Breaking News

ಜಿಲ್ಲೆ

ಮಾಜಿ ಕೇಂದ್ರ ಸಚಿವ ಬಾಬಗೌಡ ಪಾಟೀಲ್ ನಿಧನಕ್ಕೆ, ಸಿಎಂ ಬಿಎಸ್ ವೈ ಸೇರಿದಂತೆ ಗಣ್ಯರಿಂದ ಸಂತಾಪ

ಬೆಂಗಳೂರು: ಮಾಜಿ ಕೇಂದ್ರ ಸಚಿವ ಬಾಬಗೌಡ ಪಾಟೀಲ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಹಲವು ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ರೈತ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಅವರು ಏಕಕಾಲಕ್ಕೆ ಎರಡು ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದ ಅಪರೂಪದ ನಾಯಕ. ಕರ್ನಾಟಕ ರಾಜ್ಯ ರೈತ ಸಂಘದ ಸಂಸ್ಥಾಪಕರಲ್ಲಿ ಒಬ್ಬರಾಗಿದ್ದ ಅವರು ಸದಾ ರೈತಪರ ಚಿಂತನೆಯಲ್ಲಿ ತೊಡಗಿಕೊಂಡು ರೈತರ ಕಲ್ಯಾಣಕ್ಕೆ ಶ್ರಮಿಸಿದರು. ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿ ಅಟಲ್ ಬಿಹಾರಿ ವಾಜಪೇಯಿ ಅವರ ಸಚಿವ …

Read More »

ಗಮನಿಸಿ : ರಾಜ್ಯದ ಆಟೋ, ಟ್ಯಾಕ್ಸಿ ಚಾಲಕರು ಪರಿಹಾರಕ್ಕಾಗಿ ಅರ್ಜಿ ಸಲ್ಲಿಕೆ ಆರಂಭ : ಈ ಮೂಲಕ ಅರ್ಜಿ ಸಲ್ಲಿಸಿ, 3 ಸಾವಿರ ಪರಿಹಾರ ಪಡೆಯಿರಿ.!

ಬೆಂಗಳೂರು : ರಾಜ್ಯ ಸರ್ಕಾರವು ಕೋವಿಡ್ 19 ಸಂಬಂಧ ರಾಜ್ಯಾದ್ಯಂತ ಲಾಕ್ ಡೌನ್ ಘೋಷಿಸಿರುವುದರಿಂದ ಸಾರ್ವಜನಿಕರಿಗೆ ನಷ್ಟವಾಗಿರುವುದನ್ನು ಗಮನಿಸಿ ಸರ್ಕಾರದ ವತಿಯಿಂದ ಹಲವು ವರ್ಗದವರಿಗೆ ಪರಿಹಾರ ಧನವನ್ನು ಘೋಷಿಸಲಾಗಿದ್ದು, ಆಟೋ, ಟ್ಯಾಕ್ಸಿ, ಮ್ಯಾಕ್ಸಿ ಕ್ಯಾಬ್ ಚಾಲಕರಿಗೆ ಪರಿಹಾರ ಧನವಾಗಿ 3 ಸಾವಿರ ರೂ. ಗಳನ್ನು ಘೋಷಿಸಲಾಗಿದೆ. ಸರ್ಕಾರದಿಂದ ಘೋಷಿಸಿರುವ ಪರಿಹಾರ ಧನ 3000 ರೂ. ಗಳನ್ನು ಪಡೆಯುವ ಫಲಾನುಭವಿಗಳಾದ ಆಟೋ, ಟ್ಯಾಕ್ಸಿ, ಮ್ಯಾಕ್ಸಿ ಕ್ಯಾಬ್ ಚಾಲಕರು ಸರ್ಕಾರದ ಪರಿಹಾರವನ್ನು ಸೇವಾ …

Read More »

