Breaking News
Home / ಜಿಲ್ಲೆ (page 698)

ಜಿಲ್ಲೆ

ರಾತ್ರೋರಾತ್ರಿ ಎಡಿಜಿಪಿ ಶ್ರೇಣಿಯ IPS ಅಧಿಕಾರಿ ಡಾ.ಪಿ. ರವೀಂದ್ರನಾಥ್ ಕಂಟ್ರೋಲ್ ರೂಂಗೆ ತೆರಳಿ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.

ಬೆಂಗಳೂರು: ರಾತ್ರೋರಾತ್ರಿ ಎಡಿಜಿಪಿ ಶ್ರೇಣಿಯ IPS ಅಧಿಕಾರಿ ಡಾ.ಪಿ. ರವೀಂದ್ರನಾಥ್ ಕಂಟ್ರೋಲ್ ರೂಂಗೆ ತೆರಳಿ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ರಾತ್ರಿ 10.30ಕ್ಕೆ ಕಂಟ್ರೋಲ್ ರೂಂಗೆ ತೆರಳಿ ಅಲ್ಲಿದ್ದ ಸಿಬ್ಬಂದಿ ಕೈಗೆ ರವೀಂದ್ರನಾಥ್ ರಾಜಿನಾಮೆ ಪತ್ರ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅಸಮಾಧಾನ ಭುಗಿಲೆದ್ದಿರುವುದು ಗೋಚರವಾಗುತ್ತಿದೆ. ಸೀನಿಯಾರಿಟಿ ಇಲ್ಲದಿದ್ದರೂ ಸುನಿಲ್ ಕುಮಾರ್‌ಗೆ ಎಡಿಜಿಪಿ ಶ್ರೇಣಿಯಿಂದ ಡಿಜಿಪಿ ಶ್ರೇಣಿಗೆ ಬಡ್ತಿ ನೀಡಿರುವುದಕ್ಕೆ ರವೀಂದ್ರನಾಥ್ ಅಸಮಧಾನಗೊಂಡು ಈ ರೀತಿ ನಿರ್ಧಾರ …

Read More »

ಬಾಲ ಕಾರ್ಮಿಕರನ್ನು ರಕ್ಷಿಸಿದ್ದಾರೆ. ಮಲ್ಪೆ ಮೀನುಗಾರಿಕಾ ಬಂದರಲ್ಲಿ ಮೀನು ಹೆಕ್ಕುತ್ತಿದ್ದ 17 ಮಕ್ಕಳು ಇಲಾಖೆ ರಕ್ಷಿಸಿದೆ.

ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಮಕ್ಕಳ ರಕ್ಷಣಾ ಘಟಕ ಕಾರ್ಮಿಕ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸಿ ಒಟ್ಟು 17 ಬಾಲ ಕಾರ್ಮಿಕರನ್ನು ರಕ್ಷಿಸಿದ್ದಾರೆ. ಮಲ್ಪೆ ಮೀನುಗಾರಿಕಾ ಬಂದರಲ್ಲಿ ಮೀನು ಹೆಕ್ಕುತ್ತಿದ್ದ 17 ಮಕ್ಕಳು ಇಲಾಖೆ ರಕ್ಷಿಸಿದೆ. ರಕ್ಷಿಸಲ್ಪಟ್ಟ ಬಾಲಕಾರ್ಮಿಕರೆಲ್ಲ ಕೊಪ್ಪಳ, ಬಳ್ಳಾರಿ ಮೂಲದವರು. ಈ ಜಂಟಿ ಕಾರ್ಯಾಚರಣೆಗೆ ಸಾರ್ವಜನಿಕ ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ ಸಾಥ್ ನೀಡಿದೆ. ಹಾಗೂ ಮಕ್ಕಳ ಸಹಾಯವಾಣಿ ನಾಗರಿಕ ಸೇವಾ ಟ್ರಸ್ಟ್ ಕಾರ್ಯಕರ್ತರು ರಕ್ಷಣೆಗೆ …

Read More »

