ಬೆಳಗಾವಿ : ಸಿಡಿ ಪ್ರಕರಣದ ನಂತ್ರ, ರಾಜಕೀಯದಿಂದ ಕೊಂಚ ದೂರವೇ ಉಳಿದಿರುವಂತ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಈಗ ಮತ್ತೊಂದು ಮಹತ್ವದ ನಿರ್ಧಾರಕ್ಕೆ ಮುಂದಾಗಿದ್ದಾರೆ ಎನ್ನಲಾಗಿದೆ. ಶತಾಯಗತಾಯ ಮತ್ತೆ ಸಚಿವರಾಗಬೇಕು ಎನ್ನುವಂತ ಕಸರತ್ತಿನಲ್ಲಿಯೂ ತೊಡಗಿರುವಂತ ಅವರು, ಮಂತ್ರಿ ಸ್ಥಾನ ಸಿಗದೇ ಇದ್ದರೇ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಸರ್ಕಾರದ ವಿರುದ್ಧವೇ ಸೆಡ್ಡು ಹೊಡೆಯಲಿದ್ದಾರೆ ಎನ್ನಲಾಗುತ್ತಿದೆ. ಸಿಡಿ ಪ್ರಕರಣದ ನಂತ್ರ, ಬೆಂಗಳೂರಿನಿಂದಲೇ ಮಾಜಿ ಸಚಿವ ರಮೇಶ್ ಜಾರಕಿಹೊಳಿ ದೂರ ಉಳಿದು, …
Read More »ಬೆಳಗಾವಿ| 18 ವರ್ಷದ ಎಲ್ಲರಿಗೂ ಇಲ್ಲ, 45 ವರ್ಷ ಮೇಲಿನವರಿಗಷ್ಟೆ ಕೋವಿಡ್ ಲಸಿಕೆ
ಬೆಳಗಾವಿ: ಪ್ರಧಾನಿ ನರೇಂದ್ರ ಮೋದಿ ಅವರು ಪ್ರಕಟಿಸಿದಂತೆ ಉಚಿತ ಲಸಿಕಾ ಕಾರ್ಯಕ್ರಮದ ಅನ್ವಯ ಜಿಲ್ಲೆಯಾದ್ಯಂತ ಸೋಮವಾರದಿಂದ ಕೋವಿಡ್ ನಿರೋಧಕ ಲಸಿಕೆ ಮೇಳ ಆರಂಭವಾಗಿದೆ. ಆದರೆ, 45 ವರ್ಷ ಮೇಲಿನವರಿಗಷ್ಟೆ ಕೊಡಲಾಗುತ್ತಿದೆ. 18ರಿಂದ 44 ವರ್ಷದ ಎಲ್ಲರಿಗೂ ಲಸಿಕೆ ದೊರೆಯಲಿಲ್ಲ. ಆದ್ಯತಾ ಗುಂಪಿನಲ್ಲಿರುವ 18ರಿಂದ 44 ವರ್ಷದವರಿಗೆ ಯಥಾಪ್ರಕಾರ ಲಸಿಕಾ ಕಾರ್ಯಕ್ರಮ ನಡೆಯಿತು. ಸರ್ಕಾರದ ಘೋಷಣೆ ಆಧರಿಸಿ ಆಸ್ಪತ್ರೆಗಳಿಗೆ ಬಂದಿದ್ದ 18 ವರ್ಷ ಮೇಲಿನ ಯುವಜನರು ಲಸಿಕೆ ದೊರೆಯದೆ ಬರಿಗೈಲಿ ವಾಪಸಾಗಬೇಕಾಯಿತು. …
Read More »ಸಾರಿಗೆ ಸಂಚಾರ ಯಥಾಸ್ಥಿತಿ – ಡಿಸಿಎಂ ಲಕ್ಷ್ಮಣ್ ಸವದಿ
