ಬೆಂಗಳೂರು : ಕನ್ನಡ ನಾಡು-ನುಡಿಯನ್ನು ಅವಮಾನಿಸುವ ಘಟನೆಗಳು ನಡೆದಾಗ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರಗಿಸಬೇಕು ಹೌದು. ಆದರೆ ಯಾವ ಕಾನೂನಿನಡಿ ಕ್ರಮ ಕೈಗೊಳ್ಳಬೇಕು ಎಂಬುದೇ ಯಕ್ಷಪ್ರಶ್ನೆ! ಇತ್ತೀಚೆಗೆ ಗೂಗಲ್ ಮತ್ತು ಅಮೆಜಾನ್ ಕನ್ನಡ ಭಾಷೆ, ಕನ್ನಡದ ಧ್ವಜ ಮತ್ತು ರಾಜ್ಯ ಸರಕಾರದ ಲಾಂಛನಕ್ಕೆ ಅಗೌರವ ತೋರಿದಾಗ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದರು. ಕಾನೂನು ಪ್ರಕಾರ ಕಠಿನ ಕ್ರಮ ಕೈಗೊಳ್ಳುವುದಾಗಿ ಸರಕಾರ ಭರವಸೆ ನೀಡಿತು. ಕನ್ನಡಿಗರ ಭಾವನಾತ್ಮಕ ಪ್ರತಿರೋಧಕ್ಕೆ ಮಣಿದ ಗೂಗಲ್, …
Read More »ಬೆಳಗಾವಿ :ಚಿನ್ನ ಎಗರಿಸಿದ ಪ್ರಕರಣದ ಕಿಂಗ್ ಪಿನ್ ಕಿರಣ್ ಮೇಲೆ ಮತ್ತೊಂದು ದೂರು ದಾಖಲು
ಬೆಳಗಾವಿ: ಪೊಲೀಸ್ ಎಂದು ನಕಲಿ ಗುರುತಿನ ಚೀಟಿ ಇಟ್ಟುಕೊಂಡು ತಿರುಗಾಡುತ್ತಿದ್ದ ಕಿರಣ ವೀರನಗೌಡ ವಿರುದ್ಧ ಹಿರೇಬಾಗೇವಾಡಿ ಠಾಣೆಯಲ್ಲಿ ಸಿಐಡಿ ಅಧಿಕಾರಿಗಳು ದೂರು ದಾಖಲಿಸಿದ್ದಾರೆ. ಹುಕ್ಕೇರಿ ತಾಲೂಕಿನ ಯಮಕನಮರಡಿ ಠಾಣೆಯಲ್ಲಿ ನಿಲ್ಲಿಸಿದ್ದ ಕಾರಿನಲ್ಲಿಯ ಚಿನ್ನ ಎಗರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ವಶದಲ್ಲಿರುವ ಕಿರಣ ವೀರನಗೌಡ ಖೊಟ್ಟಿ ದಾಖಲೆ ಸೃಷ್ಟಿಸಿ ಪೊಲೀಸ್ ಆಗಿರುವ ಬಗ್ಗೆ ನಕಲಿ ಗುರುತಿನ ಚೀಟಿ ಇಟ್ಟುಕೊಂಡಿದ್ದನು ಎಂದು ದೂರು ದಾಖಲಾಗಿದೆ. ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಯಲ್ಲಿ ತಿರುಗಾಡುವಾಗ …
Read More »ಸಿಎಂ ಯಡಿಯೂರಪ್ಪ ಕಿಡಿ ಕಾರಿರುವ ‘ಮಠ’ ಖ್ಯಾತಿಯ ನಿರ್ದೇಶಕ ಗುರು ಪ್ರಸಾದ್
ಬೆಂಗಳೂರು : ಫೇಸ್ ಬುಕ್ ಲೈವ್ ನಲ್ಲಿ ರಾಜ್ಯ ಸರ್ಕಾರದ ವಿರುದ್ಧ ಹಾಗೂ ಸಿಎಂ ಯಡಿಯೂರಪ್ಪ ಕಿಡಿ ಕಾರಿರುವ ‘ಮಠ’ ಖ್ಯಾತಿಯ ನಿರ್ದೇಶಕ ಗುರು ಪ್ರಸಾದ್. ಇಂದು ಅವರು, ಮಹಾಮಾರಿ ಕೋವಿಡ್ ವೈರಸ್ ನಿಯಂತ್ರಿಸುವಲ್ಲಿ ಸರ್ಕಾರ ವಿಫಲವಾಗಿದೆ. ‘ಯಡಿಯೂರಪ್ಪ ಇಂದು ಜನರ ಸೇವೆ ಮಾಡುತ್ತಿದ್ದೇನೆ ಎಂದು ಹೇಳಿದ್ದಾರೆ. ಆದರೆ ಅವರು ಅವರ ಮಗನ, ವಂಶದ ಸೇವೆ ಮಾಡುತ್ತಿದ್ದಾರೆ ಎಂದು ಗುಡುಗಿದ್ದಾರೆ. ರಾಜ್ಯದಲ್ಲಿ ಕೋವಿಡ್ ಸೋಂಕಿಗೆ ಸಾವಿರಾರು ಜನರು ಸತ್ತಿದ್ದಾರೆ. ನಿಮಗೆ …
