ಅಧಿಸೂಚನೆ ಹೊರಡಿಸಲಾಗಿದೆ. ಅರ್ಜಿ ಸಲ್ಲಿಸಲು ಜು.೧೪ ರಂದು ಪ್ರಾರಂಭ ದಿನಾಂಕವಾಗಿದ್ದು, ಅಗಸ್ಟ್.೧೪ ರಂದು ಕೊನೆಯ ದಿನಾಂಕವಾಗಿರುತ್ತದೆ. ಆಸಕ್ತ ಸ್ಥಳೀಯ ಮಹಿಳಾ ಅಭ್ಯರ್ಥಿಗಳು anganwadirecruit.kar.nic.in ವೆಬ್ ಸೈಟ್ …
Read More »ತುಕ್ಕಾನಟ್ಟಿ ಗ್ರಾಮದಲ್ಲಿ 1.54 ಕೋಟಿ ರೂ. ವೆಚ್ಚದ ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಿದ ಬಾಲಚಂದ್ರ ಜಾರಕಿಹೊಳಿ.
ಮೂಡಲಗಿ : ಚುನಾವಣೆ ಬಂದಾಗ ಮಾತ್ರ ರಾಜಕೀಯ ಮಾಡಿ. ಚುನಾವಣೆ ಮುಗಿದ ಬಳಿಕ ಎಲ್ಲರೂ ಒಂದಾಗಿ-ಒಗ್ಗಟ್ಟಾಗಿ ಗ್ರಾಮದ ಅಭಿವೃದ್ಧಿಗೆ ಪಣತೊಡಿ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಗ್ರಾಮಸ್ಥರಿಗೆ ಕಿವಿಮಾತು ಹೇಳಿದರು. ಗುರುವಾರದಂದು ತಾಲೂಕಿನ ತುಕ್ಕಾನಟ್ಟಿ ಗ್ರಾಮಕ್ಕೆ ಭೇಟಿ ನೀಡಿ ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಿದ ಬಳಿಕ ಮಾತನಾಡಿದ ಅವರು, ಚುನಾವಣೆಯಲ್ಲಿ ಸೋಲು-ಗೆಲುವು ಮುಖ್ಯವಲ್ಲ. ಸೋತವರು ನಮ್ಮವರೇ. ಗೆದ್ದವರು ನಮ್ಮವರೇ. ತಮ್ಮಲ್ಲಿರುವ ಸಣ್ಣಪುಟ್ಟ ವ್ಯತ್ಯಾಸಗಳನ್ನು ಮರೆತು ಅಭಿವೃದ್ಧಿಯತ್ತ …
Read More »ಡಿಸೆಂಬರ್ ವರೆಗೆ ತಾ. ಪಂ, ಜಿ.ಪಂ ಚುನಾವಣೆ ಇಲ್ಲ: ಸಂಪುಟ ಸಭೆಯಲ್ಲಿ ತೀರ್ಮಾನ
ಬೆಂಗಳೂರು: ಸಹಕಾರ ಸಂಘಗಳು, ಸೊಸೈಟಿಗಳು, ಎಪಿಎಂಸಿಗಳ ಅಧ್ಯಕ್ಷ, ಉಪಾಧ್ಯಕ್ಷ ಮತ್ತು ಪದಾಧಿಕಾರಿಗಳ ಸ್ಥಾನಗಳಿಗೆ ಚುನಾವಣೆ ನಡೆಸಲು ಅನುಮತಿ ನೀಡಲಾಗಿದೆ. ಆದರೆ, ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿಗಳಿಗೆ ಡಿಸೆಂಬರ್ ವರೆಗೆ ಚುನಾವಣೆ ನಡೆಸದಿರಲು ನಿರ್ಧರಿಸಲಾಗಿದೆ. ಗೃಹ ಮತ್ತು ಕಾನೂನು ಸಚಿವ ಬಸವರಾಜ ಬೊಮ್ಮಾಯಿ ಅವರು ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಈ ಕುರಿತು ವಿವರ ನೀಡಿದರು. ಸಹಕಾರ ಇಲಾಖೆ ವ್ಯಾಪ್ತಿಗೆ ಬರುವ ಸಹಕಾರ ಸಂಘಗಳು, ಸೊಸೈಟಿಗಳು, ಎಪಿಎಂಸಿಗಳಲ್ಲಿ ಅವಧಿ …
Read More »ಗದಗ ಪಶುವೈದ್ಯಕೀಯ ಮಹಾವಿದ್ಯಾಲಯಕ್ಕೆ 30 ಕೋಟಿ ರೂ. ಗೆ ಅನುಮೋದನೆ: ಸಚಿವ ಪ್ರಭು ಚವ್ಹಾಣ್
ಬೆಂಗಳೂರು: ಕಳೆದ ಐದು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಗದಗ ಪಶುವೈದ್ಯಕೀಯ ಮಹಾವಿದ್ಯಾಲಯದ ಎರಡನೇ ಹಂತದ ಕಟ್ಟಡ ಕಾಮಗಾರಿ, ಲ್ಯಾಬರೇಟರಿ, ಚಿಕಿತ್ಸಾ ಯಂತ್ರೋಪಕರಣಗಳು ಸೇರಿದಂತೆ ಅವಶ್ಯಕ ಸೌಕರ್ಯ ಪೂರ್ಣಗೊಳಿಸಲು ಇಂದು ನಡೆದ ಸಚಿವ ಸಂಪುಟದ ಸಭೆಯಲ್ಲಿ ರೂ.30 ಕೋಟಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ತಿಳಿಸಿದ್ದಾರೆ. ವಲಯವಾರು ಪ್ರಾದೇಶಿಕ ಅಸಮತೋಲನೆ ಕುರಿತು ಡಾ.ನಂಜುಂಡಪ್ಪನವರ ವರದಿ ಅನ್ವಯ 2009ರಲ್ಲಿಯೇ ಪಶುವೈದ್ಯಕೀಯ ಮಹಾವಿದ್ಯಾಲಯವನ್ನು ಸ್ಥಾಪಿಸಲು ರೂ.50 ಕೋಟಿಗೆ ಅಂದು …
