Breaking News
Home / ಜಿಲ್ಲೆ (page 721)

ಜಿಲ್ಲೆ

ಮಳೆ ನಿಂತರೂ ಭೀಮಾ ನದಿಯ ಹರಿವು ಮಾತ್ರ ಕಡಿಮೆಯಾಗಿಲ್ಲ.

ವಿಜಯಪುರ: ಮಳೆ ನಿಂತರೂ ಭೀಮಾ ನದಿಯ ಹರಿವು ಮಾತ್ರ ಕಡಿಮೆಯಾಗಿಲ್ಲ. ಇದರಿಂದ ಜನ ನೀರಿನ ಮಧ್ಯೆ ಜೀವನ ಕಳೆಯುವಂತಾಗಿದೆ. ವಿಜಯಪುರ ಜಿಲ್ಲೆಯ ಇಂಡಿ, ಚಡಚಣ, ಆಲಮೇಲ ತಾಲೂಕಿನ ನದಿ ಪಾತ್ರದ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ. ಚಡಚಣ ತಾಲೂಕಿನ ಹೊಳೆಸಂಕ, ಧೂಳಖೇಡದಲ್ಲಿ ಪ್ರವಾಹ ಕಡಿಮೆಯಾಗಿಲ್ಲ. ಇಂಡಿ ತಾಲೂಕಿನ ಮೀರಗಿಯಲ್ಲೂ ನೆರೆ ಕಡಿಮೆಯಾಗಿಲ್ಲ. ತಾರಾಪುರ, ಕುಮಸಗಿ, ದೇವಣಗಾಂವ್ ಗ್ರಾಮಗಳು ಇನ್ನೂ ನಡುಗಡ್ಡೆಯಾಗಿಯೇ ಉಳಿದಿವೆ. ಮನೆ ನಿಂತರೂ ಪ್ರವಾಹದ ಅಬ್ಬರ ನಿಂತಿಲ್ಲ. ಮಳೆ ನೀರು …

Read More »

ಆರ್​ ನಗರ ಕ್ಷೇತ್ರದ ಉಪ ಚುನಾವಣೆ ಹಲವು ಕಾರಣಗಳಿಂದ ಪ್ರಾಮುಖ್ಯತೆ ಪಡೆದುಕೊಂಡಿದೆ.

ಬೆಂಗಳೂರು: ಸದ್ಯ ರಾಜ್ಯದಲ್ಲಿ ಎರಡು ಕ್ಷೇತ್ರಗಳಿಗೆ ನಡೆಯುತ್ತಿರುವ ಉಪ ಚುನಾವಣೆಗಳ ಪೈಕಿ ಆರ್.​ಆರ್​ ನಗರ ಕ್ಷೇತ್ರದ ಉಪ ಚುನಾವಣೆ ಹಲವು ಕಾರಣಗಳಿಂದ ಪ್ರಾಮುಖ್ಯತೆ ಪಡೆದುಕೊಂಡಿದೆ. ಇದೀಗ ಇದೇ ಚುನಾವಣಾ ರಣಕಣ ಮತ್ತಷ್ಟು ರಂಗೇರುತ್ತಿದೆ. ಪ್ರಚಾರ ಕಾರ್ಯಕ್ಕಾಗಿ ಭರ್ಜರಿ ಸಿದ್ಧತೆಯನ್ನೇ ಮಾಡಿಕೊಳ್ಳುತ್ತಿರುವ ಬಿಜೆಪಿ ಅಭ್ಯರ್ಥಿ ಮುನಿರತ್ನ, ಕ್ಷೇತ್ರದಲ್ಲಿ ತಮ್ಮ ಪರವಾಗಿ ಪ್ರಚಾರದಲ್ಲಿ ಭಾಗಿಯಾಗುವಂತೆ ಜೋಡೆತ್ತುಗಳಿಗೆ ಆಹ್ವಾನ ನೀಡಿದ್ದಾರೆ ಎನ್ನಲಾಗಿದೆ. ಹೌದು.. 2019ರ ಸಾರ್ವತ್ರಿಕ ಚುನಾವಣೆ ವೇಳೆ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮೋಡಿ …

Read More »

ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಭಾನುವಾರದಿಂದ ಮೂರು ದಿನಗಳ ಶಿಕಾರಿಪುರ ಪ್ರವಾಸ ಕೈಗೊಂಡಿದ್ದಾರೆ.