Read More »ಶೈಕ್ಷಣಿಕ ಜಿಲ್ಲೆಯ ಮಾದರಿಯಲ್ಲಿ ಚಿಕ್ಕೋಡಿಯನ್ನು ಕೃಷಿ ಜಿಲ್ಲೆಯಾಗಿ ಘೋಷಣೆಯ ಸಾಧ್ಯತೆ : ಬಿ.ಸಿ.ಪಾಟೀಲ
ಬೆಳಗಾವಿ: ಬೆಳಗಾವಿ ದೊಡ್ಡ ಜಿಲ್ಲೆಯಾಗಿರುವುದರಿಂದ ಶೈಕ್ಷಣಿಕ ಜಿಲ್ಲೆಯ ಮಾದರಿಯಲ್ಲಿ ಚಿಕ್ಕೋಡಿಯನ್ನು ಕೃಷಿ ಜಿಲ್ಲೆಯಾಗಿ ಘೋಷಿಸುವ ಬಗ್ಗೆ ಸರಕಾರದ ಮಟ್ಟದಲ್ಲಿ ಚರ್ಚಿಸಿದ ಬಳಿಕ ಈ ರೀತಿಯ ಘೋಷಣೆಯ ಸಾಧ್ಯತೆ ಕುರಿತು ಪರಿಶೀಲಿಸಲಾಗುವುದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಭರವಸೆ ನೀಡಿದರು. ರಸಗೊಬ್ಬರ, ಬಿತ್ತನೆ ಬೀಜಗಳ ಲಭ್ಯತೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ನಡೆದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಬೆಳಗಾವಿ ದೊಡ್ಡ …
Read More »ಕೊರೊನಾ ಸೋಂಕಿಗೆ ಕಣ್ಮರೆಯಾದ ವಿದ್ಯಾಧರ: ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಜಿ
ಬೆಳಗಾವಿ: ಕವಲೆದುರ್ಗ ಕೆಳದಿ ರಾಜಗುರು ಮಹಾಮಹತ್ತಿನ ಭುವನಗಿರಿ ಸಂಸ್ಥಾನ ಮಠದ ಷ ಬ್ರ ಡಾ.ಸಿದ್ಧಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು ಕೊರೊನಾ ಸೊಂಕಿಗೆ ತುತ್ತಾಗಿದ್ದು, ಇಹಲೋಕತ್ಯಜಿಸಿದ್ದಾರೆ. ಸ್ವಾಮಿಜಿ ನಿಧನಕ್ಕೆ ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಜಿ ಸಂತಾಪ ವ್ಯಕ್ತಪಡಿಸಿದ್ದಾರೆ. ಭಾರತೀಯ ಆಧ್ಯಾತ್ಮ ಪರಂಪರೆ ಜಗತ್ತಿನಲ್ಲಿಯೇ ಅನನ್ಯವಾದದ್ದು. ಮಠ-ಮಂದಿರಗಳು, ಸ್ವಾಮಿಗಳು ಈ ನಾಡಿನ ಜೀವ-ಜೀವಾಳ. ಅದರಲ್ಲೂ ವಿದ್ಯದ ಸ್ವಾಮಿಗಳು ಅಂದರೆ ಕವಲೆದುರ್ಗ ಕೆಳದಿ ರಾಜಗುರು ಮಹಾಮಹತ್ತಿನ ಭುವನಗಿರಿ ಸಂಸ್ಥಾನ ಮಠದ ಷ ಬ್ರ …
Read More »ರಾಜ್ಯದಲ್ಲಿ ಇವತ್ತು ಕೊರೋನಾ ಮತ್ತಷ್ಟು ಇಳಿಕೆ
