Breaking News
Home / ಜಿಲ್ಲೆ (page 728)

ಜಿಲ್ಲೆ

7 ಬಾರಿಯ ಸಂಸದ ಕೆ.ಹೆಚ್. ಮುನಿಯಪ್ಪ ರಾಜ್ಯ ರಾಜಕಾರಣಕ್ಕೆ? ಕ್ಷೇತ್ರ ಯಾವುದು?

ಕೋಲಾರ: ನಿರಂತರವಾಗಿ 1991ರಿಂದ ಕಾಂಗ್ರೆಸ್​ ಪಕ್ಷದ ವತಿಯಿಂದ ಲೋಕಸಭೆಗೆ ಆಯ್ಕೆಯಾಗುತ್ತಾ ಬಂದಿರುವ ಅದರೆ ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಎದುರು ಪರಾಜಯಗೊಂಡ ಕೆ.ಹೆಚ್. ಮುನಿಯಪ್ಪ ಇದೀಗ ರಾಜ್ಯ ರಾಜಕಾರಣಕ್ಕೆ ಬರಲು ಒಲವು ತೋರಿದ್ದಾರೆ ಎನ್ನುತ್ತಿವೆ ಪಕ್ಷದ ಮೂಲಗಳು. ಕ್ಷೇತ್ರ ಯಾವುದು, ಡಿಕೆಶಿ ಮಾಸ್ಟರ್ ಪ್ಲ್ಯಾನ್​ ಏನು? ಕೇಂದ್ರದ ಮಾಜಿ ಸಚಿವ, 72 ವರ್ಷದ ಕೆ.ಎಚ್. ಮುನಿಯಪ್ಪ ರಾಜ್ಯ ರಾಜಕಾರಣದತ್ತ ಮರಳಲು ಕೆಪಿಸಿಸಿ ಅಧ್ಯಕ್ಷ್ಯ ಡಿಕೆ ಶಿವಕುಮಾರ್ ಒತ್ತಾಯ ಕಾರಣ ಎನ್ನಲಾಗಿದೆ. …

Read More »

ಪ್ರವಾಹದಲ್ಲಿ ಸಿಲುಕಿದ್ದ ಮೂವರು ಬಿಹಾರಿ ಕಾರ್ಮಿಕರ ರಕ್ಷಣೆ.. ಯಾವೂರಲ್ಲಿ?

ಕಲಬುರಗಿ: ಚಂದ್ರಂಪಳ್ಳಿ ಜಲಾಶಯದಿಂದ ಅಪಾರ ಪ್ರಮಾಣದ ನೀರು ಬಿಡುಗಡೆಯಾದ ಹಿನ್ನೆಲೆಯಲ್ಲಿ ಪ್ರವಾಹದಲ್ಲಿ ಸಿಲುಕಿದ್ದ ಮೂವರು ಕಾರ್ಮಿಕರನ್ನು ರಕ್ಷಣೆ ಮಾಡಲಾಗಿದೆ. ಚಿಂಚೋಳಿ ತಾಲೂಕಿನ ಐನೊಳ್ಳಿ ಗ್ರಾಮದ ಬಳಿ ಸೇತುವೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ಕೆಲಸದ ಸ್ಥಳದಲ್ಲೇ ಬಿಹಾರ ಮೂಲದ ಮೂವರು ಕಾರ್ಮಿಕರು ಶೆಡ್ ನಿರ್ಮಿಸಿಕೊಂಡಿದ್ದರು. ಆದರೆ ಶೆಡ್​ಗೆ ಏಕಾಏಕಿ ಮಳೆ ನೀರು ನುಗ್ಗಿ ಪ್ರವಾಹಕ್ಕೆ ಸಿಲುಕಿಕೊಂಡಿದ್ದರು. ಬಳಿಕ ವಿಷಯ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಮೂವರು ಕಾರ್ಮಿಕರ …

Read More »