ಬೆಂಗಳೂರು : ಸದ್ಯಕ್ಕೆ 2 ಡೋಸ್ ಕೊರೋನಾ ಲಸಿಕೆ ಪಡೆದಂತ ಸಿಬ್ಬಂದಿಗಳನ್ನು ಬಳಸಿಕೊಂಡು, ಸಾರಿಗೆ ಸಂಚಾರ ಆರಂಭಿಸಲಾಗಿದೆ. ಈಗ 2 ಡೋಸ್ ಲಸಿಕೆ ಪಡೆದಂತ ಸಿಬ್ಬಂದಿಗಳು ಕರ್ತವ್ಯಕ್ಕೆ ಹಾಜರಾಗಿ, ಸಂಚಾರ ಆರಂಭಿಸಿದ್ದಾರೆ. ಪ್ರಯಾಣಿಕರಿಗೆ ತೊಂದರೆಯಾಗದಂತೆಯಥಾಸ್ಥಿತಿ ಸಂಚಾರ ಆರಂಭ ಎಂಬುದಾಗಿ ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ತಿಳಿಸಿದ್ದಾರೆ. ವಿಧಾನ ಸೌಧ ದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿಯವರು, BMTC ಸ್ಪಲ್ಪ …
Read More »ಲಾಕ್ ಡೌನ್ ನಲ್ಲಿ ಅಬಕಾರಿ ಇಲಾಖೆಗೆ ಶೇ.10 ರಷ್ಟು ಹೆಚ್ಚು ಲಾಭ: ಸಚಿವ ಗೋಪಾಲಯ್ಯ
ಬೆಂಗಳೂರು: ಕೋವಿಡ್ ಲಾಕ್ ಡೌನ್ ಸಂದರ್ಭದಲ್ಲಿ ಅಬಕಾರಿ ಇಲಾಖೆ ಸಾಮಾನ್ಯ ದಿನಗಳಿಗಿಂತ ಶೇ.10 ರಷ್ಟು ಹೆಚ್ಚು ಲಾಭ ಗಳಿಸಿದೆ ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ತಿಳಿಸಿದ್ದಾರೆ. ಮಹಾಲಕ್ಷ್ಮಿ ಲೇಔಟ್ ಶಾಸಕರ ಭವನದಲ್ಲಿ ಆಯೋಜನೆಗೊಂಡಿದ್ದ 18 ರಿಂದ 44 ವಯಸ್ಸಿನವರಿಗೆ 3 ದಿನಗಳ ಕೋವಿಡ್ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಕೋವಿಡ್ ಲಾಕ್ ಡೌನ್ ಆದ ಮೇಲೆ ಏಪ್ರಿಲ್ 1 ರಿಂದ ಜೂನ್ 15 ರವರೆಗೆ ಅಬಕಾರಿ ಇಲಾಖೆಗೆ …
Read More »ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಸಿಎಂ ಬಿಎಸ್ವೈ ಚಾಲನೆ
ಬೆಂಗಳೂರು: ಇಂದು ಇಡೀ ದೇಶದಾದ್ಯಂತ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಗುತ್ತಿದೆ. ಮುಖ್ಯಮಂತ್ರಿ ಯಡಿಯೂರಪ್ಪ ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ, ಆಯುಷ್ ಇಲಾಖೆ ಆಯೋಜಿಸಿದ್ದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ತಮ್ಮ ನಿವಾಸದಲ್ಲೇ ಯೋಗ ಮಾಡಿದ ಸಿಎಂ ಬಿಎಸ್ವೈ ಈ ಬಾರಿ ಕೊರೊನಾ ಹಿನ್ನೆಲೆಯಲ್ಲಿ ಮನೆಯಲ್ಲೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಿ ಎನ್ನುವ ಸಂದೇಶ ನೀಡಿದರು.
