Breaking News

ಜಿಲ್ಲೆ

ಲಾಕ್‌ಡೌನ್ ಸಡಿಲಿಕೆ; ಹೆಚ್ಚಿದ ಜನಸಂದಣಿ

ಬೆಂಗಳೂರು: ಕೊರೊನಾ ಸೋಂಕು ಹರಡುವಿಕೆ ತಡೆಗಾಗಿ ಜಾರಿಗೊಳಿಸಲಾಗಿರುವ ಲಾಕ್‌ಡೌನ್‌ ಭಾಗಶಃ ಸಡಿಲಿಕೆ ಮಾಡಲಾಗಿದ್ದು, ನಗರದಲ್ಲಿ ಸೋಮವಾರ ಬಹುತೇಕ ಕಡೆ ಜನ ಸಂದಣಿ ಹೆಚ್ಚಾಗಿತ್ತು. ನಗರದ ಮೆಜೆಸ್ಟಿಕ್, ಯಶವಂತಪುರ, ಪೀಣ್ಯ, ಚಾಮರಾಜಪೇಟೆ, ಸ್ಯಾಟ್‌ಲೈಟ್ ನಿಲ್ದಾಣ ಹಾಗೂ ಇತರೆ ಪ್ರದೇಶಗಳಲ್ಲಿ ಜನರು ಗುಂಪು ಸೇರಿ ಓಡಾಡಿದ್ದು ಕಂಡುಬಂತು. ಲಾಕ್‌ಡೌನ್‌ನಿಂದಾಗಿ ನಗರ ತೊರೆದು ತಮ್ಮೂರಿಗೆ ಹೋಗಿದ್ದ ಸಾವಿರಾರು ಮಂದಿ ರೈಲು ಹಾಗೂ ಖಾಸಗಿ ವಾಹನಗಳ ಮೂಲಕ ಬೆಂಗಳೂರಿಗೆ ಸೋಮವಾರ ವಾಪಸು ಬಂದರು. ನಗರದ ಕ್ರಾಂತಿವೀರ …

Read More »

ಬೆಂಗಳೂರಿಗೆ ಬರುವವರಿಗೆ ಗಡಿಯಲ್ಲೇ ಕೋವಿಡ್ ಪರೀಕ್ಷೆ

ಬೆಂಗಳೂರು, ಜೂನ್ 15: ಲಾಕ್‌ಡೌನ್ ಸಡಿಲಿಕೆ ಬೆನ್ನಲ್ಲೇ ಕೊರೊನಾ ಸೋಂಕು ನಿಯಂತ್ರಣಕ್ಕೆ ಮುಂದಾಗಿರುವ ಬಿಬಿಎಂಪಿ, ನಗರದ ಗಡಿಯಲ್ಲಿ ರ್‍ಯಾಂಡಮ್ ಪರೀಕ್ಷಾ ತಂಡಗಳನ್ನು ನಿಯೋಜಿಸಲು ಮುಂದಾಗಿದ್ದಾರೆ. ಕೋವಿಡ್ 19 ಲಾಕ್‌ಡೌನ್ ಹಿನ್ನೆಲೆಯಲ್ಲಿ ಕಾರ್ಖಾನೆ, ಗಾರ್ಮೆಂಟ್ಸ್, ಕಚೇರಿಗಳು ಕೂಡ ಮುಚ್ಚಿದ್ದವು, ಇದರಿಂದಾಗಿ ಕೆಲಸವಿಲ್ಲದೆ ತಮ್ಮ ಊರುಗಳಿಗೆ ಹೋಗಿದ್ದ ಕಾರ್ಮಿಕರು, ಉದ್ಯೋಗಿಗಳು ಲಾಕ್‌ಡೌನ್ ತೆರವಿನಿಂದಾಗಿ ಪುನಃ ಬೆಂಗಳೂರಿಗೆ ವಾಪಸಾಗುತ್ತಿದ್ದಾರೆ. ಸೋಂಕು ಹೆಚ್ಚಿರುವ ಜಿಲ್ಲೆಗಳು ಸೇರಿ ವಿವಿಧ ಜಿಲ್ಲೆಗಳ ಕಡೆಗಳಿಂದ ಕಟ್ಟಡ ಕಾರ್ಮಿಕರು, ಕಾರು, ಆಟೋ …

Read More »