ಕಾಗವಾಡ ತಾಲೂಕಿನ ಉಗಾರ ಖುರ್ದ ಗ್ರಾಮದೇವತೆ ಶ್ರೀ ಲಕ್ಷ್ಮೀದೇವಿ ಜಾತ್ರೆ ರದ್ದು

ಬೆಳಗಾವಿ: ಕಾಗವಾಡ ತಾಲೂಕಿನ ಉಗಾರ ಖುರ್ದ ಗ್ರಾಮದೇವತೆ  ಶ್ರೀ ಲಕ್ಷ್ಮೀದೇವಿ ಜಾತ್ರೆ ರದ್ದುಪಡಿಸಲಾಗಿದೆ ಎಂದು ಪುರಸಭೆ‌ ವತಿಯಿಂದ ಆದೇಶಿಸಲಾಗಿದೆ. ಜಿಲ್ಲೆಯಲ್ಲಿ ಕೊರೊನಾ ರಣಕೇಕೆಯಿಂದ  ಧಾರ್ಮಿಕ ಕೇಂದ್ರಗಳು, ದೇವಸ್ಥಾನಕ್ಕೆ ಸಾರ್ವಜನಿಕ  ಪ್ರವೇಶಕ್ಕೆ ನಿರ್ಬಂಧಿಸಲಾಗಿದೆ ಎಂದು ಆದೇಶಿಸಲಾಗಿದೆ. ಈ ಕುರಿತು ಮಾತನಾಡಿದ ಕಾಗವಾಡ ತಹಶೀಲ್ದಾರ ಪ್ರಮೀಳಾ ದೇಶಪಾಂಡೆ  ಜಿಲ್ಲೆಯಲ್ಲಿ ಕೊರೊನಾ  ಆರ್ಭಟ ಜೋರಾಗಿದೆ. ಸರಕಾರದ ಆದೇಶದಂತೆ  ಜಾತ್ರೆಗಳ ಆಚರಣೆಗೆ ಯಾವುದೇ  ಅನುಮತಿ ನೀಡಲಾಗುವುದಿಲ್ಲ.‌  ಈ ಕೊವಿಡ್ ಸಮಯ ಹಾಗೂ ಲಾಕಡೌನ್ ನಿಯಮ ಉಲ್ಲಂಘಿಸಿ  …

Read More »

ಸೋಂಕಿತರ ಆಹಾಯಕ್ಕಾಗಿ ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿಗಳು ಬೆಳಗಾವಿ ಜಿಲ್ಲೆಗೆ ಎರಡು ಅಂಬುಲೆನ್ಸ್

ಬೆಳಗಾವಿ: ಕೊರೋನಾ ಸೋಂಕಿನಿಂದ ಸಾವು ನೋವುಗಳು ಹೆಚ್ಚಾಗುತ್ತಿದ್ದು, ಸೋಂಕಿತರ ಆಹಾಯಕ್ಕಾಗಿ ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿಗಳು ಬೆಳಗಾವಿ ಜಿಲ್ಲೆಗೆ ಎರಡು ಅಂಬುಲೆನ್ಸ್ ಳನ್ನು ನೀಡಿದ್ದು, ಅವುಗಳನ್ನು ಉಪಯೋಗ ಮಾಡಿಕೊಳ್ಳಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಡಿಸಿಎಂ, ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ್ ಕಾರಜೋಳ ಹೇಳಿದರು. ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿ ಹುಕ್ಕೇರಿ ಹಿರೇಮಠದ ಪ್ರತಿಷ್ಠಾನದಿಂದ ಜಿಲ್ಲಾಡಳಿತಕ್ಕೆ ನೀಡಲಾದ ಅಂಬುಲೆನ್ಸ್ ಗೆ ಪೂಜೆ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ಕೊರೋನಾ …

Read More »

ಆಯುಷ್ ಪದ್ಧತಿಗಳ ಮೂಲಕ ಕೋವಿಡ್ ನಿಯಂತ್ರಣಕ್ಕೆ ಔಷಧಿ ಬಿಡುಗಡೆ

ಬೆಂಗಳೂರು, ಮೇ 21- ಆಯುಷ್ ಪದ್ಧತಿಗಳ ಮೂಲಕ ಕೋವಿಡ್ ತಡೆಗಟ್ಟುವಿಕೆ ಮತ್ತು ನಿರ್ವಹಣೆಯಲ್ಲಿ ಆಯುಷ್ ಸಚಿವಾಲಯ ಹಲವಾರು ಉಪಕ್ರಮಗಳನ್ನು ಕೈಗೊಂಡಿದ್ದು, ಮನೆಯಲ್ಲಿ ಕ್ವಾರೆಂಟೈನ್ ಆಗಿರುವ ಕೋವಿಡ್- 19 ರೋಗಿಗಳಿಗೆ ಆಯುಷ್ 64 ಔಷಧಿಯನ್ನು ವಿತರಿಸಲು ಮುಂದಾಗಿದೆ. ಆಯುಷ್ ಸಚಿವಾಲಯವು ಕೌನ್ಸಿಲ್ ಆಫ್ ಸೈಂಟಿಫಿಕ್ & ಇಂಡಸ್ಟ್ರಿಯಲ್ ರಿಸರ್ಚ್ (ಸಿಎಸ್ಐಆರ್) ಜೊತೆಗೆ ಆಯುಷ್ 64 ಆಯುರ್ವೇದ ಮಾತ್ರೆಯ ಮೌಲ್ಯಮಾಪನ ಮಾಡಲು ಬಹು-ಕೇಂದ್ರ ಸಂಶೋಧನೆ ನಡೆಸಿತ್ತು. ಈ ಪ್ರಯೋಗದಲ್ಲಿ ಸ್ಟ್ಯಾಂಡರ್ಡ್ ಆರೈಕೆ ಜೊತೆಗೆ …