Read More »ರಾಜ್ಯದಲ್ಲಿ ತಗ್ಗಿದ ಎರಡನೆ ಅಲೆ, ಶಾಲೆ ಪುನಾರಂಭಕ್ಕೆ ಸಲಹೆ
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಶಾಲೆ ಪುನರಾರಂಭ ಸೂಕ್ತವೆಂಬ ಸಲಹೆ ಕೇಳಿ ಬಂದಿದೆ. ಮಕ್ಕಳ ಭವಿಷ್ಯದ ದೃಷ್ಟಿಯಿಂದ ಶಾಲೆ ಆರಂಭಿಸುವುದು ಸೂಕ್ತವೆಂದು ಕಾರ್ಯಪಡೆ ಸಲಹೆ ನೀಡಿದೆ. ಸುರಕ್ಷತೆ ಕ್ರಮಗಳೊಂದಿಗೆ ಶಾಲೆಗಳನ್ನು ಪ್ರಾರಂಭಿಸಬಹುದು ಎಂದು 17 ಅಂಶಗಳನ್ನೊಳಗೊಂಡ ಮಧ್ಯಂತರ ವರದಿಯನ್ನು ತಜ್ಞರ ಕಾರ್ಯಪಡೆ ಸರ್ಕಾರಕ್ಕೆ ಸಲ್ಲಿಸಿದೆ. ದೀರ್ಘಾವಧಿ ಶಾಲೆಗೆ ಮಕ್ಕಳು ಹೋಗಲು ಸಾಧ್ಯವಾಗದಿದ್ದರೆ ಶೈಕ್ಷಣಿಕವಾಗಿ ಸಮಸ್ಯೆ ಎದುರಿಸಬೇಕಾಗುತ್ತದೆ ಅವರ ಭವಿಷ್ಯದ ಹಿತದೃಷ್ಟಿಯಿಂದ ಸುರಕ್ಷತೆ ಕ್ರಮಗಳೊಂದಿಗೆ ಶಾಲೆ ಆರಂಭಿಸಬಹುದು. ಸೋಂಕಿನ …
Read More »ಗೋಕಾಕ ತಾಲೂಕಿನ ಅನ್ ಲಾಕ್ ನಿಯಮ ಜಾರಿ
ಗೋಕಾಕ ತಾಲೂಕಿನಲ್ಲಿ ಕಳೆದ ಒಂದು ವಾರದ Covid 19 ಪಾಜಿಟಿವಿಟಿ ದರದ ಆಧಾರದ ಮೇಲೆ ಮತ್ತು ಸರ್ಕಾರದ ನಿರ್ದೇಶನದಂತೆ ದಿನಾಂಕ: 21.06.2021, ಬೆಳಿಗ್ಗೆ 6.00 ರಿಂದ 05.07.2021, ಬೆಳಿಗ್ಗೆ 5.00 ರ ವರೆಗೆ ನಿರ್ಬಂಧಗಳ ಸಡಿಲಿಕೆಗಳನ್ನು ನೀಡಲಾಗಿದೆ. • ಎಲ್ಲಾ ಅಂಗಡಿಗಳನ್ನು ಸಂಜೆ 5.00 ಗಂಟೆವರೆಗೆ ತೆರೆಯಲು ಅನುವು ಮಾಡಿಕೊಡಲಾಗಿದೆ. • ಎಸಿ. ಚಾಲನೆಗೊಳಿಸದೇ ಹೋಟೆಲ್, ಕ್ಲಬ್ಸ್, ರೆಸ್ಟೋರೆಂಟ್‌ಗಳಲ್ಲಿ (ಮದ್ಯಪಾನ ಹೊರತುಪಡಿಸಿ) ಕುಳಿತು ತಿನ್ನಲು ಸಂಜೆ 5.00 ಗಂಟೆವರೆಗೆ …
Read More »ಕೋವಿಡ್ ನಿಯಂತ್ರಣಕ್ಕೆ ತಮ್ಮ ಶಾಸಕರ ಪ್ರದೇಶಾಭಿವೃದ್ದಿ ನಿಧಿ ಸಂಪೂರ್ಣ ಬಳಕೆ-ಶಾಸಕ ಬಾಲಚಂದ್ರ ಜಾರಕಿಹೊಳಿ.
