ಗೋಕಾಕ: ಕೊರೋನಾ 2ನೇ ಅಲೆಯು ಗ್ರಾಮೀಣ ಭಾಗದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗ ದಳದ ಕಾರ್ಯಕರ್ತರಿಂದ ಪ್ರಾರಂಭಿಸಲಾದ ಅಂಬ್ಯುಲೆನ್ಸ್ ಉಚಿತ ಸೇವೆಗೆ ಆರ್‍ಎಸ್‍ಎಸ್‍ನ ಬೆಳಗಾವಿ ವಿಭಾಗ ಸಂಚಾಲಕ ಎಮ್.ಡಿ.ಚುನಮರಿ ಅವರು ಶನಿವಾರದಂದು ನಗರದ ಪಟಗುಂದಿ ಮಾರುತಿ ದೇವಸ್ಥಾನದ ಆವರಣದಲ್ಲಿ ಚಾಲನೆ ನೀಡಿದರು. ಭಜರಂಗದಳದ ಬೆಳಗಾವಿ ವಿಭಾಗೀಯ ಸಂಯೋಜಕ ಸದಾಶಿವ ಗುದಗಗೋಳ ಅವರು ಮಾತನಾಡಿ, ಜನತೆ ಧೈರ್ಯದಿಂದ ಈ ಕೊರೋನಾ ವೈರಸ್‍ನ್ನು ಎದುರಿಸಿ, ನಿಮ್ಮೊಂದಿಗೆ …
Read More »ಪಿಪಿಇ ಉಡುಪು ಧರಿಸಿ ಕೋವಿಡ್ ವಾರ್ಡ್‌ಗೆ ಹೋಗಿದ್ದ ಲಕ್ಷ್ಮಣ ಸವದಿ ಅಸಮಾಧಾನ
ಬೆಳಗಾವಿ: ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಇಲ್ಲಿನ ಜಿಲ್ಲಾಸ್ಪತ್ರೆ (ಬಿಮ್ಸ್)ಗೆ ಶನಿವಾರ ಭೇಟಿ ನೀಡಿ ಪರಿಶೀಲಿಸಿದರು. ಪಿಪಿಇ ಉಡುಪು ಧರಿಸಿ ಕೋವಿಡ್ ವಾರ್ಡ್‌ಗೆ ಹೋಗಿದ್ದ ಅವರು ಅಲ್ಲಿನ ಅವ್ಯವಸ್ಥೆ ಕಂಡು ಅಧಿಕಾರಿಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಆಸ್ಪತ್ರೆಯಲ್ಲಿ ಶುಚಿತ್ವ ಇಲ್ಲದಿರುವುದನ್ನು ಕಂಡು ಬಿಮ್ಸ್ ನಿರ್ದೇಶಕ ಡಾ.ವಿನಯ್ ದಾಸ್ತಿಕೊಪ್ಪ ಹಾಗೂ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ‘ಕೂಡಲೇ ವ್ಯವಸ್ಥೆ ಸರಿಪಡಿಸಬೇಕು. ಶುಚಿತ್ವ ಕಾಪಾಡಿಕೊಳ್ಳಬೇಕು. ಸೋಂಕಿತರಿಗೆ ಪೌಷ್ಟಿಕ ಆಹಾರ ನೀಡಬೇಕು’ ಎಂದು …
Read More »ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ತಪ್ಪಿತಸ್ಥರಿಂದ ಒಟ್ಟಾರೆ 45,29,250 ರೂ. ದಂಡ ಸಂಗ್ರಹ: M.G..ಹಿರೇಮಠ
ಬೆಳಗಾವಿ : ಜಿಲ್ಲೆಯಲ್ಲಿ ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ತಪ್ಪಿತಸ್ಥರಿಂದ ಒಟ್ಟಾರೆ 45,29,250 ರೂ. ದಂಡ ಸಂಗ್ರಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಮಾಸ್ಕ್ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳದಿರುವ ಕುರಿತು 36,352 ಪ್ರಕರಣಗಳು, ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ 2005 ರಡಿಯಲ್ಲಿ 240 ಪ್ರಕರಣಗಳು ಮತ್ತು ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆ 2020 ಅಡಿಯಲ್ಲಿ 117 ಪ್ರಕರಣಗಳು ದಾಖಲಿಸಲಾಗಿದೆ ಎಂದು …
