ಬೆಳಗಾವಿ: ಗಡಿಜಿಲ್ಲೆ ಬೆಳಗಾವಿಯಲ್ಲಿ ಬ್ಲ್ಯಾಕ್ ಫಂಗಸ್ ಭೀತಿ ಎದುರಾಗಿದೆ. ಬ್ಲ್ಯಾಕ್ ಫಂಗಸ್‍ನಿಂದ 30 ವರ್ಷದ ಯುವಕನೊಬ್ಬ ಜೀವನ್ಮರಣ ಮಧ್ಯೆ ಹೋರಾಟ ನಡೆಸುತ್ತಿದ್ದಾರೆ. ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಖೇಮಲಾಪುರ ಗ್ರಾಮದ ಆನಂದ ಕುಲಾಲಿ ಜೀವನ್ಮರಣ ಮಧ್ಯೆ ಹೋರಾಡುತ್ತಿರುವ ಯುವಕ. ಅಥಣಿ ತಾಲೂಕು ಪಂಚಾಯ್ತಿಯಲ್ಲಿ ಕೆಲಸ ಮಾಡುತ್ತಿದ್ದ ಆನಂದ ಕುಲಾಲಿ ಮೇ 5ರಂದು ಕೋವಿಡ್ ಟೆಸ್ಟ್ ಮಾಡಿಸಿದ್ದು, ಮೇ 7ರಂದು ಕೊರೊನಾ ದೃಢವಾಗಿತ್ತು. ಕೋವಿಡ್ ದೃಢಪಡುತ್ತಿದ್ದಂತೆಯೇ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಯುಕನನ್ನು …
Read More »ಮೇ 21 ರವರೆಗೆ ರಾಜ್ಯದ ಹಲವೆಡೆ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆ ಸಾಧ್ಯತೆ
ಬೆಂಗಳೂರು: ‘ತೌಕ್ತೆ’ ಚಂಡಮಾರುತ ಪರಿಣಾಮ ರಾಜ್ಯದ ಕರಾವಳಿ ಪ್ರದೇಶದಲ್ಲಿ ಮೇ 21 ರವರೆಗೆ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ. ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯಂತೆ ಕರಾವಳಿಯ ಉಡುಪಿ, ಉತ್ತರಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮೇ 21 ರ ವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಗಂಟೆಗೆ 90 ಕಿಲೋಮೀಟರ್ ವೇಗದ ಗಾಳಿ ಬೀಸುತ್ತಿದ್ದು, 6.3 ಮೀಟರ್ ಗಳಷ್ಟು ಎತ್ತರದ ಅಲೆಗಳು ಏಳುತ್ತಿವೆ. ಮೀನುಗಾರರು ಸಮುದ್ರಕ್ಕೆ ಇಳಿಯಬಾರದು …
Read More »1,418 ಪೊಲೀಸ ಸಿಬ್ಬಂದಿಗಳಿಗೆ ವಕ್ಕರಿಸಿದ ವೈರಸ್
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಅಟ್ಟಹಾಸಕ್ಕೆ ಖಾಕಿ ಪಡೆ ನಲುಗುತ್ತಿದೆ. ಬರೋಬ್ಬರಿ 1418 ಪೊಲೀಸ್ ಸಿಬ್ಬಂದಿಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಕೊರೊನಾ ಮಾಹಾಮಾರಿ ಪೊಲೀಸ್ ಇಲಾಖೆಯನ್ನು ಇನ್ನಿಲ್ಲದಂತೆ ಕಾಡುತ್ತಿದ್ದು, 13 ಪೊಲೀಸರು ಸೋಂಕಿಗೆ ಬಲಿಯಾಗಿದ್ದಾರೆ. 725 ಪೊಲೀಸರು ಹೋಂ ಐಸೋಲೇಟ್ ಆಗಿದ್ದಾರೆ. ಸಿಲಿಕಾನ್ ಸಿಟಿಯ 655 ಪೊಲೀಸರು ಸೋಂಕಿನಿಂದ ಗುಣಮುಖರಾಗಿದ್ದಾರೆ. ಕೊರೊನಾ ವಾರಿಯರ್ಸ್ ಆಗಿರುವ ಪೊಲೀಸರೇ ಇದೀಗ ವೈರಸ್ ಗೆ ತುತ್ತಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.