ಮನೆಗೆ ನುಗ್ಗಿದ ಮಳೆ ನೀರು.. ವಿದ್ಯುತ್ ಪ್ರವಹಿಸಿ ಮಲಗಿದ್ದಲ್ಲೇ ಅಜ್ಜಿ ಸಾವು

ಕಲಬುರಗಿ: ಜಿಲ್ಲೆಯಾದ್ಯಂತ ಧಾರಕಾರ ಮಳೆ ಸುರಿಯುತ್ತಿದೆ. ವರುಣನ ಆರ್ಭಟಕ್ಕೆ ಸುಂದರ ನಗರದಲ್ಲಿ ಅಜ್ಜಿ ಬಲಿಯಾಗಿದ್ದಾಳೆ. ಭೀಮಾಬಾಯಿ (96) ಮೃತಪಟ್ಟ ವೃದ್ಧೆ. ರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ಮನೆಯಲ್ಲಿ ಮಲಗಿದ್ದ ಅಜ್ಜಿ ಜೀವ ಕಳೆದುಕೊಂಡಿದ್ದಾರೆ. ಕಣ್ಣು ತೆರೆದು ನೋಡುವಷ್ಟರಲ್ಲಿ ವಿದ್ಯುತ್ ಸ್ಪರ್ಶಿಸಿ ಯಮನ ಪಾದ ಸೇರಿದ್ದಾರೆ. ಮಳೆಯಿಂದಾಗಿ ಮನೆಯೊಳಗೆ ಮಳೆ ನೀರು ಹೊಕ್ಕಿತ್ತು. ಈ ವೇಳೆ ನೀರಿನೊಂದಿಗೆ ವಿದ್ಯುತ್ ಸಹ ಪ್ರವೇಶಿಸಿ ಅಜ್ಜಿ ಮಲಗಿದ್ದಲ್ಲೆ ಮೃತಪಟ್ಟಿದ್ದಾರೆ. ಅಜ್ಜಿಯ ಮನೆ ಶೇಕಡಾ ಅರ್ಧದಷ್ಟು …

Read More »

ತಂದೆ ತಾಯಿ ಜೊತೆ ಜಗಳವಾಡ್ತಿದ್ದ ಅಣ್ಣ: ಬೇಸತ್ತು ಹತ್ಯೆ ಮಾಡಿದ ತಮ್ಮ

ಹಾವೇರಿ: ಜಿಲ್ಲೆ ಬ್ಯಾಡಗಿ ತಾಲೂಕಿನ ಬುಡಪನಹಳ್ಳಿ ಗ್ರಾಮದಲ್ಲಿ ತಮ್ಮನೇ ಅಣ್ಣನನ್ನು ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 22 ವರ್ಷ ನಾಗರಾಜ ಗೊರವರ ಹತ್ಯೆಯಾದ ಅಣ್ಣ. ದಿಳ್ಳೆಪ್ಪ ಗೊರವರ (20) ಹತ್ಯೆ ಮಾಡಿದ ಸೋದರ. ಕಾರಣ ಏನು?: ಅಣ್ಣ ನಾಗರಾಜ ನಿತ್ಯ ಕುಡಿದು ಬಂದು ತಂದೆ ತಾಯಿ ಜೊತೆ ಜಗಳವಾಡ್ತಿದ್ದ. ತಂದೆ ತಾಯಿಗೆ ಅಣ್ಣ ನೀಡ್ತಿದ್ದ ಕಿರಿಕಿರಿಯಿಂದ ಬೇಸತ್ತು ತಮ್ಮ ಹತ್ಯೆ ಮಾಡಿದ್ದಾನೆ ಎನ್ನಲಾಗಿದೆ. ಅಣ್ಣನ ಹತ್ಯೆ ಮಾಡಿದ …

Read More »

