ಬೆಳಗಾವಿಯಲ್ಲಿ ಮಂಗಳವಾರ ಒಂದೇ ದಿನ 1260 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, 24 ಜನರು ಸಾವಿಗೀಡಾಗಿದ್ದಾರೆ. ಇದು ಈವರೆಗಿನ ಎಲ್ಲ ದಾಖಲೆಗಳನ್ನೂ ಮುರಿದು ಹಾಕಿದೆ. ಬೆಳಗಾವಿ ನಗರದಲ್ಲಿ 328 ಜನರಿಗೆ ಸೋಂಕು ಪತ್ತೆಯಾಗಿದೆ. ಅಥಣಿ 186, ಚಿಕ್ಕೋಡಿ 119, ಗೋಕಾಕ 136, ಸವದತ್ತಿ 123 ಜನರಲ್ಲಿ ಸೋಂಕು ದೃಢಪಟ್ಟಿದೆ. ಗೋಕಾಕಲ್ಲಿ 8, ರಾಯಬಾಗ 5, ಅಥಣಿ 3, ಖಾನಾಪುರ 3, ಹುಕ್ಕೇರಿ 2, ಬೆಳಗಾವಿ 2, ಬೈಲಹೊಂಗಲ 1 ಸಾವು …
Read More »ರೈತರಿಗೆ ಸೂಕ್ತ ಮಾರುಕಟ್ಟೆ ಕಲ್ಪಿಸಿ, ಮೋದಿಗೆ ಎಚ್ ಡಿ ದೇವೇಗೌಡರ ಪತ್ರ
ಬೆಂಗಳೂರು: ರೈತರ ತೋಟಗಾರಿಕೆ ಬೆಳೆಗಳಿಗೆ ಸರಿಯಾದ ಬೆಳೆ ಸಿಗ್ತಿಲ್ಲ ಹೀಗಾಗಿ ಸೂಕ್ತ ಮಾರುಕಟ್ಟೆ ಕಲ್ಪಿಸಿ ಎಂದು ಮಾಜಿ ಪ್ರಧಾನಿ ದೇವೇಗೌಡ ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ಕೊರೊನಾ ಸಂಕಷ್ಟದ ಸಮಯದಲ್ಲಿ ಬೆಳೆಗಳಿಗೆ ಸೂಕ್ತ ಬೆಲೆ ಇಲ್ಲ. ಬೆಳೆಗಳನ್ನು ಮಾರುಕಟ್ಟೆಗೆ ಸಾಗಿಸುವುದು ಕಷ್ಟವಾಗಿದೆ. ಕೋಲಾರದಲ್ಲಿ ಅತಿ ಹೆಚ್ಚು ಟೊಮೊಟೋ ಬೆಳೆಯಲಾಗುತ್ತೆ. ಕೊಳ್ಳುವವರಿಲ್ಲದೆ ತಿಪ್ಪೆಗೆ ಎಸೆಯುತ್ತಿದ್ದಾರೆ. ಬೇರೆ ರಾಜ್ಯಗಳಲ್ಲೂ ಇದೇ ಪರಿಸ್ಥಿತಿಯಿದೆ. ಕಲ್ಲಂಗಡಿ ಬೆಳೆದ ರೈತರಿಗೂ ನಷ್ಟವಾಗಿದೆ. ಇನ್ನಿತರ ಬೆಳೆಗಳಿಗೂ …
Read More »ಬಿಜೆಪಿಯು ಲಸಿಕೆಗಳನ್ನು ರಫ್ತು ಮಾಡಿದೆ. ಲಸಿಕೆಗಳು ನಮ್ಮಲ್ಲೆ ಇದ್ದಿದ್ದರೆ ಅದೆಷ್ಟೋ ಜನರ ಜೀವಗಳನ್ನು ಉಳಿಸಬಹುದಿತ್ತು: ಹೆಬ್ಬಾಳ್ಕರ್