ಎಂಜಿನಿಯರ್ ಬನ್ ಗಯಾ ಚಾಯ್‍ವಾಲಾ – ಬದುಕಿಗೆ ದಾರಿ ತೋರಿಸಿದ ಟೀ ಬ್ಯುಸಿನೆಸ್

ಬಾಗಲಕೋಟೆ: ಸದ್ಯ ದೇಶದ ಅತಿ ದೊಡ್ಡ ಸಮಸ್ಯೆಗಳಲ್ಲಿ ಒಂದು ನಿರುದ್ಯೋಗ. ಪ್ರಧಾನಿ ಮೋದಿಯವರೂ ನಿರುದ್ಯೋಗ ಸಮಸ್ಯೆಗೆ ಯುವಕರಿಗೆ ಪಕೋಡ ಮಾರಿ ಅಂತ ಕರೆ ನೀಡಿದರು. ಆದರೆ ಉತ್ತರ ಕರ್ನಾಟಕದ ಯುವಕನೊಬ್ಬ ತನ್ನ ಓದಿಗೆ ತಕ್ಕ ಕೆಲಸವೇ ಬೇಕೆಂದು ಸಮಯ ವ್ಯರ್ಥ ಮಾಡದೇ ಭಿನ್ನವಾಗಿ ಯೋಚಿಸಿ ಯಶಸ್ವಿಯಾಗಿದ್ದಾನೆ. ಎಂಜಿನಿಯರ್ ಬನ್ ಗಯಾ ಚಾಯ್ ವಾಲಾ. ಅರೇ ಇದೇನಿದು ಚಾಯ್ ಅಂಗಡಿ ಹೆಸರು ಡಿಫರೆಂಟ್ ಆಗಿದೆ. ಹೌದು ಅಲ್ಲೇ ಇರೋದು ಟ್ವಿಸ್ಟ್. ಅಮೀರ್ …

Read More »

ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಮೂವರು ರೌಡಿಶೀಟರ್​ಗಳನ್ನು ಸೇರಿ 10 ಜನರನ್ನು ಬಂಧಿಸಿದ್ದಾರೆ.

ಬೆಂಗಳೂರು: ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಮೂವರು ರೌಡಿಶೀಟರ್​ಗಳನ್ನು ಸೇರಿ 10 ಜನರನ್ನು ಬಂಧಿಸಿದ್ದಾರೆ. ರೌಡಿಶೀಟರ್​ಗಳಾದ ಕಾರ್ತಿಕ್ ಅಲಿಯಾಸ್ ಚಪ್ಪರ್, ಹುಚ್ಚೆಗೌಡ ಅಲಿಯಾಸ್ ಹಂದಿ ಹುಚ್ಚ, ಹೇಮಂತ್ ಅಲಿಯಾಸ್ ಮಿಂಡ್ರಿ ಸೇರಿ 10 ಜನರು ಅರೆಸ್ಟ್ ಆಗಿದ್ದಾರೆ. ಅರೆಸ್ಟ್ ಆದ ಆರೋಪಿಗಳು ದರೋಡೆಗೆ ಸಂಚು ರೂಪಿಸಿದ್ದರು. ಮಾರಕಾಸ್ತ್ರಗಳೊಂದಿಗೆ ಅಟ್ಯಾಕ್​ಗೆ ಸಜ್ಜಾಗಿದ್ರು. ಈ ಬಗ್ಗೆ ಖಚಿತ ಮಾಹಿತಿ ತಿಳಿಯುತ್ತಿದ್ದಂತೆ ಜ್ಞಾನ ಭಾರತಿ ಪೊಲೀಸ್ ಠಾಣೆ ಹಾಗೂ ವಿಜಯನಗರ ಠಾಣಾ ವ್ಯಾಪ್ತಿಯಲ್ಲಿ …

Read More »

ನಟಿ ಮೇಘನಾ ರಾಜ್ ಸರ್ಜಾ ಆಸ್ಪತ್ರೆಯಿಂದ ಡಿಸ್ಚಾರ್ಜ್ಮೂರು ತಿಂಗಳ ನಂತರ ಅದ್ಧೂರಿಯಾಗಿ ನಾಮಕರಣ:ತಂದೆ ಸುಂದರ್ ರಾಜ್

ಬೆಂಗಳೂರು: ನಟಿ ಮೇಘನಾ ರಾಜ್ ಸರ್ಜಾ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಮೂರು ತಿಂಗಳ ನಂತರ ಅದ್ಧೂರಿಯಾಗಿ ನಾಮಕರಣ ಮಾಡಲಾಗುವುದು ಎಂದು ಮೇಘನಾ ತಂದೆ ಸುಂದರ್ ರಾಜ್ ಹೇಳಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಸುಂದರ್ ರಾಜ್, ತಿರುಪತಿ ತಿಮ್ಮಪ್ಪನ ಹರಕೆಯಿಂದ ನನ್ನ ಮೊಮ್ಮಗ ಹುಟ್ಟಿದ್ದಾನೆ. ಕನ್ನಡದ ನೆಲದಲ್ಲಿ ದಸರಾ ಹಬ್ಬದ ವೇಳೆ ಮೊಮ್ಮಗು ಹುಟ್ಟಿರೋದು ಶುಭ ಸೂಚಕ. ನವೆಂಬರ್ 1 ರಂದು ಮೇಘನಾ ರಾಜ್ ಎಲ್ಲರ ಜೊತೆ ಮಾತನಾಡುತ್ತಾರೆ. ಕೊರೊನಾ ಕಾಲದಿಂದಾಗಿ …