ಯಮಕನಮರಡಿ: ಬಾಲಕಿಯೊಬ್ಬಳ ಮೇಲೆ ಅವಳ ಸಂಬಂಧಿಕನೇ ಅತ್ಯಾಚಾರ ಎಸಗಿದ ಘಟನೆ

ಯಮಕನಮರಡಿ: ಬಾಲಕಿಯೊಬ್ಬಳ ಮೇಲೆ ಅವಳ ಸಂಬಂಧಿಕನೇ ಅತ್ಯಾಚಾರ ಎಸಗಿದ ಘಟನೆ ಹುಕ್ಕೇರಿ ತಾಲೂಕಿನ ಬಡಕುಂದ್ರಿ ಗ್ರಾಮದ ಜೈ ಹನುಮಾನ ನಗರದ ತೋಟ ಮನೆಯ ಕಬ್ಬಿನ ಗದ್ದೆಯಲ್ಲಿ ಶನಿವಾರ ನಡೆದಿದೆ. ಅತ್ಯಾಚಾರ ಎಸಗಿದ ಆರೋಪಿ ಮಾರುತಿ ಪೂಜೇರಿ(42) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. 14ವರ್ಷ ಬಾಲಕಿ ತನ್ನ ಮಾವನ ಮನೆಯಲ್ಲಿ ಬಹಳ ದಿನದಿಂದ ವಾಸ ಇದ್ದಳು. ಶನಿವಾರ ಆರೋಪಿ ಆ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಬಾಲಕಿ ಮನನೊಂದು ವಿಷ ಸೇವಿಸಿದ್ದು, ಆ …

Read More »

ಗೋಕಾಕ ಡೆವಲಪರ್ಸ್ ಕಡೆಯಿಂದ ಉಚಿತ ವೀಲ್ ಚೆರ್ ವಿತರಣೆ

ಗೋಕಾಕ: ಇಲ್ಲಿಯ ಉಪನೊಂದಣಿ ಕಚೇರಿಗೆ ಆಗಮಿಸುವ ಅಂಗವಿಕಲರಿಗೆ, ವಯಸ್ಸಾದ ವೃದ್ದರಿಗೆ ಸಹಾಯವಾಗುವ ನಿಟ್ಟಿನಲ್ಲಿ ಗೋಕಾಕ ಡೆವಲಪರ್ಸ್ ಅವರು ವ್ಹೀಲ್‍ಚೇರ್‍ನ್ನು ಸೋಮವಾರದಂದು ಉಪನೊಂದಣಿ ಅಧಿಕಾರಿ ಶ್ರೀಮತಿ ಕಲಾವತಿ ಮಳವಾಡೆ ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ದಸ್ತ ಬರಹಗಾರರಾದ ಮಹೇಶ ಕುಲಕರ್ಣಿ, ವಿಶ್ವಾಸ ಸುಣಧೋಳಿ, ಮಹ್ಮದಅಲಿ ನೇಗಿನಹಾಳ, ರಾಜು ಅಥಣಿ, ಶಿವಾನಂದ ಶಿರಸಂಗಿ, ಪಂಚಾಕ್ಷರಿ ಹಿರೇಮಠ, ಅಪ್ಪು ವಾಲಿಕರ ಸೇರಿದಂತೆ ಅನೇಕರು ಇದ್ದರು.

Read More »

ಮೂಡಲಗಿಯಲ್ಲಿಂದು ಜರುಗಿದ ಟಾಸ್ಕ್‍ಪೋರ್ಸ ಸಭೆಯಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ಕೋವಿಡ್ ಎರಡನೆಯ ಅಲೆಯ ವಿರುದ್ದ ಹೋರಾಟ ಮಾಡಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿರುವ ಕೊರೋನಾ ವಾರಿಯರ್ಸ್‍ಗಳ ಕಾರ್ಯ ಶ್ಲಾಘನೀಯವಾದದ್ದು. ದುಡಿದ ಎಲ್ಲ ವಾರಿಯರ್ಸ್‍ಗಳಿಗೆ ಕೆಎಮ್‍ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕೃತಜ್ಞತೆ ಸಲಿಸಿದರು. ಸೋಮವಾರದಂದು ಪಟ್ಟಣದ ಈರಣ್ಣ ದೇವಸ್ಥಾನದ ಸಭಾಭವನದಲ್ಲಿ ಕೋವಿಡ್-19 ಟಾಸ್ಕಪೋರ್ಸ ಮತ್ತು ವಿವಿಧ ಇಲಾಖಾಧಿಕಾರಿಗಳ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಆಶಾ, ಅಂಗನವಾಡಿ ಕಾರ್ಯಕರ್ತೆಯರು ಸೇರದಂತೆ ಇದರಲ್ಲಿ ಭಾಗಿಯಾಗಿರುವ ಎಲ್ಲ ವಾರಿಯರ್ಸ್‍ಗಳ ಕಾರ್ಯಕ್ಕೆ …

Read More »

