Breaking News

ಜಿಲ್ಲೆ

ಕಾವೇರಿ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

ಚಾಮರಾಜನಗರ: ಕಾವೇರಿ ನದಿಗೆ ಹಾರಿ ಮಹಿಳೆಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ಕೊಳ್ಳೇಗಾಲ ತಾಲೂಕಿನ ಸತ್ತೇಗಾಲ ಹ್ಯಾಂಡ್ ಪೋಸ್ಟ್ ಬಳಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ಮಹಿಳೆಯನ್ನು ರಶ್ಮಿ (39) ಎಂದು ಗುರುತಿಸಲಾಗಿದೆ. ಈಕೆ ಪತಿ ಲೋಕೇಶ್ ಹಾಗೂ ಮಕ್ಕಳ ಜೊತೆ ಬೆಂಗಳೂರಿನಲ್ಲಿ  ನೆಲೆಸಿದ್ದಳು. ಸಂಸಾರದ ವಿಚಾರದಲ್ಲಿ ಬೇಸತ್ತು ವೆಸ್ಲಿ ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಶವವನ್ನು ನದಿಯಿಂದ ಪೊಲೀಸರು ಮೇಲೆತ್ತಿದ್ದಾರೆ. ಈ ಸಂಬಂಧ ಕೊಳ್ಳೇಗಾಲ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ …

Read More »

ಸಂಪರ್ಕಕ್ಕೇ ಸಿಗುತ್ತಿಲ್ಲ ಇರಾನ್‌ನಲ್ಲಿ ಕೆಲಸಕ್ಕೆ ಹೋದ ಕಾಫಿನಾಡ ಯುವಕ – ಕುಟುಂಬದಲ್ಲಿ ಆತಂಕ

ಚಿಕ್ಕಮಗಳೂರು: ಇರಾನ್ ಯುದ್ಧದ ಕೆನ್ನಾಲಗೆಗೆ ಸಿಲುಕಿರುವ ಚಿಕ್ಕಮಗಳೂರು  ಜಿಲ್ಲೆ ಕೊಪ್ಪ ತಾಲೂಕಿನ ಯುವಕ ಸಂಪರ್ಕಕ್ಕೆ ಸಿಗದ ಕಾರಣ ಕುಟುಂಬಸ್ಥರು ಆತಂಕಕ್ಕೀಡಾಗಿರುವ ಘಟನೆ ಕೊಪ್ಪ ತಾಲೂಕಿನ ಹಿರೇಕೂಡಿಗೆ ಗ್ರಾಮದಲ್ಲಿ ನಡೆದಿದೆ. ಸಂಪರ್ಕಕ್ಕೆ ಸಿಗದ ಮಗನ ಪತ್ತೆಗೆ ಪೋಷಕರು ರಾಜ್ಯ ಹಾಗೂ ಕೇಂದ್ರ ಸರ್ಕಾರದ  ಕದ ಬಡಿದಿದ್ದಾರೆ. ಕೊಪ್ಪ ತಾಲೂಕಿನ ಹಿರೇಕೊಡಿಗೆ ಗ್ರಾಮದ ನಿಶ್ಚಿತ್ ಎಂಬ ಯುವಕ ಇಸ್ರೇಲ್ ಮತ್ತು ಇರಾನ್ ನಡುವಿನ ಭೀಕರ ಯುದ್ಧದ ಸುಳಿಯಲ್ಲಿ ಸಿಲುಕಿರುವ ಆತಂಕಕಾರಿ ವರದಿ ಲಭ್ಯವಾಗಿದೆ. …

Read More »

ಆಸ್ಟ್ರೇಲಿಯಾ ಪ್ರವಾಸದಿಂದ ಕಾಂಗ್ರೆಸ್ ಶಾಸಕರು ವಾಪಸ್

ಬೆಂಗಳೂರು: ಆಸ್ಟ್ರೇಲಿಯಾ, ನ್ಯೂಜಿಲೆಂಡ್ ಪ್ರವಾಸಕ್ಕೆ  ತೆರಳಿದ್ದ ಕಾಂಗ್ರೆಸ್ ಶಾಸಕರು  ಇಂದು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ವಿದೇಶ ಪ್ರವಾಸದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಸಿರಗುಪ್ಪ ಶಾಸಕ ಬಿಎಂ ನಾಗರಾಜ್, ಆಸ್ಟ್ರೇಲಿಯಾ ನ್ಯೂಜಿಲೆಂಡ್ ಹೋಗಿ ಬಂದೆವು. ಯಾವುದೇ ರಾಜಕೀಯ ಚರ್ಚೆ ಮಾಡಿಲ್ಲ. ನಾವು ಯಾವುದೇ ಅಧ್ಯಯನ ಮಾಡಿಲ್ಲ. ಫ್ಯಾಮಿಲಿ ಟ್ರಿಪ್ ಹೋಗಿದ್ದೆವು. ನಮ್ಮ ಯಾವ ರಾಜಕೀಯ ನಾಯಕರೂ ಕರೆ ಮಾಡಿಲ್ಲ. ಅಲ್ಲಿನ ಕೆಲ ತೋಟಗಳಿಗೆ ಹೋಗಿದ್ದೆವು. ಕೆಲವು ಕಡೆ ನಮಗೆ ಹೋಗೋದಕ್ಕೆ ಅವಕಾಶ …

