ಬೆಂಗಳೂರು: ಕೊರೊನಾ ಸಂಕಷ್ಟದ ನಡುವೆ ಸಾರ್ವಜನಿಕ ಶಿಕ್ಷಣ ಇಲಾಖೆ, ಶಿಕ್ಷಕರು ಹಾಗೂ ಮಕ್ಕಳಿಗೆ ಬಿಗ್ ಶಾಕ್ ನೀಡಿದ್ದು, ನಾಳೆ ಜೂನ್ 15ರಿಂದಲೇ ಪ್ರಸಕ್ತ ಶೈಕ್ಷಣಿಕ ವರ್ಷ ಆರಂಭವಾಗಲಿದೆ ಎಂದು ತಿಳಿಸಿದೆ. ಈ ಕುರಿತು ಶಿಕ್ಷಣ ಇಲಾಖೆ ಆಯುಕ್ತ ಅನ್ಬುಕುಮಾರ್ ಮಾಹಿತಿ ನೀಡಿದ್ದು, ಜೂನ್ 15ರಿಂದ ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷ ಆರಂಭವಾಗಲಿದ್ದು, ಮಕ್ಕಳ ದಾಖಲಾತಿ ಆರಂಭಿಸಬೇಕು. ಜುಲೈ 30ರೊಳಗೆ ಮಕ್ಕಳ ದಾಖಲಾತಿ ಮುಗಿಸಬೇಕು ಹಾಗೂ ಜುಲೈ 1ರಿಂದ ಶಾಲೆಗಳನ್ನು …
Read More »ಇಹಲೋಕದ ಸಂಚಾರ ನಿಲ್ಲಿಸಿದ ‘ಸಂಚಾರಿ’
ಬೆಂಗಳೂರು: ಬೈಕ್ ಅಪಘಾತಕ್ಕೀಡಾಗಿ ಕೋಮಾದಲ್ಲಿದ್ದ ನಟ ಸಂಚಾರಿ ವಿಜಯ್ ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ. ಬೈಕ್ ಅಪಘಾತಕ್ಕೊಳಗಾಗಿ ಗಂಭೀರ ಗಾಯಗೊಂಡಿದ್ದ ನಟನನ್ನು ಬನ್ನೇರುಘಟ್ಟದ ಅಪೋಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಮೆದುಳಿಗೆ ಗಂಭೀರ ಗಾಯಗಳಾಗಿ ನಿಷ್ಕ್ರಿಯವಾಗಿದ್ದರಿಂದ ಚಿಕಿತ್ಸೆ ಫಲಿಸದೇ ಇಂದು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಇಂದು ಬೆಳಗ್ಗೆ ನಟನ ಆರೋಗ್ಯದ ಬಗ್ಗೆ ಅಪೊಲೋ ಆಸ್ಪತ್ರೆ ವೈದ್ಯ ಡಾ. ಅರುಣ್ ಕುಮಾರ್ ನಾಯ್ಕ್ ಮಾತನಾಡಿ, ಸಂಚಾರಿ ವಿಜಯ್ ಗೆ ಚಿಕಿತ್ಸೆ ಶುರುವಾಗಿ 36 …
Read More »ಗೋಕಾಕ ನಗರದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ ಜಾರಕಿಹೊಳಿ ಅವರ ನೇತೃತ್ವದಲ್ಲಿ ಪ್ರತಿಭಟನೆ:
ಗೋಕಾಕ: ಕೇಂದ್ರ ಸರ್ಕಾರ ದಿನದಿಂದ ದಿನಕ್ಕೆ ಪೆಟ್ರೊಲ್ ಡೀಸೆಲ್ ಬೆಲೆಯನ್ನು ಏರಿಸುತ್ತಲೆ ಇದೆ ಇದಕ್ಕೆ ರಾಜ್ಯಾದ್ಯಂತ ಕಾಂಗ್ರೇಸ್ ಪಕ್ಷದ ನಾಯಕರು ಪ್ರತಿಭಟನೆ ಗಳನ್ನ ಮಾಡುತ್ತಾ ಕೇಂದ್ರ ಸರ್ಕಾರಕ್ಕೆ ಬಿಸಿ ಮುಟ್ಟಿಸುವ ಕೆಲಸ ಮಾಡುತ್ತಿದ್ದಾರೆ. ಇಂದು ಗೋಕಾಕ ನಗರದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ ಜಾರಕಿಹೊಳಿ ಅವರ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿ ಕೊಂಡಿದ್ದು ಜನರು ಕೂಡ ಇದಕ್ಕೆ ಬೆಂಬಲ ನೀಡಿದ್ದಾರೆ. ಇನ್ನು ನರೇಂದ್ರ ಮೋದಿಯನ್ನ ವಿಭಿನ್ನ ರೀತಿಯಲ್ಲಿ ಟ್ರೊಲ್ ಕೂಡ ಮಾಡಿದ್ದಾರೆ. ಪೆಟ್ರೊಲ್ …
