Breaking News

ಜಿಲ್ಲೆ

ತಾಲೂಕಿನ ಎಲ್ಲಾ ಪೆಟ್ರೋಲ್ ಪಂಪ್ ಮಾಲೀಕರಿಗೆ ಹಾಗೂ ಸಿಬ್ಬಂದಿಗಳಿಗೆ ಸತೀಶ್ ಶುಗರ್ಸ್ ವತಿಯಿಂದ ಮಾಸ್ಕ್, ಸ್ಯಾನಿಟೈಸರ್ ಹ್ಯಾಂಡ್ ಗ್ಲೌಸ್ ವಿತರಿಸಿದ ರಾಹುಲ್ ಜಾರಕಿಹೊಳಿ

ಗೋಕಾಕ: ತಾಲೂಕಿನ ಎಲ್ಲಾ ಪೆಟ್ರೋಲ್ ಪಂಪ್ ಮಾಲೀಕರಿಗೆ ಹಾಗೂ ಸಿಬ್ಬಂದಿಗಳಿಗೆ ಸತೀಶ್ ಶುಗರ್ಸ್ ವತಿಯಿಂದ ಮಾಸ್ಕ್, ಸ್ಯಾನಿಟೈಸರ್ ಹಾಗೂ ಹ್ಯಾಂಡ್ ಗ್ಲೌಸ್ ಗಳನ್ನು ಯುವ ನಾಯಕ ರಾಹುಲ್ ಜಾರಕಿಹೊಳಿ ಮಂಗಳವಾರ ವಿತರಿಸಿದರು. ಜಿಲ್ಲೆಯಲ್ಲಿ ಕೊರೋನಾ ವ್ಯಾಪಕವಾಗಿ ವಿಸ್ತಾರಗೊಳ್ಳುತ್ತಿರುವ ಹಿನ್ನೆಲೆ ಜನರ ರಕ್ಷಣೆಗಾಗಿ ರಾಹುಲ್ ಅವರು ಮಾಸ್ಕ್, ಸ್ಯಾನಿಟೈಸರ್ ವಿತರಿಸಿ, ಕೊರೋನಾ ಜಾಗೃತಿ ಮೂಡಿಸುತ್ತಿದ್ದಾರೆ. ಗ್ರಾಮೀಣ ಜನತೆ ಸ್ವಚ್ಛತೆಗೆ ಆಧ್ಯತೆ ನೀಡಬೇಕು. ಈ ಹೆಮ್ಮಾರಿ ಸೋಂಕನ್ನು ಕಟ್ಟಿಹಾಕಲು ಸಾಮಾಜಿಕ ಅನಿರ್ವಾಯ ಎಂದರು. …

Read More »

ಬಿಮ್ಸ್ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರ ನಡುವೆ ಶವವಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ಪತ್ರೆಯ 7 ನರ್ಸ್ ಗಳನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಿ ಜಿಲ್ಲಾ ಸರ್ಜನ್ ಆದೇಶ

ಬೆಳಗಾವಿ: ಬಿಮ್ಸ್ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರ ನಡುವೆ ಶವವಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ಪತ್ರೆಯ 7 ನರ್ಸ್ ಗಳನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಿ ಜಿಲ್ಲಾ ಸರ್ಜನ್ ಆದೇಶ ಹೊರಡಿಸಿದ್ದಾರೆ. ಬೆಳಗಾವಿ ಬಿಮ್ಸ್ ಆಸ್ಪತ್ರೆ ಅವ್ಯವಸ್ಥೆ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಇದೀಗ ಜಿಲ್ಲಾ ಸರ್ಜನ್ ಡಾ.ಹುಸೇನ್ ಸಾಬ್ 7 ನರ್ಸ್ ಗಳ ವಿರುದ್ಧ ಕ್ರಮ ಕೈಗೊಂಡು, ಕೆಲಸದಿಂದ ಬಿಡುಗಡೆಗೊಳಿಸಿ ಆದೇಶ ಹೊರಡಿಸಿದ್ದಾರೆ. ತಮ್ಮ ವಿರುದ್ಧದ ಕ್ರಮಕ್ಕೆ ಕಣ್ಣೀರಿಟ್ಟ ನರ್ಸ್ ಗಳು ರಿಲಿವಿಂಗ್ …

Read More »

