Breaking News

ಜಿಲ್ಲೆ

ಏರಿದ ದರ: ಒಲೆ ಉರಿಸದ ‘ಅನಿಲ’

ಬೆಂಗಳೂರು: ಎಲ್‌ಪಿಜಿ ಸಿಲಿಂಡರ್‌ಗಳ ದರದ ಸತತ ಏರಿಕೆಯಿಂದ ರಾಜ್ಯ ಸರ್ಕಾರದ ‘ಮುಖ್ಯಮಂತ್ರಿ ಅನಿಲ ಭಾಗ್ಯ’ ಯೋಜನೆಯ ಫಲಾನುಭವಿಗಳು ಕಂಗಾಲಾಗಿದ್ದಾರೆ. ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್‌) ಕುಟುಂಬಗಳು ದುಬಾರಿ ದರ ಪಾವತಿಸಲಾಗದೇ ಯೋಜನೆಯಿಂದ ದೂರ ಸರಿಯುತ್ತಿವೆ. ಅನಿಲ ಭಾಗ್ಯ ಯೋಜನೆಯಡಿ 97,256 ಫಲಾನುಭವಿಗಳಿಗೆ ಅನಿಲ ಸಂಪರ್ಕ ಕಲ್ಪಿಸಲಾಗಿತ್ತು. ಈ ಪೈಕಿ 13,461 (ಶೇ 13.8) ಮಂದಿ ಈ ವರ್ಷದ ಆರು ತಿಂಗಳಿನಲ್ಲಿ ಎಲ್‌ಪಿಜಿ ತುಂಬಿದ ಒಂದು ಸಿಲಿಂಡರ್‌ ಕೂಡ ಖರೀದಿಸಿಲ್ಲ. 32,462 …

Read More »

ಬೆಳಗಾವಿ : ದಾಂಪತ್ಯ ಜೀವಕ್ಕೆ ಕಾಲಿಟ್ಟ ಅಂಧ ಜೋಡಿ

ಬೆಳಗಾವಿ : ದೇವರ ಶಾಪಕ್ಕೆ ಗುರಿಯಾಗಿ ಹುಟ್ಟಿನಿಂದ ಅಂಧತ್ವದಲ್ಲೇ ಬದುಕು ಕಳೆಯುತ್ತಿದ್ದ ಅಂಧರಿಬ್ಬರು ಕೊರೊನಾ ನಿಯಮಾವಳಿಯಂತೆ ಸರಳ ಮದುವೆ ಮಾಡಿಕೊಂಡರು. ಇಲ್ಲಿನ ಹನುಮಾನ ನಗರದ ಭಕ್ತಿವಾಸ ಸಾಂಸ್ಕೃತಿಕ ಭವನದ ಕಾರ್ಯಾಲಯದಲ್ಲಿ ಉಷಾ ತಾಯಿ ಪೋತದಾರ್ ಫೌಂಡೇಶನ್‍ನ ಆಶ್ರಯದಲ್ಲಿ ಬೆಳಗಾವಿಯ ದೀಪಾ ಹಾಗೂ ಬೆಂಗಳೂರಿನ ರವಿ ಅಂಧ ಜೋಡಿಯ ಮಂಗಲ ಕಾರ್ಯ ನೆರವೇರಿತು. ಜಿಲ್ಲೆಯಲ್ಲಿ ಸಾಮಾಜಿಕ ಕಾರ್ಯಗಳ ಮೂಲಕ ಗುರುತಿಸಿಕೊಂಡಿರುವ ಬೆಳಗಾವಿಯ ಉಷಾ ಪೋತದಾರ್ ಫೌಂಡೇಶನ್ ಮುಖ್ಯಸ್ಥರು ಅಂಧ ಜೋಡಿಯ ಮದುವೆ …

Read More »