Read More »

ಸಚಿವ ಮಧು ಬಂಗಾರಪ್ಪ ಜನ್ಮದಿನ – ಪೌರಕಾರ್ಮಿಕರು, ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ವಿಮಾನಯಾನ

ಶಿವಮೊಗ್ಗ: ಶಿಕ್ಷಣ ಸಚಿವ ಮಧು ಬಂಗಾರಪ್ಪ ತಮ್ಮ ಜನ್ಮ ದಿನವನ್ನ ಅತ್ಯಂತ ವಿಭಿನ್ನ ಮತ್ತು ಅರ್ಥಪೂರ್ಣವಾಗಿ ಆಚರಿಸಲು ಮುಂದಾಗಿದ್ದಾರೆ. ತಾವು ಪ್ರತಿನಿಧಿಸುವ ಸೊರಬ ಕ್ಷೇತ್ರದ ಸೊರಬ ಪುರಸಭೆ ಹಾಗೂ ಆನವಟ್ಟಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಪೌರಕಾರ್ಮಿಕರಿಗೆ ವಿಮಾನಯಾನ ಮಾಡಿಸುವ ಮೂಲಕ ಅವರ ಮೊಗದಲ್ಲಿ ಮಂದಹಾಸ ಮೂಡಿಸಿದ್ದಾರೆ. ಹೌದು, ಪ್ರತಿನಿತ್ಯ ತಮ್ಮ ಕಾಯಕದ ಮೂಲಕ ನಗರವನ್ನ ಸ್ವಚ್ಛ ಮಾಡಲು ಶ್ರಮಿಸುವ 36 ಜನ ಪೌರಕಾರ್ಮಿಕರನ್ನ ತಮ್ಮ ಹುಟ್ಟುಹಬ್ಬದ ಹಿನ್ನೆಲೆ ಉಚಿತವಾಗಿ ವಿಮಾನಯಾನ …

Read More »

ಪಾಠ ಮಾಡುತ್ತಿದ್ದಾಗಲೇ ಶಿಕ್ಷಕನಿಗೆ ಹೃದಯಾಘಾತ – ವಿದ್ಯಾರ್ಥಿಗಳ ಎದುರೇ ದುರ್ಮರಣ

ಹಾಸನ: ವಿದ್ಯಾರ್ಥಿಗಳಿಗೆ  ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತದಿಂದ  ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕರೊಬ್ಬರು ಮೃತಪಟ್ಟ ದುರ್ಘಟನೆ ಅರಕಲಗೂಡು ತಾಲೂಕಿನ ಕೆಬ್ಬೆಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ಶಿಕ್ಷಕರನ್ನು ಕೇರಳಾಪುರ ಗ್ರಾಮದ ಸತೀಶ್ (53) ಎಂದು ಗುರುತಿಸಲಾಗಿದೆ. ಅವರು ಕೆಬ್ಬೆಕೊಪ್ಪಲು ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದರು. ವಿದ್ಯಾರ್ಥಿಗಳಿಗೆ ಪಾಠ ಮಾಡುತ್ತಿದ್ದ ವೇಳೆ ಸತೀಶ್ ಏಕಾಏಕಿ ಅಸ್ವಸ್ಥಗೊಂಡು ಕೊಠಡಿಯಲ್ಲೇ ಕುಸಿದು ಬಿದ್ದಿದ್ದಾರೆ. ಇದನ್ನು ಗಮನಿಸಿದ ವಿದ್ಯಾರ್ಥಿಗಳು ಹಾಗೂ ಸಹ …

Read More »