ಶನಿವಾರ, ಭಾನುವಾರ ಮತ್ರವಲ್ಲ, ಶುಕ್ರವಾರದಿಂದಲೇ ಜಾರಿಯಾಗಲಿದೆ. ಲಾಕ್ ಡೌನ್

ಬೆಳಗಾವಿ – ಬೆಳಗಾವಿ ಜಿಲ್ಲೆಯಲ್ಲಿ ಜೂನ್ 4ರಿಂದ 7ರ ವರೆಗೆ ಸಂಪೂರ್ಣ ಲಾಕ್ ಡೌನ್ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ವೀಕ್ ಎಂಡ್ ಲಾಕ್ ಡೌನ್ ಈ ಬಾರಿ ಶನಿವಾರ, ಭಾನುವಾರ ಮತ್ರವಲ್ಲ, ಶುಕ್ರವಾರದಿಂದಲೇ ಜಾರಿಯಾಗಲಿದೆ. ಶುಕ್ರವಾರ ಬೆಳಗ್ಗೆ 6 ಗಂಟೆಯಿಂದ ಸೋಮವಾರ ಬೆಳಗ್ಗೆ 6 ಗಂಟೆಯವರೆಗೆ ಸಂಪೂರ್ಣ ಲಾಕ್ ಡೌನ್ ಘೋಷಿಸಲಾಗಿದೆ. ಶುಕ್ರವಾರ, ಶನಿವಾರ ಹಾಗೂ ಭಾನುವಾರ ಬೆಳಗ್ಗೆ ಕೂಡ ಅಗತ್ಯ ವಸ್ತುಗಳು ಸಿಗುವುದಿಲ್ಲ.

Read More »

ಪಾಸಿಟಿವಿಟಿ ರೇಟ್ ಶೇ.5ರೊಳಗೆ ಬರುವವರೆಗೆ ಲಾಕ್ ಡೌನ್ ಮುಂದುವರಿಸಲು ಸಿದ್ದರಾಮಯ್ಯ ಆಗ್ರಹ

ಬೆಂಗಳೂರು : ಟೆಸ್ಟಿಂಗ್ ಪಾಸಿಟಿವಿಟಿ ರೇಟ್ ಶೇ.5ರೊಳಗೆ ಬರುವವರೆಗೆ ಲಾಕ್ ಡೌನ್ ಮುಂದುವರಿಸಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಪಾಸಿಟಿವಿಟಿ ರೇಟ್ ಶೇ. 5ರೊಳಗೆ ಬರುವ ವರೆಗೆ ಸರ್ಕಾರ ಎಚ್ಚರಿಕೆಯಿಂದ ಹೆಜ್ಜೆ ಇಡಬೇಕು ಎಂದು ಅವರು ತಿಳಿಸಿದ್ದಾರೆ. ಲಾಕ್ ಡೌನ್ ಮತ್ತಿತರ ವಿಷಯದಲ್ಲಿ ತಜ್ಞರ ಸಲಹೆಯನ್ನು ಸರ್ಕಾರ ಚಾಚೂತಪ್ಪದೆ ಪಾಲಿಸಬೇಕು. ಎಲ್ಲರಿಗೂ ಲಸಿಕೆ ಹಾಕುವುದೊಂದೇ ಕೊರೊನಾದಿಂದ ದೂರ ಇರುವ ಮಾರ್ಗ. 12 ವರ್ಷದೊಳಗಿನ ಮಕ್ಕಳನ್ನು …

Read More »

ಬೆಳಗಾವಿ ಖಾಸಗಿ ಆಸ್ಪತ್ರೆಗಳಲ್ಲಿ COVID19 ಸೋಂಕಿತರಿಗೆ ಉಚಿತವಾಗಿ ಚಿಕಿತ್ಸೆ ನೀಡಲಾಗುವುದು: ಗೋವಿಂದ ಕಾರಜೋಳ

ಬೆಳಗಾವಿ: ಬಿಮ್ಸ್ ನಲ್ಲಿ ಕೋವಿಡ್ ಸಂಬಂಧಿಸಿದ ಬೆಡ್ ಗಳು ಭರ್ತಿಯಾಗಿದ್ದರೆ ಆಸ್ಪತ್ರೆಗೆ ಬರುವ ರೋಗಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಿ ಆಯುಷ್ಮಾನ್ ಭಾರತ-ಆರೋಗ್ಯ ಕರ್ನಾಟಕ ಯೋಜನೆಯಡಿ ನೋಂದಾಯಿಸಲ್ಪಟ್ಟಿರುವ ಖಾಸಗಿ ಆಸ್ಪತ್ರೆಗೆ ಕಳುಹಿಸಬೇಕು. ಇಂತಹ ಆಸ್ಪತ್ರೆಗಳಲ್ಲಿ ಸೋಂಕಿತರಿಗೆ ಉಚಿತವಾಗಿ ಚಿಕಿತ್ಸೆ ನೀಡಲಾಗುವುದು ಎಂದು ಉಪಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಹೇಳಿದರು. ಜಿಲ್ಲೆಯಲ್ಲಿ ಕೋವಿಡ್ ಹಾಗೂ ಪ್ರವಾಹ ನಿರ್ವಹಣೆಗೆ ಸಂಬಂಧಿಸಿದಂತೆ ನಗರದ ಪ್ರವಾಸಿ ಮಂದಿರದಲ್ಲಿ ಸೋಮವಾರ ಹಿರಿಯ ಅಧಿಕಾರಿಗಳ ಜತೆ …