Read More »”ನಿಮ್ಮ ಶಂಖದಿಂದಲೇ ತೀರ್ಥ ಬಂದಿದೆ, ಇನ್ನಾದರೂ ವಾಸ್ತವ ಅರಿತು ಕೆಲಸ ಮಾಡಿ”
ಬೆಂಗಳೂರು, ಮೇ 16: ಕೋವಿಡ್ ಮೊದಲ ಅಲೆಯ ನಂತರ ಜನರು, ಸರಕಾರದಿಂದ ನಿರ್ಲಕ್ಷ್ಯ ಉಂಟಾಯಿತು ಎಂಬ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆ ನೀಡಿದ್ದು, ಇದನ್ನು ಉಲ್ಲೇಖಿಸಿದ ರಾಜ್ಯ ಕಾಂಗ್ರೆಸ್ ‘ಈಗ ನಿಮ್ಮ ಶಂಖದಿಂದಲೇ ತೀರ್ಥ ಬಂದಿದೆ. ಇನ್ನಾದರೂ ವಾಸ್ತವ ಅರಿತು ಕೆಲಸ ಮಾಡಿ’ ಎಂದು ರಾಜ್ಯ ಸರಕಾರವನ್ನು ಕುಟುಕಿದೆ. ಕೊರೋನ ಸಾಂಕ್ರಾಮಿ ರೋಗದ ಮೊದಲ ಅಲೆಯ ನಂತರ ರಾಷ್ಟ್ರದ ಎಲ್ಲಾ ವರ್ಗದವರು ತೋರಿಸಿರುವ ನಿರ್ಲಕ್ಷ್ಯವು ದೇಶಾದ್ಯಂತ ಈಗ ತಲೆದೋರಿರುವ …
Read More »BIG NEWS: ಸಾಯೋರು ಎಲ್ಲಾದರೂ ಸಾಯಲಿ; ಬಿಜೆಪಿ ಶಾಸಕನ ದರ್ಪಕ್ಕೆ ಅವಾಕ್ಕಾದ ಆರೋಗ್ಯಾಧಿಕಾರಿ
ಚಿತ್ರದುರ್ಗ: ಆಕ್ಸಿಜನ್ ಬೆಡ್ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಎಂ.ಚಂದ್ರಪ್ಪ, ಆರೋಗ್ಯಾಧಿಕಾರಿ ವಿರುದ್ಧ ದರ್ಪದಿಂದ ಮಾತನಾಡಿರುವ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ಪ್ರವಾಸಿ ಮಂದಿರದ ಬಳಿ 50 ಬೆಡ್ ಗಳ ಕೋವಿಡ್ ಕೇರ್ ಸೆಂಟರ್ ವಾರ್ಡ್ ನಿರ್ಮಿಸಲಾಗಿದ್ದು, ಈ ಬಗ್ಗೆ ಶಾಸಕ ಎಂ.ಚಂದ್ರಪ್ಪ ಅವರಿಗೆ ಮಾಹಿತಿ ನೀಡಿದ ಆರೋಗ್ಯಾಧಿಕಾರಿ ಪಾಲಾಕ್ಷ, 50 ಬೆಡ್ ಗಳಲ್ಲಿ 10 ಬೆಡ್ ಗಳಿಗೆ ಮಾತ್ರ ಆಕ್ಸಿಜನ್ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು. …
Read More »ಮಕ್ಕಳಿಗಾಗಿ ಜಿಲ್ಲಾ ಹಾಗೂ ತಾಲೂಕು ಆಸ್ಪತ್ರೆಗಳಲ್ಲಿ ಹಾಸಿಗೆ ಕಾಯ್ದಿರಿಸಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ ಮನವಿ
