Breaking News

ಜಿಲ್ಲೆ

17 ವರ್ಷದ ಮಗಳನ್ನು ಕೊಂದು ತಾಯಿ ಆತ್ಮಹತ್ಯೆ

ಬೆಂಗಳೂರು: 17 ವರ್ಷದ ಮಗಳನ್ನು  ಕೊಂದು ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವೈಟ್‌ಫೀಲ್ಡ್  ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 40 ವರ್ಷದ ಸುವರ್ಣ ಮಗಳನ್ನ ಕೊಲೆ ಮಾಡಿ ಆತ್ಮಹತ್ಯೆ ಶರಣಾಗಿರುವ ತಾಯಿ. ಕಾರುಣ್ಯ ತಾಯಿಯಿಂದ ಹತ್ಯೆಯಾದ ಮಗಳು. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ವೈಟ್ಫೀಲ್ಡ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ವೈಟ್‌ಫೀಲ್ಡ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More »

ನೋಡಲು ತನ್ನಂತೆ ಇಲ್ಲ ಎಂದು ಮಗನನ್ನೇ ಕೊಲೆಗೈದ ತಂದೆ

ವಿಜಯಪುರ: ಮಗ (Son) ನೋಡಲು ತನ್ನಂತೆ ಇಲ್ಲ ಎಂಬ ಕಾರಣಕ್ಕೆ ಮಗನನ್ನೇ ಪಾಪಿ ತಂದೆ ಕೊಲೆ ಮಾಡಿರುವ ಘಟನೆ ವಿಜಯಪುರದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ವಿಜಯಪುರ ಜಿಲ್ಲೆಯ ನಾಗಠಾಣ ಗ್ರಾಮದ ಸಿದ್ದಾರ್ಥ ಮಲ್ಲಿಕಾರ್ಜುನ ಅರಕೇರಿ (6) ಹತ್ಯೆಯಾದ ಬಾಲಕ. ಮಲ್ಲಿಕಾರ್ಜುನ ಅರಕೇರಿ ಮಗನನ್ನೇ ಹತ್ಯೆ ಮಾಡಿದ ತಂದೆ. ಕಳೆದ ಮಾರ್ಚ್ 16ರಂದು ಪುತ್ರನನ್ನು ಕೃಷ್ಣಾ ನದಿಗೆ ತಳ್ಳಿ ಹತ್ಯೆ ಮಾಡಿದ್ದಾನೆ ಮಲ್ಲಿಕಾರ್ಜುನ. 6 ವರ್ಷದ ಪುತ್ರ ಸಿದ್ದಾರ್ಥ ನೋಡಲು …

Read More »

ವಚನಾನಂದ ಸ್ವಾಮೀಜಿ ಸತ್ಯಹರಿಶ್ಚಂದ್ರರಲ್ಲ, ಎರಡೂ ಟ್ರಸ್ಟ್‌ಗಳನ್ನು ಖಾಸಗಿ ಆಸ್ತಿ ಮಾಡ್ಕೊಂಡಿದ್ದಾರೆ – ಯತ್ನಾಳ್

ವಿಜಯಪುರ: ವಚನಾನಂದ ಸ್ವಾಮೀಜಿ ಸತ್ಯಹರಿಶ್ಚಂದ್ರರಲ್ಲ, ಎರಡೂ ಟ್ರಸ್ಟ್‌ಗಳನ್ನು ಖಾಸಗಿ ಆಸ್ತಿ ಮಾಡ್ಕೊಂಡಿದ್ದಾರೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್  ಕಿಡಿಕಾರಿದರು. ಜಿಲ್ಲೆಯಲ್ಲಿ ಮಾಧ್ಯಮದವರೊಂದಿಗೆ ದಾವಣಗೆರೆ ಪಂಚಮಸಾಲಿ ಪೀಠದ ಬಗ್ಗೆ ಮಾತನಾಡಿದ ಅವರು, ಎರಡು ಪೀಠದ ಟ್ರಸ್ಟ್‌ಗಳು ನಂಬಿಕೆ ಕಳೆದುಕೊಂಡಿವೆ. ವಚನಾನಂದ ಸ್ವಾಮೀಜಿ ಸತ್ಯಹರಿಶ್ಚಂದ್ರರಲ್ಲ. ಎರಡು ಕಡೆ ಇದೇ ನಡೆಯುತ್ತಿದೆ. ಇದನ್ನ ಖಾಸಗಿ ಆಸ್ತಿ ಮಾಡಿಕೊಂಡವರಿದ್ದಾರೆ. ಇವರಿಂದ ಸಮಾಜಕ್ಕೆ ನ್ಯಾಯ ಸಿಗಲ್ಲ. ಪ್ರಾಮಾಣಿಕರು, ಸಮಾಜಕ್ಕಾಗಿ ಕೆಲಸ ಮಾಡುವವರು ಯಾರು ಟ್ರಸ್ಟ್‌ನಲ್ಲಿ …