Read More »

ಏಳು ವರ್ಷದಲ್ಲಿ ದೇಶವನ್ನು 70 ವರ್ಷಗಳಷ್ಟು ಹಿಂದಕ್ಕೆ ಕೊಂಡೊಯ್ದಿದ್ದೇ ಮೋದಿ ಸಾಧನೆ: ಸಿದ್ದರಾಮಯ್ಯ

ಬೆಂಗಳೂರು, ಮೇ 31- ಬಿಜೆಪಿ ನಾಯಕರು ನಿನ್ನೆಗೆ ಮೋದಿಯವರ ನೇತೃತ್ವದ ಸರ್ಕಾರಕ್ಕೆ ಏಳು ವರ್ಷ ತುಂಬಿತೆಂದು ಖಾಲಿ ಕೊಡ ಹೊತ್ತುಕೊಂಡು ಸಂಭ್ರಮ ಪಟ್ಟಿದ್ದಾರೆ. ಹೋಗಿದೆ. ಮಾನವಂತ, ಸೂಕ್ಷ್ಮ ಸಂವೇದನೆಯ ಜನ ಏನೆನ್ನುತ್ತಾರೆ ಎಂಬ ಬಗ್ಗೆ ಸಣ್ಣ ಸ್ಪಂದನೆಯೂ ಇಲ್ಲದ ಬಿಜೆಪಿ ನಾಯಕರು ತಮ್ಮ ಬೆನ್ನು ತಾವೇ ತಟ್ಟಿಕೊಂಡು ಸಂಭ್ರಮಿಸಿದ್ದಾರೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ತಮ್ಮ ನಿವಾಸದಲ್ಲಿಂದು ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ತಮ್ಮ …

Read More »

ತಂಬಾಕು ಸಂಬಂಧಿ ಕ್ಯಾನ್ಸರ್: ಲಕ್ಷ ಪುರುಷರಲ್ಲಿ 40 ಮಂದಿಗೆ ದೃಢ

ಬೆಂಗಳೂರು: ಜನಸಂಖ್ಯೆ ಆಧಾರಿತ ಕ್ಯಾನ್ಸರ್ ನೋಂದಣಿ ಪ್ರಕಾರ ನಗರದಲ್ಲಿ ಒಂದು ಲಕ್ಷ ಪುರುಷರಲ್ಲಿ 40 ಮಂದಿ ಹಾಗೂ ಒಂದು ಲಕ್ಷ ಮಹಿಳೆಯರಲ್ಲಿ 20 ಮಂದಿ ತಂಬಾಕು ಸಂಬಂಧಿ ಕ್ಯಾನ್ಸರ್‌ನಿಂದ ಬಳಲುತ್ತಿದ್ದಾರೆ ಎಂದು ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ ತಿಳಿಸಿದೆ. ಧೂಮಪಾನ ಹಾಗೂ ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಶ್ವಾಸಕೋಶದ ಸಮಸ್ಯೆ ಸೇರಿದಂತೆ ವಿವಿಧ ಕಾಯಿಲೆಗಳು ಕಾಣಿಸಿಕೊಳ್ಳಲಿವೆ. ತಂಬಾಕು ಬಳಕೆಯಲ್ಲಿ ದೇಶವು ಎರಡನೇ ಅತಿ ದೊಡ್ಡ ದೇಶ. ಒಟ್ಟಾರೆ ಜನಸಂಖ್ಯೆಯಲ್ಲಿ ಶೇ …

Read More »

ಸೋಯಾಬಿನ ಬೆಳೆಯನ್ನು ಬಿತ್ತನೆ ಮಾಡುವ ರೈತರು ಹದವಾದ ಮಳೆಯಾದ ಮೇಲೆ ಭೂಮಿಯ ತೇವಾಂಶ ನೋಡಿಕೋಂಡು ಬಿತ್ತನೆ ಮಾಡಬೇಕು: ಸಹಾಯಕ ಕೃಷಿ ನಿರ್ದೇಶಕ ಎಂ.ಎಂ. ನದಾಫ