ಭಾರತವನ್ನು ಇತರ ದೇಶಗಳ ಎದುರು ಮಾದರಿಯಾಗಿಸುವ ಬದಲು, ಬಿಜೆಪಿಯು ಲಸಿಕೆಗಳನ್ನು ರಫ್ತು ಮಾಡಿದೆ. ಲಸಿಕೆಗಳು ನಮ್ಮಲ್ಲೆ ಇದ್ದಿದ್ದರೆ ಅದೆಷ್ಟೋ ಜನರ ಜೀವಗಳನ್ನು ಉಳಿಸಬಹುದಿತ್ತು. ಕಾಂಗ್ರೆಸ್ ತನ್ನ 100 ಕೋಟಿ ಯೋಜನೆಯೊಂದಿಗೆ ಲಸಿಕೆ ನೀಡಲು ಸಿದ್ಧವಿದ್ದು, ಬಿಜೆಪಿ ಇದಕ್ಕೆ ಅನುಮತಿ ನೀಡಬೇಕು ಎಂದು ಬೆಳಗಾವಿ ಗ್ರಾಮೀಣ ಶಾಸಕಿ ಆಗ್ರಹಿಸಿದ್ದಾರೆ. ಸರಣಿ ಟ್ವೀಟ್ ಮೂಲಕ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿರುವ ಲಕ್ಷ್ಮೀ ಹೆಬ್ಬಾಳ್ಕರ್ ವಿರೋಧ ಪಕ್ಷದಲ್ಲಿದ್ದರೂ ಕಾಂಗ್ರೆಸ್ ತನ್ನ ಜವಾಬ್ದಾರಿಯನ್ನು …
Read More »ಗುಂಡಿನ ಕಾಳಗದಲ್ಲಿ ಕಾಡುಗಳ್ಳ ವೀರಪ್ಪನ ಬೆವರಿಳಿಸಿದ ಪಿಎಸ್‌ಐ ಸಿದ್ದರಾಜನಾಯಕ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಚಾಮರಾಜನಗರ: ಗುಂಡಿನ ಕಾಳಗದಲ್ಲಿ ಕಾಡುಗಳ್ಳ ವೀರಪ್ಪನ ಬೆವರಿಳಿಸಿದ ಪಿಎಸ್‌ಐ ಸಿದ್ದರಾಜನಾಯಕ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಚಾಮರಾಜನಗರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಅಪರಾಧ ವಿಭಾಗದಲ್ಲಿ ಪಿಎಸ್‌ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿದ್ದರಾಜನಾಯಕ್ ಮಂಗಳವಾರ ವಿಧಿವಶರಾಗಿದ್ದಾರೆ. ಕಾಡುಗಳ್ಳ ವೀರಪ್ಪನ ಜತೆ ಮೀಣ್ಯಂನಲ್ಲಿ ನಡೆದಿದ್ದ ಗುಂಡಿನ ಕಾಳಗದಲ್ಲಿ ಸಿದ್ದರಾಜ ನಾಯಕ್ ಅವರು ಬದುಕುಳಿದಿದ್ದರು. 1992ರಲ್ಲಿ ಎಸ್ಪಿ ಹರಿಕೃಷ್ಣ ಹಾಗೂ ಎಸ್‌ಐ ಶಕೀಲ್ ಅಹಮದ್ ಜೊತೆ ಕಾರ್ಯಾಚರಣೆಯಲ್ಲಿ ಇವರು ಭಾಗಿಯಾಗಿದ್ದರು.
Read More »ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಆಘಾತ; ಹಿರಿಯ ನಟ ಕೃಷ್ಣೇಗೌಡ ವಿಧಿವಶ
ಬೆಂಗಳೂರು: ಕೊರೊನಾ ಸಂಕಷ್ಟದ ನಡುವೆ ಕನ್ನಡ ಚಿತ್ರರಂಗ ಒಬ್ಬರ ಹಿಂದೊಬ್ಬರಂತೆ ಹಿರಿಯ ಕಲಾವಿದರನ್ನು ಕಳೆದುಕೊಳ್ಳುತ್ತಿದೆ. ಇದೀಗ ಹಿರಿಯ ನಟ, ರಂಗಭೂಮಿ ಕಲಾವಿದ ಕೃಷ್ಣೇಗೌಡ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. 80 ವರ್ಷದ ಕೃಷ್ಣೇಗೌಡ ಅವರಿಗೆ ಕೆಲ ದಿನಗಳ ಹಿಂದೆ ಕೊರೊನಾ ಸೋಂಕು ದೃಢಪಟ್ಟಿತ್ತು. ಚಿಕಿತ್ಸೆ ಬಳಿಕ ಗುಣಮುಖರಾಗಿದ್ದರು. ಇತ್ತೀಚೆಗೆ ಮತ್ತೆ ಅನಾರೋಗ್ಯಕ್ಕೀಡಾಗಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ರಂಗಭೂಮಿ ಹಿನ್ನೆಲೆಯಿಂದ ಬಂದು ಚಿತ್ರರಂಗಕ್ಕೆ ಕಾಲಿಟ್ಟಿದ್ದ ಕೃಷ್ಣೇಗೌಡ …
Read More »ವಿಜಯೋತ್ಸವದ ನೆಪದಲ್ಲಿ ಬಿಜೆಪಿ ಬೆಳಗಾವಿಯಲ್ಲಿ ನಡೆಸಿದ್ದ ಜನಸೇವಕ ಸಮಾವೇಶ ಈಗ ಪೊಲೀಸ್ ಆಯುಕ್ತರಿಗೆ ಸಂಕಷ್ಟ: ರಾಜ್ಯ ಹೈಕೋರ್ಟ್ ಪೊಲೀಸ್ ಆಯುಕ್ತರ ವಿರುದ್ಧ ಗರಂ
ಬೆಳಗಾವಿ – ಗ್ರಾಮ ಪಂಚಾಯಿತಿ ಚುನಾವಣೆ ಬಳಿಕ ವಿಜಯೋತ್ಸವದ ನೆಪದಲ್ಲಿ ಬಿಜೆಪಿ ಬೆಳಗಾವಿಯಲ್ಲಿ ನಡೆಸಿದ್ದ ಜನಸೇವಕ ಸಮಾವೇಶ ಈಗ ಪೊಲೀಸ್ ಆಯುಕ್ತರಿಗೆ ಸಂಕಷ್ಟ ತಂದಿಟ್ಟಿದೆ. ಸಾಂಕ್ರಾಮಿಕ ರೋಗ ಕೊರೋನಾ ಸಂದರ್ಭದಲ್ಲಿ ಇಂತಹ ಸಮಾವೇಶ ನಡೆಸಿರುವ ಕುರಿತು ರಾಜ್ಯ ಹೈಕೋರ್ಟ್ ಪೊಲೀಸ್ ಆಯುಕ್ತರ ವಿರುದ್ಧ ಗರಂ ಆಗಿದ್ದು, ಜೂನ್ 3ರೊಳಗೆ ವಿವರಣೆ ನೀಡುವಂತೆ ಸೂಚಿಸಿದೆ. ಬೆಳಗಾವಿ ಜಿಲ್ಲಾ ಕ್ರೀಡಾಂಗಣದಲ್ಲಿ ಜನಸೇವಕ ಸಮಾವೇಶ ನಡೆದಿತ್ತು. ಆಗಿನ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ …
Read More »ಸಬ್ ಇನ್ಸ್ ಪೆಕ್ಟರ್ ಅರ್ಜುನ್ ನ್ನು ಜೈಲಿಗೆ ಕಳಿಸಲು ಸಂಸದ ಹನುಮಂತಯ್ಯ ಒತ್ತಾಯ
ಬೆಂಗಳೂರು: ‘ವಿಚಾರಣೆ ನೆಪದಲ್ಲಿ ದಲಿತ ಯುವಕನನ್ನು ಠಾಣೆಗೆ ಕರೆದೊಯ್ದು ಮೂತ್ರ ನೆಕ್ಕಿಸಿರುವ ಚಿಕ್ಕಮಗಳೂರು ಜಿಲ್ಲೆ ಗೋಣಿಬೀಡು ಠಾಣೆಯ ಸಬ್‌ಇನ್ಸ್‌ಪೆಕ್ಟರ್ ಅರ್ಜುನ್ ಅವರನ್ನು ಬಂಧಿಸಿ ಜೈಲಿಗೆ ಕಳುಹಿಸಬೇಕು. ಜೊತೆಗೆ ಸೇವೆಯಿಂದಲೇ ವಜಾಗೊಳಿಸಬೇಕು’ ಎಂದು ರಾಜ್ಯಸಭಾ ಸದಸ್ಯ ಎಲ್.ಹನುಮಂತಯ್ಯ ಒತ್ತಾಯಿಸಿದ್ದಾರೆ. ‘ಕಿರುಗುಂದ ಗ್ರಾಮದ ಕೆ.ಎಲ್.ಪುನೀತ್ ಜೊತೆ ಅರ್ಜುನ್ ಅಮಾನುಷವಾಗಿ ನಡೆದುಕೊಂಡಿದ್ದಾರೆ. ಸರ್ಕಾರಿ ಅಧಿಕಾರಿಯಾಗಿ ಅವರು ನಡೆದುಕೊಂಡಿರುವ ರೀತಿ ಖಂಡನೀಯ. ಅವರ ಕ್ರೂರ ವರ್ತನೆಯ ವಿರುದ್ಧ ಸಾಕಷ್ಟು ಟೀಕೆಗಳು ವ್ಯಕ್ತವಾದರೂ ಸರ್ಕಾರವು ಆರಂಭದಲ್ಲಿ ಯಾವುದೇ …
Read More »ಪ್ಯಾಕೇಜ್ ಪರಿಹಾರ ಸಿಗದವರಿಗೆ ಸಿಹಿ ಸುದ್ದಿ: 10 -12 ದಿನಗಳಲ್ಲಿ ಮತ್ತೊಂದು ವಿಶೇಷ ಪ್ಯಾಕೇಜ್; ಸಿಎಂ ಮಾಹಿತಿ
ಬೆಂಗಳೂರು: ರಾಜ್ಯದಲ್ಲಿ ಕೊರೋನಾದಿಂದ ಸಂಕಷ್ಟದಲ್ಲಿರುವ ಜನರಿಗೆ ಅನುಕೂಲವಾಗುವಂತೆ ಮತ್ತೊಂದು ವಿಶೇಷ ಪ್ಯಾಕೇಜ್ ಘೋಷಣೆ ಮಾಡಲಾಗುವುದು. ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಪ್ಯಾಕೇಜ್ ನಲ್ಲಿ ಪರಿಹಾರಧನ ಸಿಗದವರಿಗೆ ಮುಂದಿನ 10 -12 ದಿನಗಳಲ್ಲಿ ಇನ್ನೊಂದು ಪ್ಯಾಕೇಜ್ ಮೂಲಕ ಪರಿಹಾರ ನೀಡಲು ಪ್ರಯತ್ನಿಸುವುದಾಗಿ ಹೇಳಿದ್ದಾರೆ. ಹಣಕಾಸಿನ ಇತಿಮಿತಿಯಲ್ಲಿ ಆರ್ಥಿಕ ಪ್ಯಾಕೇಜ್ ವಿಚಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಮುಂದಿನ ಹತ್ತರಿಂದ ಹನ್ನೆರಡು ದಿನಗಳಲ್ಲಿ ಪರಿಹಾರ ದಿನ ಸಿಗದವರಿಗೆ ಇನ್ನೊಂದು ಪ್ಯಾಕೇಜ್ ನೀಡಲು ಪ್ರಯತ್ನಿಸುತ್ತೇನೆ ಎಂದು …