ಕರ್ನಾಟಕ ಬಿಜೆಪಿ ಗೊಂದಲ; ಗುರುವಾರ ಶಾಸಕರ ನಿಯೋಗದಿಂದ ಅರುಣ್ ಸಿಂಗ್ ಭೇಟಿಗೆ ಕಾಲಾವಕಾಶ

ಬೆಂಗಳೂರು: ಇನ್ನೂ ಮುಗಿದಿಲ್ಲ ಕರ್ನಾಟಕ ಬಿಜೆಪಿ ಗೊಂದಲ. ಮೂಮದೆರಡು ವರ್ಷ ಕಾಲ ರಾಜ್ಯದಲ್ಲಿ ಮುಖ್ಯಮಂತ್ರಿಯನ್ನು ಬದಲಾಯಸುವುದಿಲ್ಲ ರಾಜ್ಯ ಉಸ್ತುವಾರಿ ಅರುಣ್​ ಸಿಂಗ್​ ಅವರೇ ಕಳೆದ ವಾರ ಸ್ಪಷ್ಟಪಡಿಸಿದ್ದರೂ ಇನ್ನೂ ಬಗೆಹರಿದಿಲ್ಲ ರಾಜ್ಯ ಬಿಜೆಪಿ ನಾಯಕತ್ವದ ಬಗೆಗಿನ ಅಸ್ಪಷ್ಟತೆ. ಈ ಮಧ್ಯೆ ರಾಜ್ಯದ ಮುಖ್ಯಮಂತ್ರಿ ಸ್ಥಾನದಿಂದ ಬಿ ಎಸ್​ ಯಡಿಯೂರಪ್ಪ ಅವರನ್ನು ಕೆಳಗಿಳಿಸಬಾರದು ಎಂದು ವೀರಶೈವ ಲಿಂಗಾಯತ ಮಠಾಧೀಶರು ಬಿಜೆಪಿ ಹೈಕಮಾಂಡ್​ಗೆ ಒಕ್ಕೊರಲಿನ ಒತ್ತಾಯದ ಸಂದೇಶ ರವಾನಿಸಿಯೂ ಆಗಿದೆ. ಆದರೂ ರಾಜ್ಯ …

Read More »

ಬಳ್ಳಾರಿ: ಜಿಲ್ಲೆಯಲ್ಲಿ ರೈತರ ಮೇಲೆ ಲಾಠಿ ಪ್ರಹಾರ

ಬಳ್ಳಾರಿ: ಜಿಲ್ಲೆಯಲ್ಲಿ ರೈತ ಸಂಪರ್ಕ ಕೇಂದ್ರಕ್ಕೆ ಬೀಜ ಖರೀದಿಗೆಂದು ಬಂದ ರೈತರು ನೂಕು-ನುಗ್ಗಲು ನಡೆಸಿದ್ದಾರೆ. ಈ ವೇಳೆ ರೈತರ ಮೇಲೆ ಪೊಲೀಸರು ಲಾಠಿ ಬೀಸಿರುವ ಘಟನೆ ನಡೆದಿದೆ. ಜಿಲ್ಲೆಯ ತಹಶೀಲ್ದಾರ ಕಚೇರಿ ಆವರಣದಲ್ಲಿರೋ ರೈತ ಸಂಪರ್ಕ ಕೇಂದ್ರದಲ್ಲಿ ಈ ಘಟನೆ ನಡೆದಿದೆ. ರೈತರಿಗೆ ಸಮರ್ಪಕವಾಗಿ ಬೀಜ ನೀಡ್ತಿಲ್ಲ ಅಂತಾ ರೈತರು ಆಕ್ರೋಶ ಹೊರ ಹಾಕಿದ್ದಾರೆ. ಇಂದು ಮೆಣಸಿನಕಾಯಿ ಬೀಜ ಖರೀದಿಗೆ ಬಂದಿದ್ದ ರೈತರು ಅಲ್ಲಿ ಗಲಾಟೆ ಮಾಡಿದ್ದಾರೆ ಎನ್ನಲಾಗಿದೆ. ಈ …

Read More »

