ಬೆಳಗಾವಿ: ಸರ್ಕಾರ ಘೋಷಣೆ ಮಾಡಿರುವ ಪ್ಯಾಕೇಜ್ ಹಣ ಜನರಿಗೆ ತಲುಪಿದಾಗ ನಮಗೆ ಸಮಾಧಾನವಾಗುತ್ತದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ಸುವರ್ಣ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪನವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದ ಅವರು, ಸುಮ್ಮನೆ ಪ್ಯಾಕೇಜ್ ಘೋಷಣೆ ಮಾಡುವುದರಿಂದ ಪ್ರಯೋಜನವಿಲ್ಲ. ಅರ್ಹರಿಗೆ ಆ ಹಣ ತಲುಪಬೇಕು. ಕಳೆದ ಬಾರಿ ಘೋಷಣೆ ಮಾಡಿದ ಹಣ ಇನ್ನುವರೆಗೂ ಕೂಡ ಜನರಿಗೆ ತಲುಪಿಲ್ಲ. ಹೀಗಾಗಿ, ನಮಗೆ ಆತಂಕವಿದೆ. …
Read More »ರಾಜ್ಯದಲ್ಲಿ ಈ ವರ್ಷ ಜುಲೈ 1ರಿಂದ ಶಾಲೆಗಳನ್ನು ಆರಂಭಿಸಲು ಸರಕಾರ ನಿರ್ಧರಿಸಿದೆ.
ಬೆಂಗಳೂರು – ರಾಜ್ಯದಲ್ಲಿ ಈ ವರ್ಷ ಜುಲೈ 1ರಿಂದ ಶಾಲೆಗಳನ್ನು ಆರಂಭಿಸಲು ಸರಕಾರ ನಿರ್ಧರಿಸಿದೆ. ಈ ಕುರಿತು ಹೊಸ ಮಾರ್ಗಸೂಚಿಯನ್ನು ಶುಕ್ರವಾರ ಬಿಡುಗಡೆ ಮಾಡಲಾಗಿದೆ. ಜೂನ್ 15ರಿಂದ ಶಾಲೆಗಳನ್ನು ಆರಂಭಿಸಲು ಈ ಮೊದಲು ನಿರ್ಧರಿಸಲಾಗಿತ್ತು. ಆದರೆ ಲಾಕ್ ಡೌನ್ ಮುಂದುವರಿದಿರುವುದರಿಂದ ಮತ್ತು ಕೊರೋನಾ ನಿಯಂತ್ರಣಕ್ಕೆ ಬಾರದಿರುವ ಹಿನ್ನೆಲೆಯಲ್ಲಿ ಶೈಕ್ಷಣಿಕ ಮಾರ್ಗಸೂಚಿಯನ್ನು ಪರಿಷ್ಕರಿಸಲಾಗಿದೆ. ಜುಲೈ 1ರಿಂದ ಅಕ್ಟೋಬರ್ 10ರ ವರೆಗೆ ಮೊದಲ ಅವಧಿ ಮತ್ತು ಅಕ್ಟೋಬರ್ 21ರಿಂದ 2022ರ ಏಪ್ರಿಲ್ 30 …
Read More »ಈ ವರ್ಷ ದ್ವಿತೀಯ ಪಿಯುಸಿ ಪರೀಕ್ಷೆ ಇಲ್ಲ: ಶಿಕ್ಷಣ ಸಚಿವ ಸುರೇಶ್ ಕುಮಾರ್
ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ನಡೆಸದಿರಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ. ಪರೀಕ್ಷೆ ಇಲ್ಲದೆ ಯಾವ ರೀತಿ ಗ್ರೇಡ್ ಕೊಡಬೇಕು ಎಂದು ಬಹಳ ಯೋಚಿಸಬೇಕಿದೆ ಎಂದು ಅವರು ಹೇಳಿದ್ದಾರೆ. ಮಕ್ಕಳ ಯೋಗಕ್ಷೇಮ ಮತ್ತು ಮಕ್ಕಳ ಶೈಕ್ಷಣಿಕ ಭವಿಷ್ಯದ ಬಗ್ಗೆ ವಿಸ್ತೃತ ಚರ್ಚೆ ನಡೆಸಿದ್ದೇವೆ ಎಂದು ಅವರು ಹೇಳಿದ್ದರೆ. ಎಸ್ಸೆಸ್ಸೆಎಲ್ಸಿ, ಪಿಯುಸಿ ಪರೀಕ್ಷೆ ಈ ವರ್ಷ ಬಹುಚರ್ಚಿತ ವಿಚಾರ . ಕಳೆದ ವರ್ಷ ಪರಿಸ್ಥಿತಿ …