Read More »ಹೋಮ ಹವನ ಮಾಡುವ ಮೂಲಕ ವಾತಾವರಣ ಶುದ್ಧೀಕರಿಸುತ್ತದೆ, : ಅಭಯ್ ಪಾಟೀಲ್
ಬೆಳಗಾವಿ: ಹೋಮ ಹವನ ಮಾಡುವ ಮೂಲಕ ವಾತಾವರಣ ಶುದ್ಧೀಕರಿಸುತ್ತದೆ, ಸನಾತನ ಹಿಂದೂ ಸಂಸ್ಕೃತಿ, ಇದು ವೈಜ್ಞಾನಿಕವಾಗಿಯೂ ಸಾಬೀತಾಗಿದೆ. ಹೀಗಾಗಿ ಇದೀಗ ಕೊರೊನಾ ಎಲ್ಲ ಕಡೆ ಹೆಚ್ಚಾಗಿದ್ದರಿಂದ ನಮ್ಮ ಬೆಳಗಾವಿ ದಕ್ಷಿಣ ವಿಧಾನಸಭಾ ಕ್ಷೇತ್ರದ ಪ್ರತಿ ಗಲ್ಲಿಯಲ್ಲಿ ಆಯಾ ಭಾಗದ ಯುವಕ ಮಂಡಳಿ, ಮಹಿಳಾ ಸಂಘಗಳು ಹಾಗೂ ಅಲ್ಲಿನ ಪ್ರಮುಖರು ತಮ್ಮ ಮನೆ, ಗಲ್ಲಿಗಳಲ್ಲಿ ಹೋಮ ಮಾಡಬೇಕಿದೆ ಎಂದು ಬಿಜೆಪಿ ಶಾಸಕ ಅಭಯ್ ಪಾಟೀಲ್ ಹೇಳಿದ್ದಾರೆ. ಹೊಸೂರಿನಲ್ಲಿ ಸುಮಾರು 50 …
Read More »ವ್ಯರ್ಥವಾಯ್ತು ಸರ್ಕಾರದ ಕೋಟಿ ಕೋಟಿ ಹಣ..!
ಬೆಂಗಳೂರು: ಕರ್ನಾಟಕಕ್ಕೆ ಕೊರೊನಾ ಎರಡನೇ ಅಲೆ ರಾಕ್ಷಸನಂತೆ ಅಪ್ಪಳಿಸಿದೆ. ದಿನೇ ದಿನೇ ಸೋಂಕಿತರ ಪ್ರಮಾಣ ಸುನಾಮಿಯಂತೆ ಹೆಚ್ಚಳ ಆಗ್ತಿದೆ. ಮತ್ತೊಂದು ಕಡೆ ಸಾವಿನ ಪ್ರಮಾಣ ಭಯ ಹುಟ್ಟಿಸುವಂತೆ ನಿತ್ಯ ಹೆಚ್ಚಾಗುತ್ತಿದೆ. ಜನರಿಗೆ ಕೊರೊನಾ ಆತಂಕ ಒಂದು ಕಡೆಯಾದ್ರೆ ಸರಿಯಾಗಿ ಬೆಡ್ ಸಿಗುತ್ತಿಲ್ಲ, ಆಕ್ಸಿಜನ್, ಔಷಧಿ ಸಿಗುತ್ತಿಲ್ಲ ಅನ್ನೋದು ಮತ್ತೊಂದು ಆತಂಕ. ಇದೆರಲ್ಲದರ ಮಧ್ಯೆ ಕೊರೊನಾ ಮಣಿಸುವ ಕೆಲಸದಲ್ಲಿ ಸರ್ಕಾರ ಪದೇ ಪದೇ ಎಡವಟ್ಟಿನ ಕೆಲಸಗಳನ್ನೆ ಮುಂದುವರೆಸಿದೆ. ಕೊರೊನಾ ಕೇರ್ ಸೆಂಟರ್ …
Read More »
Laxmi News 24×7