ಬೆಂಗಳೂರು : ಕೊರೋನಾ 2ನೇ ಅಲೆಯು ಯುವಕರ ಮೇಲೆ ಹೆಚ್ಚು ಪರಿಣಾಮ ಬೀರಿದೆ. ಆನಂಕ್ರ ಕೊರೋನಾ 3ನೇ ಅಲೆಯು ಮಕ್ಕಳ ಮೇಲೆ ಹೆಚ್ಚು ಪರಿಣಾಮ ಬೀರಲಿದೆ ಎನ್ನಲಾಗುತ್ತಿದೆ. ಹೀಗಾಗಿ ರಾಜ್ಯದ ಪ್ರತಿ ಜಿಲ್ಲಾ ಮತ್ತು ತಾಲೂಕು ಮಟ್ಟದ ಆಸ್ಪತ್ರೆಗಳಲ್ಲಿ ಪೀಡಿಯಾಟ್ರಿಕ್ಸ್ ವಿಭಾಗದಲ್ಲಿ ಸೋಂಕಿತ ಮಕ್ಕಳಿಗಾಗಿ ಹಾಸಿಗೆ ಕಾಯ್ದಿರಿಸುವಂತೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಗೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ ಪತ್ರದಲ್ಲಿ ಮನವಿ ಮಾಡಿದ್ದಾರೆ. ಈ ಕುರಿತಂತೆ …
Read More »ಬೆಳಗಾವಿ: ಕೆಎಲ್‌ಇ ಮಹಿಳಾ ಘಟಕದಿಂದ ಐಸೊಲೇಷನ್ ಕೇಂದ್
ಬೆಳಗಾವಿ: ಕೊರೊನಾ ಸೋಂಕಿನ ವಿರುದ್ಧದ ಸಮರಕ್ಕೆ ಇಲ್ಲಿನ ಕೆಎಲ್‌ಇ ಸಂಸ್ಥೆಯ ಸ್ವಶಕ್ತಿ ಮಹಿಳಾ ಸಬಲೀಕರಣ ಘಟಕವು ಕೈ ಜೋಡಿಸಿದ್ದು, ಕೋವಿಡ್ ರೋಗಿಗಳ ಆರೈಕೆಗಾಗಿ ನಗರದ ಲಿಂಗರಾಜ ಕಾಲೇಜು ಕ್ಯಾಂಪಸ್‌ನಲ್ಲಿ ಐಸೊಲೇಷನ್ ಕೇಂದ್ರ ತೆರೆದಿದೆ. ‘ಜಿಲ್ಲೆಯಲ್ಲಿ ಕೋವಿಡ್ ಉಲ್ಬಣಗೊಂಡಿದ್ದು, ಆಸ್ಪತ್ರೆಗಳಲ್ಲಿ ಹಾಸಿಗೆ ಅಭಾವ ಕಾಡುತ್ತಿದೆ. ಸೋಂಕಿನ ಕಡಿಮೆ ಗುಣಲಕ್ಷಣವುಳ್ಳವರನ್ನು ಐಸೊಲೇಷನ್‌ಗೆ ಒಳಪಡಿಸಲು (ಪ್ರತ್ಯೇಕವಾಗಿ ಇರಿಸಲು) ಕೂಡ ಸಮಸ್ಯೆ ಆಗುತ್ತದೆ. ಇದನ್ನು ಮನಗಂಡು ಘಟಕವು 50 ಹಾಸಿಗೆಗಳ ಕೇಂದ್ರ ಪ್ರಾರಂಭಿಸಿದೆ’ ಎಂದು ಪ್ರಕಟಣೆ …
Read More »ವೈದ್ಯಕೀಯ ಸಿಬ್ಬಂದಿ ರಕ್ಷಣೆಗೆ ಬದ್ಧ
ಬೆಳಗಾವಿ: ಕೋವಿಡ್-19 ನಿಯಂತ್ರಣ ಹಾಗೂ ಚಿಕಿತ್ಸೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶನಿವಾರ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕೋವಿಡ್ ಚಿಕಿತ್ಸೆಯಲ್ಲಿ ನಿರತ ವೈದ್ಯರ ಜೊತೆ ವರ್ಚುವಲ್ ಸಭೆ ಮೂಲಕ ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ಕಾರ್ಯದ ಒತ್ತಡದ ಮಧ್ಯೆಯೂ ನಿರಂತರವಾಗಿ ಕೆಲಸ ಮಾಡುತ್ತಿರುವ ವೈದ್ಯರು, ನರ್ಸ್ ಸೇರಿದಂತೆ ಎಲ್ಲ ವೈದ್ಯಕೀಯ ಸಿಬ್ಬಂದಿ ನಮ್ಮ ಅಮೂಲ್ಯ ಆಸ್ತಿ. ಇಂತಹ ವೈದ್ಯಕೀಯ ಸಿಬ್ಬಂದಿ ರಕ್ಷಣೆಗೆ ಸರ್ಕಾರ …
Read More »ನಕಲಿ ವೈದ್ಯರಿಂದ ಊರು ತುಂಬಾ ಹರಡಿತು ಕೊರೋನ ಸೋಂಕು!!!