Read More »ಕೋವಿಡ್ ವಾರ್ಡ್ ನ ಸ್ಥಿತಿ ಕಂಡು ಇದೇನು ಆಸ್ಪತ್ರೆಯೇ, ದನದ ಕೊಟ್ಟಿಗೆ ಇದಕ್ಕಿಂತ ಚೆನ್ನಾಗಿರುತ್ತದೆ ಎಂದು ಬಿಮ್ಸ್ ನಿರ್ದೇಶಕ ವಿನಯ್ ಜಾಸ್ತಿಕೊಪ್ಪಗೆ ಅವರನ್ನು ತರಾಟೆಗೆ ತೆಗೆದುಕೊಂಡ ಲಕ್ಷ್ಮಣ ಸವದಿ
ಬೆಳಗಾವಿ: ಬಿಮ್ಸ್ ಆಸ್ಪತ್ರೆ ಅವ್ಯವಸ್ಥೆಗಳ ಆಗರವಾಗಿದೆ, ಕೋವಿಡ್ ಸೋಂಕಿತರಿಗೆ ಸರಿಯಾಗಿ ಚಿಕಿತ್ಸೆ ಸಿಗುತ್ತಿಲ್ಲ ಎಂಬ ಮಾಧ್ಯಮಗಳ ವರದಿ ನಂತರ ಆಸ್ಪತ್ರೆಗೆ ಶನಿವಾರ ಬೆಳಗ್ಗೆ ಭೇಟಿ ನೀಡಿದ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಆಸ್ಪತ್ರೆಯ ಅವ್ಯವಸ್ಥೆ ಕಂಡು ಹೌಹಾರಿದರು. ಕೋವಿಡ್ ವಾರ್ಡ್ ನ ಸ್ಥಿತಿ ಕಂಡು ಇದೇನು ಆಸ್ಪತ್ರೆಯೇ, ದನದ ಕೊಟ್ಟಿಗೆ ಇದಕ್ಕಿಂತ ಚೆನ್ನಾಗಿರುತ್ತದೆ ಎಂದು ಬಿಮ್ಸ್ ನಿರ್ದೇಶಕ ವಿನಯ್ ಜಾಸ್ತಿಕೊಪ್ಪಗೆ ಅವರನ್ನು ತರಾಟೆಗೆ ತೆಗೆದುಕೊಂಡರು ಎಂದು ತಿಳಿದುಬಂದಿದೆ. ಇಂದು ಬೆಳಗ್ಗೆ …
Read More »ಕೋವಿಡ್ ಸೋಂಕಿತ ವೃದ್ಧ ದಂಪತಿಯನ್ನು ಅಪಾರ್ಟ್ ಮೆಂಟ್ ನಿಂದ ಹೊರದಬ್ಬಿದ ಅಮಾನುಷ ಕೃತ್ಯ ಬೆಳಗಾವಿಯಲ್ಲಿ ನಡೆದಿದೆ.
ಬೆಳಗಾವಿ: ಕೋವಿಡ್ ಸೋಂಕಿತ ವೃದ್ಧ ದಂಪತಿಯನ್ನು ಅಪಾರ್ಟ್ ಮೆಂಟ್ ನಿಂದ ಹೊರದಬ್ಬಿದ ಅಮಾನುಷ ಕೃತ್ಯ ಬೆಳಗಾವಿಯಲ್ಲಿ ನಡೆದಿದೆ. ಆಹಾರ, ಆಶ್ರಯವಿಲ್ಲದೆ ಬೀದಿ ಬದಿಯಲ್ಲಿದ್ದ ವೃದ್ಧ ದಂಪತಿಯನ್ನು ಕೊನೆಗೆ ಕೆಲವು ಸಾಮಾಜಿಕ ಕಾರ್ಯಕರ್ತರು ರಕ್ಷಿಸಿ ಆಸ್ಪತ್ರೆಗೆ ಸೇರಿಸಿದ ಘಟನೆ ನಡೆದಿದೆ. ಮಹದೇವ ದೇವನ್(70 ವ) ಮತ್ತು ಅವರ ಪತ್ನಿ 65 ವರ್ಷದ ಶಾಂತ ಹಿಂಡ್ವಾಡಿ ಅಪಾರ್ಟ್ ಮೆಂಟ್ ಕಾಂಪ್ಲೆಕ್ಸ್ ನ ಕ್ವಾರ್ಟರ್ಸ್ ನಲ್ಲಿ ವಾಸಿಸುತ್ತಿದ್ದರು. ಅಲ್ಲಿ ಮಹದೇವ್ ವಾಚ್ ಮೆನ್ ಆಗಿ …
Read More »ಉಚಿತ ವ್ಯಾಕ್ಸಿನ್ ನನ್ನು ಖಾಸಗಿ ಆಸ್ಪತ್ರೆಗಳಿಗೆ ಮಾರಾಟ ಮಾಡಿ, ಶಾಸಕರೇ ಕಮಿಷನ್ ಪಡೆಯುವ ದಂಧೆಗೆ ಇಳಿದಿದ್ದಾರೆ ಎಂಬ ಆರೋಪ.?