Read More »

ಧಾರವಾಡದಲ್ಲಿ ಹೋರಾಟಕ್ಕೆ ಮುಂದಾಗಿದ್ದ ಉದ್ಯೋಗಾಕಾಂಕ್ಷಿಗಳು ಪೊಲೀಸರ ವಶಕ್ಕೆ

ಧಾರವಾಡ: ಖಾಲಿ ಇರುವ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡುವಂತೆ ಆಗ್ರಹಿಸಿ ಅಂಬೇಡ್ಕರ್‌ ಜಯಂತಿ ದಿನವಾದ ಇಂದು ಧಾರವಾಡದ ಜಯನಗರದಲ್ಲಿ ಪ್ರತಿಭಟನೆ  ನಡೆಸಿದ ಉದ್ಯೋಗಾಕಾಂಕ್ಷಿಗಳನ್ನ ಪೊಲೀಸರು ವಶಕ್ಕೆ ಪಡೆದ್ದಾರೆ. ಸಮಾನ ಮನಸ್ಕರ ತಂಡ, ರೈತ ಸಂಘಟನೆ ಹಾಗೂ ವಿದ್ಯಾರ್ಥಿ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಅದಕ್ಕಾಗಿ ಪೊಲೀಸರ ಅನುಮತಿಯನ್ನೂ ಕೇಳಿದ್ದರು. ಅಂಬೇಡ್ಕರ್ ಜಯಂತಿ ಹಿನ್ನೆಲೆ ಪೊಲೀಸರು ಪ್ರತಿಭಟನೆಗೆ ಅವಕಾಶ ನೀಡಿರಲಿಲ್ಲ. ಹೀಗಿದ್ದರೂ ಅನೇಕರು ಧಾರವಾಡದ  ಜಯನಗರದಲ್ಲಿ ಪ್ರತಿಭಟನೆ ನಡೆಸಿದ್ದರು. ಇದರಿಂದ ಪೊಲೀಸರು …

Read More »

ಖಾಸಗಿ ಮಾದರಿಯಲ್ಲಿ ಬಡಾವಣೆ ನಿರ್ಮಾಣ ಯೋಜನೆ: ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ: ರಾಜ್ಯದ ಪರಿಶಿಷ್ಟ ಜಾತಿ/ಪಂಗಡಗಳ ಜನರಿಗೆ ಖಾಸಗಿ ಬಡಾವಣೆ ಮಾದರಿಯಲ್ಲಿ ಸಕಲ ಮೂಲಸೌಕರ್ಯ ಹೊಂದಿರುವ ಬಡಾವಣೆ ಅಭಿವೃದ್ಧಿಪಡಿಸಿ ನೀವೇಶನಗಳನ್ನು ಹಂಚಿಕೆ ಮಾಡಲು “ಬುದ್ಧ, ಬಸವ, ಅಂಬೇಡ್ಕರ್ ನಿವೇಶನ ಹಂಚಿಕೆ” ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದು ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು. ಡಾ.ಬಾಬಾಸಾಹೇಬ್ ಜನ್ಮದಿನಾಚರಣೆ ಅಂಗವಾಗಿ ನಗರದ ಡಾ.ಅಂಬೇಡ್ಕರ್ ಉದ್ಯಾನದಲ್ಲಿ ಡಾ.ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ದೇಶದಲ್ಲೇ ಮೊದಲ …

Read More »