Read More »

ಕ್ರಿಕೆಟ್ ಆಡಬೇಡಿ, ಮಾಸ್ಕ್ ಹಾಕ್ಕೊಳ್ಳಿ ಎಂದಿದ್ದಕ್ಕೆ ಪಿಡಿಒ ಮೇಲೆ ಯುವಕನಿಂದ ಹಲ್ಲೆ

ಹುಬ್ಬಳ್ಳಿ: ಕ್ರಿಕೆಟ್ ಆಡಬೇಡಿ, ಮಾಸ್ಕ್ ಹಾಕಿಕೊಳ್ಳಿ ಎಂದು ತಿಳಿ ಹೇಳಿದ್ದಕ್ಕೆ ಗ್ರಾಮ ಪಂಚಾಯತಿ ಪಿಡಿಒ ಮೇಲೆ ಯುವಕನೊಬ್ಬ ಹಲ್ಲೆ ಮಾಡಿದ ಘಟನೆ ಧಾರವಾಡ ಜಿಲ್ಲೆಯ ಹಳ್ಳಿಗೇರಿ ಗ್ರಾಮದಲ್ಲಿ ನಡೆದಿದೆ. ಹಳ್ಳಿಗೇರಿ ಗ್ರಾಮ ಪಂಚಾಯತಿ ಪಿಡಿಒ ಮೃತ್ಯುಂಜಯ ಮೆಣಸಿನಕಾಯಿ ಅವರೇ ಹಲ್ಲೆಗೊಳಗಾದ ವ್ಯಕ್ತಿ. ಪಿಡಿಒ ಬುದ್ಧಿವಾದ ಹೇಳಿದ್ದಕ್ಕೆ ಪುಂಡ ಯುವಕನೊಬ್ಬ ಅವರ ಮೇಲೆ ಹಲ್ಲೆ ಮಾಡಿದ್ದಾನೆ. ಗ್ರಾಮದ ಮೈದಾನದಲ್ಲಿ ಕೆಲ ಯುವಕರು ಕ್ರಿಕೆಟ್ ಆಡುತ್ತಿದ್ದರು. ಈ ವೇಳೆ ಲಾಕ್‍ಡೌನ್ ಇದೆ, ಕ್ರಿಕೆಟ್ …

Read More »

ಕೋವಿಡ್​ನಿಂದ ಕೇಂದ್ರದ ಮಾಜಿ ಸಚಿವ ಬಾಬಾಗೌಡ ಪಾಟೀಲ್​ ನಿಧನ

ಬೆಳಗಾವಿ: ಕೋವಿಡ್‌ ಸೋಂಕಿನಿಂದ ಬಳಲುತ್ತಿದ್ದ ರೈತ ನಾಯಕ ಹಾಗೂ ಕೇಂದ್ರದ ಮಾಜಿ ಸಚಿವ ಬಾಬಾಗೌಡ ಪಾಟೀಲ್​ (78) ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ ವಿಧಿವಶರಾಗಿದ್ದಾರೆ. ಬೆಳಗಾವಿ ‌ತಾಲೂಕಿನ ಚಿಕ್ಕಬಾಗೇವಾಡಿ ಗ್ರಾಮದವರಾಗಿದ್ದ ಬಾಬಾಗೌಡ ಅವರು ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧುವರ್ಗವನ್ನು ಅಗಲಿದ್ದಾರೆ. ವಾರದ ಹಿಂದೆ ಬಾಬಾಗೌಡ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಬಳಿಕ ಅವರನ್ನು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಬಾಬಾಗೌಡ ಅವರು 1989ರಲ್ಲಿ ಬೆಳಗಾವಿ …

Read More »

ಬಂಗಾರಕ್ಕೆ ಕನ್ನ ಹಾಕಿದ್ದ ಡಿ.ವೈ.ಎಸ್ ಪಿ ಜಾವೇದ ಮತ್ತು ಸಹಚರರಿಗೆ ಸಿಕ್ತು ರಾತ್ರೋರಾತ್ರಿ ವರ್ಗಾವಣೆ ಶಿಕ್ಷೆ : ಇಷ್ಟೆಲ್ಲಾ ಬೇಕಿತ್ತಾ