Read More »ತಂದೆಗೆ ಕಾಡಿದ ಅನಾರೋಗ್ಯ.. ವೈದ್ಯರ ಮೇಲೆ ಹಲ್ಲೆ ನಡೆಸಿದ್ದ ಪುತ್ರನ ಬಂಧನ
ಬೆಂಗಳೂರು: ನಗರದ ಖಾಸಗಿ ಆಸ್ಪತ್ರೆಯ ವೈದ್ಯರ ಮೇಲೆ ತಾಳ್ಮೆ ಕಳೆದುಕೊಂಡು ಹಲ್ಲೆ ನಡೆಸಿದ್ದ ರೋಗಿಯ ಪುತ್ರನನ್ನ ಬನ್ನೇರುಘಟ್ಟ ಪೊಲೀಸರು ಬಂಧಿಸಿದ್ದಾರೆ. ಆರೋಪಿಯ ತಂದೆ ಕೊರೊನಾ ಪಾಸಿಟಿವ್ ಬಂದು ಅಡ್ಮಿಟ್ ಆಗಿದ್ದರು. ಬಳಿಕ ಕೊರೊನಾ ನೆಗೆಟಿವ್ ಎಂದು ರಿಪೋರ್ಟ್ ಬಂದಿರುತ್ತದೆ. ಆದರೂ ಆರೋಗ್ಯದಲ್ಲಿ ಯಾವುದೇ ಚೇತರಿಕೆ ಕಂಡು ಬಂದಿಲ್ಲ. ಶ್ವಾಸಕೋಶಕ್ಕೆ ಹಾನಿಯಾಗಿರುವ ಹಿನ್ನೆಲೆಯಲ್ಲಿ ವೈದ್ಯರು ಚಿಕಿತ್ಸೆಯನ್ನ ಮುಂದುವರಿಸಿದ್ದರು. ಚಿಕಿತ್ಸೆ ಮುಂದುವರಿಸಿದ್ದ ವೈದ್ಯರು, ರೋಗಿಯ ಕಂಡೀಷನ್ ಬಗ್ಗೆ ವಿವರಿಸುತ್ತಿದ್ದಾಗ ತಾಳ್ಮೆ ಕಳೆದುಕೊಂಡು ಹಲ್ಲೆ …
Read More »ಹೃದಯ ತಜ್ಞ ಅಂತ್ಹೇಳಿ ಮಹಿಳೆಗೆ ಫೇಕ್ ಡಾಕ್ಟರ್ನಿಂದ ₹80 ಲಕ್ಷ ದೋಖಾ
ಬೆಂಗಳೂರು: ಹೃದಯ ತಜ್ಞ ಅಂತ ಮಹಿಳೆ ಮುಂದೆ ಪೋಸ್ ಕೊಟ್ಟಿದ್ದ ನಕಲಿ ವೈದ್ಯನೊಬ್ಬ ಬರೋಬ್ಬರಿ 80 ಲಕ್ಷ ರೂಪಾಯಿ ಹಣ ದೋಖಾ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಮಾಬಿಸ್ ಹಾರ್ಮನ್ ಎಂಬಾತ ಮಹಿಳೆಗೆ ವಂಚನೆ ಮಾಡಿದ್ದಾನೆ ಎಂಬ ಮಾಹಿತಿ ಲಭಿಸಿದೆ. ಗಂಡನನ್ನು ಕಳೆದುಕೊಂಡಿದ್ದ 50 ವರ್ಷದ ಮಹಿಳೆ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದರು. ಈ ಸಂದರ್ಭದಲ್ಲಿ ಇನ್ಸ್ಟಾಗ್ರಾಂನಲ್ಲಿ ಹೃದಯ ತಜ್ಞರ ಹುಡುಕಾಟ ನಡೆಸಿದ ಸಂದರ್ಭದಲ್ಲಿ ಮಹಿಳೆಗೆ ವಂಚಕ ಮಾಬಿಸ್ ಹಾರ್ಮನ್ ಪ್ರೊಫೈಲ್ …
Read More »ಸಂಚಾರಿ ವಿಜಯ್ ಕೋಮಾದಲ್ಲಿದ್ದಾರೆ, ಪರಿಸ್ಥಿತಿ ಗಂಭೀರ- ಅಪೋಲೋ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ
ಬೆಂಗಳೂರು: ನಟ ಸಂಚಾರಿ ವಿಜಯ್ ಅವರು ಕೋಮಾದಲ್ಲಿದ್ದು, ಪರಿಸ್ಥಿತಿ ತುಂಬಾ ಗಂಭೀರವಾಗಿದೆ. ಫುಲ್ ಲೈಫ್ ಸಪೋರ್ಟ್‍ನೊಂದಿಗೆ ನ್ಯೂರೋ ಐಸಿಯುನಲ್ಲಿದ್ದಾರೆ ಎಂದು ಅಪೋಲೋ ಆಸ್ಪತ್ರೆ ಮಾಹಿತಿ ನೀಡಿದೆ. ಸಂಚಾರಿ ವಿಜಯ್ ಅವರ ಕುರಿತು ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿರುವ ಭನ್ನೇರುಘಟ್ಟದ ರಸ್ತೆಯ ಅಪೋಲೋ ಆಸ್ಪತ್ರೆ, ವಿಜಯ್ ಅವರಿಗೆ ರಾತ್ರಿ 11.45ರ ಸುಮಾರಿಗೆ ರಸ್ತೆ ಅಪಘಾತವಾಗಿದ್ದು, ತಕ್ಷಣವೇ ಭನ್ನೇರುಘಟ್ಟ ರಸ್ತೆಯ ಅಪೋಲೋ ಆಸ್ಪತ್ರೆಗೆ ಕರೆತರಲಾಯಿತು. ಅವರನ್ನು ತುರ್ತು ವಿಭಾಗಕ್ಕೆ ದಾಖಲಿಸಿಕೊಂಡಾಗ ಪರಿಸ್ಥಿತಿ ತುಂಬಾ …
Read More »ಬೆಳಗಾವಿ: ಪ್ರವಾಹ ಸಾಧ್ಯತೆ, ಹೋದ ವರ್ಷಕ್ಕಿಂತ ಹೆಚ್ಚು ಆತಂಕ!
ಬೆಳಗಾವಿ: ಜಿಲ್ಲೆಯಲ್ಲಿ ಕೋವಿಡ್-19 ಸಂಕಷ್ಟದ ನಡುವೆಯೇ ಪ್ರವಾಹ ಪರಿಸ್ಥಿತಿಯೂ ಜನರನ್ನು ಬಾಧಿಸುವ ಸಾಧ್ಯತೆಯನ್ನು ಜಿಲ್ಲಾಡಳಿತ ಅಂದಾಜಿಸಿದೆ. ಪ್ರವಾಹದಿಂದ 323 ಗ್ರಾಮಗಳ ಜನರಿಗೆ ತೊಂದರೆ ಆಗಬಹುದು ಎಂದು ಗುರುತಿಸಲಾಗಿತ್ತು. ಈ ಮುಂಗಾರಿನಲ್ಲಿ ಗ್ರಾಮಗಳ ಸಂಖ್ಯೆ ಹೆಚ್ಚಾಗಿದೆ. 377 ಗ್ರಾಮಗಳಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಬಹುದು ಎಂಬ ವರದಿ ಬಂದಿದೆ. ಇದು ಸಾವಿರಾರು ಕುಟುಂಬಗಳು ಅತಂತ್ರವಾಗುವ ಆತಂಕವನ್ನೂ ತಂದೊಡ್ಡಿದೆ. 2019ರಲ್ಲಿ ಹಿಂದೆಂದೂ ಕಂಡು ಕೇಳರಿಯದ ರೀತಿಯಲ್ಲಿ ಉಂಟಾಗಿದ್ದ ಪ್ರವಾಹ ಹಾಗೂ ಅತಿವೃಷ್ಟಿಯಿಂದಾಗಿ 423 ಗ್ರಾಮ …
Read More »ರಾಜ್ಯದಲ್ಲಿರುವ ಬಾಂಗ್ಲಾ ಮತ್ತು ಪಾಕಿಸ್ತಾನದ ಅಕ್ರಮ ವಲಸಿಗರನ್ನು ಹೊರಕ್ಕೆ ಕಳುಹಿಸಲಾಗುವುದು : B.S.Y.
ಬೆಂಗಳೂರು : ಕರ್ನಾಟಕದಲ್ಲಿರುವ ಬಾಂಗ್ಲಾದೇಶ ಹಾಗೂ ಪಾಕಿಸ್ತಾನದ ಅಕ್ರಮ ವಲಸಿಗರನ್ನು ರಾಜ್ಯದಿಂದ ಹೊರಕ್ಕೆ ಕಳುಹಿಸಲಾಗುವುದು ಎಂದು ಸಿಎಂ ಯಡಿಯೂರಪ್ಪ ಹೇಳಿದರು. ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ರಾಜ್ಯದಲ್ಲಿರುವ ಬಾಂಗ್ಲಾದೇಶ ಹಾಗೂ ಪಾಕಿಸ್ತಾನದ ಅಕ್ರಮ ವಲಸಿಗರನ್ನು ಹೊರಕ್ಕೆ ಕಳುಹಿಸಲಾಗುವುದು, ಸಂಬಂಧಪಟ್ಟ ಅಧಿಕಾರಿಗಳಿಗೆ ಅಕ್ರಮ ವಲಸಿಗರನ್ನು ಪತ್ತೆ ಹಚ್ಚಲು ಸೂಚಿಸಲಾಗಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದರು. ಇತ್ತೀಚೆಗೆ ರಾಜ್ಯದಲ್ಲಿ ಹಲವು ಪ್ರಕರಣಗಳು ಬೆಳಕಿಗೆ ಬಂದಿದ್ದು, ಈ ಪ್ರಕರಣದಲ್ಲಿ ಬಾಂಗ್ಲಾದೇಶ ಹಾಗೂ ಪಾಕಿಸ್ತಾನದ …
Read More »ಕೋವಿಡ್-೧೯ ಸಾಂಕ್ರಾಮಿಕಕ್ಕೆ ಬಲಿಯಾದ ತಂದೆ-ತಾಯಿಯರ ಮಕ್ಕಳಿಗೆ ಶುಲ್ಕ ವಿನಾಯಿತಿ: R.C.U.