ಬೆಂಗಳೂರು : ಕೊರೋನಾ ಹಿನ್ನೆಲೆಯಲ್ಲಿ ಲಾಕ್‌ಡೌನ್‌ನಿಂದಾಗಿ ತವರು ಕ್ಷೇತ್ರದಿಂದ ಕಳೆದ ಆರು ತಿಂಗಳಿನಿಂದ ದೂರವಿದ್ದ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಭಾನುವಾರದಿಂದ ಮೂರು ದಿನಗಳ ಶಿಕಾರಿಪುರ ಪ್ರವಾಸ ಕೈಗೊಂಡಿದ್ದಾರೆ. ಭಾನುವಾರ ಮಧ್ಯಾಹ್ನ 12 ಗಂಟೆಗೆ ಎಚ್‌ಎಎಲ್‌ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್‌ ಮೂಲಕ ಶಿಕಾರಿಪುರಕ್ಕೆ ತೆರಳಲಿದ್ದಾರೆ. ಭಾನುವಾರ ವಿಶ್ರಾಂತಿ ಪಡೆದು ಸೋಮವಾರ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಕಸಬಾ ಏತ ನೀರಾವರಿ ಯೋಜನೆಗೆ ಶಂಕುಸ್ಥಾಪನೆ, ಉಡುತಡಿ ಶಿವಶರಣೆ ಅಕ್ಕಮಹಾದೇವಿ ಜನ್ಮಸ್ಥಳದ ಅಭಿವೃದ್ಧಿ ಕಾಮಗಾರಿ ಮತ್ತು …

Read More »

ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು,

ಬೆಂಗಳೂರು : ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರಾಗಿ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ಸರ್ಕಾರ ನೇಮಕಾತಿ ಆದೇಶ ಹೊರಡಿಸುವ ಚಿಂತನೆ ನಡೆಸಿದೆ ಎನ್ನಲಾಗಿದೆ. ಉಪನ್ಯಾಸಕರಾಗಿ ಆಯ್ಕೆಯಾಗಿರುವ ನೂರಾರು ಅಭ್ಯರ್ಥಿಗಳು ನೇಮಕಾತಿ ಆದೇಶ ಹೊರಡಿಸುವಂತೆ ಸರ್ಕಾರವನ್ನು ಆಗ್ರಹಿಸಿ ಶನಿವಾರ ಆರನೇ ದಿನವೂ ಪಿಯು ಮಂಡಳಿ ಮುಂಭಾಗ ಅಹೋರಾತ್ರಿ ಧರಣಿ ನಡೆಸಿದರು. ಕೊರೊನಾ ವೈರಸ್ ಸಂದರ್ಭದಲ್ಲಿ ಮಳೆ, ಗಾಳಿ ನಡುವೆಯೂ ಉಪನ್ಯಾಸಕರು ಹೆಚ್ಚು ಕಾಲ ಧರಣಿ ಮುಂದುವರೆಸಿ …

Read More »

ಕೆ.ಐ.ಎ.ಎಲ್. ಕಸ್ಟಮ್ಸ್ ಅಧಿಕಾರಿಗಳ ವಿರುದ್ಧ ಸಿಬಿಐ ಎಸಿಬಿಯಲ್ಲಿ ಎಫ್​ಐಆರ್ ದಾಖಲಾಗಿದೆ.

ಬೆಂಗಳೂರು: ಕೆ.ಐ.ಎ.ಎಲ್. ಕಸ್ಟಮ್ಸ್ ಅಧಿಕಾರಿಗಳ ವಿರುದ್ಧ ಸಿಬಿಐ ಎಸಿಬಿಯಲ್ಲಿ ಎಫ್​ಐಆರ್ ದಾಖಲಾಗಿದೆ. ಅಕ್ರಮ ಚಿನ್ನ ಸಾಗಾಟ ಯತ್ನ ಸೇರಿ ಹಲವು ಪ್ರಕರಣಗಳಲ್ಲಿ ಜಪ್ತಿ ಮಾಡಲಾಗಿದ್ದ ಬರೋಬ್ಬರಿ 2.5 ಕೆಜಿ ಚಿನ್ನವನ್ನ ಗೋಡೌನ್​ನಲ್ಲಿ ಸಂಗ್ರಹಿಸಿ ಇಡಲಾಗಿತ್ತು. ಜಪ್ತಿಯಾದ ಚಿನ್ನವನ್ನು ಕೆ.ಐ.ಎ.ಎಲ್​ನ ಕಾರ್ಗೋ ಗೋಡೌನ್​ನಲ್ಲಿ ಇರಿಸಿದ್ದರು. ಆದರೆ ಅಲ್ಲಿದ್ದ ಚಿನ್ನ ನಾಪತ್ತೆಯಾಗಿದೆ. ಹೀಗಾಗಿ ಜಪ್ತಿ ಮಾಡಿದ್ದ ಕಸ್ಟಮ್ಸ್ ಅಧಿಕಾರಿಗಳೆ ಚಿನ್ನ ಕದ್ದಿರಬೇಕು ಎಂಬ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಕಸ್ಟಮ್ಸ್ ಜೆಸಿ ಎಂ.ಜೆ.ಚೇತನ್ …

Read More »

ಅರಮನೆ ನಗರಿ ಮದುವಣಗಿತ್ತಿಯಂತೆ ವಿದ್ಯುತ್‌ ದೀಪಾಲಂಕಾರದಿಂದ ಮೀರ ಮೀರ ಮಿಂಚುತ್ತಿದೆ.

ಮೈಸೂರು: ಅರಮನೆ ನಗರಿ ಮದುವಣಗಿತ್ತಿಯಂತೆ ವಿದ್ಯುತ್‌ ದೀಪಾಲಂಕಾರದಿಂದ ಮೀರ ಮೀರ ಮಿಂಚುತ್ತಿದೆ. ಎಲ್ಲೆ ಹೋದ್ರೂ ಕಲರ್‌ ಫುಲ್ ಲೈಟಿಂಗ್ಸ್‌ಗಳು ಎಲ್ಲರನ್ನೂ ಸೆಳೆಯುತ್ತಿದೆ. ಆದ್ರೆ ಇದೇ ಕೊರೊನಾ ಹೆಚ್ಚಾಗಲು ಕಾರಣವಾಗುತ್ತಾ ಅನ್ನೋ ಭಯ ಕಾಡುಲು ಶುರು ಮಾಡಿದೆ. ಎಲ್ಲೇ ನೋಡಿದ್ರೂ ಕಾಣುವ ಝಗಮಗಿಸೋ ದೀಪಾಲಂಕಾರ. ಬೀದಿ ಬೀದಿಗಲ್ಲಿ ಫಳ ಫಳ ಹೊಳೆಯೋ ಕಲರ್‌ ಫುಲ್‌ ವಿದ್ಯುತ್‌ ದೀಪ.. ಮರದ ಮೇಲೆ, ಕಟ್ಟಡದ ಮೇಲೆ, ರಸ್ತೆಯ ಉದ್ದಕ್ಕೂ ಕಣ್ಣು ಕುಕ್ಕುವ ಲೈಟಿಂಗ್ಸ್‌. ಮಿಂಚುವ …

Read More »