Read More »ಬೆಳಗಾವಿ: ಮುಖ್ಯಮಂತ್ರಿಗೆ ಮುತ್ತಿಗೆ ಹಾಕಲು ಬಂದಿದ್ದ ರೈತರು ವಶಕ್ಕೆ
ಬೆಳಗಾವಿ: ಬೆಳಗಾವಿಗೆ ಆಗಮಿಸಿದ ಮುಖ್ಯಮಂತ್ರಿಗೆ ರೈತರ ಪ್ರತಿಭಟನೆಯ ಬಿಸಿ ತಟ್ಟಿದ್ದು, ಕಬ್ಬಿನ ಬಾಕಿ ಬಿಲ್ ಗಾಗಿ ಆಗ್ರಹಿಸಿ ರೈತರು ಶುಕ್ರವಾರ ಪ್ರತಿಭಟನೆ ನಡೆಸಿದರು. ಸುವರ್ಣ ವಿಧಾನಸೌಧದಲ್ಲಿ ಪ್ರಮುಖ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆಗೆ ಆಗಮಿಸಿದ ಮುಖ್ಯಮಂತ್ರಿಗಳಿಗೆ ರೈತರು ಪ್ರತಿಭಟನೆ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ಶುಕ್ರವಾರ ಬೆಳಗ್ಗೆ ಸುವರ್ಣ ವಿಧಾನಸೌಧ ಎದುರು ರಾಷ್ಟ್ರೀಯ ಹೆದ್ದಾರಿಯಲ್ಲಿ ರೈತರು ಪ್ರತಿಭಟನೆ ನಡೆಸಿದರು. ಕಬ್ಬಿನ ಬಿಲ್ ಬಾಕಿ ಪಾವತಿಸಲು ಸಿಎಂ ಕ್ರಮ ಕೈಗೊಳ್ಳಬೇಕು. ತರಕಾರಿ ಬೆಳೆದ …
Read More »ಬೆಳಗಾವಿ ಬಿಮ್ಸ್ ಗೆ ಐಎಎಸ್ ಅಧಿಕಾರಿಯೊಬ್ಬರನ್ನು ಆಡಳಿತಾಧಿಕಾರಿಯಾಗಿ ನೇಮಿಸಲಾಗುವುದು,ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ಸಿಎಂ ಅಭಯ
ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳು ಭಯ ಪಡುವ ಅಗತ್ಯವಿಲ್ಲ. ಕೊರೋನಾ ನಿಯಂತ್ರಣಕ್ಕೆ ಬಂದಲ್ಲಿ ಮಾತ್ರ ಪರೀಕ್ಷೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಯಡಿಯೂರಪ್ಪ ಸಂಘದ ಹಿರಿಯ ಪ್ರಚಾರದ ಹರಿಭಾವು ವಝೆ ಅವರ ಆರೋಗ್ಯ ವಿಚಾರಿಸಿದರು ಬೆಳಗಾವಿಯ ಸಂಬ್ರಾ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು ವಿದ್ಯಾರ್ಥಿಗಳು ಭಯಪಡಬೇಕಿಲ್ಲ ಎಂದು ಸ್ಪಷ್ಟಪಡಿಸಿದರು. ಬೆಳಗಾವಿ ಬಿಮ್ಸ್ ಗೆ ಐಎಎಸ್ ಅಧಿಕಾರಿಯೊಬ್ಬರನ್ನು ಆಡಳಿತಾಧಿಕಾರಿಯಾಗಿ ನೇಮಿಸಲಾಗುವುದು. ಅಲ್ಲಿನ ವ್ಯವಸ್ಥೆಯನ್ನು ಸರಿಪಡಿಸಲಾಗುವುದು ಸಕ್ಕರೆ ಕಾರ್ಖಾನೆಗಳ ಕಬ್ಬಿನ ಬಿಲ್ …