ನಗರದಲ್ಲಿ ವಿದೇಶಿ ಘಾಟು, 8 ಬಾಕ್ಸ್‌ಗಳಲ್ಲಿದ್ದ 1,59,800 ವಿದೇಶಿ ಸಿಗರೇಟು ವಶ

ಬೆಂಗಳೂರು: ನಗರದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಲಕ್ಷಾಂತರ ಮೌಲ್ಯದ ವಿದೇಶಿ ಸಿಗರೇಟುಗಳನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿರುವ ಘಟನೆ ನಡೆದಿದೆ. ಖಚಿತ ಮಾಹಿತಿ ಆಧರಿಸಿ ಪರಿಶೀಲನೆ ನಡೆಸಿದ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳ ತಂಡ ಶಾರ್ಜಾನಿಂದ ವಿಮಾನದಲ್ಲಿ ಬಂದ 8 ಬಾಕ್ಸ್​ಗಳು ಪತ್ತೆಯಾಗಿವೆ. ಆರಂಭಿಕ ಅಂತದ ಪರಿಶೀಲನೆ ವೇಳೆ ಸಿಕ್ಕ ಬಾಕ್ಸ್​ಗಳನ್ನು X-ray scan ಗೆ ಒಳಪಡಿಸಿದಾಗ ಅದರಲ್ಲಿ ಲಕ್ಷಾಂತರ ಮೌಲ್ಯದ ಸಿಗರೇಟ್​ ಇರುವುದು ಗೊತ್ತಾಗಿದೆ.ಬಾಕ್ಸ್​ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಸಿಗರೇಟ್ ಬಂಡಲ್​ಗಳು ಪತ್ತೆಯಾಗಿವೆ. …

Read More »

ನದಿ ತೀರದಲ್ಲಿ ಸಿಕ್ಕಿದ್ದ 28 -30 ವರ್ಷದ ಯುವಕನ ಶವ ದೊಡ್ಡ ಕಥೆಯೊಂದನ್ನು ಬಿಚ್ಚಿಟ್ಟಿದೆ.

ಅಥಣಿ – ಅಕ್ಟೋಬರ್ 5ರಂದು ಅಥಣಿ ತಾಲೂಕಿನ ಕೃಷ್ಣಾ ನದಿ ತೀರದಲ್ಲಿ ಸಿಕ್ಕಿದ್ದ 28 -30 ವರ್ಷದ ಯುವಕನ ಶವ ದೊಡ್ಡ ಕಥೆಯೊಂದನ್ನು ಬಿಚ್ಚಿಟ್ಟಿದೆ. ಶವವೊಂದೇ ಸಿಕ್ಕಿದ್ದರೆ ಅಷ್ಟೊಂದು ಕುತೂಹಲ ಹುಟ್ಟಿಸುತ್ತಿರಲಿಲ್ಲವೇನೋ… ಶವದ ಪ್ಯಾಂಟ್ ಕಿಸೆಯಲ್ಲಿ ಇತ್ತು 77 ಲಕ್ಷ ರೂ. ಮೌಲ್ಯದ ಬಂಗಾರದ ಗಟ್ಟಿಗಳು. ಶವ ಪತ್ತೆಯಾದ ತಕ್ಷಣ ಅದರ ಜೊತೆಯಲ್ಲಿದ್ದ ಬ್ಯಾಂಕ್ ಅಕೌಂಟ್ ಮಾಹಿತಿ ಅಧರಿಸಿ, ಆದಾರ ಕಾರ್ಡ್ ಪತ್ತೆ ಮಾಡಿದ ಅಥಣಿ ಪೊಲೀಸರು ನೇರವಾಗಿ ಮಹಾರಾಷ್ಟ್ರದ …

Read More »

ಇಂದು ಇಬ್ಬರೂ ತಮ್ಮ ತಮ್ಮ ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.

ಬೆಂಗಳೂರು : ತೀವ್ರ ಕುತೂಹಲ ಕೆರಳಿಸಿದ್ದ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ನಿರೀಕ್ಷೆಯಂತೆ ಮಾಜಿ ಶಾಸಕ ಮುನಿರತ್ನ ನಾಯ್ಡುಗೆ ಬಿಜೆಪಿ ಟಿಕೆಟ್ ಘೋಷಣೆ ಮಾಡಿದೆ. ಇನ್ನು ಶಿರಾದಿಂದ ಮಾಜಿ ಸಂಸದ ಮೂಡಲಗಿರಿಯಪ್ಪ ಪುತ್ರ ಡಾ.ರಾಜೇಶ್ ಗೌಡಗೂ ಟಿಕೆಟ್ ನೀಡಲಾಗಿದೆ.  ಇಬ್ಬರೂ ತಮ್ಮ ತಮ್ಮ ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಪಕ್ಷದ ಕಚೇರಿಯಲ್ಲಿ ರಾಜ್ಯಧ್ಯಕ್ಷ ನಳೀನ್ ಕುಮಾರ್ ಕಟೀಲ್ ಬಿ ಫಾರಂ ನೀಡಲಿದ್ದಾರೆ. ಇಂದು ಸುಪ್ರೀಂಕೋಟ್9 ನಲ್ಲಿ …