ಗೋಕಾಕ:ಬಂಗಾರಕ್ಕೆ ಕನ್ನ ಹಾಕಿದ್ದ ಡಿ.ವೈ.ಎಸ್ ಪಿ ಜಾವೇದ ಮತ್ತು ಸಹಚರರಿಗೆ ಸಿಕ್ತು ರಾತ್ರೋರಾತ್ರಿ ವರ್ಗಾವಣೆ ಶಿಕ್ಷೆ : ಇಷ್ಟೆಲ್ಲಾ ಬೇಕಿತ್ತಾ ಸಾಬಾ ಗೋಕಾಕ ಡಿ.ವೈ.ಎಸ್.ಪಿ ಯಾಗಿ ಬಂದಿದ್ದ ವಿಜಯಪುರ ಜಿಲ್ಲೆಯ ಶೆಗುಣಶಿ ಗ್ರಾಮದ ಜಾವೇದ ಇನಾಂದಾರ ತಮ್ಮ ಸ್ವ- ಗ್ರಾಮ ದಲ್ಲಿ ತನಗಾದ ಅವಮಾನಗಳನ್ನು ಗೆದ್ದು ಡಿ.ವೈ.ಎಸ್‌.ಪಿ ಹುದ್ದೆಗೆ ಏರಿ ಗ್ರಾಮದ ಜನರ ಹುಬ್ಬೇರಿಸಿದರು ಇವರ ಈ ಡಿಟ್ಟ ಕ್ರಮದಿಂದ ಅವರಿಗೆ ಅವಮಾನ ಮಾಡಿದ ಗ್ರಾಮದ ಜನರಿಂದಲೇ ಸತ್ಕಾರ ಮಾಡಿಸಿಕೊಂಡು …

Read More »

18+ ಲಸಿಕೆ ನಾಳೆ ಮತ್ತೆ ಆರಂಭ

ಬೆಂಗಳೂರು: ರಾಜ್ಯದಲ್ಲಿ 18-44 ವರ್ಷ ವಯೋಮಾನದವರಲ್ಲಿ ಮುಂಚೂಣಿ ಕಾರ್ಯಕರ್ತರು ಮತ್ತು ಆದ್ಯತಾ ಗುಂಪುಗಳನ್ನು ಗುರುತಿಸಿ ಮೇ 22ರಿಂದ ಕೋವಿಡ್ ಲಸಿಕೆ ನೀಡಬೇಕು ಎಂದು ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ. ಲಸಿಕೆ ಕೊರತೆಯಿಂದ 18-44 ವರ್ಷ ದವರ ಲಸಿಕೆ ಅಭಿಯಾನ ತಾತ್ಕಾಲಿಕ ಸ್ಥಗಿತವಾಗಿತ್ತು. ಸದ್ಯ ಮೇ 15ರಂದು ನಡೆದ ತಜ್ಞರ ಸಮಿತಿ ಸಭೆಯ ತೀರ್ಮಾನದಂತೆ ಕೊರೊನಾ ಮುಂಚೂಣಿ ಕಾರ್ಯಕರ್ತರು ಆದ್ಯತಾ ವಲಯದ 18ರಿಂದ 44 ವರ್ಷ ದವರಿಗೆ ಲಸಿಕೆ ನೀಡಬಹುದು. ಇದಕ್ಕಾಗಿ ಜಿಲ್ಲಾ ಮಟ್ಟದಲ್ಲಿ …

Read More »

ಯಡಿಯೂರಪ್ಪ ವಿರುದ್ಧ ಸಿದ್ದರಾಮಯ್ಯ ಗರಂ

ಬೆಂಗಳೂರು: ಕೋವಿಡ್ ನಿಯಂತ್ರಣ ಸಂಬಂಧ ರಾಜ್ಯಾದ್ಯಂತ ಜಿಲ್ಲಾ ಮಟ್ಟದ ಅಧಿಕಾರಿಗಳ ಜತೆ ವೀಡಿಯೋ ಸಂವಾದ ವಿಚಾರದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ನಡುವೆ “ಸಂಘರ್ಷ’ ಏರ್ಪಟ್ಟಿದೆ. ವೀಡಿಯೋ ಸಂವಾದ ನಡೆಸುವ ಸಂಬಂಧ ಸಿದ್ದರಾಮಯ್ಯ ಅವರು ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದರು. ಅದಕ್ಕೆ, “ಮಾಹಿತಿ ಪಡೆಯಬಹುದು. ಆದರೆ ವೀಡಿಯೋ ಸಂವಾದ ನಡೆಸಲು ಅವಕಾಶ ಇಲ್ಲ ಎಂದು ಮುಖ್ಯ ಮಂತ್ರಿಯವರಿಂದ ನಿರ್ದೇಶಿತನಾಗಿ ದ್ದೇನೆ’ ಎಂಬ ಉತ್ತರ ಸಿಕ್ಕಿದೆ. ಇದರಿಂದ …

Read More »