Read More »ಸ್ಲಂ, ಬಡ ಜನರಿರುವ ಪ್ರದೇಶಗಳಿಗೆ ವ್ಯಾಕ್ಸಿನ್ ನೀಡಿ -ಸರ್ಕಾರಕ್ಕೆ ಹೈಕೋರ್ಟ್ ಆದೇಶ
ಬೆಂಗಳೂರು: ಕೋವಿಡ್ ಸಂಬಂಧ ಪ್ರಕರಣಗಳ PIL ಅರ್ಜಿ ವಿಚಾರಣೆ ವೇಳೆ ಹೈಕೋರ್ಟ್ ಸ್ಲಮ್, ಬಡ ಜನರಿರುವ ಪ್ರದೇಶಗಳಿಗೆ ವ್ಯಾಕ್ಸಿನ್ ನೀಡುವಂತೆ ಆದೇಶ ಹೊರಡಿಸಿದೆ. ಎನ್ಜಿಒಗಳ ಸಹಕಾರ ಪಡೆದು ಪೌರ ಕಾರ್ಮಿಕರು, ಆರೋಗ್ಯ ಕಾರ್ಯಕರ್ತರು, ಆದ್ಯತಾ ವಲಯಗಳಿಗೆ ವ್ಯಾಕ್ಸಿನ್ ನೀಡಿ. ಇವರ ಕುಟುಂಬದವರಿಗೂ ವ್ಯಾಕ್ಸಿನೇಷನ್ಗೆ ಕ್ರಮವಹಿಸಿ. ಇದಕ್ಕಾಗಿ ನಡೆಸಿದ ವಿಶೇಷ ಅಭಿಯಾನಗಳ ಮಾಹಿತಿ ನೀಡಿ. ವಿಶೇಷ ಚೇತನರಿಗೆ ವ್ಯಾಕ್ಸಿನೇಷನ್ ಬಗ್ಗೆಯೂ ಮಾಹಿತಿ ನೀಡಿ ಎಂದು ಇದೇ ವೇಳೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ …
Read More »ಜೂನ್ ತಿಂಗಳಲ್ಲಿ ರಾಜ್ಯಕ್ಕೆ ಬರಲಿದೆ 58 ಲಕ್ಷ ಡೋಸ್ ವ್ಯಾಕ್ಸಿನ್
ಬೆಂಗಳೂರು: ಈ ತಿಂಗಳಲ್ಲೇ ರಾಜ್ಯಕ್ಕೆ 58 ಲಕ್ಷ ಡೋಸ್ ವ್ಯಾಕ್ಸಿನ್ ಬರುತ್ತದೆ ಅಂತ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಮಾಹಿತಿ ನೀಡಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು ಕೇಂದ್ರದಿಂದ ರಾಜ್ಯಕ್ಕೆ ವ್ಯಾಕ್ಸಿನ್ ಪೂರೈಕೆಯ ವಿಚಾರದ ಬಗ್ಗೆ ಸ್ಪಷ್ಟೀಕರಣ ನೀಡಿದ್ದಾರೆ. ಈ ತಿಂಗಳಲ್ಲೇ ರಾಜ್ಯಕ್ಕೆ 58 ಲಕ್ಷ ಡೋಸ್ ವ್ಯಾಕ್ಸಿನ್ ಬರುತ್ತದೆ ಎಂದು ಕೇಂದ್ರ ಹೇಳಿದೆ. ಅದರಲ್ಲಿ 44 ಲಕ್ಷಕ್ಕೂ ಹೆಚ್ಚು ವ್ಯಾಕ್ಸಿನ್ ಉಚಿತವಾಗಿ ಕೇಂದ್ರ ಸರ್ಕಾರ ಕೊಡುತ್ತಿದೆ. ರಾಜ್ಯ ಸರ್ಕಾರ ಖರೀದಿ …
Read More »ಭಾವನೆಗಳಿಗೆ ಧಕ್ಕೆಯಾಗಿದ್ದರೆ ಕ್ಷಮೆ ಯಾಚಿಸುತ್ತಿದ್ದೇವೆ -ಕನ್ನಡದಲ್ಲೇ ಕ್ಷಮೆ ಕೇಳಿದ ಗೂಗಲ್