Read More »

ಭಾರೀ ಸಂಚಲನ ಸೃಷ್ಟಿಸಿದ್ದ ಐಎಂಎ ಬಹುಕೋಟಿ ವಂಚನೆ,ಮನ್ಸೂರ್ ಖಾನ್‍ಗೆ ಹೈಕೋರ್ಟ್ ಜಾಮೀನು ನೀಡಿದೆ.

ಬೆಂಗಳೂರು: ಭಾರೀ ಸಂಚಲನ ಸೃಷ್ಟಿಸಿದ್ದ ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಮನ್ಸೂರ್ ಖಾನ್‍ಗೆ ಹೈಕೋರ್ಟ್ ಏಕಸದಸ್ಯ ಪೀಠ ಜಾಮೀನು ನೀಡಿದೆ. ಮನ್ಸೂರ್ ಖಾನ್ ವಿರುದ್ಧ ಇಡಿ ದಾಖಲಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾ.ಶ್ರೀನಿವಾಸ್ ಹರೀಶ್ ಕುಮಾರ್ ಅವರಿದ್ದ ಏಕಸದಸ್ಯ ಪೀಠ ಕೆಲ ಷರತ್ತುಗಳನ್ನು ವಿಧಿಸಿ ಜಾಮೀನು ಮಂಜೂರು ಮಾಡಿದೆ. ಅಧೀನ ನ್ಯಾಯಾಲಯ ಸೂಚಿಸಿದಾಗ ವಿಚಾರಣೆಗೆ ಹಾಜರಾಗಬೇಕು, ಯಾವುದೇ ಕಾರಣಕ್ಕೂ ಸಾಕ್ಷ್ಯ ನಾಶ ಹಾಗೂ ಸಾಕ್ಷಿಗಳಿಗೆ ಬೆದರಿಕೆ ಹಾಕಬಾರದು. …

Read More »

ನಿವೃತ್ತ ಪ್ರಾಂಶುಪಾಲರ ಹತ್ಯೆಗೆ ಸುಪಾರಿ ನೀಡಿದ ಆರೋಪದ ಮೇಲೆ ಖ್ಯಾತ ಗಾಯಕಿ ಅನನ್ಯ ಭಟ್​ ತಂದೆ

ಮೈಸೂರು: ನಿವೃತ್ತ ಪ್ರಾಂಶುಪಾಲರ ಹತ್ಯೆಗೆ ಸುಪಾರಿ ನೀಡಿದ ಆರೋಪದ ಮೇಲೆ ಖ್ಯಾತ ಗಾಯಕಿ ಅನನ್ಯ ಭಟ್​ ತಂದೆ ವಿಶ್ವನಾಥ್​​ ಭಟ್​​ ಅವರನ್ನು ಮೈಸೂರು ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ಭೇದಿಸುವಲ್ಲಿ ಯಶಸ್ವಿಯಾದ ಪೊಲೀಸರು ಮೂವರು ಶಿಕ್ಷಕರು ಸೇರಿ ಐದು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಸಪ್ಟೆಂಬರ್​ 20ರಂದು ಮೈಸೂರಿನ ಶರದಾದೇವಿ ನಗರದಲ್ಲಿ ನಿವೃತ್ತ ಪ್ರಾಂಶುಪಾಲರಾದ ಪರಶಿವಮೂರ್ತಿ ಅವರ ಹತ್ಯೆ ಮಾಡಲಾಗಿತ್ತು. ಸದ್ಯ ಆರೋಪಿ ವಿಶ್ವನಾಥ್ ಭಟ್ ಪರಶಿವಮೂರ್ತಿ ಕೊಲೆಗೆ ₹7 ಲಕ್ಷ ಸುಪಾರಿ …

Read More »