ಬೆಂಗಳೂರು: ರಾಜ್ಯದಲ್ಲಿ ಇವತ್ತು ಕೊರೋನಾ ಮತ್ತಷ್ಟು ಇಳಿಕೆಯಾಗಿದ್ದು, 11,958 ಜನರಿಗೆ ಸೋಂಕು ತಗುಲಿದೆ. ಒಟ್ಟು ಸೋಂಕಿತರ ಸಂಖ್ಯೆ 27,07,481 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿಂದು 340 ಸೋಂಕಿತರು ಸಾವನ್ನಪ್ಪಿದ್ದು, ಇದುವರೆಗೆ 31,920 ಸೋಂಕಿತರು ಸಾವನ್ನಪ್ಪಿದ್ದಾರೆ. ಇಂದು 27,299 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 24,36,716 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ 2,38,824 ಸಕ್ರಿಯ ಪ್ರಕರಣಗಳು ಇವೆ. ರಾಜಧಾನಿ ಬೆಂಗಳೂರಿನಲ್ಲಿ ಕೂಡ ಇಳಿಮುಖವಾಗಿದೆ. 199 ಮಂದಿ ಸೋಂಕಿತರು ಮೃತಪಟ್ಟಿದ್ದು, ಹೊಸದಾಗಿ 1992 ಜನರಿಗೆ …
Read More »ಚಿಕ್ಕೋಡಿಯನ್ನು ಕೃಷಿ ಜಿಲ್ಲೆಯಾಗಿ ಘೋಷಿಸುವ ಬಗ್ಗೆ : ಬಿ ಸಿ ಪಾಟೀಲ್
ಬೆಳಗಾವಿ: ಬೆಳಗಾವಿ ದೊಡ್ಡ ಜಿಲ್ಲೆಯಾಗಿರುವುದರಿಂದ ಶೈಕ್ಷಣಿಕ ಜಿಲ್ಲೆಯ ಮಾದರಿಯಲ್ಲಿ ಚಿಕ್ಕೋಡಿಯನ್ನು ಕೃಷಿ ಜಿಲ್ಲೆಯಾಗಿ ಘೋಷಿಸುವ ಬಗ್ಗೆ ಸರಕಾರದ ಮಟ್ಟದಲ್ಲಿ ಚರ್ಚಿಸಿದ ಬಳಿಕ ನಿರ್ಧಾರ ಕೈಗೊಳ್ಳಲಾಗುವದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಭರವಸೆ ನೀಡಿದರು. ರಸಗೊಬ್ಬರ, ಬಿತ್ತನೆ ಬೀಜಗಳ ಲಭ್ಯತೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಸೋಮವಾರ ಬೆಳಗಾವಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಇದಕ್ಕೂ ಮುನ್ನ ಈ ವಿಷಯ …
Read More »ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ವಿರೇಂದ್ರ ಹೆಗ್ಗಡೆಯವರು ನೀಡಿರುವ ಆಹಾರ ಧಾನ್ಯಗಳ ಕಿಟ್ ವಿತರಣೆ
ಗೋಕಾಕ: ಕೊರೋನಾ ಸಂಕಷ್ಟದಲ್ಲಿರುವ ರಾಜ್ಯದ ಜನತೆಗೆ ಸಹಾಯ ಹಸ್ತ ನೀಡುವುದರೊಂದಿಗೆ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ವಿರೇಂದ್ರ ಹೆಗ್ಗಡೆಯವರು ಅವರ ಕಷ್ಟ ನೀಗಿಸುವುದರಲ್ಲಿ ನಿರತರಾಗಿದ್ದಾರೆಂದು ಶ್ರೀಕ್ಷೇತ್ರ ಧರ್ಮಸ್ಥಳ ಯೋಜನೆಯ ಧಾರವಾಡ ಪ್ರಾದೇಶಿಕ ನಿರ್ದೇಶಕ ದುಗ್ಗೆಗೌಡ ಹೇಳಿದರು. ಸೋಮವಾರದಂದು ನಗರದ ಮುಪ್ಪಯ್ಯನಮಠದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಯೋಜನೆಯವರು ಹಮ್ಮಿಕೊಂಡ ಗೋಕಾಕ ತಾಲೂಕಿನ ಕೊರೋನಾ ಸಂಕಷ್ಟದಲ್ಲಿರುವ 500 ಕುಟುಂಬಗಳಿಗೆ ಆಹಾರ ಧಾನ್ಯಗಳ ಕಿಟ್‍ಗಳನ್ನು ವಿತರಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು. ಜನತೆ ಧೈರ್ಯದಿಂದ ಕೊರೋನಾ …
Read More »ಸಂಪೂರ್ಣ ಚೇತರಿಸಿಕೊಂಡ ಸಿದ್ದರಾಮಯ್ಯ; ಆಸ್ಪತ್ರೆಯಿಂದ ಬಿಡುಗಡೆ
ಬೆಂಗಳೂರು: ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸಂಪೂರ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಆಸ್ಪತ್ರೆಯಿಂದ ಹೊರಟ ಸಿದ್ದರಾಮಯ್ಯ ಅವರನ್ನು ವೈದ್ಯರು ಹಾಗೂ ಸಿಬ್ಬಂದಿ ಬೀಳ್ಕೊಟ್ಟರು. ಕೆಲ ದಿನಗಳ ಹಿಂದೆ ಜ್ವರ ಕಾಣಿಸಿಕೊಂಡ ಕಾರಣ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ನಡೆಸಿದ ಕೋವಿಡ್ ಪರೀಕ್ಷೆಗಳಲ್ಲಿ ನೆಗಟಿವ್ ವರದಿಯಾಗಿತ್ತು.
Read More »ಮುಖ್ಯಮಂತ್ರಿ ಬದಲಾವಣೆ ಅಷ್ಟು ಸುಲಭದ ಕೆಲಸವಲ್ಲ: ಸಚಿವ ಬಿ.ಸಿ. ಪಾಟೀಲ್
ಬೆಳಗಾವಿ: ಯಾರೋ ದೆಹಲಿಗೆ ಹೋಗಿ ಬಂದ ತಕ್ಷಣ ಮುಖ್ಯಮಂತ್ರಿ ಬದಲಾವಣೆ ಆಗುವುದಿಲ್ಲ. ಮುಖ್ಯಮಂತ್ರಿ ಬದಲಾವಣೆ ಅಷ್ಟು ಸುಲಭದ ಕೆಲಸವಲ್ಲ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಖಾರವಾಗಿ ಹೇಳಿದರು. ಬೆಳಗಾವಿಯಲ್ಲಿ ಸೋಮವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ಸಿಎಂ ಬದಲಾವಣೆ ಇಲ್ಲ. ಇನ್ನೂ ಎರಡು ವರ್ಷ ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ. ಮುಂದಿನ ಚುನಾವಣೆಯನ್ನು ಯಡಿಯೂರಪ್ಪ ನೇತೃತ್ವದಲ್ಲಿ ಎದುರಿಸುತ್ತೇವೆ ಎಂದು ಸ್ಪಷ್ಟಪಡಿಸಿದರು. ಪಕ್ಷದ ವರಿಷ್ಠರು ಕೇಳಿದರೆ ಸಿಎಂ ಸ್ಥಾನಕ್ಕೆ ರಾಜೀನಾಮೆ …
Read More »
Laxmi News 24×7