ಬೆಂಗಳೂರು: ಕನ್ನಡ ಭಾಷೆಗೆ ಅವಮಾನ ಮಾಡಿದ ಗೂಗಲ್ ಕೊನೆಗೂ ಕನ್ನಡಿಗರ ಆಗ್ರಹಕ್ಕೆ ಮಣಿದಿದ್ದು, ಸಮಸ್ತ ಕನ್ನಡಿಗರಲ್ಲಿ ಕ್ಷಮೆ ಯಾಚನೆ ಮಾಡಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಗೂಗಲ್.. ಹುಡುಕುವುದು ಯಾವಾಗಲೂ ಪರಿಪೂರ್ಣವಾಗಿರುವುದಿಲ್ಲ. ಕೆಲವೊಮ್ಮೆ, ಇಂಟರ್ನೆಟ್ನಲ್ಲಿ ನಿರ್ದಿಷ್ಟವಾದ ಹುಡುಕಾಟಗಳಿಗೆ ಬರುವ ಫಲಿತಾಂಶ ಆಶ್ಚರ್ಯವನ್ನುಂಟು ಮಾಡುತ್ತದೆ. ಇದು ಸೂಕ್ತವಲ್ಲ ಎಂಬುದು ನಮಗೆ ಗೊತ್ತು, ಆದರೆ ಯಾವುದೇ ಒಂದು ಸಮಸ್ಯೆ ಎದುರಾದಾಗ ಮತ್ತು ನಮ್ಮ ಗಮನಕ್ಕೆ ಬಂದಾಗ ಕ್ಷಿಪ್ರವಾಗಿ ಸಮರ್ಪಕ ಕ್ರಮ ತೆಗೆದುಕೊಳ್ಳುತ್ತೇವೆ ಮತ್ತು …
Read More »ಹಾಲು ಸಂಗ್ರಹ 89 ಲಕ್ಷ ಲೀಟರ್‌ಗೆ ಏರಿಕೆ
ಬೆಂಗಳೂರು: ಲಾಕ್‌ಡೌನ್ ನಡುವೆ ಹಾಲು ಉತ್ಪಾದನೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಕೆಎಂಎಫ್ (ಕರ್ನಾಟಕ ಹಾಲು ಮಹಾಮಂಡಳ) ದಿನಕ್ಕೆ ಸಂಗ್ರಹಿಸುತ್ತಿರುವ ಒಟ್ಟು ಹಾಲಿನ ಪ್ರಮಾಣ 89 ಲಕ್ಷ ಲೀಟರ್‌ಗೆ ಏರಿಕೆಯಾಗಿದೆ. ಮೇ ಮೊದಲ ವಾರದಲ್ಲಿ 70 ಲಕ್ಷ ಲೀಟರ್ ಹಾಲನ್ನು ಒಕ್ಕೂಟಗಳಿಗೆ ರೈತರು ಪೂರೈಸುತ್ತಿದ್ದರು. ಒಂದೇ ವಾರದಲ್ಲಿ ಅದರ ಪ್ರಮಾಣ 82 ಲಕ್ಷ ಲೀಟರ್‌ಗೆ ಏರಿಕೆಯಾಗಿತ್ತು. ಈಗ 89 ಲಕ್ಷ ಲೀಟರ್‌ಗೆ ಮುಟ್ಟಿದೆ. ಜೂನ್ ಮತ್ತು ಜುಲೈನಲ್ಲಿ ಇನ್ನಷ್ಟು ಹೆಚ್ಚಳವಾಗುವ ಸಾಧ್ಯತೆ …
Read More »ಇಂದು ಕೊರೋನಾ ರಣಕೇಕೆ: 839 ಹೊಸ ಪ್ರಕರಣ, 10 ಸಾವು
ಬೆಳಗಾವಿ ಜಿಲ್ಲೆಯಲ್ಲಿ ಇಂದು ಮತ್ತೆ ಕೊರೋನಾ ಅಟ್ಟಹಾಸ ಮೆರೆದಿದೆ. ಇಂದು ಒಂದೇ ದಿನ ಹೊಸದಾಗಿ 839 ಜನರಲ್ಲಿ ಮಹಾಮಾರಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. 10 ಸೋಂಕಿತರು ಬಲಿಯಾಗಿದ್ದಾರೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಗುರುವಾರ ಹೊರಡಿಸಿದ ಹೆಲ್ತ್ ಬುಲೆಟಿನ್‍ನಲ್ಲಿ ಮತ್ತೆ 839 ಕೊರೊನಾ ಪಾಸಿಟಿವ್ ಕೇಸ್‍ಗಳು ಪತ್ತೆಯಾಗಿವೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 68,621 ಕ್ಕೆ ಏರಿಕೆಯಾಗಿದೆ. ಅಥಣಿ ತಾಲೂಕಿನಲ್ಲಿ 39, ಬೆಳಗಾವಿಯಲ್ಲಿ 291, …
Read More »
Laxmi News 24×7