ವಿಜಯನಗರ: ಕರೊನಾ ನಗರಗಳಿಗೆ ಮಾತ್ರ ಸೀಮಿತವಾಗದೆ ಹಳ್ಳಿ ಹಳ್ಳಿಗೂ ಹಬ್ಬಲಾರಂಭಿಸಿದೆ. ಇದನ್ನೇ ದುರುಪಯೋಗ ಪಡಿಸಿಕೊಳ್ಳುತ್ತಿರುವ ಕೆಲವರು ವೈದ್ಯರಂತೆ ನಾಟಕವಾಡಿ ಜನಸಾಮಾನ್ಯರಿಂದ ಹಣ ಲೂಟಿ ಮಾಡುವ ಕೆಲಸಕ್ಕೂ ಮುಂದಾಗಿದ್ದಾರೆ. ಅದೇ ರೀತಿಯ ಘಟನೆ ವಿಜಯನಗರ ಜಿಲ್ಲೆಯಲ್ಲೂ ನಡೆದಿದ್ದು, ಗ್ರಾಮವನ್ನೇ ಸೀಲ್ಡೌನ್ ಮಾಡುವಂತಹ ಸ್ಥಿತಿ ಬಂದೊದಗಿದೆ. ಹೌದು! ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ತಂಬ್ರಹಳ್ಳಿ ಗ್ರಾಮದಲ್ಲಿ ಇಂತಹ ಘಟನೆ ನಡೆದಿದೆ. ಈ ಗ್ರಾಮದಲ್ಲಿ ಕೆಲ ನಕಲಿ ಡಾಕ್ಟರ್ಗಳು ಸೇರಿಕೊಂಡಿದ್ದಾರೆ ಎನ್ನಲಾಗಿದೆ. ಕರೊನಾ ಲಕ್ಷಣವಿರುವ …
Read More »ಮೂರು ಚಿತ್ರಗಳಿಗೆ ಸಂಬರಗಿ ಸಹಿ; ಬಿಗ್ ಬಾಸ್ ಮನೆಯಿಂದ ಬರುತ್ತಿದ್ದಂತೆ ಸಿನಿಮಾ ಅವಕಾಶ
ಬೆಂಗಳೂರು: ‘ಬಿಗ್ ಬಾಸ್ – ಸೀಸನ್ 8’ ರಿಯಾಲಿಟಿ ಶೋ ರದ್ದಾಗಿದೆ. ಎಲ್ಲ ಸ್ಪರ್ಧಿಗಳು ಅವರವರ ಮನೆ ತಲುಪಿದ್ದಾರೆ. ಒಂದಷ್ಟು ಮಂದಿ ಮನೆಯಿಂದ ಹೊರಬಂದು ಕೈಲಾದ ಸಹಾಯಕ್ಕೆ ಧುಮುಕಿದ್ದಾರೆ. ಇನ್ನು ಕೆಲವರು ಮನೆಯಲ್ಲಿಯೇ ಕಾಲ ಕಳೆಯುತ್ತಿದ್ದಾರೆ. ಈ ನಡುವೆ ಪ್ರಶಾಂತ್ ಸಂಬರಗಿ ‘ಬಿಗ್ ಬಾಸ್’ನಿಂದ ಹೊರಬರುತ್ತಿದ್ದಂತೆ ಮೂರು ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರಂತೆ! ಈ ಪೈಕಿ ಮೊದಲನೆಯದು ಹಂಸಲೇಖ ನಿರ್ದೇಶನದಲ್ಲಿ ಮೂಡಿಬರುತ್ತಿದೆ. ಇದಲ್ಲದೆ, ರವಿ ಶ್ರೀವತ್ಸ ನಿರ್ದೇಶನದ ಮತ್ತೊಂದು ಚಿತ್ರ ಮತ್ತು ಎನ್ …
Read More »
Laxmi News 24×7