Read More »ಗೋಕಾಕ ತಾಲೂಕಿನ ಪ್ರವಾಸಿ ಕೇಂದ್ರಗಳ ವೀಕ್ಷಣೆಗೆ ನಿರ್ಭಂದ:
ಗೋಕಾಕ ತಾಲೂಕಿನ ಪ್ರವಾಸಿ ಕೇಂದ್ರಗಳ ವೀಕ್ಷಣೆಗೆ ನಿರ್ಭಂದ: ಕೊವಿಡ್-19 ವೈರಾಣುವಿನ ಹರಡುವಿಕೆಯನ್ನು ನಿಯಂತ್ರಿಸಲು ಹಾಗೂ ಸಾರ್ವಜನಿಕರು ಮತ್ತು ಪ್ರವಾಸಿಗರ ಆರೋಗ್ಯದ ಹಿತ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಗೋಕಾಕ ತಾಲೂಕಿನ ಗೋಕಾಕ ಫಾಲ್ಸ್, ದೂಪದಾಳ ಹಾಗೂ ಗೊಡಚಿನಮಲ್ಕಿ ಪ್ರವಾಸಿ ತಾಣಗಳಿಗೆ ವಾರಾಂತ್ಯ ಶನಿವಾರ, ರವಿವಾರ ಮತ್ತು ಸಾರ್ವಜನಿಕ ರಜೆ ದಿನಗಳಂದು ಸಾರ್ವಜನಿಕ ವೀಕ್ಷಣೆಯನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳು ಬೆಳಗಾವಿ ಇವರು ಆದೇಶ ಹೊರಡಿಸಿದ್ದಾರೆ. ಈ ಸ್ಥಳಗಳಿಗೆ ಮಹಾರಾಷ್ಟ್ರ ರಾಜ್ಯದಿಂದ ಮತ್ತು ರಾಜ್ಯದ …
Read More »ಪೋಷಕರ ಸಂಬಂಧ ಅನಧಿಕೃತವಾದರೂ ಮಗು ಅಧಿಕೃತ: ಹೈಕೋರ್ಟ್
ಬೆಂಗಳೂರು: ಪೋಷಕರ ಸಂಬಂಧ ಅನಧಿಕೃತ ಇರಬಹುದು. ಆದರೆ, ಅವರ ಮಕ್ಕಳು ಅನಧಿಕೃತ ಅಲ್ಲ ಎಂಬ ಅಂಶವನ್ನು ಕಾನೂನು ಗುರುತಿಸಬೇಕು ಎಂದು ಹೈಕೋರ್ಟ್ ಹೇಳಿದೆ. ಎರಡನೇ ಪತ್ನಿಯ ಮಕ್ಕಳು ಅನುಕಂಪದ ನೌಕರಿ ಪಡೆಯಲು ಅರ್ಹರಲ್ಲ ಎಂದು 2011ರ ಕೆಪಿಟಿಸಿಎಲ್(ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ) ಸುತ್ತೋಲೆ ಪ್ರಶ್ನಿಸಿದ್ದ ಮೇಲ್ಮನವಿ ವಿಚಾರಣೆ ವೇಳೆ ನ್ಯಾಯಮೂರ್ತಿ ಬಿ.ವಿ. ನಾಗರತ್ನಾ ನೇತೃತ್ವದ ವಿಭಾಗೀಯ ಪೀಠ ಈ ಅಭಿಪ್ರಾಯಪಟ್ಟಿದೆ. ಲೈನ್‌ಮನ್ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು 2014ರ ಜೂನ್‌ನಲ್ಲಿ ನಿಧನರಾದರು. …
Read More »ಆಗಸ್ಟ್‌ಗೆ ವಿಧಾನಮಂಡಲ ಅಧಿವೇಶನ ಸಾಧ್ಯತೆ
ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಆಗಸ್ಟ್‌ನಲ್ಲಿ ನಡೆಯುವ ಸಾಧ್ಯತೆ ಇದ್ದು, ಈ ಸಂಬಂಧ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಮೂಲಗಳು ತಿಳಿಸಿವೆ. ಸೆಪ್ಟೆಂಬರ್ ಒಳಗೆ ಮುಂಗಾರು ಅಧಿವೇಶನ ನಡೆಸಬೇಕಿದ್ದು, ಕೋವಿಡ್ ಮೂರನೇ ಅಲೆಯೂ ಹೆಚ್ಚು ಕಡಿಮೆ ಅದೇ ಸಂದರ್ಭದಲ್ಲಿ ಆರಂಭವಾಗುವ ಸಾಧ್ಯತೆ ಇದೆ. ಹೀಗಾಗಿ ಆಗಸ್ಟ್‌ನಲ್ಲೇ ನಡೆಯಲಿದೆ. ಅಧಿವೇಶನ ಬೆಂಗಳೂರು ಅಥವಾ ಬೆಳಗಾವಿಯಲ್ಲಿ ನಡೆಸಬೇಕೆ ಎಂಬ ವಿಚಾರದ ಬಗ್ಗೆಯೂ ಸಂಪುಟ ಸಭೆಯಲ್ಲೇ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ. ‘ಲಾಕ್‌ಡೌನ್ ಸಂದಿಗ್ಧತೆಯಿಂದ …
Read More »
Laxmi News 24×7