BPL, ಅಂತ್ಯೋದಯ ಪಡಿತರ ಚೀಟಿದಾರರಿಗೆ ಮುಖ್ಯ ಮಾಹಿತಿ: ಇ-ಕೆವೈಸಿ ಕಡ್ಡಾಯ

ರಾಯಚೂರು: ಅಂತ್ಯೋದಯ ಮತ್ತು ಆದ್ಯತಾ ಪಡಿತರ ಚೀಟಿ (ಬಿಪಿಎಲ್) ಹೊಂದಿರುವ ಇದೂವರೆಗೆ ಇ-ಕೆವೈಸಿ ಆಗದೇ ಇರುವ ಪಡಿತರ ಕಾರ್ಡಿನ ಸದಸ್ಯರಿಗೆ ತಮ್ಮ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಗಳಲ್ಲಿ ಬಯೋ ದೃಢೀಕರಣ ನೀಡಿ, ಇ-ಕೆವೈಸಿ ಮಾಡಿಸಿಕೊಳ್ಳಲು ಪ್ರತಿ ತಿಂಗಳ 1 ರಿಂದ 10 ನೇ ದಿನಾಂಕದ ವರೆಗೆ ಅವಕಾಶ ಮಾಡಿಕೊಡಲಾಗಿದೆ. ಇದುವರೆಗೆ ಇ-ಕೆವೈಸಿ ಆಗದಿರುವ ಸದಸ್ಯರು ತಮ್ಮ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಗಳಲ್ಲಿ ಬಯೋ ದೃಢೀಕರಣ ಮೂಲಕ ಕಡ್ಡಾಯವಾಗಿ ಇ-ಕೆವೈಸಿ ಮಾಡಿಸಿಕೊಳ್ಳುವಂತೆ ಜಿಲ್ಲೆಯ ಆಹಾರ, …

Read More »

50 ಲಕ್ಷ ರೂ. ವೆಚ್ಚದಲ್ಲಿ ಹೊಸ ಆಸ್ಪತ್ರೆ ನಿರ್ಮಾಣ : ಶಾಸಕ ಬಾಲಚಂದ್ರ ಜಾರಕಿಹೊಳಿ

  ಮೂಡಲಗಿ : ಯಾದವಾಡ ಹಾಗೂ ಸುತ್ತಲಿನ ಗ್ರಾಮಗಳ ರೋಗಿಗಳ ಅನುಕೂಲಕ್ಕೋಸ್ಕರ ಯಾದವಾಡ ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡದ ಕಾಮಗಾರಿಯನ್ನು ಒಂದು ವಾರದೊಳಗೆ ಆರಂಭಿಸಲಾಗುವುದು. ಇದಕ್ಕಾಗಿ 50 ಲಕ್ಷ ರೂ.ಗಳನ್ನು ನೀಡುವುದಾಗಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು.   ತಾಲೂಕಿನ ಯಾದವಾಡ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ರವಿವಾರದಂದು ಭೇಟಿ ನೀಡಿ ಆಸ್ಪತ್ರೆಯನ್ನು ಪರಿಶೀಲಿಸಿದ ಬಳಿಕ ಮಾತನಾಡಿದ ಅವರು, ಹೊಸ ಆಸ್ಪತ್ರೆ ನಿರ್ಮಾಣಕ್ಕೆ ಸರ್ಕಾರದಿಂದ …

Read More »

ಸರ್ಕಾರಿ ಹೊಸ ಮಾಧ್ಯಮಿಕ ಶಾಲೆ ಕಟ್ಟಡ ಕಾಮಗಾರಿಗೆ ಚಾಲನೆ ನೀಡಿದ ಕೆ ಎಂ ಎಫ್ ನಿರ್ದೇಶಕರು ಅಮರನಾಥ ಜಾರಕಿಹೊಳಿ….

ಗೋಕಾಕ ಜು 4 : ಶಾಸಕ ರಮೇಶ ಜಾರಕಿಹೊಳಿ ಅವರ ಪ್ರಯತ್ನದಿಂದ ಇಲ್ಲಿನ ಸರಕಾರಿ ಹೊಸ ಮಾಧ್ಯಮಿಕ ಶಾಲೆಗೆ ಆರ್ ಐ ಡಿ ಎಫ್ ಯೋಜನೆಯಡಿ 62.80 ಲಕ್ಷ ರೂ, ನ್ಯಾಯಾಂಗ ಇಲಾಖೆ ವತಿಯಿಂದ 15 ಲಕ್ಷ ರೂ ಹಾಗೂ ಕೆ ಆರ್ ಡಿ ಸಿ ಯೋಜನೆಯಡಿ 30 ಲಕ್ಷ ರೂ ಒಟ್ಟು ರೂ 1.7 ಕೋಟಿ ವೆಚ್ಚದಲ್ಲಿ ಮಂಜೂರಾದ 7 ಶಾಲಾ ಕೊಠಡಿ, 6 ಶೌಚಾಲಯಗಳಿಗೆ ಹಾಗೂ ಲೋಕೋಪಯೋಗಿ …

Read More »