ಗೋಕಾಕ: ಕೊರೋನಾ ಒಂದು ಮತ್ತು ಎರಡನೇ ಅಲೆಯು ಮಾನವ ಸಂಕುಲನಕ್ಕೆ ಮಹಾಮಾರಿಯಾಗಿ ಕಾಡುತ್ತಿದ್ದು, ದೇವರ ದಯೆಯಿಂದ ಮೂರನೇ ಅಲೆ ಬರಬಾರದು. ಒಂದು ವೇಳೆ ಬಂದರೂ ಅದನ್ನು ಸಮರ್ಥವಾಗಿ ಎದುರಿಸಲಿಕ್ಕೆ ಎಲ್ಲರೂ ಸನ್ನದ್ಧರಾಗಬೇಕು. ತಮ್ಮ ಶಾಸಕರ ಪ್ರದೇಶಾಭಿವೃದ್ದಿ ನಿಧಿಯನ್ನು ಕೋವಿಡ್‍ಗೆ ವೆಚ್ಚ ಮಾಡಲಾಗುವುದೆಂದು ಶಾಸಕ ಹಾಗೂ ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ನಗರದ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ತಮ್ಮ ಶಾಸಕರ ಪ್ರದೇಶಾಭಿವೃದ್ದಿ ನಿಧಿಯಡಿಯಲ್ಲಿ ಮೂಡಲಗಿ ತಾಲೂಕಿನ ಎಲ್ಲ …
Read More »ಸಚಿವ ಮುರುಗೇಶ್ ನಿರಾಣಿಗೆ ಬಂಪರ್ ಆಫರ್..!
ಬೆಂಗಳೂರು,ಜೂ.20- ವೀರಶೈವ ಲಿಂಗಾಯಿತ ಪಂಚಮಸಾಲಿ ಸಮುದಾಯದ ಪ್ರಭಾವಿ ನಾಯಕನಾಗಿ ಹೊರಹೊಮ್ಮುತ್ತಿರುವ ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಅವರಿಗೆ ಸದ್ಯದಲ್ಲೇ ಮಹತ್ವದ ಹುದ್ದೆ ಲಭಿಸಲಿದೆ ಎನ್ನಲಾಗುತ್ತಿದೆ.ಇದಕ್ಕೆ ಪುಷ್ಟಿ ನೀಡುವಂತೆ ಕೇಂದ್ರ ವರಿಷ್ಠರು ಕಳೆದ ಎರಡು ತಿಂಗಳಿನಿಂದ ಮುರುಗೇಶ್ ನಿರಾಣಿ ಅವರನ್ನು ದೆಹಲಿಗೆ ಕರೆಸಿಕೊಂಡು ಮಾತುಕತೆ ನಡೆಸುತ್ತಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡ, ಕೇಂದ್ರ ಗೃಹ ಸಚಿವ ಅಮಿತ್ ಷಾ ಹಾಗೂ ಸಂಘಪರಿವಾರದ ಪ್ರಮುಖರ …
Read More »ಸರ್ಕಾರಿ ನೌಕರರು ಕರ್ತವ್ಯಕ್ಕೆ ಹಾಜರಾಗಲು ಅಧಿಸೂಚನೆ ಪ್ರಕಟ
ಬೆಂಗಳೂರು, ಜೂನ್ 19: ರಾಜ್ಯದ ಹದಿನಾರು ಜಿಲ್ಲೆಗಳಲ್ಲಿ ಅನ್‌ಲಾಕ್ ಘೋಷಣೆಯಾಗುತ್ತಿದ್ದಂತೆ ಸರ್ಕಾರಿ ನೌಕರರು ಕರ್ತವ್ಯಕ್ಕೆ ಹಾಜರಾಗಲು ತಿದ್ದುಪಡಿ ಅಧಿಸೂಚನೆ ಹೊರಡಿಸಲಾಗಿದೆ. ಜೂನ್ 21ರಿಂದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ಇಲಾಖೆ, ಒಳಾಡಳಿತ ಇಲಾಖೆ, ಕಂದಾಯ ಇಲಾಖೆ, ಕಾರ್ಮಿಕ ಇಲಾಖೆ, ಗ್ರಾಮೀಣಾಭಿವೃದ್ಧಿ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳ ಎಲ್ಲ ಸಿಬ್ಬಂದಿ ಸಂಪೂರ್ಣವಾಗಿ ಹಾಜರಾಗಲು ಆದೇಶಿಸಲಾಗಿದೆ. ಉಳಿದ ಇಲಾಖೆಗಳ ಎಲ್ಲ ಗ್ರೂಪ್ ಎ ಅಧಿಕಾರಿಗಳು ಕಡ್ಡಾಯವಾಗಿ ಕರ್ತವ್ಯಕ್ಕೆ …
Read More »
Laxmi News 24×7