ಲೋಳಸೂರ ಸೇತುವೆ ನಿರ್ಮಾಣ ಕಾಮಗಾರಿ ಪರಿಶೀಲಿಸಿದ ಸಚಿವ ಸತೀಶ್‌ ಜಾರಕಿಹೊಳಿ

ಗೋಕಾಕ: ಗೋಕಾಕ ನಗರದ ಸಮೀಪದ ಲೋಳಸೂರ ಗ್ರಾಮದಲ್ಲಿ ಘಟಪ್ರಭಾ ನದಿಗೆ ಅಡ್ಡಲಾಗಿ ನಿರ್ಮಿಸಲು ಉದ್ದೇಶಿಸಿರುವ 30.21 ಕೋಟಿ ರೂ. ವೆಚ್ಚದ ಲೋಳಸೂರ ಸೇತುವೆ ನಿರ್ಮಾಣ ಕಾಮಗಾರಿಯನ್ನು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿ ಅವರು ಪರಿಶೀಲಿಸಿದರು. ನೂತನ ಸೇತುವೆ ನಿರ್ಮಾಣದಿಂದ ಸಾರ್ವಜನಿಕರ ಮತ್ತು ವಾಹನಗಳ ಸುಗಮ ಸಂಚಾರಕ್ಕೆ ಬಹಳಷ್ಟು ಅನುಕೂಲವಾಗಲಿದೆ. ಮಳೆಗಾಲ, ಪ್ರವಾಹದಂತಹ ಸಂದರ್ಭಗಳಲ್ಲಿಯೂ ಸಹ ಅದನ್ನು ಎದುರಿಸಲಿಕ್ಕೆ ಇನ್ನು ಮುಂದೆ ಸರಳವಾಗಲಿದೆ. ಬ್ರಿಟಿಷರ ಕಾಲದಲ್ಲಿ ನಿರ್ಮಾಣವಾಗಿದ್ದ ಕಿರಿದಾದ ಸೇತುವೆ …

Read More »

ಶೇ.15ರ ಮೀಸಲಾತಿಯನ್ನು ಸಚಿವ ಸಂಪುಟ ಸಭೆಯಲ್ಲಿ cm ಚರ್ಚಿಸಿ ನಿರ್ಧರಿಸಲಿಸ್ದಾರೆ: ಕೆಹೆಚ್. ಮುನಿಯಪ್ಪ

ಬೆಂಗಳೂರು: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರಾದ ಶ್ರೀ ಕೆ.ಹೆಚ್. ಮುನಿಯಪ್ಪ ಹಾಗೂ  ಅಬಕಾರಿ ಸಚಿವರಾದ  ಆರ್.ಬಿ. ತಿಮ್ಮಾಪೂರ್ ರವರ ನೇತೃತ್ವದಲ್ಲಿ ನಗರದ ರಾಡಿಸನ್ ಬ್ಲೂ (ಏಟ್ರಿಯಾ) ಹೋಟೆಲ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಲಾಯಿತು. ನಂತರ ಮಾತನಾಡಿದ ಸಚಿವರು ಒಳಮೀಸಲಾತಿ ಕಲ್ಪಿಸುವಲ್ಲಿ ನಮ್ಮ ಸರ್ಕಾರ ಕಂಕಣ ಬದ್ಧವಾಗಿದೆ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮಾನ್ಯ ಉಪ ಮುಖ್ಯಮಂತ್ರಿ ಶ್ರೀ ಡಿ.ಕೆ. ಶಿವಕುಮಾರ್ ರವರ ನೇತೃತ್ವದಲ್ಲಿ ಒಳಮೀಸಲಾತಿ ಅನುಷ್ಠಾನದ ಜೊತೆಗೆ …

Read More »

ಕಾರ್ಯಕರ್ತರ ಆಗಮನದಿಂದ ಕ್ಷೇತ್ರದಲ್ಲಿ ಬಿಜೆಪಿಯ ಬಲ ಹೆಚ್ಚಿದೆ

ನಿಪ್ಪಾಣಿ: ಕಾಂಗ್ರೆಸ್ ಮತ್ತು ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಆಗಮನದಿಂದ ಕ್ಷೇತ್ರದಲ್ಲಿ ಬಿಜೆಪಿಯ ಬಲ ಮತ್ತಷ್ಟು ಹೆಚ್ಚಿದೆ ಎಂದು ಶಾಸಕಿ ಶಶಿಕಲಾ ಜೊಲ್ಲೆ ಹೇಳಿದರು. ಪಟ್ಟಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸರ್ಕಾರದ ಅಭಿವೃದ್ಧಿ ಕಾರ್ಯ ಹಾಗೂ ನಿಪ್ಪಾಣಿ ಕ್ಷೇತ್ರದಲ್ಲಿ ತಾವು ಕೈಗೊಂಡಿರುವ ಅಭಿವೃದ್ಧಿ ಕಾರ್ಯ ಮೆಚ್ಚಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ ಎಂದರು. ತಾಲೂಕಿನ ಕಾರದಗಾ ಗ್ರಾಮದ ಜಿಪಂ ಮಾಜಿ ಸದಸ್ಯೆ ಸುಮಿತ್ರಾ ಉಗಳೆ ಹಾಗೂ ಸುದೀಪ …