ಎಂಟು ವರ್ಷದ ಊರು ಬಿಟ್ಟು ಹುಬ್ಬಳ್ಳಿಗೆ ಹಾರಿಬಂದ ಒಂದೇ ಬಡಾವಣೆಯ ಜೋಡಿ ಹಕ್ಕಿ

ಹುಬ್ಬಳ್ಳಿ: ಅವರಿಬ್ಬರು ಒಂದೇ ಬಡಾವಣೆಯವರು. ಹೀಗಾಗಿ ಇಬ್ಬರು ಕಳೆದ ಎಂಟು ವರ್ಷಗಳಿಂದ ಪ್ರೀತಿಸುತ್ತಿದ್ದರು. ಇಬ್ಬರ ಜಾತಿ ಬೇರೆ ಬೇರೆಯಾಗಿದ್ದರು, ಅವರ ಪ್ರೀತಿಗೆ ಜಾತಿ ಅಡ್ಡಿಯಾಗಿರಲಿಲ್ಲ. ಮದುವೆಯಾಗಿ ಸುಂದರ ಸಂಸಾರ ಕಟ್ಟಿಕೊಳ್ಳುವ ಕನಸು ಕಂಡಿದ್ದರು. ಆದರೆ ಅಂತರ್ಜಾತಿ ವಿವಾಹಕ್ಕೆ  ಯುವತಿ ಹೆತ್ತವರು ವಿರೋಧ ವ್ಯಕ್ತಪಡಿಸಿದ್ದು, ಹೀಗಾಗಿ ತಮಗೆ ರಕ್ಷಣೆಬೇಕು ಅಂತ ಪ್ರೇಮಿಗಳು ಕೊಪ್ಪಳದಿಂದ ಹುಬ್ಬಳ್ಳಿಗೆ ಓಡಿ ಬಂದಿದ್ದಾರೆ. ನಾಗರಾಜ್ ಮತ್ತು ಶೈಲಜಾ ಕೊಪ್ಪಳ ನಗರದ ಮಿಟ್ಟಿಗೇರಿ ಬಡಾವಣೆ ನಿವಾಸಿಗಳು. ಕಳೆದ ರಾತ್ರಿ ಬಸ್ ಹತ್ತಿಕೊಂಡು …

Read More »

ಬೆಳಗಾವಿಯಲ್ಲಿ ಏಪ್ರಿಲ್ 14 ರಂದು ಮದ್ಯ ಮಾರಾಟ ನಿಷೇಧ: ಪೊಲೀಸ್ ಆಯುಕ್ತರ ಆದೇಶ

ವಿಶ್ವರತ್ನ ಡಾ . ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಣೆಯ ಹಿನ್ನೆಲೆಯಲ್ಲಿ ಬೆಳಗಾವಿ ನಗರ ಮತ್ತು ತಾಲೂಕಿನಾದ್ಯಂತ ಮುಂಜಾಗ್ರತಾ ಕ್ರಮವಾಗಿ ಮದ್ಯ ಮಾರಾಟವನ್ನು ನಿಷೇಧಿಸಿ ಪೊಲೀಸ್ ಆಯುಕ್ತರು ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ. ಬೆಳಗಾವಿ ನಗರದಲ್ಲಿ ಏಪ್ರಿಲ್ 14 ರಂದು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿಯನ್ನು ಆಚರಿಸಲಾಗುತ್ತಿದ್ದು, ಈ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು …

Read More »

ಸಂಸತ್ತು,ಶಾಸಕಾಂಗ ಸಭೆಗಳಲ್ಲಿ ಮಹಿಳೆಯರ ಸಂಖ್ಯೆ ಹೆಚ್ಚಳ

ಬೆಳಗಾವಿ:ಕೇಂದ್ರದಲ್ಲಿರುವ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರವು ಮಹಿಳಾ ಮೀಸಲಾತಿ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಸಂಸತ್ ಹೊಸ ಇತಿಹಾಸ ಸೃಷ್ಟಿಸಲು ಸಜ್ಜಾಗಿದೆ ಎಂದು ಶಾಸಕಿ ಶಶಿಕಲಾ ಜೊಲ್ಲೆ ಹೇಳಿದರು. ನಗರದ ಪ್ರವಾಸಿ ಮಂದಿರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಸಂಕಲ್ಪದಿಂದಾಗಿ ಕೇಂದ್ರ ಸರ್ಕಾರವು ನಾರಿ ಶಕ್ತಿ ವಂದನ ಅಧಿನಿಮಯ ಜಾರಿಗೊಳಿಸುವ ಮೂಲಕ ಗತಕಾಲದ ಕನಸುಗಳನ್ನು ಸಾಕಾರಗೊಳ್ಳಿಸುವುದು ಅಲ್ಲದೆ, ಭವಿಷ್ಯದ ಸಂಕಲ್ಪ ಈಡೇರಲಿವೆ ಎಂದರು. 2023ರಲ್ಲಿ …