ಗೋಕಾಕ: ಸೋಯಾಬಿನ ಬೆಳೆಯನ್ನು ಬಿತ್ತನೆ ಮಾಡುವ ರೈತರು ಹದವಾದ ಮಳೆಯಾದ ಮೇಲೆ ಭೂಮಿಯ ತೇವಾಂಶ ನೋಡಿಕೋಂಡು ಬಿತ್ತನೆ ಮಾಡಬೇಕು ಎಂದು ಗೋಕಾಕ ಹಾಗೂ ಮೂಡಲಗಿ ತಾಲೂಕಿನ ರೈತರಿಗೆ ಸಹಾಯಕ ಕೃಷಿ ನಿರ್ದೇಶಕ ಎಂ.ಎಂ. ನದಾಫ ರವರು ಸಲಹೆ ನೀಡಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುವ ಅವರು, ಸೋಯಾಬಿನ ಬಿತ್ತನೆ ಮಾಡಲು ಜೂನ ಮೊದಲನೆಯ ವಾರದಿಂದ ಜುಲೈ 2ನೇ ವಾರದವರೆಗೆ ಅವಕಾಶ ಇದ್ದು ಸಾಕಷ್ಠು ಮಳೆಯಾಗಿ ಭೂಮಿ ಹಸಿಯಾದ ನಂತರ …

Read More »

ಗ್ರೇಡ್-2 ತಹಶೀಲ್ದಾರಾಗಿ ಅಧಿಕಾರವನ್ನು ಸ್ವೀಕರಿಸಿದ ಎಲ್.ಎಚ್.ಭೋವಿ

ಗೋಕಾಕ: ಸಮೀಪದ ಅರಭಾವಿ ನಾಡ ಕಛೇರಿಯಲ್ಲಿ ಉಪತಹಶೀಲ್ದಾರರಾಗಿ ಕಾರ್ಯ ನಿರ್ವಹಿಸುತ್ತಿದ್ದ ಎಲ್.ಎಚ್.ಭೋವಿ ಅವರು ಸರ್ಕಾರದ ಆದೇಶ ಮೇರೆಗೆ ಗ್ರೇಡ್-2 ತಹಶೀಲ್ದಾರರಾಗಿ ಪದನೊತ್ತಿ ಹೊಂದಿ ಸೋಮವಾರದಂದು ಇಲ್ಲಿಯ ತಹಶೀಲ್ದಾರ ಕಚೇರಿಯಲ್ಲಿ ಗ್ರೇಡ್-2 ತಹಶೀಲ್ದಾರಾಗಿ ಅಧಿಕಾರವನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ, ಗ್ರೇಡ್-2 ತಹಶೀಲ್ದಾರ ಎಮ್.ಎ.ಚೌಧರಿ, ಪ್ರಥಮ ದರ್ಜೆ ಸಹಾಯಕ ಆರ್.ಆಯ್. ನೇಸರಗಿ, ಗೋಕಾಕ ಕಂದಾಯ ನಿರೀಕ್ಷಕ ಎಸ್.ಎನ್.ಹಿರೇಮಠ ಸೇರಿದಂತೆ ಇತರೆ ಸಿಬ್ಬಂದಿಗಳು ಶುಭ ಹಾರೈಸಿದರು.  ಎಲ್.ಎಚ್.ಭೋವಿ ಅವರು ಸರ್ಕಾರದ …

Read More »

ಕುರ್ಚಿ ಉಳಿಸಿಕೊಳ್ಳಲು ಲಾಕ್‌ಡೌನ್ ದುರ್ಬಳಕೆ ಬೇಡ: ಶಾಸಕ ಬಸನಗೌಡ ಪಾಟೀಲ ಯತ್ನಾಳ

ವಿಜಯಪುರ: ಮುಖ್ಯಮಂತ್ರಿ ಕುರ್ಚಿ ಉಳಿಸಿಕೊಳ್ಳುವ ರಾಜಕೀಯ ಸ್ವಾರ್ಥಕ್ಕಾಗಿ ಕೋವಿಡ್ ಲಾಕ್‌ಡೌನ್ ದುರ್ಬಳಕೆ ಆಗದಿರಲಿ. ರೋಗ ನಿಯಂತ್ರಣಕ್ಕೆ ಬಂದ ಜಿಲ್ಲೆಗಳಲ್ಲಿ ಹಂತ ಹಂತವಾಗಿ ಲಾಕ್‌ಡೌನ್ ಹಿಂಪಡೆಯಬೇಕು ಎಂದು ವಿಜಯಪುರ ನಗರ ಕ್ಷೇತ್ರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಆಗ್ರಹಿಸಿದ್ದಾರೆ. ಸೋಮವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೋವಿಡ್ ಲಾಕ್‌ಡೌನ್ ಜೂನ್ 7ಕ್ಕೆ ಕೊನೆಗೊಳ್ಳಲಿದ್ದು, ಸೋಂಕು ಹರಡುವಿಕೆ ನಿಯಂತ್ರಣಕ್ಕೆ ಬಂದ ಜಿಲ್ಲೆಗಳಲ್ಲಿ ಹಂತ ಹಂತವಾಗಿ ಲಾಕ್‌ಡೌನ್ ತೆರವುಗೊಳಿಸಬೇಕು ಎಂದು ಯತ್ನಾಳ …

Read More »