ಬೆಂಗಳೂರು: ಸರ್ಕಾರದಿಂದ ಕೊಡಲಾಗುತ್ತಿರುವ ಉಚಿತ ವ್ಯಾಕ್ಸಿನ್ ನನ್ನು ಖಾಸಗಿ ಆಸ್ಪತ್ರೆಗಳಿಗೆ ಮಾರಾಟ ಮಾಡಿ, ಶಾಸಕರೇ ಕಮಿಷನ್ ಪಡೆಯುವ ದಂಧೆಗೆ ಇಳಿದಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಬೆಂಗಳೂರಿನ ಬಸವನಗುಡಿ ಶಾಸಕ ರವಿ ಸುಬ್ರಹ್ಮಣ್ಯ ವಿರುದ್ಧ ಸಾಮಾಜಿಕ ಕಾರ್ಯಕರ್ತ ವೆಂಕಟೇಶ್ ಇಂತದ್ದೊಂದು ಆರೋಪ ಮಾಡಿದ್ದು, ಸರ್ಕಾರ ನೀಡುತ್ತಿರುವ ಉಚಿತ ಲಸಿಕೆಯನ್ನು ಖಾಸಗಿ ಆಸ್ಪತ್ರೆಗಳಿಗೆ ಮಾರಾಟ ಮಾಡುತ್ತಿದ್ದಾರೆ ಎಂದಿದ್ದಾರೆ. ಶಾಸಕರು ವ್ಯಾಕ್ಸಿನ್ ಪಡೆದು ಅನುಗ್ರಹ ವಿಠಲ ಎಂಬ ಖಾಸಗಿ ಆಸ್ಪತ್ರೆಗೆ ಮಾರಾಟ ಮಾಡುತ್ತಿದ್ದು, ಪ್ರತಿ …
Read More »ಸರ್ಕಾರದ ಆರ್ಥಿಕ ಪ್ಯಾಕೇಜ್’ನ್ನು ‘ಬೋಗಸ್’ ಎಂದ ಕಾಂಗ್ರೆಸ್ ನಾಯಕರು
ಬೆಂಗಳೂರು: ರಾಜ್ಯದ ಆಡಳಿತಾರೂಢ ಬಿಜೆಪಿ ಸರ್ಕಾರದ ಕೋವಿಡ್-19 ಆರ್ಥಿಕ ಪ್ಯಾಕೇಜ್’ನ್ನು ರಾಜ್ಯ ಕಾಂಗ್ರೆಸ್ ನಾಯಕರು ಕಣ್ಣೊರೆಸುವ ಪ್ಯಾಕೇಜ್ ಎಂದು ಟೀಕಿಸಿದ್ದಾರೆ. ಪ್ರದೇಶ ಕಾಂಗ್ರೆಸ್ ಕಚೇರಿಯಲ್ಲಿಂದು ಜಂಟಿ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಚಿವರುಗಳು, ಶಾಸಕರಾದ ಕೃಷ್ಣ ಭೈರೇಗೌಡ, ಪ್ರಿಯಾಂಕ ಖರ್ಗೆ ಹಾಗೂ ರಿಜ್ವಾನ್ ಅರ್ಷದ್ ಅವರು, ಸರ್ಕಾರ ಘೋಷಿಸಿರುವ ಆರ್ಥಿಕ ಪ್ಯಾಕೇಜ್ ನ್ನು ಬೋಗಸ್ ಎಂದು ಕರೆದಿದ್ದಾರೆ. ಅಲ್ಲದೆ, ಲಾಕ್‌ಡೌನ್ ಬಾಧಿತರಿಗೆ ಕನಿಷ್ಟ ೧೦ ಸಾವಿರ ನೆರವು ಘೋಷಿಸುವಂತೆ ಸರ್ಕಾರವನ್ನು …
Read More »ರೇಪ್ ಮಾಡುವಾಗ ಸ್ನೇಹಿತರಿಗೆ ವಿಡಿಯೋ ಕಾಲ್ ಮಾಡಿ ತೋರಿಸಿದ್ದ ನೀಚ ಕಾಮುಕರು
ಬೆಂಗಳೂರು : ಕಳೆದ ಆರು ದಿನಗಳ ಹಿಂದೆ ರಾಮಮೂರ್ತಿ ನಗರದಲ್ಲಿ ಬಾಡಿಗೆ ಮನೆಯೊಂದರಲ್ಲಿ ಸೇರಿ ಒಟ್ಟಿಗೆ ಎಣ್ಣೆ ಪಾರ್ಟಿ ಮಾಡಿದ್ದರು. ತನಿಖೆ ವೇಳೆ ಪಾರ್ಟಿ ಮಾಡಿರುವ ವಿಡಿಯೋ ಆರೋಪಿಗಳ ಮೊಬೈಲ್ಗಳಲ್ಲಿ ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಾರ್ಟಿ ಬಳಿಕ ಹಣಕಾಸು ವಿಚಾರಕ್ಕೆ ಮತ್ತೆ ಗಲಾಟೆ ಶುರು ಮಾಡಿದ್ದರು. ವಿಡಿಯೋ ಕಾಲ್ ಮಾಡಿ ಬಾಂಗ್ಲಾದ ಸ್ನೇಹಿತರಿಗೆ ತೋರಿಸಿದ್ದ ಆರೋಪಿಗಳು..ಗಲಾಟೆ ವೇಳೆ ದೈಹಿಕ ಹಲ್ಲೆ ನಡೆಸಿದ್ದರು. ಪ್ರಕರಣದ ಮೊದಲ ಆರೋಪಿ ರಿದಾಯ್ ಬಾಬು …
Read More »ಆತ್ಮಹತ್ಯೆಯಿಂದ ಪತ್ನಿ ಸತ್ತ ಬೆನ್ನಿಗೇ ನೇಣು ಹಾಕಿಕೊಂಡ ಪತಿ; 4 ತಿಂಗಳ ಹಿಂದಷ್ಟೇ ಮದುವೆ ಆಗಿದ್ದ ಪ್ರೇಮಿಗಳು.