Read More »

ವರ್ಷಗಳ ಬಳಿಕ ತುಂಬಿದ ಕೆರೆ- ರೈತರ ಮೊಗದಲ್ಲಿ ಮಂದಹಾಸ

ಚಿಕ್ಕಮಗಳೂರು: ಕಳೆದ 15 ವರ್ಷಗಳಿಂದ ನೀರೇ ಇಲ್ಲದ ಮಕ್ಕಳ ಆಟದ ಮೈದಾನವಾಗಿದ್ದ ಬೃಹತ್ ಕೆರೆಗೆ ನೀರು ಹರಿದು ಬರುತ್ತಿದ್ದು ಚಿಕ್ಕಮಗಳೂರು ತಾಲೂಕಿನ ಬೆಳವಾಡಿ, ಕಳಸಾಪುರ ಸೇರಿದಂತೆ ಸುತ್ತಮುತ್ತಲಿನ ಹತ್ತಾರು ಹಳ್ಳಿಯ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ತಾಲೂಕಿಣ ಬೆಳವಾಡಿಯ ಬೃಹತ್ ಕೆರೆಗೆ ನೀರು ಬಂದಿದ್ದು, ರೈತರಿಗೆ ಮರುಳುಗಾಡಲ್ಲಿ ಓಯಾಸಿಸ್ ಸಿಕ್ಕಂತಾಗಿದ್ದು, ಸ್ಥಳೀಯರ ಪಾಲಿಗೆ ಈ ಕೆರೆ ಪ್ರವಾಸಿ ತಾಣವಾಗಿದೆ. ತಾಲೂಕಿನ ಬೆಳವಾಡಿ, ಕಳಸಾಪುರ ಸೇರಿದಂತೆ ಈ ಭಾಗದ ಹತ್ತಾರು ಹಳ್ಳಿಗಳು …

Read More »

ನಿವೃತ್ತ ಐಪಿಎಸ್‌ ಅಧಿಕಾರಿ ಬಿಎನ್ ಎಸ್ ರೆಡ್ಡಿ ವಿರುದ್ಧ ಎಫ್‌ಐಆರ್‌

ಬೆಂಗಳೂರು: ನಿವೃತ್ತ ಐಪಿಎಸ್ ಅಧಿಕಾರಿ ಬಿಎನ್ಎಸ್ ರೆಡ್ಡಿ ವಿರುದ್ಧ ಎಫ್ಐಆರ್‌ ದಾಖಲಾಗಿದೆ. ಇಂದಿರಾನಗರ ಕ್ಲಬ್ ನಲ್ಲಿ ನಿಯಮ ಉಲ್ಲಂಘನೆ ಮಾಡಿ ಹಣವನ್ನು ವಂಚನೆ ಮಾಡಿದ್ದಾರೆ ಎಂದು ಆರೋಪಿಸಿ ಕ್ಲಬ್‌ ಸದಸ್ಯ ರಾಮ್ ಮೋಹನ್ ಕೋರ್ಟ್‌ಗೆ ದೂರು ನೀಡಿದ್ದರು.ಕೋರ್ಟ್‌ ನಿರ್ದೇಶನದಂತೆ ಈಗ ಬಿಎನ್‌ಎಸ್‌ ರೆಡ್ಡಿ ಮತ್ತು ನಾಗೇಂದ್ರ ವಿರುದ್ಧ ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಐಪಿಸಿ ಸೆಕ್ಷನ್‌ 120 ,418, 465, 471, 420,468, 417ರ ಅಡಿ ಪ್ರಕರಣ ದಾಖಲಾಗಿದೆ.ದೂರಿನಲ್ಲಿ …

Read More »

ರಾಜ್ಯದ ನಗರಗಳ ಹವಾಮಾನ ವರದಿ: 14-10-2020

ರಾಜ್ಯದಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ. ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ತುಂತುರು ಮಳೆಯಾಗಲಿದೆ. ಇನ್ನುಳಿದಂತೆ ಹಲವೆಡೆ ಬಿಸಿಲಿನ ವಾತಾವರಣ ಮುಂದುವರಿಯಲಿದೆ. ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ಕಾರವಾರದಲ್ಲಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್ ಇರಲಿದೆ. …

Read More »