ಬೆಳಗಾವಿ – ರಾಣಿ ಚನ್ನಮ್ಮ ವಿಶ್ವವಿದ್ಯಾಲಯವು ಕೋವಿಡ್-೧೯ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಹಲವಾರು ರಚನಾತ್ಮಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಈ ಹಿನ್ನೆಲೆಯಲ್ಲಿ ವಿಶ್ವವಿದ್ಯಾಲಯದ ಎನ್.ಎಸ್.ಎಸ್. ಘಟಕವು ಸೋಂಕಿತರ ನೆರವಿಗೆ ನಿಂತಿರುವುದು, ಜನಕಲ್ಯಾಣ ಟ್ರಸ್ಟ್‌ದೊಂದಿಗೆ ಕೋವಿಡ್ ಕೇರ್ ಸೆಂಟರ್ ನಡೆಸುವ ಉಪಕ್ರಮದಲ್ಲಿ ಭಾಗಿಯಾಗಿರುವುದಲ್ಲದೆ ವಿಶ್ವವಿದ್ಯಾಲಯದ ದೀನದಯಾಳ ಅಧ್ಯಯನ ಪೀಠದ ವತಿಯಿಂದ ಮೂರು ದತ್ತು ಗ್ರಾಮಗಳಲ್ಲಿ ಆಹಾರ ಕಿಟ್‌ಗಳನ್ನು ವಿತರಿಸುವುದರ ಮೂಲಕ ತನ್ನ ಕಾಳಜಿಯನ್ನು ವ್ಯಕ್ತಪಡಿಸಿದೆ. ಅಲ್ಲದೆ, ವಿಶ್ವವಿದ್ಯಾಲಯದ ಅಧ್ಯಾಪಕರುಗಳು ಮನೆ ಬಾಗಿಲಿಗೆ ಉನ್ನತ ಶಿಕ್ಷಣ ಎನ್ನುವ …
Read More »19 ಜಿಲ್ಲೆಗಳಲ್ಲಿ ನಾಳೆಯಿಂದ ಏನೆಲ್ಲ ಲಭ್ಯ, ಏನೆಲ್ಲ ಅಲಭ್ಯ ,ನಾಳೆಯಿಂದ 19 ಜಿಲ್ಲೆಗಳು ಅನ್ ಲಾಕ್
ಬೆಂಗಳೂರು: ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ರಾಜ್ಯಾದ್ಯಂತ ಜಾರಿಯಾಗಿದ್ದ ಲಾಕ್ ಡೌನ್ ನಾಳೆಯಿಂದ 19 ಜಿಲ್ಲೆಗಳಲ್ಲಿ ತೆರವುಗೊಳ್ಳಲಿದ್ದು, ಅನ್ ಲಾಕ್ ಪ್ರಕ್ರಿಯೆ ಆರಂಭವಾಗಲಿದೆ. ಆದರೆ 11 ಜಿಲ್ಲೆಗಳಲ್ಲಿ ಜೂನ್ 21ರವರೆಗೆ ಲಾಕ್ ಡೌನ್ ಮುಂದುವರೆಯಲಿದೆ. ಸೋಂಕಿತರ ಸಂಖ್ಯೆ ಹೆಚ್ಚಿರುವ ಜಿಲ್ಲೆಗಳಾದ ಬೆಳಗಾವಿ, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಮೈಸೂರು, ಚಾಮರಾಜನಗರ, ಹಾಸನ, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಮಂಡ್ಯ ಹಾಗೂ ಕೊಡಗು ಜಿಲ್ಲೆಗಳಲ್ಲಿ ಒಂದು ವಾರಗಳ ಕಾಲ ಲಾಕ್ ಡೌನ್ ಮುಂದುವರೆಯಲಿದೆ. …
Read More »
Laxmi News 24×7