ರಾಮನಗರ; ನೀರಿನ ಪೈಪ್‌ನಲ್ಲಿ ಸಿಲುಕಿದ್ದ ರೈತನ ರಕ್ಷಣೆ

ರಾಮನಗರ, ಜುಲೈ 04; ರಾಷ್ಟ್ರೀಯ ಹೆದ್ದಾರಿಯಲ್ಲಿ ಅಳವಡಿಸಿದ್ದ ಪೈಪ್‌ಲೈನ್‌ನಲ್ಲಿ ಸಿಲುಕಿದ್ದ ರೈತನನ್ನು ಅಗ್ನಿಶಾಮಕದಳದ ಸಿಬ್ಭಂದಿ ಕಾರ್ಯಚರಣೆ ನಡೆಸಿ ರಕ್ಷಣೆ ಮಾಡಿದ್ದಾರೆ. ಸುಮಾರು ಅರ್ಧಗಂಟೆಗಳ ಕಾಲ ರೈತ ಪೈಪ್‌ನಲ್ಲಿ ಸಿಲುಕಿದ್ದ. ರಾಮನಗರ ತಾಲ್ಲೂಕಿನ ಸಿಂಗ್ರಿಬೋವಿ ದೊಡ್ಡಿ ಗ್ರಾಮದ ಗೋವಿಂದರಾಜು (ರಾಜಣ್ಣ) ಪೈಪ್‌ಲೈನ್‌ನಲ್ಲಿ ಸಿಲುಕಿದ್ದ. ಕೊಂಕಾಣಿದೊಡ್ಡಿ ಗ್ರಾಮದ ಬಳಿ ನಿರ್ಮಾಣವಾಗುತ್ತಿರು ದಶಪಥದ ರಾಷ್ಟ್ರೀಯ ಹೆದ್ದಾರಿಯ ಕೆಳಬಾಗದಲ್ಲಿ ಹಳ್ಳದ ನೀರು ಹರಿಯಲು ಹಾಕಿದ್ದ ಪೈಪ್‌ಲೈನ್‌ನಲ್ಲಿ ಸಿಲುಕಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದ. ರಾಷ್ಟ್ರೀಯ ಹೆದ್ದಾರಿಯ …

Read More »

ಧಾರವಾಡದಲ್ಲಿ ರಕ್ತದ ಕೊರತೆ- ಗರ್ಭಿಣಿಯರಿಗೂ ಸಿಗುತ್ತಿಲ್ಲ ಬ್ಲಡ್

ಧಾರವಾಡ: ಜಿಲ್ಲೆಯಲ್ಲಿ ಯಾವುದೇ ಬ್ಲಡ್ ಬ್ಯಾಂಕ್ ಗೆ ಹೋಗಿ ಕೇಳಿದರೂ ‘ನೋ ಸ್ಟಾಕ್’ ಉತ್ತರ ಸಿಗುತ್ತಿದ್ದು, ಬಹುತೇಕ ಬ್ಲಡ್ ಬ್ಯಾಂಕ್ ಗಳು ದಾನಿಗಳಿಲ್ಲದೆ ಬಿಕೋ ಎನ್ನುತ್ತಿವೆ. ಕೊರೊನಾ ಲಸಿಕೆ ಹಾಕಿಸಿಕೊಳ್ಳುವ ಭರದಲ್ಲಿ ಯುವ ಜನತೆ ರಕ್ತ ದಾನ ಮಾಡುತ್ತಿಲ್ಲ. 18 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ವ್ಯಾಕ್ಸಿನ್ ಹಾಕುವುದಕ್ಕೆ ಶುರು ಮಾಡಿದ ಬಳಿಕ ಜಿಲ್ಲೆಯಲ್ಲಿ ತೀರಾ ರಕ್ತದ ಕೊರತೆ ಉದ್ಭವಿಸಿದೆಯಂತೆ. ಮುಖ್ಯವಾಗಿ ರಕ್ತದಾನ ಮಾಡುವವರು ಇದೇ ವಯೋಮಾನದವರಾಗಿರುವ ಕಾರಣ ಈಗ ಲಸಿಕೆಯೇ …

Read More »