Read More »

ಸುವರ್ಣ ಘಳಿಗೆಯಲ್ಲಿ ಜೀವ ಉಳಿಸುವುದು ಮಹತ್ಕಾರ್ಯ

ಬೆಳಗಾವಿ: ಅಫಘಾತದ ಸಂದರ್ಭದಲ್ಲಿ ರಕ್ತಸ್ರಾವ ಅಧಿಕವಾಗುವುದರಿಂದ ಸುವರ್ಣ ಘಳಿಗೆಯಲ್ಲಿ ವೈದ್ಯರು ಕಾರ್ಯಪ್ರವೃತ್ತರಾಗುವುದು ಬಹಳ ಮುಖ್ಯ. ವೈಜ್ಞಾನಿಕವಾಗಿ ವೈದ್ಯಕೀಯ ಸೇವೆಯೊಂದಿಗೆ, ಜೀವ ಉಳಿಸುವ ಮಹತ್ಕಾರ್ಯವನ್ನೂ ಅತ್ಯಂತ ಶೀಘ್ರದಲ್ಲಿ ನೆರವೇರಿಸಬೇಕು ಎಂದು ಕೆಎಲ್‌ಇ ಅಕಾಡೆಮಿ ಆಫ್ ಹೈಯರ್‌ಎಜ್ಯುಕೇಶನ ಆ್ಯಂಡ್ ರಿಸರ್ಚ್ ಉಪಕುಲಪತಿ ಡಾ.ಸಂದೀಪ ಶ್ರೀವಾತ್ಸವ ಹೇಳಿದರು. ಕೆಎಲ್ಇ ಅಕಾಡೆಮಿ ಆಫ್ ಹೈಯರ ಎಜ್ಯುಕೇಶನ್ ಆ್ಯಂಡ್ ರಿಸರ್ಚ್‌ನ ಜವಾಹರಲಾಲ ನೆಹರು ವೈದ್ಯಕೀಯ ಮಹಾವಿದ್ಯಾಲಯದ ಸೈಂಟಿಫಿಕ್ ಸೊಸೈಟಿಯ 44ನೇ ವಾರ್ಷಿಕ ಮುಂದುವರೆದ ವೈದ್ಯಕೀಯ ಶಿಕ್ಷಣ ಕಾರ್ಯಾಗಾರದ …

Read More »

ಎಇಇ ಮನೆ ಮೇಲೆ ಲೋಕಾಯುಕ್ತ ದಾಳಿ

ಬೆಳಗಾವಿ: ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಹಿನ್ನೆಲೆ ಬೆಳಗಾವಿ ಜಿಲ್ಲಾ ನಗರಾಭಿವೃದ್ಧಿ ಕೋಶ ಸಹಾಯಕ ಕಾರ್ಯಪಾಲಕ ಅಭಿಯಂತರ (ಎಇಇ)   ಎ.ಬಿ. ರಜಪೂತ ನಿವಾಸ, ಕಚೇರಿ ಸೇರಿ 7 ಸ್ಥಳದ ಮೇಲೆ ಮಂಗಳವಾರ ದಾಳಿ ನಡೆಸಿದ್ದ ಲೋಕಾಯುಕ್ತ ಅಧಿಕಾರಿಗಳ ಪರಿಶೀಲನೆ ಶುಕ್ರವಾರ ಮೂರನೇ 14ಕೋಟಿ ರೂ.ಗಿಂತ ಆಸ್ತಿ ಪತ್ತೆಯಾಗಿದೆ. ಬೆಳಗಾವಿ ಮಹಾನಗರದಲ್ಲಿ 3ಮನೆ, ಸವದತ್ತಿ, ಹುಕ್ಕೇರಿ ಹಾಗೂ ಹುಬ್ಬಳ್ಳಿ ನಗರದಲ್ಲಿ ಐದು ನಿವೇಶನ, 5.960 ಕೆಜಿ ಚಿನ್ನ ಹಾಗೂ ವಜ್ರದ …

Read More »