ನಿಲ್ಲದ ಉತ್ತರದ ಮಹಾ ಪ್ರವಾಹ- ಹೆಚ್ಚುತ್ತಲೇ ಇದೆ ಭೀಮಾ, ಕೃಷ್ಣಾ ಒಳಹರಿವು

ಬೆಂಗಳೂರು: ಉತ್ತರ ಕರ್ನಾಟಕ ಭಾಗದಲ್ಲಿ ಮಳೆ ಸ್ವಲ್ಪ ತಗ್ಗಿದರೂ ನೆರೆ ಮಾತ್ರ ತಗ್ಗಿಲ್ಲ. ಇನ್ನೂ ಹಲವು ಜನ ಮನೆಗೆ ತೆರಳಲಾಗದೆ ಕಾಳಜಿ ಕೇಂದ್ರಗಳಲ್ಲೇ ಕಾಲ ಕಳೆಯುತ್ತಿದ್ದಾರೆ. ಇತ್ತ ನದಿಗಳಲ್ಲಿ ನೀರಿನ ಪ್ರಮಾಣ ಹೆಚ್ಚುತ್ತಲೇ ಇದ್ದು, ಇನ್ನಷ್ಟು ಗ್ರಾಮಗಳಿಗೆ ಪ್ರವಾಹದ ಭೀತಿ ಎದುರಾಗುತ್ತಿದೆ. ಹಲವು ರಸ್ತೆಗಳ ಸಂಪರ್ಕ ಕಡಿತವಾಗಿದೆ. ಭೀಮಾ ನದಿಯ ಮಹಾ ಪ್ರವಾಹಕ್ಕೆ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಜೋಳದಡಗಿ ಬ್ರಿಡ್ಜ್ ಕಂ ಬ್ಯಾರೇಜ್ ಸಂಪೂರ್ಣ ಮುಳುಗಡೆಯಾಗಿ ಅಪಾಯ ಮಟ್ಟ …

Read More »

ಅಕ್ಟೋಬರ್ 31 ರಂದು ಸರ್ಕಾರದ ಮಾರ್ಗಸೂಚಿಗಳ ಪ್ರಕಾರ ಸರಳ ಮತ್ತು ಅರ್ಥಪೂರ್ಣವಾಗಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

ಬೆಳಗಾವಿ: ಕೋವಿಡ್-19 ಹಿನ್ನೆಲೆಯಲ್ಲಿ  ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅಕ್ಟೋಬರ್ 31 ರಂದು ಸರ್ಕಾರದ ಮಾರ್ಗಸೂಚಿಗಳ ಪ್ರಕಾರ ಸರಳ ಮತ್ತು ಅರ್ಥಪೂರ್ಣವಾಗಿ ಆಚರಣೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಎಮ್.ಜಿ.ಹಿರೇಮಠ ಅವರು ತಿಳಿಸಿದರು. ಮಹರ್ಷಿ ವಾಲ್ಮೀಕಿ ಅವರ ಜಯಂತಿಯ ಹಿನ್ನೆಲೆಯಲ್ಲಿ ಶನಿವಾರ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮಹಷಿ ವಾಲ್ಮೀಕಿ  ಜಯಂತಿಯ ದಿನದಂದು ಕಿಲ್ಲಾಕೋಟೆ ಬಳಿ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, …

Read More »

ಮಣಗುತ್ತಿ ಗ್ರಾಮದಲ್ಲಿ ಛತ್ರಪತಿ ಶಿವಾಜಿ ಮಹಾರಾಜ ಹಾಗೂ  ವಾಲ್ಮೀಕಿ ಮಹರ್ಷಿ ಮೂರ್ತಿ ಆದಷ್ಟು ಬೇಗ ಎರಡು ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಲಾಗುವುದು

ಬೆಳಗಾವಿ: ಮಣಗುತ್ತಿ ಗ್ರಾಮದಲ್ಲಿ ಛತ್ರಪತಿ ಶಿವಾಜಿ ಮಹಾರಾಜ ಹಾಗೂ  ವಾಲ್ಮೀಕಿ ಮಹರ್ಷಿ ಮೂರ್ತಿ ಪ್ರತಿಷ್ಠಾಪನೆಗೆ ಶಾಸಕ ಸತೀಶ್ ಜಾರಕಿಹೊಳಿ ಶನಿವಾರ  ಅಡಿಗಲ್ಲು ಕಾರ್ಯಕ್ರಮವನ್ನು ನೆರವೇಸಿದರು. ಶಿವಾಜಿ ಪ್ರತಿಮೆ ಸ್ಥಾಪನೆ ವಿವಾದಕ್ಕೆ ಇಡಾಗಿದ್ದ ಮಣಗುತ್ತಿ ಗ್ರಾಮದಲ್ಲಿ,  ಮೂರು ಗ್ರಾಮಗಳ ಗ್ರಾಮಸ್ಥರ ಮುಖಂಡರೊಂದಿಗೆ ಚರ್ಚಿಸಿ, ಒಮ್ಮತ ಅಭಿಪ್ರಾಯದಿಂದ ಮೂರ್ತಿ ಪ್ರತಿಷ್ಠಾಪನೆ ಅಡಿಗಲ್ಲು ಸಮಾರಂಭವನ್ನು ನಡೆಯಿತು. ಇದೇ ವೇಳೆ  ಮಾತನಾಡಿದ ಅವರು, ಗ್ರಾಮದ ಹಿತದೃಷ್ಟಿಯಿಂದ  ಧರ್ಮದಲ್ಲಿ ರಾಜಕೀಯ ಮಾಡುವುದು ಬೇಡ. ಎಲ್ಲರೂ ಗ್ರಾಮದ ಅಭಿವೃದ್ಧಿಗೆ …

Read More »

ಧಾರವಾಡದ ಲಕ್ಷ್ಮಿ ನಾರಾಯಣ ದೇವಸ್ಥಾನದ ಜಾತ್ರೆಗೆ ಈ ವರ್ಷ ನಿರ್ಬಂಧ ಹೇರಲಾಗಿದೆ.

ಧಾರವಾಡ: ಕೊರೊನಾ ಹಿನ್ನೆಲೆ ನಗರದ ಲಕ್ಷ್ಮಿ ನಾರಾಯಣ ದೇವಸ್ಥಾನದ ಜಾತ್ರೆಗೆ ಈ ವರ್ಷ ನಿರ್ಬಂಧ ಹೇರಲಾಗಿದೆ. ಈ ಮೂಲಕ 117 ವರ್ಷಗಳ ಜಾತ್ರೆಗೆ ಈ ವರ್ಷ ಬ್ರೇಕ್ ಬಿದ್ದಂತಾಗಿದೆ. ಕಳೆದ 117 ವರ್ಷಗಳಿಂದ ಧಾರವಾಡ ನಗರದ ರವಿವಾರ ಪೇಟೆಯಲ್ಲಿರುವ ಲಕ್ಷ್ಮಿ ನಾರಾಯಣ ದೇವಸ್ಥಾನದಲ್ಲಿ ಪಾರಂಪರಿಕವಾಗಿ ಜಾತ್ರೆಯನ್ನು ಆಚರಿಸುತ್ತ ಬಂದಿದ್ದರು. ಅತ್ಯಂತ ವಿಜ್ರಂಭಣೆಯಿಂದ ಮಾಡಲಾಗುವ ದಸರಾ ಹಬ್ಬದ ವೇಳೆಯೇ ಲಕ್ಷ್ಮಿ ನಾರಾಯಣ ಜಾತ್ರೆಯನ್ನು ಮಾಡುವ ಈ ಸಂಪ್ರದಾಯಕ್ಕೆ ಕೊರೊನಾದಿಂದಾ ತಡೆಯಾಗಿದೆ. ಪ್ರತಿ …

Read More »