ವಿದ್ಯುತ್‌ ಪರಿವರ್ತಕಗಳ ಎತ್ತರಿಸಲು ಸೂಚನೆ

ಬೆಂಗಳೂರು: ಬೆಳಗಾವಿ, ಬಾಗಲಕೋಟೆ ಸೇರಿದಂತೆ ಉತ್ತರ ಕರ್ನಾಟಕ ಭಾಗದಲ್ಲಿ ಪದೇ ಪದೇ ಪ್ರವಾಹ ಸೃಷ್ಟಿಯಾಗುವ ಪ್ರದೇಶಗಳಲ್ಲಿರುವ ವಿದ್ಯುತ್‌ ಪರಿವರ್ತಕಗಳನ್ನು ಎತ್ತರದಲ್ಲಿಡಲು ತಕ್ಷಣ ಕ್ರಮ ಕೈಗೊಳ್ಳುವಂತೆ ಇಂಧನ ಇಲಾಖೆಯ ಅಧಿಕಾರಿಗಳಿಗೆ ಉಪ ಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ಸೂಚಿಸಿದರು. ಶನಿವಾರ ಇಂಧನ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆ ನಡೆಸಿದ ಅವರು, ‘ಬೆಳಗಾವಿಯ ಚಿಕ್ಕೋಡಿ ತಾಲ್ಲೂಕು, ಬಾಗಲಕೋಟೆಯ ಬೀಳಗಿ, ಮುಧೋಳ, ಬಾದಾಮಿ ಸೇರಿದಂತೆ ಉತ್ತರ ಕರ್ನಾಟಕದ ಹಲವು ಪ್ರದೇಶಗಳಲ್ಲಿ ಪ್ರವಾಹದಿಂದ ವಿದ್ಯುತ್‌ ಪರಿವರ್ತಕಗಳಿಗೆ …

Read More »

ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಭೂ ಸಂಕಷ್ಟ

ಬೆಂಗಳೂರು: ಬೆಂಗಳೂರಿನ ಬೆಳ್ಳಂದೂರು ಹಾಗೂ ದೇವರಬೀಸನಹಳ್ಳಿಯಲ್ಲಿ ಐಟಿ ಕಾರಿಡಾರ್‌ಗಾಗಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ವಶಪಡಿಸಿಕೊಂಡಿದ್ದ ಜಮೀನನ್ನು ಅಕ್ರಮವಾಗಿ ಡಿ-ನೋಟಿಫಿಕೇಷನ್‌ ಮಾಡಿದ ಆರೋಪ ಸಂಬಂಧ ಮುಖ್ಯಮಂತ್ರಿ ಬಿ.ಎ ಸ್‌.ಯಡಿಯೂರಪ್ಪ ಅವರ ವಿರುದ್ಧದ ಪ್ರಕರಣ ಸಂಬಂಧ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್‌ ಅನ್ನು ಶನಿವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಲಯ ತಿರಸ್ಕರಿಸಿದ್ದು, ಮರು ತನಿಖೆ ನಡೆಸುವಂತೆ ಲೋಕಾಯುಕ್ತ ಪೊಲೀಸರಿಗೆ ಸೂಚಿಸಿದೆ. 2015ರಲ್ಲಿ ದಾಖಲಾದ ಪ್ರಕರಣ ಸಂಬಂಧ ಲೋಕಾಯುಕ್ತ ಪೊಲೀಸರು 10 ಸಾವಿರ …

Read More »

ಕಿರುಕುಳಕ್ಕೆ ಬೇಸತ್ತ ಮಹಿಳೆ ರಸ್ತೆ ಮಧ್ಯೆಯೇ ಕಾಮುಕನಿಗೆ ಚಪ್ಪಲಿಹಿಂದ ಹಿಗ್ಗಾಮುಗ್ಗಾ ಭಾರಿಸಿರುವ ಘಟನೆ

ಬೆಳಗಾವಿ: ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯನ್ನು ಹಲವು ತಿಂಗಳಿಂದ ವ್ಯಕ್ತಿಯೋರ್ವ ಹಿಂಬಾಲಿಸುತ್ತಾ ಚುಡಾಯಿಸುತ್ತಿದ್ದ. ಕಿರುಕುಳಕ್ಕೆ ಬೇಸತ್ತ ಮಹಿಳೆ ರಸ್ತೆ ಮಧ್ಯೆಯೇ ಕಾಮುಕನಿಗೆ ಚಪ್ಪಲಿಹಿಂದ ಹಿಗ್ಗಾಮುಗ್ಗಾ ಭಾರಿಸಿರುವ ಘಟನೆ ಬೆಳಗಾವಿ ನಗರದ ಎಸ್ ಪಿ ಕಚೇರಿ ಮುಂದಿನ ರಸ್ತೆಯಲ್ಲಿ ನಡೆದಿದೆ. ಗೋಪಾಲ್ ಗುರನ್ನವರ್ ಎಂಬಾತ ಮಹಿಳೆಯನ್ನು ಹಿಂಬಾಲಿಸುತ್ತಿದ್ದ. ಹಲವುಬಾರಿ ಎಚ್ಚರಿಕೆ ನೀಡಿದ್ದರೂ ಮತ್ತದೇ ಚಾಳಿ ಮುಂದುವರೆಸಿದ್ದ. ನೂಂದ ಮಹಿಳೆ ಹಾಗೂ ಆಕೆ ಪತಿ ಇಬ್ಬರೂ ಗುರನ್ನವರ್ ನನ್ನು ಹಿಡಿದು ಚಪ್ಪಲಿ …

Read More »