ಬೆಂಗಳೂರು: ನಾಲ್ಕು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಪ್ರೇಮಿಗಳ ವೈವಾಹಿಕ ಜೀವನ ದುರಂತ ಅಂತ್ಯ ಕಂಡಿದೆ. ಆತ್ಮಹತ್ಯೆಯಿಂದ ಪತ್ನಿ ಸಾವಿಗೀಡಾದ ಬೆನ್ನಿಗೇ ಪತಿಯೂ ನೇಣು ಹಾಕಿಕೊಂಡಿದ್ದಾನೆ. ಪತಿ ಪುನೀತ್ (21) ಹಾಗೂ ಹರ್ಷಿತಾ (19) ಮೃತಪಟ್ಟ ದಂಪತಿ. ಆತ್ಮಹತ್ಯೆ ಮಾಡಿಕೊಂಡಿರುವ ಸತಿ-ಪತಿ ಇಬ್ಬರೂ ಮಾಗಡಿ ಚೆನ್ನೇನಹಳ್ಳಿ ನಿವಾಸಿಗಳಾಗಿದ್ದು, ಮದುವೆ ಬಳಿಕ ಹೇರೋಹಳ್ಳಿಯಲ್ಲಿ ವಾಸವಾಗಿದ್ದರು. ಇಂದು ಸಂಜೆ ನಾಲ್ಕು ಗಂಟೆಗೆ ಪತಿ ಪುನೀತ್ ಮನೆಗೆ ಮರಳಿದಾಗ ಪತ್ನಿ ನೇಣು ಹಾಕಿಕೊಂಡಿದ್ದ ಸ್ಥಿತಿಯಲ್ಲಿ ಇರುವುದು …
Read More »ಜಿಂದಾಲ್‌ಗೆ ಭೂಮಿ ನೀಡುವ ನಿರ್ಧಾರ ಹಿಂತೆಗೆತ ನಮ್ಮ ಹೋರಾಟದ ಫಲ: ಯತ್ನಾಳ್
ಬೆಂಗಳೂರು: ಜಿಂದಾಲ್ ಕಂಪನಿಗೆ ಭೂಮಿ ನೀಡುವ ನಿರ್ಧಾರ ಹಿಂತೆಗೆತ ನಮ್ಮ ಹೋರಾಟದ ಫಲ. ಪ್ರಧಾನಿ ಮೋದಿ ಸೇರಿ ಕೇಂದ್ರದ ನಾಯಕರಿಗೆ ಈ ಬಗ್ಗೆ ಮನವಿ ಸಲ್ಲಿಸಿದ್ದೆವು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ. ನಮ್ಮ ರಾಜ್ಯದ ನೆಲ ಜಲ ಮತ್ತು ನೈಸರ್ಗಿಕ ಸಂಪತ್ತು ಉಳಿಸಲು ನಾವು ಇತ್ತೀಚೆಗೆ ಕರ್ನಾಟಕ ಸರ್ಕಾರ ತೆಗೆದುಕೊಂಡ ಸುಮಾರು 3660 ಎಕರೆ ಖನಿಜ ಸಂಪತ್ತು ಹೊಂದಿದ ಪ್ರತಿ ಎಕರೆಗೆ ಕೋಟ್ಯಂತರ ಬೆಲೆ …
Read More »
Laxmi News 24×7