ಕುರ್ಚಿ ದಾಹ ಬಿಡ್ರಿ, ಸರಿಯಾಗಿ ಕೆಲಸ ಮಾಡಿ: ಎಂ.ಬಿ.ಪಾಟೀಲ್ ಕಿಡಿ

ಹಾವೇರಿ: ಕೊರೊನಾ ಸಂಕಷ್ಟದ ಸಮಯದಲ್ಲಿ ಕೊರೊನಾ ನಿರ್ವಹಣೆ ಬಿಟ್ಟು ಅಧಿಕಾರ ದಾಹ ಪ್ರದರ್ಶನ ಮಾಡುತ್ತಿದ್ದಾರೆ. ಕುರ್ಚಿ ದಾಹ ಬಿಡ್ರಿ, ಸರಿಯಾಗಿ ಕೆಲಸ ಮಾಡಿ ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದಲ್ಲಿ ಒಬ್ಬರಿಗೊಬ್ಬರು ತಾಳ ಮೇಳ ಇಲ್ಲ. ಸಿಎಂ ಬದಲಾವಣೆ ಮಾಡಬೇಕು ಅಂತಾರೆ. ಪರಸ್ಪರ ಸಹಕಾರವಿಲ್ಲ. ಕೊರೊನಾ ಸಂದರ್ಭದಲ್ಲಿ ಜನರ ಜೀವ ಉಳಿಸೋ ಕೆಲಸ ಮಾಡಬೇಕು ಎಂದು ಎಂ.ಬಿ.ಪಾಟೀಲ್ ಅವರು ಸರ್ಕಾರದ ವಿರುದ್ಧ …

Read More »

ಸಹೋದರನ ಪುತ್ರನ ಹುಟ್ಟುಹಬ್ಬದ ಪ್ರಯುಕ್ತ ಹುಲಿ ದತ್ತು ಪಡೆದ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ: ತಮ್ಮ ಸಹೋದರ ಚನ್ನರಾಜ ಹಟ್ಟಿಹೊಳಿ ಅವರ ಪುತ್ರ ಹರ್ಷಿತ್ ಜನ್ಮದಿನದ ಅಂಗವಾಗಿ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಸೋಮವಾರ ಬೆಳಗಾವಿಯ ಭೂತರಾಮನಹಟ್ಟಿಯ ಕಿತ್ತೂರ ರಾಣಿ ಚನ್ನಮ್ಮ ಪ್ರಾಣಿ ಸಂಗ್ರಹಾಲಯಕ್ಕೆ ತೆರಳಿ ಶೌರ್ಯ ಎನ್ನುವ ಹುಲಿಯನ್ನು ದತ್ತು ಪಡೆದಿದ್ದಾರೆ. ಆರಂಭಿಕವಾಗಿ 1 ಲಕ್ಷ ರೂ.ಗಳ ಚೆಕ್ ನ್ನು ಅರಣ್ಯಾಧಿಕಾರಿಗಳಿಗೆ ಹಸ್ತಾಂತರಿಸಿದ ಅವರು ಹುಲಿಯ ಸಂಪೂರ್ಣ ಜೀವಿತಾವಧಿ ಆರೈಕೆ ವಹಿಸಿಕೊಂಡಿರುವುದಾಗಿ ತಿಳಿಸಿದರು. ಲಾಕ್ ಡೌನ್ ಕಾರಣದಿಂದಾಗಿ ಪ್ರಾಣಿ ಸಂಗ್ರಹಾಲಯಗಳಿಗೆ ಜನರ ಬರುವಿಕೆ ಕಡಿಮೆಯಾಗಿದ್ದು, …

Read More »

ಹಾಸ್ಟೇಲಗಳಲ್ಲಿದುಡಿಯುತ್ತಿರುವ ಹೊರಗುತ್ತಿಗೆ ನೌಕರರಿಗೆ ಬಾಕಿ ವೇತನವನ್ನು ಪಾವತಿಸಲು ಮತ್ತು ಕೋವಿಡ ರಜೆ ವೇತನವನ್ನು ಪಾವತಿಸಲು ಒತ್ತಾಯಿಸಿ ಮನವಿ 

  ವಿಜಯಪೂರ ಜಿಲ್ಲೆಯ ಬಸವನಬಾಗೆವಾಡಿ ತಾಲೂಕಿನಲ್ಲಿ ಇಂದು ಹಾಸ್ಟಲ್ ಗಳಲ್ಲಿ ದುಡಿಯುತ್ತಿರುವ ಹೊರಗುತ್ತಿಗೆ ನೌಕರರಿಗೆ ಬಾಕಿ ವೇತನವನ್ನು ಪಾವತಿಸಲು ಹಾಗೂ ಕೊವಿಡ್ ರಜೆ ವೇತನವನ್ನು ಪಾವತಿಸಲು ಒತ್ತಾಯಿಸಿ ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ಪದಾಧಿಕಾರಿಗಳು ತಹಶಿಲ್ದಾರರವರಿಗೆ ಮನವಿ ಸಲ್ಲಿಸಿದರು. ನಂತರ ಮಾತನಾಡಿದ ಜಿಲ್ಲಾ ಅಧ್ಯಕ್ಷ ಹುಲುಗಪ್ಪ ಚಲವಾದಿ 2020 ಮಾರ್ಚ ತಿಂಗಳಿಂದ ಇಲ್ಲಿಯವರೆಗೆ ವೇತನವನ್ನು ಪಾವತಿಸಬೇಕು ಸರ್ಕಾರವು ಈ ನೌಕರರಿಗೆ ಲಾಕಡೌನ …

Read More »