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಿಜೆಪಿಗೆ ಧಮ್ ಇದೆಯಾ ಎಂಬ ಪ್ರಶ್ನೆ ಕಮಲ ನಾಯಕರನ್ನು ಕೆರಳಿಸಿದೆ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಿಜೆಪಿಗೆ ಧಮ್ ಇದೆಯಾ ಎಂಬ ಪ್ರಶ್ನೆ ಕಮಲ ನಾಯಕರನ್ನು ಕೆರಳಿಸಿದ್ದು, ಸಿದ್ದು ವಿರುದ್ಧ ವಾಗ್ದಾಳಿಗಳ ಸುರಿಮಳೆಗಳೇ ಬರುತ್ತಿದೆ. ನಗರದ ಬಿಜೆಪಿ ಕಚೇರಿಯಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕಂದಾಯ ಸಚಿವ ಆರ್ ಅಶೋಕ್, ಸಿದ್ದರಾಮಯ್ಯ ಬಿಜೆಪಿಗೆ ಧಮ್ ಇದೆಯಾ ಅಂತ ಕೇಳ್ತಾರೆ. ನಮಗೆ ಧೈರ್ಯ ಇರೋದಕ್ಕೆ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಆಗ್ತಿದೆ. 370 ವಿಧಿ ರದ್ದು ಮಾಡಿದ್ದು ಬಿಜೆಪಿ, ಇದು ಬಿಜೆಪಿಯ ಧೈರ್ಯ. …

Read More »

ಸಚಿವ ರಮೇಶಜಾರಕಿಹೊಳಿ ಅವರಿಗೆ ಕಿಂಗ್ ಆಗುವ ಅವಕಾಶವಿತ್ತು. ಆದ್ರೆ ಅವರು ಕಿಂಗ್ ಮೇಕರ್ ಆಗಿದ್ದಾರೆ

ಬೆಳಗಾವಿ: ಸಚಿವ ರಮೇಶಜಾರಕಿಹೊಳಿ  ಅವರಿಗೆ ಕಿಂಗ್ ಆಗುವ ಅವಕಾಶವಿತ್ತು. ಆದ್ರೆ ಅವರು ಕಿಂಗ್ ಮೇಕರ್ ಆಗಿದ್ದಾರೆ ಎಂದು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ  ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು. ಇಲ್ಲಿನ  ಸುವರ್ಣಸೌಧ ಎದುರು ಲಿಂಗಾಯತ ಸಮುದಾಯವನ್ನು 2ಎ ಗೆ ಸೇರಿಸುವಂತೆ ಆಗ್ರಹಿಸಿ ಹಮ್ಮಿಕೊಂಡಿದ್ದ ಸತ್ಯಾಗ್ರಹ ವೇಳೆ ಮನವಿ ಸ್ವೀಕರಿಸಲು ಸ್ಥಳಕ್ಕೆ ಸಚಿವರು ಬಂದಿದ್ದ ವೇೆಳೆ ಮೃತ್ಯುಂಜಯ ಸ್ವಾಮೀಜಿ ಮಾತನಾಡಿದರು. ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಲು ರಮೇಶ ಜಾರಕಿಹೊಳಿ ಅವರು ದೊಡ್ಡ …

Read More »

ಯಡಿಯೂರಪ್ಪ ಮತ್ತು ನರೇಂದ್ರ ಮೋದಿ ಅವರೇನು ಎಳೆ ಕಡಸುಗಳಾ ಎಂದು ಪ್ರಶ್ನೆ ಪ್ರಶ್ನಿಸಿ ಟ್ವೀಟ್ ಮಾಡಿದ್ದಾರೆ.ಸಿದ್ದರಾಮಯ್ಯ

ಬೆಂಗಳೂರು: ಶಿರಾ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ ಮುದಿ ಎತ್ತು ಎಂದು ಹೇಳಿದ್ದ ಬಿಜೆಪಿಯ ನಾಯಕರ ಹೇಳಿಕೆಗೆ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಟಿ.ಬಿ.ಜಯಚಂದ್ರ ಅವರಿಗೆ ವಯಸ್ಸಾಗಿದೆ ಅಂದ್ರೆ ಬಿ.ಎಸ್ ಯಡಿಯೂರಪ್ಪ ಮತ್ತು ನರೇಂದ್ರ ಮೋದಿ ಅವರೇನು ಎಳೆ ಕಡಸುಗಳಾ ಎಂದು ಪ್ರಶ್ನೆ ಪ್ರಶ್ನಿಸಿ ಟ್ವೀಟ್ ಮಾಡಿದ್ದಾರೆ. ನಮ್ಮ ಪಕ್ಷದ ಅಭ್ಯರ್ಥಿ ಜಯಚಂದ್ರ ಅವರನ್ನು ಬಿಜೆಪಿ ನಾಯಕರು ಮುದಿ ಎತ್ತು ಎಂದು ಹೀಗಳೆದಿದ್ದಾರೆ. ಹಾಗಾದರೆ ಬಿ.ಎಸ್ ಯಡಿಯೂರಪ್ಪ …

Read More »