Read More »

ಸ್ವಯಂ ಉದ್ಯೋಗದಿಂದ ನಿಶ್ಚಿತ ಗುರಿ ಸಾಧ್ಯ

ರಾಮದುರ್ಗ: ವಿದ್ಯಾರ್ಥಿಗಳು ಇಂದಿನ ಆಧುನಿಕ ಯುಗದಲ್ಲಿ ತಂತ್ರಜ್ಞಾನದ ಸದ್ಭಳಕೆ ಮಾಡಿಕೊಂಡು, ಆತ್ಮವಿಶ್ವಾಸದೊಂದಿಗೆ ಸ್ವಯಂ ಉದ್ಯೋಗ ಕೆಗೊಂಡದಲ್ಲಿ ನಿಶ್ಚಿತ ಗುರಿ ತಲುಪಲು ಸಾಧ್ಯ ಎಂದು ವಿರಕ್ತಮಠ ಟ್ರಸ್ಟ್​ ಅಧ್ಯ ಪ್ರದಿಪಕುಮಾರ ಪಟ್ಟಣ ಹೇಳಿದರು. ನಗರದ ಅರಮನೆ ಆವರಣದಲ್ಲಿರುವ ಕ್ಯಾಂಬ್ರೀಡ್ಜ್​ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ಈಚೆಗೆ ಉದ್ಘಾಟಿಸಿ ಮಾತನಾಡಿದರು. ತಹಸೀಲ್ದಾರ್​ ಪ್ರಕಾಶ ಹೊಳೆಪ್ಪಗೋಳ ಮಾತನಾಡಿ, ಯುವಕರು ಭವಿಷ್ಯ ರೂಪಿಸಿಕೊಳ್ಳಲು ಶಿಣದ ಪಾತ್ರ ಅಲ್ಲಗಳೆಯುವಂತಿಲ್ಲ. ಪಾಲಕರು …

Read More »

ರೇಣುಕಾಚಾರ್ಯರ ತತ್ವಗಳು ಸಮಾಜಕ್ಕೆ ಪ್ರೇರಣೆ: ಮುರುಂದ್ರ ಸ್ವಾಮೀಜಿ

ಸವದತ್ತಿ: ಸಮಾನತೆ, ಸಾಮರಸ್ಯ ಹಾಗೂ ಸಂಸ್ಕಾರಗಳ ಮಹತ್ವ ಸಾರಿದ ಜಗದ್ಗುರು ರೇಣುಕಾಚಾರ್ಯರ ತತ್ವಗಳು ಸಮಾಜಕ್ಕೆ ಪ್ರೇರಣೆಯಾಗಿವೆ ಎಂದು ಮುನವಳ್ಳಿ ಸೋಮಶೇಖರ ಮಠದ ಮುರುಂದ್ರ ಸ್ವಾಮೀಜಿ ಹೇಳಿದರು. ತಾಲೂಕಿನ ತಹಸೀಲ್ದಾರ್​ ಕಚೇರಿಯಲ್ಲಿ ತಾಲೂಕಾಡಳಿತದಿಂದ ಭಾನುವಾರ ಹಮ್ಮಿಕೊಂಡಿದ್ದ ರೇಣುಕಾಚಾರ್ಯರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿ, ರೇಣುಕಾಚಾರ್ಯರ ಉಪದೇಶಗಳು ಶಾಂತಿ ಮತ್ತು ಸೌಹಾರ್ದ ಬಲಪಡಿಸುವಲ್ಲಿ ಮಾರ್ಗದರ್ಶಕವಾಗಿವೆ ಎಂದರು. ತಹಸೀಲ್ದಾರ್​ ಮಲ್ಲಿಕಾರ್ಜುನ ಹೆಗ್ಗನ್ನವರ, ಉದ್ಯಮಿ ಅಶ್ವತ್ಥ ವೈದ್ಯ ಮಾತನಾಡಿ, ಸಮಾಜದಲ್ಲಿ ಒಗ್ಗಟ್ಟು ಮತ್ತು ಸೌಹಾರ್ದ ಬೆಳವಣಿಗೆಗೆ ರೇಣುಕಾಚಾರ್ಯರ …

Read More »